Subscribe to Updates
Get the latest creative news from FooBar about art, design and business.
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
- ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
Author: admin
ಬೆಂಗಳೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಹಬ್ಬವನು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರಿಂದ ಉದ್ಘಾಟನೆ ನೆರವೇರಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಿಂದೂ ಮತ್ತು ಕನ್ನಡ ವಿರೋಧಿ ಭಾವನೆ ಹೊಂದಿರುವ ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟಿಸಿದರೆ ಶತಮಾನಗಳಿಂದಲೂ ಆಚರಿಸಿಕೊಂಡು ಬಂದಿರುವ ಸಂಪ್ರದಾಯಕ್ಕೆ ಧಕ್ಕೆ ಬರುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖ ಮಾಡಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಂಡಿದೆ. ದಸರಾ ಹಿಂದೂಗಳು ಆಚರಿಸುವ ಹಬ್ಬವಾಗಿದೆ. ನಾಡದೇವತೆ ಚಾಮುಂಡೇಶ್ವರಿಗೆ ಕುಂಕುಮಾರ್ಚನೆ ಮಾಡಬೇಕು. ಇಲ್ಲವೇ ಉದ್ಘಾಟನೆ ಮಾಡುವವರು ಹಣೆಗೆ ತಿಲಕ, ಗಂಧದ ಕಡ್ಡಿ ಬೆಳಗುವುದು ಮಂಗಳಾರತಿ ಮಾಡುವುದು ನಮ್ಮ ಸಂಪ್ರದಾಯವಾಗಿದೆ. ಮೂರ್ತಿ ಪೂಜೆ ವಿರೋಧಿಸುವವರು ದಸರಾ ಉದ್ಘಾಟನೆ ಮಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ. ಬಾನು ಮುಸ್ತಾಕ್ ಅವರಿಂದ ದಸರಾ ಉದ್ಘಾಟನೆಗೆ ಸ್ವತಃ ಮೈಸೂರಿನ ರಾಜಮನೆತನದ ಕುಟುಂಬದ ಸದಸ್ಯರು ಪರೋಕ್ಷವಾಗಿ ವಿರೋಧ ವ್ಯಕ್ತಪಡಿಸಿದ್ದಾರೆ. ನಾಡದೇವತೆಯನ್ನು ಬಹಿರಂಗವಾಗಿ ವಿರೋಧಿಸುವ ಅವರಿಂದ ಉದ್ಘಾಟನೆ…
ತಿಪಟೂರು: ತಾಲ್ಲೂಕಿನ ಬೊಮ್ಮಲಾಪುರ ಕೆರೆ ಕಾಮಗಾರಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ.14.73 ಲಕ್ಷ ವೆಚ್ಚವನ್ನು ವಿನಿಯೋಗಿಸಿ ಕಾಮಗಾರಿಯನ್ನು ನಡೆಸುತ್ತಿದ್ದು, ಕಾಮಗಾರಿ ವೀಕ್ಷಣೆಗೆ ತಾಲ್ಲೂಕು ದಂಡಾಧಿಕಾರಿಗಳಾದ ಮೋಹನ್ ಆಗಮಿಸಿ, ಯೋಜನೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರಾಜ್ಯದ ಬಡ ಜನತೆಗೆ ಹಾಗೂ ರೈತರಿಗೆ ಉಪಯೋಗವಾಗುವಂತಹ ಅನೇಕ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ಪ್ರಸ್ತುತ ತಾಲ್ಲೂಕಿನಲ್ಲಿ ಒಟ್ಟು 15 ಕೆರೆ ಪುನಶ್ಚೇತನಗೊಳಿಸಲು ಸರಿಸುಮಾರು 2 ಕೋಟಿಯಷ್ಟು ಮೊತ್ತವನ್ನು ಮಂಜೂರುಗೊಳಿಸಿರುವುದು ಕಂಡುಬರುತ್ತಿದೆ. ಈ ತರಹದ ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡಲು ಧರ್ಮಸ್ಥಳ ಕ್ಷೇತ್ರದ ವೀರೇಂದ್ರ ಹೆಗ್ಗಡೆಯವರಿಂದ ಮಾತ್ರ ಸಾಧ್ಯ ಎಂದು ತಿಳಿಸಿದರು. ಇಷ್ಟಲ್ಲದೇ ಈ ಒಂದು ಕೆರೆ ಪುನಶ್ಚೇತನದ ಭಾಗ್ಯ ಬೊಮ್ಮಲಾಪುರ ಗ್ರಾಮಕ್ಕೆ ದೊರೆತಿದ್ದು, ದಯವಿಟ್ಟು ಗ್ರಾಮದ ಎಲ್ಲಾ ಮುಖಂಡರು, ರೈತರು ಧರ್ಮಸ್ಥಳ ಸಂಸ್ಥೆಗೆ ಸಹಕರಿಸಿ ಉತ್ತಮ ಕೆರೆಯನ್ನಾಗಿ ಮಾರ್ಪಾಡುಗೊಳಿಸಲು ಸಹಕರಿಸಬೇಕೆಂದು ವಿನಂತಿಸಿದರು. ಜೊತೆಗೆ ಬಾಕಿ ಉಳಿದ ಕಾಮಗಾರಿಯ ಬಗ್ಗೆಯೂ ಅತ್ಯಮೂಲ್ಯವಾದ…
ಬೀದರ್: 9ನೇ ತರಗತಿಯ ಬಾಲಕಿ ಮೇಲೆ ಶಿಕ್ಷಕನೊರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಬಗ್ಗೆ ನೀಡಿದ ದೂರಿನ ಮೇರೆಗೆ ಆ.28ರಂದು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಗ್ರಾಮವೊಂದರಲ್ಲಿ ಬಾಲಕಿಯು ಶಾಲೆಗೆ ಹೋದಾಗ, ಶಿಕ್ಷಕನೊರ್ವ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಶಿಕ್ಷಕನು ಬಾಲಕಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಬಾಲಕಿಯು ತನ್ನ ಪೋಷಕರಿಗೆ ಈ ವಿಷಯ ತಿಳಿಸುತ್ತೇನೆ ಎಂದಾಗ ಶಿಕ್ಷಕ, ನಿನ್ನ ತಂದೆಯನ್ನು ಕೊಲೆ ಮಾಡುತ್ತೇನೆ ಎಂದು ಬಾಲಕಿಯನ್ನು ಹೆದರಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯು ಶಾಲೆಗೆ ಹೋಗುವುದಿಲ್ಲ ಎಂದು ಅಳುತ್ತಾ ಹಠ ಹಿಡಿದಿದ್ದಾಗ ಪೋಷಕರು ಈ ಕುರಿತು ಬಾಲಕಿಯ ಬಳಿ ವಿಚಾರಿಸಿದಾಗ ಬಾಲಕಿಯು ಘಟನೆಯನ್ನು ವಿವರಿಸಿದ್ದಾಳೆ ಎಂದು ತಿಳಿದು ಬಂದಿದೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕೊರಟಗೆರೆ: ಸಾಧನೆಯ ಪ್ರಶಸ್ತಿಗಳು ನಮ್ಮ ಜವಾಬ್ದಾರಿಯನ್ನು ಇನ್ನು ಹೆಚ್ಚಿಸುತ್ತದೆ ಅದನ್ನು ಉಳಿಸಿಕೊಳ್ಳುವ ಮತ್ತು ಬೆಳೆಸಿಕೊಳ್ಳುವ ಕರ್ತವ್ಯ ಮಹತ್ವವಾದದ್ದು ಎಂದು ರಾಷ್ಟ್ರಪತಿ ಪದಕ ಪುರಸ್ಕೃತ ಕೊರಟಗೆರೆ ಪೊಲೀಸ್ ಇಲಾಖೆಯ ಸಿಪಿಐ ಆರ್.ಪಿ.ಅನಿಲ್ ತಿಳಿಸಿದರು. ಕೊರಟಗೆರೆ ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಕಛೇರಿಯಲ್ಲಿ ಏರ್ಪಡಿಸಿದ್ದ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತರಾದ ಸಿಪಿಐ ಆರ್.ಪಿ.ಅನಿಲ್ ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ರಾಷ್ಟ್ರಪತಿ ಪ್ರಶಸ್ತಿ ಅತ್ಯುತ್ತಮವಾದುದು ಈ ಪ್ರಶಸ್ತಿ ರಾಜ್ಯದಲ್ಲಿ ಪ್ರತಿ ವರ್ಷ 37 ಮಂದಿಗೆ ಮಾತ್ರ ದೊರೆಯುತ್ತದೆ, ಇಂತಹ ಪ್ರಶಸ್ತಿಗಳಿಂದ ನಮ್ಮ ಮೇಲಿನ ಜವಾಬ್ದಾರಿ ಹೆಚ್ಚಾಗುತ್ತದೆ, ಕೊರಟಗೆರೆ ತಾಲೂಕಿನಲ್ಲಿ ಪೊಲೀಸ್ ಮತ್ತು ಪತ್ರಕರ್ತರ ಸಂಘ ಉತ್ತಮವಾಗಿ ಸ್ನೇಹಮಯವಾಗಿ ಕೆಲಸ ಮಾಡುತ್ತಿದೆ, ಎಷ್ಟೋ ಅಪಘಾತ ಕೊಲೆ ಪ್ರಕರಣಗಳಲ್ಲಿ ಪತ್ರಕರ್ತರು ಸಹಕಾರದಿಂದ ಪ್ರಕರಣಗಳು ಪತ್ತೆಯಾಗಲು ಸಹಕಾರಿಯಾಗಿದೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ರವರ ತವರು ಕ್ಷೇತ್ರದಲ್ಲಿ ಅವರ ಸಮ್ಮುಖದಲ್ಲಿ ಇಂತಹ ಪ್ರಶಸ್ತಿಯನ್ನು ಪಡೆಯುತ್ತಿರುವುದು ಹೆಮ್ಮೆ ಎನ್ನಿಸಿದೆ, ನನ್ನನ್ನು ಸನ್ಮಾನಿಸಿದ ತಾಲೂಕು ಕರ್ನಾಟಕ…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಎಕಂಬಾ ಗ್ರಾಮದಲ್ಲಿ ಶಾಲಾ ಬಸ್ ಚಕ್ರದಡಿ ಸಿಲುಕಿ ಆರು ವರ್ಷದ ಮಗುವೊಂದು ಮೃತಪಟ್ಟಿದೆ. ಕಾವೇರಿ ಆಕಾಶ ಶಿಂಧೆ ಮೃತ ಕಂದಮ್ಮ. ಎಂದಿನಂತೆ ಊರಲ್ಲಿರುವ ಪಬ್ಲಿಕ್ ಶಾಲೆಗೆ ಹೋಗಿದ್ದ ಮಗು ಬಸ್ ಹಿಂಬದಿಯಿಂದ ತರಗತಿ ಕೋಣೆಯತ್ತ ಹೋಗುತ್ತಿದ್ದಾಗ ಚಾಲಕ ಬಸ್ ಹಿಂದಕ್ಕೆ ತೆಗೆದಿದ್ದು ಈ ವೇಳೆ ಮಗು ಚಕ್ರಕ್ಕೆ ಸಿಲುಕಿದೆ. ಮಗುವನ್ನು ತಕ್ಷಣವೇ ಔರಾದ್ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮಗು ಕೊನೆಯುಸಿರೆಳೆದಿದೆ. ಘಟನೆ ಸಂಬಂಧ ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ . ಮಗುವಿನ ಸಾವಿಗೆ ಸಂಬಂಧ ಪಟ್ಟಂತೆ ಬಸ್ ಚಾಲಕ ಹಾಗೂ ಆಡಳಿತ ಮಂಡಳಿ ವಿರುದ್ಧವೂ ಕೇಸ್ ದಾಖಲಿಸುವಂತೆ ಮಗುವಿನ ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಆಸ್ಪತ್ರೆ ಎದುರು ಪಾಲಕರು ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಹಾವೇರಿ: ತಾಲೂಕಿನ ನೆಗಳೂರು ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವನ್ನ ಭಾವೈಕ್ಯತೆಯಿಂದ ಆಚರಿಸಲಾಯಿತು. ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರು ಗಣೇಶನಿಗೆ ಪೂಜೆ ಸಲ್ಲಿಸಿ ಸೌಹಾರ್ಹತೆ ಸಾರಿದರು. ಸರ್ವಧರ್ಮ ಮಹಾ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಮರು ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಿದರಲ್ಲದೇ, ಹಿಂದೂ–ಮುಸ್ಲಿಂ ಬಾಂಧವರೆಲ್ಲ ಸೇರಿ ಗಣಪನಿಗೆ ಪೂಜೆ ಸಲ್ಲಿಸಿ ಮಾರ್ಲಾಪಣೆ ಮಾಡಿದರು. ನಂತರ ಗ್ರಾಮದ ಪ್ರಮುಖ ಬೀದಿಯಲ್ಲಿ ಈದ್ ಮಿಲಾದ್ ಹಬ್ಬ ಮೆರವಣಿಗೆ ಮಾಡಿ ಅರ್ಥಪೂರ್ಣವಾಗಿ ಆಚರಿಸಿದರು. ಪ್ರತಿ ವರ್ಷ ಗ್ರಾಮದಲ್ಲಿ ಸರ್ವಧರ್ಮ ಆಶಯದೊಂದಿಗೆ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಗುತ್ತದೆ. ವಿವಿಧ ಧರ್ಮದ ಜನರೂ ಭಾಗವಹಿಸಿ ಪೂಜೆ ಸಲ್ಲಿಸುತ್ತಾರೆ. ಮುಸ್ಲಿಮರು ಸಹ ಪ್ರಾರ್ಥನೆ ಸಲ್ಲಿಸಿ ಪೂಜೆಯನ್ನ ಮಾಡುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಅನ್ನದಾತ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಶಿವಕುಮಾರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಅವರು, ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದೀರಿ. ಈಗ ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡುವುದಕ್ಕಾಗುವುದಿಲ್ಲ ಎಂದು ರೈತರನ್ನು ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ. ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. ಹೆಚ್‌ಎಂಟಿ ಕಾರ್ಖಾನೆ ಬಂದಾಗ ಸ್ವತಃ ನಮ ಕುಟುಂಬ…
ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನಲ್ಲಿ ಕೈಗಾರಿಕೆ ಉದ್ದೇಶಕ್ಕೆ ಮಾಡಲಾಗಿದ್ದ ಭೂ ಸ್ವಾಧೀನವನ್ನು ಕೈಬಿಟ್ಟು ಹಸಿರುವಲಯ (ಗ್ರೀನ್ ಬೆಲ್ಟ್ )ವಾಗಿ ಮುಂದುವರೆಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ವಿರೋಧ ಇರುವ ಒಂದು ಎಕರೆ ಜಮೀನನ್ನು ತೆಗೆದುಕೊಳ್ಳುವುದಿಲ್ಲ. ಆದರೆ ಸ್ವ ಇಚ್ಛೆಯಿಂದ ಯಾರು ಕೃಷಿ ಜಮೀನು ನೀಡಲು ಮುಂದೆ ಬರುತ್ತಾರೆಯೋ ಅಂಥ ಜಮೀನನ್ನು ಪಡೆಯುತ್ತೇವೆ ಎಂದರು. ವರ್ಷದ ನಂತರ ಭೂಮಿಯ ಬೆಲೆ ದುಬಾರಿಯಾಗಿದೆ. ಹೀಗಾಗಿ ಜಮೀನು ನೀಡಲು ನಿರಾಕರಿಸಿದವರ ಜಮೀನನ್ನು ಭೂಸ್ವಾಧೀನದಿಂದ ಕೈಬಿಡುತ್ತೇವೆ ಎಂದು ಹೇಳಿದರು. ಕೃಷ್ಣ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನದ ಗೊಂದಲದ ವಿಚಾರ ಈಗ ಒಂದು ಹಂತಕ್ಕೆ ಬಂದಿದೆ. 75 ಸಾವಿರ ಎಕರೆ ಪ್ರದೇಶ ಮುಳುಗಡೆಯಾಗಲಿದೆ. 75 ಸಾವಿರ ಎಕರೆ ಭೂಸ್ವಾಧೀನ ಆಗಬೇಕು. ಅದಕ್ಕೆ ಪರಿಹಾರ ನೀಡಬೇಕಾಗಿದೆ. ಪ್ರತಿ ಎಕರೆ 50 ಲಕ್ಷ ರೂ. ನೀಡಬೇಕೆಂಬ ಬೇಡಿಕೆ ಇದೆ. ಒಟ್ಟಾರೆ 25 ಸಾವಿರ ಕೋಟಿ ರೂ. ಬೇಕಾಗಬಹುದು ಎಂದರು. ನಾಲೆಗಳಿಗೆ 11 ಕೋಟಿ ಬೇಕಾಗುತ್ತದೆ.…
ಹೆಚ್.ಡಿ.ಕೋಟೆ: ನಿರಂತರವಾಗಿ ತಾಲೂಕಿನಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪತ್ರಕರ್ತರು ದಿನನಿತ್ಯ ಪತ್ರಿಕೆ ವಿತರಿಸಲು ಕಷ್ಟವಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಜರ್ಕಿನ್ ವಿತರಿಸಲಾಗಿದೆ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಬೀಚನಹಳ್ಳಿ ಮಂಜು ತಿಳಿಸಿದರು. ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಸದಸ್ಯರುಗಳಿಗೆ ಜರ್ಕಿನ್ ವಿತರಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಅತಿ ಹೆಚ್ಚಾಗಿ ಕಳೆದ ಮೂರು ತಿಂಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಪತ್ರಕರ್ತರು ದಿನನಿತ್ಯ ಪತ್ರಿಕೆ ವಿತರಿಸಲು ಕಷ್ಟಕರವಾಗುತ್ತಿತ್ತು ಹಾಗೂ ಕೆಲವು ಸಂದರ್ಭದಲ್ಲಿ ಸದಸ್ಯರು ಅನಾರೋಗ್ಯಕ್ಕೆ ಈಡಾಗುತ್ತಿದ್ದರು ಆದ್ದರಿಂದ ಅದನ್ನು ಮನಗೊಂಡ ಸದಸ್ಯರುಗಳಿಗೆ ಜರ್ಕಿನ್ ಗಳನ್ನು ನೀಡಲಾಗಿದೆ. ಇದೇ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎಸ್. ಆರ್. ನಾಗರಾಮ, ಸಹಕಾರ್ಯದರ್ಶಿ ದೊಡ್ಡಸಿದ್ದು, ಖಜಾಂಚಿ ಮಂಜು ಕೋಟೆ, ನಿರ್ದೇಶಕರುಗಳಾದ ಹಂಪಾಪುರ ನಾಗೇಶ್, ಪುಟ್ಟರಾಜು, ಜಿ. ರವಿಕುಮಾರ್, ರಂಗರಾಜು, ರವಿಕುಮಾರ್ ಆರಾದ್ಯ, ಸದಸ್ಯರುಗಳಾದ ಕನ್ನಡ ಪ್ರಮೋದ್, ಶ್ರೀನಿಧಿ, ಬಸವರಾಜು, ನಿಂಗಣ್ಣ ಕೋಟೆ, ವಾಸುಕಿ ನಾಗೇಶ್, ಸುರೇಶ್, ಆನಂದ್, ರಘು, ದಾಸೇಗೌಡ, ಚಿಕ್ಕಣ್ಣೆಗೌಡ, ಶರವಣ, ಚಂದ್ರು, ಪುರುಷೋತ್ತಮ್, ಹಾಜರಿದ್ದರು. ವರದಿ:…
ಬೆಂಗಳೂರು: ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಯಂತ್ರ ಬದಿಗಿಟ್ಟು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿರುವ ಅವರು, ಇವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ. ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ…