Subscribe to Updates
Get the latest creative news from FooBar about art, design and business.
- ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್
- ರೇಣುಕಾಸ್ವಾಮಿ ಕೊಲೆ ಕೇಸ್: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
- ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
- ಪೊಲೀಸ್ ಠಾಣೆ ಮುಂದೆ ನಿಲ್ಲಿಸಿದ್ದ ಕೆಎಸ್ ಆರ್ ಟಿಸಿ ಬಸ್ ನ ಬ್ಯಾಟರಿ ಕಳವು!
- ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
- ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
- ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
- ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
Author: admin
ತುಮಕೂರು: ಜಿಲ್ಲಾ ಘಟಕ ವತಿಯಿಂದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ವತಿಯಿಂದ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮಿಲನಗೊಳಿಸಿ ಉದ್ಯೋಗ ಭದ್ರತೆ ನೀಡಿ ಹಾಗೂ ಆತ್ಮಹತ್ಯೆ ಮಾಡಿಕೊಂಡು ಅತಿಥಿ ಉಪನ್ಯಾಸಕ ಹರ್ಷ ಶಾನಭೋಗ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯ ವರೆಗೆ ಜಾಥಾ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಹೋರಾಟಗಾರರು, ಅತಿಥಿ ಉಪನ್ಯಾಸಕರನ್ನು ಅತ್ಯಂತ ಕನಿಷ್ಠ ವೇತನಕ್ಕೆ ದುಡಿಸಿಕೊಳ್ಳುವ ಮೂಲಕ ಸರ್ಕಾರ ಸರ್ಕಾರಿ ಜೀತ ಪದ್ಧತಿಯನ್ನು ಮುಂದುವರಿಸುತ್ತಿದೆ. ಪ್ರಜಾಪ್ರಭುತ್ವ ಮಾದರಿಯ ಕಲ್ಯಾಣ ಸರ್ಕಾರದ ನೀತಿಗೆ ಇದು ವಿರುದ್ಧವಾಗಿದೆ. ಯಾವುದೇ ಕಲ್ಯಾಣ ರಾಜ್ಯದಲ್ಲಿ ಹಸಿವು ಅಪಮಾನದಿಂದ ನೊಂದ ಯಾವುದೇ ವ್ಯಕ್ತಿ ಸಾಯಬಾರದು ಎಂಬುದು ಕಲ್ಯಾಣ ನೀತಿಗೆ ಒಳಪಟ್ಟ ಸರ್ಕಾರಗಳು ರಚನೆಗೊಂಡಿದೆ ಎಂದರು. ಕೊರೊನಾದಂತಹ ಹೆಮ್ಮಾರಿ ಸಂದರ್ಭದಲ್ಲಿ ರಾಜ್ಯದಲ್ಲಿ ಲಕ್ಷಾಂತರ ಜನ ಸಾವಿಗೀಡಾದರು. ಉದ್ಯೋಗವಿಲ್ಲದೆ ಕೋಟ್ಯಾಂತರ ಯುವಕರು ತಾತ್ಕಾಲಿಕ ನೌಕರಿಯನ್ನೂ ಕಳೆದುಕೊಂಡು ಬೀದಿಗೆ ಬಂದು ಒಪ್ಪತ್ತಿನ ಗಂಜಿಗೂ ಪರದಾಡಿದರು. ಈ ಸಂದರ್ಭದಲ್ಲಿ…
ಮಧುಗಿರಿ: ವಿಶೇಷ ಚೇತನರ ಬಗ್ಗೆ ಸಹಾನುಭೂತಿ ಬೇಡ ಸಹಾಯ ಹಸ್ತ ಬೇಕಾಗಿದೆ ಎಂದು ಕೊಂಕಲ್ ಮಠದ ಶ್ರೀ ಶ್ರೀ ಓಂಕಾರ ಸ್ವಾಮೀಜಿ ತಿಳಿಸಿದ್ದಾರೆ. ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಸೃಷ್ಠಿ ಟ್ರಸ್ಟ್ ಜಡೇಗೊಂಡನಹಳ್ಳಿ ಮತ್ತು ಆರುಣೋಧಯ ಶೈಕ್ಷಣಿಕ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ, ಪ್ರತಿಭಾ ಪುರಸ್ಕಾರ ಮತ್ತು ನೇತ್ರದಾನ ಅರಿವು ಕಾರ್ಯಕ್ರಮ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿಶೇಷ ಚೇತನರಿಗೆ ಸರ್ಕಾರದ ಜೊತೆಗೆ ಖಾಸಗಿ ಸಂಸ್ಥೆಗಳು ನೆರವಿನ ಹಸ್ತ ನೀಡಬೇಕಾಗಿದೆ. ಅವರಿಗೆ ಸಿಗಬೇಕಾಗಿರುವ ಸವಲತ್ತುಗಳು ಅವರಿಗೆ ಸಿಗುತ್ತಿಲ್ಲ. ಅದು ಪ್ರತಿಯೊಬ್ಬ ವಿಕಲ ಚೇತನರಿಗೆ ಸಿಗುವಂತಾಗಲು ಸಂಘ ಸಂಸ್ಥೆಗಳು ಸಾರ್ವಜನಿಕರು ಕೈ ಜೋಡಿಸಬೇಕಾಗಿದೆ ಎಂದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಮಧು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಮಧು ಎನ್. ಜೆ.ಡಿ.ಪಾಳ್ಯ ರಾಜ್ಯದಲ್ಲಿ ಅಂದಾಜು 15 ಲಕ್ಷ ಮಂದಿ ವಿಶೇಷ ಚೇತನರಿದ್ದಾರೆ ಅದು ಶಾಪವಲ್ಲ ಆಕಸ್ಮಿಕ. ಅವರಲ್ಲಿ ಆತ್ಮಸ್ಥೈರ್ಯ ತುಂಬಬೇಕು ಅಂಗವಿಲ ಎಂಬ ಮನೋಭಾವ ಮನಸ್ಸಿನಿಂದ ತೆಗೆದು…
ಮಧುಗಿರಿ: ತಾಲೂಕಿನ ಐ.ಡಿ.ಹಳ್ಳಿ ಗ್ರಾಮದ ಜಾಮಿಯಾ ಮಸೀದಿಯ ಆವರಣದಲ್ಲಿ ಕೆ.ಜಿ.ಎನ್. ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ವತಿಯಿಂದ ಮದರಸಾ ಮಕ್ಕಳಿಗೆ ಉಚಿತವಾಗಿ ಪಠ್ಯ ಪುಸ್ತಕವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ರಿಯಾಜ್ ಅಹ್ಮದ್,ಮೌಲಾನ ಗಳಾದ ಚಾಂದ್ ಭಾಷಾ, ಮುನೀರ್ ಅಹ್ಮದ್, ಮಹಮ್ಮದ್ ಜಾವೀದ್, ಗ್ರಾಮ ಪಂಚಾಯಿತಿ ಸದಸ್ಯ ಜಿಲಾನ್, ಮುಖಂಡರಾದ ವಜೀರ್ ಭಾಷಾ, ಟ್ರಸ್ಟ್ ಅಧ್ಯಕ್ಷ ಜಲಾಲ್ ಬಾಷಾ, ಮದರಸಾ- ಎ- ತಾಲಿ ಮುಲ್- ಖುರಾನ್ ಮಕ್ಕಳು ಹಾಜರಿದ್ದರು. ವರದಿ: ಆಬಿದ್ ಮಧುಗಿರಿ ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಮಂಡ್ಯ : ‘ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮತಾಂತರ ನಿಷೇಧ ಕಾಯ್ದೆ RSS ಅಜೆಂಡಾ, RSS ಹೇಳಿದಂತೆ ರಾಜ್ಯ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಇದನ್ನ ನಾನು ಅಧಿಕಾರದಲ್ಲಿದ್ದಾಗ ತಂದಿದ್ದು ಅಂತಾರೆ. ಆ ಬಿಲ್ ನ ನನ್ನ ಮುಂದೆ ಇಟ್ಟಿದ್ದರು. ಅದನ್ನ ಬರೆದಿದ್ದ ಎಲ್ಲರೂ RSS ನವರಾಗಿದ್ದರು. ನಾನು ಆಗ ಆಂಜನೇಯನಿಗೆ ಅದನ್ನ ಮುಗಿಸಿಬಿಡು ಅಂತಾ ಹೇಳಿದ್ದೆ. ಅದರಂತೆ ಆಂಜನೇಯ ಅದನ್ನ ತಿರಸ್ಕರಿಸುವಂತೆ ಬರೆದಿದ್ದರು. ಆ ಬಿಲ್ ತಂದಿದ್ದು ಯಡಿಯೂರಪ್ಪ ಸರ್ಕಾರ ಇದ್ದಾಗ, ಅದನ್ನ ಸದನದಲ್ಲಿ ನಾನು ಯಡಿಯೂರಪ್ಪಗೆ ಹೇಳಿದೆ. ಯಡಿಯೂರಪ್ಪ ಅದನ್ನ ಒಪ್ಪಿಕೊಂಡರು ಎಂದು ಹೇಳಿದರು. ಇನ್ನು ಈಶ್ವರಪ್ಪ ಒಬ್ಬ ಪೆದ್ದ. ಇದು RSSನವರು ಮಾಡಿರೋದು ಅಂತಾ ಹೇಳಿದೆ. ಹೌದು ಅಂತಾ ಈಶ್ವರಪ್ಪ ಸದನದಲ್ಲಿ ಒಪ್ಪಿಕೊಂಡ. ಸಂವಿಧಾನದಲ್ಲೇ ಅವಕಾಶ ಇದೆ. ಪ್ರೀತಿಸಿ ಮದುವೆ ಆಗೋದನ್ನ ಪ್ರಶ್ನೆ ಮಾಡೋಕೆ ಅವನ್ಯಾರು ಎಂದು ಪ್ರಶ್ನಿಸಿದರು. ನಾವು…
ಹಾಸನ: ಇಂದಿನಿಂದ ರಾಜ್ಯಾದ್ಯಂತ ಹತ್ತು ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ಹಾಸನದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಈ ಬಗ್ಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ. ಹಾಸನ ಜಿಲ್ಲೆಯಲ್ಲೂ ರಾತ್ರಿ ಹತ್ತು ಗಂಟೆಯಿಂದ ಬೆಳಿಗ್ಗೆ ಐದು ಗಂಟೆಯವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಆದೇಶಿಸಲಾಗಿದೆ. ಹೋಂಸ್ಟೇ, ರೆಸಾರ್ಟ್ ಗಳಲ್ಲಿ ರಾತ್ರಿ 10ರ ನಂತರ ಯಾವುದೇ ರೀತಿಯ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದರು. ಇನ್ನು ಸರ್ಕಾರದ ಆದೇಶದಂತೆ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ನೀಡಬೇಕು. ರೆಸಾರ್ಟ್ ಮಾಲೀಕರು ಕಡ್ಡಾಯವಾಗಿ ನಿಯಮಗಳನ್ನು ಪಾಲಿಸಬೇಕು. ಈಗಾಗಲೇ ನೀಡಿರುವ ಸೂಚನೆಯನ್ನು ಅನುಸರಿಸಬೇಕು. ಇಲ್ಲವಾದಲ್ಲಿ ಅಂತಹ ರೆಸಾರ್ಟ್, ಹೋಂಸ್ಟೇ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಅನಗತ್ಯ ಓಡಾಟ ತಪ್ಪಿಸಲು ಬ್ಯಾರೆಕೇಡ್ ಗಳನ್ನು ಹಾಕಲಾಗಿದೆ. ಚೆಕ್ ಫೋಸ್ಟ್ ಗಳಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಕಟ್ಟುನಿಟ್ಟಾಗಿ ಬಂದೋ ಬಸ್ತ್ ಮಾಡಲಾಗುವುದು. ಜನರು ಸಹಕರಿಸಬೇಕು, ಕಾರಣವಿಲ್ಲದೆ ಅನಗತ್ಯವಾಗಿ ಯಾರೂ ಓಡಾಟ…
ಹೆಚ್.ಡಿ.ಕೋಟೆ: ಕೇರಳದಲ್ಲಿ ಓಮಿಕ್ರಾನ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್‍ಡಿ ಕೋಟೆ ತಾಲೂಕಿನ ಬಾವಲಿ ಚೆಕ್ ಪೋಸ್ಟ್ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹೆಚ್.ಡಿ. ಕೋಟೆ ತಾಲೂಕು ಆರೋಗ್ಯಾಧಿಕಾರಿ ರವಿಕುಮಾರ್ ಬಾವಲಿ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಕೇರಳದಲ್ಲಿ 13 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‍ಪೋಸ್ಟ್ ನಲ್ಲಿ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತಿದೆ. ವಾಹನದಲ್ಲಿ ಓಡಾಡುವವರ ಹೆಸರು ನೋಂದಾಯಿಸಿಕೊಂಡು ಜಿಲ್ಲಾ ಸರ್ವೇಕ್ಷಣಾಕಾರಿಗಳ ಕಚೇರಿಗೆ ವರದಿ ನೀಡಲಾಗಿದೆ ಎಂದರು.ಕೋವಿಡ್ ವರದಿಯನ್ನು ಕ್ಯೂಆರ್ ಕೋಡ್ ಮೂಲಕ ಸ್ಕ್ಯಾನ್ ಮಾಡಬೇಕು ಎಂದು ಅರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಕೇರಳದಿಂದ ಕರ್ನಾಟಕಕ್ಕೆ ಹೆಚ್ಚು ಪ್ರಯಾಣಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ…
ಮುಳಬಾಗಿಲು: ಮಹಿಳೆಯರ ಸರ ಕದ್ದು ಪರಾರಿಯಾಗುತ್ತಿದ್ದ ಬೆಸ್ಕಾಂ ಸಿಬ್ಬಂದಿಯನ್ನು ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಆಂಧ್ರದಲ್ಲಿ ನಡೆದಿದೆ. ತಾಲ್ಲೂಕಿನ ಬೈರಪೂರದ ಬಾಳಸಂದ್ರ ಬಿ.ಕೆ.ಲೋಕೇಶ್(27) ಬಂಧಿತ ವ್ಯಕ್ತಿಯಾಗಿದ್ದಾನೆ. ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಪೆದ್ದಪಂಜಾಬಿ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಲೋಕೇಶ್ ಹಾಗೂ ಈತನ ಸ್ನೇಹಿತ ಕಿಶೋರ್ ಹಲ್ಲೆ ಮಾಡಿ ಸರ ಕಸಿದು ಪರಾರಿಯಾಗಿದ್ದಾರೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಅಕ್ಕಪಕ್ಕದವರು ಸ್ಥಳಕ್ಕೆ ಬಂದು ಸುತ್ತುವರಿದು ಇಬ್ಬರನ್ನು ಹಿಡಿದು ಹಿಗ್ಗಾಮುಗ್ಗ ಥಳಿಸಿ ಪೆದ್ದಪಂಜಾಬಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಇದಲ್ಲದೆ ವಿದ್ಯುತ್ ಪರಿವರ್ತಕಗಳನ್ನು ಕಳ್ಳತನ ಮಾಡಿರುವುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ. ತನಿಖೆ ಮುಂದುವರೆದಿದೆ. ವರದಿ: ಆಂಟೋನಿ ಬೇಗೂರು ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ತಿಪಟೂರು: ಸಾರ್ವಜನಿಕ ಆಸ್ಪತ್ರೆ ತಿಪಟೂರು ANZ ಪ್ರವೇಟ್ ಲಿಮಿಟೆಡ್ ಮತ್ತು UNITED WAY OF BANGALORU ಸ್ವಯಂ ಸೇವಾಸಂಸ್ಥೆಗಳ ನೆರವಿನೊಂದಿಗೆ ಅನುಷ್ಟಾನ ಗೊಂಡಿರುವ ಆಕ್ಸಿಜನ್ ಜನರೇಟರ್ 500 LPM ಹಾಗೂ ಎರಡು ಡಯಾಲಿಸಿಸ್ ಮಿಷನ್ ಗಳನ್ನು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಮತ್ತು ಸಕಾಲ ಸಚಿವಾರಾದ ಬಿ.ಸಿ.ನಾಗೇಶ್ ಉದ್ಘಾಟನೆ ಮಾಡಿದರು. ಇದೇ ವೇಳೆ ಸಾರ್ವಜನಿಕ ಆಸ್ಪತ್ರೆ ತಿಪಟೂರು ಇವರ ವತಿಯಿಂದ ANZ ಪ್ರವೇಟ್ ಲಿಮಿಟೆಡ್ ಮತ್ತು UNITED WAY OF BENGALURU ಇವರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ರವಿಕುಮಾರ್ ಸ್ವಾಗತಿಸಿದರು ಮತ್ತು ಆಸ್ಪತ್ರೆಯ ಮುಖ್ಯವೈದ್ಯಾಧಿಕಾರಿಗಳಾದ ಡಾ.ಪ್ರಹ್ಲಾದ್ ಅಭಿನಂದನಾ ಮಾತುಗಳನ್ನಾಡಿದರು. ತಾಲ್ಲೂಕಿನ ಕೋವಿಡ್ 19 ರೋಗಿಗಳಿಗೆ ಪ್ರಾಣವಾಯು ಪೂರೈಕೆಗೆ ನೆರವಾಗಿರುವ ಹಾಗೂ ಬಡ ರೋಗಿಗಳಿಗೆ ಡಯಾಲಿಸಿಸ್ ಸೇವಾ ಸೌಲಭ್ಯವನ್ನು ನೀಡಲು ನೆರವಾಗಿರುವಂತಹ ANZ ಪ್ರವೇಟ್ ಲಿಮಿಟೆಡ್ ಹಾಗೂ UNITED WAY OF BANGALORU ಸ್ವಾಯತ್ತ ಸಂಸ್ಥೆಗಳಿಗೆ ನಾವು ಅಭಾರಿಯಾಗಿದ್ದೇವೆ. ಸ್ವಯಂ ಸೇವಾ ಸಂಸ್ಥೆಯ ಅಧಿಕಾರಿಗಳು ತಿಪಟೂರು ತಾಲ್ಲೂಕಿನ ಬಡರೋಗಿಗಳಿಗೆ…
ಚಿತ್ರದುರ್ಗ: ಬಾಲಕಿಯನ್ನು ಚುಡಾಯಿಸಿ ಆತ್ಮಹತ್ಯೆಗೆ ಪ್ರೇರೇಪಣೆ ನೀಡಿದ ಪ್ರರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಹೊಸದುರ್ಗ ಡಿವೈಎಸ್ ರೋಷನ್ ಜಮೀರ್ ಹಾಗೂ ಸಿಪಿಐ ಫೈಜುಲ್ಲಾ ನೇತೃತ್ವದ ಪೊಲೀಸರ ಬಂದ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಸುದೀಪ,(19) ಕೋಟಿ ಅಲಿಯಾಸ್ ಕೋಟೇಶ (19)ಮುತ್ತು ಅಲಿಯಾಸ್ ಮುತ್ತುರಾಜ್, (21) ಅಭಿ ಅಲಿಯಾಸ್ ಅಭಿಷೇಕ್ (22) ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳು ಪ್ರಥಮ ಪಿಯುಸಿಯ ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ. ಆರೋಪಿಗಳ ಕಿರುಕುಳದಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದು, ಈ ವೇಳೆ ಬಾಲಕಿಯ ತಂದೆ, ತನ್ನ ಮಗಳ ಸಾವಿಗೆ ಪುಂಡರು ಕಾರಣವಾಗಿದ್ದು, ಅವರ ಕಿರುಕುಳದಿಂದ ನೊಂದು ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿದ್ದರು. ಘಟನೆ ಸಂಬಂಧ ಹೊಸ ದುರ್ಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನೂ ಆರೋಪಿಗಳನ್ನು ಕ್ಷಿಪ್ರವಾಗಿ ಬಂಧಿಸಿದ ಪೊಲೀಸ್ ಅಧಿಕಾರಿಗಳ ಕಾರ್ಯವನ್ನು ಜಿಲ್ಲಾ ಪೊಲೀಸ್…
ಪೀಣ್ಯ: ಪೀಣ್ಯ ಮೇಲ್ಸೇತುವೆಯಲ್ಲಿ ಡಿಸೆಂಬರ್ 25ರಿಂದ 31ವರೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತುರ್ತು ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ, ಎಲ್ಲಾ ಬಗೆಯ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸಲಾಗಿದೆ. ತುಮಕೂರು-ಬೆಂಗಳೂರು ಕಡೆಗೆ ಪ್ರಯಾಣಿಸುವವರಿಗೆ ಬದಲಿ ಮಾರ್ಗಗಳನ್ನು ಸೂಚಿಸಲಾಗಿದ್ದು, ಡಿಸೆಂಬರ್ 31ರವರೆಗೆ ಮೇಲ್ಸೇತುವೆ ಬಳಸದೇ ಸಹಕರಿಸುವಂತೆ ಮನವಿ ಮಾಡಲಾಗಿದೆ. ಬದಲಿ ಮಾರ್ಗಗಳು: ತುಮಕೂರು ಕಡೆಯಿಂದ ಬೆಂಗಳೂರು ನಗರದೊಳಗೆ ಪ್ರವೇಶಿಸುವ ವಾಹನಗಳು ಮಾದಾವರದ ಬಳಿ ಬಲ ತಿರುವು ಪಡೆದು ನೈಸ್ ರಸ್ತೆಯ ಮೂಲಕ ಬೆಂಗಳೂರು ನಗರದೊಳಗೆ ಪ್ರವೇಶಿಸಬಹುದಾಗಿದೆ. ಬೆಂಗಳೂರು ನಗರದ ಕಡೆಯಿಂದ ತುಮಕೂರು ರಸ್ತೆಯ ಮುಖಾಂತರ ಹೊರ ಹೋಗುವ ವಾಹನಗಳು ಗೊರಗುಂಟೆಪಾಳ್ಯದ ಸಿಎಂಟಿಐ ಜಂಕ್ಷನ್ ನಲ್ಲಿ ಎಡ ತಿರುವು ಪಡೆದು ರಿಂಗ್ ರಸ್ತೆ ಮುಖಾಂತರ ಸುಮನಹಳ್ಳಿ, ಮಾಗಡಿ ರಸ್ತೆ ಕಡೆಗೆ ಸಂಚರಿಸಿ ನೈಸ್ ರಸ್ತೆ ಪ್ರವೇಶಿಸಿ ಬೆಂಗಳೂರಿನಿಂದ ಹೊರಗೆ ಸಂಚರಿಸಬಹುದಾಗಿದೆ. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್…