Author: admin

ತುಮಕೂರು: ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿದ್ದ 71 ಅಂಗನವಾಡಿ ಕಾರ್ಯಕರ್ತೆ, 18 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 214 ಅಂಗನವಾಡಿ ಸಹಾಯಕಿಯರ ಹುದ್ದೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಯ್ಕೆ ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸಲು ಏಪ್ರಿಲ್ 7 ಕಡೆಯ ದಿನವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಚೇತನ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಸಮಿತಿಯಲ್ಲಿ ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಿ ಸದರಿ ಪಟ್ಟಿಯನ್ನು ಸಂಬಂಧಿಸಿದ ಅಂಗನವಾಡಿ ಕೇಂದ್ರ, ಗ್ರಾಮ ಪಂಚಾಯತಿ, ವಾರ್ಡ್, ಪ್ರಾಥಮಿಕ ಆರೋಗ್ಯ ಕೇಂದ್ರ, ಶಾಲೆ ಇತ್ಯಾದಿ ಸ್ಥಳ ಹಾಗೂ ಜಿಲ್ಲಾಡಳಿತದ ಜಾಲತಾಣ https://tumkur.nic.in ನಲ್ಲಿ ಪ್ರಕಟಿಸಲಾಗಿದೆ. ತಾತ್ಕಾಲಿಕ ಆಯ್ಕೆ ಪಟ್ಟಿ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ಏಪ್ರಿಲ್ 7ರೊಳಗಾಗಿ ಆಯಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ಕೊರಟಗೆರೆ ತಾಲ್ಲೂಕು ಸಿ.ಎನ್.ದುರ್ಗ ಹೋಬಳಿ ಬೂದಗವಿ ಸಿದ್ದರಬೆಟ್ಟ ಶ್ರೀ ಸಿದ್ದೇಶ್ವರಸ್ವಾಮಿ ದೇವಸ್ಥಾನದ ದಾಸೋಹ ನಿಲಯದ ಉಗ್ರಾಣದಲ್ಲಿ ಹೆಚ್ಚುವರಿಯಾಗಿ ಸಂಗ್ರಹವಾಗಿರುವ ಅಕ್ಕಿ, ಬೆಲ್ಲ, ಹುಣಸೇಹಣ್ಣು, ತೆಂಗಿನಕಾಯಿ ಹಾಗೂ ರಾಗಿಯನ್ನು ಏಪ್ರಿಲ್ 3ರಂದು ಬೆಳಿಗ್ಗೆ 11 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು. ಹರಾಜು ಪ್ರಕ್ರಿಯೆಯನ್ನು ಕೊರಟಗೆರೆ ತಾಲ್ಲೂಕು ತಹಶೀಲ್ದಾರ್ ಅವರ ಸಮಕ್ಷಮದಲ್ಲಿ ದೇವಾಲಯದ ದಾಸೋಹ ಭವನದ ಆವರಣದಲ್ಲಿ ನಡೆಸಲಾಗುವುದು. ಹರಾಜಿನಲ್ಲಿ ಭಾಗವಹಿಸುವವರು 10,000 ರೂ.ಗಳ ಮುಂಗಡವನ್ನು ಪಾವತಿಸಬೇಕು. ಹೆಚ್ಚಿನ ಮಾಹಿತಿ ಹಾಗೂ ನಿಬಂಧನೆಗಳಿಗಾಗಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: 21 ನೇ ಶತಮಾನದಲ್ಲಿದ್ದರೂ ನಮ್ಮ ದೇಶವು ಇನ್ನೂ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿಲ್ಲ. ಏಕೆಂದರೆ ಭಾರತದ ಕೆಲವು ಭಾಗಗಳಲ್ಲಿ ಈಗಲೂ ಮಹಿಳೆಯರಿಗೆ ದೇವಾಲಯ ಪ್ರವೇಶ ನಿರಾಕರಿಸಲಾಗಿದೆ ಎಂದು ಲೇಖಕಿ ಡಾ.ಹೆಚ್.ಎಸ್.ಅನುಪಮಾ ಅಭಿಪ್ರಾಯಪಟ್ಟರು. ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಶುಕ್ರವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು. ಭಾರತದ ಹಲವಾರು ಭಾಗಗಳಲ್ಲಿ, ಸಾಂಪ್ರದಾಯಿಕ ನಂಬಿಕೆಗಳಿಂದಾಗಿ, ವಿಶೇಷವಾಗಿ ಮುಟ್ಟಿನ ಸಮಯದಲ್ಲಿ, ಮಹಿಳೆಯರಿಗೆ ಇನ್ನೂ ದೇವಾಲಯಗಳಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಅಂತಹ ನಿರ್ಬಂಧಗಳು ಲಿಂಗ ಅಸಮಾನತೆಯ ವಿಶಾಲ ಸಮಸ್ಯೆಯನ್ನು ಪ್ರತಿಬಿಂಬಿಸುತ್ತವೆ. ಪ್ರತಿ 29 ನಿಮಿಷಗಳಿಗೊಮ್ಮೆ ಮಹಿಳೆಯ ಮೇಲೆ ಅತ್ಯಾಚಾರ ನಡೆಯುತ್ತದೆ ಮತ್ತು ಪ್ರತಿ ಒಂಬತ್ತು ನಿಮಿಷಗಳಿಗೊಮ್ಮೆ ದೈಹಿಕ ಹಲ್ಲೆಗಳು ಸಂಭವಿಸುತ್ತವೆ. ಮಹಿಳೆಯರ ವಿರುದ್ಧದ ಅಪರಾಧಗಳು ಗಂಭೀರ ಕಳವಳ ಮೂಡಿಸಿವೆ ಎಂದರು. ನಾಯಕತ್ವದ ಪಾತ್ರಗಳಲ್ಲಿ ಮಹಿಳೆಯರ ಕಡಿಮೆ ಪ್ರಾತಿನಿಧ್ಯವನ್ನು ಉದ್ದೇಶಿಸಿ ಮಾತನಾಡಿದ ಅನುಪಮಾ, ಭಾರತೀಯ ಸಂಸತ್ತಿನಲ್ಲಿ ಕೇವಲ ಶೇ.13 ಸದಸ್ಯರು ಮಹಿಳೆಯರಾಗಿದ್ದರೆ, ಕರ್ನಾಟಕದ ರಾಜ್ಯ ವಿಧಾನಸಭೆಯಲ್ಲಿ ಶೇ.3ರಷ್ಟು ಮಾತ್ರ ಇದ್ದಾರೆ ಎಂದರು.…

Read More

ತುರುವೇಕೆರೆ: ಅಂತರಾಷ್ಟ್ರೀಯ ಹಾಗೂ ಏಶಿಯನ್ ಥ್ರೋಬಾಲ್ ಅಧೀನದಲ್ಲಿರುವ ಥ್ರೋಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಛತ್ತೀಸ್ಗರ್  ರಾಜ್ಯದ ಬಿಲಾಯಿ ನಗರದಲ್ಲಿ  ದಿನಾಂಕ 28 –4– 2025ರಿಂದ ದಿನಾಂಕ 30—04–2025 ರವರೆಗೆ 32ನೇ ಸಬ್ ಜೂನಿಯರ್ ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್ ಶಿಪ್  ನಡೆಯಲಿದೆ. ಈ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡದಲ್ಲಿ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾಯಸಂದ್ರ ಗ್ರಾಮದ ಎಸ್ ಬಿಜಿ ಶಾಲೆಯ ವಿದ್ಯಾರ್ಥಿ ಹಾಗೂ ಕಲ್ಪನಾ ಮುನಿರಾಜು ದಂಪತಿ ಪುತ್ರ ಮನೀತ್ ಎಂ. ಹಾಗೂ ನಿವೃತ್ತ ಸೈನಿಕರು ದಿವಂಗತ ತಿಮ್ಮಾಚಾರ್ ಅವರ ಮೊಮ್ಮಗಳು ಹಾಗೂ ವಿನೋದ್ ಪುತ್ರಿ ಕುಮಾರಿ ರೀತು ಎಂ.ವಿ. ರಾಷ್ಟ್ರಮಟ್ಟದಲ್ಲಿ ಪ್ರತಿನಿಧಿಸುತ್ತಿದ್ದಾರೆ. ಈ ವಿದ್ಯಾರ್ಥಿಗಳು ರಾಜ್ಯಕ್ಕೆ ಮಾತ್ರವಲ್ಲದ ರಾಷ್ಟ್ರದಲ್ಲಿಯೂ ಕೂಡ ಯಶಸ್ಸನ್ನು ಗಳಿಸಲಿ ಎಂದು   ಕಲ್ಪತರು ಆಶ್ರಮದ ಶ್ರೀ ಶ್ರೀ ಪ್ರಸನ್ನ ನಾಥ ಸ್ವಾಮೀಜಿಯವರು ಪ್ರಧಾನ ಕಾರ್ಯದರ್ಶಿಗಳು ಆದಿಚುಂಚನಗಿರಿ ಮಹಾಸಂಸ್ಥಾನ ಮಠ.  ಎಸ್ ಬಿ ಜಿ  ಶಾಲೆಯ ಮುಖ್ಯೋಪಾಧ್ಯಾಯರು ಎಲ್ಲ ಭೋದಕ, ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳ…

Read More

ಬೀದರ್: ಸಹೋದರಿಯನ್ನು ಪ್ರೀತಿಸಿದಕ್ಕೆ ಯುವಕನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ಬಸವ ಕಲ್ಯಾಣ ತಾಲ್ಲೂಕಿನ‌ ನಿರಗೂಡಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ನಿರಗೂಡಿ ಗ್ರಾಮದ ನಿವಾಸಿ ಪ್ರಶಾಂತ್ ಬಿರಾದಾರ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಪ್ರಶಾಂತ್ ಕಳೆದ ಕೆಲ ವರ್ಷಗಳಿಂದ ತಮ್ಮ ಪಕ್ಕದ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದನು. ಇದರಿಂದ ಕೋಪಗೊಂಡ ಯುವತಿಯ ಸಹೋದರರು, ತಮ್ಮ‌ ಸಹೋದರಿಯೊಂದಿಗಿನ ಸಂಬಂಧ ಬಿಟ್ಟು ಬಿಡುವಂತೆ ಈ ಹಿಂದೆ ಹಲವು ಬಾರಿ ಸೂಚಿಸಿದ್ದರು. ಇಷ್ಟಾದರೂ ಕೂಡ ಪ್ರಶಾಂತ್ ತನ್ನ ಪ್ರೀತಿ ಮುಂದುವರೆಸಿದ್ದ. ಇದರಿಂದ ಕೋಪಗೊಂಡ ಯುವತಿ ಸಹೋದರರಾದ ಯಲ್ಲಾಲಿಂಗ್ ಹಾಗೂ ಪ್ರಶಾಂತ್ ಎನ್ನುವವರು ಶುಕ್ರವಾರ ರಾತ್ರಿ ಗ್ರಾಮದ ವಾಲ್ಮೀಕಿ ವೃತ್ತದ ಬಳಿ ಪ್ರಶಾಂತ್ ನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು:  ಏಪ್ರಿಲ್ 1ರಂದು ತುಮಕೂರಿನ ಸಿದ್ದಗಂಗಾ ಮಠದಲ್ಲಿ ನಡೆಯುವ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಜನ್ಮದಿನೋತ್ಸವ ಕಾಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ಆಗಮಿಸುತ್ತಿದ್ದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಅಲ್ಲದೆ ಜಿಲ್ಲೆಯಲ್ಲಿ ರಂಜಾನ್ ಮತ್ತು ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಯಾವ್ದೆ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಬಂದೋಬಸ್ತ್ ಹಾಕಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಈ ಬಾರಿ ತೆಂಗು ಬೆಳೆಗಾರರಿಗೆ ಬಂಪರ್ ಬೆಲೆ ಲಭಿಸುತ್ತಿದೆ. ತಿಪಟೂರು ಎಪಿಎಂಸಿಯಲ್ಲಿ ಕೊಬ್ಬರಿ ಬೆಲೆ ಕ್ವಿಂಟಾಲ್ ಗೆ  ಗರಿಷ್ಠ 17,500 ರೂ. ಸಿಕ್ಕಿರುವುದು ರೈತಾಪಿ ವರ್ಗದ ಸಂತೋಷಕ್ಕೆ ಕಾರಣವಾಗಿದೆ. ಪ್ರಸ್ತುತ ವಷದಲ್ಲಿ ಈ ರೀತಿಯ ಬೆಲೆ ಸಿಗುತ್ತಿರುವುದು ರೈತರಲ್ಲಿ ಸಂತಸ ಮನೆ ಮಾಡಿದೆ. ಈ ರೀತಿ ನಿರೀಕ್ಷೆಗೂ ಮೀರಿ ಕೊಬ್ಬರಿ ದರ ಹೆಚ್ಚಳಕ್ಕೆ ಇಳುವರಿ ಕಡಿಮೆಯಾಗಿರುವುದೇ ಕಾರಣವಾಗಿದೆ ಎಂದು ಅಂದಾಜಿಸಲಾಗಿದೆ. ಕೊಬ್ಬರಿ ಧಾರಣೆ ಮಾರುಕಟ್ಟೆಯಲ್ಲಿ ಶುಕ್ರವಾರ ಕನಿಷ್ಟ ಕ್ವಿಂ. ಗೆ 17,000 ರೂ. ಗೆ ಮತ್ತು ಗರಿಷ್ಟ 17500 ರೂ. ಗೆ ಮಾರಾಟವಾಗಿದೆ. ವಾರದಲ್ಲಿ ಸೋಮವಾರ ಹಾಗೂ ಗುರುವಾರ ಎರಡು ದಿನ ಮಾತ್ರ ಟೆಂಡರ್ ನಡೆಯುತ್ತಿದ್ದು, ರವಾನೆದಾರರು ಉತ್ತರ ಭಾರತದ ವ್ಯಾಪಾರಿಗಳೊಂದಿಗೆ ಆಂತರಿಕವಾಗಿ ವ್ಯವಹರಿಸಿ ಮತ್ತೊಂದು ದರ ಪಡೆಯುವುದು ಸಾಧ್ಯವಾಗುತ್ತಿಲ್ಲ. ಇದರಿಂದ ವ್ಯಾಪಾರದಲ್ಲಿ ಲಾಭ ಕಡಿಮೆಯಾಗಿರುವುದು ರವಾನೆದಾರರ ನಿದ್ದೆ ಕೆಡಿಸಿದ್ದು ಮೊದಲಿನಂತೆ ವಾರದಲ್ಲಿ ನಾಲ್ಕು ದಿನ ಹರಾಜು ನಡೆಸಲು ಅವಕಾಶ ನೀಡುವಂತೆ ಲಾಬಿ ಮಾಡತೊಡಗಿದ್ದಾರೆ…

Read More

ಕೊರಟಗೆರೆ : ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆಯ ವತಿಯಿಂದ ಕುರಂಕೋಟೆ ಗ್ರಾಮದಲ್ಲಿ ಸಂಸ್ಥೆಯ 798ನೇ ಕೆರೆ ಅಭಿವೃದ್ಧಿ ಕಾರ್ಯ ನಡೆಸಿ ಗ್ರಾಮ ಪಂಚಾಯಿತಿಗೆ ಸಾರ್ವಜನಿಕರ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮದ ಉದ್ಘಾಟನೆಯನ್ನ ನೆರವೇರಿಸಿ ತಮ್ಮ ಅಮೃತಾಸ್ಥದಿಂದ ಗ್ರಾಮ ಪಂಚಾಯಿತಿಗೆ ಅಭಿವೃದ್ಧಿಗೊಂಡ ಕೆರೆಯನ್ನು ಹಸ್ತಾಂತರ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುರಂಕೋಟೆ ಗ್ರಾಮ ಪಂಚಾಯತಿಯ ಅಧ್ಯಕ್ಷೆ ತಿಮ್ಮಕ್ಕ ವಹಿಸಿಕೊಂಡಿದ್ದರು. ಕುರಂಕೋಟೆ ಗ್ರಾಮದ ಶ್ರೀ ಆಂಜನೇಯ ಸ್ವಾಮಿ (ದೊಡ್ಡಕಾಯಪ್ಪ) ದೇವಸ್ಥಾನದ ಬಳಿ ಇರುವ ಗುಂಡು ತೋಪಿನಲ್ಲಿರುವ ಕೆರೆಯನ್ನು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವತಿಯಿಂದ ನಮ್ಮೂರು ನಮ್ಮ ಕೆರೆ ಎಂಬ ಯೋಜನೆಯಡಿ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಕೆರೆ ಅಭಿವೃದ್ಧಿ ಪೂರ್ಣಗೊಂಡ ನಂತರ ಕೆರೆ ಮುಂಭಾಗ ನಾಮಫಲಕ ಅನಾವರಣ ಮಾಡಲಾಗಿದೆ. ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು  ಇದರಿಂದಾಗಿ ಸಮಾಜದಲ್ಲಿ ಪ್ರಗತಿ ಹಾಗೂ ಬದಲಾವಣೆ…

