Subscribe to Updates
Get the latest creative news from FooBar about art, design and business.
- ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
- ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
- ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
- ಬಿಜಾಪುರ ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುಧಾಕರ್ ಕೊಳ್ಳುರ ನೇಮಕ
- ಸರಗೂರು: ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
- ಪಾರದರ್ಶಕ ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್
- ನಮ್ಮೂರ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ: ಕೊರಟಗೆರೆಯ ಗುಂಡಿನ ಪಾಳ್ಯದಲ್ಲಿ ಪ್ರತಿಭಟನೆ
Author: admin
ಬೀದರ್: ಮೊಬೈಲ್ ಹೆಚ್ಚು ಬಳಸಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಕ್ಕೆ 9ನೇ ತರಗತಿ ಓದುತ್ತಿದ್ದ ಬಾಲಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಸೋನಿ ಸಂತೋಷ ಬನವಾಸೆ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾಳೆ. ಪೋಷಕರು ಮೊಬೈಲ್ ಹೆಚ್ಚು ಬಳಸಬೇಡಾ ಬುದ್ಧಿವಾದ ಹೇಳಿದರು, ಇದೇ ಕಾರಣಕ್ಕೆ ಮನನೊಂದ ವಿದ್ಯಾರ್ಥಿನಿ ಮಂಗಳವಾರ ರಾತ್ರಿ ಕೋಣೆಯಲ್ಲಿ ಒಬ್ಬಳೇ ಇದ್ದ ವೇಳೆ ನೇಣಿಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಮೃತ ಬಾಲಕಿಯ ತಂದೆ ಸಂತೋಷ ಬನವಾಸೆ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಉತ್ತರ ಪ್ರದೇಶ: ತನ್ನ ಪತ್ನಿಗೆ ಬೇರೊಬ್ಬನ ಜತೆ ಸಂಬಂಧವಿರುವುದನ್ನು ಅರಿತ ವ್ಯಕ್ತಿಯೊಬ್ಬ, ಆಕೆ ಇಷ್ಟಪಟ್ಟವನ ಜೊತೆಗೆ ಆಕೆಗೆ ವಿವಾಹ ಮಾಡಿಸಿಕೊಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಬ್ಲೂ ಮತ್ತೆ ರಾಧಿಕಾ 2017ರಲ್ಲಿ ವಿವಾಹವಾಗಿದ್ದರು ಅವರಿಗೆ 7 ಮತ್ತು 9 ವರ್ಷದ ಇಬ್ಬರು ಮಕ್ಕಳಿದ್ದಾರೆ. ಜೀವನೋಪಾಯಕ್ಕಾಗಿ ಬಬ್ಲೂ ಆಗಾಗ ಮನೆಯಿಂದ ಬೇರೆ ಊರಿಗೆ ಹೋಗುತ್ತಿದ್ದ ಈ ಸಂದರ್ಭದಲ್ಲಿ ರಾಧಿಕಾ ಹಳ್ಳಿಯ ಯುವಕನೊಬ್ಬನನ್ನು ಇಷ್ಟಪಡಲು ಶುರು ಮಾಡಿದ್ದಳು. ಇವರಿಬ್ಬರ ಪ್ರೀತಿ ವಿಚಾರ ತಿಳಿದು ಕೋಪಗೊಳ್ಳದೇ, ನ್ಯಾಯಾಲಯಕ್ಕೆ ಹೋಗಿ ಪತ್ನಿ ಹಾಗೂ ಆ ವ್ಯಕ್ತಿಯ ಜತೆ ವಿವಾಹಕ್ಕೆ ಸಾಕ್ಷಿಯಾದ ಬಬ್ಲೂ, ನಂತರ ದೇವಸ್ಥಾನದಲ್ಲಿ ಅವರಿಬ್ಬರಿಗೂ ವಿವಾಹ ಮಾಡಿಸಿದ್ದಾನೆ. ನಾನು ಮಕ್ಕಳನ್ನು ನೋಡಿಕೊಳ್ಳುತ್ತೇನೆ ನೀನು ಇಷ್ಟಪಟ್ಟವನೊಂದಿಗೆ ಖುಷಿಯಾಗಿರು ಎನ್ನುವ ಮೂಲಕ ಬಬ್ಲೂ ತನ್ನ ಹೊಸ ಜೀವನವನ್ನು ತಾನು ಕಂಡುಕೊಂಡಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣ ಸಂಬಂಧ ಸಚಿವ ರಾಜಣ್ಣ ಪುತ್ರ ಡಿಜಿಪಿಗೆ ದೂರು ನೀಡಿದ್ದಾರೆ. ದೂರಿನಲ್ಲಿ ಹನಿಟ್ರ್ಯಾಪ್ ಗೆ ಬಂದವರು ತಮ್ಮ ಹತ್ಯೆಗೆ ಯತ್ನಿಸಿದ್ರು ಎಂದು ರಾಜೇಂದ್ರ ರಾಜಣ್ಣ ಹೊಸ ತಿರುವು ನೀಡಿದ್ದಾರೆ. ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಡಿಜಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದೇನೆ. ಸಚಿವರು ಕೂಡ ಗೃಹ ಸಚಿವರಿಗೆ ದೂರು ನೀಡಿದ್ದಾರೆ. ನನ್ನ ಮೇಲೆ ಹನಿಟ್ರ‍್ಯಾಪ್ ಆಗಿಲ್ಲ, ದೂರವಾಣಿ ಕರೆ ಮೂಲಕ ಯತ್ನ ನಡೆಯುತ್ತಾ ಇತ್ತು ಎಂದು ಹೇಳಿದರು. ನವೆಂಬರ್ 16ರಂದು ಮಗಳ ಹುಟ್ಟುಹಬ್ಬದ ದಿನ ಶಾಮಿಯಾನ ಹಾಕೋಕೆ ಸ್ವಲ್ಪ ಜನ ಬಂದಿದ್ರು. ಆ ಸಂದರ್ಭದಲ್ಲಿ ಹತ್ಯೆ ಮಾಡಲು ಪ್ರಯತ್ನ ಮಾಡಿದ್ರು ಎಂದು ಸೋಮ, ಭರತ್ ಇಬ್ಬರ ಹೆಸರನ್ನು ಉಲ್ಲೇಖ ಮಾಡಿದರು. ನನಗೆ ಇದು ಜನವರಿಯಲ್ಲಿ ಮಾಹಿತಿ ಸಿಕ್ಕಿತು. ನನ್ನ ಆಪ್ತರ ಮೂಲಕ ಆಡಿಯೋ ಸಿಕ್ಕಿತು. ಆಡಿಯೋದಲ್ಲಿ 5 ಲಕ್ಷ ಸುಪಾರಿ ನೀಡಿದ್ರು. ಮೂರು ಜನ ಹತ್ಯೆ ಮಾಡಲು ಪ್ರಯತ್ನಿಸಿದ್ದರು. ಈ ಸಂಬಂಧ ಎಸ್ಪಿಗೆ…
ಬೆಂಗಳೂರು: ಮಾರಾಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಜೈಲು ಸೇರಿರುವ ಬಿಗ್ ಬಾಸ್ ನ ಇಬ್ಬರು ಮಾಜಿ ಸ್ಪರ್ಧಿಗಳಾದ ವಿನಯ್ ಗೌಡ ಹಾಗೂ ರಜತ್ ರೀಲ್ಸ್ ಗೆ ಬಳಸಿದ ಮಚ್ಚು ಇನ್ನೂ ಪತ್ತೆಯಾಗಿಲ್ಲ. ಬಸವೇಶ್ವರನಗರ ಠಾಣೆ ಪೊಲೀಸರ ವಶದಲ್ಲಿರುವ ಈ ಇಬ್ಬರನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಈ ಇಬ್ಬರು ಮಾರಾಕಾಸ್ತ್ರ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇವರಿಬ್ಬರ ವಿರುದ್ಧ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನಂತರ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ವಿಚಾರಣೆ ಸಂದರ್ಭದಲ್ಲಿ ರೀಲ್ಸ್ ಗೆ ಬಳಸಿದ್ದ ಮಾರಾಕಾಸ್ತ್ರ ನೀಡದೆ, ಫೈಬರ್ ಮಾರಾಕಾಸ್ತ್ರವನ್ನು ಪೊಲೀಸರಿಗೆ ಒಪ್ಪಿಸಿ ತನಿಖೆ ಹಾದಿ ತಪ್ಪಿಸಲು ಯತ್ನಿಸಿದ್ದರು. ಈ ಇಬ್ಬರನ್ನು ಸ್ಥಳ ಮಹಜರಿಗೆ ಕರೆದೊಯ್ದಾಗ ರೀಲ್ಸ್ ಮಾಡಲು ಮಾರಕಾಸ್ತ್ರ ಬಳಸಿದ್ದಾಗಿ ಹೇಳಿದ್ದಾರೆ. ಪೊಲೀಸರು ಈ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದ್ದು, ಸ್ಟುಡಿಯೋದಲ್ಲಿ ಐದಾರು ಮಾರಾಕಾಸ್ತ್ರಗಳಿದ್ದವು. ಶೂಟಿಂಗ್ ಗಾಗಿ ಅವುಗಳನ್ನು…
‘ಬಿಗ್ ಬಾಸ್’ ಮಾಜಿ ಸ್ಪರ್ಧಿ ರಕ್ಷಕ್ ಬುಲೆಟ್ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎನ್ನುವ ವಿವಾದ ನಡುವೆಯೇ ಇದೀಗ ರಕ್ಷಕ್ ಕ್ಷಮೆಯಾಚಿಸಿದ್ದಾರೆ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಆಚಾತುರ್ಯ ನಡೆಯೋದಿಲ್ಲ ಎಂದು ಮನವಿ ಮಾಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ರಕ್ಷಕ್, ಇತ್ತೀಚೆಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗ್ ಅನ್ನು ಒಂದು ಸ್ಕಿಟ್ ನಲ್ಲಿ ಹೇಳಿದ್ದೆ, ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು ನನ್ನ ತಾಯಿ ಹಾಗೂ ಕುಟುಂಬಸ್ಥರು ಪರಮ ಭಕ್ತರು. ನಮ್ಮ ತಂದೆಯವರು ಇದ್ದಾಗಿನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ. ನಾವು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿ ಬಗ್ಗೆ ಹೇಳುವಷ್ಟು ದೊಡ್ಡವನಲ್ಲ. ಆ ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಆರಂಭಿಸುತ್ತೇನೆ. ನಾನು ಭಕ್ತಾಧಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ…
ಪಾವಗಡ: ಮೆಗಾ ಫ್ಯಾನ್ಸ್ ಪ್ರತಿವರ್ಷದಂತೆ ಈ ವರ್ಷವೂ ಸಹ ಜನಸೇವೆ ಮಾಡುವ ಮೂಲಕ ಬಡ ಕುಟುಂಬದ ಮಹಿಳೆಯರಿಗೆ ಜೀವನೋಪಾಯಕ್ಕಾಗಿ ಹೊಲಿಗೆ ಯಂತ್ರ, ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಕಾರ್ಯದ ಡಿ ಗ್ರೂಪ್ ಮಹಿಳೆಯರಿಗೆ ಸೀರೆ, ಬಡ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಹೆಚ್ಚಿಸಿಕೊಳ್ಳಲು ಲ್ಯಾಪ್ ಟಾಪ್ ವಿತರಿಸುವುದರ ಮೂಲಕ ಅದ್ಭುತವಾದಂತಹ ಕಾರ್ಯವನ್ನು ಮೆಗಾ ಫ್ಯಾನ್ಸ್ ಮಾಡಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆಯ ವೈದ್ಯರಾದ ಮಂಜುನಾಥ್ ತಿಳಿಸಿದರು. ಮೆಗಾ ಫ್ಯಾನ್ಸ್, ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ವತಿಯಿಂದ ಗುರುವಾರ ಪಟ್ಟಣದ ಅಕ್ಷಯ ಬ್ಲೂ ಜೇಮ್ ಶಾಲಾ ಆವರಣದಲ್ಲಿ ಮೆಗಾ ಫ್ಯಾಮಿಲಿ ರಾಮ್ ಚರಣ್ ತೇಜ್ ರವರ 40ನೇ ಹುಟ್ಟುಹಬ್ಬದ ಕೇಕ್ ಕತ್ತರಿಸಿ ಮಾತನಾಡಿದರು. ಕೇವಲ ಶ್ರೀಮಂತಿಕೆ ಒಂದಿದ್ದರೆ ಸಾಲದು, ಬಡ ಜನತೆಯ ಸೇವೆ ಮಾಡುವ ಹೃದಯವಂತಿಕೆ ಇರಬೇಕು, ಇಂತಹ ಹೃದಯ ಶ್ರೀಮಂತ ಹೊಂದಿರುವ ರಿಯಲ್ ಹೀರೋ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್ ರವರದ್ದು ಎಂದು ಮತ್ತೊರ್ವ ಸಮಾಜ ಸೇವಕರು ಚಲನ ಚಿತ್ರ ನಟ, ನಿರ್ಮಾಪಕ ಬಜಾಜ್…
ಬಳ್ಳಾರಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತನನ್ನು ಬಳ್ಳಾರಿ ಮೂಲದ ಸಾಹಿಲ್ ಜೈನ್ ಎಂದು ಗುರುತಿಸಲಾಗಿದೆ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಸಾಹಿಲ್ ಜೈನ್ ನನ್ನು ಬಂಧಿಸಲಾಗಿದೆ. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತ್ತು ಎನ್ನಲಾಗಿದೆ. ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದ. ಈಗಾಗಲೇ ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್ ಮುಂಬೈನಲ್ಲಿ ಒಮ್ಮೆ ಬಂಧನಕ್ಕೊಳಗಾಗಿದ್ದ. ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಈಗಿನ ಪ್ರಕರಣ ಮತ್ತು ಹಿಂದಿನ ಪ್ರಕರಣದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಸಾಹಿಲ್ ಜೈನ್ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರೋ ಹಿನ್ನೆಲೆ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು. ಸಾಹಿಲ್ ಜೈನ್ ವಶಕ್ಕೆ…
ಧಾರವಾಡ: ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ. ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು. ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿಲ್ಲ, ತಿದ್ದುಪಡಿ ಬಗ್ಗೆ ಅವರು ಮಾತಾಡಿರೋದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿದ್ದಾರೆ. ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಟ್ಟಿಲ್ಲ. ಡಿಕೆಶಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರ ಆಗ್ರಹಕ್ಕೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದಾಗ ಕೂಡಲೇ ಯಾಕೆ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಡಿಕೆಶಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ತಿದ್ದುಪಡಿ ಬಗ್ಗೆ ನ್ಯಾಯಾಲಯದ ಉಲ್ಲೇಖ ಮಾಡಿ ಮಾತಾಡಿದ್ದಾರೆ ಎಂದರು. ಬಿಜೆಪಿ ಅವರಿಂದ ನಾವು ಸಂವಿಧಾನದ ಬಗ್ಗೆ ಕಲಿಯೋ ಅವಶ್ಯಕತೆ ಇಲ್ಲ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ನಿಲುವು. 371 ಜೆ ತಿದ್ದುಪಡಿ ಅಲ್ಲವಾ? ನಾವು ಅದನ್ನ ಮಾಡಿದ್ದು. ಕಾಲಕಾಲಕ್ಕೆ ತಿದ್ದುಪಡಿ ಮಾಡಿಕೊಳ್ಳಬಹುದು ಅಂತ ಅಂಬೇಡ್ಕರ್ ಅವರೇ ಹೇಳಿದ್ದಾರೆ ಎಂದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಜೀವನಾಧಾರಿತ ಚಿತ್ರ ಘೋಷಣೆಯಾಗಿದ್ದು, ಅಜೇ: ದಿ ಅನ್ಟೋಲ್ಡ್ ಸ್ಟೋರಿ ಆಫ್ ಎ ಯೋಗಿ ಎಂಬ ಚಿತ್ರದ ಪೋಸ್ಟರ್ ಅನಾವರಣ ಮಾಡಲಾಗಿದೆ. ಶಾಂತನು ಗುಪ್ತ ಅವರ ದಿ ಮಾಂಕ್ ಹೂ ಬಿಕಮ್ ಚೀಫ್ ಮಿನಿಸ್ಟರ್ ಎಂಬ ಪುಸ್ತಕವನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗಲಿದೆ. ಪೋಸ್ಟರ್ನಲ್ಲಿ ನಟ ಅನಂತ್ ಜೋಶಿ ಅವರು ಯೋಗಿ ಆದಿತ್ಯನಾಥ್ ಪಾತ್ರವನ್ನು ನಿರ್ವಹಿಸಿದ್ದಾರೆ. ಹಳ್ಳಿಯ ಮಧ್ಯಮ ವರ್ಗದ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯಾಗುವ ಕಥೆ ಈ ಚಿತ್ರದ ಕಥೆಯಾಗಿದ್ದು, ಈ ವರ್ಷವೇ ಸಿನಿಮಾ ರಿಲೀಸ್ ಗೆ ಚಿತ್ರತಂಡ ಪ್ಲ್ಯಾನ್ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4