Author: admin

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿಯಲ್ಲಿ ಲಕ್ಷಕಂಠ ಗೀತಾ ಪಾರಾಯಣ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಭಗವದ್ಗೀತೆಯ 15ನೇ ಅಧ್ಯಾಯದ 10 ಶ್ಲೋಕಗಳನ್ನು ಪಠಿಸಿದರು. ಬಳಿಕ ಮಾತನಾಡಿದ ಅವರು,  ಶ್ರೀಕೃಷ್ಣನ ದಿವ್ಯ ದರ್ಶನದಿಂದ ಸಿಗುವ ಸಂತೃಪ್ತಿ, ಶ್ರೀಮದ್ಭಗವದ್ಗೀತೆಯ ಮಂತ್ರಗಳ ಆಧ್ಯಾತ್ಮಿಕ ಅನುಭವ ಮತ್ತು ಹಲವಾರು ಪೂಜ್ಯ ಸಂತರು ಮತ್ತು ಗುರುಗಳ ಉಪಸ್ಥಿತಿಯು ನನಗೆ ಒಂದು ದೊಡ್ಡ ಸೌಭಾಗ್ಯ. ನನಗೆ, ಇದು ಅಸಂಖ್ಯಾತ ಸದ್ಗುಣಗಳನ್ನು ಪಡೆದಂತೆ. ಇದನ್ನು ಪದಗಳಲ್ಲಿ ವರ್ಣಿಸಲಸಾಧ್ಯ. ನನ್ನೊಳಗಿನ ಈ ಭಾವನೆಗಳಿಂದ ನಾನು ವಿನಮ್ರನಾಗಿದ್ದೇನೆ ಮತ್ತು ನನ್ನ ಮೇಲೆ ಸುರಿಸಲಾದ ಆಶೀರ್ವಾದಗಳಿಗೆ ಕೃತಜ್ಞನಾಗಿದ್ದೇನೆ ಎಂದಿದ್ದಾರೆ. ಕೇವಲ ಮೂರು ದಿನಗಳ ಹಿಂದೆ ನಾನು ಗೀತೆಯ ನಾಡು ಕುರುಕ್ಷೇತ್ರದಲ್ಲಿದ್ದೆ. ಇಂದು, ಶ್ರೀಕೃಷ್ಣ ಪರಮಾತ್ಮನಿಂದ ಆಶೀರ್ವದಿಸಲ್ಪಟ್ಟ ಮತ್ತು ಜಗದ್ಗುರು ಶ್ರೀ ಮಧ್ವಾಚಾರ್ಯರಿಂದ ಪ್ರಸಿದ್ಧವಾದ ಈ ಭೂಮಿಗೆ ಭೇಟಿ ನೀಡಿ ಸಂತೃಪ್ತನಾಗಿದ್ದೇನೆ. ಈ ಶುಭ ಸಂದರ್ಭದಲ್ಲಿ ಲಕ್ಷಾಂತರ ಜನರು ಏಕಕಾಲದಲ್ಲಿ ಭಗವದ್ಗೀತೆ ಶ್ಲೋಕಗಳನ್ನು ಪಠಿಸುವಾಗ ಸಂಪೂರ್ಣ ವಿಶ್ವದ ಜನರು ಭಾರತದ ಸಹಸ್ರ ವರ್ಷಗಳ ದಿವ್ಯತೆಯ ಸಾಕ್ಷಾತ್ ದರ್ಶನ ಪಡೆದರು…

Read More

ಕೊರಟಗೆರೆ : ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಒಂದೊಂದು ಪ್ರತಿಭೆಗಳಿದ್ದು ಅವುಗಳನ್ನು ಹೊರತರುವ ಪ್ರೋತ್ಸಾಹದ ಕೆಲಸವನ್ನು ನಾವೇಲ್ಲಾರು ಮಾಡಬೇಕಾಗಿದೆ ಎಂದು ತಹಶೀಲ್ದಾರ್ ಮಂಜುನಾಥ್ ತಿಳಿಸಿದರು. ಅವರು ಕೊರಟಗೆರೆ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿ, ಯಾವುದೇ ವ್ಯಕ್ತಿ ಮಹಾನ್ ವ್ಯಕ್ತಿಯಾಗಿ ರೂಪಗೊಳ್ಳಬೇಕಾದರೆ, ಅವನು ಆಧ್ಯಯನಶೀಲನಾಗಿ ಗುರಿಯನ್ನು ಇಟ್ಟುಕೊಂಡು ಶಕ್ತಿಯುತವಾಗಿ ಬೆಳೆಯುತ್ತಾ ಗುರುವಿನ ಮಾರ್ಗದರ್ಶನದಲ್ಲಿ ಮುನ್ನುಗ್ಗಬೇಕು, ಗ್ರಾಮೀಣ ಮಕ್ಕಳಲ್ಲಿ ಪ್ರತಿಭೆಗೆ ಕೊರತೆ ಇಲ್ಲ ಅವರಿಗೆ ಅವಕಾಶ ಕೊರತೆ ಇದ್ದು ಅದನ್ನು ಶಿಕ್ಷಕರು ಪೋಷಕರು ಮನಗೊಂಡು ಅವಕಾಶ ಮಾಡಿಕೊಡಬೇಕು ಎಂದರು. ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ ಮಾತನಾಡಿ, ಗೃಹ ಸಚಿವರ ಕ್ಷೇತ್ರದಲ್ಲಿ ಉತ್ತಮ ಪ್ರತಿಭೆಗಳಿವೆ, ಅವರನ್ನು ಹೊರತಬೇಕಾಗಿದೆ ಮಕ್ಕಳಲ್ಲಿ ಪ್ರತಿಭೆ ಜೊತೆಯಲ್ಲಿ ಅವರಿಗೆ ಸಂವಿಧಾನ ಅರಿವು ಮಹತ್ವವನ್ನು ತಿಳಿಸಬೇಕು ಸಂವಿಧಾನ ಮುಂದೆ ಎಲ್ಲರೂ ಸಮಾನರು ಮಕ್ಕಳಲ್ಲಿ ಜಾತಿ ಧರ್ಮದ ವಿಷವನ್ನು ಬಿತ್ತಬಾರದು ಎಂದರು.…

Read More

ಪಾವಗಡ: ತುಮಕೂರು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ದಿನಗೂಲಿ ನೌಕರರಿಗೆ ಕಳೆದ ಎಂಟು ತಿಂಗಳಿಂದ ವೇತನ ಸಿಕ್ಕಿಲ್ಲ ಹೀಗಾಗಿ ನೌಕರರ ಕುಟುಂಬಗಳ ನಿರ್ವಹಣೆ ಕಷ್ಟಕರವಾಗಿದೆ ಎಂದು ನೌಕರರು ಅಲವತ್ತುಕೊಂಡಿದ್ದಾರೆ. ತುಮಕೂರು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಒಂಭತ್ತು ನೌಕರರ ವೇತನ ನೀಡಿಲ್ಲ ಬೇರೆ ಇಲಾಖೆಗಳಲ್ಲಿ ದಿನಗೂಲಿ ನೌಕರರ ವೇತನ ನೀಡುತ್ತಿದ್ದಾರೆ. ಆದರೆ ಈ ಕಚೇರಿಯಲ್ಲಿ ಮಾತ್ರ ವೇತನ ನೀಡದೆ ತಡೆ ಹಿಡಿದಿದ್ದಾರೆ ಎಂದು ನೋವು ತೋಡಿಕೊಂಡಿದ್ದಾರೆ. ಈಗಲಾದರೂ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ, ನಮ್ಮ ಎಂಟು ತಿಂಗಳ ವೇತನ ನೀಡಬೇಕು. ನಮ್ಮ ಜೀವನ ತುಂಬಾ ಕಷ್ಟಕರವಾಗಿದೆ. ತಕ್ಷಣವೇ ವೇತನ ಬಿಡುಗಡೆಗೊಳಿಸಿ ನಮ್ಮ ಜೀವನಮಟ್ಟ ಸುಧಾರಿಸಬೇಕೆಂದು ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ತುಮಕೂರು: ಕರ್ನಾಟಕ ಜನಪರ ವೇದಿಕೆ, ಸಿದ್ದಯ್ಯನರಸ್ತೆ, ಬೆಂಗಳೂರು ಇವರ ವತಿಯಿಂದ ನ.29ರಂದು ಕನ್ನಡ ರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. ನ.30 ರಂದು ಸಂಜೆ 5:30ಕ್ಕೆ ಜೋಳಂಬಳ್ಳಿ, ಗೂಳೂರು ಹೋಬಳಿ ತುಮಕೂರು ಇಲ್ಲಿ ಕಬಡ್ಡಿ ಪಂದ್ಯಾವಳಿ ಮತ್ತು ವಾಲಿಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಡಿ.ಸಿ.ಗೌರಿಶಂಕರ್, ವೇದಿಕೆಯ ರಾಜ್ಯಾಧ್ಯಕ್ಷ ಸು.ಜಿ.ನೀಲೇಶ್‌ ಗೌಡ ಹಾಗೂ ಪದಾಧಿಕಾರಿಗಳು ಉಪಸ್ಥಿತರಿರುವರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಮಿಡಿಗೇಶಿ: ಮಧುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮ ಪಂಚಾಯತಿಗೆ ಸೇರಿದ ಜೀರಿಗೆಹಳ್ಳಿ ಹಾಗೂ ನಲ್ಲೇಕಾಮನಹಳ್ಳಿ ಗ್ರಾಮದ ಹೊರವಲಯದಲ್ಲಿ ನೆಲೆಸಿರುವ ಶ್ರೀ ಪ್ರಸನ್ನಾಂಜನೇಯ ಮತ್ತು ಪಂಚಮುಖಿ ಆಂಜನೇಯಸ್ವಾಮಿಯವರಿಗೆ 28ನೇ ವರ್ಷದ ಶ್ರೀ ಹನುಮ ಜಯಂತಿ ಹಾಗೂ ಪವಮಾನ ಹೋಮ ಪೂಜಾ ಕಾರ್ಯಕ್ರಮ ಡಿ.2 ರಂದು ನಡೆಯಲಿವೆ. ವಿಶೇಷ ಆಹ್ವಾನಿತರಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ.ಸೋಮಣ್ಣ, ಶಾಸಕ ಕೆ.ಎನ್.ರಾಜಣ್ಣ, ವಿ.ಪ.ಸದಸ್ಯರಾದ ಆರ್.ರಾಜೇಂದ್ರ, ಮಾಜಿ ಜಿ.ಪಂ. ಅಧ್ಯಕ್ಷರಾದ ಶಾಂತಲಾ ರಾಜಣ್ಣ, ಟಿಎಪಿಸಿಎಂಎಸ್‌ ನ ಅಧ್ಯಕ್ಷರಾದ ಎಂ.ಎಸ್. ಮಲ್ಲಿಕಾರ್ಜುನಯ್ಯ, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಉಪಾಧ್ಯಕ್ಷರಾದ ಜಿ.ಜೆ. ರಾಜಣ್ಣ ಭಾಗಿಯಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಹುಳಿಯಾರು: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಚಿಕ್ಕನಾಯಕನಹಳ್ಳಿ ಇವರ ವತಿಯಿಂದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹಂದನಕೆರೆ ಹೋಬಳಿಗೆ ಸೇರಿದ ಸಬ್ಬೇನಹಳ್ಳಿ, ಹರೇನಹಳ್ಳಿ, ಚೌಳಕಟ್ಟೆ ಗ್ರಾಮಗಳಲ್ಲಿನ ಮಿಶ್ರತಳಿ ಹಸುಗಳ ಹಾಲು ಕರೆಯುವ ಸ್ಪರ್ಧೆಯನ್ನು ಡಿಸೆಂಬರ್ 1 ಮತ್ತು 2 ರಂದು ಏರ್ಪಡಿಸಲಾಗಿದೆ. ಡಿ.1 ರಂದು ಸಂಜೆ 5 ರಿಂದ 6 ಗಂಟೆಯವರೆಗೆ ಸಬ್ಬೇನಹಳ್ಳಿ, ಹರೇನಹಳ್ಳಿ, ಚೌಳಕಟ್ಟೆ ಹಾಗೂ ಡಿ.2 ರಂದು ಬೆಳಗ್ಗೆ 6 ರಿಂದ 7ಗಂಟೆಯವರೆಗೆ ಸಬ್ಬೇನಹಳ್ಳಿ, ಹರೇನಹಳ್ಳಿ, ಚೌಳಕಟ್ಟೆಯಲ್ಲಿ ಹಾಲು ಕರೆಯುವ ಸ್ಪರ್ಧೆ ನಡೆಯಲಿದೆ. ಆಸಕ್ತ ಹಾಲು ಉತ್ಪಾದಕರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದೆ. ಪ್ರಥಮ ಬಹುಮಾನವಾಗಿ 11 ಸಾವಿರ ರೂ., ಪ್ರಶಸ್ತಿ ಪತ್ರ ಮತ್ತು ಟ್ರೋಪಿ, ದ್ವಿತೀಯ ಬಹುಮಾನ 8,500 ರೂ., ಪ್ರಶಸ್ತಿ ಪತ್ರ ಮತ್ತು ಟ್ರೋಪಿ ಹಾಗೂ ತೃತೀಯ ಬಹುಮಾನವಾಗಿ 6,500 ರೂ., ಪ್ರಶಸ್ತಿ ಪತ್ರ ಹಾಗೂ ಟ್ರೋಫಿ ನೀಡಲಾಗುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ಬೆಂಗಳೂರು: ತುಮಕೂರು ವಿಶ್ವವಿದ್ಯಾಲಯದಲ್ಲಿ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಾ ಅಭಿಯಾನ ಯೋಜನೆಯಡಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು 20 ಕೋಟಿ ರೂ. ಅಂದಾಜು ವೆಚ್ಚದ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ನಂತರ ಕಾನೂನು ಸಚಿವ ಎಚ್.ಕೆ.ಪಾಟೀಲ್ ಈ ವಿಷಯ ತಿಳಿಸಿದ್ದು, 17.40 ಕೋಟಿ ರೂ ಕಟ್ಟಡ ಕಾಮಗಾರಿ ಹಾಗೂ 2.10 ಕೋಟಿ ರೂ ಉಪಕರಣಗಳ ಖರೀದಿ ಮತ್ತು ಲಘು ಪರಿಕರಗಳ ಖರೀದಾಗಿ 20 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಸರಗೂರು: 2028ರ ಎಚ್.ಡಿ.ಕೋಟೆ ವಿಧಾನಸಭಾ ಮೀಸಲು ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಪ್ರಬಲ ಆಕಾಂಕ್ಷಿಯಾಗಿ ಸ್ಪರ್ಧೆ ಮಾಡುತ್ತಿದ್ದಾನೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ  ಹಿನಕಲ್ ಕೆಂಪನಾಯಕ ತಿಳಿಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಕೂಡ ಪ್ರಬಲ ಆಕಾಂಕ್ಷಿಯಾಗಿದ್ದಾನೆ. ಈಗಾಗಲೇ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಎಲ್ಲಾ ಸಮುದಾಯದ ಮುಖಂಡರ ಮಾತುಕತೆ ನಡೆಸಿದ್ದಾನೆ. ಕಳೆದ ತಿಂಗಳು ತಾಲೂಕಿನ ಬಡಗಲಪುರ, ಬೆಣ್ಣೆಗೆರೆ, ಕೂಡಗಿ, ಹಳೆಹೇಗ್ಗುಡಿಲು ಗ್ರಾಮಗಳಲ್ಲಿ ಹುಲಿ ಬಾಯಿಗೆ ತುತ್ತುಯಾಗಿರುವ ಮೃತಪಟ್ಟ ಕುಟುಂಬಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿ ನನ್ನ ಕೈಲಾದ ಸಹಾಯ ಮಾಡಿ ಬಂದಿದ್ದಾನೆ ಎಂದು ತಿಳಿಸಿದರು. ಪಕ್ಷದ ವರಿಷ್ಠರ ಜೊತೆ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಬಗ್ಗೆ ಮಾತುಕತೆ ನಡೆಸಲಾಗಿದೆ. ಅವರು ಕ್ಷೇತ್ರದಲ್ಲಿ ಹೋಗಿ ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಗಳಿಗೆ ಭೇಟಿ ನೀಡಿ ಸಂಘಟನೆ ಮಾಡಿ ಎಂದು ತಿಳಿಸಿದ್ದಾರೆ. ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಮಹಿಳೆಯರು ಮತ್ತು ಮುಖಂಡರು ನಿಮಗೆ ನಮ್ಮ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಅದರಂತೆ…

Read More

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ICDS) ಯ ಸುವರ್ಣ ಮಹೋತ್ಸವವನ್ನು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಭವ್ಯವಾಗಿ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಇಲಾಖೆಯ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ,  ಅಕ್ಕಾಪಡೆ ಹಾಗೂ 5000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ ಕೆಜಿ–-ಯುಕೆಜಿ ತರಗತಿಗಳ ಆರಂಭಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ, ಸಚಿವರಾದ ಎಚ್.ಸಿ. ಮಹದೇವಪ್ಪ, ಈಶ್ವರ್ ಖಂಡ್ರೆ, ಕೆ.ಎಚ್. ಮುನಿಯಪ್ಪ, ಮಾಜಿ ಸಚಿವರಾದ ಮೋಟಮ್ಮ, ರಾಣಿ ಸತೀಶ್, ಜಯಮಾಲ ರಾಮಚಂದ್ರ, ಶಾಸಕರಾದ ರೂಪಕಲಾ ಶಶಿಧರ್, ಉದಯ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬಲ್ಕಿಷ್ ಬಾನು, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ. ರೇವಣ್ಣ,…

Read More

ಬೆಂಗಳೂರು: ಅರಮನೆ ಮೈದಾನದಲ್ಲಿ ಇಂದು ICDS (Integrated Child Development Services) ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಅಧಿಕಾರಿಗಳು ಮತ್ತು ಗಣ್ಯರು ಈ ಭವ್ಯ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ, ICDS ಯೋಜನೆ 50 ವರ್ಷಗಳಲ್ಲಿ ರಾಜ್ಯದ ಪೌಷ್ಠಿಕತೆ, ಮಕ್ಕಳ ಆರೋಗ್ಯ, ಪೂರ್ವ ಪ್ರಾಥಮಿಕ ಶಿಕ್ಷಣ ಹಾಗೂ ಮಹಿಳಾ ಸಬಲೀಕರಣಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಲಾಗುತ್ತಿದೆ. ಹೈಲೈಟ್‌ ಗಳು: ICDS ಯೋಜನೆಯ 50 ವರ್ಷಗಳ ಸಾಧನೆಗಳ ಸ್ಮರಣೆ. ಅಂಗನವಾಡಿ ಸಿಬ್ಬಂದಿಗಳಿಗೆ ಗೌರವ. ಮಕ್ಕಳ ಪೌಷ್ಠಿಕತೆ ಮತ್ತು ಮಹಿಳಾ ಅಭಿವೃದ್ಧಿ ಕುರಿತು ವಿಶೇಷ ಪ್ರಸ್ತಾವನೆಗಳು. ರಾಜ್ಯದ ವಿವಿಧ ಘಟಕಗಳಿಂದ ದೊಡ್ಡ ಮಟ್ಟದ ಭಾಗಿಯಾಗಿರುವುದು. LIVE VIDEO: ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More