Author: admin

ಮೈಸೂರು: ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಹೀಗಾಗಿಯೇ ಬಿಜೆಪಿ ಶಾಸಕರು, ಮಾಜಿ ಸಿಎಂ ಕೋರ್ಟ್ ನಲ್ಲಿ ಸ್ಟೇ ತಂದಿದ್ದಾರೆ. ಹೀಗಿರುವಾಗ ಬಿಜೆಪಿಯವರಿಗೆ ನಮ್ಮ ನಾಯಕರ ಬಗ್ಗೆ ಮಾತನಾಡಲು ಏನು ಹಕ್ಕಿದೆ ಎಂದು ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬಿಜೆಪಿಯಲ್ಲೇ ಹನಿಟ್ರ‍್ಯಾಪ್ ಗಳು ನಡೆದಿವೆ. ಬಿಜೆಪಿಯವರ ವಿಡಿಯೋವನ್ನ ಬಿಜೆಪಿಯವರೇ ಮಾಡಿಕೊಂಡು ಇಟ್ಟಿದ್ದಾರೆ ಎಂದು ಅವರು ಹೇಳಿದರು. ಸಚಿವರ ಮನೆಗೆ ಸಿಸಿಟಿವಿ ಹಾಕದ ವಿಚಾರಕ್ಕೆ ಪ್ರತಿಕ್ರಿಯಿಸಿ, ಕೆಲವರು ಹನಿಟ್ರ‍್ಯಾಪ್ ಮಾಡಲೆಂದೇ ಸಚಿವರ ಮನೆಗೆ ಬರುತ್ತಾರೆ. ಈಗಾಗಿ ಸಿಸಿಟಿವಿ ಹಾಕಿಸಬೇಕು. ಸಚಿವರ ಮನೆಗಳಿಗೆ ಸಿಸಿಟಿವಿ ಇಲ್ಲದ ವಿಚಾರ ನನಗೆ ಗೊತ್ತಿಲ್ಲ ಎಂದರು. ಸಿಎಂ ಮನೆಗೆ ಸಿಸಿಟಿವಿ ಇದೆ. ನಾನು ಅಲ್ಲೇ ಇರುವುದರಿಂದ ಸಿಸಿಟಿವಿ ಇರುವ ಬಗ್ಗೆ ನನಗೆ ಗೊತ್ತಿದೆ, ಬೇರೆಯವರ ಮನೆಯ ವಿಚಾರ ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಕಲಬುರಗಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ SSLC ವಿದ್ಯಾರ್ಥಿ ಭೀಮಾ ನದಿಯಲ್ಲಿ ನೀರುಪಾಲಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹರವಾಳ ಬಳಿ ನಡೆದಿದೆ. ಆದರ್ಶ ವಿದ್ಯಾಲಯದಲ್ಲಿ ಓದುತ್ತಿದ್ದ ಪ್ರಜ್ವಲ್ ಹರವಾಳ (16) ಮೃತಪಟ್ಟ ಬಾಲಕನಾಗಿದ್ದಾನೆ. ಎರಡು ದಿನಗಳ ರಜೆಯ ಹಿನ್ನೆಲೆ ಪ್ರಜ್ವಲ್ ಸ್ವಗ್ರಾಮ ಹರವಾಳಕ್ಕೆ ಬಂದಿದ್ದ. ಈ ವೇಳೆ ಸ್ನೇಹಿತರೊಂದಿಗೆ ಸೇರಿ ಭೀಮಾ ನದಿಗೆ ಈಜಲು ತೆರಳಿದ್ದ. ನೀರಿನ ಆಳ ತಿಳಿಯದೇ ಇಳಿದ ಪರಿಣಾಮ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ತೀವ್ರ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಮೈಸೂರು: ನಾವು ಧರ್ಮದ ಆಧಾರದ ಮೇಲೆ ಮೀಸಲಾತಿ ಕೊಟ್ಟಿಲ್ಲ. ಹಿಂದುಳಿದ ವರ್ಗ ಅನ್ನೋ ಕಾರಣಕ್ಕೆ ಕೊಟ್ಟಿದ್ದೇವೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗಕ್ಕೆ ಮೀಸಲಾತಿ ಕೊಟ್ಟಾಗ ಮುಸ್ಲಿಂ ಧರ್ಮದವರಿಗೂ ಕೊಡಬೇಕಾಗುತ್ತೆ ಎಂದು ತಿಳಿಸಿದ್ದಾರೆ. ಮುಸ್ಲಿಂ ಮೀಸಲಾತಿ ಕರ್ನಾಟಕ ಮಾತ್ರವಲ್ಲದೇ ಬೇರೆ ರಾಜ್ಯದಲ್ಲೂ ಇದೆ. ಆದ್ರೆ ನಾವು ಕೇವಲ ಮುಸ್ಲಿಂರಿಗೆ ಮಾತ್ರ ಮೀಸಲಾತಿ ಕೊಟ್ಟಿಲ್ಲ. ಮುಸ್ಲಿಂ ಸಮುದಾಯದ 70 ಜಾತಿಗೆ ಮೀಸಲಾತಿ ಕೊಟ್ಟಿದ್ದೇವೆ ಎಂದು ಪ್ರಧಾನಿ ಮೋದಿಯವರು ಹೆಮ್ಮೆಯಿಂದ ಹೇಳಿದ್ದಾರೆ. ಮೋದಿಯವರು ಮಾಡಿದರೆ ಸರಿ ನಾವು ಮಾಡಿದ್ರೆ ತಪ್ಪಾಗುತ್ತಾ? ಎಂದು ಅವರು ಪ್ರಶ್ನಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ, ನ್ಯಾಯಾಲಯದಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡು ರಾಜಕೀಯ ನಿರ್ಧಾರ ತೆಗೆದುಕೊಂಡಿದೆ. ನಮ್ಮ ನೀರು ನಮ್ಮ ಹಕ್ಕು. ಅವರು ಅವರದೇ ಆದ ರಾಜಕೀಯ ನಿಲುವು ತೆಗೆದುಕೊಂಡಿದ್ದಾರೆ. ಈ ಹಿಂದೆ ಅನೇಕ ಬಾರಿ ಜೆ.ಎಚ್. ಪಟೇಲ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹೋಗಿ ಮಾತುಕತೆ ಮಾಡಲಾಗಿತ್ತು. ನಾವು ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು. ನ್ಯಾಯಾಲಯದ ತೀರ್ಪಿಗೆ ಯಾರೂ ಅಡ್ಡಿ ಮಾಡಲು ಸಾಧ್ಯವಿಲ್ಲ. ಅವರು ತಮ್ಮ ವಾದ ಮಾಡಲಿ, ನಾವು ನಮ್ಮ ವಾದ ಮಂಡಿಸುತ್ತೇವೆ, ಯಾರೂ ನ್ಯಾಯಾಲಯಗಳಿಗಿಂತ ಮೇಲಲ್ಲ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನವದೆಹಲಿ: RSS ಭಾರತದ ಶಿಕ್ಷಣ ವ್ಯವಸ್ಥೆಯನ್ನು ನಾಶಮಾಡಲು ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ನೀತಿಯನ್ನು ವಿರೋಧಿಸಿ ಇಂಡಿಯಾ ಬಣದ ವಿದ್ಯಾರ್ಥಿ ಸಂಘಟನೆಗಳು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಆರ್ಎಸ್ಎಸ್ ದೇಶದ ವಿಶ್ವವಿದ್ಯಾಲಯಗಳ ಕುಲಪತಿಗಳನ್ನು ನಿಯಂತ್ರಿಸುತ್ತಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಸಂಪನ್ಮೂಲಗಳನ್ನು ಅಂಬಾನಿ, ಅದಾನಿಯಂತಹ ಉದ್ಯಮಿಗಳಿಗೆ ಮತ್ತು ದೇಶದ ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ ಎಸ್ ಗೆ ಹಸ್ತಾಂತರಿಸುತ್ತಿದೆ ಎಂದು ಆರೋಪಿಸಿದರು. ಆರ್ ಎಸ್ ಎಸ್ ದೇಶದ ಶಿಕ್ಷಣ ವ್ಯವಸ್ಥೆಯನ್ನೇ ನಾಶಮಾಡಲು ಹೊರಟಿದ್ದು, ಇಂಡಿಯಾ ಮೈತ್ರಿಕೂಟ ಇದಕ್ಕೆ ಅವಕಾಶ ನೀಡುವುದಿಲ್ಲ.. ಎಂದು ರಾಹುಲ್ ಗಾಂಧಿ ಗುಡುಗಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಬಾಲಕಿಯನ್ನು ಚುಡಾಯಿಸಿದ್ದಕ್ಕೆ ಇಬ್ಬರು SSLC ವಿದ್ಯಾರ್ಥಿಗಳಿಗೆ ಗುಂಪೊಂದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗಂಗೊಂಡನಹಳ್ಳಿಯಲ್ಲಿ ನಡೆದಿದೆ. ಮಾರ್ಚ್ 17 ರಂದು ಗಂಗೊಂಡನಹಳ್ಳಿಯ 1 ನೇ ಕ್ರಾಸ್ನಲ್ಲಿ ರಾತ್ರಿ 8:30 ರಿಂದ 9 ಗಂಟೆಯ ನಡುವೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಥಳಿತಕ್ಕೊಳಗಾದ ಬಾಲಕರು ಇದೀಗ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬೆನ್ನಲ್ಲೇ ಬಾಲಕನೊಬ್ಬನ ತಂದೆ ಎ.