Subscribe to Updates
Get the latest creative news from FooBar about art, design and business.
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
- ಜುಲೈ 28ರಂದು ಭಾರತ–ಜಪಾನ್ ಸಾಂಸ್ಕೃತಿಕ ವಿನಿಮಯ ಕಾರ್ಯಾಗಾರ
- ತಿಮ್ಮಮ್ಮನಹಳ್ಳಿ ಗುಂಪು ಘರ್ಷಣೆ: 7 ಮಂದಿ ಬಂಧನ
- ಕಾಡಂಚಿನ ಗ್ರಾಮದ ಸಾಧಕ ಜಾಕಿ ಪ್ರತಾಪ್ ಗೆ ‘ಅಮ್ಮ ವಸುಂಧರೆ’ ಪ್ರಶಸ್ತಿ ಗೌರವ
Author: admin
ಮಧುಗಿರಿ: ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಆಸರೆಯಾಗುವ ಉದ್ದೇಶದಿಂದ, ಇಲ್ಲಿನ ಶ್ರೀ ಸಿದ್ಧಾರ್ಥ ವಸತಿ ಪ್ರೌಢಶಾಲೆಯ 2006ನೇ ಸಾಲಿನ ಹಳೆಯ ವಿದ್ಯಾರ್ಥಿಗಳ ವತಿಯಿಂದ ಸತತ ಆರನೇ ವರ್ಷದ ಉಚಿತ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಇಂದು ಅತ್ಯಂತ ಅರ್ಥಪೂರ್ಣವಾಗಿ ಆಯೋಜಿಸಲಾಗಿತ್ತು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಶಾಲೆಯ 8ನೇ ತರಗತಿಗೆ ಹೊಸದಾಗಿ ದಾಖಲಾದ 100 ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಉಚಿತ ಸಮವಸ್ತ್ರಗಳನ್ನು ವಿತರಿಸಲಾಯಿತು. ಕಳೆದ ಐದು ವರ್ಷಗಳಿಂದ ನಿರಂತರವಾಗಿ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಈ ಹಳೆಯ ವಿದ್ಯಾರ್ಥಿಗಳ ಬಳಗ, ಈ ವರ್ಷ ಯಶಸ್ವಿಯಾಗಿ ಆರನೇ ವರ್ಷದ ಸೇವಾ ಕಾರ್ಯವನ್ನು ಪೂರೈಸಿದೆ. ಈ ಬಾರಿಯ ಕಾರ್ಯಕ್ರಮಕ್ಕೆ ವಿಶೇಷ ಕಳೆ ಬಂದಿದ್ದು ಜಪಾನಿನ ಅತಿಥಿಗಳ ಉಪಸ್ಥಿತಿಯಿಂದ. ಜಪಾನ್ ದೇಶದಿಂದ ಆಗಮಿಸಿದ್ದ ಕುಬೋಕಿ ಸಾನ್, ಸುಚಿಯಾ ಸಾನ್ ಹಾಗೂ ಐರಿ ಸಾನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿ ಶುಭ ಹಾರೈಸಿದರು. ಈ ಅಪೂರ್ವ ಕ್ಷಣ ಭಾರತ ಮತ್ತು ಜಪಾನ್ ದೇಶಗಳ…
ತಿಪಟೂರು: ಮತದಾರರ ಪಟ್ಟಿಯ ಶುದ್ಧೀಕರಣಕ್ಕೆ ವಿರೋಧವಿಲ್ಲ. ಆದರೆ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಇಆರ್) ಪ್ರಕ್ರಿಯೆ ಜಾರಿಯಾಗುತ್ತಿರುವ ವಿಧಾನದಿಂದ ಕೋಟ್ಯಂತರ ಅರ್ಹ ನಾಗರಿಕರ ಮತದಾನದ ಹಕ್ಕು ಕಸಿದುಕೊಳ್ಳುವ ಅಪಾಯ ಎದುರಾಗಿದೆ ಎಂದು ಜಾಗೃತ ಕರ್ನಾಟಕದ ಡಾ. ಹೆಚ್.ವಿ. ವಾಸು ಆತಂಕ ವ್ಯಕ್ತಪಡಿಸಿದರು. ಗಾಂಧಿ ನಗರದ ಮಸ್ಜಿದ್—ಎ–ಮಹಾಜರೀನ್, ಜನಸ್ಪಂದನ ಟ್ರಸ್ಟ್ ಹಾಗೂ ಸೌಹಾರ್ದ ತಿಪಟೂರು ಸಹಯೋಗದಲ್ಲಿ ಎಸ್ ಇಆರ್ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೂನ್ 30 ರಿಂದ ಮನೆ ಮನೆಗೆ ಅಧಿಕಾರಿಗಳು ತೆರಳಿ, ಎಸ್ ಇಆರ್ ಅರ್ಜಿಗಳನ್ನು ವಿತರಿಸಲಿದ್ದಾರೆ. ಈ ಹಿಂದೆ ಎಷ್ಟು ಬಾರಿ ಮತ ಚಲಾಯಿಸಿದ್ದವರೂ ಸೇರಿದಂತೆ, ಎಲ್ಲರೂ ಮತ್ತೆ ದಾಖಲೆಗಳನ್ನು ಸಲ್ಲಿಸಿ, ತಮ್ಮ ಪೌರತ್ವವನ್ನು ಸಾಬೀತುಪಡಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತದಲ್ಲಿ ಮತದಾನದ ಹಕ್ಕು ದೀರ್ಘ ಹೋರಾಟದ ಫಲವಾಗಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಎಲ್ಲಾ ಸಮುದಾಯಗಳ ತ್ಯಾಗದ ಪ್ರತಿಫಲವಾಗಿ ಸಂವಿಧಾನ ಜಾರಿಗೆ ಬಂದ ಮೊದಲ ದಿನದಿಂದಲೇ ಸಾರ್ವತ್ರಿಕ ಮತದಾನದ ಹಕ್ಕು ನೀಡಲಾಗಿದೆ. ಮಹಿಳೆಯರು, ದಲಿತರು, ಆದಿವಾಸಿಗಳು, ಅಲೆಮಾರಿ ಸಮುದಾಯಗಳು ಹಾಗೂ…
ತುಮಕೂರು: ರೈತರು ಕೇವಲ ಜಮೀನು ಅಥವಾ ಭೂಮಿಯನ್ನು ಹೊಂದಿರುವುದಷ್ಟೇ ಪ್ರಮುಖವಲ್ಲ. ತಮ್ಮ ಜಮೀನಿನ ಬಗ್ಗೆ ಕಾನೂನು ಅರಿವು, ಹಕ್ಕುಗಳು ಹಾಗೂ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣಾ ಯೋಜನೆಗಳ ದಾಖಲಾತಿಗಳ ಬಗ್ಗೆ ಸ್ಪಷ್ಟ ಜ್ಞಾನ ಹೊಂದಿರಬೇಕು. ತಮ್ಮ ಹಕ್ಕನ್ನು ತಾವೇ ಪಡೆದುಕೊಳ್ಳುವ ಸಾಮರ್ಥ್ಯ ಬಂದಾಗ ಮಾತ್ರ ಭೂ ಒಡೆತನಕ್ಕೆ ಸಾರ್ಥಕತೆ ಸಿಗುತ್ತದೆ ಎಂದು ನಿವೃತ್ತ ಕೆಎಎಸ್ ಅಧಿಕಾರಿ ಕೆ.ಎನ್.ಲಿಂಗಪ್ಪ ತಿಳಿಸಿದರು. ಸಿರಾ ತಾಲ್ಲೂಕಿನ ಗುಮ್ಮನಹಳ್ಳಿಯ ಲೋಹಿಯಾ ಸಮತಾ ವಿದ್ಯಾಲಯದಲ್ಲಿ ರೈತರಿಗಾಗಿ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ನಾಯಕತ್ವ ಶಿಬಿರದಲ್ಲಿ ‘ಭೂಮಿ ಮತ್ತು ಭೂ ಕಂದಾಯ ಕಾನೂನುಗಳು, ರೈತರ ಹಕ್ಕುಗಳು ಮತ್ತು ಪರಿಹಾರ’ ವಿಷಯದ ಕುರಿತು ಅವರು ಮಾತನಾಡಿದರು. ಭೂಕಂದಾಯ ಇತಿಹಾಸವು ಕೇವಲ ತೆರಿಗೆ ಸಂಗ್ರಹದ ಕಥೆಯಲ್ಲ, ಅದು ಸಮಾಜದ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ವಿಕಾಸದ ಪ್ರತಿಬಿಂಬವಾಗಿದೆ ಎಂದ ಲಿಂಗಪ್ಪ ಅವರು, ಆಧುನಿಕ ಯುಗದಲ್ಲಿ ತಂತ್ರಜ್ಞಾನದ ಆಗಮನದಿಂದಾಗಿ ಕಂದಾಯ ಆಡಳಿತದಲ್ಲಿ ಭಾರಿ ಬದಲಾವಣೆಯಾಗಿದೆ ಎಂದರು. “ಕರ್ನಾಟಕದಲ್ಲಿ ‘ಭೂಮಿ’ ಯೋಜನೆಯಂತಹ ಡಿಜಿಟಲೀಕರಣ ಉಪಕ್ರಮಗಳು ಭೂ…
ಕುಂದಾಪುರ (ಉಡುಪಿ): ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ವಿಶೇಷ ‘ಮಾಸ್ಟರ್ ಪ್ಲಾನ್’ (ಬೃಹತ್ ಯೋಜನೆ) ಸಿದ್ಧಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಅದನ್ನು ಕಾರ್ಯಗತಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಭಾನುವಾರ ತಮ್ಮ ಪತ್ನಿಯೊಂದಿಗೆ ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿದ್ದ ಅವರು, ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು. ದೇವಸ್ಥಾನದ ಹಿರಿಯ ಅರ್ಚಕರಾದ ನರಸಿಂಹ ಅಡಿಗ ಮತ್ತು ಸುಬ್ರಮಣ್ಯ ಅಡಿಗ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನೆರವೇರಿದವು. ಪೂಜೆಯ ಬಳಿಕ ದೇವಸ್ಥಾನದ ಆಡಳಿತ ಮಂಡಳಿಯು ಉಪಮುಖ್ಯಮಂತ್ರಿಗಳಿಗೆ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ಗೌರವಿಸಿತು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ. ಜಿ. ಪರಮೇಶ್ವರ್, “ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ವಿವಿಧೆಡೆಗಳಿಂದ ಬರುವ ಭಕ್ತಾದಿಗಳಿಗೆ ಸುಲಭ ದರ್ಶನ, ಸುಸಜ್ಜಿತ ಪಾರ್ಕಿಂಗ್ ಹಾಗೂ ವಸತಿ ಸೇರಿದಂತೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ,”…
ತುಮಕೂರು: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಮಾಡುವ ಹುಚ್ಚು ಎಷ್ಟರಮಟ್ಟಿಗೆ ಯುವಜನತೆಯನ್ನು ಕಾಡುತ್ತಿದೆ ಎಂದರೆ, ಪ್ರಾಣದ ಹಂಗು ತೊರೆದು ಅಪಾಯಕಾರಿ ಜಾಗಗಳಲ್ಲಿ ಸಾಹಸ ಮಾಡಲು ಮುಂದಾಗುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ತುಮಕೂರಿನಲ್ಲಿ ಮತ್ತೊಂದು ದುರ್ಘಟನೆ ಸಂಭವಿಸಿದೆ. ತುಮಕೂರು ತಾಲೂಕಿನ ಬಳ್ಳಾಪುರ ಮೂಲದ ಶಿವಪ್ರಸಾದ್ ಗಾಯಗೊಂಡ ದುರ್ದೈವಿ. ಇವರು ಪ್ರಸ್ತುತ ಅರಸೀಕೆರೆಯ ಪಿಯು ಕಾಲೇಜೊಂದರಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜೂನ್ 28ರ ಭಾನುವಾರ ರಜೆ ಇದ್ದ ಕಾರಣ ಶಿವಪ್ರಸಾದ್ ಅವರು ದೇವರಾಯನದುರ್ಗ ಬೆಟ್ಟಕ್ಕೆ ಭೇಟಿ ನೀಡಿದ್ದರು. ಈ ವೇಳೆ ದೇವರಾಯನದುರ್ಗದ ದೇವಸ್ಥಾನದ ಹಿಂಭಾಗದಲ್ಲಿರುವ ಅಪಾಯಕಾರಿ ಬಂಡೆಯನ್ನು ಹತ್ತಿ ಮೊಬೈಲ್ ನಲ್ಲಿ ರೀಲ್ಸ್ ಮಾಡಲು ಪ್ರಯತ್ನಿಸಿದ್ದಾರೆ. ಆದರೆ ದುರದೃಷ್ಟವಶಾತ್ ರೀಲ್ಸ್ ಮಾಡುವ ಗಡಿಬಿಡಿಯಲ್ಲಿ ಕಾಲು ಜಾರಿ ಬೆಟ್ಟದ ಮೇಲಿಂದ ಕೆಳಗೆ ಬಿದ್ದಿದ್ದಾರೆ. ಶಿವಪ್ರಸಾದ್ ಬೆಟ್ಟದಿಂದ ಕೆಳಗೆ ಬೀಳುತ್ತಿದ್ದಂತೆ ಸ್ಥಳದಲ್ಲಿದ್ದ ಪ್ರವಾಸಿಗರು ಮತ್ತು ಸ್ಥಳೀಯರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಅವರನ್ನು ರಕ್ಷಿಸಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದರೂ, ಅವರ ಎರಡೂ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ.…
ಪಾವಗಡ: 2028ರ ವಿಧಾನಸಭಾ ಚುನಾವಣೆಗೆ ಪಾವಗಡ ಕ್ಷೇತ್ರದಲ್ಲಿ ಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದ್ದು, ಸಮಾಜ ಸೇವಕ ಹಾಗೂ ಸ್ವತಂತ್ರ ಅಭ್ಯರ್ಥಿ ಚೇತನ್ ಬಾಬು ಅವರು ನೀಡಿದ ಭರವಸೆಯನ್ನು ಈಡೇರಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಳೆದ ವಾರ ಪಾವಗಡ ಬಸ್ ನಿಲ್ದಾಣಕ್ಕೆ ಭೇಟಿ ನೀಡಿದ್ದ ಚೇತನ್ ಬಾಬು ಅವರು, ಪ್ರಯಾಣಿಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿದ್ದರು. ಆಗಲೇ ಸಾರ್ವಜನಿಕರಿಗೆ “ನಾನು ಚೇರ್ ವ್ಯವಸ್ಥೆ ಮಾಡಿಕೊಡುತ್ತೇನೆ” ಎಂದು ಭರವಸೆ ನೀಡಿದ್ದರು. ನುಡಿದಂತೆ ನಡೆದ ಅವರು, ಭರವಸೆ ನೀಡಿದ ಒಂದು ವಾರದೊಳಗೆ ತಮ್ಮ ಸ್ವಂತ ಖರ್ಚಿನಲ್ಲಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುರ್ಚಿಗಳ ವ್ಯವಸ್ಥೆ ಮಾಡಿದ್ದಾರೆ. ಇಂದು ನಿಲ್ದಾಣದಲ್ಲಿ ಹೊಸ ಕುರ್ಚಿಗಳನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಈ ಸಂದರ್ಭದಲ್ಲಿ ಮಾತನಾಡಿದ ಚೇತನ್ ಬಾಬು, “ನಾನು ಪಾವಗಡದ ಬದಲಾವಣೆಗೆ ಬಂದಿದ್ದೇನೆ. ಜನರ ಸಣ್ಣಪುಟ್ಟ ಸಮಸ್ಯೆಗಳಿಗೂ ಸ್ಪಂದಿಸುವುದು ನನ್ನ ಆದ್ಯ ಕರ್ತವ್ಯ. ಮಾತು ಕೊಟ್ಟಂತೆ ನಡೆದುಕೊಳ್ಳುವುದು ನನ್ನ ಧ್ಯೇಯ” ಎಂದು ತಿಳಿಸಿದರು. ಚೇತನ್ ಬಾಬು ಅವರ ಈ…
ಪಾವಗಡ: ತಾಲೂಕಿನ ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಭಾನುವಾರ ವಿಜೃಂಭಣೆಯಿಂದ ಆಯೋಜಿಸಲಾಯಿತು. ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ CHOಗಳಾದ ಮೀನಾಕ್ಷಿ, ಶಂಕರ್ ಕಿರಣ್ ಅವರ ನೇತೃತ್ವದಲ್ಲಿ ಅಭಿಯಾನಕ್ಕೆ ಬೆಳಗ್ಗೆ ಚಾಲನೆ ನೀಡಲಾಯಿತು. 