Subscribe to Updates
Get the latest creative news from FooBar about art, design and business.
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
- ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
- ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
- ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
Author: admin
ವರದಿ : ಮಂಜುಸ್ವಾಮಿ ಎಂ ಎನ್ ಕೊರಟಗೆರೆ : ಪೂರ್ವಜರು ಕಾಪಾಡಿಕೊಂಡು ಬಂದಂತಹ ಸಂಪ್ರದಾಯ, ಆಚಾರ ವಿಚಾರಗಳನ್ನು ಇಂದಿನ ಯುವ ಪೀಳಿಗೆ ಮುಂದುವರೆಸಬೇಕಿದೆ. ಇಲ್ಲವಾದರೆ ಮನುಕುಲ ಅಂತ್ಯ ಕಟ್ಟಿಟ್ಟಬುತ್ತಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ತಾಲ್ಲೂಕಿನ ಕೋಳಾಲ ಹೋಬಳಿ ಎಲೆರಾಂಪುರ ಗ್ರಾ.ಪಂ. ವ್ಯಾಪ್ತಿಯ ಕರಿದುಗ್ಗನಹಳ್ಳಿ ಮತ್ತು ಹನುಮಂತಯ್ಯನ ಪಾಳ್ಯದ ಗ್ರಾಮ ದೇವತೆ ಶ್ರೀ ದೊಡ್ಡಮ್ಮದೇವಿ ಸ್ಥಿರಬಿಂಬ ಪ್ರತಿಷ್ಠಾಪನಾ ಕುಂಭಾಭಿಷೇಕ ಮಹೋತ್ಸವ ಹಾಗೂ ಶ್ರೀ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಕ ಪೂಜೆ ಸಲ್ಲಿಸಿ ಕಾರ್ಯಕ್ರಮ ಉದ್ಧೇಶಿಸಿ ಮಾತನಾಡಿದರು. ಮನುಷ್ಯನಲ್ಲಿ ಹಣ ಮತ್ತು ಎಲ್ಲಾ ರೀತಿಯ ಸೌಲಭ್ಯ ಇದ್ದ ಮಾತ್ರಕ್ಕೆ ದೇವಾಲಯ ನಿರ್ಮಿಸಲು ಸಾಧ್ಯವಿಲ್ಲ, ಅದಕ್ಕೆ ದೇವಿಯ ಅನುಗ್ರಹ ಕೂಡ ಬೇಕಿದೆ. ನನ್ನ ತಾಯಿ ಕಲಿಸಿದ ಸಂಸ್ಕೃತಿ, ಸಂಪ್ರದಾಯದಿಂದ ಇಂದು ಉನ್ನತ ಸ್ಥಾನದಲ್ಲಿದ್ದೇನೆ. ಉದ್ಯಮಿ ನಿಲೇಶ್ ಮತ್ತು ಶಶಿಧರ್ ದುಬೈನಲ್ಲಿದ್ದರೂ ಉದ್ಯಮದ ಜೊತೆಗೆ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ ನೀಡುತ್ತಾ ಸಂಸ್ಕೃತಿ, ಆಚರಣೆಯನ್ನು ಮರೆಯದಿರುವುದು ಖುಷಿಯ ವಿಚಾರ ಎಂದು…
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸೆಷನ್ಸ್ ನ್ಯಾಯಾಲಯ ವಜಾಗೊಳಿಸಿದೆ. ತನ್ನಿಂದ ರೇಣುಕಾ ಸ್ವಾಮಿ ನಿಧನ ಹೊಂದಿಲ್ಲ, ತಾನು ಮಹಿಳೆ ಹಾಗೂ ಸಿಂಗಲ್ ಮದರ್ ಆಗಿದ್ದು, ಮಗಳ ಆರೈಕೆ ಮಾಡಬೇಕು, ಇನ್ನಿತರೆ ಕಾರಣಗಳನ್ನು ಪವಿತ್ರಾ ಗೌಡ ನೀಡಿದ್ದರು. ಆದರೆ ಯಾವುದೇ ಕಾರಣವನ್ನು ನ್ಯಾಯಾಲಯ ಪರಿಗಣಿಸಿಲ್ಲ. ಪವಿತ್ರಾ ಅವರ ಜಾಮೀನು ಅರ್ಜಿಯನ್ನು ಕೆಳಹಂತದ ನ್ಯಾಯಾಲಯ ರದ್ದು ಮಾಡಿದೆ. ಪವಿತ್ರಾ ಗೌಡ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆದಿತ್ತು, ನ್ಯಾಯಾಧೀಶ ಐಪಿ ನಾಯಕ್ ಅವರು ವಿಚಾರಣೆ ನಡೆಸಿ ಅರ್ಜಿಯನ್ನು ವಜಾ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ ಅಂತ ಧರ್ಮಸ್ಥಳ ಪ್ರಕರಣ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್, ಪ್ರಸ್ತುತ ಎಸ್ ಐಟಿ ಮಾಡಿರುವ ತನಿಖೆ ಬಗ್ಗೆ ಅವರಿಗೆ (ಬಿಜೆಪಿ) ಸಮಾಧಾನ ಇಲ್ಲವೇ? ಬಿಜೆಪಿಯಲ್ಲಿ ಆಂತರಿಕವಾಗಿ ಎರಡು ಬಣಗಳು ಕಚ್ಚಾಡುತ್ತಿವೆ. ಇದೆಲ್ಲವೂ ಅವರದ್ದೇ ಷಡ್ಯಂತ್ರ. ಎಸ್ ಐಟಿ ರಚನೆಯನ್ನು ಸ್ವಾಗತ ಮಾಡಿದವರೂ ಅವರೇ, ಈಗ ನಾಟಕ ಮಾಡುತ್ತಿರುವವರು ಅವರೇ ಎಂದು ಅವರು ಹೇಳಿದರು. ಎನ್ ಐಎ ತನಿಖೆಗೆ ಬಿಜೆಪಿಯವರು ಒತ್ತಾಯಿಸಿರುವ ಬಗ್ಗೆ ಕೇಳಿದಾಗ ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕು ಎಂದು ಬಿಜೆಪಿಯವರು ಎಂದೂ ಬಾಯಿ ಬಿಚ್ಚಲಿಲ್ಲ. ಬಿಜೆಪಿಯ ಮೂಲ ಕಾರ್ಯಕರ್ತರೇ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಬೇಕು ಎಂದು ಮಾಡಿರುವ ಕೆಲಸವಿದು ಎಂದು ನೇರವಾಗಿ ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಧರ್ಮಸ್ಥಳ: ಮೋದಿ ಸರ್ಕಾರ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೆ ಇದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಸೋಮವಾರ ಹೇಳಿದರು. ಧರ್ಮಸ್ಥಳ ಚಲೋʼ ಹಾಗೂ ಸಮಾಜ ಜಾಗೃತಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಕೇವಲ ಒಂದೇ ಒಂದು ವರ್ಗದವರು ಬರುವುದಿಲ್ಲ. ಎಲ್ಲಾ ವರ್ಗದವರೂ ಬರುತ್ತಾರೆ. ಅದರಲ್ಲೂ ಅತ್ಯಂತ ಹಿಂದುಳಿದ ವರ್ಗದವರು ಬಂದು ಅಣ್ಣಪ್ಪ ಸ್ವಾಮಿಗೆ ನಮಸ್ಕಾರ ಹಾಕಿ, ಮಂಜುನಾಥೇಶ್ವರನಿಗೆ ಮುಡಿ ಕೊಟ್ಟು ಹೋಗುವ ಸಂಪ್ರದಾಯ ತಲತಲಾಂತರದಿಂದ ಬೆಳೆದು ಬಂದಿದೆ. ಆದರೆ, ಇಂದು ಬುರುಡೆ ಪ್ರಕರಣದ ನೆಪದಲ್ಲಿ ಹಿಂದೂ ಸಮಾಜವನ್ನೇ ಒಡೆಯುವ ಷಡ್ಯಂತರ ಧರ್ಮಸ್ಥಳ ಪ್ರಕರಣದಲ್ಲಿ ಅಡಗಿದೆ ಎಂದು ಹಿಂದೂಗಳನ್ನು ಎಚ್ಚರಿಸಿದರು. ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿ ಮತ್ತು ಅಣ್ಣಪ್ಪ ಸ್ವಾಮಿಯ ಪ್ರಭಾವ ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಹಿಂದೂಗಳಲ್ಲಿ ಕ್ಷೇತ್ರದ ಮೇಲೆ ಇರುವ ಧಾರ್ಮಿಕ ನಂಬಿಕೆ ಮತ್ತು ಶ್ರದ್ಧೆ ಕಡಿಮೆ ಮಾಡುವ ಸಂಚು ಇದಾಗಿದೆ. ಅಲ್ಲದೇ, ಹಿಂದೂ ಸಮಾಜವನ್ನು ಒಡೆಯುವ ಷಡ್ಯಂತ್ರ ನಡೆಸಿದ್ದಾರೆ ಎಂದು…
