Subscribe to Updates
Get the latest creative news from FooBar about art, design and business.
- ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
- ಗ್ಯಾರಂಟಿ: ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
- ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
- ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
- ನಕಲಿ ಔಷಧ ದಂಧೆಯ ಕಿಂಗ್ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
- ಬೀದರ್: ಚಾಂದೋರಿ ಪಂಚಾಯತ್ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
- ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
- ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
Author: admin
2023 ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ‘2023 ರಲ್ಲಿ ಜೆಡಿಎಸ್ ಸರ್ಕಾರ ಬಂದರೆ ನೀಟ್ ವಿರುದ್ಧ ಅಸೆಂಬ್ಲಿಯಲ್ಲಿ ನಿರ್ಣಯ ಕೈಗೊಳ್ಳುತ್ತೇವೆ. ನಾವು ನೀಟ್ ವಿರೋಧಿಸುತ್ತೇವೆ. ಮಕ್ಕಳ ಜೀವಕ್ಕೆ ಕುಣಿಕೆ ಬಿಗಿದು ಕಂಡವರ ಜೇಬು ಭರ್ತಿ ಮಾಡುವ ಈ ದಂಧೆ ಬೇಕಿಲ್ಲ. ಅದಕ್ಕೆ ಚರಮಗೀತೆ ಹಾಡುತ್ತವೆ’ ಅಂತಾ ಹೇಳಿದ್ದಾರೆ.‘ಪ್ರಶ್ನೆ ಮಾಡಿದರೆ ದ್ರೋಹವೇ? ಧನದಾಹವೇ? ಕರ್ನಾಟಕದ ಉನ್ನತ ಶಿಕ್ಷಣ ಸಚಿವರು ಕಟ್ಟಿರುವ ಈ ಹಣಿಪಟ್ಟಿ ಬಗ್ಗೆ ಏನೂ ಹೇಳಬೇಕೋ ಕಾಣೆ. ನೀಟ್ ವಿರೋಧಿಸುವವರು ಧನಧಾಹಿಗಳು, ದ್ರೋಹಿಗಳು ಎಂದು ಅವರು ಯಾರನ್ನು ಉದ್ದೇಶಿಸಿ ಹೇಳಿದ್ದು ಎನ್ನುವುದನ್ನು ಅವರೇ ತಿಳಿಸಬೇಕು’ ಅಂತಾ ತಿರುಗೇಟು ನೀಡಿದ್ದಾರೆ.‘ನಾನು ಮೆಡಿಕಲ್ ಕಾಲೇಜು ನಡೆಸುತ್ತಿಲ್ಲ. ಎಂಜಿನಿಯರಿಂಗ್ ಕಾಲೇಜನ್ನೂ ನಡೆಸುತ್ತಿಲ್ಲ. ಕೊನೆಪಕ್ಷ ಒಂದು ಸಣ್ಣ ಕೈಗಾರಿಕೆಯೂ ಇಲ್ಲ. ಬಿಡದಿಯ ತೋಟ ಬಿಟ್ಟರೆ ನನ್ನದೂ ಎನ್ನುವಂಥದ್ದು ಏನೂ ಇಲ್ಲ. ಆದರೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ದ್ರೋಹಿಗಳು, ಧನಧಾಹಿಗಳು ಎಂದು…
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್ ಸಿದ್ಧತೆಗಳು ಮುಗಿದಿದ್ದು, ನಾಳೆ ರಾಜ್ಯ ಸರ್ಕಾರದ ಆರ್ಥಿಕ ವರ್ಷ 2022-23 ರ ಬಜೆಟ್ ಮಂಡನೆ ಮಾಡಲಿದ್ದಾರೆ. ಆದರೆ ಆರ್ಥಿಕ ಇಲಾಖೆ ಹೇಳುವ ಪ್ರಕಾರ ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿ ಎಸ್ ಟಿ ಪರಿಹಾರ ಮತ್ತು ಕೇಂದ್ರ ಅನುದಾನ ಸಾವಿರಾರು ಕೋಟಿ ಬಾಕಿ ಇರಿಸಿಕೊಂಡಿದೆ. ಜಿಎಸ್ ಟಿ ಪರಿಹಾರ ಪಾವತಿ ಬಾಕಿ ₹ 7000 ಕೋಟಿ: GST ಜಾರಿ ಆದ ಸಂದರ್ಭದಿಂದಲೂ ರಾಜ್ಯ ಸರ್ಕಾರ ಕೇಂದ್ರ ಹಣಕಾಸು ಇಲಾಖೆಯ ಕದ ತಟ್ಟುತ್ತಲೇ ಇದೆ ಹೊರತು ಈವರೆಗೆ ಸಮಾಧಾನಕರವಾದ ಪರಿಹಾರ ರಾಜ್ಯಕ್ಕೆ ಸಿಕ್ಕಿಲ್ಲ. ಈ ನಡುವೆ ರಾಜ್ಯ ಸರ್ಕಾರ ಕಳೆದ ಎರಡು ವರ್ಷದಿಂದ ಜಿಎಸ್ ಟಿ ಪರಿಹಾರವಾಗಿ ಸಾಲ ಪಡೆಯುವ ವಿಶೇಷ ಅವಕಾಶವನ್ನು ಬಳಸಿಕೊಂಡಿದೆ.ವಾಣಿಜ್ಯ ಇಲಾಖೆ ಮಾಹಿತಿ ಪ್ರಕಾರ 2021-22ರಲ್ಲಿ ಜಿಎಸ್ ಟಿ ಪರಿಹಾರ ಹಾಗೂ ಸಾಲದ ರೂಪದಲ್ಲಿ 18,000 ಕೋಟಿ ಸ್ವೀಕರಿಸಿದೆ. ಇನ್ನೂ 7,000 ಕೋಟಿ ಪಾವತಿಯಾಗದೇ ಬಾಕಿ ಉಳಿದುಕೊಂಡಿದೆ. ಒಟ್ಟು 11,000 ಕೋಟಿ…
ಸಿರಾ: ಯುದ್ಧ ಪೀಡಿತ ಉಕ್ರೇನ್ ನಲ್ಲಿ ಕರ್ನಾಟಕದ ಹಲವಾರು ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನ ನಡೆಯುತ್ತಿದೆ. ಶಿರಾ ತಾಲ್ಲೂಕಿನ ವಿದ್ಯಾರ್ಥಿ ಕೂಡ ಉಕ್ರೇನ್ ನಲ್ಲಿ ಸಿಲುಕಿದ್ದು, ವಿದ್ಯಾರ್ಥಿಗಳ ಮನೆಗೆ ತಾಲ್ಲೂಕು ಜೆಡಿಎಸ್ ಅದ್ಯಕ್ಷ ಆರ್.ಉಗ್ರೇಶ್ ಭೇಟಿ ನೀಡಿ, ವಿದ್ಯಾರ್ಥಿಯನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರುವ ಭರವಸೆಯನ್ನು ನೀಡಿದರು. ತಾಲ್ಲೂಕಿನ ವೈದ್ಯಕೀಯ ವಿದ್ಯಾರ್ಥಿ ಸ್ವಾಮಿ ಜೊತೆ ವಿಡಿಯೋ ಕರೆ ಮೂಲಕ ಮಾತನಾಡಿ ಧೈರ್ಯ ತುಂಬಿದರು. ನಮ್ಮ ಪಕ್ಷದಿಂದ ಬೇಕಾಗಿರುವ ಸಹಾಯ ಮಾಡುವುದಾಗಿ ಭರವಸೆ ನೀಡಿದರು. ಜೊತೆಗೆ ಕುಟುಂಬಸ್ಥರು ಕೂಡ ಧೈರ್ಯದಿಂದ ಇರುವಂತೆ ಹೇಳಿದರು. ವರದಿ: ಎ.ಎನ್.ಪೀರ್, ತುಮಕೂರು
ಪಾವಗಡ: ತಾಲೂಕು ನಿಡಗಲ್ ಹೋಬಳಿ ವ್ಯಾಪ್ತಿಯಲ್ಲಿರುವ ಗುಜ್ಜನಡು ಗ್ರಾಮ ಪಂಚಾಯಿತಿ ಸಮಾಜಸೇವಕರಾದ ಸಾಯಿಸುಮನ ಹನುಮಂತರಾಯಪ್ಪ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ದೇವಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಪುಸ್ತಕಗಳನ್ನು, ಕಲಿಕಾ ಸಾಮಗ್ರಿಗಳನ್ನು ವಿತರಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ SDMC ಅಧ್ಯಕ್ಷರು ಈರಣ್ಣ, ನರಸಿಂಹನಾಯಕ, ರಾಮಚಂದ್ರಪ್ಪ, ಅಶ್ವತಪ್ಪ, ದೇವರಾಜ್, k p ಲಿಂಗಣ್ಣ, ಅಜಯ್ ಗೌಡ , ಗೌತಮ್ ಶಾಲಾ ಮುಖ್ಯೋಪಾಧ್ಯಾಯರು ಭಾರತಿ H, ಹಾಗೂ ಅತಿಥಿ ಶಿಕ್ಷಕರಾದ ಲೋಕೇಶ್ ಉಪಸ್ಥಿತರಿದ್ದರು. ವರದಿ: ನಂದೀಶ್ ಕೊತ್ತೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ರಾಜ್ಯ ಬಿಜೆಪಿಯಲ್ಲಿನ ಅನಿಶ್ಚಿತತೆ, ಪ್ರತಿಪಕ್ಷ ಕಾಂಗ್ರೆಸಿನ ಪ್ರಖರತೆ ಹಾಗೂ ಮುಂದಿನ ವರ್ಷ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಳನ್ನು (Assembly Elections) ದೃಷ್ಟಿಯಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಮತೋಲನದ ಬಜೆಟ್ (Balancing Budget) ಮಂಡಿಸುವುದು ಸವಾಲಿನ ಕೆಲಸವಾಗಿದೆ. ಇದರ ನಡುವೆ ಕೋವಿಡ್, ಆರ್ಥಿಕ ಹಿಂಜರಿತ, ವ್ಯಾಪರ-ವಹಿವಾಟುಗಳ ಕುಂಠಿತ, ಬೆಲೆ ಏರಿಕೆ ಮತ್ತಿತರ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯದ ಜನ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಅಪಾರ ನಿರೀಕ್ಷೆಯನ್ನೂ ಇಟ್ಟುಕೊಂಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಹಲವು ಕೊಡುಗೆ ಸಾಧ್ಯತೆ: ಬಿ.ಎಸ್. ಯಡಿಯೂರಪ್ಪ (BS Yediyurappa) ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಳಿಸಿ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೆ ಸಿಎಂ ಸ್ಥಾನ ನೀಡುವಾಗ ಅವರು ಉತ್ತರ ಕರ್ನಾಟಕದವರು ಎಂಬುದನ್ನೂ ಪರಿಗಣಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬಸವರಾಜ ಬೊಮ್ಮಾಯಿ ಮಂಡಿಸುವ ಬಜೆಟ್‌ನಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹಲವು ಕೊಡುಗೆಗಳನ್ನು ನೀಡುವ ನಿರೀಕ್ಷೆಯಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಹಲವು ಯೋಜನೆಗಳು ನಡೆಯುತ್ತಿದ್ದು ಅವುಗಳಿಗೆ ಬಜೆಟ್‌ನಲ್ಲಿ…
ತುಮಕೂರು: ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಪತ್ನಿಯನ್ನು ಸ್ಕ್ರೂಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ತುಮಕೂರು ತಾಲೂಕಿನ ಕೆಂಬಳಲು ಗ್ರಾಮದಲ್ಲಿ ನಡೆದಿದೆ. ಗಾರೆ ಕೆಲಸ ಮಾಡುತ್ತಿದ್ದ ಪತಿ ನಾಗರಾಜು ಎಂಬಾತ ಕುಡಿದ ಮತ್ತಿನಲ್ಲಿ ಪತ್ನಿಗೆ ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಕೊಲೆ ಮಾಡಿ ನಂತರ ಮೃತಾದೇಹವನ್ನು ಬಾತ್ರೂಮ್ ಪಿಟ್ ಗುಂಡಿಯಲ್ಲಿ ಎಸೆದಿದ್ದಾನೆ ಎನ್ನಲಾಗಿದೆ. ಜಯಮ್ಮ (52) ಹತ್ಯೆಗೀಡಾದ ಮಹಿಳೆ ಎಂದು ಗುರುತಿಸಲಾಗಿದೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ಬುಧವಾರ ರಾತ್ರಿ ಪ್ರಕರಣ ಬಯಲಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪತಿ ನಾಗರಾಜುನನ್ನು ವಶಕ್ಕೆ ಪಡೆದಿದ್ದಾರೆ. ಮೃತಪಟ್ಟ ಮಹಿಳೆಯ ಮೃತ ದೇಹವನ್ನು ಫಿಟ್ ಗುಂಡಿಯಿಂದ ಹೊರತೆಗೆಯಲಾಗಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹೆಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ. ವರದಿ: ಮಾರುತಿ ಪ್ರಸಾದ್ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ…
ಬಜೆಟ್ ಎಂದಾಕ್ಷಣ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ ಹತ್ತು ಹಲವು ನಿರೀಕ್ಷೆಗಳು ಗರಿಗೆದ ರುವುದು ಸಹಜ. ಇಂಥದ್ದೆ ನಿರೀಕ್ಷೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಮೇಲೂ ಇದೆ. ಮೊದಲಿಂದಲೂ ರೈತ ಸಮುದಾಯಕ್ಕೆ ಬಜೆಟ್‌ನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಂಗಾರಪ್ಪ, ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶೇಷ ಕಾಳಜಿ ವಹಿಸಿದ್ದಾರೆ. ಉಚಿತ ವಿದ್ಯುತ್, ಗ್ರಾಮೀಣ ಕೃಪಾಂಕ, ಸಬ್ಸಿಡಿ ನೀಡುವ ಕಾರ್ಯಕ್ರಮ, ಸಾಲಮನ್ನಾ ಯೋಜನೆಗಳು ಆಯಾ ಕಾಲಘಟ್ಟಕ್ಕೆ ಸರ್ಕಾರದ ಜನಪ್ರಿಯತೆ ಹೆಚ್ಚಿಸಲು ಕಾರಣವಾಗಿವೆ. ವಿದ್ಯಾರ್ಥಿಗಳಿಗಾಗಿ ತಂದ ಯೋಜನೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ, ಸೈಕಲ್, ಲ್ಯಾಪ್ಟಾಪ್ ಉಚಿತ ವಿತರಣೆ ಯೋಜನೆಗಳು ಪ್ರಮುಖ ವಾದವು. ತಳ ಸಮುದಾಯಗಳು, ಹಿಂದುಳಿದ ವರ್ಗಗಳು, ಎಸ್ಸಿ,ಎಸ್ಟಿ, ನಾನಾ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿಯೂ ಹಲವು ಯೋಜನೆಗಳು ರೂಪು ಗೊಂಡಿದ್ದು ಬಜೆಟ್‌ನಲ್ಲಿ ಘೋಷಣೆ ಮಾಡಿ, ಅದನ್ನು ಚುನಾವಣೆ ಪ್ರಚಾರಕ್ಕೆ ಬಳಸಿಕೊಂಡ ನಿದರ್ಶನಗಳು ಇವೆ. ಆಯಾ ಸಂದ ರ್ಭಕ್ಕೆ…
2020-21ರಲ್ಲಿ ರಾಜ್ಯ ಸರ್ಕಾರ ಒಟ್ಟು ಋಣ ಭಾರ 3,98,219 ಕೋಟಿ ರೂ. ತಲುಪಿತ್ತು. ಇನ್ನು ಪ್ರಸಕ್ತ 2021-22 ಸಾಲಿನಲ್ಲಿ ರಾಜ್ಯ ಸರ್ಕಾರ 71,332 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ.ರಾಜ್ಯದ ಒಟ್ಟು ಸಾಲ ಹಾಗೂ ಋಣಭಾರ ಮಾರ್ಚ್ ಅಂತ್ಯಕ್ಕೆ 4,57,899 ಕೋಟಿ ರೂ.ಗೆ ಏರಿಕೆಯಾಗಲಿದೆ. ಇಂತಹ ಸಾಲದ ಮಧ್ಯೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್ ಮಂಡನೆಗೆ ಅಂತಿಮ ಸಭೆಗಳನ್ನ ನಡೆಸುತ್ತಿದ್ದಾರೆ.ಸಂಪನ್ಮೂಲ ಕೊರತೆಯ ಮಧ್ಯೆ ಬಜೆಟ್ ಮಂಡನೆ ಮಾಡಬೇಕಾಗಿದ್ದು, ಈ ಬಾರಿ ಬಜೆಟ್ ನಿರ್ವಹಣೆಗಾಗಿ ಇನ್ನಷ್ಟು ಸಾಲದ ಮೊರೆ ಹೋಗುವುದು ಅನಿವಾರ್ಯವಾಗಿದೆ.ಮಾರ್ಚ್ 4ಕ್ಕೆ ಸಿಎಂ ಬೊಮ್ಮಾಯಿ ಮದ್ಯಾಹ್ನ 12:30ಕ್ಕೆ ಚೊಚ್ಚಲ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಬಾರಿಯೂ ಬಂಡವಾಳ ವೆಚ್ಚವನ್ನು ಭರಿಸಲು ಸಾಲದ ಮೊರೆಹೋಗುವ ಪರಿಸ್ಥಿತಿ ಎದುರಾಗಿದೆ.ಕಳೆದ ಎರಡು ವರ್ಷದಿಂದ ಕೋವಿಡ್ ಲಾಕ್‌ಡೌನ್ ಹೇರಿದ ಆರ್ಥಿಕ ಸಂಕಷ್ಟಕ್ಕೆ ಆದಾಯ ಮೂಲ ಕುಗ್ಗಿದೆ.ಕೇಂದ್ರ ಸರ್ಕಾರವೂ ರಾಜ್ಯಗಳಿಗೆ ಕಳೆದ ವರ್ಷದಿಂದ ಹೆಚ್ಚುವರಿ ಸಾಲ ಪಡೆಯಲು ಅನುಮತಿ ನೀಡಿದೆ. 2022-23 ಸಾಲಿನಲ್ಲಿ ರಾಜ್ಯದ ಒಟ್ಟು ಸಾಲ…
ಯುಕ್ರೇನ್ ಮೇಲೆ ರಷ್ಯಾ ನಡೆಸಿರುವ ಯುದ್ದದಿಂದ ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮುಂದುವರೆದಿರುವ ನಡುವೆ ಕಚ್ಚಾ ತೈಲ ಬೆಲೆಗಳು ಪ್ರತಿ ಬ್ಯಾರೆಲ್‍ಗೆ ಇಂದು 5 ಡಾಲರ್ ಏರಿಕೆಯಾಗಿದೆ. ನ್ಯೂಯಾರ್ಕ್ ಮಾರ್ಕೆಟ್ ಆಯಿಲ್ ಎಕ್ಸೆಚೇಂಜ್‍ನ ಎಲೆಕ್ಟ್ರಾನಿಕ್ ವಹಿವಾಟಿನಲ್ಲಿ ಬೆಂಚ್ಮಾರ್ಕ್ ಕಚ್ಚಾ ತೈಲ ಪ್ರತಿ ಬ್ಯಾರೆಲ್ 5.24 ಡಾಲರ್ ಏರಿಕೆಯಾಗಿ 108.60 ಕ್ಕೆ ಮುಟ್ಟಿದೆ. ಬ್ರೆಂಟ್ ಕಚ್ಚಾ ತೈಲ ಅಂತರಾಷ್ಟ್ರೀಯ ಬೆಲೆ ಮಾನದಂಡವು ಲಂಡನ್‍ನಲ್ಲಿ ಪ್ರತಿ ಬ್ಯಾರೆಲ್ 110.40 ಡಾಲರ್‍ಗೆ ಏರಿದೆ.ಪ್ರಮುಖ ತೈಲ ಗ್ರಾಹಕರ ಕ್ಲಬ್ ಇಂಟನ್ಯಾಷನಲ್ ಎನರ್ಜಿ ಏಜೆನ್ಸಿಯ 31 ಸದಸ್ಯರು ನಿನ್ನೆ 60 ಮಿಲಿಯನ್ ಬ್ಯಾರೆಲ್‍ಗಳ ಕಚ್ಚಾ ತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಒಪ್ಪಿಕೊಂಡರು. ಪರಿಸ್ಥಿತಿ ಶಾಂತಗೊಳಿಸುವ ಕಸರತ್ತು ನಡೆಯಿತು.ಎರಡನೇ ಅತಿ ದೊಡ್ಡ ತೈಲ ರಫ್ತುದಾರರಾದ ಸೌದಿ ಅರೇಬಿಯಾದ ನಂತರ ರಷ್ಯಾದಿಂದ ಪೂರೈಕೆಯಲ್ಲಿನ ಅಡಚಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…
ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ನೀಟ್, ವಿದ್ಯಾರ್ಥಿಗಳು ಮತ್ತು ಪೋಷಕರ ಪಾಲಿಗೆ ಮರಣಶಾಸನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಟೀಕಿಸಿದ್ದಾರೆ. ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ಅರ್ಹತೆ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ಅನ್ಯಾಯಕ್ಕೆ ಅಂತ್ಯ ಹಾಡಬೇಕಿದೆ ಎಂದಿದ್ದಾರೆ. 10ನೇ ತರಗತಿಯಲ್ಲಿ ಶೇ.96, 2ನೇ ಪಿಯುಸಿಯಲ್ಲಿ ಶೇ. 97 ಅಂಕ ಗಳಿಸಿದ್ದರೂ ನವೀನ್ʼಗೆ ಜಗತ್ತಿನ ಶಿಕ್ಷಣ ಕಾಶಿ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.ಭಾರತದಲ್ಲಿ…