Author: admin

ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಸರ್ವ ಸದಸ್ಯರ ಒಮ್ಮತದ ನಿರ್ಧಾರದಿಂದ ಗಂಗರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಅಧಿಕೃತ ಘೋಷಣೆ ಮಾಡಿದರು. ಗ್ರಾ.ಪಂ. ನೂತನ ಅಧ್ಯಕ್ಷೆ ಗಂಗರತ್ನಮ್ಮ ಮಾತನಾಡಿ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಶೀರ್ವಾದ ಹಾಗೂ ಗ್ರಾ.ಪಂ ಎರಡನೇ ಅವಧಿಯ ಅಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಸರ್ವ ಸದಸ್ಯರು ಭರವಸೆಯಿಟ್ಟು ಅಧ್ಯಕ್ಷ ಸ್ಥಾನಕ್ಕೆ ನನ್ನನ್ನು ಆಯ್ಕೆ ಮಾಡಿದ್ದು, ಸದಸ್ಯರ ಮತ್ತು ಅಧಿಕಾರಿಗಳ ವಿಶ್ವಾಸದೊಂದಿಗೆ ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃಧ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿ ಅವಿರೋಧ ಆಯ್ಕೆ ಮಾಡಿದ ಸದಸ್ಯರಿಗೆ ಧನ್ಯವಾದ ತಿಳಿಸಿದರು. ಗ್ರಾ.ಪಂ ಪಿಡಿಓ ಪೃಥ್ವಿಭಾ ಮಾತನಾಡಿ, ಚುನಾವಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಎರಡನೇ ಅವಧಿಯ ಗ್ರಾ.ಪಂ ಅಧ್ಯಕ್ಷ ಆಯ್ಕೆ ಚುನಾವಣೆ ಯಶಸ್ವಿಕಂಡಿದೆ. ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಗಂಗರತ್ನಮ್ಮರವರನ್ನು ಆಯ್ಕೆ ಮಾಡಿದ್ದಾರೆ. ನೂತನ ಅಧ್ಯಕ್ಷರು ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸುವಂತೆ ತಿಳಿಸಿ…

Read More

ಸರಗೂರು:  ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು ರವರನ್ನು ಉಪಸಮಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಂತರ ಮಾತನಾಡಿದ ಸುನೀಲ್ ಬೋಸ್ ಅಭಿಮಾನಿಗಳ ಬಳಗದ ತಾಲೂಕು ಅಧ್ಯಕ್ಷ ದೇವಲಾಪುರ ಸಿದ್ದರಾಜು,  ಈ ಬಾರಿ, ಮಾಲ್‌ ಆಫ್‌ ಮೈಸೂರ್‌ ನ ನೆಲಮಹಡಿಯಲ್ಲಿ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಸೆ.13ರಂದು ಬೆಳಿಗ್ಗೆ 11ಕ್ಕೆ ನೆರವೇರಿಸಲಿದ್ದಾರೆ. ಇದರೊಂದಿಗೆ, ನಾಡಹಬ್ಬಕ್ಕೂ ಮುನ್ನವೇ ಚಲನಚಿತ್ರೋತ್ಸವ ಗರಿಗೆದರಲಿದೆ ಎಂದು ತಿಳಿಸಿದರು. ದಸರಾ ಚಲನಚಿತ್ರೋತ್ಸವ ಉಪಸಮಿತಿ ರಚನೆಯಲ್ಲಿ ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ಕಾರ್ಯಕರ್ತರಿಗೆ ಹೆಚ್ಚಿನ ಮಾನ್ಯತೆ ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಹಾಗೂ ಮೈಸೂರು ಉಸ್ತುವಾರಿ ಸಚಿವ ಡಾ.ಎಸ್.ಸಿ. ಮಹದೇವಪ್ಪ ಹಾಗೂ ಸಂಸದ ಸುನೀಲ್ ಬೋಸ್ ಮತ್ತು ಶಾಸಕ ಅನಿಲ್ ಚಿಕ್ಕಮಾದು ಹೆಚ್ಚಿನ ರೀತಿಯಲ್ಲಿ ಅವಕಾಶವನ್ನು ನೀಡುತ್ತ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಿದರು. ವರದಿ: ಹಾದನೂರು ಚಂದ್ರ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸರಗೂರು:  ಅಬಕಾರಿ ಜಂಟಿ ಆಯುಕ್ತರು ಮೈಸೂರು ವಿಭಾಗ ಹಾಗೂ  ಅಬಕಾರಿ ಉಪ ಆಯುಕ್ತರು ಮೈಸೂರು ಗ್ರಾಮಾಂತರ ಜಿಲ್ಲೆರವರ ನಿರ್ದೇಶನದಂತೆ  ಅಬಕಾರಿ ಉಪ ಅಧೀಕ್ಷಕರು ನಂಜನಗೂಡು ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಗುರುವಾರ  ಅಬಕಾರಿ ನಿರೀಕ್ಷಕರು ಮತ್ತು ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಹೆಚ್.ಡಿ.ಕೋಟೆ ವಲಯ ರವರು ಕಂದಲಿಕೆ (ತೆಕ್ಕಲು) ಗ್ರಾಮದಲ್ಲಿ ಸ್ಥಳೀಯ ಕಂದಾಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಸಮಕ್ಷಮ ದಾಳಿ ನಡೆಸಿದ್ದಾರೆ. ಈ ವೇಳೆ ರಾಜೇಶ್ ಬಿನ್ ನಿಂಗ ನಾಯಕ ಎಂಬುವನು ತನ್ನ ವಾಸದ ಮನೆಯ ಹಿಂಭಾಗದ ಹಿತ್ತಲಿನಲ್ಲಿ ಸುಮಾರು  3 ಹಸಿ ಗಾಂಜಾ ಗಿಡಗಳನ್ನ ಬೆಳೆದಿರುವುದು (ಒಟ್ಟು ತೂಕ 4.665 kg) ಪತ್ತೆಯಾಗಿದೆ. ಅಲ್ಲದೇ ಅದೇ ಗ್ರಾಮದ ರಮೇಶ ಬಿನ್ ಬೆಟ್ಟನಾಯಕ ಎಂಬುವವನು ತನ್ನ ವಾಸದ ಮನೆಯ ಹಿಂಭಾಗದ ಜಮೀನಿನಲ್ಲಿ 30 ಹಸಿ ಗಾಂಜಾ ಗಿಡಗಳನ್ನು (ಒಟ್ಟು ತೂಕ 17kg)ಬೆಳೆದಿರುವುದನ್ನು ಪತ್ತೆ ಹಚ್ಚಿ ,ಇಬ್ಬರು ಆರೋಪಿಗಳನ್ನು ದಸ್ತಗಿರಿ ಪಡಿಸಿ   NDPS ಕಾಯ್ದೆ ಕಲಂ 8b ,20a,20b(1), 25 ,60 …

Read More

ಕೊರಟಗೆರೆ : ಶಿಕ್ಷಕ ವೃತ್ತಿ ಪುಣ್ಯದ ಕೆಲಸ. ರಾಜಕೀಯ ಸ್ಥಿತಿಗತಿಯಲ್ಲಿ ಶಿಕ್ಷಕರು ಪ್ರಶಸ್ತಿಗಳಿಸುವುದು ಸುಲಭದ ಮಾತಲ್ಲ, ಸಮುದಾಯದ ಪ್ರೌಢಶಾಲಾ ಶಿಕ್ಷಕರೊಬ್ಬರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಪಡೆದಿರುವುದು ನಮ್ಮ ಹೆಮ್ಮೆ ಎಂದು ಸಮುದಾಯದ ಮುಖಂಡ ಈರಣ್ಣ ತಿಳಿಸಿದರು. ಕೊರಟಗೆರೆಯ ಯಾದವ ಗೊಲ್ಲ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಬೀಳ್ಕೊಡುಗೆ ಮತ್ತು ಅಭಿನಂದನೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಸಮುದಾಯದ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಶಿಕ್ಷಕರ ಘಟಕಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು. ಲೋಕೋಪಯೋಗಿ ಇಲಾಖೆಯ ಎಇಇ ಆಗಿ ಅಧಿಕಾರ ಸ್ವೀಕರಿಸಿದ ದೀಪಕ್ ಅವರಿಗೆ ಸಮುದಾಯದ ಮುಖಂಡರು ವಿಶೇಷವಾಗಿ ಸ್ವಾಗತಿಸಿದ್ದು, ಮತ್ತೋರ್ವ ಸಮುದಾಯದ ಸರ್ಕಾರಿ ಅಧಿಕಾರಿ ನಾಗರಾಜು ಇಲ್ಲಿನ ತೋಟಗಾರಿಗೆ ಇಲಾಖೆಯಲ್ಲಿ 15 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲಾ ಸಮುದಾಯ ಜನರ ಪ್ರೀತಿ, ವಿಶ್ವಾಸಗಳಿಸಿ ಈಗ ಪಾವಗಡಕ್ಕೆ ವರ್ಗಾವಣೆ ಯಾಗಿದ್ದಾರೆ ಎಂದು ಹೇಳಿ ಅಭಿನಂದನೆ ಸಲ್ಲಿಸಿ ಬೀಳ್ಕೋಡುಗೆ ನೀಡಿದರು. ರಂಗಭೂಮಿ ಕಲಾವಿದ…

Read More

ಸರಗೂರು:  ಸರ್ಕಾರ ಪ್ರತಿ ಕುಟುಂಬದಲ್ಲಿರುವ ಅರ್ಹರಿಗೆ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಅನುಮೋದನೆ ಪತ್ರವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿ ಮಾಡಿದೆ. ಅರ್ಹರು ಇದರ ಸದುಪಯೋಗ ಪಡೆದು ಕೊಳ್ಳಬೇಕು ಎಂದು ರಾಜಸ್ವ ನಿರೀಕ್ಷಕ ರವಿಚಂದ್ರನ್ ತಿಳಿಸಿದರು. ತಾಲೂಕಿನ ಇಟ್ನ ಗ್ರಾಪಂ ವ್ಯಾಪ್ತಿಯ ಇಟ್ನ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ಕಂದಾಯ ಇಲಾಖೆ ವತಿಯಿಂದ ಆಯೋಜಿಸಿದ್ದ ಗ್ರಾಪಂ ಮಟ್ಟದ ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಶುಕ್ರವಾರ ದಂದು ಹಮ್ಮಿಕೊಂಡಿದ್ದು ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾವಿರಾರು ಕೋಟಿ ರೂ. ಸಾಮಾಜಿಕ ಭದ್ರತಾ ಯೋಜನೆಯಲ್ಲಿ ಅನುದಾನ ಬಿಡುಗಡೆಗೊಳಿಸುತ್ತಿದೆ. ಆದರೆ ಇದು ಸಮರ್ಪಕವಾಗಿ ವಿತರಣೆ ಯಾಗುತ್ತಿಲ್ಲ ಎಂಬ ಕಾರಣದಿಂದ ಪ್ರತಿ ತಿಂಗಳ 15 ರೊಳಗೆ ಜನರ ಬಳಿ ಹೋಗಿ ಅರ್ಹರನ್ನು ಗುರುತಿಸಿ ಮನೆ ಬಾಗಿಲಿಗೆ ಪಿಂಚಣಿ ಅನು ಮೋದನೆ ಪತ್ರ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಕಂದಾಯ ನಿರೀಕ್ಷಕರು ಗ್ರಾಮಲೆಕ್ಕಿಗರಿಗೆ ತಮ್ಮ ಅರ್ಜಿ ಸಲ್ಲಿಸಬಹುದು. ಸ್ಥಳೀಯ ಮುಖಂಡರು ಅರ್ಹರನ್ನು ಗುರುತಿಸಲು ಇಲಾಖೆ…

Read More

ಔರಾದ:  ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ್ ಬದೋಲೆ ಅವರು ಗುರುವಾರ ಪಟ್ಟಣದ ಸರ್ಕಾರಿ ಶಾಲೆಗೆ ಭೇಟಿ ನೀಡಿ ಶಾಲಾ ಮಕ್ಕಳ ಸಮಸ್ಯೆಯ ಮಾಹಿತಿ ಪಡೆದುಕೊಂಡರು.1ನೇ ತರಗತಿಯಿಂದ ಪಿಯುಸಿವರೆಗಿನ ಈ ಶಾಲಾ ಪರಿಸರ ನೋಡಿ ಅಚ್ಚರಿಪಟ್ಟರು. ಸ್ವತಃ ಕೆಸರಿನಲ್ಲಿ ಓಡಾಡಿ ಮಕ್ಕಳು ಹೇಗೆ ಇಲ್ಲಿ ಬಂದು ಹೋಗುತ್ತಾರೆ? ಕನಿಷ್ಠ ಸ್ವಚ್ಛತೆ ಮಾಡಲು ಬರುವುದಿಲ್ಲವೇ ಎಂದು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಈ ಶಾಲಾ ಆವರಣದಲ್ಲಿ 2 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದಾರೆ, ಅವರಿಗೆ ಬಂದು ಹೋಗಲು ರಸ್ತೆ ವ್ಯವಸ್ಥೆ ಏಕೆ ಆಗಿಲ್ಲ? ಬರೀ ಕಟ್ಟಡ ಕಟ್ಟಿದರೆ ಏನು ಪ್ರಯೋಜನ? ಎಂದು ಅಸಮಾಧಾನ ಹೊರ ಹಾಕಿದರು. ವಿದ್ಯಾರ್ಥಿಗಳಿಗೆ ಸಮರ್ಪಕ ಶೌಚಾಲಯ ಇಲ್ಲದಿರುವುದು ಕಂಡು ಈ ಬಗ್ಗೆ ಕೆಕೆಆರ್ ಡಿಬಿಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ತಿಳಿಸಿದರು. ಶೌಚಾಲಯ ಸೇರಿದಂತೆ ಮಕ್ಕಳಿಗೆ ಮೂಲಕ ಸೌಲಭ್ಯ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ. ಈ ಬಗ್ಗೆ ಕಾಳಜಿ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ ಅವರಿಗೆ ಸೂಚಿಸಿದರು. ತಾಪಂ ಇಒ ಕಿರಣ…

Read More

ಬೀದರ್: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಔರಾದ್ ತಾಲ್ಲೂಕಿನಲ್ಲೇ ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಆರೋಗ್ಯ ಅಧಿಕಾರಿಯನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಯುವ ಘಟಕ ಆಗ್ರಹಿಸಿದೆ. ಯುವ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸಲ್ಲಿಸಿದರು. ತಾಲ್ಲೂಕು ಆರೋಗ್ಯ ಅಧಿಕಾರಿ, ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ, ಚಿಂತಾಕಿ, ವಡಗಾಂವ್ ಪಿಎಸಿ ಆಡಳಿತ ಅಧಿಕಾರಿ ಹುದ್ದೆಗಳನ್ನು ಒಬ್ಬರೇ ನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಪಟ್ಟಣದಲ್ಲಿ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಮ್ಮ ಆಸ್ಪತ್ರೆಗೆ ಹೋಗಲು ತಿಳಿಸುತ್ತಿದ್ದಾರೆ ಎಂದು ಆಪಾದಿಸಿದರು. ಔರಾದ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ಹೆರಿಗೆಗೆ ತಲಾ ರೂ. 4 ಸಾವಿರ ಪಡೆಯುತ್ತಿದ್ದಾರೆ. ತಾಲ್ಲೂಕು ಆರೋಗ್ಯ ಅಧಿಕಾರಿ  ಗಮನಕ್ಕೆ ಇದ್ದರೂ ಅವರು ನಿರ್ಲಕ್ಷಿಸುತ್ತಿದ್ದಾರೆ ಎಂದು ಆಪಾದಿಸಿದರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ರಕ್ತ ಪರೀಕ್ಷೆಗೆ ಹಣ ಪಡೆಯಲಾಗುತ್ತಿದೆ ಶವ…

Read More

ಸರಗೂರು: ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಒಂದು ಕೋಟಿಗೂ ಹೆಚ್ಚು ರೂ.ಗಳ ಅಧಿಕ ಮೊತ್ತದ ಹಣ ಲಪಟಾಯಿಸಿರುವ ಸಂಬಂಧ ಖಾತೆದಾರರು ದೂರು ನೀಡಿ ನಾಲ್ಕು ತಿಂಗಳುಗಳೇ ಕಳೆದರೂ ಠೇವಣಿ ಹಣ ಕೊಡಿಸಿಲ್ಲ ಎಂದು ಆರೋಪಿಸಿ ಖಾತೆದಾರರು ಪ್ರತಿಭಟನೆ ನಡೆಸಿದರು. ಪಟ್ಟಣದ ಒಂದನೇ ಮುಖ್ಯ ರಸ್ತೆಯ ಎಸ್‌ ಬಿಐ ಬ್ಯಾಂಕ್ ಕಚೇರಿ ಪಕ್ಕದಲ್ಲಿರುವ ಅಂಚೆ ಕಚೇರಿಗೆ ಮುತ್ತಿಗೆ ಹಾಕಿದ ಖಾತೆದಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಕಚೇರಿಗೆ ಬೀಗ ಜಡಿದು, ಸಿಬ್ಬಂದಿಯನ್ನು ಹೊರಹಾಕಿ ನ್ಯಾಯ ಕೊಡಿಸುವಂತೆ ಒತ್ತಾಯಿಸಿದರು. ಅಂಚೆ ಕಚೇರಿಯಲ್ಲಿನ ಅಂಚೆ ಶಾಖಾ ಪಾಲಕ(ಪೋಸ್ಟಲ್ ಅಸಿಸ್ಟೆಂಟ್) ದೀಪಕ್ ಎಂಬುವವರು ಅಂಚೆ ಕಚೇರಿಯ ವಿವಿಧ ಖಾತೆಗಳಿಂದ ನಕಲಿ ಸಹಿ ಬಳಸಿ, ಲಕ್ಷಾಂತರ ರೂ. ಲೂಟಿ ಮಾಡಿದ್ದಾನೆ ಎಂದು ಹಣ ಕಳೆದುಕೊಂಡ ಖಾತೆದಾರರುಗಳು ದೂರಿದ್ದಾರೆ. ಪ್ರಕರಣ ಬೆಳಕಿಗೆ ಬಂದು ಹಲವು ತಿಂಗಳುಗಳೇ ಕಳೆದಿವೆ. ಹಣ ಲಪಟಾಯಿಸಿರುವವರ ವಿರುದ್ಧ ದೂರು ನೀಡಿದರೂ ಇಲ್ಲಿಯವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದರು. ಅಂಚೆ…

