Author: admin

ತುಮಕೂರು: ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ತುಮಕೂರು ನಗರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ತುಮಕೂರು ನಗರ ಬಿಜೆಪಿ ಶಾಸಕ ಜ್ಯೋತಿ ಗಣೇಶ್, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕೆಟ್ಟ ಕಾಂಗ್ರೆಸ್ ಸರ್ಕಾರವಿದ್ದು ಅದ್ರ ವಿರುದ್ಧ ತುಮಕೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಇಂದು ಮುಖ್ಯವಾಗಿ ಮೂರು ಪ್ರಮುಖ ಅಂಶಗಳನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಲಾಗಿದೆ ಅದರಲ್ಲಿ ಅಲ್ಪಸಂಖ್ಯಾತರಿಗೆ ಕರ್ನಾಟಕ ರಾಜ್ಯದಲ್ಲಿ ಗುತ್ತಿಗೆ ನೀಡುವ ವಿಚಾರದಲ್ಲಿ ನಾಲ್ಕು ಪರ್ಸೆಂಟ್ ಮೀಸಲಾತಿ ಕಲ್ಪಿಸುವುದನ್ನು ವಿರೋಧಿಸಲಾಗಿದೆ. ಅಲ್ಲದೆ ಬುಡಕಟ್ಟು ಹಾಗೂ ದಲಿತ ಸಮುದಾಯಕ್ಕೆ ಮೀಸಲಿಟ್ಟಿರುವ ಹಣವನ್ನು ಸರ್ಕಾರ ವರ್ಗಾವಣೆ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ತಿಳಿಸಿದರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಮಡಕಶಿರಾ: ಪಟ್ಟಣದಲ್ಲಿ ಬಂಜಾರ ಸಮುದಾಯದ ಆರಾಧ್ಯ ದೈವ ಸಂತ ಶ್ರೀ ಸೇವಾಲಾಲ್ ಮಹಾರಾಜ್ ಅವರ 286ನೇ ಜಯಂತಿಯನ್ನು ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಿಂದ ಆರಂಭವಾದ ಭಾವಚಿತ್ರದ ಮೆರವಣಿಗೆ ಸಾಯಿಬಾಬಾ ದೇವಸ್ಥಾನದ ಆವರಣದಲ್ಲಿ ಅಂತ್ಯಗೊಂಡಿತು. ಮೆರವಣಿಗೆಯ ಸಮಯದಲ್ಲಿ ಯುವಕರು ಸಂತ ಸೇವಾಲಾಲ್ ಮಹಾರಾಜ್ ಅವರ ಬಾವುಟಗಳನ್ನು ಹಿಡಿದು ಸಂಭ್ರಮಿಸಿದರು. ಮಹಿಳೆಯರು ಲಂಬಾಣಿ ಸಮುದಾಯದ ಪರಂಪರೆಯ ವೇಷಭೂಷಣಗಳಲ್ಲಿ ಭಾಗವಹಿಸಿ ಲಂಬಾಣಿ ನೃತ್ಯ ಪ್ರದರ್ಶಿಸಿದರು. ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಸೇವಾಲಾಲ್ ಮಹಾರಾಜರ ಭೋಗ್  ಹಾಗೂ ಭಾವಚಿತ್ರಕ್ಕೆ ಪುಷ್ವಾರ್ಚನೆ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಮಡಕಶಿರಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ.ಎಸ್.ರಾಜು ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ,  “ಲಂಬಾಣಿ ತಾಂಡಗಳಿಗೆ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಮನೆ ನೀರು ಮುಂತಾದವುಗಳನ್ನು ಒದಗಿಸಲು ನಾನು ಬದ್ಧನಾಗಿದ್ದೇನೆ. ಮಡಕಶಿರಾ ಪಟ್ಟಣದಲ್ಲಿ ಸಂತ ಸೇವಾಲಾಲ್ ಮಹಾರಾಜ್ ವೃತ್ತವನ್ನು ಶೀಘ್ರದಲ್ಲೇ ಘೋಷಣೆ ಮಾಡಲಾಗುವುದು. ಪ್ರತಿ ತಾಂಡಗಳಿಗೆ ಸ್ಮಶಾನ ಜಾಗ ಮಂಜೂರು ಮಾಡಿಸಲಾಗುವುದು ಜೊತೆಗೆ ಮಡಕಶಿರಾ ಕ್ಷೇತ್ರದ…

Read More

ತಿಪಟೂರು: ತಾಲೂಕಿನ ಕಸಬಾ ಹೋಬಳಿಯ ರಂಗಾಪುರ ಗ್ರಾಮ ಪಂಚಾಯಿತಿ ಮುಂದೆ ಕೆಲವರು ಪ್ರಚಾರ ಪಡೆಯಲೆಂದು ಕುಡಿಯುವ ನೀರಿನ ಮೋಟಾರ್ ಪಂಪ್ ಸೆಟ್ ಕಳ್ಳತನವಾಗಿದೆ ಎಂದು ಆರೋಪಿಸಿ ಪ್ರತಿಭಟಿಸಿದ್ದು, ಸತ್ಯಕ್ಕೆ ದೂರವಾದ ಸಂಗತಿ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೊಸಳ್ಳಿ ವಿಶ್ವನಾಥ್ ತಿಳಿಸಿದರು. ನಗರದ ಖಾಸಗಿ ಹೊಟೇಲ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್, ಇತ್ತೀಚೆಗೆ ನಮ್ಮ ರಂಗಾಪುರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳಿಗೆ ಸಹಕರಿಸಿದೆ ಎಂದು, ಸೋತ ಅಭ್ಯರ್ಥಿಗಳು ಮತ್ತು ಅಭಿವೃದ್ಧಿ ಸಹಿಸದೆ ಪ್ರಚಾರ ಪಡೆಯಲು ಕೆಲ ನಮ್ಮ ಪಂಚಾಯಿತಿಯ ಸದಸ್ಯರು ಇಲ್ಲಸಲ್ಲದ ಆರೋಪ ಮಾಡಿ ನನ್ನ ಮತ್ತು ಪಿಡಿಓ ಮೇಲೆ ಕುಡಿಯುವ ನೀರಿನ ಪಂಪ್ ಸೆಟ್ ಕಳ್ಳತನವಾಗಿದೆ ಎಂಬ ಆರೋಪಿಸಿ, ಪ್ರತಿಭಟನೆಗೆ ಮುಂದಾಗಿರುವುದು ಇವರ ಮನಸ್ಥಿತಿ ಯಾವ ಮಟ್ಟಿಗೆ ಇದೆ ಎಂಬುದು ನೀವೇ ಅರ್ಥೈಸಿಕೊಳ್ಳಿ. ಅಭಿವೃದ್ಧಿಗೆ ಅಡ್ಡಗಾಲು ಹಾಕಿ ಕರ್ತವ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಹೊಸಹಳ್ಳಿ ಗ್ರಾಮದಲ್ಲಿರುವ ಸುಮಾರು ಎರಡು ವರ್ಷದಿಂದ ನಿಷ್ಕ್ರಿಯವಾಗಿದ್ದ ಕುಡಿಯುವ ನೀರಿನ…

Read More

ಬೆಂಗಳೂರು: ಆನೇಕಲ್ ತಾಲೂಕಿನ ಪ್ರತಿಷ್ಠಿತ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ ತೇರು ಉರುಳಿಬಿದ್ದ ದುರಂತದಲ್ಲಿ ಗಾಯಗೊಂಡಿದ್ದ ಯುವತಿ ಭಾನುವಾರ ಮೃತಪಟ್ಟಿದ್ದಾಳೆ. ಮೃತಳನ್ನು ಜ್ಯೋತಿ (16) ಎಂದು ಗುರುತಿಸಲಾಗಿದೆ. ದುರ್ಘಟನೆ ನಡೆದ ದಿನ ಲೋಹಿತ್ ಎಂಬ ಯುವಕ ಸಾವನ್ನಪ್ಪಿದ್ದ ಇದೀಗ ಘಟನೆಯಲ್ಲಿ ಗಾಯಗೊಂಡಿದ್ದ ಯುವತಿ ಮೃತಪಟ್ಟಿದ್ದು, ಈ ಮೂಲಕ ಮೃತರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ. ಈ ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕ ರಾಕೇಶ್ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ಇದೀಗ ಮೃತಪಟ್ಟಿರುವ  ಜ್ಯೋತಿ ತನ್ನ ತಾಯಿ ಗಂಗಮ್ಮನೊಂದಿಗೆ ಜಾತ್ರೆಯಲ್ಲಿ ಗೊಂಬೆ ಮಾರಾಟ ಮಾಡಲು ಬಂದಿದ್ದಳು ಎಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಸರ್ಕಾರಿ ಗುತ್ತಿಗೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.4ರಷ್ಟು ಮೀಸಲಾತಿ ನೀಡಿರುವ ಸರ್ಕಾರದ ನಿಲುವುದನ್ನು ಬೆಂಬಲಿಸಬೇಕೆ ಅಥವಾ ವಿರೋಧಿಸ ಬೇಕೆ ಎನ್ನುವ ಬಗ್ಗೆ ಜೆಡಿಎಸ್ ಗೊಂದಲದಲ್ಲಿದೆ. ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಹಿನ್ನೆಲೆ ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಜೆಡಿಎಸ್ ಬೆಂಬಲಿಸಬೇಕೇ? ಬೇಡವೇ ಎನ್ನುವ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಇಂದು ನವದೆಹಲಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ,  ಸಚಿವ ಹೆಚ್.ಡಿ.ಕುಮಾರಸ್ವಾಮಿ ಪಕ್ಷದ ನಿಲುವನ್ನು ಸ್ಪಷ್ಟಪಡಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. ಮೀಸಲಾತಿ ಮಸೂದೆಯಲ್ಲಿ ಕುಮಾರಸ್ವಾಮಿ ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆಯಿದೆ  ಎನ್ನುವ ಅಭಿಪ್ರಾಯವಿದೆ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ..ಬಿ ಸುರೇಶ್ ಬಾಬು ಅವರು ಮಾತನಾಡಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ 2 ಬಿ ಅಡಿಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಸಿಗುವಂತೆ ಮಾಡಿದ್ದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ. ಆದರೆ, ಚುನಾವಣೆ ವೇಳೆ ಆ ಸಮುದಾಯ ಪಕ್ಷಕ್ಕೆ ಬೆಂಬಲ ನೀಡಿಲ್ಲ. ಸೋಮವಾರ ದೇವೇಗೌಡ ಹಾಗೂ ಕುಮಾರಸ್ವಾಮಿ ಈ ಬಗ್ಗೆ ಚರ್ಚೆ ನಡೆಸಲಿದ್ದು, ನಂತರ ಪಕ್ಷದ ನಿಲುವನ್ನು ಸ್ಪಷ್ಟಪಡಿಸಲಿದ್ದಾರೆಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಸಹಾರನ್ ​ಪುರ: ಬಿಜೆಪಿ ನಾಯಕನೊಬ್ಬ  ಪತ್ನಿ ಹಾಗೂ ಮೂವರು ಮಕ್ಕಳ ಮೇಲೆ ಗುಂಡು ಹಾರಿಸಿರುವ ಘಟನೆ ಉತ್ತರ ಪ್ರದೇಶದ ಸಹಾರನ್ ​ಪುರದಲ್ಲಿ ನಡೆದಿದೆ. ಗುಂಡಿನ ದಾಳಿಯ ಪರಿಣಾಮ  ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, ಮತ್ತೋರ್ವ ಮಗ ಹಾಗೂ ಪತ್ನಿಯ ಸ್ಥಿತಿ ಗಂಭೀರವಾಗಿದೆ. ಪತ್ನಿ ಮೇಲೆ ಅನುಮಾನ ಹೊಂದಿದ್ದ ಯೋಗೇಶ್​ ನಿತ್ಯ ಅವರೊಂದಿಗೆ ಜಗಳವಾಡುತ್ತಿದ್ದ ಎನ್ನಲಾಗಿದೆ. ಇದೇ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ಗಂಗೋ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ನಾಯಕ ಯೋಗೇಶ್ ರೋಹಿಲ್ಲಾ ಆರೋಪಿಯಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದು, ಕೃತ್ಯಕ್ಕೆ  ಬಳಸಲಾದ ಪಿಸ್ತೂಲ್ ಅನ್ನು ಸಹ ವಶಪಡಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಚಲಿಸುತ್ತಿದ್ದ ಬೈಕ್ ಮೇಲೆ  ಮರ ಬಿದ್ದ ಪರಿಣಾಮ 3 ವರ್ಷದ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ನಡೆದಿದೆ. ಮೂರು ವರ್ಷದ ರಕ್ಷಾ ತನ್ನ ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿ ಮರ ಬಿದ್ದಿದೆ. ಪರಿಣಾಮ ಬೈಕ್ ನಲ್ಲಿ ಮುಂಭಾಗದಲ್ಲಿ ಕುಳಿತ್ತಿದ್ದ ರಕ್ಷಾ ತಲೆ ಮೇಲೆಯೇ ಮರದ ತುಂಡು ಬಿದ್ದು ತೀವ್ರ ರಕ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾಳೆ. ಕಮ್ಮನಹಳ್ಳಿ ಬಳಿಯ ಕುಳ್ಳಪ್ಪ ಸರ್ಕಲ್ ನಿವಾಸಿಗಳಾದ ಶಕ್ತಿ ಮತ್ತು ಸತ್ಯ ದಂಪತಿಯ 3ವರ್ಷದ ಮಗು ರಕ್ಷಾ ಪ್ರಾಣಕಳೆದುಕೊಂಡ ಬಾಲಕಿಯಾಗಿದ್ದಾಳೆ. ಆಸ್ಪತ್ರೆಗೆ ಬಿಬಿಎಂಪಿ ಪೂರ್ವವಲಯದ ಜಂಟಿ ಆಯುಕ್ತೆ ಸರೋಜಾದೇವಿ, ಬಿಬಿಎಂಪಿ ಅರಣ್ಯ ಘಟಕದ ಮುಖ್ಯಸ್ಥರಾರ ಸ್ವಾಮಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್ : ಔರಾದ್ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ 1 ಲಕ್ಷ ರೂ. ಭದ್ರತೆಯ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಪ್ರಕರಣದ ವಿವರ : ಔರಾದ್ ಶಾಸಕ ಪ್ರಭು ಚವ್ಹಾಣ್ ಅವರು ನಕಲಿ ದಾಖಲೆ ಸೃಷ್ಟಿಸಿ ಬೀದರ್ ತಾಲ್ಲೂಕಿನ ಕಪಲಾಪುರ್ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಕೊಳಾರ(ಬಿ) ಗ್ರಾಮದ ಸರ್ವೇ ಸಂಖ್ಯೆ 102 ರಲ್ಲಿ ಬರುವ 3 ಎಕರೆ 19 ಗುಂಟೆ ಸರ್ಕಾರಿ ಜಮೀನು ನಕಲಿ ದಾಖಲೆ ಸೃಷ್ಟಿ ಮಾಡಿ, ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಔರಾದ್ ತಾಲ್ಲೂಕಿನ ಚಾಂದೋರಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ಅವರು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಚವ್ಹಾ ಣ್ ಜತೆಗೆ ಜಿಲ್ಲಾಧಿಕಾರಿ, ಉಪ…

Read More

ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ  ನಡೆದಿದೆ. ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದ ವಿಘ್ನೇಶ್(18) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಈತ ಮೊದಲ ವರ್ಷದ ಐಟಿಐ ಓದುತ್ತಿದ್ದ. ನಾಲ್ಕು ವರ್ಷದ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ವಿಘ್ನೇಶ್ 17 ಹಲ್ಲುಗಳನ್ನ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದಾ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಇದೀಗ, ಮನನೊಂದು ವಿಘ್ನೇಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕನ್ನಡದ ಮಾಣಿಕ್ಯ ಚಿತ್ರದ ನಟಿ ವರಲಕ್ಷ್ಮೀ ಶರತ್ ಕುಮಾರ್ ಅವರು ತಮಗೆ ಬಾಲ್ಯದಲ್ಲಿ ನಡೆದ ಲೈಂಗಿಕ ಕಿರುಕುಳವನ್ನು ನೆನೆದು ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ಡ್ಯಾನ್ಸ್ ಜೋಡಿ ಡ್ಯಾನ್ಸ್ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಆಗಮಿಸಿರುವ ವರಲಕ್ಷ್ಮೀ ಅವರು, ಮಹಿಳಾ ಸ್ಪರ್ಧಿಯೊಬ್ಬರು ತಾವು ಎದುರಿಸಿದ ಕಹಿ ಅನುಭವಗಳ ಬಗ್ಗೆ ಡ್ಯಾನ್ಸ್ ಮೂಲಕ ತೋರಿಸಿದ್ದಾರೆ. ಇದನ್ನು ಕಂಡು ಭಾವುಕರಾದ ವರಲಕ್ಷ್ಮೀ ಅವರು ಬಾಲ್ಯದಲ್ಲಿ ನಾನು ಕೂಡ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ನನ್ನ ಕಥೆಯೂ ನಿನ್ನ ಕಥೆಯೂ ಒಂದೇ ಎಂದಿದ್ದಾರೆ. ಪೋಷಕರು ಅವರ ಕೆಲಸದಲ್ಲಿದ್ದ ಕಾರಣ ನಾನು ಚಿಕ್ಕವಳಿದ್ದಾಗ ನನ್ನನ್ನು ಬೇರೆಯವರ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು. ಆಗ 5ರಿಂದ 6 ಜನ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು. ನಿನ್ನ ಸ್ಟೋರಿ ನನ್ನ ಸ್ಟೋರಿ ಎರಡು ಒಂದೆ ಎಂದು ಅವರು ಭಾವುಕರಾದರು. ಅಲ್ಲದೇ ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ಪೋಷಕರಿಗೆ ನಟಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More