Author: admin

ತುಮಕೂರು: ಜೈನ್ ಪಿಯು ಕಾಲೇಜು, ತುಮಕೂರು ವತಿಯಿಂದ ಸತ್ಯಮಂಗಲದ ಜೆಜಿಐ ಹಾಲ್‌ ನಲ್ಲಿ ವಿಶೇಷ ಶಿಕ್ಷಣ ಮೇಳ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಶುಕ್ರವಾರ ಜರುಗಿತು. 10, 11 ಮತ್ತು 12ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ, ವಿದ್ಯಾರ್ಥಿಗಳು ತಮ್ಮ ಯೋಗ್ಯತೆ, ವ್ಯಕ್ತಿತ್ವ ಮತ್ತು ಆಸಕ್ತಿಗಳ ಆಧಾರದ ಮೇಲೆ ಮಾಹಿತಿಯುಕ್ತ ವೃತ್ತಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಗತ್ಯವಾದ ಮಾರ್ಗದರ್ಶನ ನೀಡಲಾಯಿತು. ಕಾರ್ಯಕ್ರಮದಲ್ಲಿ 12ನೇ ತರಗತಿಯ ನಂತರ ಲಭ್ಯವಿರುವ ಸಮಕಾಲೀನ ಹಾಗೂ ಹೊಸ ಯುಗದ ವೃತ್ತಿ ಆಯ್ಕೆಗಳು, 21ನೇ ಶತಮಾನದ ಕೌಶಲ್ಯಗಳು, ಕೌಶಲ್ಯ ಆಧಾರಿತ ಉದ್ಯೋಗಗಳು, ವೃತ್ತಿ ಮ್ಯಾಪಿಂಗ್, ಸೈಕೋಮೆಟ್ರಿಕ್ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಜೊತೆಗೆ CUET, CLAT, SAT, NDA, UCEED, JEE ಮುಂತಾದ ಪ್ರವೇಶ ಪರೀಕ್ಷೆಗಳನ್ನು ಭೇದಿಸಲು ಅಗತ್ಯ ಸಲಹೆ ಮತ್ತು ತಂತ್ರಗಳನ್ನೂ ಹಂಚಿಕೊಳ್ಳಲಾಯಿತು. ಪ್ರಮುಖ ಭಾರತೀಯ ಹಾಗೂ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಹಾಗೂ ಅನುಭವಿ ವೃತ್ತಿ ಸಲಹೆಗಾರರು ವಿದ್ಯಾರ್ಥಿಗಳು ಮತ್ತು ಪೋಷಕರೊಂದಿಗೆ ಸಂವಾದ…

Read More

ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ಗ್ರಾಮಾಂತರ ತಾಲೂಕು ನೊಣವಿನಕೆರೆ ವಲಯದ ಪುಣ್ಯಕೋಟಿ  ಜ್ಞಾನ ವಿಕಾಸ ಕೇಂದ್ರದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು  ನೊಣವಿನಕೆರೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಬಸವರಾಜ್ ಸವಟಗಿ ದೀಪ ಬೆಳಗಿಸಿ ಮಾತನಾಡಿ, ಸರ್ಕಾರ ಮಾಡದಿರುವ ಕೆಲಸಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ, ಇದರಿಂದ ಎಲ್ಲರಿಗೂ ತುಂಬಾ ಸಹಾಯವಾಗುತ್ತಿದೆ. ಆರೋಗ್ಯವೇ ಭಾಗ್ಯ ಎನ್ನುವ ಹಾಗೆ ಎಲ್ಲರು ತಪಾಸಣೆ ಮಾಡಿಸಿ ಆರೋಗ್ಯ ಸಮಸ್ಯೆ ಇದ್ದಲ್ಲಿ ಸೂಕ್ತ ವೈದ್ಯರ ಸಲಹೆಯೊಂದಿಗೆ ಔಷಧಿ ತೆಗೆದುಕೊಳ್ಳಿ ಎಂದರು. ಈ ಸಂದರ್ಭದಲ್ಲಿ ಸದಸ್ಯರಿಗೆ ಕುಮಾರ್ ಆಸ್ಪತ್ರೆಯ ಡಾ.ಶ್ರೀಧರ್ ಸಿಬ್ಬಂದಿಯವರ ಮೂಲಕ ರಕ್ತದ ಗುಂಪು, ಗರ್ಭಕೋಶ ತಪಾಸಣೆ  ಮಹಾವೀರ ಜೈನ ಆಸ್ಪತ್ರೆ ವತಿಯಿಂದ ಬಿಪಿ, ಶುಗರ್ ಸ್ಪರ್ಶ,  ಇಸಿಜಿ ಜ್ಯೋತಿ ಕಣ್ಣಿನ ಆಸ್ಪತ್ರೆ ವತಿಯಿಂದ ಕಣ್ಣಿನ ತಪಾಸಣೆ ಮಾಡಿ ಸೂಕ್ತ ಸಲಹೆ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ  ಜನಜಾಗೃತಿ ಸದಸ್ಯರು  ದಯಾನಂದ ಕಾಬೋರಪ್ಪ ಒಕ್ಕೂಟ ಪದಾಧಿಕಾರಿಗಳಾದ ರಂಗಣ್ಣ, ಸಮಾಜ…

Read More

ಸರಗೂರು:  ಅಂಗನವಾಡಿಗಳಲ್ಲಿ ಶಾಲಾ ಪೂರ್ವ ಶಿಕ್ಷಣದ ಪ್ರಾಮುಖ್ಯತೆಯನ್ನು ಸಮುದಾಯಕ್ಕೆ ತಿಳಿಸುವ ಸಲುವಾಗಿ ಹಾಗೂ ಆರಂಭಿಕ ಬಾಲ್ಯ ಶಿಕ್ಷಣದ ಗುಣಮಟ್ಟವನ್ನು ಬಲಪಡಿಸಲು ಸಮುದಾಯದ ಪಾತ್ರ ಬಹುಮುಖ್ಯವಾದದ್ದು ಎಂಬುದನ್ನು ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ರವಿಕುಮಾರ್ ತಿಳಿಸಿದರು. ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಶುಕ್ರವಾರದಂದು ಮಕ್ಕಳ ಜಾಗೃತಿ ಸಂಸ್ಥೆ, ಮುಳ್ಳೂರು ಗ್ರಾಮ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,  ಹೆಚ್‌ ಸಿಎಲ್ ಪೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಮುಳ್ಳೂರು ವೃತದ ಅಂಗನವಾಡಿ ಹಬ್ಬ ಕಾರ್ಯಕ್ರಮವನ್ನು ಮುಳ್ಳೂರಿನ ಶ್ರೀ ಅಭಯ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದು ಗಣ್ಯರು ಕಾರ್ಯಕ್ರಮವನ್ನು ಟೇಪ್ ಕಟ್ ಮಾಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಇಂತಹ ಕಾರ್ಯಕ್ರಮಗಳು ಆರು ತಿಂಗಳಿಗೊಮ್ಮೆ ಪ್ರತಿಯೊಂದು ಗ್ರಾಮ ಪಂಚಾಯಿತಿ ಮಟ್ಟದಲ್ಲೂ ನಡೆಯಬೇಕು. ಇದರಿಂದ ಮಕ್ಕಳಿಗೆ ಹಾಗೂ ಪೋಷಕರಿಗೆ ಒಂದು ಅರಿವು ಉಂಟಾಗುತ್ತದೆ. ಹಾಗೂ ಎಲ್ಲಾ ಕ್ಷೇತ್ರದ ಬೆಳವಣಿಗೆಗಳು ಸಾಧ್ಯವಾಗುತ್ತದೆ.  ಮಕ್ಕಳ ಜಾಗೃತಿ ಸಂಸ್ಥೆಯು ಒಂದು ಉತ್ತಮ ಕಾರ್ಯಕ್ರಮವನ್ನು ಮಾಡುತ್ತ ಬಂದಿದ್ದು, ಇದು ತುಂಬಾ ಶ್ಲಾಘನೀಯವಾಗಿದೆ ಎಂದು…

Read More

ಸರಗೂರು:  ಮೈಸೂರಿನ ಮಾಲ್‌ ಆಫ್‌ ಮೈಸೂರ್‌ ನ ನೆಲಮಹಡಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಅವರು ಮೈಸೂರು ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಶನಿವಾರದಂದು ಉದ್ಘಾಟಿಸಿ ಚಲನಚಿತ್ರೋತ್ಸವ ಉಪಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜುರವರನ್ನು ಜಿಲ್ಲಾಡಳಿತ ಹಾಗೂ ಉಸ್ತುವಾರಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ರವರು ಸನ್ಮಾನಿಸಲಾಯಿತು. ನಂತರ ಮಾತನಾಡಿದ ಸಚಿವರು, ಜಿಲ್ಲೆಯ ಗಡಿಭಾಗದ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಕಳೆದ ಬಾರಿ ಉಪಸಮಿತಿಯಲ್ಲಿ ಸದಸ್ಯರನ್ನ ಮಾಡಲಾಗಿತ್ತು.ಈ ಬಾರಿ ಎಲ್ಲಾ ತಾಲೂಕಿನ ಕಾರ್ಯಕರ್ತರನ್ನು ಅರ್ಜಿ ಆಹ್ವಾನ ನೀಡಲಾಗಿತ್ತು. ಜಿಲ್ಲೆಯ ಗಡಿಭಾಗದಲ್ಲಿ ಇರುವ ಕಾಡಂಚಿನ ಭಾಗದಲ್ಲಿರುವ ಗ್ರಾಮಗಳಿಗೆ ಅವರಿಗೆ ಒಂದು ಅವಕಾಶ ನೀಡುವ ನಿಟ್ಟಿನಲ್ಲಿ ಆಯ್ಕೆ ಮಾಡಲಾಯಿತು. ಅದರಂತೆ ಕೂಡ ಮೈಸೂರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದರು. ನಂತರ ಉಪಸಮಿತಿ ಅಧ್ಯಕ್ಷ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು ಮಾತನಾಡಿ, ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ…

Read More

ಔರಾದ: ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ನಡೆಸಲಾಗಿದೆ ಅಂತ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ, ವೇದಿಕೆಯಲ್ಲೇ ಪ್ರತಿಭಟನೆ ನಡೆಸಿದ ಘಟನೆ  ನಡೆದಿದೆ. ಇಂದು  ಪಟ್ಟಣದ ಡಾ.ಗುರುಪಾದಪ್ಪ ನಾಗಮಾರಪಲ್ಲಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಸರ್ಕಾರ, ತಾಲೂಕು ಪಂಚಾಯತ್ ಔರಾದ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಔರಾದರವರ ಸಂಯುಕ್ತ ಆಶ್ರಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಿಕ್ಷಣ ಇಲಾಖೆಯವರು ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಶಿಕ್ಷಣ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಫೋಟೋಗಳು ಹಾಕದೆ ಕೇವಲ ಸ್ಥಳೀಯ ಶಾಸಕ ಪ್ರಭು ಚೌಹಾಣ್ ಅವರ ಭಾವಚಿತ್ರ ಹಾಕಿದ್ದಾರೆ. ಈ ಮೂಲಕ ಶಿಷ್ಟಾಚಾರ ಉಲ್ಲಂಘಿಸಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಮಾಧ್ಯಮ ರಾಜ್ಯ ಪ್ರಧಾನ ಕಾರ್ಯದರ್ಶಿ ಸುಧಾಕರ  ಕೊಳ್ಳುರ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು. ಈ ಸಂದರ್ಭದಲ್ಲಿ ಶಾಸಕ ಪ್ರಭು ಚೌಹಾಣ್ ಮಧ್ಯಸ್ಥಿಕೆ ವಹಿಸಿ, “ಅಮ್ಮ.., ಇದು ನಾನು ಸ್ವಂತ ಹಣದಿಂದ ಮಾಡುತ್ತಿರುವ ಕಾರ್ಯಕ್ರಮ…

Read More

ತಿಪಟೂರು:  ಪಿ.ಯು.ಸಿ. ನಂತರ ಮುಂದೇನು? ಎಂಬ ಪ್ರಶ್ನೆಗೆ ನಮ್ಮ ವಿದ್ಯಾರ್ಥಿಗಳಲ್ಲಿಯೇ ಉತ್ತರವಿರುವುದಿಲ್ಲ. ಜ್ಞಾನದ ಶಾಖೆಗಳು ವಿಸ್ತಾರವಾಗಿದ್ದು, ಅವುಗಳ ಬಗ್ಗೆ ಪೂರ್ಣ ಮಾಹಿತಿ ಪಡೆದು, ವಿದ್ಯಾರ್ಥಿಯು ತನಗೆ ಇಷ್ಟವಾದ, ಆಸಕ್ತಿಯ ವಿಷಯವನ್ನು ಆಯ್ಕೆ ಮಾಡಿಕೊಂಡು ವ್ಯಾಸಂಗ ಮುಂದುವರೆಸಿದಲ್ಲಿ ಉತ್ತಮ ಫಲಿತಾಂಶ ಪಡೆಯಬಹುದು ಎಂದು ಎಂ.ಡಿ.ಶಿವಕುಮಾರ್ ನುಡಿದರು. ಅವರು ಇಂದು ಬಾಲಕರ ಸರ್ಕಾರಿ ಪ.ಪೂ. ಕಾಲೇಜಿನ ಸೈನ್ಸ್ ಫೆಸ್ಟ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸ್ವರ್ಣಗೌರಮ್ಮ ಸಮಾಜ ಸೇವಕರು ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟಿಸಿದರು. ಸಮಾರಂಭದ ಮುಖ್ಯ ಅತಿಥಿಗಳಾಗಿಆಗಮಿಸಿದ್ದ ತುಮಕೂರಿನ ‘ವೇಗಸ್ ನೀಟ್ ಅಕಾಡೆಮಿ’ಯ ನಿರ್ದೇಶಕರಾದ ಡಾ. ದೇವಿಪ್ರಿಯಾರವರು ಪಿ.ಯು.ಸಿ. ನಂತರ ಉನ್ನತ ವ್ಯಾಸಂಗಕ್ಕೆ ಅವಕಾಶಗಳಿರುವ ಕೋರ್ಸ್‌ಗಳನ್ನು ಮತ್ತು ಆಯ್ಕೆಯ ಪರೀಕ್ಷಾ ವಿಧಾನಗಳನ್ನು ಆಕರ್ಷಕ ಶೈಲಿಯಲ್ಲಿ ವಿವರವಾಗಿ ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಬಸವರಾಜಪ್ಪ ತಾಲೂಕು ಕ.ಸಾ.ಪ. ಅಧ್ಯಕ್ಷರು ಕಳೆದ ಬಾರಿ ಎಸ್‌.ಎಸ್.ಎಲ್.ಸಿ. ಕನ್ನಡ ಭಾಷೆಯಲ್ಲಿ ಪೂರ್ಣಾಂಕ ಪಡೆದ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಗೌರವಿಸಿ, ವಿವಿಧ ಕಾರಣಗಳಿಂದ ಹಲವು ವಿದ್ಯಾರ್ಥಿಗಳು ಫೇಲ್ ಆದರೆ ಚಿಂತೆ ಬೇಡ…