ಪಾವಗಡ: ಪವಿತ್ರ ಕ್ಷೇತ್ರವಾದ ಧರ್ಮಸ್ಥಳವನ್ನು ಅಪವಿತ್ರಗೊಳಿಸಲು ಮುಂದಾಗುತ್ತಿದ್ದಾರೆ ಇದನ್ನು ಹಿಂದೂ ಸಮಾಜ ತೀವ್ರವಾಗಿ ಖಂಡಿಸಬೇಕೆಂದು ಮಾಜಿ ಸಚಿವ ವೆಂಕಟರಮಣಪ್ಪ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಶ್ರೀಧರ್ಮಸ್ಥಳ ಭಕ್ತಾಭಿಮಾನಿಗಳ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಗೆ ಚಾಲನೆ ನೀಡಿದ ನಂತರ ಅವರು ಮಾತನಾಡಿ, ಧರ್ಮಸ್ಥಳದ ವೀರೇಂದ್ರ ಹೆಗಡೆಯವರು, ಧರ್ಮಸ್ಥಳ ಸಂಘವನ್ನು ಸ್ಥಾಪಿಸಿ ಗ್ರಾಮೀಣ ಭಾಗದ ಅದೆಷ್ಟು ಲಕ್ಷಾಂತರ ಜನ ಬಡ ಹೆಣ್ಣು ಮಕ್ಕಳಿಗೆ ದಾರಿ ದೀಪವಾಗಿದ್ದಾರೆ. ಅಂತಹ ವ್ಯಕ್ತಿಗಳ ವಿರುದ್ಧ ಈ ರೀತಿ ಇಲ್ಲಸಲ್ಲದ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವುದು ಸರಿಯಲ್ಲ ಎಂದರು. ಪ್ರತಿಭಟನೆಯು ಗುರುಭವನ ಮೈದಾನದಿಂದ ಪ್ರಾರಂಭಗೊಂಡು ಬಳ್ಳಾರಿ ರಸ್ತೆಯ ಮೂಲಕ ಶನಿಮಹಾತ್ಮ ವೃತ್ತದಲ್ಲಿ ಬೃಹತ್ ಮಾನವ ಸರಪಳಿಯನ್ನು ನಿರ್ಮಿಸಿ ಗಿರೀಶ್ ಮಟ್ಟಣ್ಣನವರ್, ಮಹೇಶ್ ತಿಮರೋಡಿ, ಜಯಂತ್ ಟಿ., ಸಮೀರ್ ವಿರುದ್ಧ ಧಿಕ್ಕಾರಕ್ಕೆ ಕೂಗಿದ್ರು. ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆರ್.ಸಿ.ಅಂಜನಪ್ಪ, ಬಿಜೆಪಿ ಹಿರಿಯ ಮುಖಂಡ ಡಾ.ಜಿ.ವೆಂಕಟರಾಮಯ್ಯ, ಮಂಡಲಾಧ್ಯಕ್ಷ ದೊಡ್ಡಹಳ್ಳಿ ಅಶೋಕ್, ಎಸ್ ಎಸ್ ಕೆ ಸಂಘದ ನಿರ್ದೇಶಕ ಎನ್.ಆರ್.ಅಶ್ವತ್ ಕುಮಾರ್,…
ತಿಪಟೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಿಪಟೂರು ತಾಲೂಕಿನ ರಂಗಾಪುರ ವಲಯದ ಹುಲ್ಲೇಕೆರೆ ಗ್ರಾಮದ ಮಾಶಾಸನ ಸದಸ್ಯರಾದ ಸಣ್ಣಮ್ಮರವರಿಗೆ ವಾತ್ಸಲ್ಯ ಕಾರ್ಯಕ್ರಮದಲ್ಲಿ ವಾತ್ಸಲ್ಯ ಮನೆ ರಚನೆ ಮಾಡಿದ್ದು, ಈ ದಿನ ತುಮಕೂರು ಜಿಲ್ಲೆಯ ನಿರ್ದೇಶಕರಾದ ಸತೀಶ್ ಸುವರ್ಣ ಅವರು ಮನೆ ಹಸ್ತಾಂತರ ಮಾಡಿದರು. ಬಳಿಕ ಮಾತನಾಡಿ ಅವರು, ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ 800 ವರ್ಷದ ಇತಿಹಾಸವಿದೆ, ಶ್ರೀ ಕ್ಷೇತ್ರದಲ್ಲಿ ಚತುರ್ಧಾನದಲ್ಲಿ ಅನ್ನದಾನ, ವಿದ್ಯಾದಾನ, ಔಷಧ ದಾನ, ಅಭಯದಾನ ನಡೆಯುತ್ತಿದೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಾತೃಶ್ರೀ ಹೇಮಾವತಿ ಅಮ್ಮನವರ ಕಲ್ಪನೆಯಲ್ಲಿ ಮೂಡಿ ಬಂದಿರುವ ವಾತ್ಸಲ್ಯ ಕಾರ್ಯಕ್ರಮದಲ್ಲಿ ತಿಪಟೂರು ತಾಲೂಕಿನಲ್ಲಿ ಒಟ್ಟು 9 ವಾತ್ಸಲ್ಯ ಮನೆ ರಚನೆ ಆಗಿದೆ ಎಂದರು. ಇದರ ಜೊತೆಗೆ ಮಾಶಾಸನ ಫಲಾನುಭವಿರವರಿಗೆ ವಾತ್ಸಲ್ಯ ಕಿಟ್ ಅಂದರೆ ಬಟ್ಟೆ ಚಾಪೆ, ದಿಂಬು, ಹೊದಿಕೆ, ಪಾತ್ರೆ ನೀಡಲಾಗುತ್ತಿದೆ. ಹಾಗೆ ವಾತ್ಸಲ್ಯ ಮಿಕ್ಸ್ ವಿತರಣೆ ಮಾಡಲಾಗುತ್ತದೆ, ಹಾಗೆ ಪ್ರತಿ ತಿಂಗಳು 1000 ದಿಂದ 3000/-ದಂತೆ ಮಾಶಾಸನ ನೀಡಲಾಗುತ್ತಿದೆ ಎಂದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರು ಹರೀಶ್…
ಬೀದರ್ : ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆ ಹಾಗೂ ನೂತನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸುಮಾರು 94 ಲಕ್ಷ ರೂ.ಗಿಂತ ಅಧಿಕ ಮೌಲ್ಯದ ತಂಬಾಕು ವಸ್ತುಗಳು ಸೇರಿದಂತೆ ಕೃತ್ಯಕ್ಕೆ ಬಳಸಿದ ಒಂದು ಈಚರ್ ಲಾರಿ ಜಪ್ತಿ ಮಾಡಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನಗರದ ಚಿದ್ರಿಯಲ್ಲಿರುವ ಬುತ್ತಿ ಬಸವಣ್ಣ ಹತ್ತಿರದ ಬಾಡಿಗೆ ಮನೆಯೊಂದರಲ್ಲಿ ಅಕ್ರಮವಾಗಿ ತಂಬಾಕು ವಸ್ತುಗಳ ಕಲಬೆರಕೆ ಗುಟಕಾ ಸಾಮಗ್ರಿ, ಪಾನ್ ಮಸಾಲಾ ಸಂಗ್ರಹಿಸಿಟ್ಟು, ಲಾರಿಯೊಂದರಲ್ಲಿ ಲೋಡ್ ಮಾಡುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, 1,51,59,775 ರೂ. ಮೌಲ್ಯದ ಗುಟಕಾ ತಯಾರಿಸುವ ವಿವಿಧ ಸಾಮಗ್ರಿಗಳು ಹಾಗೂ 25 ಲಕ್ಷ ರೂ. ಮೌಲ್ಯದ ಈಚರ್ ಲಾರಿ ಜಪ್ತಿ ಮಾಡಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ 8 ಜನರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ…
ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ್ದು, ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಯುವತಿಯ ಜೊತೆ ಚಿಕ್ಕಣ್ಣ ಹಸಮಣೆ ಏರಲಿದ್ದಾರೆ. ಮಹದೇವಪುರ ಗ್ರಾಮದ ಪಾವನಾ ಎಂಬ ಯುವತಿಯ ಜೊತೆ ಚಿಕ್ಕಣ್ಣ ಮದುವೆ ನಿಶ್ಚಯವಾಗಿದೆ. ಈಗಾಗಲೇ ಹೂ ಮುಡಿಸುವ ಶಾಸ್ತ್ರವನ್ನು ಎರಡು ಕುಟುಂಬಗಳು ನೇರವೇರಿಸಿರಿವೆ. ನಿಶ್ಚಿತಾರ್ಥ ಮತ್ತು ಮದುವೆ ದಿನಾಂಕ ಮುಂದಿನ ವಾರ ನಿಗದಿಯಾಗಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಮಂಗಳೂರು: ಮಂಜುನಾಥ–ಅಣ್ಣಪ್ಪ ಸ್ವಾಮಿಯಿಂದ ದುಷ್ಟರ ಸಂಹಾರ ಗ್ಯಾರಂಟಿ ಅಂತ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ಜೆಡಿಎಸ್ ಸತ್ಯಯಾತ್ರೆ ಸಮಾವೇಶದಲ್ಲಿ ಮಾತನಾಡಿದ ನಿಖಿಲ್, ಇಲ್ಲಿ ರಾಜಕೀಯ ಲಾಭದ ಲೆಕ್ಕಾಚಾರವೂ ಇಲ್ಲ. ಇಲ್ಲಿಗೆ ಯಾರೂ ರಾಜಕೀಯ ನಾಯಕರು-ಕಾರ್ಯಕರ್ತರಾಗಿ ಬಂದಿಲ್ಲ, ಎಲ್ಲರೂ ಭಕ್ತರಾಗಿ ಬಂದಿದ್ದೇವೆ ಎಂದರು. ಧರ್ಮಸ್ಥಳ ಮಂಜುನಾಥ ಸ್ವಾಮಿ ಮುಂದೆ ಯಾವ ದುಷ್ಟ ಶಕ್ತಿಯೂ ಉಳಿಯಲ್ಲ. ಕ್ಷೇತ್ರದ ಆವರಣದ ಸುತ್ತಮುತ್ತ ಅಪಪ್ರಚಾರ-ಅನುಮಾನ ರೀತಿ ಬಿಂಬಿಸಿದ್ದಾರೆ. ತಾಳ್ಮೆಗೂ ಒಂದು ಮಿತಿ ಇದೆ, ನಾವು ಇನ್ನು ಕೈಕಟ್ಟಿ ಕೂರಲು ಆಗಲ್ಲ. ಖಾವಂದರಿಂದಾದ ಸಮಾಜ ಮುಖಿ ಕಾರ್ಯ ಸೂರ್ಯ-ಚಂದ್ರ ಇರುವರೆಗೂ ಅಜರಾಮರ. ಕ್ಷೇತ್ರದ ಮೇಲೆ ನಿರಂತರ ಅಪಪ್ರಚಾರ, ನಿಂದನೆ, ಹುನ್ನಾರ ನಡೆದಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿಜಯಪುರ: ಧರ್ಮಸ್ಥಳ ವಿಚಾರದಲ್ಲಿ ವಿಜಯೇಂದ್ರ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ನಡೆದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ಬೇರೆ ಬಂಡವಾಳವಿಲ್ಲ, ಧರ್ಮಸ್ಥಳ ವಿಚಾರದಲ್ಲಿ ನಾವು ಮೊದಲು ಎಸ್ ಐಟಿ (SIT) ರಚಿಸಿದಾಗ ಬಿಜೆಪಿಯವರು (BJP) ಸ್ವಾಗತ ಮಾಡಿದ್ದರು. ಆದರೆ ಮುಸುಕುಧಾರಿ ತೋರಿಸಿದ ಜಾಗದಲ್ಲಿ ಏನೂ ಸಿಗದೇ ಇದ್ದ ಕಾರಣ ಇದೀಗ ತಿರುಗಿ ಬಿದ್ದಿದ್ದಾರೆ. ವಿಜಯೇಂದ್ರನಿಗೆ ಬೇರೆ ಬಂಡವಾಳ ಇಲ್ಲ. ಅಪಪ್ರಚಾರ ಮಾಡಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದ್ದಾನೆ ಎಂದರು. ನಮ್ಮ ಜಾಗದಲ್ಲಿ ಬಿಜೆಪಿಯವರೇನಾದರೂ ಇದ್ದರೆ ಅವರೂ ಎಸ್‌ಐಟಿ ರಚಿಸುತ್ತಿದ್ದರು. ಆದರೆ ಇದೀಗ ದುರುಪಯೋಗಪಡಿಸಿಕೊಳ್ಳಲು ಹೊರಟಿದ್ದಾರೆ. ನಾವು ಎಸ್ ಐಟಿ ರಚನೆ ಮಾಡುವ ಮೂಲಕ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ಸನ್ನಿಧಾನ ಹಾಗೂ ಧರ್ಮದರ್ಶಿಗಳ ಮೇಲೆ ಇದ್ದಂತಹ ಕಳಂಕವನ್ನು ತೆಗೆದುಹಾಕಿದ್ದೇವೆ. ಜನರ ನಂಬಿಕೆಯನ್ನು ಹೆಚ್ಚಿಸಿದ್ದೇವೆ. ಎಸ್ ಐಟಿ ಅವರು ಈಗಲೂ ಪಾರದರ್ಶಕವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ದೆಹಲಿಗೆ ಹೋಗಿ ಯಾರೆಲ್ಲ ಇದ್ದಾರೆ ಎನ್ನುವ ತನಿಖೆ ಮಾಡ್ತಿದೆ ಎಂದು ಹೇಳಿದರು.…