Subscribe to Updates
Get the latest creative news from FooBar about art, design and business.
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
- ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
- ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
Author: admin
ಬೆಂಗಳೂರು: ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಇವಿಎಂ ಯಂತ್ರ ಬದಿಗಿಟ್ಟು ಬ್ಯಾಲಟ್ ಪೇಪರ್ ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರದ ಸಂಪುಟದ ತೀರ್ಮಾನ ತಾವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವುದೇ ಮತಗಳ್ಳತನದಿಂದ ಎಂದು ಸ್ವಯಂ ಪ್ರಮಾಣೀಕರಿಸಿಕೊಂಡಂತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಸರ್ಕಾರದ ವಿರುದ್ಧ ಪೋಸ್ಟ್ ಮಾಡಿರುವ ಅವರು, ಇವಿಎಂ ಮತಯಂತ್ರ ಬಳಸಿ ರಾಜ್ಯದಲ್ಲಿ 2023ರ ಚುನಾವಣೆಯಲ್ಲಿ ಆರಿಸಿ ಬಂದಿರುವ 136 ಕಾಂಗ್ರೆಸ್ ಶಾಸಕರಿಂದ ಮೊದಲು ರಾಜೀನಾಮೆ ಕೊಡಿಸಲಿ, ರಾಜ್ಯದಿಂದ ಆಯ್ಕೆಯಾದ ಒಂಬತ್ತು ಕಾಂಗ್ರೆಸ್ ಲೋಕಸಭಾ ಸದಸ್ಯರಿಂದ ರಾಜೀನಾಮೆ ಕೊಡಿಸಲಿ, ಮತಪತ್ರ ಬಳಸಿ ಮತ್ತೆ ಚುನಾವಣೆಯಿಂದ ಗೆದ್ದು ಬರಲಿ, ಇಲ್ಲದಿದ್ದರೆ ಮತಗಳ್ಳತನದಿಂದ ನಾವು ಆಯ್ಕೆಯಾಗಿ ಅಧಿಕಾರಕ್ಕೆ ಬಂದಿರುವುದು ಎಂದು ಒಪ್ಪಿಕೊಳ್ಳಲಿ ಎಂದು ಸವಾಲು ಹಾಕಿದ್ದಾರೆ. ದೇಶದಲ್ಲಿ ಅತಿಹೆಚ್ಚು ಅಕ್ರಮ ಮತದಾನ, ಮತಗಳ್ಳತನದ ದೂರುಗಳು, ಚುನಾವಣಾ ದೌರ್ಜನ್ಯದ ಘಟನೆಗಳು, ಚುನಾವಣಾ ಅಕ್ರಮಗಳು ನಡೆದ ಬಗ್ಗೆ ನ್ಯಾಯಾಲಯಗಳಲ್ಲಿ ದೂರುಗಳು ಅತಿ ಹೆಚ್ಚು ದಾಖಲಾಗಿದ್ದರೆ ಅದು ಮತಪತ್ರ ಆಧರಿಸಿ…
ಸರಗೂರು: ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿಗಳು ಶಕ್ತಿಕೇಂದ್ರ ಇದ್ದ ಹಾಗೆ, ಗ್ರಾಮಗಳ ಅಭಿವೃದ್ಧಿಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸದಸ್ಯರ ಯೋಜನೆಗಳೇ ಅಂತಿಮ. ವಾರ್ಡ್ ನಿರ್ವಹಣೆ ಜವಾಬ್ದಾರಿ ಅವರ ಮೇಲಿದೆ ಎಂದು ಶಾಸಕ, ಅರಣ್ಯ ವಸತಿ ಮತ್ತು ವಿಹಾರಧಾಮ ಸಂಸ್ಥೆಗಳ ಅಧ್ಯಕ್ಷ ಅನಿಲ್ ಚಿಕ್ಕಮಾದು ತಿಳಿಸಿದರು. ತಾಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿದ ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಕ್ಷೇತ್ರದ ಅಭಿವೃದ್ಧಿಗೆ ಶಾಸಕರು ಶಕ್ತಿಕೇಂದ್ರವಾದ ವಿಧಾನಸೌಧದಲ್ಲಿ ಚರ್ಚಿಸಿ, ಅನುದಾನ ತರುತ್ತಾರೆ. ಅದೇ ಮಾದರಿಯಲ್ಲಿ ಸದಸ್ಯರು ತಮ್ಮ ಶಕ್ತಿಕೇಂದ್ರವಾದ ಗ್ರಾಮ ಪಂಚಾಯಿತಿಯಿಂದ ವಾರ್ಡ್‌ಗಳ ಅಭಿವೃದ್ಧಿಗೆ ಅನುದಾನ ತಂದು ನಿರ್ವಹಣೆ ಮಾಡುತ್ತಾರೆ. ತಮ್ಮ ವಾರ್ಡ್‌ನಲ್ಲಿನ ರಸ್ತೆ, ಚರಂಡಿ, ವಿದ್ಯುತ್ ಸಮಸ್ಯೆಗಳಿಗೆ ಸ್ಪಂದಿಸಿ ಮಾಡುತ್ತಾರೆ. ಗ್ರಾಮ ಪಂಚಾಯಿತಿಯಲ್ಲಿಯೂ ನಾನಾ ಯೋಜನೆ ಗಳಿದ್ದು ಅದನ್ನು ಸದಸ್ಯರು ಕಾರ್ಯರೂಪಕ್ಕೆ ಕೆಲಸ ತರಬೇಕು,” ಎಂದು ಸಲಹೆ ನೀಡಿದರು. “ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ…
ತುಮಕೂರು: ತುಮಕೂರು ಜಿಲ್ಲೆ ಜೆ.ಜೆ.ಎಮ್. ಗುತ್ತಿಗೆದಾರರು ತುಮಕೂರು ನಗರದ ಕುಣಿಗಲ್ ರಸ್ತೆಯಲ್ಲಿರುವ ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಮುಂದೆ ತುಮಕೂರು ಜಿಲ್ಲೆಯ ಎಲ್ಲಾ ತಾಲೂಕುಗಳ ಜೆ.ಜೆ.ಎಮ್. ಕಾಮಗಾರಿ ಮಾಡಿರುವ ಗುತ್ತಿಗೆದಾರರು ಪ್ರತಿಭಟನೆ ಮಾಡಿ ಮೆನೇಜರ್ ಸಿದ್ದರಾಜು ಅವರಿಗೆ ಮನವಿ ಪತ್ರ ನೀಡಿದರು. ಪ್ರತಿಭಟನೆ ಉದ್ದೇಶಿಸಿ ಗುತ್ತಿಗೆದಾರರಾದ ಚಂದ್ರಶೇಖರ್ ರೆಡ್ಡಿ ಮಾತನಾಡಿ, ತುಮಕೂರು ಜಿಲ್ಲೆಯ ಜೆ.ಜೆ.ಎಮ್. ಗುತ್ತಿಗೆದಾರರು ಮನೆಮನೆ ಗಂಗೆ ಕಾಮಗಾರಿಯನ್ನು ಜಿಲ್ಲೆಯ ನೂರಾರು ಗುತ್ತಿಗೆದಾರರು ಕೆಲಸ ಮಾಡಿದ್ದು, ವರ್ಷಗಳೇ ಕಳೆದರೂ ಗುತ್ತಿಗೆದಾರರ ಬಿಲ್ ಪಾವತಿಯಾಗುತ್ತಿಲ್ಲ ದಯವಿಟ್ಟು ಸರ್ಕಾರ ಹಾಗೂ ಜನಪ್ರತಿನಿಧಿಗಳು ಅಧಿಕಾರಿಗಳು ಮುಂದೆ ಬಂದು ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಕೆಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಗುತ್ತಿಗೆದಾರರಾದ ಲೋಕೇಶ್ ಪಾಳೇಗಾರ್ ಮಾತನಾಡಿ, ಜಿಲ್ಲೆಯ ಜೆ.ಜೆ.ಎಮ್. ಗುತ್ತಿಗೆದಾರರ ಸಮಸ್ಯೆಗಳಾದ ಸಿ.ಸಿ. ಹಣವನ್ನು ತಕ್ಷಣವೇ ಬಿಡುಗಡೆ ಮಾಡಬೇಕು, ಕಾಮಗಾರಿ ಮುಗಿದು ವರ್ಷಗಳೇ ಕಳೆದರೂ ಇ.ಓ.ಟಿ. ಹಾಗೂ ವರ್ಕ್ ಸ್ಲಿಪ್ ಗೆ ಸಂಬಂಧಿಸಿದಂತೆ ಕಡತಗಳನ್ನು ತಡೆಹಿಡಿಯದೆ ಗುತ್ತಿಗೆದಾರರಿಗೆ ತೊಂದರೆ ಆಗದಂತೆ ಕಡಿಮೆ ದಂಡ…
ಬೆಂಗಳೂರು: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮ ಬದ್ದಗೊಳಿಸುವಿಕೆ (ಪಿಎಂಎಫ್ ಎಂಇ) ಯೋಜನೆಯು ಕರ್ನಾಟಕದ ಗ್ರಾಮೀಣ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಈ ಯೋಜನೆಯಡಿ, ರಾಜ್ಯ ಸರ್ಕಾರವು ಹೆಚ್ಚುವರಿ ಶೇ.15ರಷ್ಟು ಸಹಾಯಧನ ನೀಡುತ್ತಿದ್ದು, ಕಿರು ಉದ್ದಿಮೆದಾರರಿಗೆ ಶೇ.50ರಷ್ಟು ಅಥವಾ ಗರಿಷ್ಠ ರೂ.15 ಲಕ್ಷ ಸಾಲ ಸಂಪರ್ಕಿತ ಸಹಾಯಧನ ಲಭ್ಯವಾಗುತ್ತಿದೆ. ಇದರಲ್ಲಿ ಕೇಂದ್ರದ ರೂ.6 ಲಕ್ಷ ಹಾಗೂ ರಾಜ್ಯದ ರೂ.9 ಲಕ್ಷ ಸಹಾಯಧನ ಸೇರಿದೆ. ಈ ಯೋಜನೆಯ ಯಶಸ್ಸಿಗೆ ಕಾರಣರಾದ ಕರ್ನಾಟಕದ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ನಾಯಕತ್ವ ಹಾಗೂ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್. ಶಿವಪ್ರಕಾಶ್ ಅವರ ಅವಿರತ ಶ್ರಮವನ್ನು ಉದ್ಯಮಿಗಳು ಮತ್ತು ರೈತರು ವ್ಯಾಪಕವಾಗಿ ಮೆಚ್ಚಿದ್ದಾರೆ. ವಾರ್ಷಿಕ ಸಾಲ ಮಂಜೂರಾತಿಯ ಪ್ರಗತಿ: ಪಿಎಂಎಫ್ಎಂಇ ಯೋಜನೆಯಡಿ ಕಳೆದ ಐದು ಸಾಲುಗಳಲ್ಲಿ ಸಹಾಯ ಧನದಡಿಯಲ್ಲಿ ಸಾಲ…
ಯಾವುದೇ ಕಿಡ್ನಿ ಕಾಯಿಲೆ ಇದ್ದರೆ ಆರಂಭಿಕ ಹಂತದಲ್ಲಿ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳಿರುವುದಿಲ್ಲ. ರೋಗ ಮುಂದುವರೆದಂತೆ ಅದರ ಚಿಹ್ನೆಗಳು ದೇಹದಲ್ಲಿ ಕಾಣಿಸಿಕೊಳ್ಳಲು ಆರಂಭವಾಗುತ್ತವೆ. ಮೂತ್ರಪಿಂಡದ ಕಾಯಿಲೆಯಿದ್ದರೆ ಚರ್ಮದ ಮೇಲೆ ಕೆಲವು ಬದಲಾವಣೆಗಳು ಕಾಣಿಸಿಕೊಳ್ಳುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ. ಚರ್ಮದ ಮೇಲೆ ಕಾಣಿಸಿಕೊಳ್ಳುವ ಚಿಹ್ನೆಗಳು ದೇಹದೊಳಗೆ ಏನೋ ನಡೆಯುತ್ತಿದೆ ಎಂಬುದನ್ನು ಸೂಚನೆಯಾಗಿದೆ. ಒಣ ಚರ್ಮ, ಚರ್ಮದ ಮೇಲೆ ತುರಿಕೆ, ಚರ್ಮದ ಮೇಲೆ ದದ್ದುಗಳು ಅಥವಾ ಬಣ್ಣ ಬದಲಾವಣೆ, ಈ ರೀತಿಯ ಲಕ್ಷಣಗಳು ಕೇವಲ ಮೇಲ್ನೋಟದ ಸಮಸ್ಯೆಗಳಲ್ಲ. ಇವುಗಳು ಗಂಭೀರ ಕಿಡ್ನಿ ವೈಫಲ್ಯದ ಸಂಕೇತವಾಗಿರಬಹುದು. ಚರ್ಮದ ಶುಷ್ಕತೆ: ಮೂತ್ರಪಿಂಡಗಳಲ್ಲಿ ಯಾವುದೇ ಸಮಸ್ಯೆಯಿದ್ದರೆ, ಒಣ ಚರ್ಮ ಸಮಸ್ಯೆ ಕಾಡುತ್ತದೆ. ಮೂತ್ರಪಿಂಡದ ಸ್ಥಿತಿ ತೀವ್ರವಾಗಿದ್ದರೆ ಚರ್ಮವು ತುಂಬಾ ಒಣಗುತ್ತದೆ, ಒರಟಾಗಿರುತ್ತದೆ ಹಾಗೂ ಬಿಗಿಯಾಗಿರುತ್ತದೆ. ಚರ್ಮದಲ್ಲಿನ ಈ ಬದಲಾವಣೆಯು ಕಿಡ್ನಿಗಳಲ್ಲಿ ಸಮಸ್ಯೆಯಿದೆ ಎಂದು ತಿಳಿಯುತ್ತದೆ. ಚರ್ಮವು ಸುಲಭವಾಗಿ ಬಿರುಕು ಬಿಡುತ್ತದೆ. ಕೆಲವು ಜನರಲ್ಲಿ ಚರ್ಮವು ಮೀನಿನ ಚರ್ಮದಂತೆ ಚಿಪ್ಪುಗಳುಳ್ಳಂತೆ ಕಾಣಲು ಆರಂಭಿಸುತ್ತದೆ. ಚರ್ಮದಲ್ಲಿ ತುರಿಕೆ ಕಾಣಿಸುತ್ತೆ: ಕಿಡ್ನಿ…
ಬೆಂಗಳೂರು: ಕೆ.ಸಿ.ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮೀ ಸಾಗರ ಪಂಪ್ ಹೌಸ್ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿ ನಿವಾಸದಲ್ಲಿ ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಸಿಎಂ, ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗೆ ನಾವು ಹಿಂದಿನ ಸಲ ಅಧಿಕಾರದಲ್ಲಿದ್ದಾಗ ಕೈಗೊಂಡ ಯೋಜನೆಗಳು ಈ ಭಾಗದ ರೈತರ ಜೀವನ ಮಟ್ಟವನ್ನು ಉತ್ತಮಪಡಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ. 250ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ಪ್ರತಿನಿತ್ಯ ಹರಿಸಲಾಗುತ್ತಿದೆ ಎಂದರು. ಕೆ.ಸಿ.ವ್ಯಾಲಿ ಎರಡನೇ ಹಂತದ ಯೋಜನೆಯಡಿ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸಲಾಗುವುದು. ಮೊದಲನೇ ಹಂತದಲ್ಲಿ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಚಿಕ್ಕಬಳ್ಳಾಪುರ ಕೆರೆಗಳನ್ನು ಯಶಸ್ವಿಯಾಗಿ ತುಂಬಿಸಲಾಗಿದೆ. ಈ ನೀರನ್ನು ಕುಡಿಯಲು ಬಳಸುವುದಿಲ್ಲ. ಕೆರೆ ತುಂಬಿಸಿದ ವ್ಯಾಪ್ತಿಯಲ್ಲಿ ಅಂತರ್ಜಲ ಮಟ್ಟ ಉತ್ತಮಗೊಂಡಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬುರುಡೆ ಭಾಷಣ ಮಾಡಿ ಬುದ್ಧ, ಬಸವ, ಅಂಬೇಡ್ಕರರಿಗೆ ಅವಮಾನ ಮಾಡಬೇಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ದಲಿತರು, ಹಿಂದುಳಿದ ವರ್ಗಗಳ ಜನರನ್ನು ವೋಟ್ ಬ್ಯಾಂಕ್ ಮಾಡಿಕೊಂಡು ಮೋಸ ಮಾಡಬೇಡಿ ಎಂದು ಕಿಡಿಕಾರಿದ್ದಾರೆ. ಒಂದು ಕಡೆ ಹಿಂದುಳಿದ ವರ್ಗಗಳ ವಿವಿಧ ಅಭಿವೃದ್ಧಿ ನಿಗಮಗಳಿಗೆ ನೂರಾರು ಕೋಟಿ ಅನುದಾನ ಕಡಿತ ಮಾಡಿದ್ದೀರಿ, ಮತ್ತೊಂದು ಕಡೆ ಮೀಸಲಿಟ್ಟಿರುವ ಹಣವನ್ನು ಸರಿಯಾಗಿ ಖರ್ಚು ಮಾಡಿಲ್ಲ. ಇದೇನಾ ಸ್ವಾಮಿ ನಿಮ ಸಾಮಾಜಿಕ ನ್ಯಾಯ? ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ. ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗೆ ವಿನಿಯೋಗವಾಗಬೇಕಾಗಿದ್ದ ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನ ಲಪಟಾಯಿಸಿದ್ದಾಯ್ತು. ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣದಲ್ಲಿ ಪ್ರತಿ ವರ್ಷ ಬರೋಬ್ಬರಿ 15 ಸಾವಿರ ಕೋಟಿ ರೂಪಾಯಿ ಹಣವನ್ನ ಬೇರೆಡೆ ವರ್ಗಾಯಿಸಿ ದುರ್ಬಳಕೆ ಮಾಡಿದ್ದಾಯ್ತು.…
ಪಾವಗಡ: 2025-26 ನೇ ಸಾಲಿನ ನಿಡಗಲ್ ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಹನಾ ಹಿರಿಯ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಎಲ್ಲಾ ವಿಭಾಗಗಳಿಂದ ಉತ್ತಮ ಸಾಧನೆ ಮಾಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪ್ರಾಥಮಿಕ ಶಾಲಾ ವಿಭಾಗ: 4×100 ರಿಲೇ ಪ್ರಥಮ ವಾಸುದೇವ್, ದರ್ಶನ್, ರತನ್ ಗೌಡ . ದಿಗಂತ್ ಗೌಡ, ರತಿಷ್ ಗೌಡ, 200 ಮೀಟರ್ ಪ್ರಥಮ : ರತನ್‌ಗೌಡ, ಗುಂಡು ಎಸೆತ ಪ್ರಥಮ ವಾಸುದೇವ್,ಚಕ್ರ ಎಸೆತ ಪ್ರಥಮ: ವಾಸುದೇವ್,100 ಮೀಟರ್ ಪ್ರಥಮ:ವಾಸುದೇವ್,ಉದ್ದ ಜಿಗಿತ ಪ್ರಥಮ: ದರ್ಶನ್,ಟೇಬಲ್ ಟೆನ್ನಿಸ್ ಪ್ರಥಮ: ಜೀವನ್ ಯಾದವ್, ಶಶಾಂಕ್ ಗೌಡ, ಕುಶಲ್‌ಗೌಡ ,ಅಜಯ್ ಕುಮಾರ್, ಜೀವನ್.ಎನ್,ಯೋಗಾಸನ ಪ್ರಥಮ : ನವನೀತ್, ವಿನಯ್, ರವಿತೇಜ, ನಿತಿನ್, ಯಶ್ವಂತ್, ಅಕ್ಷಯ್. ನಂದನ್, ಚೆಸ್ ಪ್ರಥಮ: ಉದಯ್,ಹರ್ಷಿತ್ ರೆಡ್ಡಿ, ರೇವಂತ್ ರೆಡ್ಡಿ, ಅಬಯ್ ಸ್ಕಂದ, ಜನಾರ್ದನ ರೆಡಿ, ಥೋ ಬಾಲ್ ದ್ವಿತೀಯ : ಜೀವನ್, ಗಗನ್‌ದೀಪ್, ಶಶಿಧರ್, ಅಜಯ್ ಕುಮಾರ್, ಜನಾರ್ಧನ್ ರೆಡ್ಡಿ, ಯಶಸ್, ಯಶಸ್ ಗೌಡ, ಪರ್ಥಾಸಾರಥಿ, ಪುನಿತ್,…
ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಮದನ್ ಪಲ್ಲಿ ಮೂಲದ ಕೆ.ನರೇಶ್ ಪಟ್ಯಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಬೆಂಗಳೂರಿನಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ. ಆ.29ರಂದು ನಸುಕಿನ ಜಾವ 3 ಗಂಟೆ ಸುಮಾರಿಗೆ ಪಿ.ಜಿಗೆ ನುಗ್ಗಿದ್ದ ಅಪರಿಚಿತ ವ್ಯಕ್ತಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿಯ ಪಿಜಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಆರೋಪಿ ಯುವತಿಯ ರೂಮ್‌ಗೆ ನುಗ್ಗಿದಾಗ ಆಕೆ ರೂಮ್ ಮೇಟ್ ಇರಬಹುದು ಅಂದುಕೊಂಡಿದ್ದಳು. ಕಾಮುಕ ಮೊದಲೇ ಪಿಜಿ ಫ್ಲೋರ್ ನ ಎಲ್ಲಾ ರೂಮ್ ಡೋರ್ ಗಳನ್ನು ಲಾಕ್ ಮಾಡಿ, ಬಳಿಕ ಯುವತಿ ಬಳಿ ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಅಲ್ಲದೇ ಚಾಕು ತೋರಿಸಿ ಬೆದರಿಕೆ ಹಾಕಿದ್, ಈ ವೇಳೆ ಪ್ರತಿರೋಧ ತೋರಿದ ಯುವತಿಗೆ ಥಳಿಸಿ ಆಕೆಯನ್ನು ಎಳೆದಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನ ಸದ್ದುಗುಂಟೆಪಾಳ್ಯ ಠಾಣಾ ಪೊಲೀಸರು…
ತುಮಕೂರು: ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಮಾಜಿ ಸಚಿವ ಕೆ.ಎನ್.ರಾಜಣ್ಣ ಆಯ್ಕೆಯಾಗಿದ್ದಾರೆ. ಇಂದು ನಡೆದ ಚುನಾವಣೆಯಲ್ಲಿ, 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದೆ. ರಾಜಣ್ಣ ಅವರ ಈ ಸಾಧನೆ ತುಮಕೂರು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅವರ ಪ್ರಾಬಲ್ಯವನ್ನು ಮತ್ತೊಮ್ಮೆ ಸಾಬೀತುಪಡಿಸಿದೆ. ಕೆ.ಎನ್. ರಾಜಣ್ಣ ಕರ್ನಾಟಕದ ಸಹಕಾರಿ ಕ್ಷೇತ್ರದಲ್ಲಿ 1972ರಿಂದಲೂ ತಮ್ಮ ಪ್ರಭಾವವನ್ನು ಸ್ಥಾಪಿಸಿದ್ದಾರೆ. ರಾಷ್ಟ್ರೀಯ ಕೃಷಿ ಸಹಕಾರ ಮಾರ್ಕೆಟಿಂಗ್ ಫೆಡರೇಶನ್ ಆಫ್ ಇಂಡಿಯಾದ ನಿರ್ದೇಶಕರಾಗಿ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಅಧ್ಯಕ್ಷರಾಗಿ (2001–2005 ಮತ್ತು 2015–2020) ಎರಡು ಅವಧಿಗಳಲ್ಲಿ ಸೇವೆ ಸಲ್ಲಿಸಿದ ಅನುಭವವನ್ನು ಅವರು ಹೊಂದಿದ್ದಾರೆ. ಈ ಹಿಂದೆ ಆರು ಬಾರಿ ಈ ಸ್ಥಾನವನ್ನು ಅಲಂಕರಿಸಿದ್ದ ರಾಜಣ್ಣ, ತಮ್ಮ ಅನುಭವ ಮತ್ತು ನಾಯಕತ್ವದ ಮೂಲಕ ಬ್ಯಾಂಕ್‌ನ ಕಾರ್ಯನಿರ್ವಹಣೆಯನ್ನು ಸುಧಾರಿಸಿದ್ದಾರೆ. ತುಮಕೂರು ಡಿಸಿಸಿ ಬ್ಯಾಂಕ್ ಜಿಲ್ಲೆಯ ಗ್ರಾಮೀಣ ಆರ್ಥಿಕತೆಯಲ್ಲಿ ಪ್ರಮುಖ ಪಾತ್ರವನ್ನು…