Subscribe to Updates
Get the latest creative news from FooBar about art, design and business.
- ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
- ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
- ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
- ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
- ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
- ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
- ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್ ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
Author: admin
ಬೆಂಗಳೂರು: ಹೈಕೋರ್ಟ್ ತೀರ್ಪು ಪ್ರಕಾರ ಕೆಇಆರ್‌ಸಿ ವಿದ್ಯುತ್ ದರ ಏರಿಕೆ ಆದೇಶ ನೀಡಿದೆ. ಈ ನಿರ್ಧಾರ ರಾಜ್ಯ ಸರ್ಕಾರದಲ್ಲ ಎಂದು ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯ ಸರಕಾರ ವಿದ್ಯುತ್ ದರವನ್ನು ಏರಿಸಿಲ್ಲ. ಪ್ರತಿ ಯೂನಿಟ್ ಗೆ 36 ಪೈಸೆ ಏರಿಕೆ ಆಗಿರುವುದು ವಿದ್ಯುತ್ ದರದ ಏರಿಕೆಯಲ್ಲ. ಬದಲಿಗೆ ವಿದ್ಯುತ್ ಪ್ರಸರಣ ನಿಗಮ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಿಣಿ, ಗ್ರಾಚ್ಯುಟಿ ಹಣದ ಪಾಲನ್ನು ಗ್ರಾಹಕರಿಂದ ಪಡೆಯಬಹುದು ಎಂಬ ಹೈಕೋರ್ಟ್ ಆದೇಶದ ಮೇರೆಗೆ ಕೆಇಆರ್‌ಸಿ ಈ ಆದೇಶ ಹೊರಡಿಸಿದೆ. ಅದರಂತೆ, 2025-26ರ ಹಣಕಾಸು ವರ್ಷದಲ್ಲಿ ಪ್ರತಿ ಯೂನಿಟ್‍ಗೆ 36 ಪೈಸೆಯನ್ನು ಏರಿಸಿದೆ ಎಂದು ಹೇಳಿದರು. ಕರ್ನಾಟಕ ವಿದ್ಯುಚ್ಛಕ್ತಿ ಮಂಡಳಿ (ಕೆಇಬಿ)ಯನ್ನು ರದ್ದುಗೊಳಿಸಿ ಕೆಪಿಟಿಸಿಎಲ್ ಹಾಗೂ 5 ಎಸ್ಕಾಂಗಳನ್ನು ರಚಿಸಿದ ನಂತರ 2022ರ ಮಾರ್ಚ್‍ನಲ್ಲಿ ಕೆಇಆರ್‌ಸಿ ಮುಂದೆ ಪಿಂಚಣಿ ಮತ್ತು ಗ್ರಾಚ್ಯುಟಿ ಪಾಲನ್ನು ಗ್ರಾಹಕರಿಂದ ಪಡೆಯಲು ಆದೇಶಿಸುವಂತೆ ಅಂದಿನ ಬಿಜೆಪಿ ಸರಕಾರ ಮೊದಲ ಬಾರಿಗೆ ಕೆಇಆರ್‌ಸಿಗೆ ಪ್ರಸ್ತಾವನೆ ಸಲ್ಲಿಸಿತ್ತು. ಆಗ ಕೆಇಆರ್‌ಸಿ…
ಕನಕಪುರ: ಅಂಗನವಾಡಿ ಸಹಾಯಕಿಯೊಬ್ಬಳು ಎರಡೂವರೆ ವರ್ಷದ ಮಗುವಿನ ಮೇಲೆ ಕ್ರೌರ್ಯ ಮೆರೆದಿರುವ ಘಟನೆ ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ. ಜ್ಯೋತಿ ಮತ್ತು ರಮೇಶ್ ನಾಯ್ಕ್ ಅವರ ಮಗ ದೀಕ್ಷಿತ್ (2.5) ಸಂತ್ರಸ್ತ ಬಾಲಕನಾಗಿದ್ದಾನೆ. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮಗುವಿನ ಮೇಲೆ ಅಂಗನವಾಡಿ ಕಾರ್ಯಕರ್ತೆ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಡೈಪರ್ ಗೆ ಖಾರದಪುಡಿ ಹಾಕಿದ್ದಾಳೆ. ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ತಾಯಿ ಚೈತ್ರಬಾಯಿ ಅಂಗನವಾಡಿಗೆ ತೆರಳಿದ್ದು, ಈ ವೇಳೆ ಮಗು ಅಳುತ್ತಿರುವುದು ಕಂಡು ಗಮನಿಸಿದಾಗ ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ ದೂರಿನಲ್ಲಿ ತಿಳಿಸಲಾಗಿದೆ. ಅಂಗನವಾಡಿ ಸಹಾಯಕಿ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಸಿಡಿಪಿಒ ವಿ.ನಾರಾಯಣ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…
ತುಮಕೂರು : ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳನ್ನು ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಲಿಂಗಾಪುರ ಬಳಿ ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಹಿಂದೂಪುರ ಸಂಘಟನೆಗಳ ಸದಸ್ಯರು ದಾಳಿ ನಡೆಸಿದ್ದರು. ವಾಹನವನ್ನು ತಡೆದು ಪರಿಶೀಲಿಸಿದಾಗ ರಕ್ಷಣೆ ಗೋವುಗಳು ಇರುವುದನ್ನು ಕಂಡು ತಕ್ಷಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆ ಮಾಡಿ ತಿಳಿಸಿದ್ದಾರೆ. ನಂತರ ಪೊಲೀಸರು ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು ಅವ್ಯವಹಾರದ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕು ರಂಗಾಪುರ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು, ಹೊಸಳ್ಳಿ ಗ್ರಾಮದ ಜನಕ್ಕೆ ಕುಡಿಯುವ ನೀರು ಒದಗಿಸುವ ಮೋಟರ್ ಎತ್ತಿದ ವಿಚಾರಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಗ್ರಾಮ ಪಂಚಾಯತಿ ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ತರಾಟೆಗೆತ್ತಿಕೊಂಡರು. ರಂಗಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ಪಿಡಿಒ ಹೇಳ್ತಾರೆ, ಆದ್ರೆ ಕೆರಗೋಡಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ ಎಂದು ಕೆರಗೋಡಿ ಗ್ರಾಮಸ್ಥ ಸಂತೋಷ್ ಹೇಳಿಕೆ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯರ ಗಮನಕ್ಕೆ ತರದಂತೆ ಪಿಡಿಒ ಹಾಗೂ ಅಧ್ಯಕ್ಷ ಮೋಟಾರ್ ಎತ್ತಿಸಿದ್ದಾರೆ ಎಂದು ರಂಗಪುರ ಗ್ರಾಮ ಪಂಚಾಯಿತಿ ಪಿಡಿಒ ಶಂಕರ್ ಬೀಳುವ ಹಾಗೂ ಅಧ್ಯಕ್ಷ ವಿಶ್ವನಾಥ್ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು. ಯಾವುದೇ ಕೆಲಸ ಕಾರ್ಯಗಳನ್ನು ಮಾಡುವಾಗ …
ಕೊರಟಗೆರೆ: ತಾಲೂಕು ವಕೀಲರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಎಲ್.ಸಂತೋಷ್ ಉಪಾಧ್ಯಕ್ಷರಾಗಿ ಹನುಮಂತರಾಜು, ಪ್ರಧಾನ ಕಾರ್ಯದರ್ಶಿ ಮಂಜುನಾಥ ಖಜಾಂಚಿ ಅರುಂಧತಿ, ಜಂಟಿಕಾರ್ಯದರ್ಶಿ ಕೃಷ್ಣಪ್ಪ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಹಿರಿಯ ವಕೀಲ ನಾಗೇಂದ್ರಪ್ಪ ಘೋಷಣೆ ಮಾಡಿದರು. ವಕೀಲರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಜಿ.ಡಿ.ದೇವರಾಜು, ಟಿ.ಕೃಷ್ಣಮೂರ್ತಿ, ಎಂ.ಎಲ್.ಸಂತೋಷ್ ಸ್ಪರ್ಧೆ ಮಾಡಿದ್ದು, ದೇವರಾಜು 18 ಮತ ಪಡೆದರೆ ಎಂ.ಎಲ್ ಸಂತೋಷ್ ಅವರು 19 ಮತ ಪಡೆದು ಜಯಶೀಲರಾಗಿದ್ದಾರೆ. ಜಂಟಿ ಕಾರ್ಯದರ್ಶಿ ಸ್ಥಾನಕ್ಕೆ ಸಂತೋಷಲಕ್ಷ್ಮೀ ಅವರು 15 ಮತ ಮತ್ತು ಕೃಷ್ಣಪ್ಪ ಅವರು 22 ಮತ ಪಡೆದು ಕೃಷ್ಣಪ್ಪ ಅವರು ಜಂಟಿ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇನ್ನುಳಿದಂತೆ ಉಪಾಧ್ಯಕ್ಷ, ಪ್ರಧಾನಕಾರ್ಯದರ್ಶಿ ಮತ್ತು ಖಜಾಂಚಿ ಸ್ಥಾನಗಳು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ನೂತನ ಅಧ್ಯಕ್ಷ ಎಂ.ಎಲ್.ಸಂತೋಷ್ ಮಾತನಾಡಿ, ವಕೀಲರ ನಾನಾ ಕುಂದು ಕೊರತೆಗಳು ಇದ್ದು, ಎಲ್ಲರ ಸಹಕಾರ ಪಡೆದು ಎರಡು ವರ್ಷಗಳ ಕಾಲ ಅಧ್ಯಕ್ಷನಾಗಿ ಆಯ್ಕೆಯಾಗಿದ್ದೇನೆ. ನಮ್ಮ ವಕೀಲರ ಸಮಸ್ಯೆಗಳನ್ನ ಬಗೆಹರಿಸಲು ಎಲ್ಲರ ಪರವಾಗಿ ಕೆಲಸ ಮಾಡುತ್ತೇನೆ. ನನಗೆ ಮತ ಹಾಕಿದ ಎಲ್ಲಾ…
ಹಾಸನ: 12 ಅಡಿ ಉದ್ದದ ಕಾಳಿಂಗ ಸರ್ಪದೊಂದಿಗೆ ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಶ್ವಾನವೊಂದು ತನ್ನ ಮಾಲಿಕನ ಮಕ್ಕಳ ಪ್ರಾಣ ಉಳಿಸಿ, ತನ್ನ ಪ್ರಾಣ ಬಿಟ್ಟ ಘಟನೆ ಹಾಸನ ತಾಲೂಕು ಕಟ್ಟಾಯ ಗ್ರಾಮದಲ್ಲಿ ನಡೆದಿದೆ. ಶಮಂತ್ ಎನ್ನುವವರ ತೋಟದಲ್ಲಿ ಪಿಟ್ ಬುಲ್ ಹಾಗೂ ಡಾಬರ್‌ಮನ್ ತಳಿಯ ನಾಯಿಗಳನ್ನು ಸಾಕಿದ್ದರು. ಪಿಟ್ ಬುಲ್ ಶ್ವಾನಕ್ಕೆ ಶಮಂತ್ ಅವರು ಭೀಮಾ ಎಂದು ಹೆಸರಿಟ್ಟಿದ್ದರು. ತೋಟದಲ್ಲಿ ಕೆಲಸಗಾರರು ಕೆಲಸ ಮಾಡುತ್ತಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಬಂದಿದೆ. ಈ ವೇಳೆ ಹೊರಗಡೆ ಮಕ್ಕಳು ಆಟವಾಡುತ್ತಿದ್ದು, ಕಾಳಿಂಗ ಸರ್ಪ ತೆಂಗಿನ ಗರಿಗಳ ಕೆಳಗೆ ಹೋಗಿದೆ. ಇದನ್ನು ಕಂಡ ನಾಯಿಗಳು ತೆಂಗಿನ ಗರಿಗಳ ಅಡಿಯಲ್ಲಿದ್ದ ಸರ್ಪವನ್ನು ಎಳೆದ ತಂದು ಸೆಣಸಾಡಲು ಶುರು ಮಾಡಿವೆ. ಈ ನಡುವೆ ನಾಯಿಗಳ ಶಬ್ಧ ಕೇಳಿಸಿಕೊಂಡ ಶಮಂತ್ ಅವರು, ಹೊರಗೆ ಬಂದು ಕಾದಾಟವನ್ನು ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಆದರೆ, ಭೀಮಾ ತನ್ನ ಕಾದಾಟವನ್ನು ಮುಂದುವರೆಸಿದ್ದಾನೆ. ಹಾವಿನೊಂದಿಗೆ ಸುಮಾರು ಹದಿನೈದು ನಿಮಿಷಕ್ಕೂ ಹೆಚ್ಚು ಕಾಲ ಸೆಣಸಾಡಿದ ಭೀಮಾ…
ಛತ್ತೀಸ್ ಗಢ: ಛತ್ತೀಸ್ ಗಢದ ಬಿಜಾಪುರ ಹಾಗೂ ಕಾಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 22 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಎನ್ ಕೌಂಟರ್ ಸ್ಥಳದಿಂದ 22 ನಕ್ಸಲರ ಮೃತದೇಹಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜಾಪುರ ಡಿಆರ್‌ಜಿಯ ಒಬ್ಬ ಸೈನಿಕ ಕೂಡ ಈ ಎನ್ ಕೌಂಟ ರ್‌ನಲ್ಲಿ ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಎಕೆ 47, ಎಸ್‌ಎಲ್‌ಆರ್‌ನಂತಹ ದೊಡ್ಡ ಸ್ವಯಂಚಾಲಿತ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದರು. ಮುಸಲ್ಮಾನರಿಗೆ ಸರಕಾರಿ ಗುತ್ತಿಗೆಗಳು, ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಮಸೂದೆ ಸದನದಲ್ಲಿ ತರುತ್ತಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು. ಇದು ಕಾಂಗ್ರೆಸ್ ಸರಕಾರವೇ? ಸಿದ್ದರಾಮಯ್ಯರ ಸರಕಾರವೇ ಅಥವಾ ನಿಜಾಮರ ಆಡಳಿತವೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಅಮೆರಿಕ: ಹಮಾಸ್ ಪರ ಪ್ರಚಾರವನ್ನು ಮಾಡುತ್ತಿರುವ ಆರೋಪದಲ್ಲಿ ಜಾರ್ಜ್‌ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತೀಯ ಸಂಶೋಧಕರೊಬ್ಬರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ಗಡೀಪಾರು ಮಾಡುವ ನಿರೀಕ್ಷೆಯಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬದರ್ ಖಾನ್ ಸೂರಿ ಅವರನ್ನು ಸೋಮವಾರ ರಾತ್ರಿ ವರ್ಜೀನಿಯಾದ ಅವರ ಮನೆಯ ಹೊರಗೆ ಬಂಧಿಸಿದ್ದಾರೆ. ಸೂರಿ ಅವರ ಮೇಲೆ “ಹಮಾಸ್ ಪರ ಪ್ರಚಾರವನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಲಾಗಿದೆ. ಅವರು “ತಿಳಿದಿರುವ ಅಥವಾ ಶಂಕಿತ ಭಯೋತ್ಪಾದಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ” ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಹಾಸನ: ದಿನದಿಂದ ದಿನಕ್ಕೆ ರಂಗೇರುತ್ತಿರುವ ರಣ ಬಿಸಿಲು, ಕಾಡಿನಲ್ಲಿ ಸಿಗದ ಆಹಾರ-ನೀರು. ಇದರಿಂದ ಕಂಗೆಟ್ಟ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಬೇಲೂರಿನ ಸುತ್ತಮತ್ತ ಬೀಡುಬಿಟ್ಟಿರುವ ಕಾಡಾನೆ ಭೀಮನಿಗೆ ಕುಡಿಯಲು ನೀರು ಸಿಗದೆ ಮನೆಯೊಂದರ ಬಳಿ ಪರದಾಡುತ್ತಿದ್ದ ದೃಶ್ಯ ಕಂಡು ಬಂದಿದೆ. ಬೇಲೂರು ತಾಲೂಕಿನ ಕ್ಯಾನಳ್ಳಿ ಗ್ರಾಮದ ಮನೆಯೊಂದರ ಮುಂದೆ ಭೀಮ ಬಾಯಾರಿಕೆಯಿಂದ ಡ್ರಮ್ ನಲ್ಲಿದ್ದ ನೀರನ್ನು ಕುಡಿಯಲು ಪರದಾಡುತ್ತಿದ್ದ ದೃಶ್ಯ ಸೆರೆಯಾಗಿದ್ದು, ಸೊಂಡಲಿನಿಂದ ಡ್ರಮ್ನ ಮುಚ್ಚಳ ತೆಗೆಯಲು ಹರಸಾಹಸ ಪಟ್ಟಿದ್ದು, ಕೊನೆಗೂ ಕ್ಯಾಪ್ ತೆಗೆಯಲು ಸಾಧ್ಯವಾಗದಿದ್ದಾಗ ನೆಲಕ್ಕೆ ಉರಳಿಸಿಬಿಟ್ಟಿದೆ. ಡ್ರಮ್ ಕೆಳಗೆ ಬೀಳುತ್ತಿದ್ದಂತೆ ಕ್ಯಾಪ್ ಓಪನ್ ಆಗಿದ್ದು, ನೀರನ್ನು ಹೊಟ್ಟೆ ತುಂಬಾ ಕುಡಿದು ತೆರಳಿದೆ. ನೀರನ್ನು ಮಾತ್ರ ಭೀಮ ಕುಡಿದಿದ್ದು, ಯಾವುದೆ ತೊಂದರೆ ಮಾಡದೆ ಸ್ಥಳದಿಂದ ತೆರಳಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4