Author: admin

ತುಮಕೂರು:  ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ, ಮತಿಘಟ್ಟ ಹೋಬಳಿ, ಕೈಮಾರ ಬಳಿ  ಅಲೆಮಾರಿಗಳು ವಾಸವಿದ್ದ ಗುಡಿಸಲಿಗೆ ಬೆಂಕಿ ತಾಗಿ ಸುಮಾರು 16 ಕುಟುಂಬಗಳು  ಬೀದಿಗೆ ಬಿದ್ದಿವೆ. ಊರು ಊರು ಅಲೆದು ಜೀವನ ಕಟ್ಟಿಕೊಳ್ಳುವ ಅಲೆಮಾರಿಗಳು ಸುಮಾರು 7–8 ವರ್ಷಗಳಿಂದ ನೆಲೆನಿಂತು ಪುಟ್ಟ ಗುಡಿಸಲುಕಟ್ಟಿಕೊಂಡು ಜೀವನ ನಡೆಸುತ್ತಿದ್ದಾರೆ. ದಿನಾಂಕ 14/03/2025ರಂದು ಕಿಡಿಗೇಡಿಗಳು ಕಾಡಿನ ಒಣಗಿದ ಎಲೆಗಳಿಗೆ ಬೆಂಕಿ ಹಿಟ್ಟು ಉರಿಯುತ್ತ ಅಲೆಮಾರಿಗಳು ವಾಸವಿದ್ದ ಗುಡಿಸಲ ಬಳಿ ಬಂದಿದೆ. ಗಾಳಿಯ ತೀವ್ರತೆಗೆ ಗುಡಿಸಲುಗಳು ಕ್ಷಣಾರ್ಧದಲ್ಲೇ ಹೊತ್ತಿ ಉರಿಯಲು ಶುರುವಾಗಿದೆ. ಗುಡಿಸಲ್ಲಿ ವಾಸಿಸುವ ಜನರು ಗಾಬರಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿ , ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ತಾಲ್ಲೂಕು ಆಡಳಿತ ಬೇಟಿ ನೀಡಿ ಭರವಸೆ ನೀಡಿದ್ದರು ಇಲ್ಲಿಯವರೆಗೆ ಈ ಕುಟುಂಬಗಳಿಗೆ ಗಂಜಿಕೇಂದ್ರ ನಿರ್ಮಿಸಿ ಅವರನ್ನ ತಾತ್ಕಾಲಿಕವಾಗಿ ಸ್ಥಳಾಂತರಿಸಲು ವಿಫಲವಾಗಿದೆ. ಅಲೆಮಾರಿ ಕುಟುಂಬಗಳು ಅಲ್ಲೇ ಇರುವ ದೇವಸ್ಥಾನದ ಬಳಿ ಹಾಗು ಇಟ್ಟಿಗೆ ಫ್ಯಾಕ್ಟರಿ ಬಳಿ ತಮ್ಮ  ಜೀವನವನ್ನು ಕಳೆಯುತ್ತಿದ್ದಾರೆ. ತಹಶೀಲ್ದಾರರು ಮಳೆಯಲ್ಲಿ ಹಾನಿಯಾದರೆ ಗಂಜಿ ಕೇಂದ್ರ ಮಾಡಬಹುದು ಸ್ಥಳಾಂತರಿಸಬಹುದು…

Read More

ತುಮಕೂರು:  ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಿಗೆ ಶುದ್ದೀಕರಿಸಿದ ಕುಡಿಯುವ ನೀರನ್ನೇ ಪೂರೈಕೆ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಸರಬರಾಜು ಮಾಡುವ ನೀರಿನಲ್ಲಿ ಹಾನಿಕಾರಕ ಬ್ಯಾಕ್ಟೀರಿಯಾ ಉಪಸ್ಥಿತಿಯ ಸಾಧ್ಯತೆಯಿದ್ದು, ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ನೀರು ಪೂರೈಕೆಗೂ ಮುನ್ನ ಕಡ್ಡಾಯವಾಗಿ ಕ್ಲೋರಿನೇಷನ್ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಹಾಯವಾಣಿ ಮೂಲಕ ಸ್ವೀಕೃತವಾದ ಸಮಸ್ಯೆಗಳನ್ನು ಕಡೆಗಣಿಸದೆ ತ್ವರಿತವಾಗಿ ಬಗೆಹರಿಸಬೇಕು ಎಂದು ತಿಳಿಸಿದರು. ಜಿಲ್ಲೆಯ ಪಾವಗಡ ಪಟ್ಟಣಕ್ಕೆ ತುಂಗಭದ್ರಾ ನೀರನ್ನು ಸರಬರಾಜು ಮಾಡಲು ಪೈಪ್ ಲೈನ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ನಿಗಧಿತ ಕಾಲಮಿತಿಯೊಳಗೆ ಕಾಮಗಾರಿಯನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ…

Read More

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದ ದೂರುಗಳನ್ನು ಸಲ್ಲಿಸಲು ಸಹಾಯವಾಣಿಯನ್ನು ಸ್ಥಾಪಿಸಲಾಗಿದೆ. ದೂರು ಸಲ್ಲಿಸುವವರು ಸಹಾಯವಾಣಿ ಸಂಖ್ಯೆ 155304/0816-2213400/ 0816-2213401ಕ್ಕೆ ಕರೆ ಮಾಡಿ ದೂರು ದಾಖಲಿಸಬಹುದಾಗಿದೆ. ಸಾರ್ವಜನಿಕರು ಸಹಾಯವಾಣಿ ಸಂಖ್ಯೆಯ ಪ್ರಯೋಜನ ಪಡೆಯಬೇಕೆಂದು ಪಾಲಿಕೆಯ ಕಾರ್ಯ ಪಾಲಕ ಅಭಿಯಂತರ ಸಂದೀಪ್ ಕೆ.ಎಸ್. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು : ನಗರದ ಸರ್ಕಾರಿ ಚಿತ್ರಕಲಾ ಕಾಲೇಜಿಗೆ ಮಾರ್ಚ್ 19, 2025 ರಂದು ಮಧ್ಯಾಹ್ನ ಡಾ.ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧ್ಯಕ್ಷ ಕೀರ್ತಿ ಗಣೇಶ್ ಅವರ ನೇತೃತ್ವದ ತಂಡ ಭೇಟಿ ನೀಡಿತು. ಕಾಲೇಜಿನ ವಿದ್ಯಾರ್ಥಿಗಳ ಕಲಾಕೃತಿಗಳನ್ನು ವೀಕ್ಷಿಸಿದ ಅವರು, ಈ ಕಲಾನಕ್ಷತ್ರದ ವಿದ್ಯಾರ್ಥಿಗಳು ಭವಿಷ್ಯದ ಮಹಾನ್ ಕಲಾವಿದರು ಎಂಬ ಆಶಾಭಾವನೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೀರ್ತಿ ಗಣೇಶ್, ಸರ್ಕಾರಿ ಚಿತ್ರಕಲಾ ಕಾಲೇಜುಗಳಲ್ಲಿ ಕಲಿಕೆ ಮಾಡುತ್ತಿರುವ ವಿದ್ಯಾರ್ಥಿಗಳು ಬಹು ಬೇಸರದ ನಡುವೆಯೂ ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ. ಆದರೆ, ಈ ಕಾಲೇಜು ಸ್ವಂತ ನಿವೇಶನ ಮತ್ತು ಕಟ್ಟಡವಿಲ್ಲದೆ, 30 ವರ್ಷಗಳಿಂದ ಸಾಂಸ್ಕೃತಿಕ ಬೆಳವಣಿಗೆಯ ಕೊರತೆಯನ್ನು ಎದುರಿಸುತ್ತಿದೆ. ನಾವೆಲ್ಲರೂ ಈ ಮಹತ್ವದ ವಿದ್ಯಾಸಂಸ್ಥೆಗೆ ಅಗತ್ಯ ಮೂಲಸೌಕರ್ಯ ಒದಗಿಸಬೇಕು ಎಂದು ಹೇಳಿದರು. ಈ ವಿಷಯವನ್ನು ಸರ್ಕಾರದ ಗಮನಕ್ಕೆ ತರುವ, ಮತ್ತು ತಮ್ಮ ಹಂತದಲ್ಲಿ ಸಹಾಯ–ಸಹಕಾರ ನೀಡಲು ಸಿದ್ಧ ಎಂಬ ಭರವಸೆ ನೀಡಿದರು. ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಜಿ.ಎಲ್. ನಟರಾಜು ಮಾತನಾಡಿ “2018ರಿಂದ ನಮ್ಮ ಸಂಘವು…

Read More

ಚಿಕ್ಕಮಗಳೂರು: 9ನೇ ತರಗತಿಯಲ್ಲಿ ಫೇಲ್ ಆಗುವ ಭಯದಿಂದ 15 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಕಡೂರು ತಾಲೂಕಿನ ಡಿ. ಕಾರೇಹಳ್ಳಿಯಲ್ಲಿ ನಡೆದಿದೆ. ವರ್ಷಿಣಿ(15) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾಳೆ.ಬಾಣಾವರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ವರ್ಷಿಣಿ, ವಿದ್ಯಾರ್ಥಿನಿ ವರ್ಷಿಣಿ ಪಾಠದಲ್ಲಿ ಉತ್ತಮ ವಿದ್ಯಾರ್ಥಿನಿಯಾಗಿದ್ದರೂ, ಪರೀಕ್ಷೆಯಲ್ಲಿ ಫೇಲ್ ಆಗುವ ಆತಂಕದಿಂದ ಮನನೊಂದಿದ್ದಳು. ಶುಂಠಿಗೆ ತಂದಿದ್ದ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆಯ ಮಾಹಿತಿ ಪಡೆದ ಕಡೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಈ ಸಂಬಂಧ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನಂಜನಗೂಡು: ಆಕ್ಸಿಜನ್ ಸೌಲಭ್ಯವಿಲ್ಲದ ಸರ್ಕಾರಿ ಆ್ಯಂಬುಲೆನ್ಸ್ ನಲ್ಲಿ ಮಗು ಸಾವನ್ನಪ್ಪಿದ ಘಟನೆ ವರದಿಯಾಗಿದೆ.  ನಂಜನಗೂಡು ಪಟ್ಟಣದ ಶ್ರೀರಾಂಪುರ ಬಡಾವಣೆಯ ರತ್ನಮ್ಮ ಮತ್ತು ಕುಮಾರ್ ಎಂಬ ದಂಪತಿ ಮಗು ಸಾವನ್ನಪ್ಪಿದೆ. ನಂಜನಗೂಡಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಿಂದ ಮೈಸೂರಿನ ದೊಡ್ಡಸ್ಪತ್ರೆಗೆ ತೆರಳುತ್ತಿದ್ದವೇಳೆ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಕಳೆದ 17ರಂದು ಹೆರಿಗೆಗಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರತ್ನಮ್ಮ ದಾಖಲಾಗಿದ್ದರು. ಹೆರಿಗೆಯಾದ ಬಳಿಕ ಮಗು ನೀಲಿ ಬಣ್ಣಕ್ಕೆ ತಿರುಗಿದೆ. ನಂತರ ಮಗು ಸ್ಥಿತಿಯಿಂದ ಪೋಷಕರು ಕೂಡ ಆತಂಕಕ್ಕೆ ಒಳಗಾಗಿದ್ದರು. ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಮಕ್ಕಳ ಆಸ್ಪತ್ರೆಗೆ ರವಾನಿಸಲು ಮುಂದಾಗಿದ್ದಾರೆ. ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ನಲ್ಲಿ ಆಕ್ಸಿಜನ್ ಕೊರತೆಯಿದೆ ಎಂದು ತಿಳಿದಿದ್ದರೂ ಮೈಸೂರಿಗೆ ರವಾನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಮೈಸೂರಿಗೆ ತೆರಳುತ್ತಿದ್ದ ಮಾರ್ಗ ಮಧ್ಯದಲ್ಲಿ ಮಗು ಸಾವನ್ನಪ್ಪಿದೆ. ಸದ್ಯ ಆಸ್ಪತ್ರೆ ಸಿಬ್ಬಂದಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಮಗುವಿನ ಪೋಷಕರು ಆರೋಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ಬೇಲೂರು: ಸತತ ಮೂರು ದಿನಗಳ ಕಾರ್ಯಚರಣೆಯ ನಂತರ ಸಂಜೆ ಬಾಳಗುಲಿ ಸುಪದ ಹುಲ್ಲೆಮಕ್ಕಿ ಗ್ರಾಮದ ತೋಟದಲ್ಲಿ ವಿಕ್ರಾಂತ್ ಹೆಸರಿನ ಪುಂಡಾನೆಯನ್ನು ಯಶಸ್ವಿಯಾಗಿ ಹಿಡಿಯಲಾಗಿದೆ. ತಾಲೂಕಿನ ಅರೇಹಳ್ಳಿ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬೀಡು ಬಿಟ್ಟು ಬೆಳೆ ನಾಶದೊಂದಿಗೆ ಪ್ರಾಣ ಹಾನಿಗೆ ಮುಂದಾಗುತ್ತಿದ್ದ ಮೂರು ಪುಂಡಾನೆಗಳನ್ನು ಹಿಡಿಯಲು ಕಳೆದ ಭಾನುವಾರದಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗಿ ಮೊದಲ ದಿನವೇ ಯಶಸ್ವಿ ಕಾರ್ಯಚರಣೆ ನಡೆಸಿ ಒಂದು ಕಾಡಾನೆಯನ್ನು ಸೆರೆ ಹಿಡಿದು ಅಭಯಾರಣ್ಯಕ್ಕೆ ಬಿಟ್ಟು ಬಂದ ನಂತರ ಎರಡನೇ ಪುಂಡಾನೆ ವಿಕ್ರಾಂತ್ ಆನೆ ಹಿಡಿಯಲು ಸಕಲಸಿದ್ದತೆಗಳೊಂದಿಗೆ ಅಧಿಕಾರಿಗಳ ತಂಡ 7 ಸಾಕಾನೆಗಳ ತಂಡದೊಂದಿಗೆ ಮುಂದಾದರು. ಸತತವಾಗಿ ಎರಡೂ ದಿನಗಳೂ 6 ಗಂಟೆಗಳ ಕಾಲ ಕಾರ್ಯಚರಣೆ ನಡೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಕ್ರಾಂತ್ ಆನೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಂಡಿದ್ದ.  ನ್ನೆ ಬೆಳಗ್ಗೆಯೇ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಥರ್ಮಲ್ ಡೋನ್ ಬಳಸಿ ಕಾಡೊಳಗಿದ್ದ ವಿಕ್ರಾಂತ್ ಆನೆಯ ಸುಳಿವು ಪಡೆದು ಸಾಕಾನೆಗಳೊಂದಿಗೆ ಕಾರ್ಯಾಚರಣೆಗಿಳಿದಿದ್ದರು. ಇನ್ನೇನು ವಿಕ್ರಾಂತ್ ಆನೆ ಒಂಟಿಯಾಯಿತು ಎನ್ನುವಷ್ಟರಲ್ಲಿ ವಿಕ್ರಾಂತ್…

Read More

ಬೆಂಗಳೂರು:  ಸಚಿವರು ಸೇರಿ ಪ್ರಮುಖರ ಹನಿಟ್ರ್ಯಾಪ್ ವಿಚಾರದ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಧೀಶರು ಅಥವಾ ನಿವೃತ್ತ ನ್ಯಾಯಾಧೀಶರಿಂದ ಇದರ ತನಿಖೆ ಸಾಧ್ಯವಿಲ್ಲ; ಎಸ್‍ ಐಟಿಯಿಂದ ಇದು ಖಂಡಿತ ಅಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು. ಪಕ್ಷಾತೀತವಾಗಿ ಈ ಘಟನೆ ಬಗ್ಗೆ ಮಾತನಾಡಿದ್ದಾರೆ. ಇದೊಂದು ಗಂಭೀರ ವಿಚಾರ ಎಂದು ವಿವರಿಸಿದರು. 48–49 ಜನರ ಮೇಲೆ ಹನಿಟ್ರ್ಯಾಪ್ ವಿಚಾರ ರಾಜ್ಯದ ಸದನದಲ್ಲಿ ಹಿಂದೆಂದೂ ಚರ್ಚೆ ಆಗಿರಲಿಲ್ಲ ಎಂದು ತಿಳಿಸಿದರು. ಹನಿಟ್ರ್ಯಾಪ್ ವಿಚಾರದಲ್ಲಿ ಇಷ್ಟೊಂದು ಶಕ್ತಿ ಇರುವವರು ಯಾರೆಂದು ರಾಜಣ್ಣ ಅವರೇ ತಿಳಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಸಚಿವರು, ಶಾಸಕರ ಹನಿಟ್ರ್ಯಾಪ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ವಿಪಕ್ಷ ನಾಯಕರಾದ ಆರ್. ಅಶೋಕ್, ಆರಗ ಜ್ಞಾನೇಂದ್ರ, ಶಾಸಕ ಸುನೀಲ್ ಕುಮಾರ್, ಸಚಿವರಾದ ಕೆ.ಎನ್. ರಾಜಣ್ಣ ಹನಿಟ್ರ್ಯಾಪ್ ಬಗ್ಗೆ ಸದನದಲ್ಲಿ ಪ್ರಸ್ತಾಪ ಮಾಡಿದರು. ಈ ಬಗ್ಗೆ ಮುಖ್ಯಮಂತ್ರಿಗಳು ಉತ್ತರಿಸಿ ಸದನದ ಮೌಲ್ಯವನ್ನು ಎತ್ತಿಹಿಡಿಯಬೇಕೆಂದು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷ ಕೆಲವು ಮಂದಿ ನಾಯಕರು ಆಗ್ರಹಿಸಿದ್ದರು. ಇದಕ್ಕೆ ಉತ್ತರಿಸಿದ ಸಿಎಂ, ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದರು. ಸಚಿವರು ಹಾಗೂ ಪರಿಶಿಷ್ಟ ವರ್ಗದ ನಾಯಕರೂ ಆಗಿರುವ ಕೆ.ಎನ್ ರಾಜಣ್ಣ ಅವರು ಮಾಡಿರುವ ಆರೋಪಕ್ಕೆ ಈಗಾಗಲೇ ಗೃಹ ಸಚಿವ ಜಿಪರಮೇಶ್ವರ ಉತ್ತರಿಸಿದ್ದಾರೆ. ಅಲ್ಲದೆ ತನಿಖೆಗೆ ಆದೇಶಿಸುವುದಾಗಿಯೂ ಭರವಸೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ ರಾಜ್ಯ ಸರ್ಕಾರ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ನಕ್ಸಲಿಸಂ ನಿಗ್ರಹಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳು ಮತ್ತು ಮಾಡಿದ ವೆಚ್ಚಗಳ ಕುರಿತು ಗುರುವಾರ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ಉತ್ತರಿಸಿದರು. ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಇದರಲ್ಲಿ, 2018 ರಿಂದ ಫೆಬ್ರವರಿ 2025 ರವರೆಗೆ ವೇತನಕ್ಕಾಗಿ 150 ಕೋಟಿ ರೂ. ಮತ್ತು 2008 ರಿಂದ ಮಾರ್ಚ್ 4, 2025 ರವರೆಗೆ ವೇತನೇತರ ವೆಚ್ಚಗಳಿಗಾಗಿ 51.31 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More