Subscribe to Updates
Get the latest creative news from FooBar about art, design and business.
- ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
- ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
- ಗ್ಯಾರಂಟಿ: ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
- ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
- ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
- ನಕಲಿ ಔಷಧ ದಂಧೆಯ ಕಿಂಗ್ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
- ಬೀದರ್: ಚಾಂದೋರಿ ಪಂಚಾಯತ್ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
- ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
Author: admin
ತುಮಕೂರು: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ ನ್ಯಾಯಾಧೀಶ ಮಲ್ಲಿಕಾರ್ಜುನ್ ಗೌಡ ಅವರನ್ನು ಬಂಧಿಸಲು ಆಗ್ರಹಿಸಿ, ದಲಿತ ಸಂಘಟನೆಗಳ ಒಕ್ಕೂಟದಿಂದ ‘ರಾಯಚೂರು ಚಲೋ’ ನಡೆಯಿತು. ತುಮಕೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿ ಬಳಿಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಲಿತ ಸಂಘಟನೆಯ ಒಕ್ಕೂಟದ ಮುಖಂಡರುಗಳು, ನಾವು ರಾಯಚೂರು ತಲುಪುವುದರೊಳಗೆ ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ಅಮಾನತು ಮಾಡಿ, ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪ್ತಿ ಉಗ್ರ ಪ್ರತಿಭಟನೆ ಮಾಡುತ್ತೇವೆ ಎಂದು ಹೇಳಿದರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ವೇದಿಕೆಯಿಂದ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದಲ್ಲದೆ, ಅದನ್ನು ಮಾಡಿಯೇ ತೋರಿಸಿದ ಜಿಲ್ಲಾ ಪ್ರಧಾನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಪಾಟೀಲರು ದುರಹಂಕಾರಕ್ಕೆ ಪಾಠ ಕಲಿಸಬೇಕು ಮತ್ತು ಅಪರಾಧ ಕಾನೂನಿನ ಕಠಿಣ ಶಿಕ್ಷೆ ಆಗಬೇಕೆಂದು ರಾಜ್ಯ ವ್ಯಾಪ್ತಿ ಆಕ್ರೋಶ ಭುಗಿಲೆದ್ದಿದೆ. ಈತನ ಮೇಲೆ ಪೊಲೀಸ್ ಕೇಸು ದಾಖಲಿಸಿ ಜೈಲಿಗೆ ಹಾಕಲು…
