Subscribe to Updates
Get the latest creative news from FooBar about art, design and business.
- ಮಹಿಳೆಯರನ್ನು ಸೆಳೆಯಲು ವಿಭಿನ್ನ ಕಾರ್ಯಕ್ರಮ ಆಯೋಜಿಸಲು ಕೆಆರ್ ಎಸ್ ಪಕ್ಷ ತೀರ್ಮಾನ
- ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ: ಹೈನುಗಾರಿಕೆ ನಡೆಸುತ್ತಿದ್ದ ಮಹಿಳೆ ಕಂಗಾಲು
- ತುರುವೇಕೆರೆ: ಅಯ್ಯಪ್ಪ ಮಾಲಾಧಾರಿಗಳ ಯಾತ್ರೆ, ಜ.7ರಿಂದ 10ರವರೆಗೆ ಹಲವು ಕಾರ್ಯಕ್ರಮಗಳು
- ತುಮಕೂರು: ಜನವರಿ 7, 8ರಂದು ಸಿರಿಧಾನ್ಯ ಹಬ್ಬ
- ಸರಗೂರು: ವಿಜೃಂಭಣೆಯಿಂದ ನಡೆದ ಹನುಮ ಜಯಂತಿ ಉತ್ಸವದ ಶೋಭಯಾತ್ರೆ
- ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣವಾಗದಂತೆ ಎಚ್ಚರ ವಹಿಸಿ: ಶಾಸಕ ಜಿ.ಬಿ. ಜ್ಯೋತಿಗಣೇಶ್ ಸೂಚನೆ
- ಕ್ವಿಝ್: ಸಹನಾ ಶಾಲೆ ಪ್ರಥಮ ಸ್ಥಾನ
- ಮರಕ್ಕೆ ಡಿಕ್ಕಿ ಹೊಡೆದ ಬೈಕ್: ಸ್ಥಳದಲ್ಲೇ ಸವಾರ ಸಾವು
Author: admin
ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಮೇ 5 ರಿಂದ ಉಚಿತ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380220884, 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್…
ತುಮಕೂರು: ಎಸ್ ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 10 ದಿನಗಳ ಅಣಬೆ ಬೇಸಾಯ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ 12ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು–572104 ಅಥವಾ ದೂ.ವಾ.ಸಂ.0816-2243386, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿದ್ದು, ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿ BE/B.tech ಕೋರ್ಸುಗಳಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ ಕನಿಷ್ಠ ಶೇ.55ರಷ್ಟು ಅಂಕ ಗಳಿಸಿರಬೇಕು. ಈ ಯೋಜನೆಯಡಿ ಶಿಷ್ಯ ವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 5ಲಕ್ಷ ರೂ.ಗಳು ಮೀರಿರಬಾರದು. ಆಸಕ್ತರು ಏಪ್ರಿಲ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ, ತುಮಕೂರು ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು…
ತಿಪಟೂರು: ತಾಲೂಕು ಕೆರಗೋಡಿ, ರಂಗಾಪುರ ಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಗುರುಪರದೇಶಿ ಕೇಂದ್ರ ಸ್ವಾಮೀಜಿಯವರ 73ನೇ ಜನ್ಮ ವರ್ಧಂತಿ ಮಹೋತ್ಸವ ಏಪ್ರಿಲ್ 5ರಂದು ಶನಿವಾರ ಶ್ರೀಮಠದ ಆಭರಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಸುಕ್ಷೇತ್ರದ ಹಿರಿಯ ವಿದ್ಯಾರ್ಥಿ ಹಾಗೂ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಯು.ಕೆ.ಶಿವಪ್ಪ ತಿಳಿಸಿದರು. ಅಂದು ಸುಕ್ಷೇತ್ರ ಆರಾಧ್ಯ ದೈವ ಗಳಾದ ಶ್ರೀ ಶಂಕರೇಶ್ವರ ಸ್ವಾಮಿ, ಶ್ರೀರಂಗನಾಥ ಸ್ವಾಮಿ ಎಲ್ಲ ಹಿರಿಯರ ಆರುಗುರುವರೇಣ್ಯರ ಗದ್ದೆಗೆ ದೇವಾಲಯಗಳಿಗೆ ಅಲಂಕಾರ, ರುದ್ರಾಭಿಷೇಕ ಶ್ರೀಗಳ ಪಾದಪೂಜೆ, ಭಕ್ತರಿಂದ ಭಕ್ತಿ ಸಮರ್ಪಣೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮಾಡಾಳು ಶ್ರೀ ರುದ್ರಮುನಿ ಸ್ವಾಮಿ ಗೋಡೆಕೆರೆ ಮೃತ್ಯುಂಜಯ ದೇಶಿಯ ಕೇಂದ್ರ ಸ್ವಾಮೀಜಿ ಸೇರಿದಂತೆ ಹರ ಗುರು ಚರಮೂರ್ತಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಅಂದು 5,000 ಜನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು, ಎಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು…
ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ ನೀಡಿ, ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮೂಲ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಅಲ್ಲದೆ, ಮಕ್ಕಳಿಗೆ ನೀಡಲಾಗುತ್ತಿರುವ ವ್ಯಾಕ್ಸಿನೇಷನ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳ್ಳಂಬೆಳ್ಳ ಕೆನರಾ ಬ್ಯಾಂಕ್ ನ ಕೆಸಿಸಿ ಸಾಲ ಪದ್ಧತಿ ಯೋಜನೆಯ ಕುರಿತು ರೈತರಿಗೆ ಸಾಲ ನೀಡಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಪ್ರಾಥಮಿಕ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರಿಗೆ ಕೃಷಿ ಇಲಾಖೆಯಿಂದ ವಿತರಿಸುವ ಪರಿಕರ ಹಾಗೂ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವುದಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಕಳ್ಳಂಬೆಳ್ಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಿಡಿಒ ಕಚೇರಿಯಲ್ಲಿ ಪಿಎಂ ವಿಶ್ವಕರ್ಮ…
ತುಮಕೂರು: ಎಂಎಲ್ ಸಿ ರಾಜೇಂದ್ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಎ 1 ಆರೋಪಿ ರೌಡಿಶೀಟರ್ ಸೋಮ @ ಜೈಪುರ ಸೋಮ ಜೊತೆಗೆ ಎ–3 ಅರೋಪಿ ಅಮಿತ್ ಕೂಡ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕ್ಯಾತಸಂದ್ರ ಸರ್ಕಲ್ ಇನ್ ಸ್ಪೆಕ್ಟರ್ ಕಚೇರಿಗೆ ಕರೆತಂದು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಒಂದು ರಾಜ್ಯದಲ್ಲಿ ಅರಿಸೇನನೆಂಬ ರಾಜನಿದ್ದನು. ಅವನಿಗೆ ತಾನು ಹಿಂದಿನ ಜನ್ಮದಲ್ಲಿ ಏನು ಆಗಿದ್ದೆ ಎಂದು ತಿಳಿಯುವ ಕುತೂಹಲ ಉಂಟಾಯಿತು. ಅದಕ್ಕಾಗಿ ತುಂಬಾ ದೊಡ್ಡ ಹೆಸರು ಮಾಡಿದ್ದ ದೊಡ್ಡ ದೊಡ್ಡ ಭವಿಷ್ಯಕಾರರನ್ನು ಅರಮನೆಗೆ ಕರೆಯಿಸಿ ತಾವೆಲ್ಲರೂ ಒಮ್ಮತದ ಅಭಿಪ್ರಾಯದಿಂದ ನಾನು ಹಿಂದಿನ ಜನುಮದಲ್ಲಿ ಏನಾಗಿದ್ದೆ ಸಾಕ್ಷಿ. ಸಮೇತ ತಿಳಿಸಿದರೆ 10 ಸಹಸ್ರ ಸ್ವರ್ಣ ಮುದ್ರಿಕೆ ನೀಡಲಾಗುವುದು ಎಂದು ತಿಳಿಸಿದ. ರಾಜನ ಜನ್ಮ ಕುಂಡಲಿ ತೆಗೆದು ನೋಡಿದರು, ಅವರವರಲ್ಲೇ ಚರ್ಚೆ ಉಂಟಾಯಿತು, ಲೆಕ್ಕಾಚಾರ ಮಾಡಿ, ಎಲ್ಲರೂ ಅವರವರದ್ದೇ ವಾದಮಂಡಿಸಿ ತಮ್ಮ ತಮ್ಮ ವಿದ್ವತ್ತನ್ನು ಕಾಪಾಡಿಕೊಳ್ಳುವಲ್ಲಿ ಮುಂದಾದರು, ಯಾರು ಯಾರೊಬ್ಬರ ವಾದ ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ, ಅವರಿಗೆ ಅವರ ಮರ್ಯಾದೆ ಸ್ವಾಭಿಮಾನವೇ ಮುಖ್ಯವಾಗಿತ್ತು. ಹಾಗೆಯೇ ಯಾರೂ ಒಮ್ಮತದ ಅಭಿಪ್ರಾಯಕ್ಕೆ ಬರಲಿಲ್ಲ. ಕೊನೆಗೆ ಮೊದಲನೇ ಭವಿಷ್ಯಕ ಎದ್ದು ನಿಂತು ಮಹಾರಾಜರೇ ತಾವು ಹಿಂದಿನ ಜನುಮದಲ್ಲಿ ಕಾಡನಾಳುವ ಸಿಂಹವಾಗಿದ್ದಿರಿ, ಆದ್ದರಿಂದಲೇ ಈ ಜನುಮದಲ್ಲಿ ರಾಜರಾಗಿದ್ದೀರಿ ಎಂದರೆ, ಮತ್ತೊಬ್ಬ ಭವಿಷ್ಯಕ ಇಲ್ಲ ರಾಜರೇ ನೀವು ಅತ್ಯಂತ ನಿರ್ಗತಿಕರಾಗಿದ್ದೀರಿ ಮತ್ತು ದೈವ ಭಕ್ತರಾಗಿದ್ದಿರಿ…
ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದಲ್ಲಿ ಚೌಡೇಶ್ವರಿ ಅಮ್ಮನವರ ಜ್ಯೋತಿ ಉತ್ಸವವನ್ನು ಮಂಗಳವಾರ ವಿಜೃಂಭಣೆಯಿಂದ ಆಚರಿಸಲಾಯಿತು. ಗ್ರಾಮದಲ್ಲಿ ಶಾಂತಿ ಮತ್ತು ಸಂಮೃದ್ಧಿಗಾಗಿ ಹಾಗೂ ಜನತೆಯನ್ನು ದುಷ್ಟ ಶಕ್ತಿಗಳಿಂದ ರಕ್ಷಿಸುವ ಸಲುವಾಗಿ ತೊಗಟವೀರ ಕ್ಷತ್ರಿಯರು ತಮ್ಮ ಕುಲದೇವಿ ಶ್ರೀ ಚೌಡೇಶ್ವರಿ ಅಮ್ಮನವರ ಪಂಚಜ್ಯೋತಿ ಉತ್ಸವವನ್ನು ಶ್ರದ್ಧಾಭಕ್ತಿಗಳಿಂದ ಪ್ರತಿವರ್ಷ ಹಮ್ಮಿಕೊಳ್ಳುತ್ತಿದ್ದು, ಅದು ಗ್ರಾಮದ ಸಂಪ್ರದಾಯವಾಗಿ ಬೆಳೆದು ಬಂದಿದೆ. ಪ್ರತಿ ವರ್ಷ ಯುಗಾದಿ ಹಬ್ಬದ 3ನೇ ದಿನ ಚೌಡೇಶ್ವರಿ ದೇವಿಯ ಪಂಚ ಜ್ಯೋತಿಗಳ ಮೆರವಣಿಗೆಯನ್ನು ಗ್ರಾಮದ ಬೀದಿಗಳಲ್ಲಿ ಹಮ್ಮಿಕೊಳ್ಳುವುದು ಗ್ರಾಮದ ಸಂಪ್ರದಾಯಗಳಲ್ಲಿ ಒಂದಾಗಿದೆ. ಎಂದಿನಂತೆ ಈ ವರ್ಷವೂ ಸಹಾ ಈ ಉತ್ಸವ ಮೆರವಣಿಗೆಯು ವಾಧ್ಯವೃಂದ, ಕಲಾತಂಡಗಳೊಂದಿಗೆ ಸಾಗುತ್ತಾ ಆನಂದ ಪದಗಳೊಂದಿಗೆ ಅದ್ದೂರಿಯಾಗಿ ಆಚರಿಸಲಾಯಿತು. ಉತ್ಸವವು ಶ್ರೀಚೌಡೇಶ್ವರಿ ಅಮ್ಮನವರ ಮೂರ್ತಿ ಮತ್ತು ಪಂಚಜ್ಯೋತಿಗಳೊಂದಿಗೆ ಪುರದಕಟ್ಟೆಯಿಂದ ಪ್ರಾರಂಭವಾಗಿ ಬಿ.ಹೆಚ್. ರಸ್ತೆಯ ಮೂಲಕ ಸಾಗಿ ಹಳೆಯ ಅಂಚೆಕಟೇರಿ ರಸ್ತೆ. ಎಸ್.ಕೆ.ಪಿ.ಟಿ ರಸ್ತೆಯ ಮೂಲಕ ಅಶ್ವಥನಕಟ್ಟೆಯ ರಸ್ತೆಯಲ್ಲಿ ಸಾಗಿ ಹೊಸ ಚೌಡೇಶ್ವರಿ ದೇವಾಲಯದಲ್ಲಿ ಮುಕ್ತಾಯವಾಯಿತು. ಈ ಸಂದರ್ಭದಲ್ಲಿ ಹರಕೆ ಹೊತ್ತ ಭಕ್ತಾಧಿಗಳು ಬಾಯಿಗೆ…
ಕೊರಟಗೆರೆ : 112 ವರ್ಷಗಳವರೆಗೂ ಸಹಿತ ನಿರಂತರವಾಗಿ ದಾಸೋಹದ ಮುಖಾಂತರವಾಗಿ ತಮ್ಮ ಕಾಯಕವನ್ನು ದೇವರ ಕೆಲಸವೆಂದು ತಿಳಿದು, ಕಾಯಕವೇ ಕೈಲಾಸವೆಂಬಂತೆ ಶ್ರೀ ಮಠವನ್ನು ನಡೆಸಿಕೊಂಡು ಬಂದಿರುವ ತ್ರಿವಿಧ ದಾಸೋಹಿಗಳಾದ ಪರಮಪೂಜ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರು ನಮಗೆಲ್ಲ ಆದರ್ಶ ಎಂದು ಸಿದ್ಧರಬೆಟ್ಟದ ಬಾಳೆಹೊನ್ನೂರು ಖಾಸಾಶಾಖಾ ಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು ನುಡಿದರು. ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗದಲ್ಲಿ ಅಖಿಲಭಾರತ ವೀರಶೈವ ಮಹಾಸಭಾ ಹಾಗೂ ಸಮಸ್ತ ಭಕ್ತಾದಿಗಳಿಂದ ಆಯೋಜಿಸಿದ್ದ ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ118ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಮ್ಮೆಲ್ಲರಿಗೂ ಸಹಿತ ಆರಾಧ್ಯದೈವವಾಗಿ, ನಡೆದಾಡುವ ದೇವರಾಗಿ ನಮ್ಮ ಬದುಕಿನುದ್ದಕ್ಕೂ ಕಾಯಕವನ್ನೇ ಕೈಲಾಸವೆಂದು ನಂಬಿ ನಿರಂತರವಾಗಿ ಸದ್ಭಕ್ತರ ಸೇವೆಯಲ್ಲಿಯೇ ತೊಡಗಿಸಿಕೊಂಡು ನಮಗೆಲ್ಲ ಆದರ್ಶಗಳನ್ನು ನೀಡಿರುವ ಪೂಜ್ಯರಿಗೆ ಭಕ್ತಿ ಪೂರಕ ನಮನ ಸಲ್ಲಿಸುತ್ತಾ ಅವರ ಮಾರ್ಗದರ್ಶನದಂತೆ ನಡೆಯೋಣ ಎಂದರು. ಶ್ರೀಗಳ ಜೀವನದ ತತ್ತ್ವಗಳು ಯುವ ಜನತೆಗೆ ಮಾರ್ಗ ದರ್ಶಕವಾಗಬೇಕು” ಎಂದು ಅವರು ಶುಭ ಹಾರೈಸಿದರು. ಅಕ್ಷರ ಮತ್ತು ಅನ್ನ ದಾಸೋಹ ಸಾವಿರಾರು ವಿದ್ಯಾರ್ಥಿಗಳ…
ತುಮಕೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅಪರಾಧಿಗೆ ತುಮಕೂರಿನ ಅಧಿಕ ಜಿಲ್ಲಾ ನ್ಯಾಯಾಲಯದ ಎಫ್ ಟಿ ಎಸ್ ಸಿ ಪೋಕ್ಸೋ ನ್ಯಾಯಾಲಯವು ಜೀವಾವಧಿ ಶಿಕ್ಷೆ(ಸಾಯುವರೆಗೂ) ಹಾಗೂ 1.50 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಸಂಕ್ರಾಂತಿ ದಿನ ನೊಂದ ಬಾಲಕಿ ರಂಗೋಲಿ ತರಲು ಸಮೀಪದ ಹಳ್ಳಿಗೆ ಹೋಗುತ್ತಿದ್ದ ವೇಳೆ ಪ್ರಕರಣದ ಅಪರಾಧಿ ಶ್ರೀರಾಮ್ ಎಂಬಾತ ಸ್ಕೂಟಿಯಲ್ಲಿ ಬಾಲಕಿಗೆ ಡ್ರಾಪ್ ಕೊಡುವುದಾಗಿ ಬಾಲಕಿಗೆ ಹೇಳಿದ್ದಾನೆ. ಬಾಲಕಿ ಬರುವುದಿಲ್ಲ ಎಂದರೂ ಆಕೆಯನ್ನು ಪುಸಲಾಯಿಸಿ ಹಳ್ಳಿಗೆ ಕರೆದೊಯ್ದು ಆಕೆಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸಂಬಂಧ ತನಿಖಾಧಿಕಾರಿ ಗಿರೀಶ್, ಅಪರಾಧಿಯ ವಿರುದ್ಧ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಶ್ರೀರಾಮನ ವಿರುದ್ಧದ ಆರೋಪ ಸಾಬೀತಾಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಅಪರಾಧಿ ಶ್ರೀರಾಮನಿಗೆ ಜೀವಾವಧಿ…