Subscribe to Updates
Get the latest creative news from FooBar about art, design and business.
- ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ತಳ್ಳಿದ ಪಾಪಿ ತಂದೆ!
- ಎಐ ಕ್ಷೇತ್ರದಲ್ಲಿ ತುಮಕೂರಿನ ಟಿ.ಎಸ್.ಪ್ರತೀಕ್ ಸಾಧನೆ: ಗಿನ್ನೆಸ್ ವರ್ಲ್ಡ್ ರೆಕಾರ್ಡ್
- ಧರ್ಮಸ್ಥಳಕ್ಕೆ ಪಾದಯಾತ್ರೆ: ಮತ್ತಿಹಳ್ಳಿ ಗ್ರಾಮಸ್ಥರ ಭಕ್ತಿಗೆ ಯೋಜನಾಧಿಕಾರಿ ಉದಯ್ ಕೆ. ಮೆಚ್ಚುಗೆ
- ದೇಹದಂತೆ ಪ್ರತಿನಿತ್ಯ ಬಾಯಿಯನ್ನು ಸ್ವಚ್ಛವಾಗಿಡಬೇಕು: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ
- ಮುದ್ರಣ ಮಾಧ್ಯಮಗಳು ಇಂದಿಗೂ ಜನರ ವಿಶ್ವಾಸರ್ಹತೆ ಉಳಿಸಿಕೊಂಡಿವೆ: ಅಂಶಿ ಪ್ರಸನ್ನ ಕುಮಾರ್ ಅಭಿಮತ
- ನೂತನ ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ತಿಳಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್
- ಅಲ್ಪಸಂಖ್ಯಾತರ ತುಷ್ಟೀಕರಣವೇ ಸಿದ್ದರಾಮಯ್ಯನವರ ದೊಡ್ಡ ಸಾಧನೆ: ಬಿಜೆಪಿ ಶಾಸಕ ಬಿ. ಸುರೇಶ್ ಗೌಡ ಟೀಕೆ
- ರಾಜ್ಯ ಮಟ್ಟದ ವಿಜ್ಞಾನ ವಸ್ತುಪ್ರದರ್ಶನ: ದಕ್ಷಿಣ ಭಾರತ ಮಟ್ಟಕ್ಕೆ ಆಯ್ಕೆಯಾದ ಪಾವಗಡದ ಹೃತಿಕ್ ಎಚ್.
Author: admin
ಬೆಂಗಳೂರು: ಈದ್—ಉಲ್—ಫಿತ್ರ್ ಹಬ್ಬದ ಸಂದರ್ಭದಲ್ಲಿ ವಿಶೇಷ ನಮಾಝ್ ನ ಸಂದರ್ಭದಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸಚಿವ ಜಮೀರ್ ಅಹ್ಮದ್ ಹಾಗೂ ಮುಸ್ಲಿಮರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಮತ್ತು ಬೀದರ್ನಲ್ಲಿ ಕ್ರಮವಾಗಿ ಕಪ್ಪು ಪಟ್ಟಿ ಧರಿಸಿ ಬೆಳಗಿನ ಪ್ರಾರ್ಥನೆ ನಡೆಸಲಾಯಿತು. ಸಚಿವ ಜಮೀರ್ ಅಹ್ಮದ್ ಖಾನ್ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡಿದರು. ಅಂತೆಯೇ ಅವರ ನೂರಾರು ಬೆಂಬಲಿಗರು ಸಹ ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಮಾಜ್ ಬಳಿಕ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಜನರು ಭಾನುವಾರ ಯುಗಾದಿಯನ್ನು ಆಚರಿಸಿದರು ಮತ್ತು ಇಂದು ರಂಜಾನ್ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ ಎಂದರು. ಬಕ್ರೀದ್ ಜೊತೆಗೆ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾದ ರಂಜಾನ್ ಸಮಯದಲ್ಲಿ ನಾವು 30 ದಿನಗಳ ಕಾಲ ಉಪವಾಸ ಮಾಡುತ್ತೇವೆ. ಹಿಂದೂಗಳಿಗೆ, ಭಾನುವಾರ ಆಚರಿಸಲಾದ ಯುಗಾದಿಯು ಹೊಸ ವರ್ಷದ ಆರಂಭವನ್ನು…
ತ್ರಿಶೂರ್: ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಎಲನಾಡು ನಿವಾಸಿ ಅನೀಶ್ ಅಬ್ರಹಾಂ ಎಂಬಾತನನ್ನು ಮನ್ನುತ್ತಿ ಪೊಲೀಸರು ಬಂಧಿಸಿದ್ದು, ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ರಾತ್ರಿ 9:30ರ ಸುಮಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಕ್ಷೇತ್ರ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್ ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ. ಮನ್ನುತ್ತಿ ಸಬ್ ಇನ್ಸ್ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆರವುಗೊಳಿಸಲು ಪ್ರಯತ್ನಿಸಿದಾಗ, ಆತ ಅವರೊಂದಿಗೆ ಘರ್ಷಣೆಯಲ್ಲಿ ತೊಡಗಿದ್ದನು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆಗೊಳಿಸುವುದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ನಮ್ಮ ಪಕ್ಷಕ್ಕೆ ಅರ್ಜಿ ಹಾಕಿಲ್ಲ, ಹಾಕಿದರೂ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಸಾಧ್ಯ ಎಂದರು. ಯತ್ನಾಳ್ ಅವರು ಒಂದು ಸಮಾಜದ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ಹಾಗಾಗಿ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಹಾಸನ: ಜಿಲ್ಲೆಯ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಪೂಜೆ ಸಲ್ಲಿಸುವ ಮೂಲಕ ನಟ ಡಾಲಿ ಧನಂಜಯ ಧನ್ಯತಾ ದಂಪತಿ ನಿನ್ನೆ ಯುಗಾದಿ ಹಬ್ಬ ಆಚರಿಸಿದರು. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡಿನಲ್ಲಿರುವ ಶ್ರೀ ಪುಷ್ಪಗಿರಿ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನಕ್ಕೆ ಡಾಲಿ ಧನಂಜಯ ಧನ್ಯತಾ ದಂಪತಿ ಭೇಟಿ ಕೊಟ್ಟಿದ್ದಾರೆ. ನೆಲದ ಮೇಲೆ ಕುಳಿತು ದಂಪತಿ ಪ್ರಸಾದ ಸ್ವೀಕರಿಸಿ ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ಈ ವೇಳೆ ದಂಪತಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಚಿಕ್ಕಬಳ್ಳಾಪುರ: ತಾಯಿಯ ಸಾವಿನಿಂದ ನೊಂದು ಮಗ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಂದಿ ಮೋರಿ ಬಳಿ ನಡೆದಿದೆ. ರಕ್ಷಿತ್ ಬಾಬು (24) ಮೃತಪಟ್ಟ ಯುವಕನಾಗಿದ್ದಾನೆ. ಯುವಕ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ರಕ್ಷಿತ್ ನ ತಾಯಿ ಚಂದ್ರಿಕಾ ಅವರು ಸಾಲ ಬಾಧೆಯ ಹಿನ್ನೆಲೆ ಒಂದೂವರೆ ತಿಂಗಳ ಹಿಂದೆಯಷ್ಟೇ ನೇಣಿಗೆ ಶರಣಾಗಿದ್ದರು. ಇದರಿಂದ ರಕ್ಷಿತ್ ತೀವ್ರವಾಗಿ ನೊಂದಿದ್ದರು ಎನ್ನಲಾಗಿದೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮಂಡ್ಯ: ನಾಮ ಹಾಕಿದ ಮಾತ್ರಕ್ಕೆ ಯಾರೂ ಹಿಂದೂ ಆಗುವುದಿಲ್ಲ, ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿದರೆ ಮಾತ್ರ ಹಿಂದೂತ್ವ ಆಗುತ್ತದೆಯೇ? ಹಿಂದುತ್ವದಲ್ಲಿ ಒಂದು ಶಿಸ್ತಿದೆ, ಅನುಶಾಸನ ಇದೆ. ಅನುಶಾಸನ ಇಲ್ಲದಿದ್ದರೆ ಶಿಸ್ತಾಗುವುದಿಲ್ಲ ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿರುವ ಸಂಬಂಧ ಅವರು ಪ್ರತಿಕ್ರಿಯೆ ನೀಡಿದರು. ಹಿಂದುತ್ವವಾದಿ ಎಂದು ಏನು ಬೇಕಾದರೂ ಮಾತನಾಡುವುದಲ್ಲ. ಮಾತನಾಡುವಾಗ ಪ್ರಜ್ಞೆ ಇರಬೇಕು. ಮಾತಿನ ಮೇಲೆ ನಿಗಾವಹಿಸಬೇಕು ಎಂದರು. ಒಂದು ಸಂಘಟನೆಯಲ್ಲಿದ್ದಾಗ ಮಾತು ಗಡಿ ಮೀರಿ ಹೋಗಬಾರದು. ಪಕ್ಷದ ಸಮಿತಿ ಒಳಗೆ ಮಾತನಾಡಬೇಕು. ಬೀದಿಯಲ್ಲಿ ಮಾತನಾಡುವುದು ಹಿಂದುತ್ವದ ಲಕ್ಷಣ ಅಲ್ಲ ಎಂದು ಭಟ್ ಪ್ರತಿಪಾದಿಸಿದರು. ಹಿಂದುತ್ವದಲ್ಲಿ ಶಿಸ್ತು ಇದೆ. ಅದು ಇಲ್ಲದಿದ್ದರೆ ಹಿಂದುತ್ವವಾದಿ ಆಗಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತಿನಿಂದ ಇರದಿದ್ದರೆ ಇಂತಹ ಸಮಸ್ಯೆ ಆಗುತ್ತವೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬಾಗಲಕೋಟೆ: ಯುಗಾದಿ ಹಬ್ಬದ ದಿನವೇ ಘೋರ ದುರಂತ ನಡೆದಿದ್ದು, ಬಾಗಲಕೋಟೆ ತಾಲೂಕಿನ ಸೀತಿಮನಿ ಗ್ರಾಮದ ಬಳಿ ಕೃಷ್ಣಾನದಿಯಲ್ಲಿ ಮುಳುಗಿ ಮೂವರು ಬಾಲಕರು ಮೃತಪಟ್ಟ ಘಟನೆ ನಡೆದಿದೆ. ಮೃತ ಬಾಲಕರನ್ನು ಸೋಮಶೇಖರ್ ದೇವರಮನಿ (17), ಪರನಗೌಡ ಬೀಳಗಿ (15) ಹಾಗೂ ಮಲ್ಲಪ್ಪ ಬಗಲಿ (16) ಎಂದು ಗುರುತಿಸಲಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಬಾಲಕರು ನೀರುಪಾಲಾಗಿದ್ದಾರೆ. ಮೂವರ ಪೈಕಿ ಬಾಲಕ ಸೋಮಶೇಖರ್ ಮೃತದೇಹ ಪತ್ತೆಯಾಗಿದೆ. ಉಳಿದ ಇಬ್ಬರಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆಯುತ್ತಿದೆ. ಬಾಲಕರು ಬಾಗಲಕೋಟೆ ತಾಲೂಕಿನ ಇಲ್ಯಾಳ ನಿವಾಸಿಗಳು ಎಂದು ತಿಳಿದುಬಂದಿದೆ. ಬಾಗಲಕೋಟೆ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HEkqDgrW2BlJLad5kZ1DX7
ಬೆಂಗಳೂರು: ರಾಜ್ಯಾದ್ಯಂತ ಏಪ್ರಿಲ್ 2ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಹಲವು ಕಡೆಗಳಲ್ಲಿ ಕಳೆದ ಒಂದು ವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ. ವಿಜಯನಗರ, ಶಿವಮೊಗ್ಗ, ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಸಾಧಾರಣ ಮಳೆಯಾಗಲಿದೆ. ಕಲಬುರಗಿಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಚಾಮರಾಜನಗರದಲ್ಲಿ 17.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಭಾಗಮಂಡಲದಲ್ಲಿ ಮಳೆಯಾಗಿದೆ. ಬೆಂಗಳೂರಿನ ಎಚ್ ಎಎಲ್ ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ…
