Author: admin

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾರ್ಚ್‌ 31ರ ನಂತರ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆಂದು ಹೇಳಿದರು. ಹನಿಟ್ರ್ಯಾಪ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರಾದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಸಚಿವ ಕೆ.ಎನ್‌ ರಾಜಣ್ಣ ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ತನಿಖೆಗೆ ವಹಿಸ್ತೇವೆ ಎಂದರು. ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡ್ತೇನೆ. ಯಾವ ತನಿಖೆಗೆ ಕೊಡಬೇಕು ಅಂತ ಸಿಎಂ ಜೊತೆಗೆ ಚರ್ಚೆ ಮಾಡ್ತೇನೆ. ಈಗಾಗಲೇ ಯಾವ ತನಿಖೆಗೆ ಕೊಡಬೇಕು ಅಂತ ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಅಂತ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂಬ ವಿಚಾರ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ನಿನ್ನೆಯಷ್ಟೇ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ನೀಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದೂ ಅವರು ಆರೋಪಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ರಾಜಣ್ಣ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶೀಘ್ರದಲ್ಲೇ ನವದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ರಾಜಕೀಯವಾಗಿ ತಮ್ಮನ್ನು ಹಿಮ್ಮೆಟ್ಟಿಸಲು ಪಕ್ಶದ ನಾಯಕರು ಹನಿಟ್ರ್ಯಾಪ್ ಮಾಡಲು ಪಿತೂರಿ ನಡೆಸಿದ್ದಾರೆಂದು ಇಬ್ಬರೂ ದೂರು ನೀಡಲಿದ್ದಾರೆಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು:  ಬರೋಬ್ಬರಿ 13 ಲಕ್ಷ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ತುಮಕೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ರಾಕೇಶ್, ಮಂಡ್ಯ ಜಿಲ್ಲೆಯ ಹರ್ಷ ಪಿ.ಜೆ. ಬಂಧಿತ ಆರೋಪಿಗಳಾಗಿದ್ದಾರೆ. ತುಮಕೂರು ನಗರದ  ಗಾರ್ಡನ್ ರಸ್ತೆ, ಟೂಡಾ ಲೇಔಟ್ ನಲ್ಲಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಸಾಗಾಟ ಮಾಡುತ್ತಿದ್ದರು. ಡ್ರಗ್ ಪೆಡ್ಲರ್ ಬಳಿ ಇದ್ದ 13,60,000 ರೂ ಮೌಲ್ಯದ 17 ಕೆ.ಜಿ. 89 ಗ್ರಾಂ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಶನಿವಾರ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ(ADIP) ಯೋಜನೆಯಡಿ ಜಿಲ್ಲೆಯ ಕುಣಿಗಲ್, ಶಿರಾ, ಪಾವಗಡ ತಾಲೂಕಿನ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡಾ 5ರಷ್ಟು ವಿಶೇಷ ಚೇತನರಿದ್ದು, ಸಾಮಾನ್ಯ ಜನರಿಗಿಂತ ಹೆಚ್ಚು ಪ್ರತಿಭೆ, ಬುದ್ದಿವಂತಿಕೆ ಹೊಂದಿದ್ದಾರೆ ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ. ಸ್ವಾವಲಂಬಿ ಬದುಕಿಗಾಗಿ ಅವರ ಉದ್ಯೋಗ ಕ್ಷೇತ್ರಗಳೂ ಬದಲಾಗುತ್ತಾ, ಹೊಸ ಅವಕಾಶಗಳೂ ದೊರೆಯುತ್ತಿವೆ. ಪ್ರಸ್ತುತ ದಿನಗಳಲ್ಲಿ ವಿಕಲಚೇತನರು ಆಧುನಿಕ ತಂತ್ರಜ್ಞಾನದ ಶಿಕ್ಷಣ ಪಡೆದು…

Read More

ತುಮಕೂರು:  ನಗರದ ಮಹಾನಗರ ಪಾಲಿಕೆ ಆವರಣ ಟೌನ್ ಹಾಲ್ ಐತಿಹಾಸಿಕ ಕಟ್ಟಡದ ಮುಂಭಾಗ ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿ ಕುರಿತು ಅಧಿಕಾರಿ ಹಾಗೂ ದಲಿತ ಮುಖಂಡರೊಂದಿಗೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆಯಂದು ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯಿಂದ ಸುಮಾರು 60 ವರ್ಷಗಳ ದಲಿತ ಸಮುದಾಯದವರ ಬೇಡಿಕೆ ಈಡೇರಿದಂತಾಗುತ್ತದೆ. ಪ್ರತಿಮೆಯು 12 ಅಡಿ ಎತ್ತರ, 1000 ಕೆ.ಜಿ. ತೂಕ ಹೊಂದಿದ್ದು, ತಯಾರಿಕೆಗೆ 39 ಲಕ್ಷ ರೂ. ವೆಚ್ಚವಾಗಿದೆ. ಪ್ರತಿಮೆಯನ್ನು ಸಿದ್ಧಾರ್ಥ ಸಂಸ್ಥೆಯಿಂದ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಚುನಾವಣೆ ನೀತಿ ಸಂಹಿತೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ದಸರಾ ಹಬ್ಬದ ಮಾದರಿಯಲ್ಲಿ ವಿವಿಧ ಸಾಂಸ್ಕೃತಿಕ…

Read More

ಚೆನ್ನೈ: ಉದ್ದೇಶಿತ ಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದಿಂದ ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿದ್ದ ಲೋಕಸಭಾ ಕ್ಷೇತ್ರಗಳ ವಿಂಗಡಣೆಯ ಕುರಿತ ಜಂಟಿ ಕ್ರಿಯಾ ಸಮಿತಿ ಸಭೆಯನ್ನುದ್ದೇಶಿಸಿ  ಅವರು ಮಾತನಾಡುತ್ತಿದ್ದರು. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಿದರೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಕ್ಷೇತ್ರ ಪುನರ್ ವಿಂಗಡಣೆಯು, ಜನಸಂಖ್ಯೆಯನ್ನು ನಿಯಂತ್ರಿಸಿದ, ಸಾಕ್ಷರತೆಯನ್ನು ಸುಧಾರಿಸಲು ಮತ್ತು ಮಹಿಳೆಯರ ಸಬಲೀಕರಣಕ್ಕೆ ಯತ್ನಿಸಿದ ದಕ್ಷಿಣ ಭಾರತದ ರಾಜ್ಯಗಳ ಮೇಲಿನ ರಾಜಕೀಯ ದಾಳಿ ಎಂದು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಇತರ ದಕ್ಷಿಣ ರಾಜ್ಯಗಳು ಭಾರತದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ನಾವು ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಆದರೂ, ಕೇಂದ್ರವು ಈಗ ನಮ್ಮ ಸಂಸದೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡಲು ಯೋಜಿಸುತ್ತಿದೆ. ಸಂಸತ್ತಿನಲ್ಲಿ ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಆಕ್ರೋಶ…

