Subscribe to Updates
Get the latest creative news from FooBar about art, design and business.
- ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
- ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
- ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
- ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
- ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
- ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
- ಖಾಸಗಿ ಆಂಬುಲೆನ್ಸ್ ಸೇವೆ ಶುಲ್ಕ ನಿಯಂತ್ರಣಕ್ಕೆ ಜಿಲ್ಲಾಧಿಕಾರಿಗೆ ಕರವೇ ಮನವಿ
- ಕೊರಟಗೆರೆ: ಮಾದಕ ವ್ಯಸನ ತಡೆಗೆ ‘ಸ್ವಾಸ್ಥ್ಯ ಸಂಕಲ್ಪ’ ಜಾಗೃತಿ
Author: admin
ಕನ್ನಡ ಚಿತ್ರರಂಗದ ಹಿರಿಯ ನಟ, ‘ಕಲಾ ತಪಸ್ವಿ’ ರಾಜೇಶ್(Kalatapasvi Rajesh) ಶನಿವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಇಂದು ಮುಂಜಾನೆ 2.30ಕ್ಕೆ ರಾಜೇಶ್ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 89 ವರ್ಷದ ಹಿರಿಯ ನಟ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಇಂದು ಸಂಜೆ 6 ಗಂಟೆವರೆಗೂ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿರುವ ರಾಜೇಶ್ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ರಾಜೇಶ್(Kannada senior actor Rajesh) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ರಾಶಿ ಅಡಿಕೆಗೆ ಇತ್ತೀಚಿನ ದಿನಗಳಲ್ಲಿ ಬಂಪರ್ ಬೆಲೆ ಸಿಗುತ್ತಿದ್ದು, ಬೆಳೆಗಾರರು ಖುಷಿಯಲ್ಲಿದ್ದಾರೆ. ರಾಜ್ಯದ ಮಾರುಕಟ್ಟೆಗಳಲ್ಲಿ ರಾಶಿ ಅಡಿಕೆ ಧಾರಣೆಯಲ್ಲಿ ಶನಿವಾರ ಏರಿಳಿತ ಕಂಡಿದೆ. ಕರ್ನಾಟಕ ರೈತರ ಪ್ರಮುಖ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut) ಧಾರಣೆ ಇತ್ತೀಚಿನ ದಿನಗಳಲ್ಲಿ ಉತ್ತಮ ಸ್ಥಿತಿಯಲ್ಲಿದೆ. ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ವಿವಿಧ ಜಿಲ್ಲೆಗಳ ಮಾರುಕಟ್ಟೆಯಲ್ಲಿನ ಅಡಿಕೆ ಧಾರಣೆಯ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಅಡಿಕೆ ಧಾರಣೆ 51,509 ರೂ. ದರದಲ್ಲಿ ವಹಿವಾಟು ನಡೆಸುತ್ತಿದೆ. ರಾಜ್ಯದ ಪ್ರಮುಖ ಮಾರ್ಕೆಟ್(Market)ಗಳಲ್ಲಿ ಇತ್ತೀಚಿನ(18-04-2022)ಅಡಿಕೆ ಬೆಲೆ ಎಷ್ಟಿದೆ ಎಂಬುದರ ಬಗ್ಗೆ ತಿಳಿದುಕೊಳ್ಳಿ. ತಾಲೂಕು ಅಡಿಕೆ ಗರಿಷ್ಠ ಬೆಲೆ (ಫೆಬ್ರವರಿ 18, 2022) ಕೊಪ್ಪ (ಚಿಕ್ಕಮಗಳೂರು ಜಿಲ್ಲೆ) ರಾಶಿ ಅಡಿಕೆ 45,899 ರೂ. ಚನ್ನಗಿರಿ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,500 ರೂ. ದಾವಣಗೆರೆ (ದಾವಣಗೆರೆ ಜಿಲ್ಲೆ) ರಾಶಿ ಅಡಿಕೆ 46,329…
ರಷ್ಯಾ ಮತ್ತು ಉಕ್ರೇನ್ ನಡುವಿನ ಉದ್ವಿಗ್ನತೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಿಸಿದೆ. ಪಾಕಿಸ್ತಾನ, ಅಮೆರಿಕ ಸೇರಿದಂತೆ ಹಲವು ದೇಶಗಳಲ್ಲಿ ಪೆಟ್ರೋಲ್ ಬೆಲೆ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಆದರೆ, ಭಾರತದಲ್ಲಿ ವಾಹನ ಇಂಧನ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್ ಗೆ 93 ಡಾಲರ್ ದಾಟಿದೆ. ಆದರೆ ಮೂರು ತಿಂಗಳಿನಿಂದ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Price)ಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ತಜ್ಞರ ಪ್ರಕಾರ, ಭಾರತೀಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಹೆಚ್ಚು ಕಾಲ ಉಳಿಯುವುದಿಲ್ಲ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ನಂತರ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಭಾರಿ ಜಿಗಿತ ಕಂಡುಬರುವ ಸಾಧ್ಯತೆಯಿದೆ. ಮಾರ್ಚ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ನಿರೀಕ್ಷೆಯಿದೆ.ಭಾರತೀಯ ಪೆಟ್ರೋಲಿಯಂ…
ಪಾವಗಡ: ತಾಲ್ಲೂಕಿನ ಚೆನ್ನಕೇಶವಪುರದ ಚೆನ್ನಕೇಶವ ಸ್ವಾಮಿ ಹಾಗೂ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಶುಕ್ರವಾರ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ಪಾದರು ಹಾಗೂ ಕುಕ್ಕೆ ಸುಬ್ರಮಣ್ಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಚೆನ್ನಕೇಶವ ಸ್ವಾಮಿಯ ಹಾಗೂ ಆಂಜನೇಯ ಸ್ವಾಮಿಯನ್ನು ಪ್ರತಿಷ್ಠಾಪನೆ ಮಾಡಿದಂತಹ ವ್ಯಾಸರಾಜ ಗುರುಗಳ ಬಗ್ಗೆ ಸ್ವಾಮೀಜಿಗಳು ಮಾತನಾಡಿದರು. ಇದೇ ವೇಳೆ ಶ್ರೀಪ್ರಾಣ ದೇವರಾದ ಆಂಜನೇಯ ಸ್ವಾಮಿಯ ದರ್ಶನ ಪಡೆದು, ದೇವರ ಪವಾಡಗಳನ್ನು ಹಾಗೂ ಮಹಿಮೆಗಳನ್ನು ತಿಳಿದುಕೊಂಡು ಸಂತೋಷ ಪಟರು. ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯಸ್ತರಾದ ಗೋಪಾಲ್ ರಾವ್ ಹಾಗೂ ಸಿ.ಎನ್ ಆನಂದ್ ರಾವ್, ನಾಗರಾಜು ಸ್ವಾಮಿ, ಅಜಯ್ ನಾಗೇಶ್, ಬಿಂದು ಮಾಧವ್ ರಾವ್, ಉಭಯ ಶ್ರೀ ಗಳನ್ನು ಭಕ್ತಿಯಿಂದ ದೇವಸ್ಥಾನದ ಸಂಪ್ರದಾಯದಂತೆ ಸ್ವಾಗತಿಸಿ ದೇವರ ದರುಶನವನ್ನು ಮಾಡಿಸಿ ಗೌರವಿಸಿದರು. ವರದಿ: ದೇವರಹಟ್ಟಿ ನಾಗರಾಜು, ಕಸಬಾ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ…
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ, ದಬ್ಬೆಘಟ್ಟ ಗ್ರಾಮದಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾoಕ್ಷೆಯ ” ಗ್ರಾಮ್ ಒನ್” ಕೇಂದ್ರವನ್ನು ಉದ್ಘಾಟಿಸಲಾಯಿತು. ನಾಡಕಚೇರಿಯಲ್ಲಿ ಸಿಗಬಹುದಾದ ಎಲ್ಲಾ ಮೂಲಭೂತ ಸೌಕರ್ಯಗಳ ಅರ್ಜಿಯನ್ನು ಇಲ್ಲಿ ಸಲ್ಲಿಸ ಬಹುದಾಗಿದೆ. ಜನರು ನಾಡಕಚೇರಿಯಲ್ಲಿ, ಅಥವಾ ತಾಲ್ಲೂಕು ಕಚೇರಿಯ ಮುಂಭಾಗದಲ್ಲಿ ಸರತಿಯ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ಇನ್ನು ಮುಂದೆ ಇರುವುದಿಲ್ಲ. ಈ ಸೇವೆಯನ್ನು ಉದ್ಘಾಟಿಸಿದ ಮಾತನಾಡಿದ ಪ್ರಕಾಶ್, ಸರ್ಕಾರಿ ಕೆಲಸದ ದಿನಗಳಲ್ಲಿ ನಿರಂತರವಾಗಿ ನಾವು ಸೇವೆಯನ್ನು ಒದಗಿಸಲು ಬದ್ಧರಾಗಿದ್ದು, ಸರ್ಕಾರದ ಮಹತ್ವಾಕಾoಕ್ಷೆಯ ಸೇವೆಯನ್ನು ಸರ್ಕಾರದ ನಿಯಮಮಾವಳಿಗಳ ಮೂಲಕ ಸರ್ಕಾರಿ ನಿಗದಿತ ಶುಲ್ಕವನ್ನು ಪಡೆದು ಸೇವೆಯನ್ನು ಒದಗಿಸುತ್ತೇವೆ ಎಂದರು. ಈ ಸಂದರ್ಭದಲ್ಲಿ ಅವರ ತಂದೆ ನಂಜಪ್ಪ,ತಾಯಿ ರoಗಮ್ಮ ಪಟೇಲ್ ನಾಗರಾಜ್ , ದಲಿತ ಸಂಚಾಲಕರಾದ ಬಿ.ಪುರ ತಮ್ಮಯ್ಯ , ಶಿವರಾಂ ಎಲೆಕೊಪ್ಪಇತರರು ಹಾಜರಿದ್ದರು. ವರದಿ: ಸುರೇಶ್ ಬಾಬು ಎಂ., ತುರುವೇಕೆರೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ನಗರಸಭೆಯಲ್ಲಿ ಶುಕ್ರವಾರ ನಡೆದ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಯಲ್ಲಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು ಹಾಗೂ ಮಾಜಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಿ.ಸುಧಾಕರ್ ರವರ ನೇತೃತ್ವದಲ್ಲಿ ಜೆ.ಆರ್. ಅಜಯ್ ಕುಮಾರ್ ರವರು ಅವಿರೋಧವಾಗಿ ಆಯ್ಕೆಯಾದರು . ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ನೂತನವಾಗಿ ಆಯ್ಕೆಯಾಗಿರುವ ಅಜಯ್ ಕುಮಾರ್ ರವರಿಗೆ ಶುಭಾಶಯ ತಿಳಿಸಿದರು . ಬಳಿಕ ನಡೆದ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರುಗಳು ಎಲ್ಲಾರಿಗೂ ಸಿಹಿ ಹಂಚಿ ನಗರಸಭೆ ಮುಂದೆ ಪಟಾಕಿ ಸಿಡಿಸಿ, ದಕ್ಷಿಣ ಕಾಶಿ ಶ್ರೀ ತೇರುಮಲ್ಲೇಶ್ವರ ಸ್ವಾಮಿ ಗೆ ಪೂಜೆ ಸಲ್ಲಿಸಿದರು . ಈ ಸಂದರ್ಭದಲ್ಲಿ ಮಾತನಾಡಿದ ಹಿರಿಯೂರು ತಾಲ್ಲೂಕಿನ ನಗರಸಭೆ ಪೌರಯುಕ್ತ ಡಿ. ಉಮೇಶ್, ಸ್ಥಾಯಿ ಸಮಿತಿ ಚುನಾವಣೆ ಪ್ರಕ್ರಿಯೆ ಗೊಂಡು, ಈ ಚುನಾವಣೆ ಪ್ರಕ್ರಿಯೆ ಯಲ್ಲಿ ಹಿರಿಯೂರು ನಗರಸಭೆ ಯಲ್ಲಿ ಒಟ್ಟು 33 ಜನ ಸದಸ್ಯರುಗಳಲ್ಲಿ 30 ಜನ ಭಾಗವಹಿಸಿದರು. ಇದರಲ್ಲಿ ಒಬ್ಬರು ಸೂಚಕರು ,…
ಬೆಂಗಳೂರು: ಗಣರಾಜ್ಯೋತ್ಸವ ಸಂದರ್ಭದಲ್ಲಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಫೋಟೋ ತೆರವುಗೊಳಿಸಿ ವಿವಾದಕ್ಕೀಡಾಗಿದ್ದ ರಾಯಚೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ವರ್ಗಾವಣೆ ಮಾಡಲಾಗಿದೆ. ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ. ಸಿಜೆ ಅವರ ನಿರ್ದೇಶನದ ಮೇರೆಗೆ ರಾಯಚೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಮಲ್ಲಿಕಾರ್ಜುನ ಗೌಡ ಅವರನ್ನು ಬೆಂಗಳೂರಿನಲ್ಲಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಮೇಲ್ಮನವಿ ಪ್ರಾಧಿಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ. ಗಣರಾಜ್ಯೋತ್ಸವ ಸಂದರ್ಭದಲ್ಲಿ ಧ್ವಜಾರೋಹಣ ಸ್ಥಳದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭಾವ ಚಿತ್ರ ಹಾಗೂ ಗಾಂಧೀಜಿ ಭಾವ ಚಿತ್ರವನ್ನಿಡಲಾಗಿತ್ತು. ಆದರೆ, ಅಂಬೇಡ್ಕರ್ ಚಿತ್ರವನ್ನು ತೆರವುಗೊಳಿಸಿ ಬಳಿಕ ಮಲ್ಲಿಕಾರ್ಜುನ ಗೌಡ ಧ್ವಜಾರೋಹಣ ಮಾಡಿದ್ದು, ಇದರ ವಿರುದ್ಧ ರಾಜ್ಯಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ.…
ಪಾವಗಡ: ಅಂಬೇಡ್ಕರ್ ಭವನದ ಮೇಲೆಯೇ ವಿದ್ಯುತ್ ತಂತಿಯೊಂದು ಹಾದು ಹೋಗಿದ್ದು, ಇದನ್ನು ತೆರವುಗೊಳಿಸಲು ಸಾಕಷ್ಟು ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಿವಾಸಿಗಳು ದೂರಿದ್ದಾರೆ. ಪಾವಗಡ ತಾಲೂಕಿನ ನಿಡಿಗಲ್ ಹೋಬಳಿಯ ಸಿ.ಕೆ.ಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಪುತ್ತೂರು ಗ್ರಾಮದಲ್ಲಿ ಇಂತಹದ್ದೊಂದು ಸಮಸ್ಯೆ ಉದ್ಭವವಾಗಿದ್ದು, ಇಲ್ಲಿನ ಅಂಬೇಡ್ಕರ್ ಭವನದ ಮೇಲೆ ಅಪಾಯಕಾರಿ ಅಂತರದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಸಮಸ್ಯೆಯ ಬಗ್ಗೆ ಇಲ್ಲಿನ ನಿವಾಸಿಗಳು ಸಾಕಷ್ಟು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಕ್ರಮ ಜರಗಿಸಿಲ್ಲ ಎಂದು ಗ್ರಾಮಸ್ಥರಾದ ಹನುಮಂತರಾಯಪ್ಪ, ಸಣ್ಣಪ್ಪ, ಚಿಕ್ಕಣ್ಣ ಆಕ್ರೋಶ ವ್ಯಕ್ತಪಡಿಸಿದರು. ವರದಿ: ನಂದೀಶ್ ಕೊತ್ತೂರ್, ನಿಡಿಗಲ್ ಹೋಬಳಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ತುಮಕೂರು: ರಾಜ್ಯ ಸರ್ಕಾರದ ಬಳಿ: 19.39 ಲಕ್ಷ ಎಕರೆ ಜಮೀನು, ಲಭ್ಯವಿದ್ದು, ಈ ಜಮೀನನ್ನು ರಾಜ್ಯ ಸರ್ಕಾರ ಖಾಸಗಿ ಸಂಘ, ಸಂಸ್ಥೆ, ಧಾರ್ಮಿಕ ಕೇಂದ್ರ ಟ್ರಸ್ಟ್, ಇತ್ಯಾದಿ ಬೃಹತ್ ಉದ್ಯಮಿಗಳಿಗೆ ಗೋಮಾಳ ಸರ್ಕಾರಿ ಭೂಮಿಯನ್ನು ಗುತ್ತಿಗೆ ಭೋಗ್ಯಕ್ಕೆ ನೀಡಲು ಈಗಾಗಲೇ ಕಂದಾಯ ಸಚಿವರ ನೇತೃತ್ವದಲ್ಲಿ ಉಪ ಸಮಿತಿ ರಚನೆ ಮಾಡಿರುವುದು ಖಂಡನೀಯವಾಗಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ತುಮಕೂರು ಘಟಕದ ಆಕ್ರೋಶ ವ್ಯಕ್ತಪಡಿಸಿದೆ. ಈ ಸಂಬಂಧ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಿ.ಪಿ.ಐ. , ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಐ ನ ಜಿಲ್ಲಾ ಕಾರ್ಯದರ್ಶಿ ಗಿರೀಶ್, ರಾಜ್ಯಾದ್ಯಂತ ಈ ಹಿಂದೆಯೇ ಲಕ್ಷಾಂತರ ಬಗರ್ ಹುಕುಂ ಸಾಗುವಳಿದಾರರು ತಾವು ಸಾಗುವಳಿ ಮಾಡುತ್ತಿರುವ ಸರ್ಕಾರಿ ಭೂಮಿಯ ಹಕ್ಕು ಪತ್ರ ಕೋರಿ ಫಾರ್ಮ್ ನಂಬರ್ 50, 53, ಮತ್ತು 57ರಲ್ಲಿ ಅಕ್ರಮ-ಸಕ್ರಮ ಸಮಿತಿಗೆ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಇನ್ನೂ ಭೂಮಿ ಮಂಜೂರಾಗಿಲ್ಲ. ಹೀಗಿರುವಾಗ ಇಂತಹ ಬಗರ್ ಹುಕುಂ…
ತುಮಕೂರು: ತುಮಕೂರಿನ ಯುವಕರೇ ಸೇರಿ ನಿರ್ಮಿಸಿರುವ ಮಾಡಿರುವ ‘ದೋಖಾ ದೋಸ್ತಿ’ ಚಿತ್ರ ನಗರದ ಗಾಯತ್ರಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಿದೆ. ಚಿತ್ರದ ಕುರಿತು ಮಾತನಾಡಿದ ದೋಖಾ ದೋಸ್ತಿ ಚಿತ್ರದ ನಾಯಕ, ಯುವ ಪ್ರತಿಭೆಗಳು ಸೇರಿ ಈ ಚಿತ್ರ ಮಾಡಿದ್ದೇವೆ. ಈ ಸಿನಿಮಾವನ್ನು ತುಂಬಾ ಜನರು ನೋಡಿ ನಮ್ಮನ್ನು ಆಶೀರ್ವದಿಸಿದ್ದಾರೆ. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಚಿತ್ರ ನೋಡಿ ನಮ್ಮನ್ನು ಆಶೀರ್ವದಿಸಿ. ನಾವು ನಿಮ್ಮ ಮನೆಯ ಮಕ್ಕಳು, ತುಮಕೂರಿನ ಯುವ ಪ್ರತಿಭೆಗಳು ಈ ಚಲನಚಿತ್ರವನ್ನು ನೋಡಿ ಯುವಪ್ರತಿಭೆಗಳನ್ನು ಬೆಳೆಸಿ ಎಂದು ಮನವಿ ಮಾಡಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB