Subscribe to Updates
Get the latest creative news from FooBar about art, design and business.
- ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
- ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
- ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
- ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
- ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
- ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
- ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
Author: admin
ತುಮಕೂರು: ಹೈಕಮಾಂಡ್ ಗೆ ಯಾವುದಾದರೂ ಸಿಡಿ ತೆಗೆದುಕೊಂಡು ಹೋಗಿ ಕೊಟ್ಟರೆ ಮೊದಲೇ ಅವರಿಗೆ ಗೊತ್ತಿರಬೇಕಲ್ಲ. ನಾನು ಯಾವ್ದೆ ರೀತಿಯ ಲೋಪ ಎಸಗಿಲ್ಲ. ದೂರು ಬಂದ್ರೆ ನಂಬಬಾರದು. ಮತ್ತು ನನ್ನ ಮೇಲೆ ಕ್ರಮ ತೆಗೆದುಕೊಳ್ಳುವ ಮುನ್ನ ನನ್ನನ್ನು ಒಮ್ಮೆ ಹೈಕಮಾಂಡ್ ಕೇಳಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ನನಗೆ ಯಾವತ್ತೂ ಕೂಡ ಕೆಟ್ಟದನ್ನು ಬಯಸಲ್ಲ. ಕೆಟ್ಟದನ್ನು ಬಯಸಿದವರು ಉದ್ದಾರ ಆಗಿಲ್ಲ. ನನಗೆ ಕೆಟ್ಟದು ಮಾಡಲು ಅವಶ್ಯಕತೆ ಇಲ್ಲ. ನನಗೆ ಆದ ರೀತಿ ಯಾರಿಗೂ ಆಗಬಾರದು ಎಂದರು. ನಾನು ಯಾವ್ದೆ ರಾಜಕೀಯ ಹಿನ್ನೆಲೆವುಳ್ಳವನಲ್ಲ, ಕಷ್ಟಪಟ್ಟು ರಾಜಕೀಯವಾಗಿ ಬೆಳೆದು ಬಂದಿದ್ದೇನೆ. ಆದ್ರೆ ಈ ರೀತಿ ತೇಜೋವಧೆ ಮಾಡುವುದು ಭೂಷಣ ತರಲ್ಲ. ನನಗೆ ಮಾಟ ಮಂತ್ರ ಮಾಡಿಸೋದು ಎಲ್ಲಾ ಮಾಡಿದ್ದಾರೆ ನನಗೆ ಏನೂ ಆಗಲ್ಲ. ಆದ್ರೆ ಯಾರು ಇದ್ರಲ್ಲಿ ಭಾಗಿಯಾಗಿದ್ದಾರೆ ಎಂದರು. ಅಧಿಕಾರದ ಆಸೆಗೆ, ಇನ್ನೊಬ್ಬನ ಮುಗಿಸಲು ವಿಷಕನ್ಯೆಯರನ್ನು ಬಳಸುತ್ತಿದ್ದಾರೆ. ಗುರುವಾರ ಸತೀಶ್ ಜಾರಕಿಹೊಳಿಯವರು ಸೇರಿದಂತೆ ಸಮಾನಮನಸ್ಕರೆಲ್ಲರೂ ಸೇರಿ…
ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಪ್ರಮುಖ ಯೋಜನೆಯಾದ ಸಮಗ್ರ ನಗರ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ CMCCC–Integrated City Management Command and Control Centreಗೆ ಪ್ರಥಮ ಪ್ರಶಸ್ತಿ ಲಭಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಮಿಷನ್ ಯೋಜನೆಯಡಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗಿದೆ. ಕೇಂದ್ರದ ನಗರಾಭಿವೃದ್ಧಿ ಸಚಿವಾಲಯದಿಂದ ಆಯೋಜಿತ ಮಾರ್ಚ್ 19 ರಿಂದ 21ರವದರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ದೇಶದ 100 ಸ್ಮಾರ್ಟ್ ಸಿಟಿ ಭಾಗವಹಿಸಿದ್ದ 10ನೇ ಸ್ಮಾರ್ಟ್ ಸಿಟೀಸ್ ಇಂಡಿಯಾ-2025 ಮತ್ತು 32ನೇ ಕನ್ವರ್ ಜೆನ್ಸ್ ಇಂಡಿಯಾ 2025 ಎಕ್ಸ್ಪೋ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ತುಮಕೂರು ನಗರವು ಕರ್ನಾಟಕದ ಸ್ಮಾರ್ಟ್ ಸಿಟಿಗಳಲ್ಲಿ ಐಸಿಎಂಸಿಸಿಯನ್ನು ಸ್ಥಾಪಿಸಿ ಕಾರ್ಯಾರಂಭ ಮಾಡಿದ ಪ್ರಥಮ ಸ್ಮಾರ್ಟ್ ನಗರವಾಗಿದ್ದು, ಇ–ಆಡಳಿತದ ಗುರಿಯೊಂದಿಗೆ ನಗರದ ಕಾರ್ಯಾಚರಣೆಗಳು, ಸಂಚಾರ ನಿಯಮ ಉಲ್ಲಂಘನೆಗಾಗಿ…
ತುಮಕೂರು: ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮಕ್ಕಳಿಗಾಗಿ ಏಪ್ರಿಲ್ 4 ರಿಂದ ಮೇ 10ರವರೆಗೆ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ 8 ರಿಂದ 14 ವರ್ಷ ವಯೋಮಾನದ ಮಕ್ಕಳು ಭಾಗವಹಿಸಬಹುದಾಗಿದೆ. ಶಿಬಿರವು ಪ್ರತಿ ದಿನ ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ತರಬೇತಿಗೆ 1,000 ರೂ. ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಭಾಗವಹಿಸುವ ಮಕ್ಕಳು ಊಟ, ಉಪಹಾರ ಮತ್ತು ಕುಡಿಯುವ ನೀರನ್ನು ಸ್ವಯಂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಯ್ಕೆಯಾದ ಮಕ್ಕಳು ಟ್ರಸ್ಟ್ ಕಾಲ ಕಾಲಕ್ಕೆ ರೂಪಿಸುವ ನಿಯಮಗಳಿಗೆ ಬದ್ಧರಾಗಿರಬೇಕು. ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವ ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಿಂದ ಪಡೆದು, ಭರ್ತಿ ಮಾಡಿದ ಆರ್ಜಿಯನ್ನು ಏಪ್ರಿಲ್ 5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08131–223336 / 0816–2275204, ಮೊ.ಸಂ.8546948858ನ್ನು ಸಂಪರ್ಕಿಸಬೇಕೆಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಯು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಏಪ್ರಿಲ್ 21 ರಿಂದ 23ರವರೆಗೆ 3 ದಿನಗಳ ಕಾಲ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಕಮ್ಮಟವನ್ನು ಏರ್ಪಡಿಸಿದ್ದು, ಕಮ್ಮಟದಲ್ಲಿ ಭಾಗವಹಿಸಲು ಆಸಕ್ತಿಯಿರುವವರಿಂದ ಅರ್ಜಿ ಆಹ್ವಾನಿಸಿದೆ. ಕಮ್ಮಟವು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುವುದು. ಆಸಕ್ತ 20 ರಿಂದ 45 ವರ್ಷಗೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕಡೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಾಲತಾಣ http://karnatakasahithyaacademy.org ಸಂಪರ್ಕಿಸಬಹುದಾಗಿದೆ ಎಂದು ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬೆಸ್ಕಾಂ ನಗರ ಉಪವಿಭಾಗ-1ರಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಚಿಕ್ಕಪೇಟೆ, ಅಗ್ರಹಾರ, ಗಾರ್ಡನ್ ರಸ್ತೆ, ಬಿ.ಜಿ.ಪಾಳ್ಯ, ವಿನಾಯಕನಗರ, ಜೆ.ಸಿ.ರಸ್ತೆ, ಸಿವಿಲ್ ಬಸ್ ನಿಲ್ದಾಣ, ಆಂಜನೇಯ ವಿಗ್ರಹ ಹತ್ತಿರ, ಜಿ.ಸಿ.ಆರ್. ಕಾಲೋನಿ, ಬಾವಿಕಟ್ಟೆ ಕಲ್ಯಾಣ ಮಂಟಪದ ಹತ್ತಿರ, ಶಿರಾ ರಸ್ತೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಆಯೋಜಿಸಲಾಗಿದ್ದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹವಾಸದಿಂದ ಕಾಲೇಜು ವಿದ್ಯಾರ್ಥಿಗಳು ಮದ್ಯ ಹಾಗೂ ಮಾದಕ ದ್ರವ್ಯಗಳ ಚಟಕ್ಕೆ ಮಾರುಹೋಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ವೈಯಕ್ತಿಕ ಬದುಕೂ ಸಹ ಹಾಳಾಗುತ್ತದೆ. ಒಮ್ಮೆ ಮದ್ಯ ಹಾಗೂ ಮಾದಕ ಸೇವನೆಯ ಚಟವನ್ನು ಅಂಟಿಸಿಕೊಂಡರೆ ಅದರಿಂದ ಹೊರ…
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 2023 ಹಾಗೂ 2024ನೇ ಸಾಲಿನಲ್ಲಿ ಕ್ಷಯ ಮುಕ್ತ ಗ್ರಾಮ ಪಂಚಾಯತಿ ಎಂದು ಘೋಷಿಸಲ್ಪಟ್ಟಿರುವ ಗ್ರಾಮ ಪಂಚಾಯತಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು. ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲೆ ಲೈಂಗಿಕ ಕಿರುಕುಳ (ತಡೆಗಟ್ಟುವಿಕೆ, ನಿಷೇಧಿಸುವಿಕೆ, ನಿವಾರಿಸುವಿಕೆ) 2013ರ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸರ್ಕಾರಿ ಕಚೇರಿ ಮತ್ತು ಅಧೀನ ಕಚೇರಿ, ಸಾರ್ವಜನಿಕ ಉದ್ದಿಮೆಗಳಲ್ಲಿ ಆಂತರಿಕ ದೂರು ನಿವಾರಣಾ ಸಮಿತಿಗಳನ್ನು ರಚಿಸಬೇಕೆಂದು ಕಚೇರಿ ಮುಖ್ಯಸ್ಥರಿಗೆ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ ಸೂಚನೆ ನೀಡಿದ್ದಾರೆ. ರಚಿಸಲಾದ ದೂರು ನಿವಾರಣಾ ಸಮಿತಿಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡುವುದು ಕಚೇರಿಯ ಮುಖ್ಯಸ್ಥರ ಕರ್ತವ್ಯವಾಗಿರುತ್ತದೆ. ಕಚೇರಿ ಮುಖ್ಯಸ್ಥರು, ಕಚೇರಿ ಮತ್ತು ಅಧೀನ ಕಚೇರಿ/ಖಾಸಗಿ ಸಂಸ್ಥೆ/ಕಾರ್ಖಾನೆ, ಶಾಲಾ–ಕಾಲೇಜುಗಳಲ್ಲಿ 10ಕ್ಕಿಂತ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಲ್ಲಿ ಕಡ್ಡಾಯವಾಗಿ ಆಂತರಿಕ ದೂರು ನಿವಾರಣಾ ಸಮಿತಿಯನ್ನು ರಚನೆ ಮಾಡಬೇಕು. ಸಮಿತಿ ರಚನೆ ಮಾಡಿದ ಮಾಹಿತಿಯನ್ನು SHE–Box ವೆಬ್ ಸೈಟ್ ವಿಳಾಸ: https://shebox.wcd.gov.in/signin ನಲ್ಲಿ ಆಪ್‌ಲೋಡ್ ಮಾಡಲು ಕ್ರಮವಹಿಸಬೇಕು. ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಕಚೇರಿ, ನಿಗಮ-ಮಂಡಳಿ, ಸಾರ್ವಜನಿಕ ಉದ್ದಿಮೆ, ಕಾರ್ಖಾನೆ, ಗಾರ್ಮೆಂಟ್ಸ್, ವಿಶ್ವವಿದ್ಯಾಲಯ, ಶಾಲಾ–ಕಾಲೇಜು, ಸಂಘ–ಸಂಸ್ಥೆ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸರ್ಕಾರಿ, ಖಾಸಗಿ ಸಂಸ್ಥೆ, ಅಂಚೆ…
ತುಮಕೂರು: ವಿಶ್ವವಿದ್ಯಾನಿಲಯವೆಂದರೆ ಕೇವಲ ಜ್ಞಾನವನ್ನು ವರ್ಗಾಯಿಸುವ ಕೇಂದ್ರವಲ್ಲ. ಅದು ಸುತ್ತಲಿನ ಸಮಾಜ ಹಾಗೂ ರಾಷ್ಟ್ರದ ಭಾವನೆಗಳನ್ನು ಪ್ರತಿಬಿಂಬಿಸಬೇಕು. ಸಮಕಾಲೀನ ಜಗತ್ತಿನ ಅಗತ್ಯಗಳಿಗೆ ಸ್ಪಂದಿಸಬೇಕು ಎಂದು ಕುವೆಂಪು ವಿಶ್ವವಿದ್ಯಾನಿಲಯ ಹಾಗೂ ಗುಜರಾತ್‌ನ ಕೇಂದ್ರೀಯ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಸ್.ಎ.ಬಾರಿ ತಿಳಿಸಿದರು. ತುಮಕೂರು ವಿಶ್ವವಿದ್ಯಾನಿಲಯ ಗುರುವಾರ ಆಯೋಜಿಸಿದ್ದ 21ನೇ ಸಂಸ್ಥಾಪನಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದು ತಂತ್ರಜ್ಞಾನ ಬಹುವಾಗಿ ಬೆಳೆದಿದೆ. ನಾವೀಗ ಜಾಗತಿಕ ಮಟ್ಟದಲ್ಲೂ ಅಲ್ಲ, ಜಗತ್ತಿನಾಚೆಗಿನ ಬ್ರಹ್ಮಾಂಡದ ಕುರಿತು ಯೋಚಿಸಬೇಕಾಗಿದೆ ಎಂದರು. ಉನ್ನತ ಶಿಕ್ಷಣರಂಗದಲ್ಲಿ ಭಾರತದ ವಿಶ್ವವಿದ್ಯಾನಿಲಯಗಳ ಪಾತ್ರ ಏನು ಎಂದು ನಾವೀಗ ಪ್ರಶ್ನಿಸಿಕೊಳ್ಳಬೇಕಾಗಿದೆ. ದೇಶದಲ್ಲಿ 1600 ವಿಶ್ವವಿದ್ಯಾನಿಲಯಗಳಿವೆ. ಜಾಗತಿಕ ರ‍್ಯಾಂಕಿಂಗ್ ನಲ್ಲಿ ಶ್ರೇಷ್ಠ 100 ವಿವಿಗಳ ಪೈಕಿ ಭಾರತದ ಒಂದು ವಿಶ್ವವಿದ್ಯಾನಿಲಯವೂ ಇಲ್ಲದಿರುವುದು ಯೋಚಿಸಬೇಕಾದ ಸಂಗತಿ ಎಂದರು. ಸಾಮಾನ್ಯರಂತೆ ಇರುವ ವಿದೇಶಿ ವಿಶ್ವವಿದ್ಯಾನಿಲಯಗಳ ಪ್ರಾಧ್ಯಾಪಕರು ನೊಬೆಲ್ ಪ್ರಶಸ್ತಿ ಪಡೆದುಕೊಳ್ಳುತ್ತಾರೆ. ಏಕೆಂದರೆ ನೈಜ ಹೊಸ ಸಂಶೋಧನೆಗಳನ್ನು ಕೈಗೊಳ್ಳುತ್ತಾರೆ. ನಮ್ಮಲ್ಲಿ ಮಾಡಿದ ಸಂಶೋಧನೆಗಳದ್ದೇ ಪುನರಾವರ್ತನೆ ನಡೆಯುತ್ತದೆ. ಇದರಿಂದಾಗಿ ಭಾರತದ ವಿವಿಗಳಲ್ಲಿರುವ ಪ್ರಾಧ್ಯಾಪಕರಿಗೆ ನೊಬೆಲ್…
ತುಮಕೂರು: ಇಂದು ಕರ್ನಾಟಕ ಬಂದ್ ಹಿನ್ನೆಲೆ, ತುಮಕೂರಿನಲ್ಲಿ ಬಂದ್ ಗೆ ಸಂಘಟನೆಗಳು ಕರೆ ನೀಡದ ಹಿನ್ನೆಲೆ ಕಲ್ಪತರು ನಾಡು ತುಮಕೂರಿನಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಎಂದಿನಂತೆ ಸಹಜವಾಗಿರುವ ವಾಹನ ಸಂಚಾರವಿದೆ. ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಆಟೋ ಗಳ ರಸ್ತೆಗಿಳಿದಿವೆ. ಶಾಲಾ ಕಾಲೇಜುಗಳಿಗೆ ರಜೆ ನೀಡದ ಹಿನ್ನಲೆ, ಎಂದಿನಂತೆ ಜನಸಾಮಾನ್ಯರ ಓಡಾಟ ಕಂಡು ಬಂತು. ಕನ್ನಡ ಪರ ಸಂಘಟನೆಗಳು ನೈತಿಕ ಬೆಂಬಲ ಮಾತ್ರ ನೀಡಿದ್ದು, ತುಮಕೂರಿನಲ್ಲಿ ಎಂದಿನಂತೆ ಕಾರ್ಯ ಚಟುವಟಿಕೆಗಳು ಆರಂಭವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4