Author: admin

ಮಧುಗಿರಿ: ಕರ್ನಾಟಕ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಯನ್ನು ನವೆಂಬರ್ 25ರಂದು ಮಧುಗಿರಿ ತಾಲೂಕು ಕಚೇರಿಯಲ್ಲಿ ಪುರಸಭಾ ಕಚೇರಿಯಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿಯಲ್ಲೇ ನಾಡಕಚೇರಿಗಳಲ್ಲಿ ಪ್ರಚುರಪಡಿಸಿದ ಮತದಾರ ಮತದಾರರ ಪಟ್ಟಿ ಪರಿಶೀಲನೆಗೆ ತಾಲೂಕು ಕಚೇರಿ ಚುನಾವಣಾ ಶಾಖೆಯಲ್ಲಿ ಲಭ್ಯವಿರುತ್ತದೆ. ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಮಧುಗಿರಿ ತಾಲೂಕಿನಲ್ಲಿ 4,093 ಅರ್ಜಿಗಳು ಸ್ವೀಕಾರಗೊಂಡಿದ್ದು ಅದರಲ್ಲಿ 4067 ಅರ್ಜಿಗಳು ಅಂಗೀಕಾರಗೊಂಡಿವೆ. 46 ಅರ್ಜಿಗಳು ತಿರಸ್ಕೃತ ಗೊಂಡಿವೆ. ಒಟ್ಟು 2,549 ಪುರುಷ ಮತದಾರರು 1,498 ಮಹಿಳಾ ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಂಡಿದ್ದಾರೆ ನವೆಂಬರ್ 25 ರಿಂದ ಡಿಸೆಂಬರ್ 10 ವರೆಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗಾಗಿ ಅಗತ್ಯ ದಾಖಲೆಗಳೊಂದಿಗೆ ನಮೂನೆ 18ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಕರಡು ಮತದಾರರ ಪಟ್ಟಿಯಲ್ಲಿ ಇರುವವರು ತಿದ್ದುಪಡಿಗಳಿದ್ದಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ ಎಂದು ಸಹಾಯಕ ಚುನಾವಣಾ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ತುಮಕೂರು: ತುಮಕೂರು ಗಾಯನ ಸಭಾ(ರಿ) ವತಿಯಿಂದ ನವೆಂಬರ್ 30ರ ಭಾನುವಾರದಂದು ನಗರದ ಟೌನ್ ಹಾಲ್ ಸಮೀಪವಿರುವ ಶ್ರೀ ಸಿದ್ದಗಂಗಾ ಪದವಿ ಕಾಲೇಜಿನ ಡಾ.ಶಿವಕುಮಾರ ಮಹಾಸ್ವಾಮೀಜಿ ಸಭಾಂಗಣದಲ್ಲಿ ಸಂಜೆ 4 ಗಂಟೆಗೆ ಬೆಂಗಳೂರಿನ ಸಂಗೀತ ವಿದುಷಿ ಜೆ, ಯೋಗಕೀರ್ತನ ರವರಿಂದ ಅಮೋಘ ಸಂಗೀತ ಕಛೇರಿ ಏರ್ಪಡಿಸಲಾಗಿದೆ. ಪಕ್ಕವಾದ್ಯದಲ್ಲಿ ಮೃದಂಗ: ಅನಿರುದ್ಧ್ ಎಸ್.ಭಟ್, ಪಿಟೀಲು: ಅದಿತಿ ಕೃಷ್ಣಪ್ರಕಾಶ್, ಖಂಜಿರ: ರಾಜಾಪುರಂ ಆರ್ ಕಾರ್ತಿಕ್ ರವರುಗಳು ವಾದ್ಯ ಸಹಕಾರ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಂಗೀತ ವಿದ್ವಾಂಸರುಗಳು, ಸಂಗೀತಾಸಕ್ತರು ಆಗಮಿಸಲು ಸಭಾವತಿಯಿಂದ ಕೋರಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಹುಳಿಯಾರು: ಪಟ್ಟಣ ಪಂಚಾಯಿತಿಯಿಂದ ಹೋಬಳಿಯ ಮೇಲನಹಳ್ಳಿ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ಘನತ್ಯಾಜ್ಯ ವಿಲೇವಾರಿ ಘಟಕ ಅವಕಾಶ ಕೊಡುವುದಿಲ್ಲ ಎಂದು ಗ್ರಾಮಸ್ಥರು ಮಂಗಳವಾರ ವಿರೋಧ ವ್ಯಕ್ತಪಡಿಸಿದರು. ಹುಳಿಯಾರು ಪಟ್ಟಣದ ಕಸದ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಈಗಾಗಲೇ ಐದಾರು ಕಡೆ ಘಟಕ ಸ್ಥಾಪಿಸಲು ಅಧಿಕಾರಿಗಳು ಸ್ಥಳ ಗುರುತಿಸಿದ್ದಾರೆ. ಎಲ್ಲ ಕಡೆಯೂ ಆಯಾಯ ಗ್ರಾಮಸ್ಥರ ವಿರೋಧದಿಂದ ಘಟಕ ಸ್ಥಾಪನೆ ಆಗುತ್ತಿಲ್ಲ. ಈ ನಡುವೆ ಹೋಬಳಿಯ ಗಡಿ ಭಾಗವಾದ ಮೇಲನಹಳ್ಳಿ ಗ್ರಾಮದ ಸರ್ಕಾರಿ ಸರ್ವೆ ನಂಬರ್ 69 ರಲ್ಲಿ ಕಂದಾಯ ಅಧಿಕಾರಿಗಳು ಸ್ಥಳ ಗುರುತು ಮಾಡಿದ್ದರು. ಗೋಮಾಳ ಜಾಗವಾಗಿದ್ದು ರೈತರು ಉಳುಮೆ ಮಾಡದ ಕಾರಣ ರೈತರು ಹಾಕಿದ್ದ ಅರ್ಜಿಯನ್ನು ಉಪವಿಭಾಗಾಧಿಕಾರಿ ವಜಾಗೊಳಿಸಿದ್ದರು. ಮಂಗಳವಾರ ಕಂದಾಯ ಅಧಿಕಾರಿಗಳು ಸ್ಥಳ ವೀಕ್ಷಣೆಗೆ ಆಗಮಿಸಿದ್ದರು. ಈ ವೇಳೆ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಯಾವುದೇ ಕಾರಣಕ್ಕೂ ಘಟಕ ಸ್ಥಾಪನೆಗೆ ಅವಕಾಶ ಕೊಡುವುದಿಲ್ಲ ಎಂದು ವಿರೋಧ ವ್ಯಕ್ತಪಡಿಸಿದರು. ಘಟಕ ಸ್ಥಾಪನೆಯಿಂದ ಜನ–ಜಾನುವಾರುಗಳಿಗೆ ತೊಂದರೆ ಆಗುತ್ತದೆ. ಅಲ್ಲದೆ…

Read More

ಪಾವಗಡ: ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾಗುವ ಸರ್ಕಾರಿ ವೈದ್ಯ, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಶಾಸಕ ಎಚ್.ವಿ.ವೆಂಕಟೇಶ್ ಎಚ್ಚರಿಕೆ ನೀಡಿದರು. ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಸರ್ಕಾರಿ ಆಸ್ಪತ್ರೆಯ ಕೆಲವರು ಖಾಸಗಿ ಆಸ್ಪತ್ರೆಗಳೊಂದಿಗೆ ಶಾಮೀಲಾಗಿ ಸಹಜ ಹೆರಿಗೆ ಆಗುವಂತಿದ್ದರೂ ಶಸ್ತ್ರಚಿಕಿತ್ಸೆ ಮಾಡುವಂತೆ ಸೂಚಿಸಿ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ. ಕೂಡಲೇ ಈ ಚಾಳಿ ನಿಲ್ಲಿಸಿ ಆಸ್ಪತ್ರೆಗೆ ಬಂದ ಬಡವರಿಗೆ ಸೂಕ್ತ ವೈದ್ಯಕೀಯ ಸೇವೆ ನೀಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದರಪಟ್ಟಿ ಅಳವಡಿಸುವಂತೆ ಸೂಚಿಸಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿಗೆ ಸೂಚಿಸಿದರು. ಅಧಿಕಾರಿಗಳು ತಮ್ಮ ಇಲಾಖೆಗಳ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಕುರಿತು ಸಮಗ್ರ ಮಾಹಿತಿ ನೀಡಿದರೆ, ಸರ್ಕಾರದ ಜೊತೆ ಮಾತನಾಡಿ ಅಗತ್ಯ ಅನುದಾನ ತಂದು ಅಭಿವೃದ್ಧಿ ಮಾಡಲು ಅನುಕೂಲವಾಗುತ್ತದೆ ಎಂದರು. ಕೆಟಿ ಹಳ್ಳಿ, ತಿರುಮಣಿ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಹಾವು, ನಾಯಿ ಕಡಿತಕ್ಕೆ ಔಷಧಿ ಕಾಯ್ದಿರಿಸಿಲ್ಲ ಎಂಬ ಮಾಹಿತಿ ಇದೆ. ಈ ಕೂಡಲೆ ಔಷಧಿ ತರಿಸಬೇಕು. ಆಸ್ಪತ್ರೆಗೆ ಬರುವ…

Read More

ಕೊರಟಗೆರೆ: ಸರ್ಕಾರದಲ್ಲಿ ಗುಂಡಿ ಮುಚ್ಚಲು ಹಣವಿಲ್ಲ. ಅಭಿವೃದ್ಧಿ ಕಡೆಗೆ ಗಮನ ಹರಿಸಬೇಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೀದಿ ಜಗಳ ಮಾಡುತ್ತಿದ್ದಾರೆ ಎಂದು ಶಾಸಕ ಬಿ.ಸುರೇಶ್‌ಗೌಡ ಆರೋಪಿಸಿದರು. ತಾಲ್ಲೂಕಿನ ಮಾವತ್ತೂರು ಗ್ರಾಮದಲ್ಲಿ ಸೋಮವಾರ ಸಂಜೆ ನಡೆದ ಗಂಗಾರತಿ ಕಾರ್ಯಕ್ರಮದಲ್ಲಿ  ಅವರು ಮಾತನಾಡಿದರು. ಸರ್ಕಾರದ ಪರಿಸ್ಥಿತಿ ನವೆಂಬರ್ ಕ್ರಾಂತಿ, ಡಿಸೆಂಬರ್ ಶಾಂತಿ, ಜನವರಿ ವಾಂತಿ ಎಂಬಂತಾಗಿದೆ. ಸರ್ಕಾರ ಯಾವಾಗ ಮಖಾಡೆ ಮಲಗುತ್ತದೆ ಎಂಬುದು ಗೊತ್ತಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್‌ ಮೈತ್ರಿಯಿಂದ 150 ಸ್ಥಾನ ಗೆಲ್ಲುತ್ತೇವೆ. ಎಚ್.ಡಿ.ಕುಮಾರಸ್ವಾಮಿ, ಬಿ.ವೈ.ವಿಜಯೇಂದ್ರ ಅವರಲ್ಲಿ ಯಾರಾದರೂ ಮುಖ್ಯಮಂತ್ರಿಯಾಗಲಿ. ಎರಡು ಪಕ್ಷದವರು ಒಟ್ಟಿಗೆ ಹೋಗುತ್ತೇವೆ. ನಾವೇ ಅಧಿಕಾರಕ್ಕೆ ಬರುತ್ತೇವೆ, ರೈತರ ಪರವಾಗಿ ಕೆಲಸ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿದರು. ಜನರ ತೆರಿಗೆ ಹಣವನ್ನು ಗ್ಯಾರಂಟಿ ಹೆಸರಿನಲ್ಲಿ ಸಿಕ್ಕ ಸಿಕ್ಕವರಿಗೆ ನೀಡುತ್ತಿದ್ದಾರೆ. ಕಾಂಗ್ರೆಸ್‌ನವರೇ ಸರ್ಕಾರದ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. 13 ಸಾವಿರ ಕೆಎಸ್‌ ಆರ್‌ ಟಿಸಿ ಬಸ್‌ ಕೆಟ್ಟು ನಿಂತಿದ್ದು, ಶಾಲೆಗೆ ಹೋಗುವ ಮಕ್ಕಳಿಗೂ ಬಸ್‌ ಸೌಲಭ್ಯ ಇಲ್ಲವಾಗಿದೆ ಎಂದರು.…

Read More

ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ  ರಸ್ತೆ ಇಲ್ಲದೇ ಸಾರ್ವಜನಿಕರು ಪಡುತ್ತಿರುವ ಸಂಕಷ್ಟದ  ಬಗ್ಗೆ ಇತ್ತೀಚೆಗೆ ನಮ್ಮ ತುಮಕೂರು ಮಾಧ್ಯಮ ವರದಿ ಮಾಡಿತ್ತು. ಈ ವರದಿಯ ಬೆನ್ನಲ್ಲೇ ಇದೀಗ ಗ್ರಾಮ ಪಂಚಾಯತ್ ಹೊಸ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದೆ. “ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ ಅವ್ಯವಸ್ಥೆ, ಗಾಢ ನಿದ್ರೆಯಲ್ಲಿರುವ ಅಧಿಕಾರಿಗಳು” ಎಂಬ ಶೀರ್ಷಿಕೆಯಡಿಯಲ್ಲಿ ಸೆ.14ರಂದು ನಮ್ಮ ತುಮಕೂರು ಸವಿವರವಾದ ವರದಿಯನ್ನು ಪ್ರಕಟ ಮಾಡಿತ್ತು. ಈ ವರದಿ ಪ್ರಕಟವಾದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರವೇ ಸಿಸಿ ರಸ್ತೆ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿದ್ದರು. ಇದೀಗ ಕೊಟ್ಟ ಮಾತಿನಂತೆ ಅಧಿಕಾರಿಗಳು ನಡೆದುಕೊಂಡಿದ್ದು, ಸಿಸಿ ರಸ್ತೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಸಂಬಂಧಿಸಿದ ವರದಿ ಓದಿ: ಗದ್ದೆಯಂತಾದ ರಸ್ತೆ: ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2 ರಲ್ಲಿ ಅವ್ಯವಸ್ಥೆ:…

Read More

ಸರಗೂರು:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನವನ್ನು  ಮಂಗಳವಾರದಂದು ಹುಲ್ಲಳ್ಳಿ ಯೋಜನಾ ಕಚೇರಿಯ ಮುಳ್ಳೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಕಚೇರಿಯಲ್ಲಿ ಆಚರಿಸಲಾಯಿತು. ನಂತರ ಮಾತನಾಡಿದ ಮುಳ್ಳೂರು ವಲಯದ ಮೇಲ್ವಿಚಾರಕ ನರಸಿಂಹಮೂರ್ತಿ,  ಧರ್ಮಸ್ಥಳದ ಧರ್ಮಾಧಿಕಾರಿಗಳು ನಾಡಿನ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದು, ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳು ಶಿಕ್ಷಣ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆ ಅತ್ಯಂತ ಕಷ್ಟಕರವಾಗಿ ಜೀವಿಸಿರುವ ಜನರಿಗೆ ಆಶ್ರಯ ನೀಡುವುದು ಪ್ರಾಣಿ ಪಕ್ಷಿ ಪಶು ಸಂಕುಲಕ್ಕೆ ವಿಶೇಷವಾದ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ ಕೆರೆ ಹೂಳೆತ್ತುವ ಕೆಲಸ ಪರಿಸರ ಸಂರಕ್ಷಣಾಗಾಗಿ ಶಾಲಾ–ಕಾಲೇಜುಗಳಲ್ಲಿ ಗಿಡ ನೀಡುವ ಕಾರ್ಯಕ್ರಮಗಳು ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಮನೆ ಇಲ್ಲದೆ ಬಳಲುತ್ತಿರುವ ಕುಟುಂಬಗಳಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಿಕೊಟ್ಟಿದ್ದಾರೆ ಎಂದರು. ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದರ ಜೊತೆಯಲ್ಲಿ ಸ್ವಸಹಾಯ ಸಂಘಗಳನ್ನು ರಚನೆ ಮಾಡಿ ಬ್ಯಾಂಕುಗಳಿಂದ ವಿಶೇಷವಾಗಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವುದೇ ದಾಖಲಾತಿ ಇಲ್ಲದೆ  ಸುಲಭ ಸಾಲ…

Read More

ಸರಗೂರು:  ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದ ಭಾರತದ ಸಂವಿಧಾನವು ಸರ್ವರಿಗೂ ಸಮಬಾಳು–ಸಮಪಾಲು ನೀಡಿದೆ ಎಂದು ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ವೈ.ಡಿ.ರಾಜಣ್ಣ ಎಂದು ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ತಾಲೂಕು ಆಡಳಿತ ಹಾಗೂ ತಾಲ್ಲೂಕು ಪಂಚಾಯಿತಿ ಪ.ಪಂ. ಹಾಗೂ ಸಮಾಜ ಕಲ್ಯಾಣ ಇಲಾಖೆರವರ ಸಂಯುಕ್ತ ಆಶ್ರಯದಲ್ಲಿ ಬುಧವಾರದಂದು ನಡೆದ ಸಂವಿಧಾನ ಸಮರ್ಪಣಾ ದಿನಾಚರಣೆ ಆಯೋಜಿಸಿದ್ದು, ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ ಹಾಗೂ ಅಂಬೇಡ್ಕರ್ ಅವರ ಪೋಟೋ ಮತ್ತು ಸಂವಿಧಾನ ಪೀಠಿಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ದೇಶದ ಏಕತೆ ಮತ್ತು ಸಮಗ್ರತೆಗಾಗಿ ಎಲ್ಲರಲ್ಲೂ ಸಹೋದರತೆ ಮೂಡಿಸುವುದಕ್ಕೆ ರಾಷ್ಟ್ರಕ್ಕೆ ಸಂವಿಧಾನ ಅರ್ಪಣೆಗೊಂಡಿರುತ್ತದೆ. ಇದರಿಂದ ದೇಶದ ಎಲ್ಲ ಪ್ರಜೆಗಳಿಗೆ ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯವನ್ನು, ವಿಚಾರ, ಅಭಿವ್ಯಕ್ತಿ, ನಂಬಿಕೆ, ಧರ್ಮ ಮತ್ತು ಉಪಾಸನೆಯ ಸ್ವಾತಂತ್ರ್ಯವನ್ನು ಸ್ಥಾನ–ಮಾನ ಮತ್ತು ಅವಕಾಶಗಳ ಸಮಾನತೆಯ ಅವಕಾಶ ಲಭಿಸಿದೆ ಎಂದರು. ಭಾರತೀಯರಾದ ಎಲ್ಲರೂ ವಿಶೇಷವಾಗಿ ವಿದ್ಯಾರ್ಥಿ, ಯುವ ಸಮುದಾಯ ಭಾರತದ ಮೂಲ ಪೀಠಿಕೆಯನ್ನು ಓದಿ ಅರ್ಥಮಾಡಿಕೊಂಡು ದೇಶದಲ್ಲಿ ಎಲ್ಲರೂ ಗೌರವ, ಘನತೆ,…

Read More

ತುಮಕೂರು:   ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಕರ್ನಾಟಕ ರಾಜ್ಯ ಸರ್ಕಾರವು 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ ಎಂದು ಎಐಡಿಎಸ್ ಓ ತುಮಕೂರು ಜಿಲ್ಲಾ ಸಮಿತಿ ಆರೋಪಿಸಿದೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗ್ರಾಮ ಪಂಚಾಯಿತಿಗೆ ಒಂದರಂತೆ ರಾಜ್ಯದಲ್ಲಿ 6,000 ಕೆಪಿಎಸ್ ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರವು ಹೊಂದಿದೆ. ಮೊದಲ ಹಂತದಲ್ಲಿ ರಾಜ್ಯದ 800 ಸರ್ಕಾರಿ ಶಾಲೆಗಳನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳೆಂದು ಗುರುತಿಸಲಾಗಿದೆ.( ಗಣಿಬಾಧಿತ ಜಿಲ್ಲೆಗಳಲ್ಲಿ 100, ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ 200 ಹಾಗೂ ಇತರೆ ಭಾಗದಲ್ಲಿ 500) ದಿ. 15/10/2025ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಈ ಕುರಿತು ಆದೇಶಿಸಲಾಗಿದೆ ಎಂದು ಅವರು ಹೇಳಿದರು. ಈ ಯೋಜನೆಯನ್ನು Pilot Project ಅಡಿ ಜಾರಿಗೊಳಿಸಲು ರಾಮನಗರದ ಚನ್ನಪಟ್ಟಣ ತಾಲೂಕಿನ ಹೊಂಗನೂರಿನ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಶಾಲೆಯೆಂದು ಗುರುತಿಸಲಾಗಿದೆ. ಹೊಂಗನೂರಿನಿಂದ 6 ಕಿಮೀ ವ್ಯಾಪ್ತಿಯೊಳಗಿರುವ, 77 ವಿದ್ಯಾರ್ಥಿಗಳಿರುವ ಹೊಡಿಕೆ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ, 82 ವಿದ್ಯಾರ್ಥಿಗಳಿರುವ ಕನ್ನಿ…

Read More

ಸರಗೂರು:  ಈ ಸಂವಿಧಾನವನ್ನು ಡಾ.ಬಿ.ಆರ್.ಅಂಬೇಡ್ಕರ್ ಅವರು ಸುದೀರ್ಘವಾಗಿ ಎಲ್ಲ ದೇಶದ ಸಂವಿಧಾನ ಅಧ್ಯಯನ ಮಾಡಿ ಭಾರತ ದೇಶಕ್ಕೆ ಬೇಕಾದಂತಹ ಎಲ್ಲಾ ಧರ್ಮ ಜಾತಿ ಮತಕ್ಕೆ ಬೇಕಾಗುವಂತ ಸಂವಿಧಾನವನ್ನು ರಚನೆ ಮಾಡದಿದ್ದರೆ,  ನಾವು ಸ್ವತಂತ್ರರಾಗಿ ಸಮಾನರಾಗಿ ಅರ್ಥಪೂರ್ಣವಾದ ಬದುಕನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಂಬೇಡ್ಕರ್ ಭವನ ಟ್ರಸ್ಟ್ ಅಧ್ಯಕ್ಷ ಎಸ್.ಡಿ.ಸಣ್ಣಸ್ವಾಮಿ ಎಂದರು. ಪಟ್ಟಣದ ನಾಲ್ಕನೇ ವಾರ್ಡಿನ ಅಂಬೇಡ್ಕರ್ ಭವನದಲ್ಲಿ ಬುಧವಾರದಂದು ಸಂವಿಧಾನ ಸಮರ್ಪಣಾ ದಿನವನ್ನು ಸಂವಿಧಾನ ಪೀಠಿಕೆ ಹಾಗೂ ಅಂಬೇಡ್ಕರ್ ರವರ ಪೋಟೋ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಭಾರತ ಸಂವಿಧಾನ ನವೆಂಬರ್ 26– 1949 ನೇ ದಿನದಂದು ಡಾ.ಬಿ.ಆರ್.ಅಂಬೇಡ್ಕರ್ ಅವರು ಭಾರತ ಸರ್ಕಾರಕ್ಕೆ ಅರ್ಪಣೆ ಮಾಡಿದ ದಿನದ ಅಂಗವಾಗಿ ನಾವು ಸಂವಿಧಾನ ಸಮರ್ಪಣ ದಿನ ಎಂದು ಆಚರಿಸುತ್ತೇವೆ ಎಂದರು. ಈ ಸಂವಿಧಾನವನ್ನು ಯಥಾವತ್ತಾಗಿ ಜಾರಿ ಮಾಡಿದರೆ, ಇಂದು ಭಾರತೀಯರೆಲ್ಲರೂ ಶ್ರೀಮಂತಿಕೆಯಿಂದ ಉತ್ತಮ ಜೀವನವನ್ನು ಮಾಡಬಹುದಿತ್ತು. ಆದರೆ ಅಂಬೇಡ್ಕರ್ ಅವರ ಸಂವಿಧಾನವನ್ನು ಸಂಪೂರ್ಣ ಜಾರಿ ಮಾಡಲು ಅಂದಿನ ಮತ್ತು ಇಂದಿನ ಸರಕಾರಗಳು ವಿಫಲವಾಗಿವೆ. ಹಾಗಾಗಿ…

Read More