Subscribe to Updates
Get the latest creative news from FooBar about art, design and business.
- ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್
- ರೇಣುಕಾಸ್ವಾಮಿ ಕೊಲೆ ಕೇಸ್: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
- ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
- ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್ ಆರ್ ಟಿಸಿ ಬಸ್ ನ ಬ್ಯಾಟರಿ ಕಳವು!
- ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
- ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
- ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
- ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
Author: admin
ತುಮಕೂರು: ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆಯನ್ನು ಒದಗಿಸಿ ಅವರ ಹಿತರಕ್ಷಣೆ ಮಾಡುವುದರ ಮೂಲಕ ಗಂಡಸ್ಥನ ಪ್ರದರ್ಶಿಸಬೇಕೆಂದು ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ನಗರದ ಹಿರಿಯ ಕಾಂಗ್ರೆಸ್ ಮುಖಂಡ ಇಕ್ಬಾಲ್ ಅಹಮದ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆ ಹಾಗೂ ಸೇವಾ ವಿಲೀನತೆಗಾಗಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿ, ಅತಿಥಿ ಉಪನ್ಯಾಸಕರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದ್ದು, ಸುಮಾರು ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದರೂ ಸರ್ಕಾರ ಅವರೊಂದಿಗೆ ಮಾತನಾಡುವ ಕನಿಷ್ಠ ಸೌಜನ್ಯ ತೋರಿಲ್ಲ. ಈ ಮಧ್ಯದಲ್ಲಿ ಹೊಸದೊಂದು ಆದೇಶ ಹೊರಡಿಸಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆದು ಆಳುವ ನೀಚ ನಡೆಗೆ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಉನ್ನತ ಶಿಕ್ಷಣ ಸಚಿವರು ವೇದಿಕೆಯ ಮೇಲೆ ಸೂಟು ಬೂಟು ಧರಿಸಿ, ಗಂಡಸ್ಥನದ ಬಗ್ಗೆ ವೀರಾವೇಶವಾಗಿ ಮಾತನಾಡುತ್ತಾರೆ. ಅಷ್ಟು ಅಭಿವೃದ್ದಿಯ ಬಗ್ಗೆ ಕಾಳಜಿ ಹೊಂದಿರುವವರು ಅತಿಥಿ ಉಪನ್ಯಾಸಕರ ಹಿತ…
ಬೆಂಗಳೂರು: ಚಿನ್ನದ ಗಟ್ಟಿ ಖರೀದಿಸಲು ಚಿಕ್ಕಬಳ್ಳಾಪುರದಿಂದ ನಗರಕ್ಕೆ ಬಂದಿದ್ದ ಜ್ಯುವೆಲ್ಲರಿ ಮಾಲೀಕನ ಬ್ಯಾಗಿಗೆ ಬ್ಲೇಡ್ ಹಾಕಿದ ಚೋರರು 3.57 ಲಕ್ಷ ರೂ. ಹಣ ಹಾಗೂ 28 ಗ್ರಾಂ ಆಭರಣ ಕಳ್ಳತನ ಮಾಡಿರುವ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಮೆಹರಾಮ್ ಎಂಬುವರು ಚಿನ್ನದ ಗಟ್ಟಿ ಖರೀದಿಸಲು ಜ.10ರಂದು ಹಣದೊಂದಿಗೆ ಬೆಂಗಳೂರಿಗೆ ಬಂದಿದ್ದಾರೆ. ಅಂದು ಮಧ್ಯಾಹ್ನ ಎಸ್‍ಪಿ ರಸ್ತೆಯ ಎಚ್‍ಕೆಕೆ ರಸ್ತೆಯಲ್ಲಿ ನಡೆದುಕೊಂಡು ಇವರು ಹೋಗುತ್ತಿದ್ದಾಗ ಜನಜಂಗುಳಿ ಮಧ್ಯೆ ಖದೀಮ ಇವರ ಬ್ಯಾಗನ್ನು ಬ್ಲೇಡ್‍ನಿಂದ ಕೊಯ್ದು ಹಣ ಹಾಗೂ ಆಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ಕೆಲಸ ಸಮಯದ ಬಳಿಕ ಬ್ಯಾಗ್ ನೋಡಿಕೊಂಡಾಗ ಬ್ಯಾಗ್‍ನ ಒಂದು ಬದಿ ಕೊಯ್ದಿರುವುದು ಗಮನಿಸಿ ತೆಗೆದು ನೋಡಿದಾಗ ಅದರಲ್ಲಿದ್ದ ಹಣ ಹಾಗೂ 28 ಗ್ರಾಂ ಚಿನ್ನದ ಸರ ಕಳ್ಳತನವಾಗಿರುವುದು ಕಂಡುಬಂದಿದೆ.ತಕ್ಷಣ ಮೆಹರಾಮ್ ಅವರು ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆ ಸ್ಥಳದ ಸುತ್ತಮುತ್ತಲಿನ ಸಿಸಿ ಟಿವಿ ಪರಿಶೀಲಿಸಿ…
ಮಾವೋವಾದಿ ಪೀಡಿತ ರಾಯಗಢದ ಜನರ ಏಳಿಗೆಗೆ ಶ್ರಮಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪದ್ಮಶ್ರೀ ಪುರಸ್ಕøತೆ ಶಾಂತಿ ದೇವಿ ಅವರು ಒಡಿಶಾದ ಗುನುಪುರ್‍ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿ ಕೋವಿಂದ್ ಅವರು ಟ್ವಿಟ್ ಮೂಲಕ ಸಂತಾಪ ಕೋರಿದ್ದು, ಮಹಾತ್ಮ ಗಾಂಧೀಜಿಯವರ ಅನುಯಾಯಿಗಳಾಗಿದ್ದ ಶಾಂತಿದೇವಿ ಅವರು ಸುಮಾರು 6 ದಶಕಕ್ಕೂ ಹೆಚ್ಚು ಕಾಲ ಸಾಮಾಜಿಕ ಸೇವೆಗಳಲ್ಲಿ ಗುರುತಿಸಿಕೊಂಡಿದ್ದು, ಬಡವರು ಹಾಗೂ ಹಿಂದು ಳಿದವರ ಧ್ವನಿಯಾಗಿದ್ದ ಅವರು ತಳಮಟ್ಟ ಜನಾಂಗದ ಹೆಣ್ಣು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಒತ್ತು ಕೊಟ್ಟಿದ್ದ ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯು ಲಭಿಸಿದೆ. ಅವರು ನಮ್ಮನ್ನಗಲಿದ್ದರೂ ಕೂಡ ಅವರ ಸೇವೆ ಸದಾ ಅಮರವಾಗಿರುತ್ತದೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ನ್ಯಾಯ ಯುತ ಹಾಗೂ ಆರೋಗ್ಯಕರ ಸಮಾಜವನ್ನು ರೂಪಿಸುವಲ್ಲಿ ಶಾಂತಿ ದೇವಿ ಜೀ ಅವರ ಸೇವೆ ಅಪಾರ, ಬಡವರು ಹಾಗೂ ಹಿಂದುಳಿದವರ ಧ್ವನಿಯಾಗಿ ಅವರು ಸದಾ ಜನರ ಮನಸ್ಸಿನಲ್ಲಿರುತ್ತಾರೆ, ಅವರ ನಿಧನದಿಂದ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು…
ಹೈದ್ರಾಬಾದ್: ಸಂಕ್ರಾಂತಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕೊಬ್ಬಿದ ಹೋರಿಗಳನ್ನು ಹಿಡಿಯಲು ಹೋದ 30 ಮಂದಿಗೆ ಗಾಯಗಳಾಗಿರುವ ಘಟನೆ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ. ಪಶುವಲ ಪಂಡಾಗದಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ನೆಲ್ಲೂರು, ಕಡಪ, ಚಿತ್ತೂರು ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಿಂದಲೂ ಸ್ಪರ್ಧಾಳುಗಳು ಪಾಲ್ಗೊಂಡು ಕೊಬ್ಬಿದ ಹೋರಿಗಳನ್ನು ಬೆದರಿಸುವ ಹಾಗೂ ಹಿಡಿಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ತೆಲುಗುದೇಶಂನ ಮುಖ್ಯಸ್ಥ ಚಂದ್ರಬಾಬುನಾಯ್ಡು ಅವರು ಕೂಡ ಕೊಪ್ಪಂ ವಿಧಾನಸಭಾ ಕ್ಷೇತ್ರದ ಗುಂಡುಪಾಳ್ಯ ಮಂಡಲ್‍ನಲ್ಲಿ ಕೂಡ ಜಲ್ಲಿಕಟ್ಟು ಕಾರ್ಯಕ್ರಮವನ್ನು ಆಯೋಜಿಸಿದ್ದರು.ಇತ್ತೀಚೆಗೆ ತಮಿಳುನಾಡಿನ ಮಧುರೈನ ಅವನಿಪುರಂನಲ್ಲಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ 80ಕ್ಕೂ ಹೆಚ್ಚು ಮಂದಿ ಗಾಯಗೊಂಡು ಒಬ್ಬರು ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದು. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತುಮಕೂರು: ಅತಿಥಿ ಉಪನ್ಯಾಸಕರಿಗೆ ನೀಡುತ್ತಿದ್ದ ವೇತನವನ್ನು ಹೆಚ್ಚಿಸುವ ನೆಪದಲ್ಲಿ ಅರ್ಧದಷ್ಟು ಶಿಕ್ಷಕರಿಗೆ ಕೆಲಸವಿಲ್ಲದಂತೆ ಮಾಡಿ, ಸರಕಾರ ಇದುವರೆಗೂ ಕೆಲಸ ಮಾಡಿದ ಅತಿಥಿ ಉಪನ್ಯಾಸಕರನ್ನು ಸಾವಿನ ದವಡೆಗೆ ತಳ್ಳಿದೆ. ಅದಕ್ಕಾಗಿ ಎಲ್ಲಾ ಶಿಕ್ಷಕರು ದಯಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತಿರುವುದಾಗಿ ಅತಿಥಿ ಉಪನ್ಯಾಸಕ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕಳೆದ 22 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರಲ್ಲಿ ಒಡೆದು ಆಳುವ ನೀತಿಯನ್ನು ರಾಜ್ಯ ಸರಕಾರ ಸಮಸ್ಯೆ ಪರಿಹಾರದ ನೆಪದಲ್ಲಿ, ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ. ಇದುವರೆಗೂ ಇದ್ದ 8 ಗಂಟೆಗಳ ಕಾರ್ಯಾಭಾರವನ್ನು 15 ಗಂಟೆಗಳಿಗೆ ಹೆಚ್ಚಿಸುವ ಮೂಲಕ ಸುಮಾರು 7,500 ಸಾವಿರ ಅತಿಥಿ ಉಪನ್ಯಾಸಕರಿಗೆ ಕೆಲಸವಿಲ್ಲದಂತೆ ಮಾಡಿದ್ದಾರೆ.ಇದು ರಾಜ್ಯ ಸರಕಾರದ ಸಂವಿಧಾನ ವಿರೋಧಿ ಧೋರಣೆಯಾಗಿದೆ ಎಂದರು. ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವರಾದ ಅಶ್ವಥನಾರಾಯಣ ಅವರು, ಏಕಾಎಕಿ ಸುದ್ದಿಗೋಷ್ಠಿ ನಡೆಸಿ, ಡಾ.ಕುಮಾರನಾಯ್ಕ್ ವರದಿ ಆಧರಿಸಿ, ಅತಿಥಿ ಉಪನ್ಯಾಸಕರ ವೇತನವನ್ನು ಈಗ ನೀಡುತ್ತಿರುವುದಕ್ಕಿಂತ ಮೂರು ಪಟ್ಟು ಹೆಚ್ಚಿಸಲಾಗಿದೆ. ಕಾರ್ಯಾಗಾರವನ್ನು 8…
ಕೇಂದ್ರ ಸರ್ಕಾರದ ಅೀನದಲ್ಲಿರುವ ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‍ಐಒಎಸ್) ತನ್ನ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, 10ನೇ ತರಗತಿಯಲ್ಲಿ ಶೇ.57ರಷ್ಟು, 12ನೇ ತರಗತಿಯಲ್ಲಿ ಶೇ.42ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. 2021ರ ನವೆಂಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ 10ನೇ ತರಗತಿ (ಎಸ್‍ಎಸ್‍ಎಲ್‍ಸಿ)ಗೆ ಒಟ್ಟು 57,258 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಪರೀಕ್ಷೆಗೆ ಹಾಜರಾಗಿದ್ದವರ ಪೈಕಿ 51154 ಪೈಕಿ 29,157 ಮಂದಿ ತೇರ್ಗಡೆಯಾಗಿದ್ದಾರೆ.ಇದರಲ್ಲಿ ವಿದ್ಯಾರ್ಥಿಗಳು ಶೇ.57.53ರಷ್ಟು, ವಿದ್ಯಾರ್ಥಿನಿಯರು ಶೇ.55.74 ಫಲಿತಾಂಶ ಪಡೆದಿದ್ದಾರೆ. ತೃತೀಯ ಲಿಂಗಿಗಳು 13 ಜನ ಪರೀಕ್ಷೆಗೆ ಹಾಜರಾಗಿ ಎಂಟು ಮಂದಿ ತೇರ್ಗಡೆಯಾಗಿದ್ದಾರೆ.ಹಿರಿಯ ಸೆಕೆಂಡರಿ 12ನೇ ತರಗತಿಗೆ 82,043 ಮಂದಿ ನೋಂದಣಿ ಮಾಡಿಸಿಕೊಂಡಿದ್ದರು. ಅವರಲ್ಲಿ 80,399 ಮಂದಿ ಪರೀಕ್ಷೆಗೆ ಹಾಜರಾಗಿ, 34278 ಮಂದಿ ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳು ಶೇ.42.94, ವಿದ್ಯಾರ್ಥಿನಿಯರು ಶೇ.41.97ರಷ್ಟು ಫಲಿತಾಂಶ ಪಡೆದಿದ್ದಾರೆ.ತೃತೀಯ ಲಿಂಗಿಗಳ ಪೈಕಿ ಎಂಟು ನೋಂದಣಿ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಿದ್ದರು, ಆರು ಮಂದಿ ಉತ್ತೀರ್ಣರಾಗಿದ್ದಾರೆ ಎಂದು ಎನ್‍ಐಒಎಸ್ ಮಂಡಳಿ ತಿಳಿಸಿದೆ.ಫಲಿತಾಂಶವನ್ನು ಸಂಸ್ಥೆಯ ವೆಬ್ ಸೈಟ್ ನಿಂದ ಅಥವಾ…
ಚೆನ್ನೈ: ಕೊರೊನಾ ಹೆಚ್ಚಾಗಿರುವುದರಿಂದ ನೈಟ್ ಕಫ್ರ್ಯೂ ಹಾಗೂ ವೀಕೆಂಡ್ ಕರ್ಫ್ಯೂಗಳನ್ನು ಜಾರಿ ಮಾಡಿದ್ದರೂ ಕೂಡ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುವ ಸಾರ್ವಜನಿಕರಿಂದ 3.45 ಕೋಟಿ ರೂ.ಗಳನ್ನು ಪೊಲೀಸರು ದಂಡದ ರೂಪದಲ್ಲಿ ಸಂಗ್ರಹಿಸಿದ್ದಾರೆ. ಪೊಲೀಸ್ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ ಮಾಸ್ಕ್ ಧರಿಸದೆ ಉಡಾಫೆ ತೋರಿಸುತ್ತಿದ್ದ 1.64 ಲಕ್ಷ ಮಂದಿ, ಸಾಮಾಜಿಕ ಅಂತರ ಕಾಪಾಡದ 2,000 ಜನರು, ಹಾಗೂ ಅನಗತ್ಯವಾಗಿ ಗುಂಪು ಗೂಡಿದ್ದ 1,552 ಮಂದಿಗೆ ದಂಡ ವಿಧಿಸಲಾಗಿದೆ. ಇನ್ನು ನೈಟ್ ಕರ್ಫ್ಯೂ ಇದ್ದರೂ ಕೂಡ ಅಗತ್ಯ ದಾಖಲೆ, ಮಾಹಿತಿ ನೀಡದೆ ಬೇಕಾಬಿಟ್ಟಿ ಅಡ್ಡಾಡುತ್ತಿದ್ದ ಸವಾರರು ಹಾಗೂ ಚಾಲಕರನ್ನು ತಡೆದು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು ಚೆನ್ನೈ ನಗರ ಒಂದರಲ್ಲೇ 300 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋವಿಡ್ ನಿಯಮಗಳನ್ನು ಮೀರಿ ಸಾರ್ವಜನಿಕರ ಸ್ಥಳಗಳಲ್ಲೇ ಮಾಸ್ಕ್ ಧರಿಸದೆ ಓಡಾಡುತ್ತಿರುವುದರಿಂದ ಪೊಲೀಸರು ದಂಡ ವಿಧಿಸುತ್ತಿದ್ದು ಚೆನ್ನೈ ನಗರ ಒಂದರಲ್ಲೇ 43,417 ಮಂದಿಯಿಂದ 86 ಲಕ್ಷ ರೂ.ಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸ್ ಇಲಾಖೆಯು ಮಾಹಿತಿ ನೀಡಿದೆ. ವರದಿ:…
ರಾಜ್ಯದಲ್ಲಿ ಕೈಗಾರಿಕೆಗಳನ್ನು ಉತ್ತೇಜಿಸಿ ಪ್ರೋ ತ್ಸಾಹಿಸಲು ಮುಂದಾಗಿರುವ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 5890.27 ಎಕರೆ ಜಮೀನನ್ನು ಉದ್ಯಮಿಗಳಿಗೆ ಮೀಸಲಿಟ್ಟಿದೆ. ರಾಜ್ಯದಲ್ಲಿ ಹೊಸದಾಗಿ ಕೈಗಾರಿಕೆ ಆರಂಭಿಸಲು ಬರುವ ಉದ್ಯಮಿಗಳು ತಾವು ಬಯಸುವ ಜಿಲ್ಲೆಗಳಲ್ಲಿ ತತ್‍ಕ್ಷಣವೇ ಜಮೀನು ನೀಡಲು 5890.27 ಎಕರೆ ಜಮೀನನ್ನು ನೀಡಲು ಸಿದ್ದತೆ ನಡೆಸಿದೆ. ಸುಮಾರು 2582734 ಎಕರೆಯಷ್ಟು ಭೂಮಿಯನ್ನು ಕೆಐಎಡಿಬಿಯು ಭೂ ಸ್ವಾೀಧಿನ ಮಾಡಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, 14,200 ಎಕರೆ ಭೂಮಿಯನ್ನು ಸ್ವಾೀಧಿನಪಡಿಸಿಕೊಳ್ಳಲು ಮುಂದಾಗಿದೆ. ಈ ವರ್ಷದ ನವೆಂಬರ್ ತಿಂಗಳಿನಲ್ಲಿ ಬಹುನಿರೀಕ್ಷಿತ ಜಾಗತಿಕ ಹೂಡಿಕೆದಾರರ ಸಮಾವೇಶ ಜರುಗಲಿದ್ದು, ರಾಜ್ಯಕ್ಕೆ ದೇಶ, ವಿದೇಶಗಳಿಂದ ರಾಜ್ಯಕ್ಕೆ ದೊಡ್ಡ ದೊಡ್ಡ ಉದ್ಯಮಿಗಳು ಆಗಮಿಸುವ ನಿರೀಕ್ಷೆಯಿದೆ.ಈಗಿನ ಉದ್ಯಮಿಗಳಿಗೆ ತತ್‍ಕ್ಷಣವೇ ಒಡಂಬಡಿಕೆ ಪತ್ರಕ್ಕೆ ಸಹಿ ಹಾಕಿದ ತಕ್ಷಣವೇ ಅವರು ನಿರೀಕ್ಷಿಸಿದ ಕಡೆ ಭೂಮಿ, ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದರೆ ಮಾತ್ರ ಬಂಡವಾಳ ಹೂಡಿಕೆ ಮಾಡಲು ಮುಂದೆ ಬರುತ್ತಾರೆ.ಸ್ವಲ್ಪ ವಿಳಂಬವಾದರೆ ಈ ಉದ್ಯಮಿಗಳನ್ನು ಬೇರೆ ರಾಜ್ಯದವರು ಸೆಳೆಯುತ್ತಾರೆ. ಹಿಂದಿನ ಕೆಲವು…
ತಿಪಟೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಗರಸಭೆ ತಿಪಟೂರು , ಸಮಗ್ರ ಶಿಶು ಅಭಿವೃದ್ಧಿ ಯೋಜನೆ ತಿಪಟೂರು ಹಾಗೂ ಗ್ರಾಮ ಪಂಚಾಯಿತಿ ಈಚನೂರು ವತಿಯಿಂದ ಆಯೋಜಿಸಲಾಗಿದ್ದ ಅಂಗನವಾಡಿ ಕಟ್ಟಡಗಳನ್ನು ಸಚಿವ ಬಿ.ಸಿ.ನಾಗೇಶ್ ಉದ್ಘಾಟಿಸಿದರು. ಆರ್. ಐ. ಡಿ. ಎಫ್. -22 ರ ಯೋಜನೆಯಡಿಯಲ್ಲಿ ರೂ 9.17 ಲಕ್ಷ ಅಂದಾಜು ಮೊತ್ತ ಅನುದಾನದಲ್ಲಿ ತಿಪಟೂರು ನಗರಸಭಾ ವ್ಯಾಪ್ತಿಯ ತಮಿಳು ಕಾಲನಿ-ಬಿ, ಚಿಕ್ಕಲಕ್ಕಿಪಾಳ್ಯ ಹಾಗೂ ಈಚನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿಹಳ್ಳಿ ಕಾವಲು ಅಂಗನವಾಡಿ ಕೇಂದ್ರಗಳ ಕಟ್ಟಡವನ್ನು ನೂತನವಾಗಿ ನಿರ್ಮಿಸಲಾಗಿತ್ತು. ನಗರಸಭೆ ಅಧ್ಯಕ್ಷ ಪಿ. ಜೆ. ರಾಮ್ ಮೋಹನ್, ಉಪಾಧ್ಯಕ್ಷ ಗಣೇಶ್ , ನಗರಸಭಾ ಸದಸ್ಯರಾದ ಲತಾ ಲೋಕೇಶ್ , ಜೈರಾಜು, ಮೋಹನ್ ರಾಜು, ಈಚನೂರು ಗ್ರಾ.ಪಂ. ಅಧ್ಯಕ್ಷೆ ಶೋಭಾ ಎಸ್., ಗ್ರಾಮ ಪಂಚಾಯಿತಿ ಸದಸ್ಯರು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪಿ. ಓಂಕಾರಪ್ಪ, ಹಾಗೂ ಸಿದ್ದೇಶ್ ಇಂಜಿನಿಯರ್ ನಿರ್ಮಿತಿ ಕೇಂದ್ರ ತುಮಕೂರು ಮೊದಲಾದವರು ಇದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ…
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರಿ ನಿಯಮಿತದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆಯಾಗಿದೆ ಎಂದು ನಿಯಮಿತದ ಸಿಇಒ ಮತ್ತು ಅಧ್ಯಕ್ಷರ ವಿರುದ್ಧ ನಿಯಮಿತದ ಆಡಳಿತ ಮಂಡಳಿ ನಿರ್ದೇಶಕ ನಾಗರಾಜ್ ಆರೋಪಿಸಿದರು. ನಗರದ ಸಹಕಾರ ಇಲಾಖೆಯ ಕಚೇರಿ ಮುಂದೆ ಅವರು ಮಾತನಾಡಿದರು. ಇದೇ ವೇಳೆ ಮಾತನಾಡಿದ ಉಪಾಧ್ಯಕ್ಷ ವಿನಯ್ ಮತ್ತು ನಿರ್ದೇಶಕ ಪ್ರಕಾಶ್ ಯಾದವ್, ಸಾಮಾನ್ಯ ಸಭೆಯನ್ನು ಕೇಂದ್ರ ಸ್ಥಾನ ಬಿಟ್ಟು ಅಧ್ಯಕ್ಷರ ಊರಾದ ಕಲ್ಕೆರೆಯಲ್ಲಿ ಗ್ರಾಮ ಸಭೆಯನ್ನು ಆಯೋಜಿಸಿ, ನಿಯಮ ಉಲ್ಲಂಘಿಸಲಾಗಿದೆ. ಆರೋಪ ಸಾಬೀತಾದಲ್ಲಿ ನಿಯಮಿತವನ್ನು ಸೂಪರ್ ಸೀಡ್ ಮಾಡಬೇಕೆಂದು ಅವರು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ಚಂದ್ರಶೇಖರ್ ಮತ್ತು ದೇವಿರಮ್ಮ, ಮಾಜಿ ನಿರ್ದೇಶಕ ನಾಗರಾಜ್ ಹಾಗೂ ಗ್ರಾಮಸ್ಥ ರಾಜಣ್ಣ ಸೇರಿದಂತೆ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy