Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ಸರಗೂರು: ಎನ್ ಎಂ ಎಂ ಎಸ್ ರಾಷ್ಟ್ರೀಯ ಸಾಧನೆ ಆಧಾರಿತ ವಿದ್ಯಾರ್ಥಿ ವೇತನ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಬಾರದೆ ಇರುವುದರಿಂದ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಅದರಲ್ಲಿ ರಿನಿವಲ್ ಅರ್ಜಿಗಳನ್ನು ತೆಗೆದುಕೊಳ್ಳುತ್ತಿಲ್ಲ ಎಂದು ನೊಂದ ವಿದ್ಯಾರ್ಥಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅನುದಾನಿತ ಶಾಲೆಗಳ ಎಂಟನೇ ತರಗತಿಯಲ್ಲಿ ಎನ್ ಎಂ ಎಂ ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ ನಡೆಸಲಾಗುತ್ತಿದ್ದು.ಇದರಲ್ಲಿ ಉತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವರೆಗೆ ಪ್ರತಿ ವರ್ಷ 12,000 ರೂಗಳಂತೆ ನೀಡಲಾಗುತ್ತದೆ. ಇದರೆ ಎರಡು ವರ್ಷಗಳಿಂದ ಎಸ್ಸಿ ಎಸ್ಟಿ ಮಕ್ಕಳಿಗೆ ನೀಡುತ್ತಿಲ್ಲ ಎಂದು ಆರೋಪಿಸಿದರು. ಎಸ್ಸಿ ಎಸ್ಟಿ ಮಕ್ಕಳ ರೀನಿವಲ್ ಅರ್ಜಿಗಳನ್ನು ಸಲ್ಲಿಸಿದ್ದರೂ ಅದನ್ನು ತಿರಸ್ಕರಿಸಿದ್ದಾರೆ. ಆ ವಿದ್ಯಾರ್ಥಿವೇತನದಿಂದ ವಿದ್ಯಾಬ್ಯಾಸ ಮಾಡಲು ಅನುಕೂಲವಾಗುವಂತೆ ವಿದ್ಯಾರ್ಥಿಗಳು ವ್ಯಾಸಂಗ ಮಾಡಿಕೊಂಡು ಬರುತ್ತಿದ್ದಾರೆ. ಇವಾಗ ಕೇಂದ್ರ ಸರ್ಕಾರ ಮಟ್ಟದಲ್ಲಿ ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ ನೊಂದ ವಿದ್ಯಾರ್ಥಿಗಳು ಆಗ್ರಹಿಸಿದರು. ಸಾಮಾನ್ಯ ವರ್ಗ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ.ಎಸ್ಸಿ ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ವೇತನವನ್ನು ಸರ್ಕಾರ ಅನ್ಯಾಯ…
ಸರಗೂರು: ಕಳೆದ 10 ವರ್ಷಗಳಿಂದ ತಾಲೂಕಿನಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದನ್ನು ಎದುರು ನೋಡುತ್ತಿರುವ ಕಾರ್ಯಕರ್ತರ ಕನಸನ್ನು ನನಸು ಮಾಡಲು ಕ್ಷೇತ್ರದಲ್ಲಿ ಒಗ್ಗಟ್ಟಿನಿಂದ ಪಕ್ಷ ಸಂಘಟನೆ ಮಾಡುವುದಾಗಿ ಕೆ.ಎಂ.ಕೃಷ್ಣನಾಯಕ ತಿಳಿಸಿದರು. ಸೋಮವಾರ ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರಿಂದ ಅದ್ಧೂರಿ ಸ್ವಾಗತ ಸ್ವೀಕರಿಸಿ. ನಂತರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಪಕ್ಷದ ಕಾರ್ಯಕರ್ತರು ಅನುಭವಿಸುತ್ತಿರುವ ನೋವನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕರನ್ನು ಆಯ್ಕೆ ಮಾಡಲು ಶ್ರಮಿಸಬೇಕು ಎಂದರು. ಮುಂದಿನ ಎರಡೂರು ತಿಂಗಳಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಪಂ ಚುನಾವಣೆ ನಡೆಯಲಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ತಮ್ಮಲ್ಲಿರುವ ಅಸಮಾಧಾನ ಮರೆತು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದ ಅವರು, ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಮುಂಬರುವ ವಿಧಾನಸಭೆ ಚುನಾವಣೆಗೆ ದಿಕ್ಕೂಚಿ ಎಂದರು. ತಾಲೂಕು ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಭ್ರಷ್ಟಾಚಾರ, ದುರಾಡಳಿತ, ಹಗರಣಗಳಲ್ಲಿ ಸರ್ಕಾರ ನಿರತವಾಗಿದೆ. ರಾಜ್ಯದ ಅಭಿವೃದ್ಧಿಗೆ ಹಣಕಾ ಸಿನ ಕೊರತೆ ಎದುರಾಗಿದ್ದು, ಖಜಾನೆ…
ಸರಗೂರು: ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ಜೊರಹಳ್ಳ ಗ್ರಾಮಕ್ಕೆ ಬಸ್ ವ್ಯವಸ್ಥೆ ಇರಲಿಲ್ಲ. ಗ್ರಾಮಸ್ಥರು ಶಾಸಕರಿಗೆ ಹಾಗೂ ಕೆಎಸ್ಸಾರ್ಟಿಸಿ ಇಲಾಖೆ ಅಧಿಕಾರಿಗಳಿಗೆ ಮನವಿಕ್ಕೆ ಸ್ಪಂದಿಸಿ. ಮಂಗಳವಾರದಂದು ಬಸ್ ವ್ಯವಸ್ಥೆ ಪ್ರಾರಂಭಿಸಲಾಯಿತು. ಬಸ್ ಗೆ ಪೂಜೆ ಸಲ್ಲಿಸಿದ ನಂತರ ಚಾಲಕ ನಿರ್ವಾಹಕರಿಗೆ ಸನ್ಮಾನಿಸಿ ನಂತರ ಪ್ರಭಾವಿ ಮುಖಂಡ ದೇವಲಾಪುರ ನಾಗೇಂದ್ರ ಮಾತನಾಡಿ, ಸರಗೂರು ಪಟ್ಟಣದಿಂದ ಸಾಗರೆ ಚನ್ನೀಪುರ, ಹೆಗ್ಗನೂರು ಮಾರ್ಗವಾಗಿ ಜೊರಹಳ್ಳ ಗ್ರಾಮಕ್ಕೆ ನೇರವಾಗಿ ಬಸ್ ಸಂಪರ್ಕ ಕಲ್ಪಿಸುವ ಕುರಿತು ಈ ಭಾಗದ ಜನತೆಯ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ಸ್ಪಂದಿಸಿದ ಶಾಸಕ ಅನಿಲ್ ಚಿಕ್ಕಮಾದು ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಈ ಗ್ರಾಮಕ್ಕೆ ಬಸ್ ಕಲ್ಪಿಸಿ ಮೂಲಕ ಕ್ರಮ ಕೈಗೊಂಡಿದ್ದಾರೆ ಎಂದರು. ನಾವು ಶಾಸಕ ಅನಿಲ್ ಚಿಕ್ಕಮಾದುರವರಿಗೆ ಬಸ್ ಸಮಸ್ಯೆ ಇರುವುದರಿಂದ ಅವರಿಗೆ ಮನವರಿಕೆ ಮಾಡಿಕೊಂಡು ನಂತರ ಸ್ಥಳದಲ್ಲೇ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಕರೆ ಮೂಲಕ ಬಸ್ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ ಕೂಡಲೇ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದರು. ಬಸ್…
ಔರಾದ: ನೂತನವಾಗಿ ಸಂತಪುರ ಆಸ್ಪತ್ರೆಗೆ ಆಗಮಿಸಿರುವ ಡಾ.ಸಿದ್ದಾರೆಡ್ಡಿ ಅವರಿಗೆ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಬಳಿಕ ಮಾತನಾಡಿದ ತುಕಾರಾಮ ಹಸನ್ಮುಖಿ, ಆರೋಗ್ಯ ಸೇವೆ ಎಂದರೆ ಮಾನವೀಯತೆಗೂ, ಸಮಾಜ ಸೇವೆಗೂ ಸಮಾನ. ನಮ್ಮ ಜನರ ಆರೋಗ್ಯ ಕಾಪಾಡುವ ಉದ್ದೇಶದಿಂದ ನಿಮ್ಮಂತಹ ಜ್ಞಾನ, ಅನುಭವ ಹಾಗೂ ಸೇವಾ ಮನೋಭಾವವುಳ್ಳ ವೈದ್ಯರು ಸಂತಪುರ ಆಸ್ಪತ್ರೆಗೆ ಆಗಮಿಸಿರುವುದು ನಮಗೆ ಸಂತಸದ ವಿಷಯ ಎಂದರು. ಇದೇ ವೇಳೆ ಭೀಮವಾದ ದಸಂಸ ತಾಲೂಕು ಸಂಚಾಲಕ ತುಕಾರಾಮ ಹಸನ್ಮುಖಿ, ಮಲ್ಲಿಕಾರ್ಜುನ ಜೋನ್ನೇಕೆರಿ, ಕಾಶೀನಾಥ ಗಾಯಕವಾಡ, ಅನಿಲ ಬಿರಾದರ, ಓಂಕಾರ್ ಮೇತ್ರೆ, ರತಿಕಾಂತ್ ಪಾಟೀಲ್, ಸಂಜುಕುಮಾರ್ ಸೇಂಬೆಳ್ಳೆ ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಕಟ್ಟಡದ ಸ್ವಾಧೀನ ಪತ್ರ ಇಲ್ಲದಿದ್ದರೆ ವಿದ್ಯುತ್ ಸಂಪರ್ಕ ಕಲ್ಪಿಸಲು ಅವಕಾಶವಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ವಿಧಾನ ಸಭೆಯಲ್ಲಿ ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾಡಿದ ಆಕ್ಷೇಪಕ್ಕೆ ಮಧ್ಯಪ್ರವೇಶಿಸಿ ಮಾತನಾಡಿದ ಸಚಿವರು, ಸ್ವಾಧೀನಪತ್ರವಿಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಬಾರದು ಎಂದು ಸುಪ್ರೀಂಕೋರ್ಟ್ ಆದೇಶವಿದೆ. ಅಲ್ಲದೆ ಕಳೆದ ಮಾ.13 ರಂದು ಈ ಸಂಬಂಧ ಕೆಇಆರ್ ಸಿ ಆದೇಶವಿದೆ. ಕಾಯ್ದೆಗೆ ತಿದ್ದುಪಡಿಯಾಗದ ಹೊರತು ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದಿಲ್ಲ ಎಂದರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ವಿದ್ಯುತ್ ಸಂಪರ್ಕಕ್ಕಾಗಿ 4 ಲಕ್ಷ ಕಟ್ಟಡ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಸ್ವಾಧೀನಪತ್ರ ಹಾಗೂ ಕಟ್ಟಡ ಮುಕ್ತಾಯದ ಪ್ರಮಾಣ ಪತ್ರವಿಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಬಹುದೆಂಬ ಸುಪ್ರೀಂಕೋರ್ಟ್‌ನ ಆದೇಶವಿದ್ದರೆ ನೀಡಲಿ. ಇಂದೇ ಸರ್ಕಾರ ಆದೇಶ ಹೊರಡಿಸಿ ಪ್ರತಿಯೊಬ್ಬರಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದರು. ಈ ಸಂಬಂಧ ವಿಸ್ತೃತವಾಗಿ ಮಾಹಿತಿ ನೀಡುವ ಭರವಸೆ ನೀಡಿದ ಅವರು, 4 ಲಕ್ಷ ಅರ್ಜಿದಾರರಲ್ಲಿ ಸುಪ್ರೀಂಕೋರ್ಟ್ ಆದೇಶಕ್ಕೂ ಮುನ್ನ ಹಣ ಪಾವತಿಸಿದವರು ಇದ್ದಾರೆ. ಗಮನ ಸೆಳೆಯುವ ಸೂಚನೆ ವಿಚಾರದಲ್ಲಿ…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿದ್ದ ಬಿಎಂಆರ್ ಸಿಎಲ್ ಅಧಿಕಾರಿಗಳು ಇದೀಗ ಲಗೇಜ್ ಗೂ ಶುಲ್ಕ ವಿಧಿಸಲು ಮುಂದಾಗಿದ್ದಾರೆ. ಮೆಟ್ರೋ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರು ಇನ್ನು ಮುಂದೆ ತಾವು ಕೊಂಡೊಯ್ಯುವ ಲಗೇಜ್‌ಗಳಿಗೂ ಟಿಕೆಟ್ ಪಡೆದುಕೊಳ್ಳುವುದು ಅನಿವಾರ್ಯವಾಗಿದೆ. ದೇಶದಲ್ಲೇ ಬೆಂಗಳೂರು ಮೆಟ್ರೋ ಅತ್ಯಂತ ದುಬಾರಿ ಎನ್ನುವ ಮಾತುಗಳು ಕೇಳಿ ಬರುತ್ತಿರುವ ಸಮಯದಲ್ಲೇ ಲಗೇಜ್‌ಗೂ ಶುಲ್ಕ ವಿಧಿಸಿರುವ ಈ ಕ್ರಮ ಜನಾಕ್ರೋಶಕ್ಕೆ ಕಾರಣವಾಗಿದೆ. ತಾವು ಮೆಟ್ರೋದಲ್ಲಿ ಸಂಚರಿಸುತ್ತಿದ್ದಾಗ ತಮ ಬಳಿ ಇದ್ದ ಒಂದು ಬ್ಯಾಗ್ ಗೆ 30 ರೂ. ಶುಲ್ಕ ವಿಧಿಸಿರುವುದನ್ನು ಪೋಟೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಅಪ್‌ಲೋಡ್ ಮಾಡಿ ತಮ ಆಕ್ರೋಶ ಹೊರ ಹಾಕಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ದಾವಣಗೆರೆ: ಬೀದಿ ನಾಯಿಗಳ ದಾಳಿಗೊಳಗಾಗಿ ರೇಬಿಸ್ ಕಾಯಿಲೆಯಿಂದ ಕಳೆದ 4 ತಿಂಗಳಿನಿಂದ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದ 4 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಶಾಸ್ತ್ರಿ ಲೇಔಟ್‌ನ ನಿವಾಸಿ ಮೊಹಮ್ಮದ್ ಶಾಕೀರ್ ಆಲಿ, ಅತೀಹಾ ಖಾನಂ ದಂಪತಿಯ ಮಗಳು ಖದೀರಾ ಬಾನು (4) ಮೃತ ಬಾಲಕಿ. ಏಪ್ರಿಲ್ 27 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ, ಗಂಭೀರವಾಗಿ ಗಾಯಗೊಳಿಸಿದ್ದವು. ಕೂಡಲೇ ಪೋಷಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಯನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಕೊಡಿಸಿ ಮನೆಗೆ ಕರೆತಂದಿದ್ದರು. ಆದರೆ. ಒಂದು ತಿಂಗಳ ಹಿಂದೆ ಬಾಲಕಿ ವಾಂತಿ ಮಾಡಿಕೊಂಡು ಅಸ್ವಸ್ಥಳಾಗಿದ್ದಳು. ಗಾಬರಿಗೊಂಡ ಪೋಷಕರು ಬೆಂಗಳೂರಿನ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲು ಮಾಡಿದ್ದು, ತಪಾಸಣೆ ನಡೆಸಿದ ವೈದ್ಯರು ಮಗುವಿಗೆ ರೇಬಿಸ್ ತಗಲಿರುವುದನ್ನು ಪತ್ತೆ ಮಾಡಿದ್ದರು. ಕೂಡಲೇ ಐಸಿಯುನಲ್ಲಿರಿಸಿ ಚಿಕಿತ್ಸೆ ಆರಂಭಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಭಾನುವಾರ…
ಚಿಕ್ಕಮಗಳೂರು: ಕುಡಿತದ ಮತ್ತಿನಲ್ಲಿ ಮಗನೇ ತಂದೆಯನ್ನು ಚಾಕುವಿನಿಂದ ಚುಚ್ಚು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಮಂಜುನಾಥ್ (51) ಹತ್ಯೆಗೀಡಾದ ವ್ಯಕ್ತಿಯಾಗಿದ್ದಾನೆ ಪುತ್ರ ರಂಜನ್ (21) ಕೊಲೆ ಗೈದ ಆರೋಪಿಯಾಗಿದ್ದಾನೆ. ಆರೋಪಿ ರಂಜನ್ ಆ.16ರ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮದ್ಯಪಾನ ಮಾಡಿಕೊಂಡು ಮನೆ ಬಂದಿದ್ದ. ಈ ವೇಳೆ ತಂದೆ ತಾಯಿಯ ನಡುವೆ ಜಗಳ ನಡೆಯುತ್ತಿತ್ತು. ಜಗಳ ಬಿಡಿಸಲು ಹೋದ ರಂಜನ್ ತಂದೆಗೆ ಹಿಂದಿನಿಂದ ಚಾಕುವಿನಿಂದ ಇರಿದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಚುಚ್ಚಿದ ಗಾಯಕ್ಕೆ ಅರಿಶಿಣ ಪುಡಿ ಹಚ್ಚಿ ಮಲಗಿಸಿದ್ದರು. ರಾತ್ರಿ ತೀವ್ರ ರಕ್ತಸ್ರಾವದಿಂದ ಮಂಜುನಾಥ್ ಮೃತಪಟ್ಟಿದ್ದರು. ಬೆಳಗ್ಗೆ ತಂದೆ ಸಾವನ್ನಪ್ಪಿರುವ ವಿಚಾರ ತಿಳಿದ ಪುತ್ರ ಜಗಳ ಬಿಡಿಸುವ ವೇಳೆ ಚಾಕು ತಾಗಿ ಗಾಯವಾಗಿದೆ ಎಂದು ಕೆಲವರ ಬಳಿ ಹೇಳಿದರೆ, ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಅಂತ ಇನ್ನು ಕೆಲವರ ಬಳಿ ಹೇಳಿಕೊಂಡಿದ್ದ. ಪ್ರಕರಣದ ಮಾಹಿತಿ ಪಡೆದ ಆಲ್ದೂರು ಪೊಲೀಸರು ಪುತ್ರನನ್ನು ವಿಚಾರಣೆ ನಡೆಸಿದ…
ಬೀದರ್: ಜಿಲ್ಲೆಯ ಔರಾದ –ಕಮಲನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಈಚೆಗೆ ಸುರಿದ ಧಾರಾಕಾರ ಮಳೆಯಿಂದ ಬಹುತೇಕ ಜಮೀನುಗಳಿಗೆ ನೀರು ನುಗ್ಗಿದೆ. ಔರಾದ್ ಕಮಲನಗರ, ಠಾಣಕುಶನೂರ್, ಬೆಳಕುಣಿ (ಚೌದ್ರಿ) ದಾಬಕಾ, ಸಂತಪುರ, ವಡಗಾಂವ್, ಸೇರಿದಂತೆ ಮತ್ತಿತರ ಗ್ರಾಮಗಳ ಜಮೀನುಗಳು ಜಲಾವೃತವಾಗಿವೆ ಎಂದು ರೈತರು ಅಳಲು ತೋಡಿಕೊಂಡರು. ಜಮೀನುಗಳಲ್ಲಿ ನೀರು ನಿಂತ ಸತತವಾಗಿ ಸುರಿಯುತ್ತಿರುವ ಮಳೆಗೆ ತಾಲೂಕಿನಲ್ಲಿ ಹತ್ತಿ, ಉದ್ದು ಹೆಸರು ಮತ್ತು ತೊಗರಿ ಸೋಯಾ, ಬೆಳೆಗೆ ಹೆಚ್ಚಿನ ಹಾನಿಯಾಗಿದೆ. ಹಾನಿಯಾದ ಪ್ರದೇಶಕ್ಕೆ ಅಧಿಕಾರಿಗಳು ಭೇಟಿ ನೀಡಿ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ದಸಂಸ ಜಿಲ್ಲಾ ಸಂಚಾಲಕ ಧನರಾಜ ಮುಸ್ತಾಪುರ ಒತ್ತಾಯಿಸಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಹಾಸನ: ಭಾರೀ ಬಾಳೆ ಮಳೆಯ ಹಿನ್ನೆಲೆ ಶಾಲೆಯ ಗೋಡೆಯೊಂದು ಕುಸಿದು ಬಿದ್ದಿರುವ ಘಟನೆ ಸಕಲೇಶಪುರದ ಕಡಗರವಳ್ಳಿ ಗ್ರಾಮದಲ್ಲಿ ನಡೆದಿದೆ. ಹಾಸನ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆಯಾಗುತ್ತಿತ್ತು. ಆ.18ರಂದು ಶಾಲೆಗೆ ರಜೆ ಕೂಡ ನೀಡಲಾಗಿತ್ತು. ಇದೇ ಸಂದರ್ಭದಲ್ಲಿ ಶಾಲೆಯ ಗೋಡೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ನೀಡಿದ್ದರಿಂದಾಗಿ ಭಾರೀ ಅನಾಹುತವವೊಂದು ತಪ್ಪಿದಂತಾಗಿದೆ. ಶಾಲೆ ಬೀಳುವ ಸ್ಥಿತಿಯಲ್ಲಿದ್ದರೂ ನಿರ್ಲಕ್ಷ್ಯವಹಿಸಿರುವ ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ಕೇಳಿ ಬಂದಿದೆ. ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮೊನ್ನೆಯಿಂದ ಸುರಿಯುತ್ತಿರುವ ಭಾರಿ ಮಳೆಗೆ ರಸ್ತೆಯ ತುಂಬೆಲ್ಲ ನೀರು ಹರಿಯುತ್ತಿದೆ. ಹಲವು ಕಡೆಗಳಲ್ಲಿ ಭೂಕುಸಿತ ಉಂಟಾಗಿದ್ದು, ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC