Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಬೀದರ್: ನಕಲಿ ದಾಖಲೆ ಸೃಷ್ಟಿ ಮಾಡಿ, ಸರಕಾರದ ಅನುದಾನ ದುರುಪಯೋಗ ಮಾಡಿದ್ದಾರೆ ಎಂದು ಆರೋಪಿಸಿ ಇಬ್ಬರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಅವರು ಆದೇಶ ಹೊರಡಿಸಿದ್ದಾರೆ. ತಾಳಮಡಗಿ ಗ್ರಾಮ ಪಂಚಾಯತ್ ನಲ್ಲಿ, ಸರ್ಕಾರದ ಅನುದಾನದಡಿಯಲ್ಲಿ ದುರುಪಯೋಗವಾಗಿದ್ದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ದಾಸ್ತಾನು ವಹಿ, ನಗದು ಪುಸ್ತಕ ಹಾಗೂ ಹಾಜರಾತಿ ಪುಸ್ತಕಗಳನ್ನು ಪರಿಶೀಲನೆ ಮಾಡಲಾಗಿದೆ. ನಗದು ವಹಿಯಲ್ಲಿ ದಿನಾಂಕಗಳು ನಮೂದಿಸಿರುವುದಿಲ್ಲ. ಅನುದಾನವನ್ನು ಪಿಡಿಒ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ದುರುಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಇವರು 15ನೇ ಹಣಕಾಸು ಯೋಜನೆ ಅಡಿಯಲ್ಲಿ 42 ಲಕ್ಷ ರೂ. ಕ್ಕಿಂತ ಹೆಚ್ಚು ಹಾಗೂ ನಿಧಿ–1ರ ಖಾತೆಯಲ್ಲಿ 2 ಲಕ್ಷ ರೂ. ಆರ್ಥಿಕ ದುರ್ನಡತೆ ಎಸಗಿ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ತಾಳಮಡಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶ್ವಿನಿ ಅವರನ್ನು ಅಮಾನತುಗೊಳಿಸಲಾಗಿದೆ. ಹಾಗೆಯೇ ಮಂಗಲಗಿ ಗ್ರಾಮ ಪಂಚಾಯತ್…
ಔರಾದ: ತಾಲೂಕಿನ ಆರೋಗ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ಉತ್ತಮ ಸೇವೆ ಸಲ್ಲಿಸುತ್ತಿದ್ದು, ಅವರ ವಿರುದ್ಧ ವಿನಾಕಾರಣ ಕೆಲ ಸಂಘಟನೆಗಳು ಸುಳ್ಳು ಆರೋಪ ಮಾಡುತ್ತಿವೆ ಎಂದು ಕನ್ನಡ ಸೇನೆ ತಾಲೂಕಾಧ್ಯಕ್ಷರಾದ ಶಿವಶಂಕರ್ ನಿಸ್ಪತೆ ಅವರು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಹೆಸರಿಗೆ ಬರೆದ ಪತ್ರ ತಹಶೀಲ್ದಾರ್ ಮಹೇಶ್ ಪಾಟೀಲ್ ಅವರಿಗೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ಔರಾದ ತಾಲೂಕು ವೈದ್ಯಾಧಿಕಾರಿಗಳಾದ ಡಾ.ಗಾಯತ್ರಿದೇವಿ ಅವರು ತಾಲೂಕಿನಲ್ಲಿ ಸುಮಾರು 18 ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ತೀರಾ ಹಿಂದುಳಿದ ಮತ್ತು ಗಡಿಭಾಗವೆನಿಸಿಕೊಂಡ ನಮ್ಮ ತಾಲೂಕಿನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಾ ತಾಲೂಕಿನ ಜನರ ಮನ ಗೆದ್ದಿದ್ದಾರೆ. ಇವರ ವಿರುದ್ಧ ಷಡ್ಯಂತ್ರ ಮಾಡಿ, ಇವರ ಹೆಸರಿಗೆ ಕಳಂಕ ತಂದು ತಾಲೂಕಿನಿಂದ ವರ್ಗಾವಣೆಗೊಳಿಸಬೇಕೆಂದು ಕೆಲವರು ಪ್ರಯತ್ನಿಸುತ್ತಿದ್ದಾರೆ ಎಂದು ಕನ್ನಡ ಸೇನೆ ತಾಲೂಕ ಅಧ್ಯಕ್ಷರಾದ ಶಿವಶಂಕರ್ ಅವರು ಆರೋಪ ಮಾಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ನೀರು ಹಾಗೂ ಮೂಲಭೂತ ಸೌಕರ್ಯ ಕೇಳಿದ್ದಕ್ಕಾಗಿ ದಲಿತ ಸಮುದಾಯದ (ಆದಿ ಕರ್ನಾಟಕ ಸಮುದಾಯಕ್ಕೆ) ಸೇರಿದ ಆನಂದ್ ಬಿನ್ ರಾಮಾಂಜಿನಪ್ಪ ಎಂಬ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಡೆದಿದೆ. ಪೋಲೆನಹಳ್ಳಿ ಗ್ರಾಮದ ವಾಸಿ ಆನಂದ್ ಅವರು, ಮನೆಯ ಬಳಿ ಇರುವ ಕುಡಿಯುವ ನೀರಿನ ನಲ್ಲಿಯಲ್ಲಿ ನೀರು ಬರುತ್ತಿಲ್ಲ ಹಾಗೂ ಗ್ರಾಮ ಪಂಚಾಯತಿಯಿಂದ ಮನೆ ಮಂಜೂರು ಮಾಡಿ ಕೊಡಿ ಎಂದು ಬಿಲ್ ಕಲೆಕ್ಟರ್ ರಾಮಕೃಷ್ಣಯ್ಯ ಹಾಗೂ ಅವರ ಮಗ ಗ್ರಾಮ ಪಂಚಾಯತಿ ಸದಸ್ಯ ನಾಗೇಶ್ ಅವರ ಮನೆಯ ಬಳಿ ಹೋಗಿ ಆಕ್ರೋಶ ವ್ಯಕ್ತಪಡಿಸಿದ್ದರು ಎನ್ನಲಾಗಿದೆ. ಇದರಿಂದ ಮಾತಿಗೆ ಮಾತು ಬೆಳೆದು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ. ಕುಡಿಯುವ ನೀರಿನ ವಿಚಾರವಾಗಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ರಾಮಕೃಷ್ಣಪ್ಪ ಹಾಗೂ ಮಗ ಗ್ರಾಮ ಪಂಚಾಯಿತಿ ಸದಸ್ಯ ನಾಗೇಶ, ನಾಗಮಣಿ ಇತರರು ಸೇರಿ ಮಚ್ಚು ದೊಣ್ಣೆ ಗಳಿಂದ ಹಲ್ಲೆ ಮಾಡಿ ಬುಲೆರೋ ಜೀಪ್ ನಿಂದ ಗುದ್ದಿ ಕೊಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ತುಮಕೂರು ಜಿಲ್ಲೆ…
ಸರಗೂರು: ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಹೆಗ್ಗಡೆ ದೇವನ ಕೋಟೆಯ ಕನಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಸರಗೂರಿನ ಅನುದಾನ ರಹಿತ ಶಾಲೆಯಾದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ. ದಾಸಾಚಾರಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಶಿಕ್ಷಕರಂತೆ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿರುವುದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗೌರವವನ್ನು ಹೆಚ್ಚಿಸಿದೆ ಎಂದು ಅವರು ತಿಳಿಸಿದರು. ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಯನ್ನು ಮಾಡುತ್ತಿರುವ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜುರವರು ಸರ್ಕಾರಿ ಅನುದಾನಿತ ಶಾಲೆಗಳಂತೆಯೇ ಅನುದಾನ ರಹಿತ ಶಾಲೆಗಳು ಕೂಡ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದ್ದು, ಅಲ್ಲಿನ ಶಿಕ್ಷಕರು ನಮ್ಮ ಶಿಕ್ಷಕರೇ ಎಂಬ ಸಮಾನ ಮನೋಭಾವವನ್ನು ಹೊಂದಿರುವುದು ನಮ್ಮ ಹೆಗ್ಗಳಿಕೆ ಎಂದು ಪ್ರಶಸ್ತಿ ಪಡೆದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ.ದಾಸಾಚಾರಿ ಅಭಿಪ್ರಾಯ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ…
ಸರಗೂರು: 2025– 26 ನೇ ಸಾಲಿನ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಲಯನ್ಸ್ ಅಕಾಡೆಮಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಅತಿ ಹೆಚ್ಚು ಬಹುಮಾನಗಳನ್ನು ಪಡೆದುಕೊಂಡಿದ್ದೇವೆ ಎಂದು ಬುಧವಾರ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ.ದಾಸಚಾರಿ ತಿಳಿಸಿದರು. ಅಥ್ಲೆಟಿಕ್ಸ್ ವಿಭಾಗದಲ್ಲಿ ಬಾಲಕರ 100 ಮೀಟರ್ ಓಟ ಪ್ರಥಮ, 200 ಮೀಟರ್ ಓಟ ತೃತೀಯ, 800 ಮೀಟರ್ ಓಟ ತೃತೀಯ, 3000 ಮೀಟರ್ ಓಟ ತೃತೀಯ, 4*10 ರಿಲೇ ಪ್ರಥಮ, 4*400 ಮೀಟರ್ ರಿಲೇ ದ್ವಿತೀಯ, ಜಾವೆಲಿನ್ ತೃತೀಯ, ಎತ್ತರ ಜಿಗಿತ ಪ್ರಥಮ, ಉದ್ದ ಜಗಿತ ಪ್ರಥಮ, ಬಾಲಕಿಯರ ವಿಭಾಗದಲ್ಲಿ 4* 400 ಮೀಟರ್ ರಿಲೇ ದ್ವಿತೀಯ, ಎತ್ತರ ಜಿಗಿತ ಪ್ರಥಮ, ಉದ್ದ ಜಿಗಿತ ತೃತೀಯ, ಗುಂಡು ಎಸೆತ ಪ್ರಥಮ, ಜಾವೆಲಿನ್ ಪ್ರಥಮ, ತಟ್ಟೆ ಎಸೆತ ತೃತೀಯ, ಗುಂಪು ಆಟಗಳಲ್ಲಿ ಹುಡುಗರ ಬಾಲ್ ಬ್ಯಾಡ್ಮಿಂಟನ್ ಪ್ರಥಮ, ಹುಡುಗಿಯರ ಬಾಲ್ ಬ್ಯಾಡ್ಮಿಂಟನ್ ಪ್ರಥಮ, ಬಾಲಕಿಯರ ಕಬಡ್ಡಿ ಪ್ರಥಮ, ಬಾಲಕಿಯರ ತ್ರೋಬಾಲ್ ದ್ವಿತೀಯ, ಬಾಲಕಿಯರ ವಾಲಿಬಾಲ್ ದ್ವಿತೀಯ ಹಾಗೂ ಪತಸಂಚಲನದಲ್ಲಿ…
ಮಧುಗಿರಿ: ನ್ಯಾಯಾಲಯದಲ್ಲಿರುವ ಸಾರ್ವಜನಿಕರ ಹಲವಾರು ಪ್ರಕರಣಗಳಿಗೆ ರಾಜಿ ಪಂಚಾಯ್ತಿ ಮೂಲಕ ತೆರೆ ಎಳೆಯಲು ನ್ಯಾಯಾಂಗ ಇಲಾಖೆ ಸಿದ್ಧವಿದ್ದು, ಇದೇ ಸೆ.13 ಕ್ಕೆ ಜಿಲ್ಲಾ ನ್ಯಾಯಾಲಯದಲ್ಲಿ ಲೋಕ್ ಅದಾಲತ್ ಕಾರ್ಯಕ್ರಮ ಏರ್ಪಡಿಸಿದ್ದು, ನೊಂದವರು ಯಾವುದೇ ಶುಲ್ಕವಿಲ್ಲದೆ ನಿಮ್ಮ ಸಮಸ್ಯೆಗೆ ನೇರವಾಗಿ ಅಥವಾ ವಕೀಲರ ಮೂಲಕವಾಗಲಿ ಪರಿಹಾರ ಕಂಡುಕೊಳ್ಳಬಹುದಾಗಿದ್ದು, ಈ ಅವಕಾಶವನ್ನು ಸಾರ್ವಜನಿಕರು ಸದುಪಯೋಗ ಮಾಡಿಕೊಳ್ಳುವಂತೆ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ವೆಂಕಟಪ್ಪ ತಿಳಿಸಿದ್ದಾರೆ. ಪಟ್ಟಣದ ಹೊರವಲಯದಲ್ಲಿರುವ ನ್ಯಾಯಾಲಯ ಸಂಕೀರ್ಣದ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನ್ಯಾಯಾಧೀಶರು, ಇದೇ ಮಧುಗಿರಿ ನ್ಯಾಯಾಲಯದಲ್ಲಿ ಸೆ.13 ಶನಿವಾರ ನಡೆಯಲಿರುವ ಲೋಕ್ ಆದಾಲತ್ ಸೇವೆಯನ್ನು ಸಾರ್ವಜನಿಕರು ಭಾಗಿಯಾಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು, 2007ರಲ್ಲಿ ಸರ್ಕಾರ ಸ್ಥಾಪಿಸಿರುವ ಖಾಯಂ ಜನತಾ ನ್ಯಾಯಾಲಯದಲ್ಲಿ ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದಂತೆ ವಿವಾದಗಳನ್ನು ರಾಜಿ ಮತ್ತು ವಿಚಾರಣೆ ಮೂಲಕ ತೀರ್ಮಾನ ಮಾಡುವ ಅಧಿಕಾರವನ್ನು ಹೊಂದಿರುತ್ತದೆ. ಅದರಂತೆ ಸಾರಿಗೆ ಇಲಾಖೆಯಿಂದ ಬಂದಿರುವ ದಂಡ ಪಾವತಿ, ಅಂಚೆ ಇಲಾಖೆಯ ಸೇವೆಗಳು, ವಿದ್ಯುತ್, ಬೆಳಕು, ನೀರು ನೀಡುವ…
ತುರುವೇಕರೆ: ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿರೋಧ ಪಕ್ಷದ ಟೀಕೆ ಟಿಪ್ಪಣಿಗಳಿದ್ದರು ಗ್ಯಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲವಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಪಟ್ಟಣದ ತಾಲೂಕು ಕಚೇರಿ ಆಚರಣದಲ್ಲಿ ಜಿಲ್ಲಾಡಳಿತ ಹಾಗೂ ಪಟ್ಟಣ ಪಂಚಾಯತಿ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯ ಕಾಂಗ್ರೇಸ್ ಸರ್ಕಾರ ಬಡ ಜನತೆಯ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಬಡವ, ಶ್ರೀಮಂತ, ಜಾತಿ, ಧರ್ಮ ಹಾಗೂ ಪಕ್ಷ ರಹಿತವಾಗಿ ಗೃಹ ಲಕ್ಷ್ಮೀ ಹಣ 2 ಸಾವಿರ ಹಣ ನೀಡುತ್ತಿದ್ದೇವೆ. ಹಣ ಉಳ್ಳವರು ನಾವು ಕೇಳಿದ್ದೇವಾ ಎಂಬ ಮಾತು ಆಡಬಹುದು ಆದರೆ ಬಡ ಹೆಣ್ಣು ಮಕ್ಕಳಿಗೆ ಬಹಳ ಅನುಕೂಲವಾಗಿದೆ ಎಂದರು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ 2003ರಲ್ಲಿ ಬಡ ಕೂಲಿ ಕಾರ್ಮಿಕರಿಗೆ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರು ನಗರದಲ್ಲಿ 5 ರೂ. ತಿಂಡಿ, 10 ರೂ ಊಟ ನೀಡುವಂತಹ ಇಂದಿರಾ ಕ್ಯಾಂಟೀನ್ ತೆರೆಯಲಾಯಿತು. ನಂತರ ಶಾಸಕರ ಒತ್ತಾಯದ ಮೇರೆಗೆ ಜಿಲ್ಲಾ…
ತುಮಕೂರು ಕೌಟುಂಬಿಕ ಹಿಂಸೆ, ಲೈಂಗಿಕ ಕಿರುಕುಳ, ಭಾವನಾತ್ಮಕ ಯಾತನೆಯಂತಹ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಾಲೋಚನೆ, ಕಾನೂನು ನೆರವು ಮತ್ತು ಮಾರ್ಗದರ್ಶನ ನೀಡಲು ಜಿಲ್ಲಾಸ್ಪತ್ರೆಯ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಮಹಿಳಾ ಸಹಾಯವಾಣಿ ಸಂಖ್ಯೆಯನ್ನು ಸ್ಥಾಪಿಸಲಾಗಿದೆ. ಮಹಿಳಾ ಸಹಾಯವಾಣಿ ಸಂಖ್ಯೆ 181 ದಿನದ 20 ಗಂಟೆಯೂ ಕಾರ್ಯನಿರ್ವಹಿಸಲಿದ್ದು, ದೌರ್ಜನ್ಯಕ್ಕೊಳಗಾದ ಮಹಿಳೆಯರು ಈ ಸಂಖ್ಯೆಗೆ ದೂರು ನೀಡಬಹುದಾಗಿದೆ. ಈ ಸಹಾಯವಾಣಿಯು ರಾಷ್ಟ್ರೀಯ ಮಹಿಳಾ ಆಯೋಗವು ಒದಗಿಸುವ ಒಂದು ಪ್ರಮುಖ ಸೇವೆಯಾಗಿದ್ದು, ವಿವಿಧ ಸವಾಲುಗಳನ್ನು ಎದುರಿಸುತ್ತಿರುವ ಮಹಿಳೆಯರಿಗೆ ಸಹಾಯ ಮತ್ತು ಬೆಂಬಲವನ್ನು ನೀಡಲಿದೆ. ಸಾರ್ವಜನಿಕ ಮತ್ತು ಖಾಸಗಿ ಸ್ಥಳಗಳಲ್ಲಿರುವ ಮಹಿಳೆಯರನ್ನು ಪೊಲೀಸ್ ಸೇವೆ, ಒನ್ ಸ್ಟಾಪ್ ಸೆಂಟರ್, ಆಸ್ಪತ್ರೆ, ಕಾನೂನು ಸೇವೆಗಳ ಪ್ರಾಧಿಕಾರ ಮುಂತಾದ ಸೂಕ್ತ ಪಾಧಿಕಾರಗಳ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸುವುದರೊಂದಿಗೆ ದಿನದ 24 ಗಂಟೆಗಳೂ ತುರ್ತು ಮತ್ತು ತುರ್ತು ರಹಿತ ಪ್ರತಿಕ್ರಿಯೆಗಳನ್ನು ಒದಗಿಸುವ ಗುರಿಯನ್ನು ಈ ಮಹಿಳಾ ಸಹಾಯವಾಣಿ ಸಂಖ್ಯೆ ಹೊಂದಿದೆ. ಈ ಸಹಾಯವಾಣಿಯು ಮಹಿಳಾ ಕಲ್ಯಾಣದ ಯೋಜನೆ ಮತ್ತು ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ…
ಮಂಗಳೂರು: ಮಂಗಳೂರಿನ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಯಿಂದಾಗಿ ನಿಯಂತ್ರಣ ಕಳೆದುಕೊಂಡು ದ್ವಿಚಕ್ರ ವಾಹನವೊಂದು ಉರುಳಿಬಿದ್ದಿದೆ. ಈ ದ್ವಿಚಕ್ರ ವಾಹನದಲ್ಲಿದ್ದ ಮಹಿಳೆಯೊಬ್ಬರು ಚಲಿಸುತ್ತಿದ್ದ ಲಾರಿಯ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಈ ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯ ಬೆನ್ನಲ್ಲೇ ಮಂಗಳೂರಿನಲ್ಲಿ ರಸ್ತೆ ಗುಂಡಿಗಳ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದ್ವಿಚಕ್ರ ವಾಹನ ಓಡಿಸುತ್ತಿದ್ದ ಮಹಿಳೆಯೊಬ್ಬರು ರಸ್ತೆಯ ಗುಂಡಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ವಾಹನದೊಂದಿಗೆ ರಸ್ತೆಗೆ ಉರುಳಿ ಬಿದ್ದಿದ್ದು, ಈ ವೇಳೆಯಲ್ಲಿ ಲಾರಿಯೊಂದು ಮಹಿಳೆಯ ಮೇಲೆಯೇ ಹರಿದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಸೆಪ್ಟೆಂಬರ್ 9ರ ಬೆಳಗ್ಗೆ 8–30ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಇದರಲ್ಲಿ ಮೃತ ಪಟ್ಟ ಮಹಿಳೆಯನ್ನು ಮಾಧವಿ (44) ಎಂದು ಗುರುತಿಸಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸ್ಥಳಾಂತರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿ ಚಾಲಕ ಮೊಹಮ್ಮದ್ ಫಾರೂಕ್‌ನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ಮುಸಲ್ಮಾನರ ಕಡೆಗೆ ಹೆಚ್ಚಾಗಿರುವುದರಿಂದ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ನಾಲಿಗೆ ಹರಿಯಬಿಟ್ಟಿದ್ದಾರೆ. ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮೆರವಣಿಗೆ ಅಂಗವಾಗಿ ಬುಧವಾರ ಏರ್ಪಡಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ರಾಜಕೀಯ ಭಾಷಣ ಮಾಡಿದ ಅವರು, ಕರ್ನಾಟಕವನ್ನ ಇಟಲಿ ಸರ್ಕಾರ, ತಾಲಿಬಾನ್ ಸರ್ಕಾರ, ಮುಲ್ಲಾ ಸರ್ಕಾರ ಆಗಲು ಬಿಡಲ್ಲ ಎಂದ ಅವರು, ರಾಜ್ಯ ಸರ್ಕಾರ ಧರ್ಮಸ್ಥಳ ಮತ್ತು ಚಾಮುಂಡೇಶ್ವರಿ ದೇಗುಲಕ್ಕೆ ಕಳಂಕ ತರಲು ಯತ್ನಿಸಿತು. ಇದೀಗ ಗಣೇಶ ಉತ್ಸವದ ವೇಳೆ ದಾಳಿ ನಡೆಸಿದವರನ್ನು ರಕ್ಷಿಸಲು ಹೊರಟಿದೆ. ಮುಸ್ಲಿಮರ ಓಲೈಸುತ್ತಿರುವ, ಮುಸಲ್ಮಾನರಿಗೆ ಹೆಚ್ಚು ಬೆಂಬಲ ನೀಡುತ್ತಿರುವ ಸಿದ್ದರಾಮಯ್ಯ ಅವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕೆಂದು ಹೇಳಿದ್ದಾರೆ. ರಾಜ್ಯ ಸರ್ಕಾರ ಇದೀಗ ಡಿಜೆ ಬ್ಯಾನ್ ಮಾಡಿದ್ದಾರೆ, ಮುಂದೆ ಮಸೀದಿ ಎದುರು ಗಣೇಶ ಮೂರ್ತಿ ಮೆರವಣಿಗೆಯನ್ನೂ ಬ್ಯಾನ್ ಮಾಡಿ ಕೊನೆಗೆ ಗಣಪತಿ ಹಬ್ಬವನ್ನೇ ನಿಷೇಧಿಸುತ್ತಾರೆ. ಹಿಂದೂ ಸಂಘಟನೆಗಳ ಹೋರಾಟ ರಾಷ್ಟ್ರಮಟ್ಟದಲ್ಲಿ ಗಮನಸೆಳೆಯುತ್ತಿದೆ. ಇದಕ್ಕೇ ಮಂಡ್ಯ ಅಂದ್ರೆ ಇಂಡಿಯಾ ಅನ್ನೋದು ಎಂದರು. ಮದ್ದೂರು ಜನರು…