Subscribe to Updates
Get the latest creative news from FooBar about art, design and business.
- ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
- ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
- ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
- ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
- ಸರಗೂರು: ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
- ಪಾರದರ್ಶಕ ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
- ನಮ್ಮೂರ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
Author: admin
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಛಾಪು ಮೂಡಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಬಿ.ಎನ್. ಗರುಡಾಚಾರ್ (96) ಇಂದು ಮುಂಜಾನೆ ನಿಧನರಾಗಿದ್ದಾರೆ. ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಪೋಸ್ಟ್ ಆಫೀಸ್ ಹಿಂಭಾಗದ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಅವರ ಅಂತ್ಯ ಸಂಸ್ಕಾರ ವಿಲ್ಸನ್ಗಾರ್ಡನ್ನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ. ಬಿ.ಎನ್.ಗರುಡಾಚಾರ್ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದವರು. ಇವರು 1976 ರಿಂದ 1980ರ ವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು, ಎನ್.ಆರ್. ಜಂಕ್ಷನ್ (ಎಲ್ ಐಸಿ ಕಚೇರಿ ಬಳಿ)ನಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸಿಗ್ನಲ್ ಅಳವಡಿಸಿದ್ದರು. ಇದು ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಆಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಬೆಂಗಳೂರು ನಗರ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದು, ರಾಜ್ಯದ…
ಹುಬ್ಬಳ್ಳಿ: ಯತ್ನಾಳ್ ಕಾಂಗ್ರೆಸ್ ಗೆ ಪಕ್ಷಕ್ಕೆ ಬಂದ್ರೆ ಹೈಕಮಾಂಡ್ ಜೊತೆಗೆ ಚರ್ಚೆ ಮಾಡಿ ಕರೆದುಕೊಂಡು ಬನ್ನಿ ಅಂದ್ರೆ ಸ್ವಾಗತ ಮಾಡ್ತೀವಿ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನೇ ಬಸನಗೌಡ ಪಾಟೀಲ್ ಯತ್ನಾಳರನ್ನು ಕಾಂಗ್ರೆಸ್ಗೆ ಕರೆದುಕೊಂಡು ಬರುತ್ತೇನೆ, ನನಗೆ ಜವಾಬ್ದಾರಿ ಕೊಟ್ಟರೆ ಕರೆದುಕೊಂಡು ಬರುತ್ತೇನೆ ಎಂದರು. ಬಸ್ ಪ್ರಯಾಣ ದರ ಏರಿಕೆ ಸಂಬಂಧ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಬೆಲೆ ಏರಿಕೆಯಿಂದ ಅಷ್ಟೇನೂ ಹೊರೆ ಆಗೋದಿಲ್ಲ ನಮಗೂ ಇತಿ ಮಿತಿ ಇದೆ, ಹೊಸ ಬಸ್ ನಿಲ್ದಾಣ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೇವೆ ಎಂದು ಹೇಳಿದರು. ಹನಿಟ್ರ್ಯಾಪ್ ಅದು ವೈಯಕ್ತಿಕ, ಅದು ಸರ್ಕಾರದ ಯೋಜನೆ ಅಲ್ಲ, ಸದನದಲ್ಲಿ ರಾಜಣ್ಣ ಅವರ ಹೆಸರು ತೆಗೆದುಕೊಂಡಿದ್ದು ಯತ್ನಾಳ್, ಅದಕ್ಕೆ ರಾಜಣ್ಣ ಸದನದಲ್ಲಿ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು: ತಮ್ಮ ಹತ್ಯೆಗೆ ಸುಪಾರಿ ನೀಡಿರುವ ಬಗ್ಗೆ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ ಹೇಳಿಕೆ ನೀಡಿದ್ದರು. ಇದೀಗ ಈ ಬಗ್ಗೆ ಎಸ್ ಪಿಗೆ ಅವರು ದೂರು ನೀಡಿದ್ದಾರೆ. ಎಸ್ಪಿ ಗೆ ದೂರು ನೀಡಿದ ಬಳಿಕ ಮಾತನಾಡಿದ ಅವರು, ಎಸ್ಪಿ ಅವರಿಗೆ ದೂರು ನೀಡಿ ವಿವರವಾಗಿ ತಿಳಿಸಿದ್ದೇನೆ ಎಂದರು. ಆರೋಪಿಗಳು ಕಾರಿಗೆ ಜಿಪಿಎಸ್ ಹಾಕೋ ಕೆಲಸ ಮಾಡಿದ್ರು. ಒಟ್ಟು 70 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದಾರೆ. ಅದ್ರಲ್ಲಿ ಐದು ಲಕ್ಷ ಕೊಟ್ಟಿದ್ದಾರೆ. ಯಾಕ್ ಕೊಟ್ಟಿದ್ದಾರೆ ಏನು ಅಂತಾ ಗೊತ್ತಿಲ್ಲ. ನಾನು ಆಗಲಿ ನನ್ನ ಕೆಲಸ ಆಗಲಿ ಅಂತಾ ಇರೋನು ಎಂದರು. ಸೋಮ ಮತ್ತು ಭರತ್ ಅನ್ನೋ ಹೆಸರು ಆಡಿಯೋದಲ್ಲಿ ಬಂದಿದೆ. ಅವರಿಬ್ಬರು ಯಾರಂತ ನನಗೆ ಗೊತ್ತಿಲ್ಲ. ಲೇಡಿ ಮತ್ತು ಹುಡುಗ ಮಾತನಾಡಿರೋ ಆಡಿಯೋ ಅದು. 18 ನಿಮಿಷದ ಆಡಿಯೋ ಇರೋ ಅಂತದ್ದು. ಸುಪಾರಿ ಕೊಟ್ಟಿದ್ದಾರೆ ಹೊಡೆಯಬೇಕು ಅಂತಾ ಏನ್ ವಿಚಾರ ಅಂತಾ ತನಿಖೆಯಾಗಬೇಕು ಎಂದರು. ದ್ವೇಷ ಏನುಕ್ಕೆ ಅಂತಾ ಗೊತ್ತಿಲ್ಲ. ಜಿಪಿಎಸ್ ಚಿಪ್ ಕಾರಿಗೆ…
ನವದೆಹಲಿ: ಕನ್ನಡತಿ ರಶ್ಮಿಕಾ ಮಂದಣ್ಣ ಅವರನ್ನು ಅದ್ಭುತ ನಟಿ ಎಂದು ಬಾಲಿವುಡ್ ನಟ ಸಲ್ಮಾನ್ಖಾನ್ ಹಾಡಿ ಹೊಗಳಿದ್ದಾರೆ. ಸಿಕಂದರ್ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದರೂ ಆಮೀರ್ ಖಾನ್ ಮತ್ತು ನಿರ್ದೇಶಕ ಎ.ಆರ್ ಮುರುಗದಾಸ್ ಜೊತೆಗಿನ ವಿಶೇಷ ಸಂದರ್ಶನದಲ್ಲಿ ಅವರು, ರಶ್ಮಿಕಾ ಮಂದಣ್ಣ ಅವರನ್ನು ಹಾಡಿ ಹೊಗಳಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಹಾರ್ಡ್ ವರ್ಕರ್, ಆಕೆ ಅದ್ಭುತ ನಟಿ. ನಾವು ಹೈದರಾಬಾದ್ನಲ್ಲಿ ಚಿತ್ರೀಕರಣದಲ್ಲಿದ್ದಾಗ, ಅವರು ಬೆಳಿಗ್ಗೆ 6 ಗಂಟೆಗೆ ಸಿದ್ಧರಾಗಿ ಪುಷ್ಪ 2 ಚಿತ್ರೀಕರಣದಲ್ಲಿ ಇರುತ್ತಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿದ ನಂತರ, ಅವರು ನಮ್ಮೊಂದಿಗೆ ಶೂಟಿಂಗ್ ಬರುತ್ತಿದ್ದರು. ಜ್ವರ ಬಂದಾಗಲೂ, ನಟಿ ವಿಶ್ರಾಂತಿ ಇಲ್ಲದೆ ಕೆಲಸ ಮಾಡುತ್ತಿದ್ದರು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ನವದೆಹಲಿ: ಈ ದೇಶಕ್ಕಾಗಿ ಕಾಂಗ್ರೆಸ್ ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಹೋರಾಡಿತ್ತು. ಕಾಂಗ್ರೆಸ್ ಜೊತೆ ಬಿಜೆಪಿ-ಆರ್ ಎಸ್ ಎಸ್ ನ್ನು ಹೋಲಿಕೆ ಮಾಡುವುದು ತಮಾಷೆ ವಿಷಯ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮೂರು ನಿಗದಿತ ಸಭೆಗಳಲ್ಲಿ ಮೊದಲನೆ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬಲಿಷ್ಠ ಕಾಂಗ್ರೆಸ್ ಸ್ಥಾಪನೆಗೆ ಮತ್ತು ನ್ಯಾಯಯುತ ಭಾರತ ನಿರ್ಮಾಣಕ್ಕೆ ಶ್ರಮಿಸಬೇಕೆಂದು ಕರೆ ನೀಡಿದರು. ನಮ್ಮ ಪಾತ್ರವಿಲ್ಲದೆ ಪಕ್ಷವು ಅಭಿವೃದ್ಧಿ ಹೊಂದಲು, ಯಶಸ್ವಿಯಾಗಲು ಸಾಧ್ಯವಿಲ್ಲ. ನಮ್ಮ ಹೋರಾಟವು ಆರ್ ಎಸ್ ಎಸ್–ಬಿಜೆಪಿ ವಿರುದ್ಧ ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕ, ಪ್ರತಿಯೊಂದು ಸಮುದಾಯವು ಕನಸು ಕಾಣುವ ಮತ್ತು ಸಾಧಿಸುವ ಹಕ್ಕನ್ನು ಹೊಂದಿರುವ ಭಾರತಕ್ಕಾಗಿ ಇದೆ. ಒಟ್ಟಾಗಿ, ನಾವು ಬಲವಾದ ಕಾಂಗ್ರೆಸ್ ಮತ್ತು ನ್ಯಾಯಯುತ ಭಾರತವನ್ನು ನಿರ್ಮಿಸುತ್ತೇವೆ ಎಂದು ಸಭೆಯ ನಂತರ ವಾಟ್ಸಾಪ್ ಚಾನೆಲ್ ನಲ್ಲಿ ಮಾಡಿರುವ ಪೋಸ್ಟ್ ನಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ನಟಿ ರನ್ಯಾ ರಾವ್ ಈ ಹಿಂದೆ ಸುಮಾರು 14.56 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿರುವುದನ್ನು ಗುಪ್ತಚರ ಇಲಾಖೆ ಪತ್ತೆ ಹಚ್ಚಿದೆ. ದುಬೈಯಿಂದ ಕಳ್ಳಸಾಗಣೆ ಮಾಡಿದ ಚಿನ್ನವನ್ನು ಸಾಹಿಲ್ ಸಕಾರಿಯಾ ಜೈನ್ ಅವರ ಸಹಾಯದಿಂದ ರನ್ಯಾ ರಾವ್ ಭಾರತದಲ್ಲಿ ಮಾರಾಟ ಮಾಡಲು ಸಹಾಯ ಮಾಡುತ್ತಿದ್ದರು. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ 4.45 ಕೋಟಿ ರೂಪಾಯಿ ಸುಂಕ ನಷ್ಟವಾಗಿದೆ ಎಂದು ಕೇಂದ್ರ ತನಿಖಾ ಸಂಸ್ಥೆ ಹೇಳಿಕೊಂಡಿದೆ. ಈ ವರ್ಷದ ಆರಂಭದಲ್ಲಿ ಜನವರಿ 11 ರಂದು ರನ್ಯಾ ಭಾರತಕ್ಕೆ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು. ಜನವರಿ 11 ರಂದು ಅವರು ಸುಮಾರು 14.56 ಕೆಜಿ ತೂಕದ, 11.55 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದರು. ಸಾಹಿಲ್ ಜೈನ್ ಅವರು ಅದನ್ನು ಮಾರಾಟ ಮಾಡಲು ಸಹಾಯ ಮಾಡಿದ್ದರು. ಇದರಿಂದಾಗಿ 4.46 ಕೋಟಿ ರೂಪಾಯಿ ಸರ್ಕಾರಕ್ಕೆ ಕಸ್ಟಮ್ಸ್ ಸುಂಕ ನಷ್ಟವಾಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಕಾರಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಿಟ್ಟಮಾರನಹಳ್ಳಿ ಬೈ–ಪಾಸ್‌ನಲ್ಲಿ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಬೆಂಗಳೂರಿನ ಶಿವಪ್ರಕಾಶ್ (37) ಪುಟ್ಟಗೌರಮ್ಮ (72) ಮತ್ತು ಚನ್ನಪಟ್ಟಣದ ಮಂಗದಹಳ್ಳಿಯ ಶಿವರತ್ನ (50) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ನಟರಾಜು (42) ಮತ್ತು ಸುಮಾ (36) ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ವ್ಯಾನ್ ಚಾಲಕ ನಾಗೇಶ್ ಕೂಡ ಗಾಯಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಳಗಾವಿ: ಏಪ್ರಿಲ್ 10ರೊಳಗೆ ಬಸನಗೌಡ ಪಾಟೀಲ ಯತ್ನಾಳ್ ಅವರ ಉಚ್ಛಾಟನೆ ಆದೇಶ ಹಿಂಪಡೆಯಬೇಕು, ಇಲ್ಲದಿದ್ದರೆ ಏ.13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಹೈಕಮಾಂಡ್ ಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಬಿಜೆಪಿ ಶಿಸ್ತುಪಾಲನಾ ಸಮಿತಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಿರುವ ಕ್ರಮ ಖಂಡಿಸಿ ಬೆಳಗಾವಿಯ ಗಾಂಧಿ ಭವನದಲ್ಲಿ ನಡೆದ ಪಂಚಮಸಾಲಿ ಮುಖಂಡರ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಉತ್ತರ ಕರ್ನಾಟಕದ “ಹಿಂದುತ್ವ ಪರ” ಮತ್ತು “ಅಭಿವೃದ್ಧಿ ಪರ” ನಾಯಕರನ್ನು ನಿಗ್ರಹಿಸುವ ಪಿತೂರಿ ಇದಾಗಿದೆ ಎಂದು ಕಿಡಿಕಾರಿದ ಸ್ವಾಮೀಜಿ, ಬಿ ಎಸ್ ಯಡಿಯೂರಪ್ಪ, ಬಿ ವೈ ವಿಜಯೇಂದ್ರ ಕುತಂತ್ರದಿಂದ ಉಚ್ಚಾಟನೆ ಮಾಡಲಾಗಿದೆ. ಇದನ್ನು ಇಡೀ ಪಂಚಮಸಾಲಿ ಸಮುದಾಯ ಖಂಡಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮಾಧ್ಯಮಗೋಷ್ಟಿಯಲ್ಲಿ ಪಂಚಮಸಾಲಿ ಮುಖಂಡರಾದ ಶಶಿಕಾಂತ ಪಡಸಲಗಿ, ರಮೇಶಗೌಡ ಪಾಟೀಲ, ಆರ್.ಸಿ. ಪಾಟೀಲ, ಗುಂಡು ಪಾಟೀಲ, ಶಿವಾನಂದ ತಂಬಾಕಿ ಸೇರಿ ಮತ್ತಿತರರು ಇದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ಈ ಸರಕಾರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದೆ. ಹಾಲಿನ ದರ ಏರಿಸುವ ವಿಷಯ ಕ್ಯಾಬಿನೆಟ್ ಮುಂದಿದೆ. ಹಾಲಿನ ದರ ಸಬ್ಸಿಡಿ ರೈತರಿಗೆ ಕೊಡಿ; ಆದರೆ ಜನರ ಮೇಲೆ ಯಾಕೆ ಹೊರೆ ಹಾಕುತ್ತೀರಿ? ನಿಮಗೆ ಯೋಗ್ಯತೆ ಇಲ್ಲದಿದ್ದರೆ ಬಿಟ್ಟು ಹೋಗಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿಗಳನ್ನು ಘೋಷಿಸಿದ್ದೀರಿ; ಎಲ್ಲದರ ಬೆಲೆಗಳನ್ನೂ ಹೆಚ್ಚಿಸಿದ್ದೀರಿ. ಕಾನೂನು, ಸಂವಿಧಾನದಲ್ಲಿ ಇಲ್ಲದ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ಮಸೂದೆ ಮಂಜೂರು ಮಾಡಿಕೊಂಡಿದ್ದೀರಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ದಲಿತರನ್ನು ನಿರಂತರ ವಂಚಿಸುತ್ತ ಬಂದ ಸರಕಾರ, ಇದೀಗ ಅಲ್ಪಸಂಖ್ಯಾತರನ್ನೂ ವಂಚಿಸಲು ಮುಂದಾಗಿದೆ. ದಲಿತರಿಗೆ ಮೀಸಲಿಟ್ಟ 39 ಸಾವಿರ ಕೋಟಿ ಆ ಜನಾಂಗಗಳಿಗೆ ತಲುಪದಂತೆ ಮಾಡಿದ್ದೀರಿ. ಈಗ ಅಲ್ಪಸಂಖ್ಯಾತರನ್ನೂ ವಂಚಿಸಲು ಹೊರಟಿದ್ದೀರಿ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೆಂಗಳೂರು: ರಾಜ್ಯ ಜನತೆಗೆ ಮತ್ತೆ ಹಾಲಿನ ಬೆಲೆ ಏರಿಕೆ ಬಿಸಿತಟ್ಟಿದೆ. ಇಂದು ನಡೆದ ಸಚಿವ ಸಂಪುಟದಲ್ಲಿ ಹಾಲು ಒಕ್ಕೂಟಗಳ ಮನವಿಯನ್ನು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಹಾಲಿಗೆ ಲೀಟರ್ ಗೆ ಬರೋಬ್ಬರಿ ನಾಲ್ಕು ರೂಪಾಯಿ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ಬಿಗ್ ಶಾಕ್ ನೀಡಿದೆ. ಬೆಲೆ ಏರಿಕೆ ದರ: ನೀಲಿ ಪ್ಯಾಕೆಟ್ ಹಾಲು –- 44 ರೂ.ದಿಂದ 48 ರೂ. ಏರಿಕೆ(ಪ್ರತಿ ಲೀಟರ್ಗೆ). ಆರೆಂಜ್ ಪ್ಯಾಕೆಟ್ ಹಾಲು -– 54 ರೂ. ನಿಂದ 58 ರೂ. ಸಮೃದ್ಧಿ ಹಾಲಿನ ಪ್ಯಾಕೆಟ್–56 ರೂ. ನಿಂದ 60 ರೂ. ಗ್ರೀನ್ ಸ್ಪೇಷಲ್ ಹಾಲು– 54 ರೂ. ನಿಂದ 58 ರೂ. ನಾರ್ಮಲ್ ಗ್ರೀನ್ ಹಾಲು– 52 ರೂ. ನಿಂದ 56 ರೂ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4