ಶಬ್ಬೀರ್ ಎಂಬುವವದು, ಸುಫಿಯಾನ್, ಜುಬೈರ್ ಮತ್ತು ಇತರ ಮೂವರ ವಿರುದ್ಧ ಚಂದ್ರಾ ಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಬಾಲಕಿಯನ್ನು ಚುಡಾಯಿಸಿದ ಹಿನ್ನೆಲೆಯಲ್ಲಿ ಐವರು ಪುರುಷರಿದ್ದ ಗುಂಪು ಬಾಲಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಥಳಿಸಿ, ವಿಡಿಯೋ ಸೆರೆ ಹಿಡಿದಿದ್ದರು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಕರ್ನಾಟಕದಾದ್ಯಂತ ಏಪ್ರಿಲ್ 1 ರಿಂದ ಟೋಲ್ ಸುಂಕ ಶೇ 3 ರಿಂದ 5 ರಷ್ಟು ಹೆಚ್ಚಾಗಲಿವೆ. ಕೆಲವೇ ದಿನಗಳಲ್ಲಿ ಈ ಬಗ್ಗೆ ಅಧಿಸೂಚನೆ ಹೊರ ಡಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ. ಬೆಲೆ ಏರಿಕೆ, ಹಣದುಬ್ಬರಕ್ಕೆ ಅನುಗುಣವಾಗಿ ವಾರ್ಷಿಕವಾಗಿ ಮಾಡುವ ದರ ಪರಿಷ್ಕರಣೆ ಪ್ರಕ್ರಿಯೆಯ ಭಾಗವಾಗಿ ಈಗ ಟೋಲ್ ಸುಂಕ ಹೆಚ್ಚಳಕ್ಕೆ ಎನ್​ ಎಚ್​​ ಎಐ ಮುಂದಾಗಿದೆ. ರಾಜ್ಯದ 66 ಟೋಲ್ ಪ್ಲಾಜಾಗಳಲ್ಲಿ ಹೆಚ್ಚಿನ ಟೋಲ್​ ಗಳಿಗೆ ಪರಿಷ್ಕೃತ ದರಗಳು ಅನ್ವಯವಾಗಲಿವೆ. ಗರಿಷ್ಠ ಶೇ 5 ರಷ್ಟು ಮತ್ತು ಕನಿಷ್ಠ ಶೇ 3 ರಷ್ಟು ಹೆಚ್ಚಳವಾಗಲಿದೆ ಎಂದು ಹೇಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು:  ಸಂವಿಧಾನ ಬದಲಾವಣೆ ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಬದಲಾವಣೆ ಕುರಿತು ನಾನು ಹೇಳಿಕೆ ನೀಡಿದ್ದೇನೆಂಬುದನ್ನು ಸಾಬೀತು ಮಾಡಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ. ಒಂದು ವೇಳೆ ಸಾಬೀತು ಮಾಡದಿದ್ದರೆ ನನ್ನ ವಿರುದ್ಧ ಆರೋಪಿಸುವ ಬಿಜೆಪಿ ನಾಯಕರು ರಾಜಕೀಯ ನಿವೃತ್ತಿ ಪಡೆಯುತ್ತಾರೆಯೇ ಎಂದು ಸವಾಲು ಹಾಕಿದರು. ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಲು ನನಗೆ ತಲೆ ಕೆಟ್ಟಿಲ್ಲ. ನಾನು ನೀಡಿದ ಸಂದರ್ಶನದಲ್ಲಿ ಸತ್ಯ ಮಾತನ್ನಾಡಿದ್ದೇನೆ ಹಾಗೂ ನನ್ನ ರಾಜಕೀಯ ನಿಲುವು ತಿಳಿಸಿದ್ದೇನೆ. ನಾನು ಈ ದೇಶದಲ್ಲಿ ಸಂವಿಧಾನವನ್ನು ಜಾರಿಗೆ ತಂದ ಕಾಂಗ್ರೆಸ್‌ ಪಕ್ಷದ ಸದಸ್ಯ. ಸಂವಿಧಾನವನ್ನು ಬದಲಾಯಿಸುವ ಬಗ್ಗೆ ಕನಸಲ್ಲೂ ಚಿಂತಿಸುವುದು ನಮ್ಮ ಜಾಯಮಾನವಲ್ಲ ಎಂದರು. ಬಿಜೆಪಿಯವರು ಸುಖಾಸುಮ್ಮನೆ ನನ್ನ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದಾರೆ. ತಮ್ಮ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ. ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನ ಡಿ.ಎನ್.ಎಯು ಸಂವಿಧಾನ ವಿರೋಧಿ ಮಾನಸಿಕತೆ ಹೊಂದಿದೆ ಎಂದು ಆರೋಪಿಸಿದರು. 370ನೇ ವಿಧಿಯನ್ನು ಡಾ. ಅಂಬೇಡ್ಕರರು ವಿರೋಧಿಸಿದ್ದರು. ನೆಹರೂ ಇದೇ ವಿಧಿಯನ್ನು ಜಾರಿಗೊಳಿಸಿದರು. ಸಂವಿಧಾನದಲ್ಲಿ ಡಾ.ಅಂಬೇಡ್ಕರರು ಸೇರಿಸಿದ್ದ ಸಮಾನ ನಾಗರಿಕ ಸಂಹಿತೆಯನ್ನು ಇವತ್ತಿನವರೆಗೂ ಅವರು ಅದನ್ನು ಅನುಷ್ಠಾನಕ್ಕೆ ತಂದಿಲ್ಲ; ಬಿಜೆಪಿ ಅದನ್ನು ಅನುಷ್ಠಾನಕ್ಕೆ ತರುವುದಾಗಿ ಮುಂದಾದರೆ ವಿರೋಧಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಡಿ.ಕೆ.ಶಿವಕುಮಾರರು ಟಿ.ವಿ. ಸಂದರ್ಶನದಲ್ಲಿ ಸಂವಿಧಾನ ಬದಲಿಸುವ ಮಾತನಾಡಿದ್ದಾರೆ. ಕಾಂಗ್ರೆಸ್ಸನ್ನು ಕಿತ್ತೊಗೆದು ನಾವು ಸಂವಿಧಾನ ಉಳಿಸಿಕೊಳ್ಳುತ್ತೇವೆ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಹಿನ್ನೆಲೆ ಕನ್ನಡ ಬಿಗ್‌ಬಾಸ್‌ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು. ಆದರೆ ಮಂಗಳವಾರ ಮತ್ತೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 270(ಸಾರ್ವಜನಿಕ ತೊಂದರೆ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ಇತರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ರಜತ್ ಹಾಗೂ ವಿನಯ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಸವೇಶ್ವರ ನಗರ ಠಾಣೆ ಪೊಲೀಸರು ಇಂದು ಇಬ್ಬರು ಆರೋಪಿಗಳನ್ನು ಠಾಣೆ ಕರೆತಂದು, ರೀಲ್ಸ್​ನಲ್ಲಿ ಬಳಸಿದ್ದ ಅಸಲಿ ಮಚ್ಚು ತೋರಿಸುವಂತೆ ಸೂಚಿಸಿದ್ದಾರೆ. ಆದರೆ ಪೊಲೀಸರಿಗೆ ಸರಿಯಾದ ಉತ್ತರ ಸಿಕ್ಕಿಲ್ಲ. ಹೀಗಾಗಿ ಪೊಲೀಸರು ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ನಾಗರಬಾವಿಯ ಅಕ್ಷಯ ಸ್ಟುಡಿಯೋಗೆ ಆರೋಪಿಗಳನ್ನು ಕರೆದೊಯ್ದು ಸ್ಥಳ ಮಹಜರು ಮಾಡಿದ್ದಾರೆ. ಅಕ್ಷಯ ಸ್ಟುಡಿಯೋದ ಮೂಲೆಮೂಲೆಯಲ್ಲಿ ಹುಡುಕಿದರೂ ಲಾಂಗ್ ಪತ್ತೆ ಆಗಿಲ್ಲ. ಮಚ್ಚು ಎಲ್ಲಿದೆ ಎಂದು ಕೇಳಿದರೂ ರಜತ್‌ ಹಾಗೂ ವಿನಯ್‌ ಗೌಡ ಬಾಯಿ…

Read More