Author: admin

ಕೊರಟಗೆರೆ : ಹೆಜ್ಜೇನಿನ ಏಕಾಏಕಿ ದಾಳಿಯಿಂದ ಕಾಲೇಜು ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ. ಕೊರಟಗೆರೆ ಪಟ್ಟಣದ ಕನಕದಾಸ ವೃತ್ತದಲ್ಲಿ ಬುಧವಾರ ಹೆಜ್ಜೇನು ದಾಳಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 5 ಮಂದಿ ವಿದ್ಯಾರ್ಥಿಗಳು, 2 ಉಪನ್ಯಾಸಕರು ಹಾಗೂ ಚಲಿಸುತ್ತಿದ್ದ ವಾಹನ ಸವಾರರ ಮೇಲೂ ದಾಳಿ ಮಾಡಿದ್ದು, ಒಟ್ಟು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ತಪಾಸಣೆ ನಡೆಸಿ, ಚಿಕಿತ್ಸೆ ನೀಡಿ, ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಗಾಯಾಳುಗಳಿಗೆ ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಪುರುಷೋತ್ತಮ್ ಧೈರ್ಯ ತುಂಬಿದ್ದಾರೆ. ಹೆಜ್ಜೇನು ದಾಳಿಯಿಂದ ಗಾಯಗೊಂಡು ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಪನ್ಯಾಸಕರನ್ನು ಮತ್ತು ವಿದ್ಯಾರ್ಥಿಗಳನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಈರಪ್ಪನಾಯ್ಕ ಭೇಟಿ ಮಾಡಿ, ಆರೋಗ್ಯದ ವಿಚಾರಣೆ ನಡೆಸಿ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ತೋರದೆ ವೈದ್ಯರ ಮಾರ್ಗದರ್ಶನದಲ್ಲಿ ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದ್ದಾರೆ. ಟೀ ಅಂಗಡಿ, ಹೋಟೆಲ್ ಹಾಗೂ…

Read More

ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಜಲಾಶಯದ ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಮೂಲದ ಬಶೀರ್ (43), ಪರ್ಹಿನ್ (45) ಹಾಗೂ ಇಮ್ರಾನ್ (45) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಜಲಾಶಯ ನೋಡಲೆಂದು ಆಗಮಿಸಿದ್ದರು ಎಂದು ತಿಳಿದು ಬಂದಿದೆ. ರಂಜಾನ್ ಹಬ್ಬದ ನಂತರ ಕುಟುಂಬ ಸಮೇತರಾಗಿ ತಾಲೂಕಿನ ವಿವಿಧ ಕಡೆ ಪ್ರವಾಸಕ್ಕೆಂದು ಆಗಮಿಸಿದ್ದರು. ತಾಲೂಕಿನ ಶ್ರೀನಿವಾಸ ಸಾಗರ ಜಲಾಶಯ ನೋಡಲೆಂದು ಆಗಮಿಸಿದ್ದ ವೇಳೆ ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಮೈಸೂರು: ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾದ ಪರಿಣಾಮ ಚಲಿಸುತ್ತಿದ್ದ ಬಸ್ ಮಹಿಳೆಗೆ ಡಿಕ್ಕಿ ಹೊಡೆದಿದ್ದು, ಬಸ್ ಚಾಲಕ ಹಾಗೂ ಮಹಿಳೆ ಇಬ್ಬರೂ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ನಡೆದಿದೆ. ಮೈಸೂರು ಮೂಲದ ಚಾಲಕ ಸುನೀಲ್ ಕುಮಾರ್ ಮೃತಪಟ್ಟವರಾಗಿದ್ದಾರೆ. ಇವರು ಹೊರಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತಪಟ್ಟ ಮಹಿಳೆಯನ್ನು ಲಕ್ಷ್ಮಮ್ಮ ಎಂದು ಗುರುತಿಸಲಾಗಿದೆ. ಇವರು ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಗ್ರಾಮದ ನಿವಾಸಿಯಾಗಿದ್ದಾರೆ. ಕೆಎಸ್ ಆರ್ ಟಿಸಿ ಬಸ್ ಕೇರಳ ರಾಜ್ಯದ ಮಾನಂದವಾಡಿಯಿಂದ ಹೆಚ್.ಡಿ.ಕೋಟೆಗೆ ಬರುತ್ತಿತ್ತು. ಹೆಚ್.ಡಿ.ಕೋಟೆ ತಾಲೂಕಿನ ದಮ್ಮನಕಟ್ಟೆ ಬಳಿ ಬರುತ್ತಿದ್ದಂತೆ ಚಾಲಕನಿಗೆ ಹೃದಯಾಘಾತವಾಗಿದ್ದು ಬಸ್ ಸ್ಟೇರಿಂಗ್ ಮೇಲೆ ಚಾಲಕ ಪ್ರಜ್ಞೆ ತಪ್ಪಿ ಮಲಗಿದ್ದು ಈ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿಗೆ ಬಸ್ ನುಗ್ಗಿದೆ. ಈ ಸಮಯದಲ್ಲಿ ಪಾದಾಚಾರಿ ಮಹಿಳೆ ಲಕ್ಷ್ಮಮ್ಮಗೆ ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ್ದಾರೆ. ಆದೃಷ್ಟವಶಾತ್ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು: ರುಡ್ಸೆಟ್ ಸಂಸ್ಥೆಯ ವತಿಯಿಂದ ಮೇ 5 ರಿಂದ ಉಚಿತ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ತರಬೇತಿ ನೀಡಲು ಜಿಲ್ಲೆಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಅಭ್ಯರ್ಥಿಗಳು ಆಧಾರ್ ಕಾರ್ಡ್ ನ್ನು ಹೊಂದಿರಬೇಕು ಹಾಗೂ ಬಿಪಿಎಲ್ ಕಾರ್ಡ್ ಅನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನವಾಗಿದೆ. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380220884, 9380162042, 9740982585ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್…

Read More

ತುಮಕೂರು: ಎಸ್ ಬಿಐ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ/ಯುವತಿಯರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 10 ದಿನಗಳ ಅಣಬೆ ಬೇಸಾಯ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ 12ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು–572104 ಅಥವಾ ದೂ.ವಾ.ಸಂ.0816-2243386, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: IISc, IIT & NIT ಸಂಸ್ಥೆಗಳ ಮೂಲಕ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಅಂಡ್ ಮೆಷಿನ್ ಲರ್ನಿಂಗ್ ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಗೆ ಶಿಷ್ಯವೇತನ/ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು ಕರ್ನಾಟಕ ರಾಜ್ಯದ ಮೂಲ ನಿವಾಸಿಯಾಗಿದ್ದು, ರಾಜ್ಯ/ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿ BE/B.tech ಕೋರ್ಸುಗಳಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ ಕನಿಷ್ಠ ಶೇ.55ರಷ್ಟು ಅಂಕ ಗಳಿಸಿರಬೇಕು. ಈ ಯೋಜನೆಯಡಿ ಶಿಷ್ಯ ವೇತನ ಪಡೆಯಲು ಪದವಿ ಪೂರೈಸಿದ 5 ವರ್ಷದೊಳಗೆ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗಧಿತ ನಮೂನೆಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯ 5ಲಕ್ಷ ರೂ.ಗಳು ಮೀರಿರಬಾರದು. ಆಸಕ್ತರು ಏಪ್ರಿಲ್ 11ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ ಪಂಚಾಯತ್ ಕಚೇರಿ ಹತ್ತಿರ, ತುಮಕೂರು ತಾಲ್ಲೂಕು ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ತಿಪಟೂರು: ತಾಲೂಕು ಕೆರಗೋಡಿ, ರಂಗಾಪುರ ಸುಕ್ಷೇತ್ರ ಅಧ್ಯಕ್ಷರಾದ ಶ್ರೀ ಗುರುಪರದೇಶಿ ಕೇಂದ್ರ ಸ್ವಾಮೀಜಿಯವರ 73ನೇ ಜನ್ಮ ವರ್ಧಂತಿ ಮಹೋತ್ಸವ ಏಪ್ರಿಲ್ 5ರಂದು ಶನಿವಾರ ಶ್ರೀಮಠದ ಆಭರಣದಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಸುಕ್ಷೇತ್ರದ ಹಿರಿಯ ವಿದ್ಯಾರ್ಥಿ ಹಾಗೂ ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಯು.ಕೆ.ಶಿವಪ್ಪ ತಿಳಿಸಿದರು. ಅಂದು ಸುಕ್ಷೇತ್ರ ಆರಾಧ್ಯ ದೈವ ಗಳಾದ ಶ್ರೀ ಶಂಕರೇಶ್ವರ ಸ್ವಾಮಿ, ಶ್ರೀರಂಗನಾಥ ಸ್ವಾಮಿ ಎಲ್ಲ ಹಿರಿಯರ ಆರುಗುರುವರೇಣ್ಯರ ಗದ್ದೆಗೆ ದೇವಾಲಯಗಳಿಗೆ ಅಲಂಕಾರ, ರುದ್ರಾಭಿಷೇಕ ಶ್ರೀಗಳ ಪಾದಪೂಜೆ, ಭಕ್ತರಿಂದ ಭಕ್ತಿ ಸಮರ್ಪಣೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಮಾಡಾಳು ಶ್ರೀ ರುದ್ರಮುನಿ ಸ್ವಾಮಿ ಗೋಡೆಕೆರೆ ಮೃತ್ಯುಂಜಯ ದೇಶಿಯ ಕೇಂದ್ರ ಸ್ವಾಮೀಜಿ ಸೇರಿದಂತೆ ಹರ ಗುರು ಚರಮೂರ್ತಿಗಳು ಆಗಮಿಸಲಿದ್ದಾರೆ ಎಂದು ತಿಳಿಸಿದರು. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ರೋಟರಿ ಕ್ಲಬ್ ಸಹಯೋಗದೊಂದಿಗೆ ಬೃಹತ್ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು. ಅಂದು 5,000 ಜನ ಭಕ್ತಾದಿಗಳು ಬರುವ ನಿರೀಕ್ಷೆಯಿದ್ದು, ಎಲ್ಲರಿಗೂ ಪ್ರಸಾದ ವ್ಯವಸ್ಥೆಯನ್ನು…

Read More

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬುಧವಾರ ಭೇಟಿ ನೀಡಿ, ಅಲ್ಲಿನ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಿದರು. ಕಳ್ಳಂಬೆಳ್ಳ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಮೂಲ ಸೌಕರ್ಯಗಳ ಸ್ಥಿತಿಗತಿಯನ್ನು ಪರಿಶೀಲಿಸಿದರು. ಅಲ್ಲದೆ, ಮಕ್ಕಳಿಗೆ ನೀಡಲಾಗುತ್ತಿರುವ ವ್ಯಾಕ್ಸಿನೇಷನ್ ಮತ್ತು ಕುಡಿಯುವ ನೀರಿನ ವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದ ಅವರು, ಅಂಗನವಾಡಿ ಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕುರಿತು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಳ್ಳಂಬೆಳ್ಳ ಕೆನರಾ ಬ್ಯಾಂಕ್ ನ ಕೆಸಿಸಿ ಸಾಲ ಪದ್ಧತಿ ಯೋಜನೆಯ ಕುರಿತು ರೈತರಿಗೆ ಸಾಲ ನೀಡಿರುವುದರ ಬಗ್ಗೆ ಪರಿಶೀಲನೆ ನಡೆಸಿದರು. ಪ್ರಾಥಮಿಕ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ರೈತರಿಗೆ ಕೃಷಿ ಇಲಾಖೆಯಿಂದ ವಿತರಿಸುವ ಪರಿಕರ ಹಾಗೂ ರೈತರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡುವುದಕ್ಕೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಕಳ್ಳಂಬೆಳ್ಳ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪಿಡಿಒ ಕಚೇರಿಯಲ್ಲಿ ಪಿಎಂ ವಿಶ್ವಕರ್ಮ…

Read More

ತುಮಕೂರು: ಎಂಎಲ್ ಸಿ ರಾಜೇಂದ್ರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ. ಎ 1 ಆರೋಪಿ ರೌಡಿಶೀಟರ್ ಸೋಮ @ ಜೈಪುರ ಸೋಮ ಜೊತೆಗೆ ಎ–3 ಅರೋಪಿ ಅಮಿತ್ ಕೂಡ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದಾನೆ. ಕ್ಯಾತಸಂದ್ರ ಸರ್ಕಲ್ ಇನ್ ಸ್ಪೆಕ್ಟರ್ ಕಚೇರಿಗೆ ಕರೆತಂದು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಒಂದು ರಾಜ್ಯದಲ್ಲಿ ಅರಿಸೇನನೆಂಬ ರಾಜನಿದ್ದನು. ಅವನಿಗೆ ತಾನು ಹಿಂದಿನ ಜನ್ಮದಲ್ಲಿ ಏನು ಆಗಿದ್ದೆ ಎಂದು ತಿಳಿಯುವ ಕುತೂಹಲ ಉಂಟಾಯಿತು. ಅದಕ್ಕಾಗಿ ತುಂಬಾ ದೊಡ್ಡ ಹೆಸರು ಮಾಡಿದ್ದ ದೊಡ್ಡ ದೊಡ್ಡ ಭವಿಷ್ಯಕಾರರನ್ನು ಅರಮನೆಗೆ ಕರೆಯಿಸಿ ತಾವೆಲ್ಲರೂ ಒಮ್ಮತದ ಅಭಿಪ್ರಾಯದಿಂದ ನಾನು ಹಿಂದಿನ ಜನುಮದಲ್ಲಿ ಏನಾಗಿದ್ದೆ ಸಾಕ್ಷಿ. ಸಮೇತ ತಿಳಿಸಿದರೆ 10 ಸಹಸ್ರ ಸ್ವರ್ಣ ಮುದ್ರಿಕೆ ನೀಡಲಾಗುವುದು ಎಂದು ತಿಳಿಸಿದ. ರಾಜನ ಜನ್ಮ ಕುಂಡಲಿ ತೆಗೆದು ನೋಡಿದರು, ಅವರವರಲ್ಲೇ ಚರ್ಚೆ ಉಂಟಾಯಿತು, ಲೆಕ್ಕಾಚಾರ ಮಾಡಿ, ಎಲ್ಲರೂ ಅವರವರದ್ದೇ ವಾದಮಂಡಿಸಿ ತಮ್ಮ ತಮ್ಮ ವಿದ್ವತ್ತನ್ನು ಕಾಪಾಡಿಕೊಳ್ಳುವಲ್ಲಿ ಮುಂದಾದರು, ಯಾರು ಯಾರೊಬ್ಬರ ವಾದ ಒಪ್ಪಿಕೊಳ್ಳಲು ಸಿದ್ಧವಿರಲಿಲ್ಲ, ಅವರಿಗೆ ಅವರ ಮರ್ಯಾದೆ ಸ್ವಾಭಿಮಾನವೇ ಮುಖ್ಯವಾಗಿತ್ತು. ಹಾಗೆಯೇ ಯಾರೂ ಒಮ್ಮತದ ಅಭಿಪ್ರಾಯಕ್ಕೆ ಬರಲಿಲ್ಲ. ಕೊನೆಗೆ ಮೊದಲನೇ ಭವಿಷ್ಯಕ ಎದ್ದು ನಿಂತು ಮಹಾರಾಜರೇ ತಾವು ಹಿಂದಿನ ಜನುಮದಲ್ಲಿ ಕಾಡನಾಳುವ ಸಿಂಹವಾಗಿದ್ದಿರಿ, ಆದ್ದರಿಂದಲೇ ಈ ಜನುಮದಲ್ಲಿ ರಾಜರಾಗಿದ್ದೀರಿ ಎಂದರೆ, ಮತ್ತೊಬ್ಬ ಭವಿಷ್ಯಕ ಇಲ್ಲ ರಾಜರೇ ನೀವು ಅತ್ಯಂತ ನಿರ್ಗತಿಕರಾಗಿದ್ದೀರಿ ಮತ್ತು ದೈವ ಭಕ್ತರಾಗಿದ್ದಿರಿ…

Read More