Subscribe to Updates
Get the latest creative news from FooBar about art, design and business.
- ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
- ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
- ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
- ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
- ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
- ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
- ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
Author: admin
ತುಮಕೂರು: ಹನಿಟ್ರ್ಯಾಪ್ ವಿಚಾರದಲ್ಲಿ ಜಡ್ಜ್ ಗಳು ಸೇರಿದ್ದಾರೆ ಎಂದು ನಾನು ಹೇಳಿಯೇ ಇಲ್ಲ ಅದು ಸುಳ್ಳು ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ವಕೀಲರೊಬ್ಬರು ಪಿಐಎಲ್ ಸಲ್ಲಿಸಿದ್ದಾರೆ, ಆದರೆ ನಾನು ಜಡ್ಜ್ ಗಳ ಹೆಸರನ್ನು ಪ್ರಸ್ತಾಪ ಮಾಡಿಯೇ ಇಲ್ಲ ಎಂದು ಹೇಳಿದ್ದಾರೆ. ಎಲ್ಲಾ ಪಕ್ಷಗಳ ಪ್ರಮುಖ ರಾಜಕಾರಣಿ ಗಳು ಸೇರಿದ್ದಾರೆ ಎಂದು ಹೇಳಿದ್ದೇನೆಯೇ ಹೊರತು ಜಡ್ಜ್ ಗಳು ಎಂದು ಹೇಳಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇಂದು ನನ್ನ ಹೇಳಿಕೆ ಸಂಬಂಧ ಗೃಹ ಮಂತ್ರಿಗಳಿಗೆ ಕಂಪ್ಲೇಂಟನ್ನು ಕೊಡುತ್ತಿದ್ದೇನೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಶಿವಮೊಗ್ಗ: ಬಿರುಬಿಸಿಲಿನಲ್ಲಿ ಕಲ್ಲಂಗಡಿ ಹಣ್ಣಿಗೆ ಉತ್ತಮ ಬೇಡಿಕೆಯಿತ್ತು. ಆದ್ರೆ, ಕಲ್ಲಂಗಡಿ ಹಣ್ಣಿಗೆ ಕಲರ್ ಇಂಜೆಕ್ಷನ್ ಮಾಡುತ್ತಿದ್ದಾರೆ ಎನ್ನುವ ವದಂತಿಗಳ ಹಿನ್ನೆಲೆ ವ್ಯಾಪಾರಿಗಳು ಮಾತ್ರವಲ್ಲ, ರೈತರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಾರಿ ತಮಿಳುನಾಡು, ಆಂಧ್ರಪ್ರದೇಶದಿಂದ ಬೇಡಿಕೆಗೂ ಮೀರಿ ಅತಿ ಹೆಚ್ಚು ಕಲ್ಲಂಗಡಿ ಅಮದಾಗಿದೆ. ಅಲ್ಲದೆ, ರಾಸಾಯನಿಕ ಸೇರ್ಪಡೆ ವದಂತಿಯಿಂದ ಇಲ್ಲಿನ ರೈತರು ಬೆಳೆದ ಕಲ್ಲಂಗಡಿಗೆ ಬೇಡಿಕೆ ಕುಸಿದಿದೆ. ಇದರಿಂದ ರೈತರು ಬೆಳೆಯನ್ನು ಮಾರಾಟ ಮಾಡಲು ಆಗದೆ, ಹೊಲದಲ್ಲಿ ಬಿಡಲು ಆಗದೆ ನಷ್ಟ ಅನುಭವಿಸುವಂತಾಗಿದೆ. ಉತ್ತಮ ದರ ಸಿಗುತ್ತದೆ ಎನ್ನುವ ಕಾರಣಕ್ಕೆ ಅತಿ ಹೆಚ್ಚು ರೈತರು ಕಲ್ಲಂಗಡಿ ಬಿತ್ತನೆ ಮಾಡಿದ್ದರು. ಉತ್ತಮ ವಾತಾವರಣವಿದ್ದ ಹಿನ್ನೆಲೆಯಲ್ಲಿ ಇಳುವರಿಯೂ ಹೆಚ್ಚಾಗಿದೆ. ಆದರೆ, ಪ್ರಸ್ತುತ ಹೋಲ್ಸೇಲ್ ಮಾರಾಟಗಾರರು ರೈತರಿಂದ 8, 10 ರೂ.ಗೆ ಕಲ್ಲಂಗಡಿ ಖರೀದಿಸುತ್ತಿದ್ದಾರೆ. ಅಕ್ಟೋಬರ್ನಲ್ಲಿ ಕೆಜಿಗೆ 18 ರೂ., ನವೆಂಬರ್ನಲ್ಲಿ ಕೆಜಿಗೆ 10-12 ರೂ. ಬೆಲೆ ಇತ್ತು. ಆದರೆ ಈಗ ಪಾತಾಳಕ್ಕೆ ಕುಸಿದಿದೆ. ಚಿಲ್ಲರೆ ಮಾರುಕಟ್ಟೆಯಲ್ಲೆ ಕಲ್ಲಂಗಡಿ ಪ್ರತಿ ಕೆಜಿಗೆ 15-20 ರೂ.ಗೆ ಮಾರಾಟವಾಗುತ್ತಿದೆ. ಕಳೆದ…
ಪಾವಗಡ: ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಮಾರ್ಚ್ 26ರಂದು ಮಕ್ಕಳಿಗಾಗಿ ವಿಶೇಷ ನೇತ್ರ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಶಿಬಿರದಲ್ಲಿ ನಾಡಿನ ಹೆಸರಾಂತ ಮಕ್ಕಳ ತಜ್ಞರಾದ ಡಾ.ವಸುಧಾ ನರೇಶ್ MBBS MS (Ophth.), Fellowship in Strabismus & Cataract ರವರು ಭಾಗವಹಿಸಿ ಸೂಕ್ತ ಸಲಹೆ ಮತ್ತು ಚಿಕಿತ್ಸೆಯನ್ನು ನೀಡುವರು. ಶಿಬಿರವು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 3:30ರವರೆಗೆ ನಡೆಯುತ್ತದೆ. ಮಕ್ಕಳಲ್ಲಿ ಕಂಡುಬರುವ ದೃಷ್ಟಿ ದೋಷ, ತಲೆ ನೋವು, ಕಣ್ಣು ಕೆಂಪಾಗಿರುವುದು, ಕಣ್ಣನ್ನು ಉಜ್ಜುವುದು, ಕಣ್ಣಲ್ಲಿ ಯಾವಾಗಲೂ ನೀರು ಮತ್ತು ಪಿಸಿರು ಸೋರುವುದು, ಮೆಳ್ಳಗಣ್ಣು, ಕಣ್ಣಿನ ಪೊರೆ, ರಾತ್ರಿ ವೇಳೆ ಕಣ್ಣು ಕಾಣಿಸದಿರುವುದು ಹಾಗೂ ಕಣ್ಣಿಗೆ ಸಂಬಂಧಪಟ್ಟ ಇನ್ನಿತರ ಯಾವುದಾದರೂ ತೊಂದರೆಗಳಿದ್ದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಿಬಿರಕ್ಕೆ ಕರೆತಂದು ಸೂಕ್ತ ಸಲಹೆ ಹಾಗೂ ಚಿಕಿತ್ಸೆಯನ್ನು ಪಡೆಯಬಹುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಶ್ರೀಸ್ವಾಮಿ ಜಪಾನಂದಜೀ ರವರು ತಿಳಿಸಿರುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ವಿಜಯಪುರ ಜಿಲ್ಲೆ ಮಾನಸ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೈಸೂರು ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಗಳಿಗೆ 2025–26ನೇ ಸಾಲಿಗಾಗಿ 5ನೇ ತರಗತಿ ಕನ್ನಡ ಹಾಗೂ ಇಂಗ್ಲೀಷ್ ಮಾಧ್ಯಮ ಮತ್ತು ಪ್ರಥಮ ಪಿಯುಸಿ ತರಗತಿ ಪ್ರವೇಶಕ್ಕಾಗಿ ನಿಗದಿತ ದಿನಾಂಕಗಳಂದು ಪರೀಕ್ಷೆ ನಡೆಯಲಿದೆ. ಮಾನಸ ಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಗೆ ದಾಖಲಿಸಲು ಮೇ 18ರಂದು ಹಾಗೂ ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಗೆ ದಾಖಲಿಸಲು ಏಪ್ರಿಲ್ 12ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಪ.ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳು ಈ ಪ್ರವೇಶ ಪರೀಕ್ಷೆಗಳಿಗೆ ಹಾಜರಾಗಬಹುದಾಗಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಲು ಇಚ್ಛಿಸಿದಲ್ಲಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರನ್ನು ಏಪ್ರಿಲ್ 4ರೊಳಗಾಗಿ ಸಂಪರ್ಕಿಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಒದಗಿಸಬೇಕು. ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ತಮ್ಮ ಪಾಲಕರೊಂದಿಗೆ ಹಾಜರಾಗುವಂತೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತುಮಕೂರು: ಯೋಗ ಮಾಡುವುದರಿಂದ ಸದೃಢತೆ, ಏಕಾಗ್ರತೆ ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಆದರೆ ಇಂದಿನ ಯುವಜನತೆ ಯೋಗದಿಂದ ಹಿಂದೆ ಸರಿಯುತ್ತಿದ್ದಾರೆ ಎಂದು ಯೋಗಪಟು ರಾಜೇಶ್ ಆಚಾರ್ ಹೇಳಿದರು. ವಿಶ್ವವಿದ್ಯಾನಿಲಯ ವಿಜ್ಞಾನ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗ ಸೋಮವಾರ ಹಮ್ಮಿಕೊಂಡಿದ್ದ ಅಂತರಕಾಲೇಜು ಸಾಂಪ್ರದಾಯಿಕ, ಕಲಾತ್ಮಕ ಮತ್ತು ಲಯಬದ್ಧ ಯೋಗದ ಕುರಿತ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಅವರು ಯೋಗ ಜೀವನದ ಅವಿಭಾಜ್ಯ ಅಂಗವಾಗಬೇಕು ಎಂದರು. ಯೋಗ ಮಾಡಲು ಕಡಿಮೆ ವೆಚ್ಚ ಸಾಕು. ಒಂದು ಮ್ಯಾಟ್. ಪರಿಶುದ್ಧ ವಾತಾವರಣ– ಇವಿಷ್ಟಿದ್ದರೆ ಗುರುಗಳ ಮಾರ್ಗದರ್ಶನದೊಂದಿಗೆ ಉತ್ತಮ ಯೋಗಾಭ್ಯಾಸ ಮಾಡಬಹುದು. ದೇಹ ಮತ್ತು ಮನಸ್ಸಿನ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದರು. ಪ್ರಾಧ್ಯಾಪಕರಾದ ಪ್ರೊ.ಶ್ರೀನಿವಾಸ್ ಎಸ್. ಮಾತನಾಡಿ, ಈಚಿನ ದಿನಗಳಲ್ಲಿ ಮನುಷ್ಯನಿಗೆ ಹೆಚ್ಚು ಕಾಯಿಲೆಗಳು ಬರುವುದಕ್ಕೆ ನಮ್ಮ ಕಳಪೆ ಆಹಾರ ಪದ್ಧತಿಯೇ ಕಾರಣ. ಮಕ್ಕಳು ಜಂಕ್ ಫುಡ್ ಗೆ ಆಕರ್ಷಿತರಾಗಿದ್ದಾರೆ. ಮಾರುಕಟ್ಟೆಯಲ್ಲಿ ಉತ್ಪಾದನೆಯಾಗುವ ಆಹಾರಗಳನ್ನು ಹೆಚ್ಚಾಗಿ ಸೇವಿಸುತ್ತೇವೆ. ಆದರೆ ಅದರ ಹಿಂದೆ ಕೊಟ್ಟಿರುವಂತಹ ವಿವರಗಳನ್ನು ನಾವು ಓದುವುದಿಲ್ಲ. ನಾವು ಭಾವಿಸಿದಂತೆ ಸಿದ್ಧ…
ತುಮಕೂರು: ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ ಓಯು)ವು 2024-25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31 ಕಡೆಯ ದಿನವಾಗಿದೆ. ತುಮಕೂರಿನ ಕೆಎಸ್ಓಯು ಪ್ರಾದೇಶಿಕ ಕೇಂದ್ರದಲ್ಲಿ ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲೂö್ಯ., ಬಿ.ಎಸ್ಸಿ(ಉeಟಿeಡಿಚಿಟ & I.ಖಿ) ಎಂ.ಎ., ಎಂ.ಸಿ.ಜೆ., ಎಂ.ಕಾA., ಎಂ.ಸಿ.