ತುಮಕೂರು: ಕೇಂದ್ರ ಸರ್ಕಾರದ 290 ಕೋಟಿ ಹಾಗೂ ರಾಜ್ಯ ಸರ್ಕಾರದ 297 ಕೋಟಿ ರೂ. ಅನುದಾನದಲ್ಲಿ ನಗರದಲ್ಲಿ ಅನುಷ್ಠಾನಗೊಂಡಿರುವ ಸ್ಮಾರ್ಟ್ ಸಿಟಿ ಅಭಿವೃದ್ಧಿ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಇದನ್ನು ಖಂಡಿಸಿ ಕಾಂಗ್ರೆಸ್ ಪಕ್ಷದಿಂದ ಮುಂದಿನ ದಿನ ಗಳಲ್ಲಿ ಹೋರಾಟ ಹಮ್ಮಿಕೊಳ್ಳುವುದಾಗಿ ಮಾಜಿ ಶಾಸಕ ಡಾ.ಎಸ್. ರಫೀಕ್ ಅಹಮದ್ ಎಚ್ಚರಿಕೆ ನೀಡಿದರು. ನಗರದಲ್ಲಿ ಇಂದು ಬೆಳಿಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ಇಲಾಖೆಯವರಿಗೆ ಪತ್ರ ಬರೆದು ಮಾಹಿತಿ ಕೇಳಿದರೆ ಪೂರ್ಣ ಮಾಹಿತಿಯನ್ನು ಕೊಟ್ಟಿಲ್ಲ. ಬಂದಿರುವ ಅನುದಾನ ಖರ್ಚಾಗಿರುವುದೆಷ್ಟು, ಕಾಮ ಗಾರಿಗಳ ಪ್ರಗತಿಗೆ ಸಂಬಂಧಿ ಸಿದಂತೆ ಅಪೂರ್ಣ ಮಾಹಿತಿ ನೀಡಿದ್ದು, ಇದರ ವಿರುದ್ಧ ಸ್ಮಾರ್ಟ್ ಸಿಟಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು. ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ, ಗ್ರಂಥಾಲಯ, ಕ್ರೀಡಾಂಗಣ, ಟ್ರಾಮಸೆಂಟರ್ ಇತ್ಯಾದಿ ಕಾಮಗಾರಿಗಳ ಜೊತೆಗೆ ಅಲ್ಲಲ್ಲಿ ಗಿಡಗಳನ್ನು ನೆಟ್ಟು ಬೆಳೆಸುತ್ತಿದ್ದು, ಈ ಎಲ್ಲ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು…
ಬಳ್ಳಾರಿ: ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕೀಯ ಬೇಡ ಎನ್ನುತ್ತಲೇ ತಾವು ಸ್ಪರ್ಧೆ ಮಾಡೋ ಕ್ಷೇತ್ರಗಳ ಪಟ್ಟಿಯನ್ನು ತೆರೆದಿಡುವ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ. ಬಳ್ಳಾರಿಯಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ನನಗೆ ಬಳ್ಳಾರಿ, ಗಂಗಾವತಿ, ಕೊಪ್ಪಳ, ಯಲಬುರ್ಗಾ, ಬೆಂಗಳೂರಿನ ಕೆ.ಆರ್.ಪುರಂ, ಬಿಟಿಎಂ ಲೇಔಟ್, ಕೋಲಾರದಲ್ಲಿ ಸ್ಪರ್ಧಿಸುವಂತೆ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ಜನಾರ್ದನ್ ರೆಡ್ಡಿ ಹೇಳಿದ್ದಾರೆ. ನನ್ನ ಸಹೋದರರು ಶಾಸಕರಾಗಿದ್ದಾರೆ, ನಾನೂ ಶಾಸಕನಿದ್ದಂತೆ. ನನ್ನ ಮಿತ್ರ ಶ್ರೀರಾಮುಲು ಬಳ್ಳಾರಿ ಉಸ್ತುವಾರಿಯಾಗಿದ್ದಾರೆ. ಅವರು ಮಂತ್ರಿ ಆದರೆ ನಾನು ಕೂಡ ಮಂತ್ರಿಯಾದಂತೆ. ನಾನು ಕೇವಲ ರಾಜಕೀಯಕ್ಕಾಗಿ ಬಳ್ಳಾರಿಗೆ ಬಂದಿಲ್ಲ. ಬಳ್ಳಾರಿಯನ್ನು ಅಭಿವೃದ್ಧಿ ಮಾಡುವುದಕ್ಕಾಗಿ ಬಂದಿದ್ದೇನೆ ಎಂದು ಹೇಳಿದರು. ಬಳ್ಳಾರಿಯಲ್ಲಿ ಇನ್ನೊಂದೆರಡು ವರ್ಷದಲ್ಲಿ ಕ್ರಿಕೆಟ್ ವರ್ಲ್ಡ್‌ಕಪ್ ನಡೆಯುವ ಮಟ್ಟಕ್ಕೆ ಬಳ್ಳಾರಿಯನ್ನು ಅಭಿವೃದ್ಧಿ ಮಾಡುವೆ. ಈ ಹಿಂದೆ ನಾನು ಹೇಳಿದ ಕೆಲಸಗಳು ವೇಗವಾಗಿ ನಡೀತಿತ್ತು. ಈಗ ಆಗುತ್ತಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಹೀಗಾಗಿ ಚಿಂತೆ ಮಾಡಬೇಡ ಎಂದು ರಾಮುಲುಗೆ ತಿಳಿಸಿದ್ದೇನೆ ಎಂದು ತಿಳಿಸಿದರು. ವರದಿ:…
ಬಿಹಾರ: ಭಿಕ್ಷುಕನೊಬ್ಬ ಚಿಲ್ಲರೆ ಇಲ್ಲದಿದ್ದರೆ ಡಿಜಿಟಲ್ ರೂಪದಲ್ಲಿ ಭಿಕ್ಷೆ ನೀಡಿ ಎಂದು ವಿಶಿಷ್ಠವಾಗಿ ಭಿಕ್ಷೆ ಬೇಡುತ್ತಿರುವ ಪ್ರಸಂಗ ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದಲ್ಲಿ ನಡೆದಿದೆ. ನಿಮ್ಮಲ್ಲಿ ಚಿಲ್ಲರೆ ಇಲ್ಲದಿದ್ದರೆ, ಚಿಂತಿಸಬೇಡಿ. ನೀವು ನನಗೆ ಇ ವ್ಯಾಲೆಟ್ ಮೂಲಕ ಪಾವತಿಸಬಹುದು. ಈಗ ನಾನು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಹೊಂದಿದ್ದೇನೆ. ಎಂದು ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಪಟ್ಟಣದ ನಿವಾಸಿ ಭಿಕ್ಷುಕ ರಾಜು ಪ್ರಸಾದ್ (40) ಅವರು ಡಿಜಿಟಲ್ ರೂಪದಲ್ಲಿ ಪಾವತಿಸುವಂತೆ ಕೇಳುತ್ತಿದ್ದಾರೆ. ಶುಕ್ರವಾರ ಅವರು ತಮ್ಮ ಇ ವ್ಯಾಲೆಟ್‌ನಲ್ಲಿ ಭಿಕ್ಷಾಟನೆಯಿಂದ 57 ರೂಪಾಯಿಗಳನ್ನು ಗಳಿಸಿದರು. ಪ್ರಸಾದ್ ಅವರು ತಮ್ಮ 10ನೇ ವಯಸ್ಸಿನಿಂದ ಬೆಟ್ಟಿಯಾ ರೈಲು ನಿಲ್ದಾಣದ ಆಸುಪಾಸಿನಲ್ಲಿ ಭಿಕ್ಷೆ ಬೇಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ‘ಡಿಜಿಟಲ್ ಇಂಡಿಯಾ’ ಅಭಿಯಾನದ ಕಟ್ಟಾ ಬೆಂಬಲಿಗರಾದ ಪ್ರಸಾದ್ ಅವರು ಡಿಜಿಟಲ್ ಪಾವತಿಯ ಸೌಲಭ್ಯವನ್ನು ಪಡೆಯಲು ಇತ್ತೀಚೆಗೆ ಬ್ಯಾಂಕ್ ಖಾತೆಯನ್ನು ತೆರೆದರು. ನನ್ನ ಬಳಿ ಆಧಾರ್ ಕಾರ್ಡ್ ಇದ್ದರೂ ಪ್ಯಾನ್ ಕಾರ್ಡ್ ಇರಲಿಲ್ಲ, ಇದರಿಂದ…
ಸರಗೂರು: ಗ್ರಾಮ ಸಭೆಗೆ ಪ್ರಮುಖ ಅಧಿಕಾರಿಗಳು ಬಾರದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸರಗೂರು ತಾಲ್ಲೂಕಿನ ಹಾದನೂರಿನಲ್ಲಿ ನಡೆದಿದೆ. ಸಭೆಗೆ ಕೆಲವೇ ಕೆಲವು ಅಧಿಕಾರಿಗಳು ಆಗಮಿಸಿದ್ದು, ಈ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಗ್ರಾಮಸ್ಥರು, ಎಲ್ಲಅಧಿಕಾರಿಗಳೂ ಕೂಡ ಗ್ರಾಮ ಸಭೆಗೆ ಆಗಮಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕಿನ ತಹಶೀಲ್ದಾರ್ ಹಾಗೂ ಕಾರ್ಯನಿರ್ವಹಕ ಅಧಿಕಾರಿಗಳು ಸಭೆಗೆ ಬರಬೇಕು, ನಮ್ಮ ಸಮಸ್ಯೆಗಳನ್ನು ಅವರಿಗೆ ತಿಳಿಸಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಹಾದನೂರು ಅತೀ ಹೆಚ್ಚು ದಲಿತರೇ ಇರುವ ಗ್ರಾಮವಾಗಿದ್ದು, ಈ ಗ್ರಾಮವನ್ನು ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ನಿರ್ಲಕ್ಷಿಸುತ್ತಿದ್ದಾರೆ. ಗ್ರಾಮಸಭೆಯನ್ನು ಕಾಟಾಚಾರಕ್ಕೆ ನಡೆಸುತ್ತಿದ್ದು, ಸಭೆಗೆ ಮುಖ್ಯ ಅಧಿಕಾರಿಗಳೇ ಆಗಮಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ವರದಿ: ಚಂದ್ರ ಹಾದನೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ. ಗೀತಾ(32), ಶಾರದಾ (60) ಹಾಗೂ ಧೃತಿ (5) ಮೃತರು ಎಂದು ಗುರುತಿಸಲಾಗಿದೆ. ತಡರಾತ್ರಿ ಕಾರಿನಲ್ಲಿ ಒಂದೇ ಕುಟುಂಬದ 7 ಜನರು ಕುಂದಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು. ಆಗ ಕಾರು ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾಗಿದೆ. ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರು ಕುಂದಾಪುರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ. ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಬೆಂಗಳೂರು: ಕೆಪಿಟಿಸಿಎಲ್ ಇಲಾಖೆಯ ವಿವಿಧ ಹುದ್ದೆಗಳ ನೇಮಕಕ್ಕೆ ಇನ್ನೂ ಮುಂದೆ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣವಾಗುವುದು ಕಡ್ಡಾಯ ಎಂದು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಅಪ್ಟಿಟ್ಯಾಡ್ ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಕನ್ನಡ ಪರೀಕ್ಷೆ ಬರೆಯಬೇಕು ಹಾಗೂ ಅದರಲ್ಲಿ ಕನಿಷ್ಠ 50 ಅಂಕವನ್ನು ಪಡೆಯಬೇಕು ಎಂದು ಆದೇಶಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಸಚಿವರು ತಿಳಸಿದ್ದಾರೆ. ಈ ಹಿಂದೆ ನಡೆದ ನೇಮಕದಲ್ಲಿನ ವಿದ್ಯಮಾನದ ಮಾಹಿತಿ ಪಡೆದಿದ್ದ ಸಚಿವರು, ಮತ್ತೆ ಆ ರೀತಿ ಲೋಪ, ಅನ್ಯಾಯದ ಅಪಸ್ವರ ಮರುಕಳಿಸಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಕೆಪಿಟಿಸಿಎಲ್ ನೇಮಕದಲ್ಲಿ ಮತ್ತೆ ಕನ್ನಡ ಭಾಷಾ ಪರೀಕ್ಷಾ ಕಡ್ಡಾಯಗೊಳಿಸುವ ಮೂಲಕ ಕನ್ನಡಪರ ಸಂಘಟನೆಗಳ ಧ್ವನಿಗೂ ಸರಕಾರ ಸ್ಪಂದಿಸಿದೆ. ದೀರ್ಘಾವದಿ ನಂತರ ತುಂಬುತ್ತಿರುವ ಹುದ್ದೆಗಳು ಕನ್ನಡಿಗರು, ಕನ್ನಡ ಬಲ್ಲ ಅರ್ಹರಿಗೆ ದಕ್ಕುವ ರೀತಿಯಲ್ಲಿ ಕ್ರಮ ಕೈಗೊಂಡಿದೆ. ಈ…
ತಿಪಟೂರು: ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯಲ್ಲಿ ಅಂಗನವಾಡಿ ಕಾರ್ಯಕರ್ತರಿಗೆ “ಮಹಿಳೆ ಮತ್ತು ಮಕ್ಕಳ ಅಪೌಷ್ಠಿಕತೆಯಲ್ಲಿ ಪೌಷ್ಠಿಕ ಆಹಾರದ ಮಹತ್ವ”ದ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕೃಷಿ ವಿಜ್ಞಾನ ಕೇಂದ್ರ ಕೊನೆಹಳ್ಳಿಯ ಮುಖ್ಯಸ್ಥರಾದ ಡಾ.ಗೋವಿಂದೇಗೌಡ ಉದ್ಘಾಟಿಸಿದರು. ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿಗಳಾದ ಡಾ.ರೂಪ ಬಿ. ಪಾಟೀಲ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಬಿ.ಎನ್. ಪ್ರೇಮ ಡಾ.ಅನಿತಾ, ಅಂಜುಮನ್ ಬಾನು ಹಾಜರಿದ್ದರು. ಅಂಗನವಾಡಿ ಕಾರ್ಯಕರ್ತರು ತರಬೇತಿಯಲ್ಲಿ ಭಾಗವಹಿಸಿ ಮಾಹಿತಿ ಪಡೆದುಕೊಂಡರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB
ಅಥ್ಲೆಟಿಕ್ ನಲ್ಲಿ ಪ್ರಸಿದ್ಧ ಕ್ರೀಡಾಪಟುವಾಗಿ ಏಷ್ಯನ್ ಗೇಮ್ಸ ಚಿನ್ನದ ಪದಕ ಗೆದ್ದು ಬಣ್ಣದ ಲೋಕದಲ್ಲಿ ಮಿಂಚಿದ್ದ ನಟ ಪ್ರವೀಣ್ ಕುಮಾರ್ ಸೋಬ್ತಿ(74) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ನಿನ್ನೆ ಸಂಜೆ ಎದೆ ನೋವು ಕಾಣಿಸಿಕೊಂಡಿದೆ.ನಂತರ ವೈದ್ಯರನ್ನು ಮನೆಗೆ ಕರೆಸಿ ಚಿಕಿತ್ಸೆ ನೀಡಲಾಯಿತು ಆದರೆ ರಾತ್ರಿ 10.30 ರಲ್ಲಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ ಎಂದು ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಪ್ರವೀಣ್ ಡಿಸ್ಕಸ್ ಥ್ರೋ ಸೇರಿದಂತೆ ಅಥ್ಲೆಟಿಕ್ ಕ್ರೀಡೆಯಲ್ಲಿ ಅಂತರಾಷ್ಟೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಸಿದರು. 1966 ಮತ್ತು 1970 ರಲ್ಲಿ ಎರಡು ಚಿನ್ನದ ಪದಕಗಳನ್ನು ಒಳಗೊಂಡಂತೆ ಏಷ್ಯನ್ ಗೇಮ್ಸನಲ್ಲಿ ನಾಲ್ಕು ಪದಕಗಳನ್ನು ಗೆದ್ದರು. ಅವರು 1966 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕವನ್ನು ಗೆದ್ದರು. 1988 ರಲ್ಲಿ ಟಿವಿ ಪರದೆಯಲ್ಲಿ ಮೂಡಿ ಬಂದ ಮಹಾಭಾರತ ನಲ್ಲಿ ಭೀಮನ ಪಾತ್ರದಲ್ಲಿ ಮಿಂಚಿ ನಂತರ ಸಿನಿಮಾ ನಟನೆಯಲ್ಲಿ ಮತ್ತಷ್ಟು ಜನಪ್ರಿಯತೆಯನ್ನು ಗಳಿಸಿದರು.ಬಾಲಿವುಡ್ ನಲ್ಲಿ ತಮ್ಮ ದೇಹದಡ್ಯ ಮೂಲಕ ಸಾಹಸ ದೃಶ್ಯಗಳು ರಂಚಿಸಿತ್ತು ಕನ್ನಡದಲ್ಲೂ…
ಮೈಸೂರು: ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಲು ಒತ್ತಾಯಿಸಿ, ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ಕರೆ ಕೊಟ್ಟಿದ “ಮೈಸೂರ್ ಬಂದ್” ಬೆಂಬಲಿಸಿ, ಕರ್ನಾಟಕ ರಾಜ್ಯ ಸಂಶೋಧಕರ ಸಂಘ ಪ್ರತಿಭಟನೆ ನಡೆಸಿತು. ಘೋಷಣೆಗಳನ್ನು ಕೂಗುತ್ತಾ ಮೈಸೂರಿನ ಸಿ.ಟಿ.ಬಸ್ ನಿಲ್ದಾಣ, ಸೈಬರ್ ಬಸ್ ನಿಲ್ದಾಣ, ಅಶೋಕ ರಸ್ತೆ, ಸಯ್ಯಾಜಿರಾವ್ ರಸ್ತೆ, ಅರಸು ರಸ್ತೆ ಮೂಲಕ ಇಡೀ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಪ್ರತಿಭಟನೆಯಲ್ಲಿ ನಡೆಸಲಾಯಿತು. ರಾಜ್ಯ ಸಂಶೋಧಕರ ಸಂಘದ ರಾಜ್ಯಾಧ್ಯಕ್ಷರಾದ ಮರಿದೇವಯ್ಯ ಮಾತನಾಡಿ, ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸಿದ ಹೋದರೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಿರಂತರ ಹೋರಾಟ ಮಾಡುವುದಾಗಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿವಿಗಾಗಿ ಎರಡನೇ ಭೀಮಾಕೋರೆಂಗಾವ್ ಯುದ್ಧಕ್ಕೆ ಸಜ್ಜಾಗಬೇಕಿದೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಪ್ರತಿಭಟನೆಯಲ್ಲಿ ಸಂಶೋಧಕರಾದ ನಂಜುಂಡಸ್ವಾಮಿ, ಪ್ರವೀಣ್ ಕುಮಾರ್, ಅಮ್ಮ ರಾಮಚಂದ್ರ, ರಾಜೇಂದ್ರ, ಮಾರುತಿ, ಬಳ್ಳಾರಿ ಹನುಮಂತಪ್ಪ ಮತ್ತು ವಿದ್ಯಾರ್ಥಿಗಳ ಕರುಣ, ಮನು ಕುಮಾರ್, ಅಭಿಷೇಕ್, ರಾಹುಲ್, ಅಮಿತ್, ವಿಜಯ್, ಶಿವರಾಜ್, ಸಂತೋಷ್, ಅರುಣ್ ಮಣಿ…