Author: admin

ಬೆಂಗಳೂರು: ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿಯ ವಿರೋಧ ಹಾಗೂ ಸಂಸದ ಯದುವೀರ್ ಅವರ ಹೇಳಿಕೆಗೆ ಅವರು ಪ್ರತಿಕ್ರಿಯಿಸಿದರು. ಯದುವೀರ್ ಅವರು ಈಗ ಬಿಜೆಪಿ ಜೊತೆ ಸೇರಿಕೊಂಡು ಬಿಟ್ಟಿದ್ದಾರಲ್ಲ, ಆದ ಕಾರಣಕ್ಕೆ ಇತಿಹಾಸ ಮರೆತು ಬಿಟ್ಟಿದ್ದಾರೆ ಎಂದು ಡಿಕೆಶಿ ಟೀಕಿಸಿದರು. ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ನವದೆಹಲಿ: ಮೈಸೂರು ಚಾಮುಂಡಿ ಬೆಟ್ಟದ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿ ಕರ್ನಾಟಕ ಸರ್ಕಾರವನ್ನು ಅದರಲ್ಲೂ ನಿರ್ದಿಷ್ಟವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು. ಚಾಮುಂಡಿಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಎಂದು ಶಿವಕುಮಾರ್ ಹೇಳುತ್ತಾರೆ. ಇತ್ತೀಚೆಗೆ ಅವರು ವಿಧಾನಸಭಾ ಆಧಿವೇಶನದಲ್ಲಿ ಆರೆಸ್ಸೆಸ್ ಪ್ರಾರ್ಥನಾ ಗೀತೆಯನ್ನು ಹಾಡಿ ವಿವಾದ ಸೃಷ್ಟಿಸಿದ್ದರು, ಆದರೆ ಅವರು ಹಾಗೆ ಮಾಡಿದ್ದು ದೆಹಲಿಯಲ್ಲಿರುವ ವರಿಷ್ಠರನನ್ನು ಕೆರಳಿಸಿತ್ತು ಎಂದು ಹೇಳಿದರು. ಹೈಕಮಾಂಡ್ ಗಮನ ಆ ವಿಷಯದಿಂದ ಬೇರೆಡೆ ಸೆಳೆಯಲು ಶಿವಕುಮಾರ್ ಚಾಮುಂಡಿ ಬೆಟ್ಟ ಹಿಂದೂಗಳಿಗೆ ಮಾತ್ರ ಸೇರಿದ್ದಲ್ಲ ಅಂತ ಹೇಳಿದ್ದಾರೆ, ಅವರ ಮಾತಿನ ಅರ್ಥವೇನು ಎಂದು ಕಿಡಿಕಾರಿದ್ದಾರೆ. ಚಾಮುಂಡಿ ತಾಯಿ ಈ ನಾಡಿನ ಹಿಂದೂಗಳ ಪಾಲಿನ ಅಧಿದೇವತೆ, ಪೂಜನೀಯಳು, ದಸರಾ ಸಮಯದಲ್ಲಿ ಚಾಮುಂಡಿಗೆ ಪೂಜೆ ಮಾಡಿಯೇ ಮುನ್ನುಡಿ ಇಡಲಾಗುತ್ತದೆ. ತಮ್ಮ ಹೈಕಮಾಂಡ್ ನ್ನು ಸಮಾಧಾನಗೊಳಿಸಲು, ಖುಷಿಪಡಿಸಲು ಡಿ ಕೆ ಶಿವಕುಮಾರ್ ಈ ರೀತಿ ಹೇಳಿಕೆ ನೀಡಿದ್ದಾರೆ…

Read More

ಬೆಂಗಳೂರು:  ಚಾಮುಂಡೇಶ್ವರಿ ತಾಯಿ ನಮ್ಮ ನಾಡಿನ ಅಧಿದೇವತೆ. ಈ ತಾಯಿಯನ್ನು ಆರಾಧಿಸುವವರು, ನಂಬುವವರು, ಗೌರವಿಸುವವರು ಎಲ್ಲ ಜಾತಿ, ಧರ್ಮಗಳಲ್ಲೂ ಇದ್ದಾರೆ. ಆಕೆಯ ದರ್ಶನ ಎಲ್ಲರ ಹಕ್ಕು. ತಾಯಿ ಎಲ್ಲ ಭಕ್ತರ, ನಾಡಿನ ಎಲ್ಲ ಮಕ್ಕಳ ಆಸ್ತಿ, ಯಾರೊಬ್ಬರಿಗೂ ಸೀಮಿತ ಅಲ್ಲ. ತಾಯಿಯನ್ನು ಪೂಜಿಸಿದರೆ ಯಾರೂ ಬೇಡ ಅನ್ನಲು ಆಗುವುದಿಲ್ಲ. ಇದೇ ನನ್ನ ಮಾತಿನ ಸತ್ವ. ವಿವಾದ ಮಾಡೋದು ಬಿಜೆಪಿ ತತ್ವ! ಎಂದು ಬಿಜೆಪಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆ ವಿಚಾರದಲ್ಲಿ ಬಿಜೆಪಿಯ ವಿರೋಧಗಳ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮ, ಸಮಾಜದವರಿಗೂ ಪ್ರವೇಶವಿದೆ. ಎಲ್ಲರೂ ಬೆಟ್ಟಕ್ಕೆ ಹೋಗುತ್ತಾರೆ. ದೇವಿಯ ಪ್ರಾರ್ಥನೆ ಮಾಡುತ್ತಾರೆ. ಎಲ್ಲರ ನೋವನ್ನು ದೂರ ಮಾಡುವಳು ನಮ್ಮ ದುರ್ಗಾ ದೇವಿ ಎಂದಿದ್ದಾರೆ. ನಾಡ ಹಬ್ಬ ದಸರಾವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಜನ ಬರುತ್ತಾರೆ. ಇದಕ್ಕೆ ನಮ್ಮ ರಾಜ ವಂಶಸ್ಥರೇ ಅನುಮತಿ ನೀಡಿ…

Read More

ದಾವಣಗೆರೆ: ಕೋಳಿಯೊಂದು ನೀಲಿ ಬಣ್ಣದ ಮೊಟ್ಟೆ ಇಟ್ಟು ಅಚ್ಚರಿ ಮೂಡಿಸಿದ ಘಟನೆ ಚನ್ನಗಿರಿಯ ನಲ್ಲೂರ ಗ್ರಾಮದಲ್ಲಿ ನಡೆದಿದೆ. ಸೈಯದ್ ನೂರ್ ಎಂಬವರಿಗೆ ಸೇರಿದ ನಾಟಿ ಕೋಳಿ ನೀಲಿ ಬಣ್ಣದ ಮೊಟ್ಟೆ ಇಟ್ಟಿದೆ. ಸೈಯದ್ ಮನೆಯಲ್ಲಿ ಹತ್ತು ಕೋಳಿಗಳಿವೆ. ಇದರಲ್ಲಿ ಒಂದು ಕೋಳಿ ಇದ್ದಕ್ಕಿದ್ದಂತೆ ನೀಲಿ ಬಣ್ಣದ ಮೊಟ್ಟೆ ಇಟ್ಟಿದೆ. ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಮೊಟ್ಟೆಯನ್ನು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.  ಈ ಬಗ್ಗೆ ಪ್ರತಿಕ್ರಿಯಿಸಿರುವ ಚನ್ನಗಿರಿ ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಅಶೋಕ, ಮೆದೊಜೀರಕಾಂಗದಲ್ಲಿ ಬಿಲಿವರ್ಡಿನ್ ಎಂಬ ವರ್ಣ ದ್ರವ್ಯದ ಕಾರಣಕ್ಕೆ ನೀಲಿ ಬಣ್ಣ ಬಂದಿರುವ ಸಾಧ್ಯತೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಮೊಟ್ಟೆಯ ಮೇಲ್ಭಾಗ ಮಾತ್ರ ನೀಲಿ. ಉಳಿದಂತೆ ಮೊಟ್ಟೆ ಮಾಮೂಲಾಗಿ ಇರುತ್ತದೆ. ಹೀಗೆ ನಿರಂತರವಾಗಿ ನೀಲಿ ಮೊಟ್ಟೆ ಹಾಕಿದ್ದರೇ ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಹಾಸನ: ದಸರಾ ಉದ್ಘಾಟನೆಗೆ ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ ಎಂದು ಸಾಹಿತಿ ಬಾನು ಮುಷ್ತಾಕ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ತಾಯಿ ನನ್ನನ್ನು ಕರೆಸಿಕೊಳ್ಳುತ್ತಿದ್ದಾರೆ. ನಾನು ರಾಜ್ಯದ ಜನತೆ ಹಾಗೂ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು. ಸಂಸದ ಯದುವೀರ ಅವರು ಸ್ವಾಗತ ಮಾಡಿದ್ದಾರೆ. ಅವರಂತಹ ಸಂಸದರು ಹೆಚ್ಚಾಗಲಿಯೆಂದು ಆಶಿಸುತ್ತೇನೆ. ಬಿಜೆಪಿಯವರು ಮಾಡುವ ಟೀಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಅವರ ಟೀಕೆಗಳ ಬಗ್ಗೆ ನಾನು ಬೇಜಾರು ಮಾಡಿಕೊಳ್ಳುವುದಿಲ್ಲ. ಯಾವುದಕ್ಕೆ ಟೀಕೆ ಮಾಡಬೇಕು, ಮಾಡಬಾರದೆಂಬ ತಿಳುವಳಿಕೆ ಕಾಂಗ್ರೆಸ್–ಬಿಜೆಪಿ ಪಕ್ಷದವರಿಗೆ ಇರಬೇಕು ಎಂದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ಕೇಸರಿ ಶಾಲು ಧರಿಸಿದ್ದಕ್ಕೆ ಟ್ರಾವಲ್ಸ್ ನ ಕೂಲಿ ಕಾರ್ಮಿಕ ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಕಿಡಿಗೇಡಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಲಾಸಿಪಾಳ್ಯ ಬಸ್‌‍ ನಿಲ್ದಾಣದ ಎ.ವಿ ರಸ್ತೆಯ ರಾಯಲ್‌ ಟ್ರಾವಲ್ಸ್ ಕಚೇರಿ ಬಳಿ ಕಳೆದ ರಾತ್ರಿ 9.30ರಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಗುರಪ್ಪನಪಾಳ್ಯದ ಅಜೀತ್‌ಖಾನ್‌ (37), ನಾಗವಾರಪಾಳ್ಯದ ತಬ್ರೇಜ್‌ (30) ಹಾಗೂ ಬನಶಂಕರಿಯ ಇಬ್ರಾನ್‌ ಖಾನ್‌(36) ಎಂಬುವವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಟ್ರಾವಲ್ಸ್ ಸಿಬ್ಬಂದಿ ಹರಿಕೃಷ್ಣ ಮತ್ತು ಕೂಲಿ ಕಾರ್ಮಿಕ ಸ್ಲಿಂಧರ್‌ ಕುಮಾರ್‌ ಎಂಬುವವರ ಮೇಲೆ ಹಲ್ಲೆ ನಡೆಸಿ ಆರೋಪಿಗಳು ಬೆದರಿಕೆ ಹಾಕಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ರಾತ್ರಿ ಟ್ರಾವಲ್ಸ್ ಬಳಿ ಬಿಹಾರ ಮೂಲದ ಸ್ಲಿಂಧರ್‌ ಕುಮಾರ್‌ ಕೇಸರಿ ಶಾಲು ಹಾಕಿಕೊಂಡು ಕೆಲಸ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಆರೋಪಿಗಳು ನೀನು ಕೇಸರಿ ಶಾಲು ಹಾಕಿಕೊಂಡಿರುವುದು ಏಕೆ. ಅದನ್ನು ತೆಗೆದುಹಾಕು ಎಂದು ಬೆದರಿಸಿದ್ದಾರೆ. ಈ ವೇಳೆ ಮಾತಿನ ಚಕಮಕಿ…

Read More

ಬೆಂಗಳೂರು: ಎಂದು ಆರ್‌ ಎಸ್‌ ‍ಎಸ್‌‍ ನ ಪ್ರಾರ್ಥನೆ ಮಾಡಿದ್ದು, ತಪ್ಪಾಗಿದ್ದರೆ ಪಕ್ಷದ ಕಾರ್ಯಕರ್ತರು, ಮುಖಂಡರು, ಇಂಡಿಯಾ ರಾಜಕೀಯ ಕೂಟದ ಮುಖಂಡರ ಕ್ಷಮೆ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತ ಪ್ರಕರಣದ ಕುರಿತು ಚರ್ಚೆ ನಡೆಯುತ್ತಿದ್ದಾಗ ನಾನು ವಿರೋಧ ಪಕ್ಷದ ನಾಯಕ ಆರ್‌.ಆಶೋಕ್‌ ಅವರ ಹಿನ್ನೆಲೆಯನ್ನು ಹೇಳುವ ಸಲುವಾಗಿ ನಮಸ್ತೆ ಸದಾ ವತ್ಸಲೆ ಎಂದು ಹಾಡಿದ್ದೇನೆ. ಇದರಲ್ಲಿ ಆರ್‌ ಎಸ್‌ ‍ಎಸ್‌‍ ಅನ್ನು ಹೊಗಳುವ ಉದ್ದೇಶ ಇರಲಿಲ್ಲ ಎಂದಿದ್ದಾರೆ. ನನ್ನ ಜೀವನ ಕಾಂಗ್ರೆಸ್‌‍ ಕಾರ್ಯಕರ್ತರ ಬದುಕಿಗೆ ಮೆಟ್ಟಿಲು ಆಗಬೇಕೆ ಹೊರತು, ಭಾವನೆಗಳಿಗೆ ಧಕ್ಕೆಯಾಗಬಾರದು. ನಮ ಪಕ್ಷದ ಹಿರಿಯ ನಾಯಕರುಗಳು ದೊಡ್ಡ ದೊಡ್ಡ ಸಲಹೆಗಳನ್ನು ನೀಡಿದ್ದಾರೆ. ಅದನ್ನು ಗೌರವಿಸುತ್ತೇನೆ. ಆದರೆ ಮಾಧ್ಯಮಗಳಲ್ಲಿ ಮಾತನಾಡುವುದರಿಂದ ಯಾವುದೇ ಪ್ರಯೋಜನವಿಲ್ಲ. ನೇರವಾಗಿ ಕಾಂಗ್ರೆಸ್‌‍ ಕಚೇರಿಗೆ ಬನ್ನಿ, ಸಭೆ ಮಾಡಿ ಚರ್ಚಿಸಿ ಎಂದು ಮನವಿ ಮಾಡಿದರು. ಎಲ್ಲರಿಗಿಂತ ದೊಡ್ಡವನೆಂಬ ಭಾವನೆ ನನಗೆ ಇಲ್ಲ. ಯಾರೇ ಸಲಹೆ ನೀಡಿದ್ದರೂ ಸ್ವೀಕರಿಸುತ್ತೇನೆ.…

Read More

ಬೆಂಗಳೂರು: ರೌಡಿ ಶಿವಪ್ರಕಾಶ್‌ ಅಲಿಯಾಸ್‌‍ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಜಗದೀಶ್‌ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಲುಕ್‌ ಔಟ್‌ ನೋಟೀಸ್‌‍ ಜಾರಿಯಾದ ಹಿನ್ನೆಲೆಯಲ್ಲಿ ದೆಹಲಿ ಏರ್‌ ಪೋರ್ಟ್‌ನಲ್ಲಿ ಆರೋಪಿ ಜಗದೀಶ್‌ ಅಲಿಯಾಸ್‌‍ ಜಗ್ಗನನ್ನು ವಶಕ್ಕೆ ಪಡೆದುಕೊಂಡು ನಗರಕ್ಕೆ ಕರೆತಂದಿದ್ದಾರೆ. ಭಾರತಿನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ಬಿಕ್ಲು ಶಿವ ಹತ್ಯೆಯಾದ ನಂತರ ಆರೋಪಿ ಜಗದೀಶ್‌ ತಲೆಮರೆಸಿ ಕೊಂಡಿದ್ದನು. ಆತನ ಬಂಧನಕ್ಕೆ ವಿಶೇಷ ತಂಡಗಳನ್ನು ರಚಿಸಲಾಗಿತ್ತು. ಈ ತಂಡಗಳು ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿದಂತೆ ಹಲವು ಕಡೆಗಳಲ್ಲಿ ಶೋಧ ನಡೆಸುತ್ತಿದ್ದರೂ ಆತನ ಸುಳಿವು ಸಿಕ್ಕಿರಲಿಲ್ಲ. ಆತ ಚನ್ನೈ ಮೂಲಕ ದುಬೈಗೆ ಪರಾರಿಯಾಗಿದ್ದಾನೆಂಬ ಮಾಹಿತಿ ಲಭ್ಯವಾಗಿತ್ತು. ಬಳಿಕ ಲುಕ್‌ ಔಟ್‌ ನೋಟೀಸ್‌‍ ಜಾರಿಮಾಡಲಾಗಿತ್ತು.ದೆಹಲಿ ಏರ್‌ ಪೋರ್ಟ್‌ನಲ್ಲಿ ಕಾಣಿಸಿಕೊಂಡ ಜಗ್ಗನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದು ಸಿಐಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯನ್ನು ಆಧರಿಸಿ ಸಿಐಡಿ ಅಧಿಕಾರಿಗಳು ತಕ್ಷಣ ದೆಹಲಿಗೆ ತೆರಳಿ ಇಂದು ಮುಂಜಾನೆ ಆತನನ್ನು…

Read More

ತಿಪಟೂರು: ಕಲ್ಪತರು ತಾಂತ್ರಿಕ ವಿದ್ಯಾಲಯ ಹಾಗೂ ತುಮಕೂರಿನ ಇನ್ನೋವೇಶನ್ ಮತ್ತು ಎಂಟರ್ ಫ್ರೀ ಇನರ್ಶಿಪ್ ಕೌನ್ಸಿಲಿಂಗ್ ಸಹಯೋಗದೊಂದಿಗೆ ಉದ್ಯಮಶೀಲತೆಯ ವೃತ್ತಿಗಳಿಗೆ ಅವಕಾಶಗಳ ಮಹಾಸಾಗರ ಎಂಬ ಜಾಗೃತಿ ಕಾರ್ಯಕ್ರಮವನ್ನು ಅಕ್ಟೋಬರ್ 29ರಂದು ಕೆಐಟಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಲ್ಪತರು ವಿದ್ಯಾ ಸಂಸ್ಥೆಯ ಕಲ್ಪತರು ವಿದ್ಯಾ ಸಂಸ್ಥೆಯ ಖಜಾಂಚಿ ಟಿ.ಎಸ್.ಶಿವಪ್ರಸಾದ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಪತರು ಸಂಸ್ಥೆ ಅಡಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಶಾಲಾ ಕಾಲೇಜುಗಳು ಇದರಲ್ಲಿ ಭಾಗವಹಿಸುತ್ತಿದ್ದು, ಮಿಷನ್ 2035 ದೀರ್ಘಾವಧಿ ತಂತ್ರ ಯೋಜನೆಯನ್ನು ಅನುಸರಿಸುತ್ತಿದೆ, ಸ್ಮಾರ್ಟ್ ಆಪ್ ಗಳು ಇಂಕ್ಯುಬೇಷನ್ ಕೇಂದ್ರಗಳು ಸಂಶೋಧನೆಗಳು ಯೋಜನೆಗಳು ಅನುದಾನಗಳು ಹಾಗೂ ಹೂಡಿಕೆಗೆ ಅವಕಾಶಗಳತ್ತ ವಿಶೇಷ ಗಮನ ನೀಡಲಾಗುವುದು ಎಂದರು. ಇದಕ್ಕಾಗಿ ಈಗಾಗಲೇ 90 ಲಕ್ಷ ರೂ. ವೆಚ್ಚದಲ್ಲಿ ಐಡಿಯಾ ಲ್ಯಾಬ್ ಪ್ರಾರಂಭಿಸಿದ್ದು, ಮುಂಬರುವ ದಿನಗಳಲ್ಲಿ ಇಂಕ್ಟಿವೇಶನ್ ಕ್ವಾಟಮ್ ಕಂಪ್ಯೂಟರ್ ಸೆಕ್ಯೂರಿಟಿ ಕೇಂದ್ರಗಳು ಮುಂತಾದ ಭವಿಷ್ಯಗಳನ್ನು ಸ್ಥಾಪಿಸಲು ಕ್ರಮ ಕೈಗೊಂಡಿದೆ ಇದಕ್ಕೆ ವಿದ್ಯಾರ್ಥಿಗಳು ಬೋಧಕರಾದಿಯಾಗಿ ಸಾರ್ವಜನಿಕ ಸಹಕಾರವು ಬೇಕು ಈ ಕಾರ್ಯಕ್ರಮಕ್ಕೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

Read More

ಮಧುಗಿರಿ:  ಕೊಂಡವಾಡಿ ಗ್ರಾಮದ ರೈತರಿಗೆ 45 ದಿನಗಳಿಂದ ಹಾಲಿನ ಬಟವಾಡೆ ನೀಡದೆ ಒಟ್ಟು 18 ಲಕ್ಷ ಹಣ ಬಾಕಿ ಉಳಿಸಿಕೊಂಡಿರುವ ಮಧುಗಿರಿ ಎ ಆರ್ ಕಚೇರಿ ಅಧಿಕಾರಿ ಓಬಳೇಶ್, ರಾಜಕೀಯ ಒತ್ತಡ ಹೇರಿಸಿ ಹಣವನ್ನು ನೀಡದಂತೆ ಬ್ಯಾಂಕಿಗೆ ಸಹಕಾರ ಇಲಾಖೆಯ ಮಧುಗಿರಿ ಕಚೇರಿಯ ಅಧಿಕಾರಿಗಳು ಪತ್ರ ಬರೆದಿದ್ದಾರೆ ಎಂದು ಕೊಂಡವಾಡಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್ ಮಾತನಾಡಿ, ಅಧಿಕಾರಿಗಳು ಕೊಂಡವಾಡಿ ಡೇರಿಯಲ್ಲಿ ಸರಕಾರದ ಆದೇಶದಂತೆ ಆಡಳಿತ ಮಂಡಳಿಯು ಇರಬೇಕಿದ್ದು, ಕೋರ್ಟ್ ಆದೇಶ ಉಲ್ಲಂಘಿಸಿ ಇಲಾಖೆಯಿಂದಲೇ ಆಡಳಿತಾಧಿಕಾರಿಯನ್ನು ನೇಮಿಸಿರುವುದು ಕಾನೂನು ಬಾಹಿರ. ಈ ಬಗ್ಗೆ ಕೋರ್ಟ್ ಆದೇಶವಿದ್ದು ತಡೆಯಾಜ್ಞೆ ನೀಡಿದೆ. ಆದರೂ ಆಡಳಿತಾಧಿಕಾರಿಯನ್ನು ನೇಮಿಸಿ ರೈತರ ಬಟವಾಡೆ ಹಣ ವಿತರಣೆಗೆ ಅಡ್ಡಿ ಮಾಡಲಾಗಿದೆ ಎಂದು ಆರೋಪಿಸಿದರು. ಡಿಆರ್ ಜೊತೆ ಮಾತನಾಡಿದ ಎ.ಆರ್.ಒಬಳೇಶ್ ಬ್ಯಾಂಕಿಗೆ ಹಣ ಬಿಡುಗಡೆಗೆ ಪತ್ರ ಬರೆಯಲಾಗುವುದೆಂದು ಹೇಳಿ ಪತ್ರ ನೀಡಿದರು. ಆದರೆ ಆ ಪತ್ರ ಹಿಡಿದು ಹೊರಟ ರೈತರಿಗೆ ಬ್ಯಾಂಕಿನಲ್ಲಿ ಚಳ್ಳೆಹಣ್ಣು ತಿನ್ನಿಸಲಾಗಿದೆ. ಪತ್ರವನ್ನು…

Read More