ಎ., ಎಂ.ಎಸ್.ಡಬ್ಲೂö್ಯ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ಗಳಿಗೆ ಪ್ರವೇಶ ಪಡೆಯಲು ಪದವಿ ಪೂರ್ವ(10+2) ಹಾಗೂ ಸ್ನಾತಕ ಪದವಿ(10+2+3) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಥಮ ವರ್ಷದ ಪ್ರವೇಶಾತಿಗಾಗಿ ಬಿ.ಎ. ತರಗತಿಗೆ 8400 ರೂ., ಬಿ.ಕಾಂ.–8900 ರೂ., ಬಿ.ಸಿ.ಎ/ಬಿ.ಎಸ್ಸಿ.-23900 ರೂ., ಬಿ.ಬಿ.ಎ./ಬಿ.ಎಲ್.ಐ.ಎಸ್ಸಿ/ಎಂ.ಕಾಂ.–12400 ರೂ., ಬಿ.ಎಸ್.ಡಬ್ಲ್ಯೂ-.-12900 ರೂ., ಎಂ.ಎ.–10600 ರೂ., ಎಂ.ಸಿ.ಜೆ.–16200,. ಎಂ.ಬಿ.ಎ.–29900, ಎಂ.ಎಸ್ಸಿ./ಎಂ.ಸಿ.ಎ.–29700, ಎಂ.ಎಸ್.ಡಬ್ಲ್ಯೂ.–21300, ಎಂ.ಎಲ್.ಐ.ಎಸ್ಸಿ.–18150 ರೂ.ಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ ಲೇಔಟ್, ರಾಜೀವ್ಗಾಂಧಿ ನಗರ, ಗಂಗಸಂದ್ರ…
ತುಮಕೂರು: ಹದಿನೆಂಟನೆಯ ಶತಮಾನದಲ್ಲೇ ಕಲ್ಯಾಣರಾಜ್ಯದ ಪರಿಕಲ್ಪನೆಯನ್ನು ನನಸಾಗಿಸಿದ ದಿಟ್ಟ ಆಡಳಿತಗಾರ್ತಿ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಬಲೀಕರಣದ ಅತ್ಯುತ್ತಮ ಮಾದರಿ ಎಂದು ಲೇಖಕ, ವಿದ್ವಾಂಸ ಆಶುತೋಷ್ ಅದೋನಿ ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಇತಿಹಾಸ ಮತ್ತು ಪುರಾತತ್ವಶಾಸ್ತ್ರ, ರಾಜ್ಯಶಾಸ್ತ್ರ, ಸಾರ್ವಜನಿಕ ಆಡಳಿತ, ಕನ್ನಡ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಗಳು ಜಂಟಿಯಾಗಿ ಆಯೋಜಿಸಿದ್ದ ‘ಅಹಲ್ಯಾಬಾಯಿ ಹೋಳ್ಕರ್ ಅವರ ಜೀವನ ಮತ್ತು ಸಾಧನೆಗಳು’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಹಲ್ಯಾಬಾಯಿ ಕಾಲದಲ್ಲಿ ಮಾಳ್ವ ಪ್ರದೇಶವು ಭಾರತದ ಅತ್ಯಂತ ಶ್ರೀಮಂತ ರಾಜ್ಯವೆಂದು ಗುರುತಿಸಿಕೊಂಡಿತ್ತು. ತನ್ನ ಪತಿ ಹಾಗೂ ಮಗನನ್ನು ಅಕಾಲದಲ್ಲಿ ಕಳೆದುಕೊಂಡ ಆಕೆ ಅನೇಕ ತೊಂದರೆಗಳನ್ನು ಮೆಟ್ಟಿನಿಂತು ದಕ್ಷ ಆಡಳಿತ ನೀಡಿದಳು. ಏಕಾಂಗಿ ಹೋರಾಟ ಮಾಡಿ ಸುಖೀರಾಜ್ಯವನ್ನು ಸ್ಥಾಪಿಸಿದಳು ಎಂದು ವಿವರಿಸಿದರು. ಅಹಲ್ಯಾಬಾಯಿಯ ಮಾವ ಮಲ್ಹಾರ ರಾವ್ ಆಕೆಯನ್ನು ಗಂಡುಮಕ್ಕಳಿಗೆ ಸರಿಸಮನಾಗಿ ಬೆಳೆಸಿ ರಾಜಕಾರ್ಯಗಳ ಅನುಭವ ನೀಡಿದರು. ಯುದ್ಧವಿದ್ಯೆ, ವಾಕ್ ಚಾತುರ್ಯ, ದೂರದೃಷ್ಟಿ ಎಲ್ಲವನ್ನೂ ಕರಗತ ಮಾಡಿಕೊಳ್ಳುವಂತೆ ಪ್ರೇರಣೆ ನೀಡಿದರು. ಮಹಿಳಾ ಸಬಲೀಕರಣದ ಬಗ್ಗೆ ನಾವು…
ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಮಾರ್ಚ್ 26ರಂದು ತುರುವೇಕೆರೆಯಲ್ಲಿ “ಸಾರ್ವಜನಿಕ ಕುಂದುಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ. ಸಭೆಯು ಮಾರ್ಚ್ 26ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತುರುವೇಕೆರೆ ನಗರದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನಡೆಯಲಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪೊಲೀಸ್ ಅಧೀಕ್ಷಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬೆಂಗಳೂರು ನಗರ ಜಿಲ್ಲೆ ಮಾಗಡಿ ರಸ್ತೆಯಲ್ಲಿರುವ ಜನಸೇವಾ ವಿದ್ಯಾ ಕೇಂದ್ರದಲ್ಲಿ 2025–26ನೇ ಸಾಲಿಗಾಗಿ 5ನೇ ತರಗತಿ ಕನ್ನಡ ಮಾಧ್ಯಮ ಹಾಗೂ 8ನೇ ತರಗತಿ ಕನ್ನಡ ಮತ್ತು ಇಂಗ್ಲೀಷ್ ಮಾಧ್ಯಮದಲ್ಲಿ ವ್ಯಾಸಂಗ ಮಾಡಲಿಚ್ಚಿಸುವ ಪ.ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲು ಏಪ್ರಿಲ್ 6ರಂದು ಪರೀಕ್ಷೆ ನಡೆಯಲಿದೆ. ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ದಾಖಲಿಸಲು ಇಚ್ಛಿಸಿದಲ್ಲಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರನ್ನು ಮಾರ್ಚ್ 29ರೊಳಗಾಗಿ ಸಂಪರ್ಕಿಸಿ ವಿದ್ಯಾರ್ಥಿಗಳ ಮಾಹಿತಿಯನ್ನು ಒದಗಿಸಬೇಕು. ಅರ್ಹ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಬೇಕೆಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸರ್ಕಾರದ ನಿರ್ದೇಶನದನ್ವಯ ಕೆಲಸದ ಸ್ಥಳದಲ್ಲಿ ಮಹಿಳಾ ಸುರಕ್ಷತೆಯನ್ನು ಹೆಚ್ಚಿಸಲು 2 ದಿನದೊಳಗಾಗಿ ಎಲ್ಲ ಇಲಾಖಾ ಕಚೇರಿ ಹಾಗೂ ಅಧೀನ ಕಚೇರಿಗಳಲ್ಲಿ SHE BOX box portal ಅನ್ನು ಸೃಜಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚೆಗೆ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು ಮಹಿಳೆಯರಿಗೆ ಕೆಲಸದ ಸ್ಥಳದಲ್ಲಿ ಸುರಕ್ಷಿತ ವಾತಾವರಣವನ್ನು ಕಲ್ಪಿಸುವ ನಿಟ್ಟಿನಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚಿಸಿ SHE Box ಪೋರ್ಟಲ್‌ನಲ್ಲಿ ಕಾಲೋಚಿತಗೊಳಿಸಬೇಕೆಂದು ನಿರ್ದೇಶನ ನೀಡಿದರು. ಕಚೇರಿ ಮುಖ್ಯಸ್ಥರು ತಮ್ಮ ಕಚೇರಿ ಮತ್ತು ಅಧೀನ ಕಚೇರಿ/ಖಾಸಗಿ ಸಂಸ್ಥೆ/ಕಾರ್ಖಾನೆ, ಶಾಲಾ-ಕಾಲೇಜುಗಳಲ್ಲಿ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚನೆ ಮಾಡಬೇಕು. ಸಮಿತಿ ರಚನೆ ಮಾಡಿದ ಮಾಹಿತಿಯನ್ನು ಪೋರ್ಟಲ್ ವಿಳಾಸ https://shebox.wcd.gov.in/signin ನಲ್ಲಿ ಆಪ್ ಲೋಡ್ ಮಾಡಲು ಕ್ರಮವಹಿಸಬೇಕು ಎಂದು ತಿಳಿಸಿದರು. ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ವಯ…