Author: admin

ತುಮಕೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 2024–25ನೇ ಸಾಲಿನ ಪರಿಶಿಷ್ಟ ಜಾತಿ ವಿಶೇಷ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಮಾಧ್ಯಮ ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿದರು. ಮಾಧ್ಯಮ ಪ್ರತಿನಿಧಿಗಳ ವೃತ್ತಿಪರ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ರಾಜ್ಯದ ವಿವಿಧ ಜಿಲ್ಲೆಗಳ 168 ಪರಿಶಿಷ್ಟ ಜಾತಿ ಹಾಗೂ 32 ಪರಿಶಿಷ್ಟ ಪಂಗಡದ ಪತ್ರಕರ್ತರು ಸೇರಿ ಒಟ್ಟು 200 ಜನ ಪತ್ರಕರ್ತರು ಈ ಯೋಜನೆಯಡಿ ಲ್ಯಾಪ್ಟಾಪ್ ಹಾಗೂ ಕ್ಯಾಮೆರಾ ಒಳಗೊಂಡ ಮಾಧ್ಯಮ ಕಿಟ್ ಪಡೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ, ಶಾಸಕ ಹಾಗೂ ಕರ್ನಾಟಕ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಎಂ.ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಬಿ.ಬಿ.ಕಾವೇರಿ, ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್ ಸೇರಿದಂತೆ…

Read More

ತುಮಕೂರು: ಈಗಿನ ಕಾಲದ ಯುವ ಜನತೆಗೆ ಬಸವಣ್ಣನವರ ಸಮಗ್ರ ಚಿಂತನೆಗಳನ್ನು ತಲುಪಿಸುವ ಅಗತ್ಯ ಇದೆ. ಆದರ್ಶ ಜೀವನ ನಡೆಸುವುದಕ್ಕೆ ವಚನ ಸಾಹಿತ್ಯದ ಅರಿವು ಬಹಳ ಮುಖ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಶ್ರೀ ಬಸವೇಶ್ವರ ಅಧ್ಯಯನ ಪೀಠ, ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗ ಬುಧವಾರ ಹಮ್ಮಿಕೊಂಡಿದ್ದ ‘ವಚನ ಗಾಯನ ಮತ್ತು ವ್ಯಾಖ್ಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ತುಮಕೂರು ವಿವಿಯಲ್ಲಿ 16 ಅಧ್ಯಯನ ಪೀಠಗಳಿದ್ದು, ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳುವುದಕ್ಕೆ, ಸಾಮಾಜಿಕ, ಆರ್ಥಿಕ, ಕಲೆ, ಸಾಹಿತ್ಯ, ವಿಜ್ಞಾನ ಕ್ಷೇತ್ರಗಳ ಬಗ್ಗೆ ಹೆಚ್ಚಿನ ರೀತಿಯ ಅಧ್ಯಯನಗಳನ್ನು ಕೈಗೊಳ್ಳುವುದಕ್ಕೆ ವಿದ್ಯಾರ್ಥಿಗಳು ಈ ಪೀಠಗಳ ನೆರವು ಪಡೆಯಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಕಾಶ್ ಎಂ.ಶೇಟ್ ಮಾತನಾಡಿ, ಸೂರ್ಯ ಚಂದ್ರ ಇರುವವರೆಗೂ ಬಸವಣ್ಣನವರ ವಚನಗಳು ಚಾಲ್ತಿಯಲ್ಲಿ ಇರುತ್ತವೆ. ಅವರು ರಚಿಸಿರುವ ವಚನಗಳನ್ನು ಸಮಗ್ರವಾಗಿ ಅಧ್ಯಯನ ಮಾಡಲು ಅಪಾರ ಪರಿಶ್ರಮ ಹಾಗೂ ಸಮಯದ…

Read More

ಬೀದರ್: ಹುಲಸೂರ ಪೊಲೀಸ್ ಠಾಣಾ ವ್ಯಾಪ್ತಿಯ ಗೌರ್ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಹುಲಸೂರ ಪೊಲೀಸರು ಆರೋಪಿಯ ವಿರುದ್ಧ ಕಾನೂನು ಕ್ರಮಕೈಗೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಹುಲಸೂರ ಪೊಲೀಸ್ ಠಾಣೆ ಪಿ.ಎಸ್.ಐ ಶಿವಪ್ಪ ಮೇಟಿ ಅವರು ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು, ಆರೋಪಿಯಿಂದ 1,270 ರೂಪಾಯಿ ಹಣವನ್ನು ವಶಪಡಿಸಿಕೊಂಡಿ ಕಾನೂನು ರೀತಿಯ ಕ್ರಮಕೈಗೊಳ್ಳಲಾಗಿದೆ. ಮಟಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳು ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ವರದಿ: ಅರವಿಂದ ಮಲ್ಲಿಗೆ, ಬೀದರ್ ಬೀದರ್/ಔರಾದ್: ಪರರ ಬಗ್ಗೆ ಕಾಳಜಿ, ರಂಜಾನ್ ಉಪವಾಸ ಸಂದರ್ಭದಲ್ಲಿ ನಮ್ಮಲ್ಲಿರುವಂತಹ ಸಹೋದರತ್ವ ಸಮಾಜದಲ್ಲಿ ಒಳಗೊಳ್ಳುವುದು ಆಗಿದೆ. ಇಫ್ತಾರ್ ಕೂಟದಲ್ಲಿ ಮುಸ್ಲಿಮರಷ್ಟೇ ಅಲ್ಲಾ ಗ್ರಾಮದ ಎಲ್ಲಾ ಧರ್ಮದ ಜನರನ್ನು ಸೇರಿಸಿಕೊಂಡು ಈ ಒಂದು ಇಫ್ತಾರ್ ಕೂಟ ಹಮ್ಮಿಕೊಳ್ಳಲಾಗಿದೆ ಎಂದು ಮುಖಂಡರಾದ ಅಯುಬಖಾನ್ ಪಟೇಲ್ ಹೇಳಿದರು. ಔರಾದ್ ತಾಲ್ಲೂಕಿನ ಬೋರ್ಗಿ (ಜೆ) ಗ್ರಾಮದ ಮಸೀದಿ ಆವರಣದಲ್ಲಿ ಗುರುವಾರ ಆಯೋಜಿಸಿರುವ ಸಾಮೂಹಿಕ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಮಾಜಿಕ ಜೀವನದಲ್ಲಿ ಸೌಹಾರ್ದಯುತವಾಗಿ ಬದುಕುವುದು ಹೇಗೆ ಎಂಬುದನ್ನು ಕಲಿತುಕೊಳ್ಳುವುದೇ ಇಫ್ತಾರ್ ಕೂಟದ ಉದ್ದೇಶವಾಗಿದೆ. ಪ್ರೀತಿ, ಭಾಂದವ್ಯ ಭ್ರಾತೃತ್ವ ಭಾವನೆಯನ್ನು ಮೂಡಿಸಲು ಈ ಇಫ್ತಾರ್ ಕೂಟವನ್ನು ಆಯೋಜನೆ ಮಾಡಲಾಗಿದೆ” ಎಂದು ಹೇಳಿದರು. ಶಿಕ್ಷಕ ಬಸಿರೋದ್ದಿನ್ ಮಾತನಾಡಿ, ಒಬ್ಬ ವ್ಯಕ್ತಿಯನ್ನು ಅರಿಯಬೇಕೆಂದರೆ ಆ ವ್ಯಕ್ತಿಯ ಜೊತೆ ಬೆರೆತಾಗ ಮಾತ್ರ ಆ ವ್ಯಕ್ತಿಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ. ವ್ಯಕ್ತಿಯನ್ನು ಅರ್ಥ ಮಾಡಿಕೊಂಡರೆ ಸಮಾಜವನ್ನು ಅರ್ಥ ಮಾಡಿಕೊಂಡಂತೆ. ಸಮಾಜದಲ್ಲಿರುವ ಇತರ ಧರ್ಮೀಯರನ್ನು ಸೋದರತ್ವದಿಂದ ಕಾಣುವುದು ಮುಖ್ಯವಾಗಿದೆ ಎಂದರು.…

Read More

ತುಮಕೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮಹಿಳಾ ಸಬಲೀಕರಣ ವೇದಿಕೆಯ ಆಶ್ರಯದಲ್ಲಿ ಶುಕ್ರವಾರ ಕಾಲೇಜಿನ ವಿಶ್ವ ಮಾನವ ಸಭಾಂಗಣದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ನಹಿದಾ ಜಮ್ ಜಮ್ ಅವರು ಕಾರ್ಯಕ್ರಮವನ್ನು ಉದ್ಧಾಟಿಸಿ ಮಾತನಾಡಿ, ಸಮಾಜದಲ್ಲಿ ಇಂದಿಗೂ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲದಂತಹ ವಾತಾವರಣ ಹೆಚ್ಚುತ್ತಿದೆ ಎಂದರು. ನಮ್ಮ ಪುರುಷರಿಗೆ ನಾವು ಇಂದು ಗುಡ್ ಟಚ್ ಮತ್ತು ಬ್ಯಾಡ್ ಟಚ್ ಮತ್ತು ಗುಡ್ ಸೀ ಮತ್ತು ಬ್ಯಾಡ್ ಸೀ ಗಳನ್ನು ತಿಳಿಸಿಕೊಡುವ ಅಗತ್ಯವಿದೆ. ಜೊತೆಗೆ ಮಹಿಳೆಗೆ ಮಹಿಳೆಯೇ ಶತ್ರುವಾಗುತ್ತಿರುವುದು ವಿಷಾದನೀಯ ಸಂಗತಿ ಎಂದರಲ್ಲದೇ, ಮಹಿಳೆ ತಾನು ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಲು, ಅನ್ಯಾಯದ ವಿರುದ್ಧ ಪ್ರತಿಭಟಿಸುವ ಗುಣ ಬೆಳೆಸಿಕೊಳ್ಳಿ ಮತ್ತು ಮಹಿಳೆಯರಿಗೆ ಮಹಿಳೆಯರೇ ಹೆಚ್ಚಿನ ಸಹಾಯ–ಸಹಕಾರ ನೀಡುವ ಪ್ರವೃತ್ತಿ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಸಂತ ಟಿ.ಡಿ. ಮಾತನಾಡಿ, ಮಹಿಳೆಯರು ತಮ್ಮ…

Read More

ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ ಕೊರಟಗೆರೆ : ಇಲ್ಲಿನ ಪಟ್ಟಣ ಪಂಚಾಯಿತಿಯ 2025–26ನೇ ಸಾಲಿಗೆ ಒಟ್ಟು 9.7ಲಕ್ಷ.ರೂ ಉಳಿತಾಯ ಬಜೆಟ್‍ನ್ನು ಪ.ಪಂ. ಅಧ್ಯಕ್ಷೆ ಅನಿತಾ ಮಂಡಿಸಿದರು. ಪಟ್ಟಣ ಪಂಚಾಯಿತಿ ಕಾರ್ಯಾಲಯದಲ್ಲಿ ಆಯವ್ಯಯ ಸಭೆಯಲ್ಲಿ ಅಧ್ಯಕ್ಷೆ ಅನಿತಾ ಮೊದಲ ಬಾರಿಗೆ ಬಜೆಟ್ ಮಂಡಿಸಿದ್ದಾರೆ. 2025–26ನೇ ಸಾಲಿನಲ್ಲಿ 21.43ಕೋಟಿ.ರೂ ಹಣ ಜಮೆ ಆಗಲಿದೆ. ಇದರಲ್ಲಿ 21.34ಕೋಟಿ ರೂ ಖರ್ಚು ತಗಲಿದೆ. ಹೀಗಾಗಿ 9.7ಲಕ್ಷ.ರೂ ಉಳಿತಾಯವಾಗಲಿದೆ. ಪಟ್ಟಣ ಪಂಚಾಯಿತಿ ಆದಾಯ ಹೆಚ್ಚಿಸುವುದರೊಂದಿಗೆ ಅಭಿವೃದ್ಧಿಗೆ ಆಧ್ಯತೆ ನೀಡಿರುವ ಬಜೆಟ್‍ ನಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲಾಗಿದೆ. ಆಸ್ತಿ ತೆರಿಗೆ 1.24ಕೋಟಿ.ರೂ, ನೀರಿನ ತೆರಿಗೆ 40 ಲಕ್ಷ.ರೂ, ಹೊಸ ನಲ್ಲಿ ಸಂಪರ್ಕ ಪೀ 3.60ಲಕ್ಷ.ರೂ, ಮಳಿಗೆಗಳ ಬಾಡಿಗೆ 15ಲಕ್ಷ ರೂ., ಕಟ್ಟಡಗಳ ಪರವಾನಿಗೆ ಶುಲ್ಕ 20ಲಕ್ಷ.ರೂ, ಉದ್ದಿಮೆ ಪರವಾನಿಗೆ ಶುಲ್ಕ 6.20ಲಕ್ಷ.ರೂ ಹಾಗೂ ಇನ್ನಿತರ ಮೂಲಗಳಿಂದ 50.72ಲಕ್ಷ ರೂ, ಸಂಗ್ರಹಿಸಲಾಗಿದೆ ಎಂದು ಬಜೆಟ್‍ ನಲ್ಲಿ ತಿಳಿಸಿದ್ದಾರೆ. ಸರ್ಕಾರದ ಅನುದಾನಗಳಾದ 2025–26ನೇ ಸಾಲಿನ ವೇತನ ಅನುದಾನ 19.41ಕೋಟಿ.ರೂ,…

Read More

ಸಿಕಂದರ್ ಸಿನಿಮಾದ ಪ್ರಚಾರದಲ್ಲಿ ತೊಡಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್, ಇದೇ ವೇಳೆ ಲಾರೆನ್ಸ್ ಬಿಷ್ಣೋಯ್ ಬೆದರಿಕೆಯ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಬಗ್ಗೆ ಮಾತನಾಡಿದ ಸಲ್ಮಾನ್ ಖಾನ್, ನನಗೆ ಅದಷ್ಟೇ ಭದ್ರತೆ ಇದ್ದರೂ ಕೆಲವೊಂದು ಸಮಯದಲ್ಲಿ ನನ್ನನ್ನು ರಕ್ಷಿಸುವುದು ಸುಲಭದ ಮಾತಲ್ಲ ಎಂದು ಸಲ್ಮಾನ್ ಹೇಳಿಕೊಂಡಿದ್ದಾರೆ. ನನ್ನ ಭವಿಷ್ಯ ದೇವರ ಕೈಯಲ್ಲಿದೆ. ಎಲ್ಲವೂ ದೇವರಿಗೆ ಬಿಟ್ಟಿದ್ದೇನೆ. ಎಲ್ಲಿಯವರೆಗೆ ಜೀವ ಇರುತ್ತದೋ, ಅಲ್ಲಿಯವರೆಗೆ ಮಾತ್ರ ಈ ಬದುಕು ಅಷ್ಟೇ ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಘಾಜಿಯಾಬಾದ್: ಪೇಪರ್ ಮಿಲ್ ವೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ‘ನ ಭೋಜ್ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿ ನಡೆದಿದೆ. ಬೆಳಿಗ್ಗೆ 6 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಇದ್ದಕ್ಕಿದ್ದಂತೆ ಬಾಯ್ಲರ್ ಸ್ಫೋಟಗೊಂಡ ಕಾರಣ ಮೂವರು ಕಾರ್ಮಿಕರು 50 ಅಡಿ ಮೇಲೆ ಎಸೆಯಲ್ಪಟ್ಟು, ಕೆಳಗೆ ಬಿದ್ದಿದ್ದಾರೆಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ದೇಹದ ಭಾಗಗಳು ಚೆಲ್ಲಾಪಿಲ್ಲಿಯಾಗಿ ನೆಲಕ್ಕೆ ಬಿದ್ದಿದ್ದವು ಎಂದು ಮೂಲಗಳು ತಿಳಿಸಿವೆ. ಮೃತ ಕಾರ್ಮಿಕರನ್ನು ಯೋಗೇಂದ್ರ, ಅನುಜ್ ಮತ್ತು ಅವಧೇಶ್ ಎಂದು ಗುರುತಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಛಾಪು ಮೂಡಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಬಿ.ಎನ್. ಗರುಡಾಚಾರ್ (96) ಇಂದು ಮುಂಜಾನೆ ನಿಧನರಾಗಿದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಪೋಸ್ಟ್ ಆಫೀಸ್ ಹಿಂಭಾಗದ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಅವರ ಅಂತ್ಯ ಸಂಸ್ಕಾರ ವಿಲ್ಸನ್ಗಾರ್ಡನ್ನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಬಿ.ಎನ್.ಗರುಡಾಚಾರ್ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದವರು. ಇವರು 1976 ರಿಂದ 1980ರ ವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು, ಎನ್.ಆರ್. ಜಂಕ್ಷನ್ (ಎಲ್ ಐಸಿ ಕಚೇರಿ ಬಳಿ)ನಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸಿಗ್ನಲ್ ಅಳವಡಿಸಿದ್ದರು. ಇದು ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಆಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಬೆಂಗಳೂರು ನಗರ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದು, ರಾಜ್ಯದ…

Read More

ಹುಬ್ಬಳ್ಳಿ: ಯತ್ನಾಳ್ ಕಾಂಗ್ರೆಸ್ ಗೆ ಪಕ್ಷಕ್ಕೆ ಬಂದ್ರೆ ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬರುತ್ತೇನೆ, ನನಗೆ ಜವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು. ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲ ನಮಗೂ ಇತಿ ಮಿತಿ ಇದೆ, ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ ಎಂದು ಹೇಳಿದರು. ಹನಿಟ್ರ್ಯಾಪ್ ಅದು ವೈಯಕ್ತಿಕ, ಅದು ಸರ್ಕಾರದ ಯೋಜನೆ ಅಲ್ಲ, ಸದನದಲ್ಲಿ ರಾಜಣ್ಣ ಅವರ ಹೆಸರು ತೆಗೆದುಕೊಂಡಿದ್ದು ಯತ್ನಾಳ್, ಅದಕ್ಕೆ ರಾಜಣ್ಣ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More