Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಕೊರಟಗೆರೆ: ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯ ಕೈಗೊಂಡಿದ್ದು ಈ ಹಿನ್ನೆಲೆಯಲ್ಲಿ ಜೂ. 30 ರಿಂದ ಜು. 29ರವರೆಗೆ ಮನೆ ಮನೆಗೆ ಬೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕೆಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಅವರು, ಮತರದಾರರ ಪಟ್ಟಿಯು ಪ್ರಜಾಪ್ರಭುತ್ವದ ಮೂಲಾಧಾರವಾಗಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕನ ಹೆಸರು ಮತದಾರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಧಿಕಾರಿಗಳು ವಿಶೇಷ ಕಾಳಜಿವಹಿಸಬೇಕು. ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2026ರ ಮತದಾರರ ಪಟ್ಟಿಯಲ್ಲಿ ಹೊಸದಾಗಿ ಅರ್ಹತೆ ಪಡೆದ 18 ವರ್ಷಗಳು ಪೂರ್ಣಗೊಂಡಿರುವ ಯುವ ಮತದಾರರ ಹೆಸರು ಸೇರ್ಪಡೆ ಮರಣ ಹೊಂದಿದ ಅಥವಾ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡುವಂತೆ ಬಿ.ಎಲ್.ಓ ಅಧಿಕಾರಿಗಳಿಗೆ ಮನೆ ಮೆನೆಗೆ ತರಳಿ ಮಾಹಿತಿ ಸಂಗ್ರಹಿಸುವ ವಿಧಾನ ದಾಖಲೆಗಳ ಪರಿಶೀಲನೆ, ಮತದಾರರೊಂದಿಗೆ ಸಮನ್ವಯ ಸಾಧಿಸುವ ಕ್ರಮ, ಆನ್ ಲೈನ್ ಮಾಹಿತಿ, ನಮೂದುಮಾಡುವ ವಿಧಾನವನ್ನು ತರಬೇತಿಯೊಂದಿಗೆ…
ಬೀದರ್: ಪತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಎರಡು ದಿನಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಘಟನೆ ಭಾಲ್ಕಿ ತಾಲೂಕಿನ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಮೃತಪಟ್ಟ ಮಹಿಳೆ. ಆರೋಪಿ ಪತಿಯನ್ನು ಭಾಲ್ಕಿ ತಾಲೂಕಿನ ಬೋಳೆಗಾವ್ ಗ್ರಾಮದ ಭಗವತ್ ಜ್ಞಾನೇಶ್ವರ ಎಂದು ಗುರುತಿಸಲಾಗಿದೆ. ಸದ್ಯ ಬೀದರ್ ನಗರದ ಶಿವನಗರದಲ್ಲಿ ಪತ್ನಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ. ಎರಡು ವರ್ಷಗಳ ಹಿಂದೆ ಸಂಜನಾ ಮತ್ತು ಭಗವತ್ ವಿವಾಹವಾಗಿತ್ತು. ಆರಂಭದಲ್ಲಿ ದಾಂಪತ್ಯ ಜೀವನ ಸುಗಮವಾಗಿದ್ದರೂ, ಬಳಿಕ ಗಂಡನ ಮನೆಯವರು ವಿನಾಕಾರಣ ಜಗಳ ಮಾಡುತ್ತಿದ್ದರು. ವರ್ಷದ ಹಿಂದೆ ಸಂಜನಾಗೆ ನೀರಿನಲ್ಲಿ ಕೀಟನಾಶಕ ಬೆರೆಸಿ ನೀಡಲು ಯತ್ನಿಸಲಾಗಿತ್ತು. ಈ ಬಗ್ಗೆ ಅನುಮಾನ ವ್ಯಕ್ತವಾದ ನಂತರ ಸಂಜನ್ ಕೆಲ ತಿಂಗಳು ತವರು ಮನೆಯಲ್ಲಿ ಉಳಿದು, ಬಳಿಕ ಮತ್ತೆ ಗಂಡನ ಮನೆಗೆ ತೆರಳಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಜೂನ್ 25ರಂದು ಸಂಜೆ ಮೈಲಾರ ಮಲ್ಲಣ್ಣ…
ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ಸಂಜೆ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಔರಾದ್ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಗಿರಕಿ ಹೊಡೆದಿರುವ ಭಯಾನಕ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪಘಾತದಲ್ಲಿ ತಾಲೂಕಿನ ಶೆಂಬೆಳ್ಳಿ ಗ್ರಾಮದ ಸಂತೋಷ ಮೇತ್ರೆ (35) ಎಂಬುವವರಿಗೆ ಕೈಕಾಲು, ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ ಘಟನಾ ಸ್ಥಳಕ್ಕೆ ಸಂತಪೂರ ಪೊಲೀಸ್ ಠಾಣೆಯ ಪಿಎಸ್ ಐ ದಿನೇಶ ಎಂ.ಟಿ ಅವರು ಭೇಟಿ ನೀಡಿ ಪರಿಶೀಲಿಸಿ, ಕಾರು ಜಪ್ತಿ ಮಾಡಲಾಗಿದೆ. ಪ್ರಕರಣ ಇನ್ನೂ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್…
ಜೀವನದಲ್ಲಿ ಆರೋಗ್ಯಕ್ಕಿಂತ ಅಮೂಲ್ಯವಾದ ಸಂಪತ್ತು ಮತ್ತೊಂದಿಲ್ಲ. ಆರೋಗ್ಯವನ್ನು ಕಾಪಾಡುವ ಜವಾಬ್ದಾರಿಯನ್ನು ಹೊತ್ತಿರುವ ವೈದ್ಯರು ಸಮಾಜದ ನಿಜವಾದ ಜೀವನಾಡಿಯಾಗಿದ್ದಾರೆ. ಪ್ರತಿ ವರ್ಷ ಜುಲೈ 1ರಂದು ಆಚರಿಸುವ ರಾಷ್ಟ್ರೀಯ ವೈದ್ಯರ ದಿನವು ವೈದ್ಯರ ನಿಸ್ವಾರ್ಥ ಸೇವೆ, ತ್ಯಾಗ ಮತ್ತು ಮಾನವೀಯತೆಗೆ ಗೌರವ ಸಲ್ಲಿಸುವ ಮಹತ್ವದ ದಿನವಾಗಿದೆ. ವೈದ್ಯಕೀಯ ವೃತ್ತಿ ಕೇವಲ ಉದ್ಯೋಗವಲ್ಲ; ಅದು ಮಾನವೀಯ ಸೇವೆಯ ಪರಮೋಚ್ಚ ರೂಪವಾಗಿದೆ. ಒಬ್ಬ ವೈದ್ಯರು ತಮ್ಮ ಜ್ಞಾನ, ಅನುಭವ ಮತ್ತು ಕರ್ತವ್ಯನಿಷ್ಠೆಯ ಮೂಲಕ ಸಾವಿರಾರು ಜೀವಗಳಿಗೆ ಹೊಸ ಆಶಾಕಿರಣವಾಗುತ್ತಾರೆ. ರೋಗಿಯ ನೋವನ್ನು ತಮ್ಮ ನೋವಿನಂತೆ ಭಾವಿಸಿ ಚಿಕಿತ್ಸೆ ನೀಡುವ ವೈದ್ಯರ ಸೇವೆ ಸಮಾಜದ ಅಮೂಲ್ಯ ಆಸ್ತಿಯಾಗಿದೆ. ಜಾಗತಿಕ ಸಾಂಕ್ರಾಮಿಕಗಳಂತಹ ಸಂಕಷ್ಟದ ಸಂದರ್ಭಗಳಲ್ಲಿ ವೈದ್ಯರ ಪಾತ್ರ ಮತ್ತಷ್ಟು ಮಹತ್ವ ಪಡೆದುಕೊಂಡಿತು. ತಮ್ಮ ಜೀವವನ್ನೇ ಪಣಕ್ಕಿಟ್ಟು ಜನರ ಆರೋಗ್ಯಕ್ಕಾಗಿ ಹಗಲಿರುಳು ದುಡಿದ ವೈದ್ಯರು ನಿಜವಾದ ಸಮಾಜದ ರಕ್ಷಕರಾಗಿ ಹೊರಹೊಮ್ಮಿದರು. ಅವರ ತ್ಯಾಗ, ಧೈರ್ಯ ಮತ್ತು ಸೇವಾ ಮನೋಭಾವ ಎಂದೆಂದಿಗೂ ಸ್ಮರಣೀಯ. ಆದಾಗ್ಯೂ, ವೈದ್ಯಕೀಯ ಕ್ಷೇತ್ರವು ಇಂದು ಅನೇಕ ಸವಾಲುಗಳನ್ನು ಎದುರಿಸುತ್ತಿದೆ.…
ತುಮಕೂರು: ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ–2026 ಪ್ರಕ್ರಿಯೆಯನ್ನು ತುಮಕೂರು ಜಿಲ್ಲೆಯಲ್ಲಿ ಅಧಿಕೃತವಾಗಿ ಆರಂಭಿಸಲಾಗಿದ್ದು, ಮತಗಟ್ಟೆ ಅಧಿಕಾರಿಗಳು ಮಂಗಳವಾರ ಜಿಲ್ಲೆಯಾದ್ಯಂತ ಮನೆ-ಮನೆಗಳಿಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸುವ ಪ್ರಕ್ರಿಯೆ ನಡೆಯಿತು. ತುಮಕೂರು ನಗರದ ನಜರಾಬಾದ್ ಪ್ರದೇಶದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಖುದ್ದು ಮನೆ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತದಾರರಿಗೆ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆಯ ಮಹತ್ವ ಮತ್ತು ಮತದಾರರು ಮಾಡಬೇಕಿರುವ ಜವಾಬ್ದಾರಿಯ ಬಗ್ಗೆ ವಿವರಣೆ ನೀಡಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ತುಮಕೂರು ಜಿಲ್ಲೆಯಾದ್ಯಂತ ಜೂನ್ 30 ರಿಂದ ಜುಲೈ 29ರವರೆಗೆ ಮತಗಟ್ಟೆ ಅಧಿಕಾರಿಗಳು ಮನೆ-ಮನೆಗೆ ಭೇಟಿ ನೀಡಿ ಮತದಾರರ ಗಣತಿ ನಮೂನೆಯನ್ನು ವಿತರಿಸಲಿದ್ದಾರೆ ಎಂದರು. ಗಣತಿ ನಮೂನೆಯಲ್ಲಿ 2 ಭಾಗಗಳಿದ್ದು, ಮತದಾರರು ಭಾಗ 1ರಲ್ಲಿ ಈಗಾಗಲೇ 2002ರ ಮತದಾರರ ಪಟ್ಟಿಯಲ್ಲಿ ಇರುವಂತೆ ಮುದ್ರಿಸಲಾಗಿರುತ್ತದೆ. ಭಾಗ 2ರಲ್ಲಿ ಮತದಾರರ ಪಟ್ಟಿಯಲ್ಲಿ ಇರುವಂತೆ ವಿವರಗಳನ್ನು ತುಂಬಬೇಕಿದ್ದು, ಸರಿಯಾದ ಮಾಹಿತಿಯನ್ನು ನಮೂದಿಸಿ…
ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ (ಜೂನ್ 30) ಚುನಾವಣಾ ಆಯೋಗದ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಅಂಗವಾಗಿ ಮನೆ-ಮನೆ ಸಮೀಕ್ಷೆ (Enumeration) ಪ್ರಕ್ರಿಯೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪತ್ನಿ ಸಮೇತರಾಗಿ ಬಿಎಲ್ ಓಗಳ (BLO) ಪ್ರಕ್ರಿಯೆಯಲ್ಲಿ ಭಾಗಿಯಾಗುವ ಮೂಲಕ ಇದಕ್ಕೆ ಚಾಲನೆ ನೀಡಿದರು. ರಾಮನಗರ ಜಿಲ್ಲಾಧಿಕಾರಿ, ಕನಕಪುರ ತಹಸೀಲ್ದಾರ್ ಹಾಗೂ ಬಿಎಲ್ಓ ಅಧಿಕಾರಿಗಳು ಸಿಎಂ ನಿವಾಸಕ್ಕೆ ಭೇಟಿ ನೀಡಿ ಎಸ್ಐಆರ್ ಪ್ರಕ್ರಿಯೆ ನಡೆಸಿದರು. ಈ ವೇಳೆ ಡಿಸಿಯಿಂದ ಸಂಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ತಮ್ಮ ಮೊಬೈಲ್ನಲ್ಲೇ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಪರಿಶೀಲನೆ ನಡೆಸಿದರು. “ನನ್ನದು ಹಾಗೂ ನನ್ನ ಹೆಂಡತಿಯ ಹೆಸರು ಲಿಸ್ಟ್ನಲ್ಲಿದೆ. ಹೇಗೆ ಲಾಗಿನ್ ಮಾಡಬೇಕು ಹೇಳಿಕೊಡಿ,” ಎಂದು ಅಧಿಕಾರಿಗಳಿಂದ ಮಾಹಿತಿ ಪಡೆದರು. ಆ್ಯಪ್ ಬಳಸಿದ ಬಳಿಕ ಪ್ರತಿಕ್ರಿಯಿಸಿದ ಅವರು, “ಸಾಮಾನ್ಯ ಜನರಿಗೆ ಫೋನ್ನಲ್ಲಿ ಆ್ಯಪ್ ಬಳಸುವುದು ಸ್ವಲ್ಪ ಕಷ್ಟವಾಗಬಹುದು, ಕೊಂಚ ಗೊಂದಲ ಉಂಟಾಗುತ್ತದೆ,” ಎಂದು ಅಭಿಪ್ರಾಯಪಟ್ಟರು. ಬದಲಾವಣೆಗಳಿಗೆ…
ಬೆಂಗಳೂರು: ಶಾಲೆಯಲ್ಲಿ ನಡೆದ ಜಗಳದ ಹಿನ್ನೆಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಯನ್ನು ಅಮಾನತುಗೊಳಿಸಿ, ಆತನಿಗೆ ಮರುಪ್ರವೇಶ ನೀಡಲು ನಿರಾಕರಿಸಿದ ಕಾರಣಕ್ಕೆ ನೊಂದ ತಾಯಿಯೊಬ್ಬರು ಶಾಲೆಯ ಶೌಚಾಲಯದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಬೆಂಗಳೂರಿನ ಭಾರತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಯ ನಡುವೆ ಜಗಳ ನಡೆದಿತ್ತು. ಬಳಿಕ ಇಬ್ಬರೂ ಶಾಲೆಯ ಹೊರಗೆ ಪರಸ್ಪರ ಹಲ್ಲೆ ನಡೆಸಿಕೊಂಡಿದ್ದು, ಇಬ್ಬರಿಗೂ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಘಟನೆಯ ನಂತರ ಉಭಯ ಕುಟುಂಬಗಳು ಮಾತುಕತೆ ನಡೆಸಿ ಪರಸ್ಪರ ರಾಜಿ ಮಾಡಿಕೊಂಡಿದ್ದವು. ಗಾಯಗೊಂಡಿದ್ದ ಇನ್ನೊಬ್ಬ ವಿದ್ಯಾರ್ಥಿಯ ವೈದ್ಯಕೀಯ ವೆಚ್ಚವನ್ನೂ 10ನೇ ತರಗತಿ ವಿದ್ಯಾರ್ಥಿಯ ತಾಯಿ ಸುಮಿತ್ರಾ ಅವರೇ ಭರಿಸಿದ್ದರು ಎನ್ನಲಾಗಿದೆ. ಆಸ್ಪತ್ರೆಯಿಂದ ಘಟನೆಯ ಮಾಹಿತಿ ಪಡೆದ ಶಾಲಾ ಆಡಳಿತ ಮಂಡಳಿಯು ಕೇವಲ 10ನೇ ತರಗತಿಯ ವಿದ್ಯಾರ್ಥಿಯ ವಿರುದ್ಧ ಮಾತ್ರ ಕ್ರಮ ಕೈಗೊಂಡು ಆತನನ್ನು ಅಮಾನತುಗೊಳಿಸಿತ್ತು ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ನಡೆದು…
ಚಿಕ್ಕಬಳ್ಳಾಪುರ: ಕೆಂಪೇಗೌಡ ಜಯಂತಿ ಆಚರಣೆಯ ವೇಳೆ ನಡೆದ ಚಪ್ಪಲಿ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ತಮಗಾದ ಅವಮಾನವನ್ನು ನೆನೆದು ಕಣ್ಣೀರು ಹಾಕಿದ್ದಾರೆ. ಇತ್ತೀಚೆಗೆ ನಡೆದ ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇಳೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಶಾಸಕ ಪ್ರದೀಪ್ ಈಶ್ವರ್ ಅವರ ಮೇಲೆ ಚಪ್ಪಲಿ ಎಸೆದು, ಅವರ ಕುಟುಂಬದವರನ್ನು ಕೀಳಾಗಿ ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಶಾಸಕರು, ಅಂದು ನಡೆದ ಸಂಪೂರ್ಣ ಘಟನೆಯನ್ನು ವಿವರಿಸಿ ತೀವ್ರ ಭಾವುಕರಾದರು. ಪ್ರದೀಪ್ ಈಶ್ವರ್ ಅವರ ನೋವನ್ನು ಆಲಿಸಿದ ಸಿದ್ದರಾಮಯ್ಯ ಅವರು, “ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ. ಇದಕ್ಕೆ ಧೃತಿಗೆಡದೆ, ಇಲ್ಲೇ ಇದ್ದು ಇಂತಹ ಸವಾಲುಗಳನ್ನು ಎದುರಿಸಬೇಕು. ಇಡೀ ಪಕ್ಷ ಮತ್ತು ನಾವು ನಿಮ್ಮೊಂದಿಗಿದ್ದೇವೆ” ಎಂದು ಧೈರ್ಯ ತುಂಬಿದ್ದಾರೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿದ್ದರಾಮಯ್ಯ ಅವರು, ಗೃಹ ಸಚಿವರಾದ ಪ್ರಿಯಾಂಕ್ ಖರ್ಗೆ…
ತುಮಕೂರು: ನಗರದ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಆವರಣದಲ್ಲಿ ಅಮಾಯಕ ದಲಿತ ಕಾರ್ಮಿಕರಿಂದ ಮಲಗುಂಡಿ ಸ್ವಚ್ಛ ಮಾಡಿಸಿದ ಹೇಯ ಕೃತ್ಯ ನಡೆದಿದೆ. ದಲಿತ ಸಮುದಾಯದಿಂದ ಮುಖ್ಯಮಂತ್ರಿ ಆಗಲು ಹೊರಟಿರುವ ಉಪ ಮುಖ್ಯಮಂತ್ರಿ ಪರಮೇಶ್ವರ್ ಅವರು ಇದುವರೆಗೆ ಈ ಘಟನೆ ಬಗ್ಗೆ ಒಂದು ಹೇಳಿಕೆ ನೀಡಿಲ್ಲ, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಂಡಿಲ್ಲ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಜಿಪಂ ಮಾಜಿ ಅಧ್ಯಕ್ಷ ವೈ.ಹೆಚ್.ಹುಚ್ಚಯ್ಯ ಟೀಕಿಸಿದರು. ಮಲ ಬಾಚಿಸಿರುವ ಕೆಇಬಿ ಅಸೋಸಿಯೇಷನ್ ಪದಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸೋಮವಾರ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳಿಗೆ ಮನವಿಪತ್ರ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ವೈ.ಹೆಚ್. ಹುಚ್ಚಯ್ಯ ಅವರು ದಲಿತರ ಕೈಯಲ್ಲಿ ಮಲ ಎತ್ತಿಸಿದ ಕೃತ್ಯ ಖಂಡನೀಯ. ದಲಿತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ, ಇದೇ ಸಮುದಾಯದಿಂದ ಮುಖ್ಯಮಂತ್ರಿ ಆಗಲು ಹೊರಟಿರುವ, ದಲಿತರ ರಕ್ಷಣೆ ಮಾಡುವಲ್ಲಿ ವಿಫಲರಾದ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಹಿಂದೆ…
ಗುಬ್ಬಿ: ರೈತರ ಸಮಸ್ಯೆಯನ್ನು ಆಲಿಸಲು ಕಂದಾಯ ಅಧಿಕಾರಿಗಳು ಪ್ರತಿನಿತ್ಯ ಪೋತಿ ಖಾತೆ ಅಭಿಯಾನವನ್ನು ನಡೆಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಕಡಬ ಹೋಬಳಿ ಕೊಪ್ಪ ಗ್ರಾಮ ಪಂಚಾಯತ್ನಲ್ಲಿ ನಡೆಯುತ್ತಿದ್ದ ಪೋತಿ ಖಾತೆ ಆಂದೋಲನಕ್ಕೆ ಆಗಮಿಸಿ ಮಾತನಾಡಿದ ಅವರು ಕಂದಾಯ ಸಚಿವರು, ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಸೂಚನೆಯ ಮೇರೆಗೆ ಸಾರ್ವಜನಿಕ ಸಮಸ್ಯೆಗಳಿದ್ದಲ್ಲಿ ನೇರವಾಗಿ ತೆರಳಿ ಸಮಸ್ಯೆಗಳನ್ನು ಆಲಿಸುವಂತೆ ಸೂಚಿಸಿದ ಹಿನ್ನೆಲೆ ಗುಬ್ಬಿ ತಾಲೂಕಿನಲಿ ಪ್ರವಾಸ ಮಾಡುತ್ತಿದ್ದು, ಕಂದಾಯ ಇಲಾಖೆ ವತಿಯಿಂದ ಪೋತಿ ಖಾತೆ ಆಂದೋಲನ ಅಭಿಯಾನ ಮಾಡಲಾಗುತ್ತಿದೆ. ಜಿಲ್ಲೆಯ 34 ಹೋಬಳಿಗಳಲ್ಲಿ 6 ಸಾವಿರ ಬಾಕಿ ಇದ್ದು ಜಿಲ್ಲೆಯಲ್ಲಿ ಯಾರು ಅಲೆದಾಟ ಮಾಡದಂತೆ ಮಾಡುವ ನಿಟ್ಟಿನಲ್ಲಿ ರೈತರ ಮನೆಗೆ ಹೋಗಿ ಮನವೊಲಿಸುವ ಕೆಲಸ ಮಾಡಬೇಕಿದೆ. ಪೋತಿ ಖಾತೆಗೆ ವಂಶವೃಕ್ಷ, ಮರಣ ಪ್ರಮಾಣ ಪತ್ರ, ಆಧಾರ್ ನೀಡುವಂತೆ ಮಾಹಿತಿ ನೀಡಿ ವಂಶವೃಕ್ಷವನ್ನು ನಾಡ ಕಚೇರಿಯಲ್ಲಿ ನೀಡಲಿದ್ದು, ಇದರಿಂದ ವಂಚಿತರಾದರೆ ಸಿವಿಲ್ ಗೆ ಹೋಗಬೇಕಾಗುತ್ತದೆ ಎಂದು ಅರಿವು ಮೂಡಿಸುವ ಕೆಲಸ ಆಗಬೇಕಿದೆ.…