Author: admin

ಬೀದರ್: ಹುಮನಾಬಾದ ಪಟ್ಟಣದ ಡಾಕ್ಟರ್ ಕಾಲೋನಿ ಹತ್ತಿರ ಐ.ಪಿ.ಎಲ್ ಪಂದ್ಯಾವಳಿ ಹಿನ್ನೆಲೆ ಬೆಟ್ಟಿಂಗ್  ನಲ್ಲಿ  ನಿರತರಾದವರ ಮೇಲೆ  ಹುಮನಾಬಾದ ಪೊಲೀಸರು ದಾಳಿ ನಡೆಸಿ 2,500 ನಗದು ಸಹಿತ 12 ಸಾವಿರಕ್ಕೂ ಅಧಿಕ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಐ.ಪಿ.ಎಲ್ ಪಂದ್ಯಾವಳಿಯ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಖನೌ ಸೂಪರ್ ಜಾಯೆಂಟ್ಸ್ ನಡುವೆ ನಡೆಯುತ್ತಿದ್ದ ಪಂದ್ಯಾಟ ನಡೆಯುತ್ತಿದ್ದ ವೇಳೆ ಹುಮನಾಬಾದ ಪಟ್ಟಣದ ಡಾಕ್ಟರ್ ಕಾಲೋನಿ ಹತ್ತಿರ ಹಣ ಬೆಟ್ಟಿಂಗ್ ಕಟ್ಟುತ್ತಿರುವ ಬಗ್ಗೆ ಬಂದ ನಿಖರ ಮಾಹಿತಿಯ ಮೇರೆಗೆ ಹುಮನಾಬಾದ ಪೊಲೀಸ್ ಠಾಣೆಯ ಪಿ.ಎಸ್.ಐ  ಸುರೇಶ ಚವ್ಹಾಣ ಅವರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿತು. ದಾಳಿ ವೇಳೆ ಬೆಟ್ಟಿಂಗ್ ನಿರತರಿಂದ 2,500 ರೂ. ನಗದು, 10 ಸಾವಿರ ಮೌಲ್ಯದ 1 ಮೊಬೈಲ್ ಸೇರಿದಂತೆ ಒಟ್ಟು 12,500 ರೂಪಾಯಿ ಮೌಲ್ಯದ ಸೊತ್ತು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಈ ಕಾರ್ಯಾಚರಣೆ ನಡೆಸಲಾಯಿತು.  ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ…

Read More

ತುಮಕೂರು:  ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ, ಸಂಸದ ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ವಿ.ಸೋಮಣ್ಣ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್ 8ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆ ನಡೆಯಲಿದೆ. ಸಂಸದರು ಸಭೆಯಲ್ಲಿ 2024-25ನೇ ಸಾಲಿನ ಮಾರ್ಚ್-2025ರ ಅಂತ್ಯದವರೆಗೆ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ. ಜಿಲ್ಲಾ ಮಟ್ಟದ ಎಲ್ಲಾ ಇಲಾಖಾ ಮುಖ್ಯಸ್ಥರು ತಪ್ಪದೆ ಖುದ್ದಾಗಿ ಸಭೆಗೆ ಹಾಜರಾಗಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ದಿಶಾ ಸಮಿತಿ ಸದಸ್ಯ ಕಾರ್ಯದರ್ಶಿ ಜಿ.ಪ್ರಭು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿಯಿರುವ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಒಂದು ಹುದ್ದೆಯನ್ನು ಭರ್ತಿ ಮಾಡಲು ಬೆಂಗಳೂರಿನ ಸಕಾಲ ಮಿಷನ್‌ ಗೆ ಶಿಫಾರಸ್ಸು ಮಾಡಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದ್ದಾರೆ. ಕರ್ನಾಟಕ ಸಕಾಲ ಸೇವೆಗಳ ಅಧಿನಿಯಮ 2011 ಮತ್ತು (ತಿದ್ದುಪಡಿ) ಅಧಿನಿಯಮ 2014ರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾಡಳಿತಕ್ಕೆ ಸಹಕರಿಸಲು ಈ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಅವಶ್ಯಕತೆಯಿದೆ. ಅರ್ಜಿ ನಮೂನೆಯನ್ನು http://tumkur.nic.in ನಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯ, ತುಮಕೂರು ಜಿಲ್ಲೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ “ಲಕೋಟೆ ಮೇಲೆ ಸಕಾಲ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ಹುದ್ದೆಯ ಅರ್ಜಿ” ಎಂದು ನಮೂದಿಸಿರಬೇಕು. ಅರ್ಜಿ ಸಲ್ಲಿಸುವವರು ಬಿ.ಇ./ಬಿ.ಟೆಕ್/ಬಿ.ಸಿ.ಎ. ಪದವಿಯಲ್ಲಿ ಕಂಪ್ಯೂಟರ್ ಸೈನ್ಸ್/ಇನ್ಫಾರ್‌ ಮೇಷನ್ ಸೈನ್ಸ್ ಇಂಜಿನಿಯರಿಂಗ್/ಎಲೆಕ್ಟ್ರಾನಿಕ್ ಅಂಡ್ ಕಮ್ಯೂನಿಕೇಷನ್ ಟೆಲಿಕಾಂ ವಿದ್ಯಾರ್ಹತೆ ಹೊಂದಿರಬೇಕು. ಸೇವಾನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು. ಆಯ್ಕೆಯಾದವರಿಗೆ 27,100 ರೂ.ಗಳ ವೇತನ ನೀಡಲಾಗುವುದು. ಈ ಹುದ್ದೆಯ ಆಯ್ಕೆಯನ್ನು…

Read More

ತುಮಕೂರು:  ಪ್ರವಾಸೋದ್ಯಮ ಇಲಾಖೆಯು ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಯಡಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗಾಗಿ ವಿವಿಧ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಮೈಸೂರಿನ ಫುಡ್ ಕ್ರಾಫ್ಟ್ ಇನ್ ಸ್ಟಿಟ್ಯೂಟ್(FCI) ಹಾಗೂ ಬೆಂಗಳೂರಿನ ಇನ್ ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್(IHM) ಸಂಸ್ಥೆಗಳ ಮೂಲಕ ನೀಡಲಾಗುವುದು. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ ಹಾಗೂ ಬಹು ಅಡುಗೆ ತಯಾರಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಹಾರ ಮತ್ತು ಪಾನೀಯ ಸೇವಾ ಮೇಲ್ವಿಚಾರಕ ಹುದ್ದೆಗೆ ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು ಹಾಗೂ ಬಹು ಅಡುಗೆ ತಯಾರಕ ಹುದ್ದೆಗೆ ಕನಿಷ್ಠ 8ನೇ ತರಗತಿ ಪಾಸಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು. ಅಭ್ಯರ್ಥಿಗಳು ನಿಗಧಿತ ಅರ್ಜಿ ನಮೂನೆಯನ್ನು ಮಾರ್ಚ್ 21ರೊಳಗಾಗಿ ನಗರದ ಅಶೋಕ ರಸ್ತೆ, ರೆಡ್‌ಕ್ರಾಸ್ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ ಎಫ್ 232ರಲ್ಲಿರುವ ಪ್ರವಾಸೋದ್ಯಮ ಇಲಾಖೆಗೆ…

Read More

ತುಮಕೂರು ವಿಶ್ವವಿದ್ಯಾನಿಲಯದ ನೂತನ ಕ್ಯಾಂಪಸ್ ‘ಜ್ಞಾನಸಿರಿ’ಯಲ್ಲಿ ನಿರ್ಮಿಸಲಾಗಿರುವ ಉಪ–ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ರಾಜ್ಯ ಸಣ್ಣ ನೀರಾವರಿ, ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಶುಕ್ರವಾರ ಬೆಳಗ್ಗೆ 10ಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ.  ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮೋಶನ್ ಸೊಸೈಟಿ (ಕೆಸ್ಟೆಪ್ಸ್) ಅನುದಾನದಲ್ಲಿ ಈ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗಿದೆ. ಕೇಂದ್ರ ಜಲಶಕ್ತಿ ಹಾಗೂ ರೈಲ್ವೇ ಖಾತೆ ರಾಜ್ಯ ಸಚಿವರು ಹಾಗೂ ತುಮಕೂರು ಸಂಸದರಾದ ಮಾನ್ಯ ಶ್ರೀ ವಿ. ಸೋಮಣ್ಣ, ಕರ್ನಾಟಕದ ಗೃಹಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಡಾ.ಜಿ.ಪರಮೇಶ್ವರ, ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಈ ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಲಿದ್ದಾರೆ. ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ಸುರೇಶ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಅಧ್ಯಕ್ಷರೂ ಆಗಿರುವ ಕುಲಪತಿಗಳಾದ ಪ್ರೊ.ಎಂ. ವೆಂಕಟೇಶ್ವರಲು, ಕುಲಸಚಿವರಾದ ನಾಹಿದಾ ಜಮ್ ಜಮ್ ಉಪಸ್ಥಿತರಿರುವರು. ವಿಜ್ಞಾನವನ್ನು…

Read More

ಕೊರಟಗೆರೆ: 18ನೇ ಶತಮಾನದ ಆದಿ ಭಾಗದಲ್ಲಿ ಕೊರಟಗೆರೆ ಪ್ರಾಂತ್ಯಕ್ಕೆ ದೊರೆಯಾಗಿದ್ದ ಕುರಂಗರಾಜ ದಕ್ಷಿಣ ಭಾರತದ ಮೊದಲ ದಲಿತ ಜನಾಂಗದ ನಾಯಕ ಎಂದು ಕವಿಗಳಾದ ಡಾ.ಶಿವಣ್ಣ ತಿಮ್ಲಾಪುರ ಅಭಿಪ್ರಾಯಪಟ್ಟರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕನ್ನಡ ವಿಭಾಗ ಹಾಗೂ ಸಾಂಸ್ಕೃತಿಕ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾದ ‘ಚಕೋರ’ ಉಪನ್ಯಾಸಮಾಲಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸ್ಥಳೀಯ ದೊರೆ ಕುರಂಗರಾಜನು ತನ್ನ ಆಳ್ವಿಕೆಯಲ್ಲಿ ದೇವಾಲಯಗಳನ್ನು ಕಟ್ಟಿದ್ದು, ಚರ್ಮದ ನಾಣ್ಯಗಳನ್ನು ಬಳಕೆಗೆ ತಂದಿದ್ದು ಮುಂತಾದ ಸಾಮಾಜಿಕ ಕಾರ್ಯಗಳನ್ನು ನಿರ್ವಹಿಸುವ ಮೂಲಕ ಜನಸಾಮಾನ್ಯರ ದೊರೆಯಾಗಿದ್ದ ಎಂಬುದಾಗಿ ಆತನ ಪರಿಚಯವನ್ನು ವಿದ್ಯಾರ್ಥಿಗಳಿಗೆ ಮಾಡಿಕೊಟ್ಟರು. ಕಾಲೇಜಿನ ಪ್ರಾಂಶುಪಾಲರಾದ ಈರಪ್ಪ ನಾಯಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ಥಳೀಯ ಇತಿಹಾಸದ ಪರಿಚಯ ವಿದ್ಯಾರ್ಥಿಗಳಿಗೆ ಅತ್ಯಗತ್ಯವಾಗಿ ಆಗಬೇಕಿದೆ ಎಂದರು. ಕುರಂಗರಾಜನನ್ನು ಕುರಿತು ಕುರಂಗರಾಜ ವೈಭವ ಎಂಬ ಕಾದಂಬರಿಯನ್ನು ರಚಿಸಿ ಮತ್ತು ಅದನ್ನು ನಾಟಕ ರೂಪಕ್ಕೆ ಅಳವಡಿಸಿ ಜನಪ್ರಿಯಗೊಳಿಸಿದ ಡಾ.ಓ.ನಾಗರಾಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಕುರಂಗರಾಜ ಇಡೀ ಕೊರಟಗೆರೆಯ ತಳ ಸಮುದಾಯಕ್ಕೆ…

Read More

ಬೆಂಗಳೂರು: ಹನಿಟ್ರ‍್ಯಾಪ್ ವಿಚಾರ ಸದನದಲ್ಲಿ ಪ್ರಸ್ತಾಪ ಮಾಡಿರುವುದು ಸಾರ್ವಜನಿಕರ ಮುಂದೆ ತಲೆ ತಗ್ಗಿಸುವ ವಿಚಾರ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಹನಿಟ್ರ‍್ಯಾಪ್ ಯತ್ನ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗೃಹ ಸಚಿವರಿಗೆ ರಾಜಣ್ಣ ಮನವಿ ಕೊಟ್ಟಿದ್ದಾರೆ. ಉನ್ನತ ಮಟ್ಟದ ತನಿಖೆ ಆಗಬೇಕು ಅಂದಿದ್ದಾರೆ. ಇದಕ್ಕೆ ಸರ್ಕಾರ ಕೂಡ ಸಿದ್ಧ ಇದೆ ಎಂದರು. ಅನೇಕರದ್ದು ಸಿಡಿ ಇದೆ ಎಂದು ಹೇಳಿದ್ದಾರೆ. ಅಂದರೆ ಸಿಎಂ, ಡಿಸಿಎಂ, ಸ್ಪೀಕರ್ ಅವರ ಸಿಡಿ ಇದೆ ಅಂತಾನಾ? ಇದು ನಿಜಕ್ಕೂ ತಲೆ ತಗ್ಗಿಸುವ ವಿಚಾರ. ನಾವು ಕುಟುಂಬಗಳಿಗೆ, ಸ್ನೇಹಿತರಿಗೆ ಹೇಗೆ ಮುಖ ತೋರಿಸುವುದು. ನಮಗೂ ನೈತಿಕತೆ ಇರಬೇಕಲ್ವಾ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪತಿ ಆಕೆಯ ಕುತ್ತಿಗೆ ಹಿಸುಕಿ ಕೊಲೆ ಮಾಡಿರುವ ಘಟನೆ ಸಂಪಿಗೆಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೆಗಡೆನಗರದ 1ನೇ ಮುಖ್ಯರಸ್ತೆ ನಿವಾಸಿ ವಲ್ಲರಮತಿ(35) ಕೊಲೆಯಾದ ಮಹಿಳೆಯಾಗಿದ್ದು, ಇವರು 13 ವರ್ಷಗಳ ಹಿಂದೆ ಮೂಲತಃ ತಮಿಳುನಾಡಿನವರಾದ ವಲ್ಲರ ಮತಿ ಹಾಗೂ ಚಂದ್ರಶೇಖರ್ ಮದುವೆಯಾಗಿದ್ದರು. ಇವರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ವಲ್ಲರಮತಿ ಖಾಸಗಿ ಕಂಪನಿಯೊಂದರಲ್ಲಿ ಅಕೌಂಟೆಂಟ್ ವೃತ್ತಿ ಮಾಡುತ್ತಿದ್ದರು. ಪತಿ ಚಂದ್ರಶೇಖರ್ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಪತ್ನಿಯ ನಡತೆಯ ಬಗ್ಗೆ ಚಂದ್ರಶೇಖರ್ ಅನುಮಾನಗೊಂಡು ಆಗಾಗ್ಗೆ ಜಗಳವಾಡುತ್ತಿದ್ದನು. ನಿನ್ನೆಯೂ ಬೆಳಗ್ಗೆ 9:30ರ ಸುಮಾರಿಗೆ ಪತ್ನಿಯ ಜೊತೆಗೆ ಜಗಳ ನಡೆದಿದ್ದು, ಈ ವೇಳೆ ಪತಿಯು ಪತ್ನಿಯ ಕುತ್ತಿಗೆ ಹಿಸುಕಿ ಹತ್ಯೆ ಮಾಡಿದ್ದು, ಬಳಿಕ ಪೊಲೀಸರಿಗೆ ವಿಚಾರ ತಿಳಿಸಿದ್ದಾನೆ.ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ನವದೆಹಲಿ: ಭಾರತದ ಸಾಂಪ್ರದಾಯಿಕ ಗೋಲಿ ಸೋಡಾಕ್ಕೆ ವಿದೇಶಿ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆ ವ್ಯಕ್ತವಾಗಿದೆ. ಗೋಲಿ ಸೋಡಾವನ್ನು ಗೋಲಿ ಪಾಪ್‌ ಸೋಡಾ ಎಂದು ಮರುನಾಮಕರಣ ಮಾಡಲಾಗಿದ್ದು, ವಿವಿಧ ದೇಶಗಳ ಮಾರುಕಟ್ಟೆಯಲ್ಲಿ ಉತ್ತಮ ರೆಸ್ಪಾನ್ಸ್ ದೊರಕಿದೆ. ಯುಎಸ್‌‍, ಯುಕೆ, ಯುರೋಪ್‌ ಮತ್ತು ಗಲ್ಫ್ ಸೇರಿದಂತೆ ಜಾಗತಿಕ ಮಾರುಕಟ್ಟೆಯಲ್ಲಿ ಗೋಲಿ ಸೋಡಾಕ್ಕೆ ಉತ್ತಮ ರೆಸ್ಪಾನ್ಸ್ ದೊರಕಿದೆ ಎಂದು ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ. ಕಾರ್ಯತಂತ್ರದ ವಿಸ್ತರಣೆ ಮತ್ತು ನವೀನ ಮರುಶೋಧನೆಯಿಂದ ಬೇಡಿಕೆ ಹೆಚ್ಚಾಗಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಭಾರತದ ಸ್ವಂತ ಗೋಲಿ ಪಾಪ್‌ ಸೋಡಾ ವಿಶ್ವಾದ್ಯಂತ ವಾವ್‌ ಟೇಸ್ಟ್‌ ಬಡ್‌ ಗಳಿಗೆ ಮರಳುತ್ತದೆ! ಸಾಂಪ್ರದಾಯಿಕ ಭಾರತೀಯ ಗೋಲಿ ಸೋಡಾದ ಪುನರುಜ್ಜೀವನವನ್ನು ಉತ್ತೇಜಿಸಿದ್ದಕ್ಕಾಗಿ ಅಭಿನಂದನೆಗಳು ಎಂದು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ತಾಯಿ ಚಾಮುಂಡೇಶ್ವರಿ ವಿಚಾರ ಸಂಬಂಧ ಹೇಳಿದ್ದ ಡೈಲಾಗ್ ಗೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ವಿರುದ್ಧ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಶೋನಲ್ಲಿ ಸ್ಟೇಜ್ ಮೇಲೆ ರಕ್ಷಕ್ ಬುಲೆಟ್ ಅವರು ಸಹನಟಿಗೆ “ನಿಮ್ಮನ್ನು ನೋಡ್ತಿದ್ರೆ ತಾಯಿ ಚಾಮುಂಡೇಶ್ವರಿ ಬೆಟ್ಟದಿಂದ ಇಳಿದು ಬಂದು ಸೀರೆ ಒಡವೆ ಬಿಚ್ಚಿಟ್ಟು, ಪ್ಯಾಂಟು ಶರ್ಟು ಹಾಕೊಂಡು ಸ್ವಿಜರ್ಲ್ಯಾಂಡ್ನಲ್ಲಿ ಟ್ರಿಪ್ ಹೊಡಿತಿದ್ದಾರೆ ಅನ್ನಿಸ್ತಿದೆ” ಎಂದು ಡೈಲಾಗ್ ಹೇಳಿದ್ದು, ಇದು ಹಿಂದೂ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೇಳಿಕೆ ವಿರುದ್ಧ ಕೆರಳಿರೋ ಹಿಂದೂ ಮುಖಂಡರು ಬೆಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಕೂಡಲೇ ರಕ್ಷಕ್ ಬಹಿರಂಗ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ತೆರಳಿ ತಪ್ಪು ಕಾಣಿಕೆ ಸಲ್ಲಿಸಬೇಕು ಎಂದು ಒತ್ತಾಯಿಸಿದ್ದು, ಕಾರ್ಯಕ್ರಮ ಆಯೋಜಕರು, ತೀರ್ಪುಗಾರರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4…

Read More