Subscribe to Updates
Get the latest creative news from FooBar about art, design and business.
- ಸಾಲ ಸೌಲಭ್ಯ : ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನ
- ದಲಿತ ಗೃಹಮಂತ್ರಿ, ಡಿಸಿಎಂ, ಉಸ್ತುವಾರಿ ಸಚಿವರಿದ್ದರೂ ಮಧುಗಿರಿಯಲ್ಲಿ ದಲಿತರ ಕಗ್ಗೊಲೆ!: ಸಿಂಹಾದ್ರಿ ಹತ್ಯೆ ಖಂಡಿಸಿ ದಲಿತ ಸಂಘಟನೆಗಳ ಪ್ರತಿಭಟನೆ
- ತುಮಕೂರು-ಅರಸೀಕೆರೆ ರೈಲು ಪ್ರಯಾಣಿಕರ ಸಮಸ್ಯೆ ಇತ್ಯರ್ಥ ಪ್ರಯತ್ನ: ರೈಲು ಪ್ರಯಾಣಿಕರ ವೇದಿಕೆ ಮಹಾಸಭೆ
- ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರಾಗಿ ಅಬ್ದುಲ್ ಮನ್ನಾನ್ ಸೇಠ್ ನೇಮಕ: ಗಣ್ಯರಿಂದ ಅಭಿನಂದನೆ
- ಖೇಣಿ ‘ಚಿನ್ನದ ಕರಡಿಗೆ’ ಹೇಳಿಕೆ ಸುಳ್ಳು: ಸಿದ್ಧಗಂಗಾ ಮಠ ಸ್ಪಷ್ಟನೆ
- ಕೃಷಿ ಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟ ಪ್ರಕರಣ: ಹೈಕೋರ್ಟ್ ತೀರ್ಪು ಕೇಳಿ ಕಣ್ಣೀರಿಟ್ಟ ಡ್ರೋನ್ ಪ್ರತಾಪ್
- ರೇಣುಕಾಸ್ವಾಮಿ ಕೊಲೆ ಕೇಸ್: ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ‘ಮಾಫಿ’ ಸಾಕ್ಷ್ಯ ದಾಖಲು!
- ರಾಜ್ಯ ಸರ್ಕಾರ ಬೆಟ್ಟ ಅಗೆದು ಇಲಿ ಹಿಡಿಯುತ್ತಿದೆ: ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ವಾಗ್ದಾಳಿ
Author: admin
ಬೆಳಗಾವಿ: ಮತಾಂತರ ನಿಷೇಧ ಬದಲು ಪಕ್ಷಾಂತರ ನಿಷೇಧ ಮಸೂದೆ ತನ್ನಿ ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡ ಸಿ.ಎಂ.ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಮತಾಂತರ ನಿಷೇಧ ಕಾಯ್ದೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಸಲ್ಮಾನರಾದರೂ ಅವರು ಭಾರತೀಯರಲ್ಲವೇ ಎಂದು ಪ್ರಶ್ನಿಸಿದ ಅವರು, ‘‘ಮುಸಲ್ಮಾನರಾದ ಮಾತ್ರಕ್ಕೆ ಪಾಕಿಸ್ತಾನಕ್ಕೆ ಹೋಗಬೇಕೆ?” ಎಂದು ಪ್ರಶ್ನಿಸಿದರು. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಾಕಷ್ಟು ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು. ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ. ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy
ಬೆಂಗಳೂರು: ಎಂಇಎಸ್ ಪುಂಡಾಟಿಕೆ ವಿರೋಧಿಸಿ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಕರ್ನಾಟಕ ಬಂದ್ ಆಗಲಿದ್ದು, ತುರ್ತು ಸೇವೆಗಳು ಮಾತ್ರವೇ ಲಭ್ಯವಿರುತ್ತವೆ. ಕರ್ನಾಟಕ ಬಂದ್ ಗೆ ಸುಮಾರು 35 ಸಂಘಟನೆಗಳು ಸದ್ಯ ಬೆಂಬಲ ನೀಡಿವೆ ಇದರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕನ್ನಡ ಚಿತ್ರರಂಗ ಮೌನವಾಗಿದ್ದು, ಈ ಹೋರಾಟಕ್ಕೆ ಬೆಂಬಲ ನೀಡಲು ಮೀನಾಮೇಷ ಎಣಿಸುತ್ತಿದೆ. ಲಾರಿ ಮಾಲೀಕರ ಸಂಘ, ಆಟೋ ಚಾಲಕರು, ಟ್ಯಾಕ್ಸಿ ಮಾಲೀಕರು, ಹೋಟೆಲ್ ಮಾಲೀಕರು, ಶಿಕ್ಷಣ ಸಂಸ್ಥೆ, ದಲಿತ ಸಂಘರ್ಷ ಸಮಿತಿ, ಕೈಗಾರಿಕಾ, ಬೀದಿಬದಿ ವ್ಯಾಪರಿಗಳು, ಸಾರಿಗೆ ನೌಕರರು, ಸಿನಿಮಾ, ಅಂಗಡಿ ಮಾಲೀಕರು, ಗಾರ್ಮೆಂಟ್ಸ್ ನೌಕರರು, ಸರ್ಕಾರಿ ನೌಕರರು, ಅಖಿಲ ಭಾರತ ಚಾಲಕರ ಸಂಘ, ಕಟ್ಟಡ ಕಾರ್ಮಿಕರ ಸಂಘ ಬೆಂಬಲಕ್ಕೆ ಸಾಥ್ ನೀಡಲಿದ್ದಾರೆ ಎನ್ನಲಾಗಿದೆ. ಈಗಾಗಲೇ ಕರ್ನಾಟಕ ಬಂದ್ ಗೆ ಬೀದಿ ಬದಿ ವ್ಯಾಪಾರಿಗಳ ಸಂಘ, ಓಲಾ, ಉಬರ್ ಬೆಂಬಲ ನೀಡಿದೆ. ಓಲಾ, ಉಬರ್ ಅಸೋಸಿಯೇಷನ್ ತನ್ವೀರ್, ಬಂದ್…
ತುಮಕೂರು: ನಾಡಿನ ಸಂಸ್ಕೃತಿಯನ್ನು ಭವ್ಯ ಇತಿಹಾಸವನ್ನು ಎತ್ತಿ ಹಿಡಿಯುವಂತಹ ಕೆಲಸವನ್ನು ಮಾಡುತ್ತಿರುವ ಕಲಾವಿದರ ಬದುಕು ಸಂಕಷ್ಟದಲ್ಲಿದೆ. ಕಲಾವಿದರನ್ನು ಗುರುತಿಸಿ ಕಲೆಗೆ ಪ್ರೋತ್ಸಾಹ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂಬುದಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಹೇಳಿದರು. ನಗರದ ರೋಟರಿ ಭವನ ನೆಹರು ಮೈದಾನದಲ್ಲಿ ನಡೆದ ದಿ.ಶಂಕರ್ ನಾಗ್ ಅಭಿಮಾನಿಗಳ ಕಲಾವೇದಿಕೆ ಆಯೋಜಿಸಿದ್ದ 66ನೇ ಕನ್ನಡ ರಾಜ್ಯೋತ್ಸವ ಹಾಗೂ ನಟ ಶಂಕರ್ ನಾಗ್ ರವರ 67ನೇ ಹುಟ್ಟುಹಬ್ಬ ಹಾಗೂ ನಟ ಹಿನ್ನಲೆ ಗಾಯಕ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಸವಿನೆನಪಿನ ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರಾದ ಡಿ.ಸುಧಾಕರ್ ರವರು ಮಾತನಾಡಿದರು. ಕಲಾವಿದರಾದ ದಿವು ಶಂಕರ್ ರವರು, ಶಂಕರ್ ನಾಗ್ ರೂಪದಲ್ಲಿ ನಾಡಿನ ಉದ್ದಗಲಕ್ಕೂ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಭಿನಯ ಮಾಡುವುದರ ಮೂಲಕ ಹೆಸರು ಪಡೆದಿದ್ದಾರೆ. ಕಲಾವಿದರ ಬದುಕು ಹಸನಾಗಬೇಕಾದರೆ ಕಲಾವಿದರಿಗೆ ಪ್ರೋತ್ಸಾಹ ನೀಡಬೇಕು ಎಂದು ಸುಧಾಕರ್ ತಿಳಿಸಿದರು.
ತಿಪಟೂರು: 2022ನೇ ವರ್ಷದಲ್ಲಿ ಯಾವುದೇ ವೈರಾಣು ದೇಶವನ್ನು ಬಾಧಿಸದಿರಲಿ ಎಂದು ಕಾಂಗ್ರೆಸ್ ಮುಖಂಡ ಕೆ.ಟಿ. ಶಾಂತಕುಮಾರ್ ಹಾರೈಸಿದರು. ತಿಪಟೂರಿನಲ್ಲಿ 2022ರ ಹೊಸ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದ ಅವರು, 2021ರಲ್ಲಿ ದೇಶವನ್ನು ಕೊರೊನಾ ಡೆಲ್ಟಾ ವೈರಸ್ ತೀವ್ರವಾಗಿ ಬಾಧಿಸಿತ್ತು. ಇದೀಗ 2022 ಸಮೀಪಿಸುತ್ತಿರುವ ಸಂದರ್ಭದಲ್ಲಿ ಒಮಿಕ್ರಾನ್ ವೈರಾಣು ಬಂದಿದೆ. ಈ ವೈರಾಣು ದೇಶವನ್ನು ಬಾಧಿಸದಿರಲಿ ಎಂದು ಹಾರೈಸಿದರು. ಕ್ಯಾಲೆಂಡರ್ ಬಿಡುಗಡೆಯ ಸಂದರ್ಭದಲ್ಲಿ ಗೊರಗೊಂಡನಹಳ್ಳಿ ಸಹಕಾರ ಸಂಘದ ಸುದರ್ಶನ್, ಪಕ್ಷದ ಮುಖಂಡರು, ಯುವ ಮಿತ್ರರು ಮೊದಲಾದವರಿದ್ದರು.
ಮಧುಗಿರಿ: ಹಾಲು ಉತ್ಪಾದಕರ ಸಹಕಾರ ಸಂಘ ನಿ. ಬೇಡತ್ತೂರು ಇದರ 2020-21ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸಂಘದ ಕಚೇರಿಯಲ್ಲಿ ಬುಧವಾರ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು MPCS ಅಧ್ಯಕ್ಷ B.A.ರಾಜೇಂದ್ರ ಪ್ರಸಾದ್ ವಹಿಸಿದ್ದರು. ಕೊಂಡವಾಡಿ ಚಂದ್ರಶೇಖರ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯದರ್ಶಿ ತಿಮ್ಮಾರೆಡ್ಡಿ 2020-21ನೇ ಸಾಲಿನ ಆಡಿಟ್ ಆದ ಜಮಾಖರ್ಚುನ್ನು ಸಭೆಯಲ್ಲಿ ಓದಿದರು. ಸಭೆಯಲ್ಲಿ ವಿಸ್ತರಣಾಧಿಕಾರಿ ಗಿರೀಶ್, ದರ್ಶನ್ ಕೆ.ಟಿ., ವಿಸ್ತರಣಾ ಸಮಾಲೋಚಕ ಧರ್ಮವೀರ, MPCS ಕಾರ್ಯಕಾರಿ ಮಂಡಳಿ ಸದಸ್ಯರಾದ ಬಿ.ವಿ.ರಾಮಕೃಷ್ಣಪ್ಪ, ಅಂಜನ ರೆಡ್ಡಿ, ಶ್ರೀರಾಮರೆಡ್ಡಿ, ಮಂಜುನಾಥ್, ಗೋಪಾಲಯ್ಯ, ಶ್ರೀರಂಗಪ್ಪ, ಭಾಗ್ಯಮ್ಮ ಅರುಣ್, ಅಂಜಿನಮ್ಮ, ಚಿಕ್ಕಓಬಳಯ್ಯ, ನೌಕರರ ಸಿಬ್ಬಂದಿ ತಿಮ್ಮರೆಡ್ಡಿ, ಈಶ್ವರಯ್ಯ, ರವೀಂದ್ರ ರೆಡ್ಡಿ ಉಪಸ್ಥಿತರಿದ್ದರು. ಬಿ.ಎನ್.ಮಲ್ಲಪ್ಪ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ವರದಿ: ದೊಡ್ಡೇರಿ ಮಹಾಲಿಂಗಯ್ಯ
ಹಿರಿಯೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪೂರ್ಣ ಪ್ರಮಾಣದ ತರಗತಿಗಳು ನಡೆಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಕೊರೊನಾ 2ನೇ ಅಲೆಗೆ ತತ್ತರಿಸಿದ ಕರ್ನಾಟಕ ಹಂತ ಹಂತವಾಗಿ ಇದೀಗ ಸಹಜ ಸ್ಥಿತಿಗೆ ಮರಳಿದೆ. ಈಗ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಈಗಾಗಲೇ ಪದವಿ ಸ್ನಾತಕೋತ್ತರ ತರಗತಿಗಳೆಲ್ಲವೂ ಸಹಜ ಸ್ಥಿತಿಗಳಲ್ಲಿ ನಡೆಯುತ್ತಿದ್ದು, ಶಾಲಾ, ಕಾಲೇಜುಗಳು ಮರು ಪ್ರಾರಂಭವಾಗಿವೆ. ಆದರ, ಭೌತಿಕ ತರಗತಿಗಳು ಆರಂಭಗೊಂಡರೂ ಸಹ ಇನ್ನೂ ರಾಜ್ಯದ ಪ್ರಥಮ ದರ್ಜೆ – ಕಾಲೇಜುಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ಪೂರ್ಣ – ಪ್ರಮಾಣದ ಪಾಠಗಳು ನಡೆಯದಿರುವುದು ಬೇಸರದ ಸಂಗತಿಯಾಗಿದೆ ಎಂದು ಹೇಳಿದ್ದಾರೆ. ರಾಜ್ಯ-ಸರ್ಕಾರವು ಸರ್ಕಾರಿ ಪ್ರಥಮ ದರ್ಜೆ – ಕಾಲೇಜುಗಳಿಗೆ ಅತಿಥಿ-ಉಪಾನ್ಯಾಸಕರನ್ನು ಸರ್ಕಾರ ಒಂದು ತಿಂಗಳು ತಡವಾಗಿ ನೇಮಿಸಿಕೊಂಡಿದ್ದು, ಅದು ಅವಶ್ಯಕತೆಗಿಂತ ಕಡಿಮೆ ಎಂದರೇ 80 ಪ್ರತಿಶತ ಉಪಾನ್ಯಾಸಕರನ್ನು ನೇಮಿಸಿಕೊಂಡಿದೆ . ಆದರೆ ಕಳೆದ ಅಕ್ಟೋಬರ್ 28 ರಿಂದ…
ವಿಜಯಪುರ: ಟಿಪ್ಪರ್ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ನಗದು ಸೇರಿದಂತೆ 8.85 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಲ್ಲಿನ ರಹಿಂನಗರದ ರವಿ ಗುರುಬಸಪ್ಪ ಜಾಮಗೊಂಡ (27), ಶಿವಾನಂದ ಲಿಂಗಪ್ಪ ಕಾಲೇಬಾಗ (36), ಶ್ರೀಶೈಲ ಉರ್ಫ್ ಪಪ್ಪು ದುಂಡಪ್ಪ ಗಾಂಜಿ (31), ಮಹಾರಾಷ್ಟ್ರ ಸೊಲ್ಲಾಪುರದ ಗೌರಿಶಂಕರ ರಾಮಚಂದ್ರ ಚೌಗಲೆ (43) ಹಾಗೂ ಇಕ್ರಾರ್ ಜಾಕೀರ್ ನಾಯ್ಕೋಡಿ (28) ಬಂಧಿತ ಆರೋಪಿಗಳು. ಈ ಆರೋಪಿಗಳು ಇಲ್ಲಿನ ಆದರ್ಶ ನಗರ ಠಾಣೆ ವ್ಯಾಪ್ತಿಯಲ್ಲಿ 2 ಟಿಪ್ಪರ್‌ಅನ್ನು ಕಳ್ಳತನ ಮಾಡಿದ್ದು, ವಿಶೇಷ ತಂಡ ಈ ಆರೋಪಿಗಳನ್ನು ಬಂಧಿಸಿದೆ. ಆರೋಪಿಗಳಿಂದ 2 ಟಿಪ್ಪರ್ ಗಳ ಬಿಡಿ ಭಾಗ, 1.50 ಲಕ್ಷ ರೂ.ಗಳ ನಗದು ಹಾಗೂ ಕೃತ್ಯಕ್ಕೆ ಬಳಸಿದ 1 ಟಾಟಾ ಸುಮೋ ವಾಹನ ಸೇರಿ 8.85 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ…
ವಿಜಯಪುರ: ಕಾರು ಮಗುಚಿ ಬಿದ್ದು, ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದ ಬಳಿಯಲ್ಲಿ ನಡೆದಿದೆ. ಸಲೀಂ ಟಕ್ಕಳಕಿ (20) ಸೈಫನ್ ತಾಂಬೋಳೆ (17) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಪೈಕಿ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಸೈಫನ್ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಿಂದ ದೇವರಹಿಪ್ಪರಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತರು ಹಾಗೂ ಗಾಯಾಳು ದೇವರಹಿಪ್ಪರಗಿ ಪಟ್ಟಣದ ವಾಸಿಗಳಾಗಿದ್ದು, ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತುಮಕೂರು: ಬೆಳೆ ಹಾನಿ ಕುರಿತು ಚಾರಿತ್ರಿಕ ಮಹತ್ವಪೂರ್ಣ ನಿರ್ಣಯ ಕೈಗೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಬಿಜೆಪಿ ಸರ್ಕಾರ ರೈತ ಪರವೆಂದು ಮತ್ತೊಮ್ಮೆ ಸಾಬೀತಾಗಿದೆ. ಈ ಮೂಲಕ ದೇಶದ ರೈತರ ಬೆಂಬಲಕ್ಕೆ ಬಿಜೆಪಿ ಸರ್ಕಾರ ನಿಂತಿದೆ ಎಂದು ಬಿಜೆಪಿ ಮಾಜಿ ವಿಧಾನ ಪರಿಷತ್ ಸದಸ್ಯ ಎಂ ಆರ್ ಹುಲಿನಾಯ್ಕರ್ ತಿಳಿಸಿದರು. ತುಮಕೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, ರೈತರಿಗಾಗಿ ಅತ್ಯಂತ ಮಹತ್ವಪೂರ್ಣ ನಿರ್ಧಾರಗಳನ್ನು ಪ್ರಕಟಿಸಿದೆ. ಇದು ಕರ್ನಾಟಕದಲ್ಲಿ ಈವರೆಗೆ ಕಂಡಿರುವ ಒಬ್ಬ ಧೀಮಂತ ಮುಖ್ಯಮಂತ್ರಿ ಎಂಬುದು ಸಾಬೀತಾಗಿದೆ ಎಂದರು. ಹಿಂದಿನ ಸರ್ಕಾರಗಳು ಕೇವಲ ಘೋಷಣೆಗಳಿಗಷ್ಟೇ ತಮ್ಮನ್ನು ಸೀಮಿತಗೊಳಿಸಿಕೊಂಡಿದ್ದರು. ಆದರೆ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ರೈತರ ಪರ ಎಂಬುದು ಜನರ ಅರಿವಿಗೆ ಬರುವಂತಾಗಿದೆ. ರಾಜ್ಯದಲ್ಲಿ ಒಟ್ಟು 10 ಲಕ್ಷ ಹೆಕ್ಟೇರ್ ಪ್ರದೇಶದ ರೈತರಿಗೆ 969 ಕೋಟಿ ರೂಪಾಯಿ ಪರಿಹಾರ ವಿತರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ಇತಿಹಾಸದಲ್ಲಿ ಮೊಟ್ಟ ಮೊದಲಬಾರಿಗೆ ಐತಿಹಾಸಿಕ ನಿರ್ಧಾರ ಇದಾಗಿದೆ . ಬೆಳೆ…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಿ.ಟಿ.ರವಿಯನ್ನು ಲೂಟಿ ರವಿ ಎಂದು ಹೇಳುತ್ತಾರೆ. ಅವರು 4 ಬಾರಿ ಶಾಸಕ, 2 ಬಾರಿ ಸಚಿವರಾಗಿದ್ದರೂ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದರು. ಚಿಕ್ಕಮಗಳೂರು ಕ್ಷೇತ್ರ ಮೂಲಸೌಕರ್ಯಗಳಿಂದಲೂ ವಂಚಿತವಾಗಿದೆ. ಧರ್ಮ, ವ್ಯಕ್ತಿಗಳನ್ನು ಗುರಿಯಾಗಿಸಿ ಹೇಳಿಕೆ ನೀಡುವುದೇ ರವಿ ಕಾಯಕ. ಸಿ.ಟಿ.ರವಿ ಒಬ್ಬ ವಿಕೃತ ಮನಸ್ಸುಳ್ಳಂತಹ ವ್ಯಕ್ತಿ ಎಂದು ಸಿಟಿ ರವಿ ವಿರುದ್ಧ ಧ್ರುವನಾರಾಯಣ್ ವಾಗ್ದಾಳಿ ನಡೆಸಿದರು. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿ 4 ತಿಂಗಳೊಳಗೆ 43 ಕೇಸ್ ಹಿಂಪಡೆದಿದ್ದರು. ಆ 43 ಕೇಸ್ಗಳ ಪೈಕಿ ಮೊದಲ ಪ್ರಕರಣವೇ ಸಿ.ಟಿ. ರವಿ ಅವರದು. ಬಿಜೆಪಿ ಶಾಸಕರ ಬೆಂಕಿ, ದೌರ್ಜನ್ಯ ಪ್ರಕರಣಗಳನ್ನು ಹಿಂಪಡೆದಿದ್ದರು. ಇದರಲ್ಲೇ ಗೊತ್ತಾಗುತ್ತೆ ಯಾರು ಕೇಸ್ನಲ್ಲಿ ಸಿಕ್ಕಿಹಾಕಿಕೊಂಡಿದ್ದರು. ಯಾರು, ಯಾವ ಕೇಸ್ ಹಿಂಪಡೆದರು ಎಂದು ಜನರಿಗೆ ಗೊತ್ತಿದೆ ಎಂದು ಧ್ರುವನಾರಾಯಣ ಕಿಡಿಕಾರಿದರು.