Read More

ಕೇರಳದ ಕಣ್ಣೂರಿನ ದೇವಾಲಯದಲ್ಲಿ ನಟ ದರ್ಶನ್ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇರಳದ ಕಣ್ಣೂರಿನ ಪ್ರಸಿದ್ಧ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನದಲ್ಲಿ ಇಂದು ಪುತ್ರ ವಿನೀಶ್, ಧನ್ವೀರ್ ಗೌಡ ಸೇರಿದಂತೆ ಹಲವಾರು ಸ್ನೇಹಿತರ ಜೊತೆಗೆ ದರ್ಶನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಡಾಯಿಕಾವು ಶ್ರೀಭಗವತೀ ದೇವಾಲಯದಲ್ಲಿ ಪಾರ್ವತಿ ದೇವಿಯು ಭದ್ರಕಾಳಿ ಅವತಾರದಲ್ಲಿ ಸಂಚಾರ ಮಾಡುತ್ತಾಳೆ ಎಂಬ ಪ್ರತೀತಿ ಇದೆ. ಅಂದ ಹಾಗೆ ಈ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿಷೇಧವಿದೆಯಂತೆ! ದೇವಿಗೆ ಕಲಶಂ ಎನ್ನುವ ಪೂಜೆ ನಡೆಸುವಾಗ ಕೋಳಿಗಳನ್ನು ಬಲಿ ಕೊಡಲಾಗುತ್ತದೆ. ಇಲ್ಲಿ ಭಕ್ತರಿಗೆ ಪ್ರಸಾದವಾಗಿ ಕೋಳಿ ಮಾಂಸವನ್ನು ನೀಡಲಾಗುತ್ತದೆ. ಮಾಂಸಾಹಾರ ತಿನ್ನದವರಿಗೆ ಬೇಯಿಸಿದ ಹೆಸರು ಕಾಳು, ಅಕ್ಕಿ, ಬೆಲ್ಲದಿಂದ ಮಾಡಲಾದ ಪ್ರಸಾದವನ್ನು ನೀಡಲಾಗುತ್ತದೆ. ಇನ್ನೂ ನಟ ದರ್ಶನ್ ದೇವಸ್ಥಾನಕ್ಕೆ ಭೇಟಿ ನೀಡಿರ  ಶತ್ರು ಸಂಹಾರಕ್ಕೆ ಪೂಜೆ ಮಾಡಿಸಿದ್ದಾರೆ ಅಂತ  ವಿವಿಧ ಸುದ್ದಿವಾಹಿನಿಗಳು ವರದಿ ಮಾಡಿವೆ. ಇದು ಎಷ್ಟು ಸತ್ಯವೋ,  ಎಷ್ಟು ಸುಳ್ಳೋ ಎನ್ನುವುದು ತಿಳಿದು ಬಂದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು:  ಕರ್ನಾಟಕ ಬಂದ್ ಹಿನ್ನಲೆ ನಗರದಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ ಸದಸ್ಯರು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು. ತುಮಕೂರಿನ ಕ್ರೀಡಾಂಗಣ ‌ಆವರಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆ ಬಳಿ ಮನವಿ ಸಲ್ಲಿಕೆ ಮಾಡಿದರು. ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಕಂಡು ವೇದಿಕೆಯಿಂದ ಇಳಿದು ಬಂದ ಪರಮೇಶ್ವರ್ ಸಂಘಟನೆ ಮುಖಂಡ ಅರುಣಕುಮಾರ್ ಅವರಿಂದ ಮನವಿ ಸ್ವೀಕರಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಡಿಸಿ‌ ಶುಭಕಲ್ಯಾಣ್, ಎಸ್ಪಿ ಅಶೋಕ್‌ ವೆಂಕಟ್ ಸಾಥ್ ನೀಡಿದರು. ಅಹಿತಕರ ಘಟನೆ ನಡೆದಿಲ್ಲ: ಇಂದಿನ ಕರ್ನಾಟಕ ಬಂದ್ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದ್ ವೇಳೆ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಎರಡು ದಿನಗಳಿಂದ ಅಧಿಕಾರಿಗಳ ಸಭೆ ನಡೆಸಲಾಗಿತ್ತು ಎಂದರು. ಯಾವದೇ ರೀತಿಯ ಅಹಿತಕರ ಘಟನೆಗಳು ನಡೆದರೆ ತಕ್ಷಣ ಅವರನ್ನು ಬಂಧಿಸುವಂತೆ ಸೂಚಿಸಲಾಗಿದೆ. ಇದುವರೆಗೂ ರಾಜ್ಯದಲ್ಲಿ ಯಾವದೇ…

Read More

ಬೀದರ್:  ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 7.5 ಕೆ.ಜಿ. ಗಾಂಜಾವನ್ನು  ವಶಕ್ಕೆ ಪಡೆಯಲಾಗಿದೆ. ಆರೋಪಿಯು ತನ್ನ ಹೊಲದಲ್ಲಿ ಸೋಯಾ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7.5 ಕೆ.ಜಿ. ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ`ದೀಪಾ’ ಎಂಬ ಶ್ವಾನ ಯಶಸ್ವಿಯಾಗಿರುವುದು ವಿಶೇಷ. ಸೋಯಾ ಹೊಟ್ಟಿನಲ್ಲಿ ಗಾಂಜಾ ಪತ್ತೆ ಹಚ್ಚಿದ ಪೊಲೀಸ್ ತನಿಖಾ ತಂಡದಲ್ಲಿ ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಂತಪೂರ ಠಾಣಾ ಪಿಎಸ್ ಐ ನಂದುಕುಮಾರ್ ಮುಳೆ, ಸುನೀಲ್ ಕುಮಾರ್ ಕೋರೆ, ಏಕನಾಥ, ಕೊಟ್ರೇಶ, ರಾಮರೆಡ್ಡಿ ಸುಭಾಷ, ಸಿದ್ದಣ್ಣಾ ಗೌತಮ್ ಹಾಗೂ ಮತ್ತಿತರರು ಇದ್ದರು. ಶ್ವಾನ ದೀಪಾ ತರಬೇತುದಾರ ಅಶೋಕ ಹಾಗೂ ತನಿಖಾ ತಂಡದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ…

Read More