5 ವರ್ಷದೊಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆರೋಗ್ಯ ಸಿಬ್ಬಂದಿಗಳಾದ ನಿರಂಜನ್, ಶ್ರೀಹರಿ, ಹನುಮಂತು ಹಾಗೂ ಆಶಾ ಕಾರ್ಯಕರ್ತೆಯರು ಮನೆ–ಮನೆಗೆ ತೆರಳಿ ಮಕ್ಕಳಿಗೆ ಲಸಿಕೆ ಹಾಕಿದರು. ಬಸ್ ನಿಲ್ದಾಣದಲ್ಲಿ ವಿಶೇಷ ಲಸಿಕಾ ಬೂತ್ ತೆರೆದು ಪ್ರಯಾಣಿಕರ ಮಕ್ಕಳಿಗೂ ಹನಿ ಹಾಕಲಾಯಿತು. ಇದರೊಂದಿಗೆ ಅಂಗನವಾಡಿ ಕೇಂದ್ರ ಸೇರಿದಂತೆ ಪ್ರಮುಖ ಸ್ಥಳಗಳಲ್ಲೂ ಬೂತ್ ಗಳನ್ನು ತೆರೆಯಲಾಗಿತ್ತು. CHOಗಳು ಮತ್ತು ಆರೋಗ್ಯ ಸಿಬ್ಬಂದಿಯ ಶ್ರದ್ಧೆ, ಆಶಾ ಕಾರ್ಯಕರ್ತೆಯರ ಪರಿಶ್ರಮ ಹಾಗೂ ಸಾರ್ವಜನಿಕರ ಸಹಕಾರದಿಂದ ಅಭಿಯಾನ ಯಶಸ್ವಿಯಾಗಿ ನಡೆಯಿತು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ನಾಡಪ್ರಭು ಕೆಂಪೇಗೌಡರ ದೂರದೃಷ್ಟಿ, ಅವರ ಜನಪರ ಆಡಳಿತ ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದು ಶಾಸಕ ಬಿ.ಸುರೇಶ್ ಗೌಡ ತಿಳಿಸಿದರು. ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕಸಾಪ ಹಾಗೂ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣಾ ಸಮಿತಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿ ದಕ್ಷ ಆಡಳಿತಗಾರರಾಗಿ ಅವರು ಮಾಡಿದ ಅಭಿವೃದ್ಧಿ ಇಂದು ಬೆಂಗಳೂರನ್ನು ವಿಶ್ವ ಮಟ್ಟಕ್ಕೆ ಪರಿಚಯಿಸಿದೆ ಎಂದರು. ಕೇಂದ್ರ ಸರ್ಕಾರ ನಾಡಪ್ರಭು ಕೆಂಪೇಗೌಡರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ನಿಟ್ಟಿನಲ್ಲಿ ದೇವನಹಳ್ಳಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಟ್ಟು, ಅವರ 105 ಅಡಿ ಎತ್ತರದ ಮೂರ್ತಿ ಸ್ಥಾಪಿಸಿ, ಇಡೀ ವಿಶ್ವಕ್ಕೆ ಕೆಂಪೇಗೌಡರನ್ನು ಪರಿಚಯಿಸುವ ಕೆಲಸ ಮಾಡಿದೆ. ಅವರು ನೀರಾವರಿ, ನೀರಿನ ನಿರ್ವಹಣೆಗೆ ಕೈಗೊಂಡ ಪದ್ಧತಿಗಳೂ ಬೆಂಗಳೂರು ಗ್ರೀನ್ ಸಿಟಿಯಾಗಿ, ಐಟಿ-ಬಿಟಿ ಹಬ್ ಆಗಿ ಬೆಳೆಯಲು ಕಾರಣವಾಗಿದೆ. ಕುಲಕಸುಬಿನ ಆಧಾರದಲ್ಲಿ ವ್ಯಾಪಾರಕ್ಕೆ…
ಪಾವಗಡ: ತಾಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲಪುರ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದ ಸತ್ತಿ ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 150ಕ್ಕೂ ಅಧಿಕ ಮಂದಿ ವಾಂತಿ–ಭೇದಿಯಿಂದ ಅಸ್ವಸ್ಥರಾಗಿದ್ದಾರೆ. ಕಾರ್ಯಕ್ರಮದಲ್ಲಿ ಪಲಾವ್, ಬಾದುಷಾ, ಬಟಾಣಿ ಪಲ್ಯ, ಕೋಸಂಬರಿ, ಅನ್ನ–ಸಾಂಬಾರ್, ಮೊಸರು ಹಾಗೂ ಬಜ್ಜಿ ವಿತರಿಸಲಾಗಿತ್ತು. ರಾತ್ರಿ 10 ಗಂಟೆಯ ನಂತರ ಊಟ ಮಾಡಿದವರಲ್ಲಿ ಲಕ್ಷಣಗಳು ಕಾಣಿಸಿಕೊಂಡು, ಶುಕ್ರವಾರ ಬೆಳಗ್ಗಿನ ವೇಳೆಗೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಅಸ್ವಸ್ಥರಾದವರಲ್ಲಿ 40ಕ್ಕೂ ಹೆಚ್ಚು ಮಂದಿಯನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಏಳುಕ್ಕೂ ಹೆಚ್ಚು ಮಕ್ಕಳು ಸೇರಿದ್ದಾರೆ. ಉಳಿದವರಿಗೆ ಗ್ರಾಮದಲ್ಲೇ ಆರೋಗ್ಯ ಇಲಾಖೆಯ ಮೊಬೈಲ್ ಕ್ಲಿನಿಕ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿದ ಕೂಡಲೇ ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಶ್ ನೇತೃತ್ವದ ವೈದ್ಯರ ತಂಡ ಗ್ರಾಮಕ್ಕೆ ಭೇಟಿ ನೀಡಿ ಚಿಕಿತ್ಸೆ ಹಾಗೂ ಮೇಲ್ವಿಚಾರಣೆ ಕೈಗೊಂಡಿದೆ. ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ಆಹಾರ ಮತ್ತು ಕುಡಿಯುವ ನೀರಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಗ್ರಾಮಸ್ಥರು…
ಸರಗೂರು: ಕಸುಬಿಗೆ ತಕ್ಕಂತೆ ಪೇಟೆ, ಪಂಥಗಳಿಗೆ ತಕ್ಕಂತೆ ಗುಡಿಗೋಪುರ ಹಾಗೂ ವಸತಿಗೆ ತಕ್ಕಂತೆ ಕೆರೆ–ಕುಂಟೆಗಳನ್ನು ನಿರ್ಮಿಸಿ ಮಾದರಿ ನಗರ ನಿರ್ಮಾಣಕ್ಕೆ ಕಾರಣರಾದ ನಾಡಪ್ರಭು ಕೆಂಪೇಗೌಡರ ಜಾತ್ಯತೀತ ಮನೋಭಾವ ಎಲ್ಲರಿಗೂ ಸದಾ ಸ್ಮರಣೀಯ ಮತ್ತು ಆದರ್ಶಪ್ರಾಯ ಎಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಎಚ್.ಎನ್. ಸುದೀರ್ ತಿಳಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಒಕ್ಕಲಿಗರ ಸಂಘದ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ‘ಕೆಂಪೇಗೌಡ ಜಯಂತಿ’ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ಬೆಂಗಳೂರು ನಗರದ ನಿರ್ಮಾಣ ಮತ್ತು ಅಭಿವೃದ್ಧಿಗೆ ಕೆಂಪೇಗೌಡರು ನೀಡಿರುವ ಕೊಡುಗೆಗಳ ಬಗ್ಗೆ ಜನರಲ್ಲಿ, ಅದರಲ್ಲೂ ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕು ಎಂದರು. ಕೆಂಪೇಗೌಡರು ದೂರದೃಷ್ಟಿಯಿಂದ ಎಲ್ಲಾ ಸಮುದಾಯದವರೂ ಸಹಬಾಳ್ವೆಯಿಂದ ಜೀವಿಸುವಂತೆ ಅಂದೇ ವ್ಯವಸ್ಥೆ ಮಾಡಿದ್ದರು ಎಂದು ನೆನೆದರು. ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಎಂ.ಎಂ.ಕೆ.ಕಾಲೇಜಿನ ಉಪನ್ಯಾಸಕಿ ಮಹಾದೇವಿ ಮಾತನಾಡಿ, “ದೂರದೃಷ್ಟಿ ಹೊಂದಿದ್ದ ಕೆಂಪೇಗೌಡರು ಬೆಂಗಳೂರನ್ನು ವೈಜ್ಞಾನಿಕವಾಗಿ ಕಟ್ಟಿದರು. ಬೆಂಗಳೂರು ಕಟ್ಟಿದ ಕೆಂಪೇಗೌಡ…