Read More

ಬೀದರ್: ಔರಾದ್ ಶಾಖೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹಾಗೂ ಇತರೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಹಿಂದೇಟು ಹಾಕಲಾಗುತ್ತಿದೆ. ನಿಜವಾದ ಫಲಾನುಭವಿಗಳಿಗೆ ಸಾಲ ದೊರಕಿಸಿ ಕೊಡುವಂತೆ ಇಂಡಿಯನ್ ಯೂಥ್ ಕಾಂಗ್ರೆಸ್ ಆಗ್ರಹಿಸಿದೆ. ಮುಖಂಡ ಅನೀಲ್ ಹೇಡೆ ಸಮ್ಮುಖದಲ್ಲಿ ಜಿಲ್ಲಾಧಿಕಾರಿಯವರಿಗೆ ತಹಶೀಲ್ದಾರ್ ಅವರ ಮೂಲಕ ಮನವಿ ಸಲ್ಲಿಸಿ. ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ಬರುವ ಸಾಲದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸಾಲ ನೀಡಲು ಸ್ಥಳೀಯ ಬ್ಯಾಂಕ್ ಗಳ ಸಿಬ್ಬಂದಿಯವರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತಿದೆ. ಸರಕಾರದ ಯೋಜನೆಗಳು ಫಲಾನುಭವಿಗಳಿಗೆ ದೊರೆಯಬೇಕು, ಇಲ್ಲದಿದ್ದರೆ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು. ಈ ಸಂದರ್ಭದಲ್ಲಿ ಯುವ ಮುಖಂಡರಾದ ಅನಿಲ್ ನಿರ್ಮಳೆ, ದತ್ತಾತ್ರಿ ಬಾಪುರೆ, ಚಂದು ಡಿಕೆ.ರಾಜಕುಮಾರ ಮುಧಾಳೆ, ಹರಿದೇವ ಸಂಗನಾಳ, ಸಂದೀಪ್ ಮಾನೆ, ಸಚೀನ್ ಮೇತ್ರೆ, ಅಹಿಂದ ಸಂಘಟನೆಯ ತಾಲ್ಲೂಕು ಅಧ್ಯಕ್ಷ ಸತೀಶ್ ಪೂಲಾರಿ, ವಿನೇಕ್ ನಿರ್ಮಳೆ, ರಜನಿಕಾಂತ ದಾಮಾ, ವಿಶಾಲ್ ಹಾಜರಿದ್ದರು. ವರದಿ: ಅರವಿಂದ ಮಲ್ಲಿಗೆ,…

Read More

ಬೆಳಗಾವಿ: ಸೈಬರ್ ವಂಚಕರ ಕಿರುಕುಳ ತಾಳಲಾರದೇ ರೈಲ್ವೆ ಉದ್ಯೋಗಿ ಮತ್ತು ಅವರ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಗಾವಿಯ ಖಾನಾಪುರದ ಬೀಡಿ ಗ್ರಾಮದಲ್ಲಿ ನಡೆದಿದೆ. ಮಾ. 28ರಂದು ಈ ಘಟನೆ ಬೆಳಕಿಗೆ ಬಂದಿದೆ. ಡಿಯಾಗೋ ನಜರತ್ (83) ಮತ್ತು ಅವರ ಪತ್ನಿ ಪ್ಲೇವಿಯಾ ಡಿಯಾಗೋ ನಜರತ್ (78) ಮೃತಪಟ್ಟವರು. ಈ ದಂಪತಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕೆಲ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗಿದ್ದರು. ಇದನ್ನು ಗಮನಿಸಿ ಸೈಬರ್ ವಂಚಕರು ದಂಪತಿಯನ್ನು ಟಾರ್ಗೆಟ್ ಮಾಡಿದ್ದಾರೆ. ದೆಹಲಿಯಿಂದ ವಿಡಿಯೊ ಕಾಲ್ ಮಾಡಿ ದಂಪತಿಗೆ ಬೆದರಿಕೆಯೊಡ್ಡಿದ್ದರು. ದಂಪತಿಯಿಂದ 6 ಲಕ್ಷ ರೂ. ಪಡೆದರೂ ಕಿರುಕುಳ ನಿಲ್ಲಿಸಿರಲಿಲ್ಲ. ದೆಹಲಿಯಲ್ಲಿ ಉನ್ನತ ಹುದ್ದೆಯಲ್ಲಿ ಇರುವುದಾಗಿ ಹೇಳಿಕೊಂಡ ವ್ಯಕ್ತಿಯೊಬ್ಬರು ನಮಗೆ ಪದೇಪದೇ ಬೆದರಿಕೆ ಹಾಕಿದ್ದಾರೆ. ನನ್ನ ಸಿಮ್ನಕಾರ್ಡ್ ದುರ್ಬಳಕೆ ಮಾಡಿಕೊಂಡಿದ್ದಾರೆ. ಅನಿಲ್ ಯಾದವ್ ಎಂಬ ವ್ಯಕ್ತಿ ಕರೆ ಮಾಡಿ, ‘ನಿಮ್ಮ ನಂಬರಿನಿಂದ ನನಗೆ ಬೆತ್ತಲೆ ಚಿತ್ರಗಳು, ಅಶ್ಲೀಲ ಸಂದೇಶಗಳು ರವಾನೆಯಾಗಿವೆ. ನಿಮ್ಮ ವಿರುದ್ಧ ಸೈಬರ್ ಸೆಲ್ಗೆ ದೂರು ನೀಡಿದ್ದೇನೆ’…

Read More