ನವದೆಹಲಿ: ಬೇಸಿಗೆ ರಜೆಯಲ್ಲಿ ಮಕ್ಕಳು ರಚನಾತ್ಮಕ ಮತ್ತು ಉತ್ಪಾದಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕರೆ ನೀಡಿದರು. ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನ 120 ನೇ ಸಂಚಿಕೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೇಸಿಗೆ ರಜೆಯಲ್ಲಿ ಮಕ್ಕಳು ಹೊಸ ಕಲಿಕಾ ಅವಕಾಶಗಳನ್ನು ಒದಗಿಸುವ ಸರ್ಕಾರದ ಪ್ರಯತ್ನಗಳ ಬಗ್ಗೆ ಹೇಳಿದರು. ಬೇಸಿಗೆಯ ದೀರ್ಘ ದಿನಗಳಲ್ಲಿ ವಿದ್ಯಾರ್ಥಿಗಳು ಹೊಸ ಹವ್ಯಾಸಗಳನ್ನು ಅಳವಡಿಸಿಕೊಂಡು ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕೆಂದ ಅವರು ಇದೇ ವೇಳೆ ತಮ್ಮ ಬಾಲ್ಯವನ್ನು ನೆನಪಿಸಿಕೊಂಡರು. ನನ್ನ ಬಾಲ್ಯದ ದಿನಗಳು ನನಗೆ ನೆನಪಿದೆ, ಆಗ ನಾನು ಮತ್ತು ನನ್ನ ಸ್ನೇಹಿತರು ಎಲ್ಲಾ ರೀತಿಯ ಆಟಗಳಲ್ಲಿ ತೊಡಗುತ್ತಿದ್ದೆವು, ಆದರೆ ಅದೇ ಸಮಯದಲ್ಲಿ, ನಾವು ಯಾವಾಗಲೂ ರಚನಾತ್ಮಕವಾಗಿ ಏನನ್ನಾದರೂ ಮಾಡುತ್ತಿದ್ದೆವು ಮತ್ತು ಹೊಸ ವಿಷಯಗಳನ್ನು ಕಲಿತೆವು ಎಂದರು. ಬೇಸಿಗೆಯ ದಿನಗಳು ದೀರ್ಘವಾಗಿರುತ್ತವೆ, ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಮಾಡಲು ಸಾಕಷ್ಟು ಸಮಯವನ್ನು ನೀಡುತ್ತದೆ. ಹೊಸ ಹವ್ಯಾಸವನ್ನು ಅಳವಡಿಸಿಕೊಳ್ಳಲು ಮತ್ತು ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಇದು…
ಬೆಂಗಳೂರು: ಯತ್ನಾಳ್ ಉಚ್ಚಾಟನೆಯಲ್ಲಿ ನನ್ನ ಹಾಗೂ ಯಡಿಯೂರಪ್ಪಅವರ ಪಾತ್ರ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯತ್ನಾಳ್ ಉಚ್ಛಾಟನೆ ನಮ್ಮ ತೀರ್ಮಾನವೂ ಅಲ್ಲ. ನಾವು ಅವರ ಉಚ್ಛಾಟನೆಗೆ ಜವಾಬ್ದಾರರೂ ಅಲ್ಲ ಎಂದರು. ಕೇಂದ್ರದ ವರಿಷ್ಠರು ಯತ್ನಾಳ್ ಅವರಿಗೆ ಹಲವು ಬಾರಿ ನೋಟಿಸ್ ಕೊಟ್ಟು ತಿದ್ದುವ ಕೆಲಸ ಮಾಡಿದ್ದಾರೆ. ನಾನೂ ಕೂಡಾ ಎಲ್ಲವನ್ನು ಸರಿಪಡಿಸಿಕೊಳ್ಳೋಣ ಎಂದು ಯತ್ನಾಳ್ ಅವರಿಗೆ ಹೇಳಿದ್ದೆ ಎಂದರು. ಸದನ ನಡೆಯುವಾಗ ನಾನೂ ಕೂಡಾ ಅವರನ್ನು ವೈಯಕ್ತಿಕ ಭೇಟಿ ಮಾಡಿ ಮಾತನಾಡಿದ್ದೆ, ಭೋಜನಕ್ಕೆ ಆಹ್ವಾನಿಸಿದ್ದೆ. ಯತ್ನಾಳ್ ಜೊತೆಗಿನ ಗೊಂದಲಗಳನ್ನು, ಸಮಸ್ಯೆಗಳನ್ನು ನನ್ನ ಕಡೆಯಿಂದ ಸರಿಪಡಿಸಿಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಹೇಳಿದರು. ಹೈಕಮಾಂಡ್ನವರು ಎಲ್ಲವನ್ನೂ ತುಲನೆ ಮಾಡಿ ಕೊನೆಗೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ, ಯತ್ನಾಳ್ ಅವರ ಉಚ್ಚಾಟನೆಯನ್ನು ನಾನು ಸಂಭ್ರಮಿಸಲ್ಲ. ಹಾಗೊಂದು ವೇಳೆ ನನಗೆ ಸಂಭ್ರಮಿಸುವ ಮನಸ್ಥಿತಿ ಇದೆ ಅಂತಾದರೆ ನಾನು ರಾಜ್ಯಾಧ್ಯಕ್ಷ ಆಗಲು ನಾಲಾಯಕ್ ಎಂದು ಸ್ಪಷ್ಟಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…