Subscribe to Updates
Get the latest creative news from FooBar about art, design and business.
- ವಾಟರ್ ಹೀಟರ್ ಬಳಸುವಾಗ ಜೀವಕ್ಕೆ ಕುತ್ತು ಬರಬಹುದು! ಪಾಲಿಸಲೇಬೇಕಾದ ಮುನ್ನೆಚ್ಚರಿಕೆಗಳಿವು…!
- ದಾಖಲೆ ಬರೆದ ಯಶ್ ‘ಟಾಕ್ಸಿಕ್’ ಟೀಸರ್; ಹಸಿಬಿಸಿ ದೃಶ್ಯ ಕಂಡು ಪ್ರೇಕ್ಷಕ ಶಾಕ್!
- ಚಳಿಗಾಲದ ಸಿಹಿ ತಿನಿಸು ‘ಬೀಟ್ರೂಟ್ ಹಲ್ವಾ’: ರುಚಿಯ ಜೊತೆಗೆ ಆರೋಗ್ಯಕ್ಕೂ ಇದು ವರ!
- ವಿಬಿ–ಜಿ ರಾಮ್ ಜಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ: ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಆಕ್ರೋಶ
- ತಿಪಟೂರು: ಬೀದಿ ನಾಯಿಗಳ ಹಾವಳಿ ತಡೆಗೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿ ಸೂಚನೆ
- ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ಕೆ.ಎನ್. ರಾಜಣ್ಣ
- ಕೊರಟಗೆರೆ | ಶಾಲಾ ಮಕ್ಕಳಿಗೆ ಟ್ರ್ಯಾಕ್ಸ್ ಶೂಟ್ ವಿತರಣೆ
- ಶಬರಿಮಲೆ ದರ್ಶನ ಮುಗಿಸಿ ಮರಳುವಾಗ ಭೀಕರ ಅಪಘಾತ: 7 ವರ್ಷದ ಮಗು ಸೇರಿ ನಾಲ್ವರು ದುರ್ಮರಣ
Author: admin
ಚಿತ್ರದುರ್ಗ: ಟಿಟಿ ವಾಹನ ಪಲ್ಟಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಶಂಕರಿಬಾಯಿ(65), ಕುಮಾರ ನಾಯ್ಕ್(46) ಮತ್ತು ಶ್ವೇತಾ(38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನೇಪಿಡಾವ್ (ಮ್ಯಾನ್ಮಾರ್): ಮ್ಯಾನ್ಮಾರ್ ಮತ್ತು ನೆರೆಯ ಥೈಲ್ಯಾಂಡ್ ನಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಪರಿಣಾಮವಾಗಿ ಸುಮಾರು 700 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸುಮಾರು 1,700 ಜನರು ಗಾಯಗೊಂಡಿದ್ದಾರೆ. ಭೂಕಂಪದಲ್ಲಿ ಕಟ್ಟಡಗಳು, ಸೇತುವೆಗಳು, ರಸ್ತೆಗಳು, ಸಾರ್ವಜನಿಕ ಆಸ್ತಿಪಾಸ್ತಿಗಳು ನಾಶವಾಗಿದೆ. ಅನೇಕ ಸಾವು-ನೋವುಗಳು ವರದಿಯಾಗಿವೆ. ಭೂಕಂಪಕ್ಕೆ ಸಂಬಂಧಪಟ್ಟ ಫೋಟೋ-ವಿಡಿಯೊಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿವೆ. ಶುಕ್ರವಾರ ಮಧ್ಯ ಮ್ಯಾನ್ಮಾರ್ನ ಸಾಗೈಂಗ್ ನಗರದ ವಾಯುವ್ಯಕ್ಕೆ 7.7 ತೀವ್ರತೆಯ ಭೂಕಂಪ ಸಂಭವಿಸಿದ್ದು, ದೇಶದ ದೊಡ್ಡ ಭಾಗಗಳಲ್ಲಿ ಭಾರೀ ಹಾನಿ ಸಂಭವಿಸಿದೆ. ದೇಶದ ಎರಡನೇ ಅತಿದೊಡ್ಡ ನಗರವಾದ ಮಂಡಲೇ ಸೇರಿದಂತೆ ಆರು ಪ್ರದೇಶಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ, ಇದು ಭೂಕಂಪದ ಕೇಂದ್ರಬಿಂದುವಿಗೆ ಹತ್ತಿರದಲ್ಲಿದ್ದು, ಪ್ರಕೃತಿ ವಿಕೋಪದಿಂದ ಭಾರೀ ವಿನಾಶ ಕಂಡಿದೆ. ಮ್ಯಾನ್ಮಾರ್ ಗೆ ಭಾರತ ನೆರವು, ಅಗತ್ಯ ಸಾಮಗ್ರಿಗಳ ರವಾನೆ ಭೂಕಂಪದಿಂದ ಅಪಾರ ಸಾವು-ನೋವು ನಷ್ಟ ಉಂಟಾಗಿರುವ ಮ್ಯಾನ್ಮಾರ್ ಸಹಾಯಕ್ಕೆ ಭಾರತ ಮುಂದಾಗಿದೆ. ಮಾನವೀಯ ನೆರವು ನೀಡಲು ವಿಮಾನವನ್ನು ಕಳುಹಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್…
ತುಮಕೂರು: ಯುಜಿಸಿ ನಿರ್ದೇಶನದಂತೆ ಮೈಸೂರಿನ ಕರಾಮುವಿ 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ 2025ರ ಮಾರ್ಚ್ 31 ಅಂತಿಮ ದಿನಾಂಕವಾಗಿರುವುದರಿಂದ, ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ ಸಾರ್ವತ್ರಿಕ ರಜಾ ದಿನಗಳಾದ ಮಾರ್ಚ್ 30ರ ಚಾಂದ್ರಮಾನ ಯುಗಾದಿ (ಭಾನುವಾರ) ಮತ್ತು ಮಾರ್ಚ್ 31ರ ರಂಜಾನ್ (ಸೋಮವಾರ) ದಿನಗಳಂದು ಕರಾಮುವಿ ತುಮಕೂರು ಪ್ರಾದೇಶಿಕ ಕೇಂದ್ರದ ಕಛೇರಿ ತೆರೆಯುವ ಮೂಲಕ ಪ್ರವೇಶಾತಿ ಮಾಡಿಕೊಳ್ಳಲಾಗುವುದು. ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ ಯುಜಿಸಿ ಅನುಮೋದಿತ ಸ್ನಾತಕ/ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ/ಬಿ.ಕಾಂ/ಬಿ.ಬಿ.ಎ/ಬಿ.ಸಿ.ಎ/ಬಿ.ಎಲ್.ಐ.ಎಸ್ಸಿ ಹಾಗೂ ಬಿ.ಎಸ್ಸಿ., ಎಂ.ಎ/ಎಂ.ಸಿ.ಜೆ., ಎಂ.ಕಾಂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ., ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್., ಡಿಪ್ಲೋಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ ಪಡೆಯಬಹುದಾಗಿದೆ. ಹೆಚ್ಚಿನ ವಿವರಗಳಿಗಾಗಿ:…
ತುಮಕೂರು: ತುಮಕೂರು ವಿಶ್ವವಿದ್ಯಾನಿಲಯ ಅಭಿವೃದ್ಧಿಗೆ ಆರ್ಥಿಕ ಶಕ್ತಿಯನ್ನು ನೀಡಲಾಗುವುದು ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿ ವತಿಯಿಂದ ಬಿದರಕಟ್ಟೆಯಲ್ಲಿರುವ ತುಮಕೂರು ವಿಶ್ವವಿದ್ಯಾನಿಲಯದ ಜ್ಞಾನಸಿರಿ ಕ್ಯಾಂಪಸ್ ಆವರಣದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ‘ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ’ದ ಉದ್ಘಾಟನೆಯನ್ನು ನೆರವೇರಿಸಿದ ಬಳಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಗೊಂದು ವಿಶ್ವವಿದ್ಯಾಲಯ ಎಂಬ ಪರಿಕಲ್ಪನೆ ಇಟ್ಟುಕೊಂಡು ದೇಶದಲ್ಲೇ ಮೊದಲ ಬಾರಿಗೆ ತುಮಕೂರು ವಿಶ್ವದ್ಯಾಲಯ ಸ್ಥಾಪಿಸಲಾಯಿತು. ಆಧುನಿಕ ವಿಜ್ಞಾನ ವಿಶ್ವವಿದ್ಯಾಲಯವಾಗಬೇಕು ಎಂಬ ಚಿಂತನೆ ಇಟ್ಟುಕೊಂಡು ಸ್ಥಾಪಿಸಲಾಯಿತು. ರಾಜ್ಯ ಮತ್ತು ದೇಶದಲ್ಲಿ ಆಧುನಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಪಟ್ಟ ವಿವಿ ಆಗಬೇಕು ಎಂಬುದು ನನ್ನ ಉದ್ದೇಶವಾಗಿತ್ತು. ಆದರೆ, ಸಾಮಾನ್ಯ ವಿಶ್ವವಿದ್ಯಾಲಯವಾಗಿದೆ. ತುಮಕೂರು ವಿಶ್ವವಿದ್ಯಾನಿಲಯ ನಗರದಿಂದ ದೂರ ಆಗಿದೆ ಎಂಬುದನ್ನು ಹೊರತುಪಡಿಸಿದರೆ, ಮುಂದಿನ ದಿನಗಳಲ್ಲಿ ಉತ್ತಮ ಭವಿಷ್ಯವಿದೆ. ಇದನ್ನು ಬೆಳೆಸುವುದು ನಮ್ಮೆಲ್ಲರ ಹೊಣೆ ಎಂದು ಅವರು ಹೇಳಿದರು. ಉಪ…
ತುಮಕೂರು: ನಮ್ಮ ಸಂವಿಧಾನವು ವ್ಯಕ್ತಿ ಅಥವಾ ಪಕ್ಷಗಳೊಂದಿಗೆ ಗುರುತಿಸಿಕೊಳ್ಳುವುದಿಲ್ಲ. ಬದಲಿಗೆ ಎಲ್ಲರಿಗೂ ನ್ಯಾಯ ಒದಗಿಸುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ನಮ್ಮ ಸಂವಿಧಾನದ ಆತ್ಮವಾಗಿದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾದೇಶಿಕ ನಿರ್ದೇಶಕರಾದ ಡಾ. ಸುಧಾಕರ ಹೊಸಳ್ಳಿ ತಿಳಿಸಿದರು. ವಿವಿ ಕಲಾ ಕಾಲೇಜಿನ ಇತಿಹಾಸ ಉಪನ್ಯಾಸ ಡಾ.ಮಹೇಶ್ ಕುಮಾರ್ ಅವರ ‘ಅಂಬೇಡ್ಕರ್ ಚಿಂತನೆಗಳು: ಸಾಮಾಜಿಕ ಮತ್ತು ರಾಜಕೀಯ ವಿಶ್ಲೇಷಣೆ’ ಕೃತಿಯನ್ನು ಗುರುವಾರ ಬಿಡುಗಡೆ ಮಾಡಿ ಮಾತನಾಡಿದ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಗತ್ತಿನ ಸಮಾನತೆಯನ್ನು ಪ್ರತಿಪಾದಿಸುವಲ್ಲಿ ಮತ್ತು ಸಮಾಜವನ್ನು ಮುಟ್ಟುವಂತಹ ಕೃತಿಗಳನ್ನು ರಚಿಸುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಅಂಬೇಡ್ಕರ್ ಅವರ ವಿಷಯಗಳನ್ನು ರಮಣೀಯವಾಗಿ ಮಾತನಾಡುವುದಕ್ಕೆ ಸಾಧ್ಯವಿಲ್ಲ. ಅವು ಗಂಭೀರವಾಗಿ ಚರ್ಚಿಸಬೇಕಾದ ವಿಷಯಗಳು ಎಂದರು. ಬಾಬಾ ಸಾಹೇಬ್ ಅಂಬೇಡ್ಕರ್ ವಿಶ್ವವಿದ್ಯಾನಿಲಯದಂತಹ ದೊಡ್ಡ ವಿಷಯ. ಶೈಕ್ಷಣಿಕ ವೇದಿಕೆಗಳಲ್ಲಿ ಅಂಬೇಡ್ಕರ್ ಚಿಂತನೆಗಳ ವೈಶಾಲ್ಯತೆಯನ್ನು ಸಾಮೂಹಿಕವಾಗಿ ನೆನಪಿಸಿಕೊಳ್ಳುವುದು ಅತ್ಯಗತ್ಯ. ಅವರು ಭಾರತದ ಆಶಾಕಿರಣ ವಾಗಿದ್ದು ಅವರ ಬರಹಗಳು ಮತ್ತು ಭಾಷಣಗಳು ಸಮಾಜಕ್ಕೆ ಮಾರ್ಗದರ್ಶನ ನೀಡುತ್ತವೆ ಎಂದರು.…
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕ ಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ತರಬೇತಿಯಲ್ಲಿ ಭಾಗವಹಿಸಲಿಚ್ಛಿಸುವವರು ಏಪ್ರಿಲ್ 2ರೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0821-2515944ನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಪ್ರೊ: ಕೆ.ಬಿ.ಪ್ರವೀಣ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬುಧವಾರ ನವದೆಹಲಿಯ ಇಂಡಿಯಾ ಇಂಟರ್ ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ಡೆಮಾಕ್ರಸಿ & ಎಲೆಕ್ಷನ್ ಮ್ಯಾನೇಜ್ಮೆಂಟ್ (IIIDEM)ನಲ್ಲಿ ಚುನಾವಣಾ ಆಯೋಗದ ಚುನಾವಣಾ ಆಯುಕ್ತ ಡಾ. ವಿವೇಕ್ ಜೋಶಿ ಅವರೊಂದಿಗೆ ಹಮ್ಮಿಕೊಂಡಿದ್ದ ಮತಗಟ್ಟೆ ಮಟ್ಟದ ಅಧಿಕಾರಿ(BLO)ಗಳ ಮೊದಲ ತರಬೇತಿಯನ್ನು ಭಾರತೀಯ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಉದ್ಘಾಟಿಸಿದರು. ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ಕೆಲವು ವರ್ಷಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬಿಎಲ್ಒಗಳಿಗೆ ಇಂತಹ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ. ಈ ತರಬೇತಿ ಪಡೆದ ಬಿಎಲ್ಒಗಳು ದೇಶಾದ್ಯಂತ ವಿಧಾನಸಭಾ ಕ್ಷೇತ್ರ ಮಟ್ಟದ ಮಾಸ್ಟರ್ ತರಬೇತುದಾರರ (ALMTಗಳು) ಒಂದು ಗುಂಪನ್ನು ರಚಿಸುತ್ತಾರೆ. ಇವರು 100 ಕೋಟಿ ಮತದಾರರು ಹಾಗೂ ಆಯೋಗದ ನಡುವಿನ ಮೊದಲ ಮತ್ತು ಪ್ರಮುಖ ಸಂಪರ್ಕ ಸಾಧನವಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ವಿಶಿಷ್ಟ ಸಾಮರ್ಥ್ಯ ನಿರ್ಮಾಣ ಕಾರ್ಯಕ್ರಮವು ಹಂತ ಹಂತವಾಗಿ ಮುಂದುವರಿಯಲಿದ್ದು, ಈ ತರಬೇತಿ ಕಾರ್ಯಕ್ರಮದಲ್ಲಿ ಬಿಹಾರ, ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ ಮತ್ತು ತಮಿಳುನಾಡಿನ 109 ಬಿಎಲ್…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿ 1 ರಿಂದ 35ನೇ ವಾರ್ಡುಗಳಲ್ಲಿರುವ ಎಲ್ಲಾ ಆಸ್ತಿ(ಎ–ಖಾತಾ, ಬಿ-ಖಾತಾ ರಿಜಿಸ್ಟರ್)ಗಳನ್ನು ಇ–ಆಸ್ತಿಯಲ್ಲಿ ಕಾಲೋಚಿತಗೊಳಿಸಬೇಕಾಗಿರುವುದರಿಂದ ಆಸ್ತಿ ಮಾಲೀಕರು ಇ–ಆಸ್ತಿ ತಂತ್ರಾಂಶದಲ್ಲಿ ಖಾತಾ ಸೃಜನೆಗೆ ಅರ್ಜಿ ಸಲ್ಲಿಸಬೇಕು ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಮನವಿ ಮಾಡಿದ್ದಾರೆ. ಸಾರ್ವಜನಿಕರು ಇ–ಆಸ್ತಿ ತಂತ್ರಾಂಶದಲ್ಲಿ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಸೃಜನೆಗೆ ನಿಗದಿತ ಶುಲ್ಕ 50 ರೂ.ಗಳನ್ನು ಪಾವತಿಸಿ ವಾರ್ಡು ಸಂಖ್ಯೆ 13ರಲ್ಲಿ ಮಹಾನಗರಪಾಲಿಕೆ ಆವರಣ, ವಾರ್ಡು ಸಂಖ್ಯೆ 2ರಲ್ಲಿ ಶಿರಾಗೇಟ್ ವಾಣಿಜ್ಯ ಸಂಕೀರ್ಣದ ಆವರಣ, ವಾರ್ಡ್ ಸಂಖ್ಯೆ 24ರಲ್ಲಿ ಎಸ್.ಎಸ್.