Read More

ಬೀದರ್: ಜಿಲ್ಲೆಯ ಕಮಲನಗರ ತಾಲೂಕಿನ ಠಾಣಕುಶನೂರ ಹೊಬ್ಬಳ್ಳಿಗೆ ಆಗಮಿಸಿರುವ ನೂತನ ಪಿಎಸ್ ಐ ಶೇಕಶಾಹ ಪಟೇಲ್ ಅವರಿಗೆ ಸನ್ಮಾನ ಮಾಡಲಾಯಿತು. ಈ ಸಂದರ್ಭದಲ್ಲಿ ಮಾಜಿ ಎಸ್.ಡಿ.ಎಮ್.ಸಿ. ಅಧ್ಯಕ್ಷ ಪ್ರಭಾಕರ್ ಇಂಗಳೇ, ಪತ್ರಕರ್ತ ಅರವಿಂದ ಮಲ್ಲಿಗೆ, ರಾಜಕುಮಾರ್ ಹಚಕಮಟೆ, ಉಮಾಕಾಂತ ಮಾಳೆಗೆ, ವಿಜಯಕುಮಾರ್ ಮಲ್ಲಿಗೆ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೀದರ್:  ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಾಂಜ್ರಾ ನದಿಗೆ ಬಿದ್ದ ಘಟನೆ ಭಾಲ್ಕಿ ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ನಡೆದಿತ್ತು. ಗುರುವಾರ ಈ ಘಟನೆ ನಡೆದಿತ್ತು, ಇಂದು ಆತನ ಮೃತದೇಹ ಪತ್ತೆಯಾಗಿದೆ. ಹಲಸಿತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಗುರುವಾರ ಈ ಘಟನೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಹಾಸನ: ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿರುವ ಘಟನೆ ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಶುಕ್ರವಾರ ಸಂಭವಿಸಿದೆ. ಬಳ್ಳಾರಿ ನಿವಾಸಿ ಅಂತಿಮ ಬಿಇ ವಿದ್ಯಾರ್ಥಿ ಪ್ರವೀಣ್​​​​​, ಹೊಳೆನರಸೀಪುರ ತಾಲೂಕಿನ ಹಳೆಕೋಟೆ ಹೋಬಳಿ ಕೆ.ಬಿ.ಪಾಳ್ಯ ನಿವಾಸಿ ರಾಜೇಶ್​(17), ಡನಾಯಕನಹಳ್ಳಿ ಕೊಪ್ಪಲು ನಿವಾಸಿ ಈಶ್ವರ(17), ಮುತ್ತಿಗೆಹೀರಳ್ಳಿ ಗ್ರಾಮದ ನಿವಾಸಿ ಗೋಕುಲ್(17), ಕಬ್ಬಿನಹಳ್ಳಿ ನಿವಾಸಿಗಳಾದ ಕುಮಾರ(25), ಪ್ರವೀಣ(25), ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಗವಿ ಗಂಗಾಪುರ ಗ್ರಾಮ ನಿವಾಸಿ ಮಿಥುನ್(23), ಚಿಕ್ಕಮಗಳೂರು ಜಿಲ್ಲೆಯ ಮಾಣೇನಹಳ್ಳಿ ನಿವಾಸಿ ಬಿಇ ವಿದ್ಯಾರ್ಥಿ ಸುರೇಶ್(19), ಹಾಸನ ತಾಲೂಕಿನ ಬಂಟರಹಳ್ಳಿ ಗ್ರಾಮದ ನಿವಾಸಿ ಪ್ರಭಾಕರ್(55) ಮೃತಪಟ್ಟವರಾಗಿದ್ದಾರೆ. ಹಾಸನದಿಂದ ಹೊಳೆನರಸೀಪುರಕ್ಕೆ ಹೊರಟಿದ್ದ ಟ್ರಕ್‌, ಬೈಕ್‌ ಒಂದಕ್ಕೆ ಡಿಕ್ಕಿ ಹೊಡೆದು ಬಳಿಕ ಗಣೇಶ ಮೆರವಣಿಗೆಯತ್ತ ತಿರುಗಿದ್ದು, ಮೆರವಣಿಗೆಯಲ್ಲಿ ಸಂಭ್ರಮದಲ್ಲಿ ಕುಣಿಯುತ್ತಿದ್ದವರ ಮೇಲೆಯೇ ಹರಿದಿದ್ದು, ದುರಂತ ಸಂಭವಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಸರಗೂರು:  ಗ್ರಾಮೀಣ ಭಾಗದ ರೈತರ ಜಮೀನು ಹಕ್ಕನ್ನು ಭದ್ರಪಡಿಸಲು ಸರ್ಕಾರ ಪೌತಿ ಆಂದೋಲನ ಹಮ್ಮಿಕೊಂಡಿದ್ದು, ರೈತರು ಇದರ ಸದುಪಯೋಗ ಪಡೆಯಬೇಕು’ ಎಂದು ರಾಜಸ್ವ ನಿರೀಕ್ಷಕ ರವಿಚಂದ್ರನ್  ಹೇಳಿದರು. ತಾಲೂಕಿನ ಮನುಗನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಪೌತಿ ಖಾತೆ ಆಂದೋಲನ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಸಾಲ ಸೌಲಭ್ಯ, ವಿಮೆ ಪರಿಹಾರ ಸೇರಿದಂತೆ ಸರ್ಕಾರದ ಪ್ರತಿಯೊಂದು ಸೌಲಭ್ಯ ಪಡೆಯಲು ಅವಶ್ಯಕವಾದ ಪೌತಿ ಖಾತೆಯನ್ನು ಸರ್ಕಾರ ಆಂದೋಲನದ ಮೂಲಕ ರೈತರಿಗೆ ನೀಡುತ್ತಿದ್ದು, ಮೃತ ರೈತರ ವಾರಸುದಾರರು ಕೂಡಲೇ ತಮ್ಮ ಜಮೀನುಗಳ ದಾಖಲಾತಿಗಳನ್ನು ವರ್ಗಾಯಿಸಿಕೊಳ್ಳಬೇಕು’ ಎಂದರು. ಗ್ರಾಮೀಣ ಭಾಗದ ಜನರಿಗೆ ಸರಕಾರದ ಹಲವು ಸೇವೆಗಳು ಅವರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ನೂತನ ಯೋಜನೆಗಳಲ್ಲಿ ಪೌತಿ ಖಾತೆ ಆಂದೋಲನವು ಒಂದಾಗಿದೆ. ಪೌತಿ ಖಾತೆ ಆಂದೋಲನ ಎಂದರೆ ಪಿತ್ರಾರ್ಜಿತ ಆಸ್ತಿ ಹಕ್ಕನ್ನು ರೈತರ ಹೆಸರಿಗೆ ಮಾಡಿಕೊಡುವುದು. ಈ ಪೌತಿ ಖಾತೆ ಆಂದೋಲನದ ಮೂಲ ಉದ್ದೇಶವಾಗಿದೆ. ಕಂದಾಯ ನಿರೀಕ್ಷಕ  ಎಂ.ಚೈತ್ರಾ ಮಾತನಾಡಿ,…

Read More