Read More

ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಮನುಷ್ಯನ ಮೊಣಕಾಲಿನ ಎತ್ತರಕ್ಕೆ ರಸ್ತೆಯಲ್ಲಿ ಗುಂಡಿಗಳೇ ಇವೆ, ಅನೇಕ ಶಾಲಾ ಮಕ್ಕಳು ವಿಧಿಯಿಲ್ಲದೇ ಈ ರಸ್ತೆಯಲ್ಲಿಯೇ ಮುಂದೆ ಸಾಗಬೇಕು, ಮಳೆ ಬಂದರೆ ಬಿದ್ದೆದ್ದು ಪ್ರಯಾಣ  ಮಾಡುವಂತಹ ಅನಿವಾರ್ಯತೆ ಇದೆ. ಈ ಸಮಸ್ಯೆ ಹಲವು ವರ್ಷಗಳಿಂದ ಹಾಗೇ ಉಳಿದಿದ್ದರೂ ಸಹ ದುರಸ್ತಿ ಕಾರ್ಯಕ್ಕೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಮುಂದಾಗಿಲ್ಲ ಎಂದು ಗ್ರಾಮೀಣ ಭಾಗದ ಜನರು ಹಿಡಿಶಾಪ ಹಾಕುತ್ತಿದ್ದಾರೆ. ತಾಲ್ಲೂಕಿನ ಹೊಳವನಹಳ್ಳಿ ಕ್ಯಾಮೇನಹಳ್ಳಿ ಮಧ್ಯೆ ಇರುವಂತಹ ಶನಿಮಹಾತ್ಮ ದೇವಸ್ಥಾನದಿಂದ ಬೋಮ್ಮಲದೇವಿಪುರ ಗ್ರಾಮದವರೆಗೂ ನೂರಾರು ಗುಂಡಿಗಳು ರಸ್ತೆಯಲ್ಲಿ ಕಾಣಬಹುದಾಗಿದೆ. ಸುಮಾರು ವರ್ಷಗಳಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೂ ಸಹ ಸಂಬಂಧಪಟ್ಟ ಅಧಿಕಾರಿಗಳು ತನಗೂ ಅದಕ್ಕೂ ಸಂಬಂಧ ಇಲ್ಲ ಎನ್ನುವ ರೀತಿಯಲ್ಲಿ ಕಚೇರಿಯಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂದು ಹೊಳವನಹಳ್ಳಿ ಗ್ರಾಮಸ್ಥರು ದೂರಿದ್ದಾರೆ. ಹೊಳವನಹಳ್ಳಿಯಿಂದ 50ಕ್ಕೂ ಹೆಚ್ಚು ಗ್ರಾಮಗಳಿಗೆ ಕಲ್ಪಿಸುವ ಈ ರಸ್ತೆಯಲ್ಲಿ ಮೊಣಕಾಲು ಉದ್ದದ ಗುಂಡಿಗಳು ಕಾಣಬಹುದಾಗಿದೆ. ಒಂದು ಬೈಕ್ ಹೋಗಲಾರದಷ್ಟು ಗುಂಡಿಗಳು ಬಿದ್ದಿವೆ. ಇನ್ನೂ ರಸ್ತೆಯಲ್ಲಿ ಸಾಕಷ್ಟು ಅಪಘಾತಗಳು…

Read More

ಬೀದರ್: ಮನೆಯಲ್ಲಿ ಆಟವಾಡುತಿದ್ದ 6 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ  ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದ್ದು, ಮಂಗಳವಾರ ಪ್ರಕರಣ ದಾಖಲಾಗಿದೆ. ಸೆ. 6ರಂದು ಬಾಲಕಿಯನ್ನು ಮನೆಯಲ್ಲಿ ಬಿಟ್ಟು ಪಾಲಕರು ಜಮೀನಿಗೆ ತೆರಳಿದ್ದರು. ಈ ವೇಳೆ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ 24 ವರ್ಷದ ಯುವಕನೊಬ್ಬ ಸಂಜೆ ಸಮಯದಲ್ಲಿ ಬಾಲಕಿಯನ್ನು ಪುಸಲಾಯಿಸಿ ಆಕೆಯ ಮನೆಯಿಂದ ತನ್ನ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ  ಎಸಗಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಆಘಾತಕ್ಕೆ ಒಳಗಾಗಿದ್ದ ಪಾಲಕರು ಸೆ.9 ರಂದು ದೂರು ನೀಡಿದ್ದು, ಮುಡಬಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More