ಪುರಂ 14ನೇ ಕ್ರಾಸ್, ವಾರ್ಡ್ ಸಂಖ್ಯೆ 31ರಲ್ಲಿ ಮಾರುತಿ ನಗರ ವಾಟರ್ ಟ್ಯಾಂಕ್ ಬಳಿ, ವಾರ್ಡ್ ಸಂಖ್ಯೆ 33ರಲ್ಲಿ ಎನ್.ಹೆಚ್.-4 ಕ್ಯಾತ್ಸಂದ್ರ ಇಂದಿರಾ ಕ್ಯಾಂಟೀನ್ ಪಕ್ಕದಲ್ಲಿರುವ ತುಮಕೂರು ಒನ್ ಸೇವಾ ಕೇಂದ್ರಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರು ಖಾತಾ ಸೃಜನೆಗೆ ಅರ್ಜಿ ಸಲ್ಲಿಸುವಾಗ 2024ರ ಏಪ್ರಿಲ್ 1ರ ನಂತರದ ನೋಂದಾಯಿತ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್ ಲೋಡ್ ಮಾಡುವ ಅವಶ್ಯಕತೆಯಿರುವುದಿಲ್ಲ. ನೋಂದಾಯಿತ ಪತ್ರ ಮತ್ತು…
ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರು ಏಪ್ರಿಲ್ 30ರೊಳಗಾಗಿ ಆಸ್ತಿ ತೆರಿಗೆ, ನೀರಿನ ಶುಲ್ಕ ಹಾಗೂ ಯುಜಿಡಿ ಶುಲ್ಕಗಳನ್ನು ಪಾವತಿಸುವ ಮೂಲಕ ಆಸ್ತಿ ತೆರಿಗೆಯ ಮೇಲೆ ಶೇ.5ರಷ್ಟು ತೆರಿಗೆ ರಿಯಾಯಿತಿ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಮಾಲೀಕರು 2025–26ನೇ ಸಾಲಿಗೆ ಸಂಬಂಧಿಸಿದಂತೆ ತಮ್ಮ ಆಸ್ತಿ ತೆರಿಗೆ, ನೀರಿನ ಶುಲ್ಕ ಹಾಗೂ ಯುಜಿಡಿ ಶುಲ್ಕಗಳನ್ನು ನಗದು ಪಾವತಿ ಕೌಂಟರ್/ ಕರ್ನಾಟಕ ಒನ್ ಕೇಂದ್ರ/ ಆನ್ಲೈನ್(ವೆಬ್ಸೈಟ್ ವಿಳಾಸ: www.tumakurucitycorp.org) ಮೂಲಕ ಅಥವಾ ವಾರ್ಡ್ ಬಿಲ್ ಕಲೆಕ್ಟರ್ಗಳಿಗೆ ನೇರವಾಗಿ ಪಾವತಿಸಿ ರಸೀದಿ ಪಡೆಯಬಹುದಾಗಿದೆ. ಮಹಾ ನಗರಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಈ ಸದವಕಾಶದ ಪ್ರಯೋಜನ ಪಡೆಯಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಎಸ್ ಬಿಐ ಗ್ರಾಮೀಣ ಸ್ವ– ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗಾಗಿ ಉಚಿತ ಊಟ ಹಾಗೂ ವಸತಿಯೊಂದಿಗೆ 30 ದಿನಗಳ ದ್ವಿಚಕ್ರ ವಾಹನ ಮೆಕ್ಯಾನಿಕ್ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ಕನ್ನಡ ಓದಲು ಹಾಗೂ ಬರೆಯಲು ಬರುವ 18 ರಿಂದ 45 ವಯೋಮಾನದೊಳಗಿನ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಏಪ್ರಿಲ್ 5ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸಿಂಗನಹಳ್ಳಿ ಕಾಲೋನಿ, ಹಿರೇಹಳ್ಳಿ ಕೈಗಾರಿಕಾ ಪ್ರದೇಶ, ತುಮಕೂರು ನಿರ್ಮಿತಿ ಕೇಂದ್ರದ ಹತ್ತಿರ, ತುಮಕೂರು-572104 ಅಥವಾ ದೂ.ವಾ.ಸಂ.0816-2243386, ಮೊ.ಸಂ.9738351048/ 9663680001ನ್ನು ಸಂಪರ್ಕಿಸಬೇಕೆಂದು ಸಂಸ್ಥೆಯ ನಿರ್ದೇಶಕ ವಾದಿರಾಜ್ ಕೆ.ಎನ್. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4