Author: admin

ಬಳ್ಳಾರಿ: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಮೂರನೇ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತನನ್ನು ಬಳ್ಳಾರಿ ಮೂಲದ ಸಾಹಿಲ್ ಜೈನ್ ಎಂದು ಗುರುತಿಸಲಾಗಿದೆ. ರನ್ಯಾ ರಾವ್ ಜೊತೆಗೆ ವಾಟ್ಸಾಪ್ ಚಾಟಿಂಗ್ ಮಾಡಿದ್ದ ಸಾಹಿಲ್ ಜೈನ್ ನನ್ನು ಬಂಧಿಸಲಾಗಿದೆ. ಸಾಹಿಲ್ ಜೈನ್ ತಂದೆ ಮಹೇಂದ್ರ ಜೈನ್ ಅವರ ಸಹೋದರರ ಬಟ್ಟೆ ಅಂಗಡಿ ಬಳ್ಳಾರಿಯಲ್ಲಿದ್ದು, ಸಹೋದರರು ಬಳ್ಳಾರಿಯಲ್ಲಿ ವಾಸವಾಗಿದ್ದಾರೆ. ಆದರೆ ಕೆಲ ವರ್ಷಗಳಿಂದ ಸಾಹಿಲ್ ಜೈನ್ ಕುಟುಂಬ ಬೆಂಗಳೂರಿಗೆ ಸ್ಥಳಾಂತರಗೊಂಡಿತ್ತು ಎನ್ನಲಾಗಿದೆ. ಸಾಹಿಲ್ ಚಿಕ್ಕಂದಿನಿಂದಲೇ ಸೋದರ ಮಾವನೊಂದಿಗೆ ಮುಂಬೈನಲ್ಲಿ ವಾಸಿಸುತ್ತಿದ್ದ. ಈಗಾಗಲೇ ಇದೇ ರೀತಿಯ ಪ್ರಕರಣದಲ್ಲಿ ಸಾಹಿಲ್ ಮುಂಬೈನಲ್ಲಿ ಒಮ್ಮೆ ಬಂಧನಕ್ಕೊಳಗಾಗಿದ್ದ. ಕಸ್ಟಮ್ಸ್ ಅಧಿಕಾರಿಗಳು ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ಈಗಿನ ಪ್ರಕರಣ ಮತ್ತು ಹಿಂದಿನ ಪ್ರಕರಣದಲ್ಲಿ ಚಿನ್ನವನ್ನು ಮಾರಾಟ ಮಾಡುತ್ತಿದ್ದ ಹಾಗೂ ಹವಾಲಾ ನಂಟಿನ ಆರೋಪದಲ್ಲಿಯೇ ಸಾಹಿಲ್ ಜೈನ್ ಬಂಧಿತನಾಗಿದ್ದ. ಚಿನ್ನದ ವ್ಯಾಪಾರಿಗಳ ಜೊತೆ ನಂಟು ಇರೋ ಹಿನ್ನೆಲೆ ಚಿನ್ನದ ಮಾರಾಟದ ಜವಾಬ್ದಾರಿಯೂ ಸಾಹಿಲ್ ಮೇಲಿತ್ತು. ಸಾಹಿಲ್ ಜೈನ್ ವಶಕ್ಕೆ…

Read More

ಧಾರವಾಡ: ಬಸನಗೌಡ ಪಾಟೀಲ್ ಯತ್ನಾಳ ಉಚ್ಛಾಟನೆಗೆ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಕುಟುಂಬವೇ ಕಾರಣ. ಇದನ್ನು ನಾನು ನೇರವಾಗಿ ಆರೋಪ ಮಾಡುತ್ತೇನೆ. ಬಿಜೆಪಿಯಲ್ಲಿರುವ ಪಂಚಮಸಾಲಿಗಳು ರಾಜೀನಾಮೆ ನೀಡಬೇಕು ಎಂದು ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಯತ್ನಾಳ ಉಚ್ಛಾಟನೆ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಪಂಚಮಸಾಲಿಗಳು ಬಿಜೆಪಿಯಿಂದ ಹೊರ ಬರಬೇಕು ಎಂದು ಕರೆ ನೀಡಿದ್ದಾರೆ. ಯತ್ನಾಳ್ ಎಂದಿಗೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ. ಕಾಣದ ಕೈಗಳು ಅವರನ್ನು ಉಚ್ಛಾಟನೆ ಮಾಡುವಂತೆ ಮಾಡಿವೆ. ಕುಟುಂಬ ರಾಜಕಾರಣ ಬೇಡ ಎನ್ನುವುದು ತಪ್ಪೇ? ಯತ್ನಾಳ್ ಏನೇ ಮಾತನಾಡಿದರೂ ಅವರು ಉತ್ತರ ಕರ್ನಾಟಕ, ಹಿಂದುತ್ವದ ಬಗ್ಗೆಯೇ ಮಾತನಾಡಿದ್ದಾರೆ ಎಂದರು. ಯತ್ನಾಳ್ ಅವರನ್ನು ಉಚ್ಛಾಟನೆ ಮಾಡಿ ಬಿಜೆಪಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಇದರಿಂದ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಬೆಂಗಳೂರು: ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿಲ್ಲ, ತಿದ್ದುಪಡಿ ಬಗ್ಗೆ ಅವರು ಮಾತಾಡಿರೋದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಸಮರ್ಥಿಸಿದ್ದಾರೆ. ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೊಟ್ಟಿಲ್ಲ. ಡಿಕೆಶಿ ವಿರುದ್ಧ ಕಾಂಗ್ರೆಸ್ ಕ್ರಮ ಕೈಗೊಳ್ಳಬೇಕು ಎಂಬ ಬಿಜೆಪಿ ನಾಯಕರ ಆಗ್ರಹಕ್ಕೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಅನಂತ್ ಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಬಗ್ಗೆ ಮಾತಾಡಿದಾಗ ಕೂಡಲೇ ಯಾಕೆ ಹೆಗಡೆ ವಿರುದ್ಧ ಕ್ರಮ ತೆಗೆದುಕೊಳ್ಳಲಿಲ್ಲ. ಡಿಕೆಶಿ ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಲ್ಲ. ತಿದ್ದುಪಡಿ ಬಗ್ಗೆ ನ್ಯಾಯಾಲಯದ ಉಲ್ಲೇಖ ಮಾಡಿ ಮಾತಾಡಿದ್ದಾರೆ ಎಂದರು. ಬಿಜೆಪಿ ಅವರಿಂದ ನಾವು ಸಂವಿಧಾನದ ಬಗ್ಗೆ ಕಲಿಯೋ ಅವಶ್ಯಕತೆ ಇಲ್ಲ. ಸಂವಿಧಾನ ರಕ್ಷಣೆ ನಮ್ಮ ಪಕ್ಷದ ನಿಲುವು. 371 ಜೆ ತಿದ್ದುಪಡಿ ಅಲ್ಲವಾ? ನಾವು ಅದನ್ನ ಮಾಡಿದ್ದು. ಕಾಲಕಾಲಕ್ಕೆ ತಿದ್ದುಪಡಿ ಮಾಡಿಕೊಳ್ಳಬಹುದು ಅಂತ ಅಂಬೇಡ್ಕರ್ ಅವರೇ ಹೇಳಿದ್ದಾರೆ ಎಂದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಜೀವನಾಧಾರಿತ ಚಿತ್ರ ಘೋಷಣೆಯಾಗಿದ್ದು, ಅಜೇ: ದಿ ಅನ್ಟೋಲ್ಡ್ ಸ್ಟೋರಿ ಆಫ್ ಎ ಯೋಗಿ ಎಂಬ ಚಿತ್ರದ ಪೋಸ್ಟರ್ ಅನಾವರಣ ಮಾಡಲಾಗಿದೆ. ಶಾಂತನು ಗುಪ್ತ ಅವರ ದಿ ಮಾಂಕ್ ಹೂ ಬಿಕಮ್ ಚೀಫ್ ಮಿನಿಸ್ಟರ್ ಎಂಬ ಪುಸ್ತಕವನ್ನು ಆಧರಿಸಿ ಈ ಚಿತ್ರ ನಿರ್ಮಾಣವಾಗಲಿದೆ. ಪೋಸ್ಟರ್ನಲ್ಲಿ ನಟ ಅನಂತ್ ಜೋಶಿ ಅವರು ಯೋಗಿ ಆದಿತ್ಯನಾಥ್ ಪಾತ್ರವನ್ನು ನಿರ್ವಹಿಸಿದ್ದಾರೆ. ಹಳ್ಳಿಯ ಮಧ್ಯಮ ವರ್ಗದ ಹುಡುಗನೊಬ್ಬ ರಾಜ್ಯದ ಮುಖ್ಯಮಂತ್ರಿಯಾಗುವ ಕಥೆ ಈ ಚಿತ್ರದ ಕಥೆಯಾಗಿದ್ದು, ಈ ವರ್ಷವೇ ಸಿನಿಮಾ ರಿಲೀಸ್ ಗೆ ಚಿತ್ರತಂಡ ಪ್ಲ್ಯಾನ್ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಬೈಕ್ ಸವಾರ ಹಾಗೂ ಪಾದಚಾರಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹಳೆಯ ವಿಮಾನ ನಿಲ್ದಾಣ ರಸ್ತೆಯ ಮುರುಗೇಶಪಾಳ್ಯ ಸಿಗ್ನಲ್ ಬಳಿ ಬುಧವಾರ ರಾತ್ರಿ ನಡೆದಿದೆ. ರಾತ್ರಿ 10 ಗಂಟೆ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಬಸ್ ನ ಚಾಲಕ ಹಾಗೂ ನಿರ್ವಾಹಕ ಸ್ಥಳದಿಂದ ಪರಾರಿಯಾಗಿದ್ದಾರೆ. ಹಳೇ ವಿಮಾನ ನಿಲ್ದಾಣದ ಮುರುಗೇಶಪಾಳ್ಯ ಸಿಗ್ನಲ್ನಲ್ಲಿ ಇ–ಕಾಮರ್ಸ್ ಬೈಕ್ ಸವಾರ ಯೂಟರ್ನ್ ತೆಗೆದುಕೊಂಡಿದ್ದ. ಅದೇ ರಸ್ತೆಯಲ್ಲಿ ಜಿಮ್ ಮುಗಿಸಿ ಬರುತ್ತಿದ್ದ ಪಾದಚಾರಿಯೊಬ್ಬರು ಡಿವೈಡರ್ ಕ್ರಾಸ್ ಮಾಡಿ, ರಸ್ತೆ ದಾಟುತ್ತಿದ್ದರು. ಈ ವೇಳೆ KA51 AJ6167 ನಂಬರಿನ ಬಸ್ ಇಬ್ಬರಿಗೂ ಡಿಕ್ಕಿ ಹೊಡೆದಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಹಾಗೂ ಪಾದಚಾರಿಗೆ ಡಿಕ್ಕಿ ಹೊಡೆದ ಬಸ್ ಸುಮಾರು 50 ಮೀಟರ್ ವರೆಗೆ ಇಬ್ಬರನ್ನೂ ಎಳೆದೊಯ್ದಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಜೀವನ್ ಭೀಮಾನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದು, ಮೃತರ ಗುರುತು…

Read More

ಗಾಜಿಯಾಬಾದ್: ಬಾಲಕಿಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗಾಜಿಯಾಬಾದ್ ನಲ್ಲಿ ನಡೆದಿದೆ. ಆರೋಪಿಗಳ ಪೈಕಿ ಒಬ್ಬನಿಗೆ ಬಾಲಕಿಯ ಪರಿಚಯವಿತ್ತು. ಆಕೆ ಕರೆ ಮಾಡಿ ಕರೆಸಿ ಬಳಿಕ ಸ್ನೇಹಿತನ ಜೊತೆ ಸೇರಿ ಆಕೆಯನ್ನು ಅಪಹರಿಸಿ ಸ್ಮಶಾನಕ್ಕೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಬಾಲಕಿಯ ದೂರಿನ ಬೆನ್ನಲ್ಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಶ್ರಫ್ ಹಾಗೂ ಮತ್ತೊಬ್ಬ ಯುವಕ ಬಂಧಿತ ಆರೋಪಿಗಳಾಗಿದ್ದಾರೆ. ಮೋದಿ ನಗರದ ನಿವಾರಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ನಡೆದ ಘಟನೆಯನ್ನು ಬಾಲಕಿ ತನ್ನ ಪೋಷಕರಿಗೆ ತಿಳಿಸಿದ್ದು, ಅವರು ತಕ್ಷಣವೇ ನಿವಾರಿ ಪೊಲೀಸ್ ಠಾಣೆಗೆ ಕರೆತಂದು ಎಫ್ಐಆರ್ ದಾಖಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಸರಗೂರು: ಮಹಾಡ ಸತ್ಯಾಗ್ರಹ ಆಧುನಿಕ ಭಾರತದ ಇತಿಹಾಸದಲ್ಲಿ ಅತ್ಯಂತ ಮಹತ್ವದ್ದು, ಇದನ್ನು ಭಾರತದ ಮಟ್ಟದಲ್ಲಿ ದಲಿತ ಚಳುವಳಿಗೆ ಅಡಿಪಾಯ ಹಾಕಿದ ಅಂಬೇಡ್ಕರ್ ರವರು ಎಂದು ಕರೆಯಲಾಗುತ್ತದೆ ಎಂದು ದಸಂಸ ಅಂಬೇಡ್ಕರ್ ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ತಿಳಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ದಸಂಸ ಅಂಬೇಡ್ಕರ್ ವಾದ ಸಂಘಟನೆ ವತಿಯಿಂದ ಭಾರತದ ಅಸ್ಪೃಶ್ಯರ ಪ್ರತಿರೋಧ ಚಳವಳಿ, ಮಹಾಡ್ ಸತ್ಯಾಗ್ರಹದ ನೆನಪಿನಲ್ಲಿ ಶೋಷಿತರ ಸಂಘರ್ಷ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಕುಡಿಯುವ ನೀರಿಗಾಗಿ ಅಂಬೇಡ್ಕರ್ ಕೈಗೊಂಡ ಮಹಾಡ್ ‌ಸತ್ಯಾಗ್ರಹ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳುವಳಿ. ಸಾರ್ವಜನಿಕವಾಗಿ ಕೆರೆಯ ನೀರನ್ನು ಸ್ಪರ್ಶಿಸುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎಂದು ಸಾರಿ ಹೇಳಿ ಮಾನವ ಹಕ್ಕುಗಳನ್ನು ಎತ್ತಿಹಿಡಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಾರಾಷ್ಟ್ರದ ರಾಯಗಡ ಜಿಲ್ಲೆಯಲ್ಲಿರುವ ಮಹಾಡ್‌ ದಲ್ಲಿ 1927ರ ಮಾರ್ಚ್‌ 20ರಂದು ಸಾರ್ವಜನಿಕವಾಗಿ ಕೆರೆಯ ನೀರನ್ನು ಸ್ಪರ್ಶಿಸುವ ಮೂಲಕ ಇದು ಎಲ್ಲರಿಗೂ ಸೇರಿದ್ದು ಎಂದು ಸಾರಿ…

Read More

ಬೀದರ್ : ಬೇಸಿಗೆಯ ತೀವ್ರತೆ ಹೆಚ್ಚುತ್ತಿದ್ದಂತೆ ಔರಾದ್ (ಬಿ) ಹಾಗೂ ಕಮಲನಗರ ತಾಲ್ಲೂಕಿನ ಸಾಕಷ್ಟು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಹೆಚ್ಚಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿದ್ದು, ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಪ್ರಭು ಚವ್ಹಾಣ್ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಮತ್ತು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು. ಔರಾದ(ಬಿ) ತಾಲ್ಲೂಕು ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ನೀರಿನ ಸಮಸ್ಯೆಯ ಕುರಿತು ಪಂಚಾಯತ್‌ ಅಧಿಕಾರಿಗಳಿಂದ ಗ್ರಾಮವಾರು ಮಾಹಿತಿ ಪಡೆದ ಅವರು, ಪ್ರತಿದಿನ ಒಂದಿಲ್ಲೊಂದು ಗ್ರಾಮದ ಜನರು ನೀರಿನ ಸಮಸ್ಯೆ ಹೇಳಿಕೊಂಡು ಬರುತ್ತಿದ್ದಾರೆ. ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಚೇರಿಯಲ್ಲಿ ಲಭ್ಯವಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಖಾಸಗಿ ಬೋರವೆಲ್ ಇಲ್ಲವೇ ಹೊಸ ಬೋರ್‌ವೆಲ್ ಕೊರೆಸಿ ನೀರು ಸರಬರಾಜು ಮಾಡಬೇಕು. ಸಾಧ್ಯವಾದಷ್ಟು ಸ್ಥಳೀಯವಾಗಿಯೇ ಪರಿಹಾರ ಕಲ್ಪಿಸಬೇಕು. ಸಮಸ್ಯೆಯ ತೀವ್ರತೆ ಹೆಚ್ಚಿರುವ ಗ್ರಾಮಗಳಲ್ಲಿ…

Read More

ಸುರಪುರವೆಂಬ ಊರಿನಲ್ಲಿ ಒಂದು ನಾಯಿ ಮತ್ತು ಒಂದು ಕೋಳಿಗೆ ಜಗಳ ಹತ್ತಿಕೊಂಡಿತು. ಅದರಂತೆ ಅವರುಗಳ ಹಿರಿಯ ಮುಖಂಡ ಹಿರಿಯ ನಾಯಿ, ಮತ್ತು ಹಿರಿಯ ರಾಣಿ ಕೋಳಿ ಬಳಿ ಬಂದು ನಮ್ಮ ಸಮಸ್ಯೆ ಬಗೆಹರಿಸಿಕೊಡಬೇಕಾಗಿ ಕೇಳಿಕೊಂಡವು. ಮುಖಂಡರುಗಳು ನಿಮ್ಮ ಸಮಸ್ಯೆ ಹೇಳಿ ಎಂದಾಗ ನಾಯಿಯು ಇನ್ನು ಮುಂದೆ ನಾನು ಯಾವಾಗಲೂ ಮನೆ ಕಾಯುವ ಕೆಲಸ ಮಾಡಲಾರೆ, ಈ ಕೋಳಿಯಾದರೋ ಬೆಳಗಿನ ಝಾವ ಎಲ್ಲರನ್ನೂ ಕೂಗಿ ಎಬ್ಬಿಸುವುದೊಂದೇ ಕೆಲಸ ಹಾಗಾಗಿ ಈ ಕೋಳಿಯ ಕೆಲಸ ಇನ್ನುಮಂದೆ ನಾನು ಮಾಡುತ್ತೇನೆ ಎಂದಿತು. ಕೋಳಿಯೂ ಕೂಡ ನಾನು ಊರಿನ ಜನರನ್ನೆಲ್ಲಾ ಎಬ್ಬಿಸಲು ನಾನು ಎಲ್ಲರಿಗಿಂತ ಮೊದಲು ಎದ್ದೂ ಎದ್ದೂ ಸಾಕಾಗಿ ಹೋಗಿದೆ. ಹಾಗಾಗಿ ಈ ನಾಯಿಯಂತೆ ಯಾವಾಗಲೂ ಮನೆಯ ಬಳಿ ಮಲಗಿಕೊಂಡು ಕಾಯುವ ಕೆಲಸ ಮಾಡುತ್ತೇನೆ ಎಂದಿತು. ಇವರುಗಳಿಗೆಲ್ಲಾ ಬುದ್ಧಿ ಕಲಿಸಲು ಮುಖಂಡರುಗಳು ತಮ್ಮ ತಮ್ಮಲ್ಲೇ ಮಾತನಾಡಿಕೊಂಡು ಹಾಗೇ ಆಗಲಿ ಎಂದರು. ಅದೇ ರೀತಿ ಅಂದು ರಾತ್ರಿ ಕೋಳಿಗಳೆಲ್ಲಾ ಸದ್ಯ ಇನ್ನು ಬೆಳಗ್ಗೆ ಬೇಗ ಏಳಬೇಕಿಲ್ಲ ಎಂದು…

Read More

ತುಮಕೂರು :  ಪ್ರೀತಿಸಿ ಮದುವೆಯಾದ ನಂತರ ಮೊದಲ ಪತಿಯ ಮಗುವನ್ನು ವ್ಯಕ್ತಿಯೊಬ್ಬ ಕೊಲೆ ಮಾಡಿ, ಹಾವು ಕಚ್ಚಿದೆ ಎಂದು ಸುಳ್ಳು ಹೇಳಿ ಅಂತ್ಯ ಸಂಸ್ಕಾರ ಮಾಡಿರುವ ಘಟನೆ ನಡೆದಿದೆ. ತುಮಕೂರಿನ ಸಿದ್ದಲಿಂಗಯ್ಯನ ಪಾಳ್ಯದ ಜಮೀನೊಂದರಲ್ಲಿ ಮಗುವಿನ ಶವ ತೆಗೆದು ಇಂದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ.  ಚಾಮರಾಜನಗರ ಮೂಲದ ಚಂದ್ರಶೇಖರ್‌, ಕಾವ್ಯ ಮಂಡ್ಯ ಜಿಲ್ಲೆ, ಬೆಳ್ಳೂರು ಕ್ರಾಸ್ ಮೂಲದವಳು ತುಮಕೂರು ತಾಲೂಕಿನ ಸಿದ್ಧಲಿಂಗಯ್ಯನಪಾಳ್ಯದಲ್ಲಿ ನೆಲೆಸಿದ್ದರು. ಕಾವ್ಯಾಗೆ ಈಗಾಗಲೇ ಅಶೋಕ ಎಂಬುವರ ಜತೆ ಮದುವೆಯಾಗಿತ್ತು. ಪ್ರೆಗ್ನೆಂಟ್ ಇದ್ದಾಗಲೇ ಚಂದ್ರಶೇಖರ್ ಜೊತೆ ಓಡಿ ಬಂದಿದ್ದ ಕಾವ್ಯ, ಬಳಿಕ ಮಿಥುನ್ ಗೌಡಗೆ ಜನ್ಮ ನೀಡಿದ್ದಳು. ಮಿಥುನ್ ವಿಚಾರದಲ್ಲಿ ಇಬ್ಬರ ಮಧ್ಯೆ ಕಲಹ ಉಂಟಾಗಿತ್ತು. ಚಂದ್ರಶೇಖರ್‌ ಕ್ರಷರ್ ನಲ್ಲಿ ಲಾರಿ ಡ್ರೈವರ್. ಕಾವ್ಯ ಗಾರ್ಮೆಂಟ್ಸ್‌ ನಲ್ಲಿ ಕೆಲಸ ಮಾಡುತ್ತಿದ್ದಳು. ಮಾರ್ಚ್‌ 20ರಂದು ಕಾವ್ಯಾ ಕೆಲಸಕ್ಕೆ ಹೋಗಿದ್ದಾಗ ಮನೆಯಲ್ಲಿದ್ದ ಮಗು ಮೇಲೆ ಚಂದ್ರಶೇಖರ್‌ ಹಲ್ಲೆ ಮಾಡಿದ್ದು, ಪ್ರಜ್ಞೆ ತಪ್ಪಿತ್ತು. ಅಕ್ಕಪಕ್ಕದ ಮನೆಯವರಿಗೆ ಮಗುವಿಗೆ ಹಾವು ಕಚ್ಚಿದೆ ಎಂದು ಹೇಳಿದ್ದ ಆರೋಪಿ…

Read More