Subscribe to Updates
Get the latest creative news from FooBar about art, design and business.
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
Author: admin
ಬೀದರ್: ಔರಾದ್ ತಾಲ್ಲೂಕು ಆರೋಗ್ಯ ಅಧಿಕಾರಿ ವಿರುದ್ಧದ ದೂರಿನ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸೂಚಿಸಿದ್ದಾರೆ. ಸಚಿವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಕೆ.ಎ.ಹಿದಾಯತ್ತುಲ್ಲ ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಔರಾದ್‍ನ ಸುಭಾಷ್ ಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಹಾಗೂ ಎ. ಐ. ಸಿ. ಸಿ ರಾಷ್ಟ್ರೀಯ ಕಿಸಾನ್ ಸೆಲನ್ ಜಂಟಿ ಸಂಯೋಜಕರಾದ ಜಾನಸನ್ ಘೋಡೆ ತಿಳಿಸಿದ್ದಾರೆ. ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಗಾಯತ್ರಿದೇವಿ ಅವರು 18 ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತರ ಹುದ್ದೆಗಳ ಪ್ರಭಾರ ಹೊಂದಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೇ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ರತ್ನದೀಪ ಕಸ್ತೂರೆ ಹಾಗೂ ಜಾನಸನ್ ಘೋಡೆ ಅವರು ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್…
ಕೋಲಾರ: ಕರ್ನಾಟಕದ ಬಾಡಿ ಬಿಲ್ಡರ್ ಅಮೆರಿಕದಲ್ಲಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸುರೇಶ್ ಕುಮಾರ್ (42) ಎಂಬ ಖ್ಯಾತ ಬಾಡಿ ಬಿಲ್ಡರ್ ಮೃತ ದುರ್ದೈವಿ. ತಮ್ಮ ಕುಟುಂಬವನ್ನು ಅಮೆರಿಕಕ್ಕೆ ಕರೆದೊಯ್ದಿದ್ದ ಸುರೇಶ್, ಕೆಲಸದ ನಿಮಿತ್ತ ಫ್ಲೋರಿಡಾದಿಂದ ಟೆಕ್ಸಾಸ್ ಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕೋಲಾರದ ಗಾಂಧಿನಗರದ ಚಲಪತಿ ಮತ್ತು ಮುನಿಯಮ್ಮ ದಂಪತಿಯ ಪುತ್ರನಾಗಿದ್ದ ಸುರೇಶ್, ತಮ್ಮ ವೃತ್ತಿಜೀವನದಲ್ಲಿ ದೇಹದಾರ್ಢ್ಯ, ರೂಪದರ್ಶನ ಮತ್ತು ಫಿಸಿಯೋಥೆರಪಿಯ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದರು. ಸುರೇಶ್ ಕುಮಾರ್ ಅವರು ಫ್ಲೋರಿಡಾದಿಂದ ಟೆಕ್ಸಾಸ್‌ಗೆ ಕಾರಿನಲ್ಲಿ ತೆರಳುತ್ತಿದ್ದಾಗ ರಸ್ತೆ ಅಪಘಾತ ಸಂಭವಿಸಿದೆ. ಈ ಭೀಕರ ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಮೂರು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆದರೂ, ತೀವ್ರವಾದ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗಲಿಲ್ಲ. ಕೊನೆಗೆ ಸುರೇಶ್ ಕುಮಾರ್ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ವಿಜಯಪುರ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ ವಿದ್ಯುತ್ ಹರಿದು ಯುವಕನೊರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಗಾಂಧಿ ಚೌಕ್ ವೃತ್ತದ ಬಳಿ ನಡೆದಿದೆ. ಮೃತ ಯುವಕನನ್ನು ಶುಭಂ ಸಂಕಪಾಲ (21) ಎಂದು ಗುರುತಿಸಲಾಗಿದೆ. ಇವರು ವಿಜಯಪುರದ ಡೋಬಲೆ ಗಲ್ಲಿ ನಿವಾಸಿಯಾಗಿದ್ದರು. ಗಾಯಗೊಂಡವರಾದ ಪ್ರಭಾಕರ ಜಂಗಲೆ (22) ಮತ್ತು ಲಖನ್ ಚವ್ಹಾಣ (28) ರವರಿಗೆ ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಗಾಂಧಿ ಚೌಕ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಡಿವೈಎಸ್ ಪಿ ಬಸವರಾಜ ಯಲಿಗಾರ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಉತ್ತರ ಕನ್ನಡ: ಜಿಲ್ಲೆಯ ಜೋಯಿಡಾ ತಾಲೂಕಿನಲ್ಲಿ ಆಸ್ಪತ್ರೆಯ ಕೊರತೆಯ ಬಗ್ಗೆ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಕಾಂಗ್ರೆಸ್ ನ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವಹೇಳನಾಕಾರಿ ಪದ ಬಳಕೆ ಮಾಡಿರುವ ಘಟನೆ ವರದಿಯಾಗಿದೆ. ಗ್ಯಾರೆಂಟಿ ನ್ಯೂಸ್ ನ ಮಹಿಳಾ ಪ್ರಧಾನ ಸಂಪಾದಕಿ ರಾಧಾ ಹಿರೇಗೌಡರ್ ಅವರು ಆಸ್ಪತ್ರೆಗೆ ಬಗ್ಗೆ ಪ್ರಶ್ನೆ ಕೇಳಿದ ವೇಳೆ “ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ, ಚಿಂತಿಸಬೇಡ” ಎಂದು ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗಿದೆ. ಜೋಯಿಡಾ ತಾಲೂಕು ಉತ್ತರ ಕನ್ನಡದ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿ ಉತ್ತಮ ಆಸ್ಪತ್ರೆಯ ಕೊರತೆಯಿಂದ ಸಾರ್ವಜನಿಕರು ದಶಕಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ. ನಿಮ್ಮ ಕಾಲಾವಧಿಯಲ್ಲಿ ಜಿಲ್ಲೆಗೆ ಒಂದು ಉತ್ತಮ ಆಸ್ಪತ್ರೆ ನಿರ್ಮಿಸಿಕೊಡಿ ಎಂದು ಮನವಿ ಮಾಡಿದ ವೇಳೆ ಸ್ಪಂದಿಸುವ ಬದಲು, ಉದ್ಧಟತನದ ಮಾತುಗಳನ್ನಾಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಲರ್ಸ್ ಕನ್ನಡ ವಾಹಿನಿಯು ಈ ಬಾರಿಯ ಸೀಸನ್ ನ ಪ್ರೋಮೋವನ್ನು ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 28ರಂದು ಗ್ರಾಂಡ್ ಓಪನಿಂಗ್‌ನೊಂದಿಗೆ ಶೋ ಆರಂಭವಾಗಲಿದೆ. ಸೆಪ್ಟೆಂಬರ್ 29 ರಿಂದ ಪ್ರತಿದಿನ ಪ್ರಸಾರವಾಗಲಿದೆ. ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಈ ಬಾರಿಯೂ ನಿರೂಪಕರಾಗಿದ್ದಾರೆ ಕಲರ್ಸ್ ಕನ್ನಡ ವಾಹಿನಿಯು ಬಿಡುಗಡೆ ಮಾಡಿರುವ ಪ್ರೋಮೋದಲ್ಲಿ ಸುದೀಪ್ ಆಕರ್ಷಕ ಎಂಟ್ರಿ ನೀಡಿದ್ದಾರೆ. ನಾನು ರೆಡಿ ಅಂದಿದ್ದಾರೆ. ಹೊಸ ಸೆಟ್ ರೆಡಿ, ಹೊಸ ಕಂಟೆಸ್ಟೆಂಟ್ ರೆಡಿ, 7 ಕೋಟಿ ಕನ್ನಡಿಗರೂ ರೆಡಿ… ನೀವು?” ಎಂಬ ವಾಯ್ಸ್‌ಓವರ್‌ನೊಂದಿಗೆ ಸುದೀಪ್ ಅವರು ಕೂಡ “ರೆಡಿ!” ಎಂಬ ವಾಕ್ಯವು ಪ್ರೋಮೋದಲ್ಲಿ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಯಾದಗಿರಿ: ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ. ಮೃತರನ್ನು ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಎಂದು ಗುರುತಿಸಲಾಗಿದೆ. ಕೆಂಭಾವಿ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ತಮ್ಮ ಇರ್ಫಾನ್ ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್ ಗೂ ತೀವ್ರ ಎದೆನೋವು ಕಾಣಿಸಿಕೊಂಡಿತ್ತು. ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮೈಸೂರು: ಬಿಜೆಪಿಯ “ಧರ್ಮಸ್ಥಳ ಚಲೋ” ರ್ಯಾಲಿ “ರಾಜಕೀಯ ಲಾಭಕ್ಕಾಗಿ” ಎಂದು ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇದರಿಂದ ವಿರೋಧ ಪಕ್ಷಕ್ಕೆ ಯಾವುದೇ ರಾಜಕೀಯ ಲಾಭವಾಗುವುದಿಲ್ಲ ಎಂದು ಸೋಮವಾರ ಹೇಳಿದ್ದು ಹೇಳಿದ್ದಾರೆ. ಧರ್ಮಸ್ಥಳ ಮತ್ತು ಚಾಮುಂಡಿ ಬೆಟ್ಟದ ವಿಷಯದಲ್ಲಿ ಬಿಜೆಪಿಯ ನಡವಳಿಕೆ “ಬೂಟಾಟಿಕೆ” ಎಂದು ಕರೆದ ಮುಖ್ಯಮಂತ್ರಿ, ಅವರು ಮಾಡುತ್ತಿರುವ “ಬೂಟಾಟಿಕೆ”ಯಿಂದ ಹಿಂದೂಗಳು ತಮ್ಮೊಂದಿಗೆ ಬರುತ್ತಾರೆ ಎಂದು ಭಾವಿಸಿದ್ದಾರೆ. ಆದರೆ ಅದು ತಪ್ಪು ಎಂದು ತಿರುಗೇಟು ನೀಡಿದರು. ಧರ್ಮಸ್ಥಳದ ವಿರುದ್ಧ ಪಿತೂರಿ ಮತ್ತು ಅಪಪ್ರಚಾರ ಖಂಡಿಸಿ ಬಿಜೆಪಿ ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದು ವಾಗ್ದಾಳಿ ನಡೆಸಿದರು. ಇನ್ನು ಚಾಮುಂಡಿ…
ರಾಮನಗರ: ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗಲು ಅರ್ಜಿ ಹಾಕಿದ್ದಾರೆ ಎಂದು ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಹೇಳಿಕೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎನ್.ರಾಜಣ್ಣರನ್ನ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳಲು ಒತ್ತಡ ಹೇರುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ನನಗಿರುವ ಮಾಹಿತಿ ಪ್ರಕಾರ ಕೆ.ಎನ್.ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ. ಹೈಕಮಾಂಡ್ ವಿರುದ್ಧ ಮಾತನಾಡಿದ್ದಕ್ಕೆ ಅವರು ವಜಾ ಆಗಿದ್ದಾರೆ. ಹೀಗಾಗಿ ಬೇರೆ ಪಕ್ಷಕ್ಕೆ ಹೋಗುವ ಮುನ್ನ ನಮ್ಮ ಮೇಲೆ ಗೂಬೆ ಕೂರಿಸುವ ಕೆಲಸ ಮಾಡ್ತಿದ್ದಾರೆ ಎಂದರು. ದೆಹಲಿಯಲ್ಲಿ ಸಮಾವೇಶ ಮಾಡ್ತಾರಂತೆ ಮಾಡಲಿ. ಕೆ.ಎನ್.ರಾಜಣ್ಣ ಬಿಜೆಪಿಗೆ ಹೋಗ್ತಿದ್ದಾರೋ? ಇಲ್ವೋ? ಅಂತ ಅವರನ್ನೇ ಕೇಳಿ. ಅವರ ಬ್ರೈನ್ ಮ್ಯಾಪಿಂಗ್ ಮಾಡಿಸಿದ್ರೆ ಎಲ್ಲಾ ಗೊತ್ತಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣು ರಸ್ತೆಗೆ ಮಣ್ಣು ಸುರಿದ್ದಿದ್ದರಿಂದ ಅಪಘಾತ ಸಂಭವಿಸಿ 3 ಜನರಿಗೆ ಗಾಯ ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಅಕ್ರಮವಾಗಿ ರಾತ್ರಿ ವೇಳೆಯಲ್ಲಿ ರಾಜ್ಯ ಹೆದ್ದಾರಿಗೆ ಸುರಿದ ಮಣ್ಣಿನಿಂದ ಅಪಘಾತ ಸಂಭವಿಸಿ 3 ಜನ ಗಾಯಾಳು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಕಸಬಾ ಹೋಬಳಿಯ ಹಂಚಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಜಿ.ನಾಗೇನಹಳ್ಳಿ ಸಮೀಪ ಇರುವ ವಿಶಾಲ್ ನ್ಯಾಚರಲ್ ಫುಡ್ ಪ್ರಾಡೆಕ್ಟ್ ಇಂಡಿಯಾ ಪ್ರವೇಟ್ ಲಿಮಿಟೆಡ್ ನ ವ್ಯವಸ್ಥಾಪಕ ಕ್ರಮವಾಗಿ ರಾತ್ರೋರಾತ್ರಿ ಮಣ್ಣು ಸಾಗಾಣಿಕೆ ಮಾಡುವ ಸಂದರ್ಭದಲ್ಲಿ ಟಿಪ್ಪರ್ ಲಾರಿ ಒಳಗೆ ಹೋಗದೇ ಕೊರಟಗೆರೆ ಬೆಂಗಳೂರು ರಸ್ತೆಯ ರಾಜ್ಯ ಹೆದ್ದಾರಿಯ ಮಧ್ಯ ಭಾಗದಲ್ಲಿ ಸುರಿದು ಹೋಗಿದ್ದಾರೆ. ಮಧುಗಿರಿ ತಾಲೂಕಿನ ಕತ್ತಿರಾಜನಹಳ್ಳಿ ಗ್ರಾಮದ ಸಿದ್ದೇಶ್, ಕಮಲ, ಹೇಮಂತ್ ಎನ್ನವವರ ಸ್ಕೂಟಿ ವಾಹನದಲ್ಲಿ ಬೆಂಗಳೂರು ಮಾರ್ಗವಾಗಿ ಆಗಮಿಸುತ್ತಿದ್ದರು, ರಸ್ತೆ ಮಧ್ಯೆ ಸುರಿದ ಮಣ್ಣು ಕಣ್ಣಿಗೆ ಕಾಣದೆ ಮಣ್ಣಿನ ಮೇಲೆ ಹಾರಿ…
ಕೊರಟಗೆರೆ: ಪಟ್ಟಣದ ಕೆಪಿಟಿಸಿಲ್ ಕಾಲೋನಿಯಲ್ಲಿ ಬೆಸ್ಕಾಂ ಇಲಾಖೆ ವತಿಯಿಂದ ಆಯೋಜಿಸಲಾದ 48ನೇ ವರ್ಷದ ವಿದ್ಯುತ್ ಗಣಪತಿ ವಿಸರ್ಜನಾ ಕಾರ್ಯಕ್ರಮವು ಇಲಾಖೆಯ ಎಇಇ ಪ್ರಸನ್ನಕುಮಾರ್ ಅನುಪಸ್ಥಿತಿ ಮತ್ತು ಬೆಸ್ಕಾಂ ನೌಕರರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಸೋಮವಾರ ಯಶಸ್ವಿಗೊಂಡಿತ್ತು. ಬೆಸ್ಕಾಂ ನೌಕರರ ಸಂಘ ಅಧ್ಯಕ್ಷ ಎಚ್.ಕೃಷ್ಣಮೂರ್ತಿ ಮಾತನಾಡಿ, 48 ವರ್ಷಗಳಿಂದ ಉತ್ತಮ ಮಟ್ಟದಲ್ಲಿ ವಿದ್ಯುತ್ ಗಣಪತಿಯ ವಿಸರ್ಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ತಾಲ್ಲೂಕಿನ ಬೆಸ್ಕಾಂ ಎಲ್ಲಾ ಶಾಖೆಯ ಸಿಬ್ಬಂದಿಗಳಿಂದ ವಿಜೃಂಭಣೆಯ ಆಚರಣೆ ಮಾಡಲಾಗಿದೆ ಎಂದು ಹೇಳಿದರು. ಕಾರ್ಯದರ್ಶಿ ನಟರಾಜು ಕೆ.ವಿ ಮಾತನಾಡಿ, 1976ರಲ್ಲಿ ಎಇಇ ಪುಟ್ಟಶಾಮಯ್ಯನವರು ಮೊದಲಿಗೆ ಸ್ಥಾಪಿಸಿದ್ದು, 2 ವರ್ಷದ ನಂತರ ವಿದ್ಯುತ್ ಗಣಪತಿ ದೇವಾಲಯ ನಿರ್ಮಾಣಗೊಂಡಿತ್ತು. 48 ವರ್ಷಗಳ ಕಾಲ ನಿರಂತರ ಪೂಜೆ ನಡೆದುಕೊಂಡು ಬಂದಿದೆ. ನಗರದ ವಿದ್ಯುತ್ ಗ್ರಾಹಕರಿಗೆ ಮತ್ತು ನೌಕರರಿಗೆ ವಿದ್ಯುತ್ ಸುರಕ್ಷತೆ ನೀಡಿ ಗಣಪತಿಯು ಕಾಪಾಡಿಕೊಂಡು ಹೋಗುತ್ತಿದೆ. ವಿಶಿಷ್ಠ ರೀತಿಯಲ್ಲಿ ಗೌರಿ–ಗಣೇಶ ಹಬ್ಬವನ್ನು ಪ್ರತಿವರ್ಷ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ಹೇಳಿದರು. ಕಿರಿಯ ಇಂಜಿನಿಯರ್ ಹೆಚ್.ಸಿ ಮಲ್ಲಯ್ಯ ಮಾತನಾಡಿ,…