Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ತುರುವೇಕೆರೆ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊಸದಾಗಿ ಜಾರಿಗೆ ತಂದಿರುವ ಎಫ್.ಎಫ್.ಎಸ್ (FFS) ಮೊಬೈಲ್ ಆಪ್ನಿಂದಾಗಿ ರೈತರಿಗೆ ಮತ್ತು ರಸಗೊಬ್ಬರ ವ್ಯಾಪಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆರೋಪಿಸಿ, ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ವತಿಯಿಂದ ತಹಶೀಲ್ದಾರ್ ಕುಂಞಿ ಅಹಮದ್ ಅವರಿಗೆ ಮನವಿ ಸಲ್ಲಿಸಲಾಯಿತು. ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ತಾಲ್ಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಹೆಚ್.ಆರ್.ರಂಗನಾಥ್, “ಹೊಸ ಪಿಒಎಸ್ (POS) ಮಿಷನ್ಗೆ ಅಳವಡಿಸಲಾಗಿರುವ ಎಫ್.ಎಫ್.ಎಸ್ ಮೊಬೈಲ್ ಆಪ್ನಲ್ಲಿನ ನಿಯಮಗಳು ಮತ್ತು ಮಾಹಿತಿ ಎಲ್ಲಾ ರೈತರಿಗೂ ಸಮರ್ಪಕವಾಗಿ ತಿಳಿದಿರುವುದಿಲ್ಲ. ಒಂದು ವೇಳೆ ನಿಯಮಗಳ ಅರಿವಿದ್ದರೂ, ಆಪ್ ಬಳಸಲು ಬೇಕಾದ ಆಂಡ್ರಾಯ್ಡ್ ಮೊಬೈಲ್ ಫೋನ್ಗಳು ಬಹುತೇಕ ಗ್ರಾಮೀಣ ಭಾಗದ ರೈತರಲ್ಲಿ ಇರುವುದಿಲ್ಲ. ಇದರಿಂದಾಗಿ ಪ್ರತಿನಿತ್ಯ ರೈತರು ಹಾಗೂ ಮಾರಾಟಗಾರರ ಮಧ್ಯೆ ಅನಗತ್ಯ ವಾಗ್ವಾದಗಳು ನಡೆಯುತ್ತಿದ್ದು, ರೈತರಿಗೆ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವುದು ಕಷ್ಟಸಾಧ್ಯವಾಗಿದೆ,” ಎಂದು ಅಳಲು ತೋಡಿಕೊಂಡರು. “ಈಗಾಗಲೇ ಮುಂಗಾರು ಹಂಗಾಮು ಪ್ರಾರಂಭವಾಗಿರುವುದರಿಂದ ರೈತರು ಗೊಬ್ಬರಕ್ಕಾಗಿ ಮುಗಿಬೀಳುತ್ತಿದ್ದಾರೆ. ಈ ಸಂದರ್ಭದಲ್ಲಿ ಗೊಬ್ಬರದ…
ಪಾವಗಡ: ರಾಜ್ಯ ಸರ್ಕಾರ ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳನ್ನು ತೆರೆದು ಗುಣಮಟ್ಟದ ವಿದ್ಯಾಭ್ಯಾಸ ನೀಡುವ ಸಲುವಾಗಿ ಕೋಟ್ಯಂತರ ಹಣ ಖರ್ಚು ಮಾಡುತ್ತಿದೆ. ಆದರೆ ಇಲ್ಲಿನ ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿದ್ಯಾರ್ಥಿಗಳು ನಾನಾ ಕಷ್ಟಗಳನ್ನು ಅನುಭವಿಸುವಂತಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ. ತಾಲ್ಲೂಕಿನ ವೆಂಕಟಾಪುರ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಸರ್ಕಾರ ನೀಡುವ ಸೌಲಭ್ಯಗಳು ಸಿಗದೇ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇಂದಿರಾ ಗಾಂಧಿ ವಸತಿ (ಪ್ರ.ವರ್ಗ) ಶಾಲೆಯ ವಿದ್ಯಾರ್ಥಿ ಕೊಠಡಿಗಳು ಹಾಗೂ ಶೌಚಾಲಯಗಳು ದುರ್ವಾಸನೆ ಬೀರುತ್ತಿವೆ, ಶಾಲೆ ಪ್ರಾರಂಭವಾಗಿ ಒಂದು ತಿಂಗಳಾಗಿದೆ, ಮಕ್ಕಳಿಗೆ ಬೆಡ್, ದಿನಚರಿ ಕಿಟ್ ನೀಡಿಲ್ಲ, ವಸತಿ ಕೊಠಡಿಗಳಲ್ಲಿ ಫ್ಯಾನ್ ಕೆಲವು ಕೆಟ್ಟು ನಿಂತಿದ್ದರೂ ವಸತಿ ಶಾಲೆಯ ಪ್ರಾಂಶುಪಾಲರು ಮಾತ್ರ ನಿರ್ಲಕ್ಷ್ಯ ಭಾವನೆ ಹೊಂದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಸತಿ ಶಾಲೆಯ ಅಕ್ಕ ಪಕ್ಕದಲ್ಲಿ ಗಿಡ ಗಂಟೆಗಳು ಬೆಳೆದು ಸೊಳ್ಳೆಗಳ ತಾಣವಾಗಿದೆ. ಒಳಗೆ ಮತ್ತು ಹೊರಗೆ ಸ್ವಚ್ಛತೆಯಿಲ್ಲದ ಕಾರಣ ರೋಗರುಜನಗಳಿಗೆ ತುತ್ತಾಗುವುದರಲ್ಲಿ ಯಾವುದೇ ಸಂಶಯವಿಲ್ಲ, 5-6 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಸೊಳ್ಳೆ…
ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಮಲ ಹೊರುವ ಪದ್ಧತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಆದೇಶ…
ತುಮಕೂರು: ನಗರದಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಎಂಡಿಎಂಎ ಕ್ರಿಸ್ಟಲ್ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ ತುಮಕೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಅಸಾದುಲ್ಲಾ ಷರೀಫ್ ಮತ್ತು ಅಯೂಬ್ ಪಾಷಾ ಶಿಕ್ಷೆಗೊಳಗಾದ ಅಪರಾಧಿಗಳು. ಕಳೆದ ಜೂನ್ 6 ರಂದು ತುಮಕೂರು ನಗರದ ಮರಳೂರು ದಿಣ್ಣೆಯ ಅಂಕಿತ ಶಾಲೆ ಬಳಿ ಟಾಟಾ ಸಫಾರಿ ವಾಹನದಲ್ಲಿ ಇಟ್ಟುಕೊಂಡು ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಸಿಐಎನ್ ಪೊಲೀಸರು ಜಂಟಿ ದಾಳಿ ನಡೆಸಿ, ಆರೋಪಿಗಳಾದ ಅಸಾದುಲ್ಲಾ ಷರೀಫ್ ಮತ್ತು ಅಯೂಬ್ ಪಾಷಾನನ್ನು ವಶಕ್ಕೆ ಪಡೆದಿದ್ದರು. ಬಂಧಿತರಿಂದ 10 ಕೆ.ಜಿ 669 ಗ್ರಾಂ ಗಾಂಜಾ ಸೊಪ್ಪು ಹಾಗೂ 4.05 ಗ್ರಾಂ ಎಂಡಿಎಂಎ (MDMA) ಕ್ರಿಸ್ಟಲ್ ಅನ್ನು ವಶಪಡಿಸಿಕೊಳ್ಳಲಾಗಿತ್ತು. ಪೊಲೀಸರು ಆರೋಪಿಗಳ ವಿರುದ್ಧ ಎನ್ಡಿಪಿಎಸ್ (NDPS) ಕಾಯ್ದೆ 1985ರ ಸೆಕ್ಷನ್ 20(ಬಿ)(2)(ಬಿ) ಅಡಿಯಲ್ಲಿ…
ತುರುವೇಕೆರೆ: ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಕೆ.ಇ.ಆರ್.ಸಿ. ಗೆ ಸಲ್ಲಿಸಿರುವ ಅರ್ಜಿಯನ್ನು ಸರ್ಕಾರ ಕೂಡಲೇ ತಿರಸ್ಕರಿಸುವಂತೆ ಕೋರಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ತಹಶೀಲ್ದಾರ್ ಕುಂಞಿಅಹಮದ್ ಅವರಿಗೆ ಮನವಿ ಸಲ್ಲಿಸಲಾಯಿತು. ತಾಲ್ಲೂಕು ಘಟಕದ ಅಧ್ಯಕ್ಷ ಎ.ಗಂಗಾಧರಯ್ಯ ಅವರು ಮನವಿ ನೀಡಿ ಮಾತನಾಡಿ ಕರ್ನಾಟಕ ರಾಜ್ಯದ ವಿದ್ಯುತ್ ವಿತರಣಾ ಸಂಸ್ಥೆಗಳು ರಾಜ್ಯದ ರೈತರು, ಬಡವರು, ಮಧ್ಯಮ ವರ್ಗದ ಜನರು, ಸಣ್ಣ ಕೈಗಾರಿಕೆ ಹಾಗೂ ವ್ಯಾಪಾರಿಗಳಿಗೆ ನಿರಂತರವಾಗಿ ಗುಣಮಟ್ಟದ ವಿದ್ಯುತ್ ಸೇವೆಯನ್ನು ಒದಗಿಸುತ್ತಿವೆ. ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನದಲ್ಲಿ ವಿದ್ಯುತ್ ವಿತರಣಾ ಸಂಸ್ಥೆಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರಸ್ತುತ ಟಾಟಾ ಪವರ್ ಕಂಪನಿ ಲಿಮಿಟೆಡ್ ರಾಜ್ಯದಲ್ಲಿ ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಪಡೆಯಲು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ(ಕೆ.ಇ.ಆರ್.ಸಿ) ಗೆ ಅರ್ಜಿ ಸಲ್ಲಿಸಿರುವುದು ತಿಳಿದು ಬಂದಿದ್ದು ಖಾಸಗಿ ಕಂಪನಿಗಳ…
ತುರುವೇಕೆರೆ: ನಾಡಪ್ರಭು ಕೆಂಪೇಗೌಡರು ಒಂದೇ ಜಾತಿಗೆ ಅಥವಾ ಸಮುದಾಯದ ಒಂದೇ ಸಮಾಜಕ್ಕೆ ಸೀಮಿತರಾಗದೆ ಜಾತ್ಯತೀತವಾಗಿ ಆಡಳಿತ ನಡೆಸಿದ್ದರು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು. ಪಟ್ಟಣದ ಬಿಜಿಎಸ್ ಸಮುದಾಯ ಭವನದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ, ಒಕ್ಕಲಿಗ ನೌಕರರ ಸಂಘ, ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ಸಂಘ ಹಾಗೂ ಶ್ರೀ ಕೆಂಪೇಗೌಡ ಯುವಸೇನೆ ಇವುಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರೀ ಕೆಂಪೇಗೌಡರ 517ನೇ ಜಯಂತಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಧಾನ ಭಾಷಣಕಾರ ಉಪನ್ಯಾಸಕರಾದ ಎಸ್.ಎಲ್.ವಿಜಯ್ ಕುಮಾರ್ ಕೆಂಪೇಗೌಡರ ಕುರಿತು ಮಾತನಾಡುತ್ತಾ, ಕೆಂಪೇಗೌಡರು ನಾಡಿನಲ್ಲಿ ವಿಶಿಷ್ಟ ಸ್ಥಾನ ಪಡೆದವರು. ಬೆಂಗಳೂರು ಈ ಮಟ್ಟಕ್ಕೆ ಬೆಳೆದಿದೆ ಎಂದರೆ ನಾಡಪ್ರಭು ಕೆಂಪೇಗೌಡರ ಪಾತ್ರ ಅಪಾರ. ಅವರ ಸಾಮಾಜಿಕ ಕಳಕಳಿ ಹಾಗೂ ಜನಪರ ಕಾರ್ಯಗಳೇ ಸಾಕ್ಷಿಯಾಗಿವೆ ಎಂದರು. ಪಟ್ಟಣ ತಾಲ್ಲೂಕು ಕಚೇರಿಯಿಂದ ಬೈಕ್ ರ‍್ಯಾಲಿ ಹಾಗೂ ಕೆಂಪೇಗೌಡರ ಭಾವಚಿತ್ರದೊಂದಿಗೆ ವಿವಿಧ ಜಾನಪದ ಕಲಾ ಪ್ರಕಾರಗಳೊಂದಿಗೆ ಬಿಜಿಎಸ್ ವೇದಿಕೆವರೆಗೂ ಮೆರವಣಿಗೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ…
ತುಮಕೂರು: ಸಾರ್ವಜನಿಕರಿಂದ ಸ್ವೀಕೃತವಾದ ದೂರು ಅರ್ಜಿಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದೆ ಕರ್ತವ್ಯಲೋಪ ಎಸಗಿರುವುದೂ ಸೇರಿದಂತೆ ವಿವಿಧ 9 ಕಾರಣಗಳನ್ನು ಉಲ್ಲೇಖಿಸಿ ಹೆಗ್ಗರೆ ಗ್ರಾಮ ಪಂಚಾಯಿತಿ ಪಿಡಿಒ ಅವರನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಮಾನತುಗೊಳಿಸಿದ್ದಾರೆ. ಪಿಡಿಒ ಕೆ.ಟಿ.ಮೋಹನ್ ಕುಮಾರ್ ಅವರೇ ಅಮಾನತಿಗೆ ಒಳಗಾಗಿರುವ ಅಧಿಕಾರಿ. ಇವರು ನಿಗದಿತ ಗ್ರಾಮ ಸಭೆ ಹಾಗೂ ವಾರ್ಡ್ ಸಭೆಗಳನ್ನು ನಡೆಸಿಲ್ಲ. ಸ್ಥಾಯಿ ಸಮಿತಿ ಸಭೆಗಳನ್ನೂ ನಿಗದಿತವಾಗಿ ನಡೆಸಿಲ್ಲ. ಸಾಮಾನ್ಯ ಸಭೆಗಳನ್ನು ನಡೆಸಲು ಕ್ರಮಕೈಗೊಳ್ಳದೆ ಕರ್ತವ್ಯಲೋಪ ಎಸಗಿದ್ದಾರೆ. ಕಟ್ಟಡ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯದೆ ವ್ಯಕ್ತಿಯೊಬ್ಬರು ಕಟ್ಟಡ ನಿರ್ಮಾಣ ಮಾಡಿದ್ದರೂ ಯಾವುದೇ ಕ್ರಮಕೈಗೊಂಡಿಲ್ಲ. ಪರಿಶಿಷ್ಟರ ಅನುದಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಲ್ಲ. ಬೀದಿದೀಪಗಳನ್ನು ಖರೀದಿಸುವಾಗ ಟೆಂಡರ್ ಪ್ರಕ್ರಿಯೆ ನಡೆಸದೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಸಿರುತ್ತಾರೆ. ಪಂಚಾಯಿತಿ ಸದಸ್ಯರ ಹಾಜರಾತಿಯನ್ನು ತಂತ್ರಾಂಶದಲ್ಲಿ ನಮೂದಿಸದೆ ಕರ್ತವ್ಯಲೋಪ ಎಸಗಿದ್ದಾರೆ. ಈ ಎಲ್ಲಾ ಕಾರಣಗಳಿಗೆ ನೋಟಿಸ್ ನೀಡಿದ್ದರೂ ಸಹ ಸಮಜಾಯಿಷಿ ಉತ್ತರ ನೀಡದೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳನ್ನು ಉಲ್ಲಂಘಿಸಿರುತ್ತಾರೆ. ಈ…
ತುಮಕೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ಟೀಮ್ ಈಶ್ವರ್ ಮಲ್ಲೆ ಸಹಯೋಗದಲ್ಲಿ ಶನಿವಾರ ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರಿಗೆ ಉಚಿತ ಶ್ರವಣ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಟೀಮ್ ಈಶ್ವರ್ ಮಲ್ಲೆ ತಂಡದ ಡಾ. ಪವನ್ ಮತ್ತು ತಂಡದವರು ಶಿಬಿರದಲ್ಲಿ ಶ್ರವಣ ತಪಾಸಣೆ ಮಾಡಿದರು. ನಂತರ ಅಗತ್ಯವಿರುವವರಿಗೆ ಸಹಾಯಧನದ ಮೂಲಕ ಶ್ರವಣ ಯಂತ್ರಗಳನ್ನು ವಿತರಿಸಲಾಯಿತು. ಟೀಮ್ ಈಶ್ವರ್ ಮಲ್ಲೆ ತಂಡದ ಸಂಚಾಲಕ ಲವ ಬಂಗೇರಾ, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಎಲ್. ಯೋಗೇಶ್, ಜಿಲ್ಲಾ ಖಜಾಂಚಿ ಸತೀಶ್ ಹಾರೋಗೇರೆ, ನಿರ್ದೇಶಕರಾದ ವಿಜಯ್, ದೊಡೇರಿ ಕೆಂಚಮಯ್ಯ ಸೇರಿದಂತೆ ಸಂಘದ ಪದಾಧಿಕಾರಿಗಳು, ಹಲವು ಪತ್ರಕರ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ತಾಲೂಕಿನಲ್ಲಿ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತವಾಗಬಾರದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಜ್ಯೋತ್ಸ್ನಾ ರೆಡ್ಡಿ ಕರೆ ನೀಡಿದರು. ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೊರಟಗೆರೆ ರೋಟರಿ ಕ್ಲಬ್ ಸಹಯೋಗದಲ್ಲಿ ಭಾನುವಾರ ಸಾರ್ವಜನಿಕ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಇಂದಿನಿಂದ ಮೂರು ದಿನಗಳ ಕಾಲ ಆರೋಗ್ಯ ಸಿಬ್ಬಂದಿ ಮನೆ ಮನೆಗೆ ತೆರಳಿ ಲಸಿಕೆ ನೀಡಲಿದ್ದಾರೆ ಎಂದು ತಿಳಿಸಿದರು. ಕೊರಟಗೆರೆ ರೋಟರಿ ಕ್ಲಬ್ ಅಧ್ಯಕ್ಷ ಎ.ಜಿ. ಮಂಜುನಾಥ್ ಮಾತನಾಡಿ, ರೋಟರಿ ಇಂಟರ್ ನ್ಯಾಷನಲ್ ಕಳೆದ 35 ವರ್ಷಗಳಿಂದ ‘ಎಂಡ್ ಪೋಲಿಯೋ ನೌ’ ಅಭಿಯಾನ ನಡೆಸುತ್ತಿದ್ದು, ತಾಲೂಕಿನ ಪ್ರತಿಯೊಂದು ಗ್ರಾಮ ಹಾಗೂ ಮನೆಗೆ ಭೇಟಿ ನೀಡಿ ಅಭಿಯಾನ ಯಶಸ್ವಿಗೊಳಿಸಲಾಗುವುದು ಎಂದರು. ರೋಟರಿ ಚಾರ್ಟೆಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ಸರ್ಕಾರದೊಂದಿಗೆ ಕೈಜೋಡಿಸಿ ಶೇ.100ರಷ್ಟು ಲಸಿಕಾ ಗುರಿ ಸಾಧಿಸಲು ಸಾರ್ವಜನಿಕರು ಸಹಕರಿಸಬೇಕು ಹಾಗೂ ವದಂತಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದರು. ಸಾರ್ವಜನಿಕ ಆಸ್ಪತ್ರೆಯ…
ಸರಗೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿಯ ವತಿಯಿಂದ ಜುಲೈ 3ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ (ಫ್ರೀಡಂ ಪಾರ್ಕ್) ಹಮ್ಮಿಕೊಳ್ಳಲಾಗಿರುವ ‘ದಲಿತ ಜನಾಗ್ರಹ ಸಮಾವೇಶ’ದ ಪೋಸ್ಟರ್ ಅನ್ನು ಸೋಮವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ಆದಿಕರ್ನಾಟಕ ಮಹಾಸಭಾ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಜಂಟಿಯಾಗಿ ಪೋಸ್ಟರ್ ಬಿಡುಗಡೆ ಮಾಡಿ, ಸಮಾವೇಶದ ಸಿದ್ಧತೆಗಳಿಗೆ ಅಧಿಕೃತ ಚಾಲನೆ ನೀಡಿದರು. ಈ ಸಮಾವೇಶಕ್ಕೆ ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನಿಂದ ಇನ್ನೂರಕ್ಕೂ ಹೆಚ್ಚು ಕಾರ್ಯಕರ್ತರು ತೆರಳಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ. ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಮಾಜಿ ಆದಿಕರ್ನಾಟಕ ಮಹಾಸಭಾ ಅಧ್ಯಕ್ಷರಾದ ಸರಗೂರು ಶಿವಣ್ಣ, “ದಲಿತ ಸಮುದಾಯಕ್ಕೆ ಸಿಗಬೇಕಾಗಿರುವ ಸರ್ಕಾರಿ ಅಗತ್ಯ ಸೌಲಭ್ಯಗಳಾದ ಭೂಮಿ, ವಸತಿ ಹಾಗೂ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜುಲೈ 3ರಂದು ಬೆಂಗಳೂರಿನಲ್ಲಿ ಈ ಬೃಹತ್ ಜನಾಗ್ರಹ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ,” ಎಂದು ವಿವರಿಸಿದರು. ದಸಂಸ (ಅಂಬೇಡ್ಕರ್ ವಾದ) ಸಮಿತಿಯ ತಾಲ್ಲೂಕು ಸಂಚಾಲಕರಾದ ಕೂಡಗಿ…