Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಧಾರವಾಡ: ವೋಟಿಂಗ್ ಮಶಿನ್ ಗೊಂದಲ ಭಾರತ ದೇಶದಲ್ಲೇ ನಡೆಯುತ್ತಿದೆ. ಬಿಹಾರದ ಮೂರು ಲಕ್ಷ ಮನೆಗಳಿಗೆ ಜೀರೋ ನಂಬರ್ ಕೊಡಲಾಗಿದೆ. ಓಡಿಸ್ಸಾದಲ್ಲಿ ಕೂಡ ಎರಡೂವರೆ ಲಕ್ಷ ಮತಗಳು ಹೆಚ್ಚಾಗಿವೆ ಎಂಬ ಮಾಹಿತಿ ಇದೆ. ಚುನಾವಣೆ ವೇಳೆ ಆರೂವರೆ ಗಂಟೆವರೆಗೆ ವೋಟಿಂಗ್ ಮಾಡಿಸಲಾಗುತ್ತದೆ. ಬಿಹಾರದ ಒಂದೇ ಮನೆಯಲ್ಲಿ 950 ಮತಗಳನ್ನು ಜಾಸ್ತಿ ಮಾಡಿದ್ದಾರೆ. ಆದ್ದರಿಂದ ಮತ್ತೆ ಬ್ಯಾಲೆಟ್ ಸಿಸ್ಟಮ್ ಗೆ ಹೋಗುವುದು ಒಳ್ಳೆಯದು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಬ್ಯಾಲೆಟ್ ಪೇಪರ್ ಬಳಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದರು. ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ(ಎಸ್ ಐಆರ್) ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ರೊಹಿಂಗ್ಯಾಗಳು ಇದ್ದಾರೇನೋ ಎಂದು ತಿಳಿದುಕೊಂಡಿದ್ದಾರೆ. ಯಾವಾಗ ಚುನಾವಣೆ ಬರುತ್ತದೆಯೋ ಆಗ ಬಾಂಗ್ಲಾ ಮತ್ತು ಪಾಕಿಸ್ತಾನಕ್ಕೆ ಇವರು ಬೈಯುತ್ತಾರೆ. ಬಾಂಗ್ಲಾದೇಶದ ಮತ್ತು ರೋಹಿಂಗ್ಯಾಗಳು 2004 ರಿಂದ 2024ರ ವರೆಗೆ 72 ಸಾವಿರ ಜನರನ್ನು ಗುರುತಿಸಿ ಹೊರ ಕಳುಹಿಸಲಾಗಿದೆ. ಬಿಜೆಪಿಯವರು ಕಳೆದ…
ಸರಗೂರು: ಇಂದಿನ ಯುವ ಪೀಳಿಗೆಗೆ ನಾರಾಯಣ ಗುರುಗಳ ಮಾರ್ಗದರ್ಶನ ಅತ್ಯಗತ್ಯ. ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿ ಆಗಬೇಕು’ ಎಂದು ಆರ್ಯ ಈಡಿಗ ಸಮಾಜದ ತಾಲ್ಲೂಕು ಅಧ್ಯಕ್ಷ ಎಸ್.ಎನ್. ನಾಗರಾಜು ಸಲಹೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಭಾನುವಾರದಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಹಾಗೂ ನಾರಾಯಣ ಗುರುಗಳ ಫೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ರಕ್ತ ಕ್ರಾಂತಿ ಇಲ್ಲದೆ, ತಮ್ಮ ವಿಚಾರಗಳ ಮೂಲಕವೇ ಸಮಾಜ ಪರಿವರ್ತನೆಗೆ ಕಾರಣರಾದವರು ಬ್ರಹ್ಮಶ್ರೀ ನಾರಾಯಣ ಗುರುಗಳು, ಶತಮಾನದ ಹಿಂದೆ ಸಾಮಾಜಿಕ ನ್ಯಾಯಕ್ಕಾಗಿ ಹೋರಾಡುತ್ತಿದ್ದ ಜನರಿಗೆ ನ್ಯಾಯ ಒದಗಿಸಿಕೊಟ್ಟವರು ನಾರಾಯಣ ಗುರುಗಳು. ಅವರ ವಿಚಾರಗಳನ್ನು ಮುಂದಿನ ಪೀಳಿಗೆಗೂ ತಲುಪಿಸುವ ಕೆಲಸವಾಗಬೇಕು ಎಂದರು. ಪ್ರಾಸ್ತಾವಿಕ ನುಡಿ ವರ್ತಕರ ಮಂಡಳಿ ಮಾಜಿ ಅಧ್ಯಕ್ಷ ಎಸ್.ಎಂ.ಶ್ರೀನಿವಾಸ ಮಾತನಾಡಿ ‘ಶೋಷಿತ ವರ್ಗದವರಿಗೆ ಶಕ್ತಿ ತುಂಬಿದ ಮಹಾನ್ ಮಾನವತಾವಾದಿ ನಾರಾಯಣ ಗುರುಗಳು, ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಜೀವನದುದ್ದಕ್ಕೂ ಪಾಲಿಸೋಣ…
ತುಮಕೂರು: ಕೊಪ್ಪಳ, ಬಾದಾಮಿ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸೂಕ್ತ ಜಾಗವನ್ನು ಕಾಂಗ್ರೆಸ್ ಭವನ ಟ್ರಸ್ಟ್ ಗೆ ಮಂಜೂರು ಮಾಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ಆದರೆ ತುಮಕೂರಿನಲ್ಲಿ ಕಾಂಗ್ರೆಸ್ ಭವನ ಜಾಗ ವಿವಾದ ಮುಂದುವರಿದಿದೆ. ನಿಯಮ ಗಾಳಿಗೆ ತೂರಿ 2 ಎಕರೆ ಜಮೀನು ಮಂಜೂರು ಆರೋಪ ಕೇಳಿಬಂದಿದ್ದು, ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಇಡಿ ಅಧಿಕಾರಿಗಳಿಗೆ ಸಾಮಾಜಿಕ ಹೋರಾಟಗಾರ ಬಸವರಾಜು ದೂರು ನೀಡಿದ್ದಾರೆ. ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿ ಇರುವ ಮರುಳೂರು ದಿಣ್ಣೆಯಲ್ಲಿರುವ 87/1 ಮತ್ತು 87/2 ಸರ್ವೆನಂ ಎರಡು ಎಕರೆ ವಿವಾದಿತ ಜಾಗ ಕಾಂಗ್ರೆಸ್ ಭವನ ಟ್ರಸ್ಟ್ ಗೆ ವಿವಾದಿತ ಜಮೀನು ಪರಭಾರೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ, ಸಚಿವರಾದ ಜಿ.ಪರಮೇಶ್ವರ್, ಭೈರತಿ ಸುರೇಶ್, ಸಬ್ ರಿಜಿಸ್ಟ್ರಾರ್ ನಂಜೇಶ್, ಪಾಲಿಕೆ ಕಮಿಷನರ್ ಅಶ್ವಿಜಾ ವಿರುದ್ಧ ಸಾಮಾಜಿಕ ಹೋರಾಟಗಾರ ಬಸವರಾಜು ದೂರು ನೀಡಿದ್ದಾರೆ. 25 ಕೋಟಿ ರೂ ಮೌಲ್ಯದ 2 ಎಕರೆ ಜಮೀನು 17 ಲಕ್ಷ ರೂ.ಗೆ ಪರಭಾರೆ ಮಾಡಲಾಗಿದೆ. ಆ…
ಮಂಗಳೂರು: ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ಸಾಕ್ಷಿ ದೂರುದಾರ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನನ ಎಸ್ ಐಟಿ ಕಸ್ಟಡಿ ನಿನ್ನೆಗೆ ಅಂತ್ಯವಾಗಿದ್ದು, ಈ ಹಿನ್ನೆಲೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ. ಭದ್ರತೆ ದೃಷ್ಟಿಯಿಂದ ಶಿವಮೊಗ್ಗ ಸೆಂಟ್ರಲ್ ಜೈಲಿಗೆ ಚಿನ್ನಯ್ಯನನ್ನು ಎಸ್ ಐಟಿ (SIT) ಪೊಲೀಸರು ಸ್ಥಳಾಂತರಿಸಿದ್ದಾರೆ. ಅತ್ತ ನ್ಯಾಯಾಂಗ ಬಂಧನಕ್ಕೊಳಗಾಗುತ್ತಿದ್ದಂತೆ ಇತ್ತ ಉಚಿತ ಕಾನೂನು ಸೇವೆಗಳ ಪ್ರಾಧಿಕಾರ ನೇಮಿಸಿದ್ದ ಚಿನ್ನಯ್ಯ ಪರ ವಕೀಲರಿಂದ ಜಾಮೀನು ಕೋರಿ ಬೆಳ್ತಂಗಡಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಸೆಪ್ಟೆಂಬರ್ 9ಕ್ಕೆ ಮುಂದೂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಹೃದಯಾಘಾತವು ಇದ್ದಕ್ಕಿದ್ದಂತೆ ಬರುತ್ತದೆ ಎಂಬ ತಪ್ಪು ಕಲ್ಪನೆ ಇದೆ. ಆರೋಗ್ಯ ತಜ್ಞರು ತಿಳಿಸುವ ಪ್ರಕಾರ, ದೇಹವು ಹೃದಯಾಘಾತಕ್ಕೆ 30 ದಿನಗಳ ಮೊದಲು ಎಚ್ಚರಿಕೆ ಸಂಕೇತಗಳನ್ನು ನೀಡುತ್ತದೆ. ಆದ್ರೆ ಸಾಕಷ್ಟು ಜನರು ಈ ಸಂಕೇತಗಳನ್ನು ನಿರ್ಲಕ್ಷಿಸುತ್ತಾರೆ. ಇತ್ತೀಚಿನ ದಿನಗಳಲ್ಲಿ ಯುವಕರು, ವೃದ್ಧರು ಇಬ್ಬರೂ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಎಲ್ಲ ವರ್ಗದ ಜನರು ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ದವಡೆ, ಭುಜಗಳು, ಎದೆಯಲ್ಲಿ ನೋವು: ಹೃದಯಾಘಾತದ ಮೊದಲು ಪ್ರಮುಖ ಚಿಹ್ನೆಗಳೆಂದ್ರೆ, ಒತ್ತಡ, ನೋವು ಅಥವಾ ಎದೆಯ ಸುತ್ತಲೂ ಭಾರದ ಭಾವನೆ. ಕೆಲವು ಜನರು ತೋಳುಗಳು, ಭುಜಗಳು ಅಥವಾ ದವಡೆಯಲ್ಲಿ ನೋವು ಅನುಭವಿಸಬಹುದು. ಈ ನೋವು ಯಾವಾಗಲೂ ತೀವ್ರವಾಗಿರುವುದಿಲ್ಲ. ಕೆಲವೊಮ್ಮೆ ನೀವು ಸ್ವಲ್ಪ ಉರಿ, ಭಾರವನ್ನು ಅನುಭವಿಸಿದರೆ, ನೀವು ಈ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ನೀವು ಅಂತಹ ಲಕ್ಷಣಗಳನ್ನು ಅನುಭವಿಸಿದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಅನೇಕ ಜನರು ಇದನ್ನು ನಿರ್ಲಕ್ಷಿಸುತ್ತಾರೆ. ಆಮ್ಲೀಯತೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆಯಾಗಿರಬಹುದು ಎಂದು ತಪ್ಪಾಗಿ ಭಾವಿಸಬಾರದು ಎನ್ನುತ್ತಾರೆ ತಜ್ಞರು. ದೇಹದಲ್ಲಿ ದೌರ್ಬಲ್ಯದ ಭಾವನೆ:…
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ದಿ.ನಟ ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಂಗಳವಾರದಂದು ಟ್ವೀಟ್ ಶೇರ್ ಮಾಡಿದ್ದ ಮುಖ್ಯಮಂತ್ರಿ, ”ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರು ಇಂದು ನನ್ನನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದರು. ಇದೇ ವೇಳೆ, ಇತ್ತೀಚೆಗೆ ನಿಧನರಾದ ಪಂಚಭಾಷಾ ನಟಿ ಬಿ.ಸರೋಜಾ ದೇವಿ ಅವರ ಹೆಸರನ್ನು ಅವರು ವಾಸವಿದ್ದ ಮಲ್ಲೇಶ್ವರಂನ ರಸ್ತೆಗೆ ನಾಮಕರಣ ಮಾಡುವಂತೆಯೂ ಮನವಿ ಮಾಡಿದರು” ಎಂದು ತಿಳಿಸಿದ್ದಾರೆ. ಇಂದು ಭೇಟಿಯ ಫೋಟೋಗಳನ್ನು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ”ಖ್ಯಾತ ನಟಿಯರಾದ ಜಯಮಾಲಾ, ಶ್ರುತಿ ಹಾಗೂ ಮಾಳವಿಕಾ ಅವಿನಾಶ್ ಅವರು ಇಂದು ನನ್ನನ್ನು ಗೃಹ ಕಚೇರಿಯಲ್ಲಿ ಭೇಟಿಯಾಗಿ,…
ಕೊರಟಗೆರೆ : ಪಟ್ಟಣದ ಗಣಪತಿ ಬಸ್ಟಾಂಡ್ ಸರ್ಕಲ್ ನ ಶ್ರೀಸತ್ಯಗಣಪತಿ ಸನ್ನಿದಾನದಲ್ಲಿ 65ನೇ ವರ್ಷದ ವಾರ್ಷಿಕ ಹಬ್ಬದ ಅಂಗವಾಗಿ ಎಸ್ ಆರ್ ಎಸ್ ಬಸ್ ಮಾಲೀಕರಾದ ದಿವಂಗತ ಎನ್.ಆರ್.ರೇವಣ್ಣಪ್ಪ ಹಾಗೂ ಕುಟುಂಬದವರಿಂದ ಆಯೋಜಿಸಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಶುಕ್ರವಾರ ಯಶಸ್ವಿ ಕಂಡಿತ್ತು. ಎಸ್ ಆರ್ ಎಸ್ ಬಸ್ ಮಾಲೀಕ ಮಂಜುನಾಥ್ ನಾಗಪ್ರಸಾದ್ ಮಾತನಾಡಿ, ನಮ್ಮ ತಂದೆಯವರ ಕಾಲದಿಂದಲೂ ಶ್ರೀಸತ್ಯಗಣಪತಿ ಸನ್ನಿದಾನದಲ್ಲಿ ಪ್ರತಿವರ್ಷ ಅನ್ನಸಂತರ್ಪಣೆ ಕಾರ್ಯಕ್ರಮವನ್ನ ಆಯೋಜಿಸಿಕೊಂಡು ಬರುತ್ತಿದ್ದು, ಭಕ್ತರು ಹೆಚ್ಚಿನ ಸಂಖೈಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುತ್ತಿದ್ದಾರೆ. ದಾನಗಳಲ್ಲಿ ಶ್ರೇಷ್ಠ ದಾನ ಅನ್ನದಾನ. ತಂದೆಯವರ ನಡೆದು ಬಂದ ಹಾದಿಯನ್ನು ನಾವು ಮುಂದುವರಿಯುತ್ತಿದ್ದೇವೆ ಎಂದು ಹೇಳಿದರು. ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್ ಮಾತನಾಡಿ, ಎರಡು ವರ್ಷಗಳಿಂದ ನಮ್ಮ ಕೊರಟಗೆರೆಯಲ್ಲಿ ನಗರದ ಎಲ್ಲಾ ಗಣಪತಿ ಪ್ರತಿಷ್ಠಾಪನೆ ಮಂಡಳಿಗಳು ನಿಗದಿತ ದಿನದಲ್ಲಿ ಒಟ್ಟಾರೆ ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡುವ ಮೂಲಕ ಸಹೋದರತ್ವ ಭಾವನೆಯನ್ನು ಮೆರೆಯುತ್ತಿರುವುದು ಖುಷಿಯ ವಿಚಾರ. ನಮ್ಮ ತಾಲ್ಲೂಕು ಇಡೀ…
ಸರಗೂರು : ಮೈಸೂರಿನ ಅಗ್ರಹಾರದಲ್ಲಿ ನಡೆದ ಶುಕ್ರವಾರದಂದು ಶ್ರೀ ದುರ್ಗಾ ಫೌಂಡೇಶನ್ ನ 6ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರದ ಸಾಧಕರಿಗೆ ಮೈಸೂರು ಸೇವಾ ರತ್ನ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪ್ರದಾನ ಸ್ವೀಕರಿಸಿ ನಂತರ ಮಾತನಾಡಿದ ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕಳಸೂರು ಬಸವರಾಜುರವರು ಸಮಾಜ ಸೇವೆಗಳಲ್ಲಿ ತನು, ಮನದ ಸೇವೆಗಳು ಶ್ರೇಷ್ಠತೆ ಪಡೆದುಕೊಂಡಿವೆ. ಪ್ರತಿಯೊಬ್ಬರು ಧನವಿದ್ದರೆ ಮಾತ್ರ ಸೇವೆ ಮಾಡಬಹುದು ಎಂಬ ಮನೋಭಾವನೆಯಿಂದ ಹೊರಬಂದು, ತನು, ಮನ ಸೇವೆ ಸಲ್ಲಿಸುವ ಮೂಲಕ ಜೀವನದಲ್ಲಿ ಸಾರ್ಥಕತೆ ಕಂಡುಕೊಳ್ಳಬಹುದು. ಸಮಾಜದಲ್ಲಿ ಒಳ್ಳೆಯ ಕಾರ್ಯ ಮಾಡುವ ಸಂದರ್ಭದಲ್ಲಿ ವ್ಯಕ್ತಿಯೇ ಇರಬೇಕು ಅಂತಿಲ್ಲ. ಅವರ ವ್ಯಕ್ತಿತ್ವ ಇದ್ದರೆ ಸಾಕು. ಇದಕ್ಕೆ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷೆ ರೇಖಾ ಶ್ರೀನಿವಾಸ ಅವರು ಹಾಗೂ ಫೌಂಡೇಶನ್ ಪದಾಧಿಕಾರಿಗಳು ನಮ್ಮನ್ನು ಗುರುತಿಸಿ ಪ್ರಶಸ್ತಿ ಪ್ರದಾನ ನೀಡಿದಕ್ಕೆ ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ರಮೇಶ್ ರಾಮಪ್ಪ, ಕಾವ್ಯ, ಉಮೇಶ್ ವನಸಿರಿ, ಲಕ್ಷ್ಮೀ ನಾರಾಯಣ ಯಾದವ್, ಬೀರೇಶ್…
ಸರಗೂರು: ತಾಲೂಕಿನ ಹಂಚೀಪುರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡ ಮಸಹಳ್ಳಿ ಸೂರ್ಯ ಕುಮಾರ್ ಸಂವಿಧಾನ ಪೀಠಿಕೆಯನ್ನು ಶಾಸಕ ಅನಿಲ್ ಚಿಕ್ಕಮಾದು ಸಮ್ಮುಖದಲ್ಲಿ ಪಂಚಾಯಿತಿ ಅಧಿಕಾರಿಗಳಿಗೆ ಕೊಡುಗೆ ನೀಡಿದರು. ನಂತರ ಮಾತನಾಡಿದ ಮಸಹಳ್ಳಿ ಸೂರ್ಯ ಕುಮಾರ್, ಭಾರತದ ಸಂವಿಧಾನದ ಕುರಿತು ಗ್ರಾಮೀಣ ಪ್ರದೇಶಗಳಲ್ಲೂ ಅರಿವು ಮೂಡಿಸುವ ಉದ್ದೇಶದಿಂದ ಗ್ರಾಮ ಪಂಚಾಯಿತಿಗೆ ಗ್ರಂಥಾಲಯಗಳಿಗೆ ಸಂವಿಧಾನದ ಪ್ರತಿಯನ್ನು ಪೂರೈಸಲಾಗುವುದು ಎಂದು ತಿಳಿಸಿದರು. ‘ಗ್ರಾಮೀಣ ಪ್ರದೇಶದ ಜನರು ಅಲ್ಲಿನ ಗ್ರಂಥಾಲಯಗಳಲ್ಲಿ ಸಂವಿಧಾನ ಓದಲು ಅವಕಾಶ ಕಲ್ಪಿಸಲಾಗುವುದು’ ಎಂದರು. ನಂತರ ಶಾಸಕ ಅನಿಲ್ ಚಿಕ್ಕಮಾದು ಮಾತನಾಡಿ, ಸಂವಿಧಾನದ ಪ್ರತಿಗಳ ಜತೆಯಲ್ಲೇ ಸ್ಥಳೀಯ ಸಂಸ್ಥೆಗಳ ರಚನೆಯ ಮೂಲಕ ಆಡಳಿತ ವಿಕೇಂದ್ರೀಕರಣಕ್ಕೆ ಅವಕಾಶ ಕಲ್ಪಿಸಿದ ಸಂವಿಧಾನದ 73 ಮತ್ತು 74ನೇತಿದ್ದುಪಡಿಗಳಿಗೆ ಸಂಬಂಧಿಸಿದ ಗ್ರಂಥಗಳನ್ನೂ ಗ್ರಾಮೀಣ ಪ್ರದೇಶಗಳ ಗ್ರಂಥಾಲಯಗಳಿಗೆ ಒದಗಿಸಲಾಗುವುದು ಎಂದರು. ಅಂಬೇಡ್ಕರ್ ನೇತೃತ್ವದ ಸಂವಿಧಾನ ರಚನಾ ಸಮಿತಿಯು ಜಗತ್ತಿನ ಹಲವು ರಾಷ್ಟ್ರಗಳ ಸಂವಿಧಾನಗಳನ್ನು ಅಧ್ಯಯನ ಮಾಡಿ…
ಮಂಡ್ಯ: ಹುಡುಗನ ಕಡೆಯವರು ಮದುವೆ ಕ್ಯಾನ್ಸಲ್ ಮಾಡಿದ್ದರಿಂದ ನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯಲ್ಲಿ ನಡೆದಿದೆ. ಕೆಆರ್ ಪೇಟೆ ತಾಲೂಕಿನ ವಳಗೆರೆ ಮೆಣಸ ಗ್ರಾಮದ ಕಾವ್ಯ (26) ಆತ್ಮಹತ್ಯೆಗೆ ಶರಣಾಗಿರುವ ಯುವತಿಯಾಗಿದ್ದಾಳೆ. ಈಕೆಗೆ 15 ದಿನಗಳ ಹಿಂದೆ ಹಾಸನದ ಹುಡುಗನ ಜೊತೆ ಮದುವೆ ಫಿಕ್ಸ್ ಆಗಿತ್ತು. ಆದರೆ ಹುಡುಗನ ಮನೆಯವರು ಇತ್ತೀಚೆಗೆ ಮದುವೆ ಬೇಡ ಎಂದು ಮದುವೆ ಕ್ಯಾನ್ಸಲ್ ಮಾಡಿದ್ದರು. ಇದರಿಂದ ಮನನೊಂದ ಯುವತಿ ಕಚೇರಿಯಲ್ಲಿ ಶುಕ್ರವಾರ ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗಿದೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC