Author: admin

ಚಿಕ್ಕಮಗಳೂರು: ಕಾಡಾನೆಯನ್ನು ಕಾರ್ಮಿಕರು ಪ್ರಾಣ ಭಯದಿಂದ ಮಕ್ಕಳನ್ನು ಎತ್ತಿಕೊಂಡು ಓಡಿದ ಘಟನೆ ಮೂಡಿಗೆರೆ–ಬೇಲೂರು ಗಡಿ ಮಲಸಾವರ ಬಳಿಯ ಬಕ್ರವಳ್ಳಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರ್ಮಿಕರತ್ತ ಒಂಟಿ ಸಲಗ ನುಗ್ಗಿದೆ. ಕಾರ್ಮಿಕರ ಜೊತೆಗೆ ಪುಟ್ಟ ಮಕ್ಕಳು ಕೂಡ ಇದ್ದರು. ಈ ವೇಳೆ ಏನು ಮಾಡಬೇಕು ಎಂದು ತೋಚದೇ ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ಪ್ರಾಣ ಉಳಿಸಿಕೊಳ್ಳಲು ಕಾರ್ಮಿಕರು ಓಡಿದ್ದಾರೆ. ಕಾಫಿತೋಟದ ಕಾರ್ಮಿಕರತ್ತ ಕಾಡಾನೆ ನುಗ್ಗಿದ್ದು, ಕಾರ್ಮಿಕರು ಓಡಿದಂತೆ ಹಿಂದೆಯೇ ಒಂಟಿ ಸಲಗ ಅಟ್ಟಾಡಿಸಿಕೊಂಡು ಬಂದಿದೆ. ಸ್ವಲ್ಪದರಲ್ಲೇ ಕಾರ್ಮಿಕರು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ರಾಯಚೂರು: ನಕಲಿ ನೋಟು ಚಲಾವಣೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮುಂದಾಗಿದ್ದ ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳು. ಹೋಟೆಲ್ ನಲ್ಲಿ ಬಿರಿಯಾನಿ ತಿಂದಿದ್ದ ಈ ಇಬ್ಬರು ನಕಲಿ 500 ರೂ. ನೋಟು ಚಲಾವಣೆ ಮಾಡಿದ್ದರು ಎನ್ನಲಾಗಿದೆ. ರಾಯಚೂರು ನಗರದ ಹೊಟೇಲ್ ನಲ್ಲಿ ಈ ಘಟನೆ ನಡೆದಿದೆ. ಚಿಕನ್ ಬಿರಿಯಾನಿ ತಿಂದು 500 ರೂ. ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲೀಕ ನೋಟು ಪರಿಶೀಲಿಸಿದಾಗ ನಕಲಿ ನೋಟು ಎನ್ನುವುದು ಬಯಲಾಗಿದೆ. ಮನೋರಂಜನೆಗಾಗಿ ಬಳಸುವ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ನಕಲಿ ನೋಟನ್ನ ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು. ಬಳಿಕ ಹೋಟೆಲ್ ಮಾಲೀಕ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರು ಆರೋಪಿಗಳನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ಉಡುಪಿ: ಮೀನು ಕದ್ದ ಆರೋಪ ಹೊರಿಸಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಮೂಲದ ದಲಿತ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಮಾ. 18ರಂದು ಈ ಘಟನೆ ನಡೆದಿದ್ದು, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸುತ್ತಿರುವ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧ ಹಲ್ಲೆಗೊಳಗಾಗಿದ್ದ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ  ಆರೋಪಿಗಳಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋವನ್ನು ಪರಿಶೀಲಿಸಿ ಮಹಿಳೆಗೆ ಹಲ್ಲೆ ನಡೆಸಿರುವವರನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ವಿಡಿಯೋದಲ್ಲಿ ಪರಿಶೀಲನೆ ನಡೆಸಿ ಕಾನೂನು ಕ್ರಮಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ರಾಮನಗರ: ಬಿಡದಿಯಲ್ಲಿರುವ ಪ್ರತಿಷ್ಠಿತ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕದ ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಬಂಧಿತರು ಎಂದು ಗುರುತಿಸಲಾಗಿದೆ. ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದರು. ಜೊತೆಗೆ ಕನ್ನಡಿಗರನ್ನು ಅವಹೇಳನಕಾರಿ ಭಾಷೆಯಲ್ಲಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕನ್ನಡಪರ ಸಂಘಟನೆಗಳು ಕಾರ್ಖಾನೆ ಬಳಿ ಜಮಾಯಿಸಿದ್ದರು. ಪ್ರತಿಭಟನೆ ನಡೆಸಿ ಕಂಪನಿಯ ಆಡಳಿತ ಮಂಡಳಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ದೇಶದ್ರೋಹಿ ಪದ ಬಳಸಿದ ಹಾಗೂ ಕನ್ನಡಿಗರನ್ನು ನಿಂದಿಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಆಗ್ರಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈಲಪ್ಪನಮಠದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅನುದಾನಿತ ಪ್ರೌಢಶಾಲೆಯನ್ನು ಮುಚ್ಚಲು ಬಿಇಓ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಒತ್ತಡ ಹಾಕುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. 4 ವಾರಗಳ ಕಾಲ ಯಥಾ ಸ್ಥಿತಿ ಕಳೆದುಕೊಳ್ಳುವಂತೆ ಕೋರ್ಟ್ ಆದೇಶವಿದ್ದರೂ ಕೂಡ, ಬಿಇಓ ಅಕ್ರಮವಾಗಿ ಶಾಲೆ ಮುಚ್ಚಲು ಮುಂದಾಗಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಪ್ಪ ಗಂಭೀರ ಆರೋಪ ಮಾಡಿದ್ದಾರೆ. ಹಾಜರಾತಿ ಹಾಗೂ ಎಲ್ಲಾ ದಾಖಲೆಗಳಿದ್ದರೂ ಕನ್ನಡ ಶಾಲೆಗೆ ಬೀಗ ಹಾಕಲು ಮುಂದಾಗಿದ್ದಾರೆ. SC, ST ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿರುವ ಶಾಲೆಯನ್ನ ಮುಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಕನ್ನಡ ಶಾಲೆಗಳ ಭವಿಷ್ಯ ಅಪಾಯಕ್ಕೆ ದೂಡುತ್ತಿದ್ದಾರೆ ಎಂಬ ಆರೋಪವನ್ನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಪ್ಪ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 2627 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ತಯಾರಿಕೆ, ಬಿಎಲ್ ಓಗಳ ನೇಮಕಾತಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ನೋಂದಾಯಿತ/ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಸದೃಢಪಡಿಸುವ ಹಾಗೂ ಯಾವುದೇ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬಂಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಚುನಾವಣೆಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ ಸೈಟ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ಪ್ರಕಟಿಸಲಾಗುತ್ತಿದ್ದು, ರಾಜಕೀಯ ಪಕ್ಷಗಳು…

Read More

ತುಮಕೂರು: ಬೆಸ್ಕಾಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿ ಅಂತರಸನಹಳ್ಳಿ 220 ಕೆವಿ ಸ್ವೀಕರಣಾ ಕೇಂದ್ರದ 100 ಎಂವಿಎ ಸಾಮರ್ಥ್ಯದ ಪರಿವರ್ತಕವು ವಿಫಲವಾಗಿರುವುದರಿಂದ ಸದರಿ ಪರಿವರ್ತಕ ವ್ಯಾಪ್ತಿಯಲ್ಲಿರುವ ಉಪಸ್ಥಾವರಗಳಲ್ಲಿ 30 ದಿನಗಳ ಕಾಲ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ತುಮಕೂರು, ಮೆಳೆಕೋಟೆ, ಬಡ್ಡಿಹಳ್ಳಿ, ಊರ್ಡಿಗೆರೆ, ಸಿಟಿಕೆರೆ, ಅಂತರಸನಹಳ್ಳಿ, ಬೆಳಧರ, ಬೆಳ್ಳಾವಿ, ಹಿರೇಹಳ್ಳಿ, ಹೊನ್ನುಡಿಕೆ, ಹೆಗ್ಗೆರೆ, ಮಲ್ಲಸಂದ್ರ, ದೊಡ್ಡಸಾರಂಗಿ, ಚೇಳೂರು, ಹಾಗಲವಾಡಿ, ಹೊಸಕೆರೆ ಹಾಗೂ ನಂದಿಹಳ್ಳಿ ಕ್ರಾಸ್ನಲ್ಲಿರುವ ಐಪಿ ಫೀಡರ್ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಕೆಲವು ಸಂದರ್ಭದಲ್ಲಿ ನಗರದ ಫೀಡರ್, ಕೈಗಾರಿಕಾ ಫೀಡರ್ ಹಾಗೂ ನಿರಂತರ ಜ್ಯೋತಿ ಫೀಡರ್ಗಳಲ್ಲಿಯೂ ಸಹ ವ್ಯತ್ಯಯ ಉಂಟಾಗಲಿದೆ. ಸದರಿ ಪರಿವರ್ತಕವನ್ನು ದುರಸ್ತಿಗೊಳಿಸಲು ಸುಮಾರು 30 ದಿನಗಳ ಕಾಲಾವಕಾಶ ಬೇಕಾಗಿರುವುದರಿಂದ ಸಾರ್ವಜನಿಕರು/ಗ್ರಾಹಕರು/ ಕೈಗಾರಿಕೋದ್ಯಮಿಗಳು/ರೈತ ಬಾಂಧವರು ಬೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯು ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ವೇಳಾಪಟ್ಟಿ ಪ್ರಕಟವಾಗಿದೆ ಎಂದು ತುಮಕೂರು ತಾಲ್ಲೂಕು ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ ತಿಳಿಸಿದ್ದಾರೆ. ಪರೀಕ್ಷಾ ವೇಳಾಪಟ್ಟಿ: ಪ್ರಕಟಿತ ವೇಳಾಪಟ್ಟಿಯನ್ವಯ ಮಾರ್ಚ್ 21ರಂದು ಪ್ರಥಮ ಭಾಷೆಯಾದ ಕನ್ನಡ/ತೆಲುಗು/ಹಿಂದಿ/ಮರಾಠಿ/ತಮಿಳು/ಉರ್ದು/ಇಂಗ್ಲೀಷ್/ಇಂಗ್ಲೀಷ್(NCERT)/ ಸಂಸ್ಕೃತ; ಮಾ.24 ರಂದು ಗಣಿತ, ಸಮಾಜ ಶಾಸ್ತ್ರ; ಮಾ.26ರಂದು ದ್ವಿತೀಯ ಭಾಷೆ ಇಂಗ್ಲೀಷ್/ ಕನ್ನಡ; ಮಾ.29ರಂದು ಸಮಾಜ ವಿಜ್ಞಾನ; ಏಪ್ರಿಲ್ 1ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್- IV / ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್– IV / ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- IV / ಪ್ರೋಗ್ರಾಮಿಂಗ್ ಇನ್ ANSI ‘ಅ’ ಹಾಗೂ ಅರ್ಥಶಾಸ್ತ್ರ; ಏಪ್ರಿಲ್ 2ರಂದು ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ; ಏಪ್ರಿಲ್ 4ರಂದು ತೃತೀಯ ಭಾಷೆಯಾದ ಹಿಂದಿ(NCERT), ಹಿಂದಿ/ಕನ್ನಡ/ ಇಂಗ್ಲೀಷ್/ ಅರೇಬಿಕ್/ ಪರ್ಷಿಯನ್/ ಉರ್ದು/…

Read More

ತುಮಕೂರು: ರುಡ್ ಸೆಟ್ ಸಂಸ್ಥೆಯ ವತಿಯಿಂದ ಏಪ್ರಿಲ್ 16 ರಿಂದ ಹಮ್ಮಿಕೊಂಡಿರುವ ಹಸು ಸಾಕಾಣಿಕೆ(ಹೈನುಗಾರಿಕೆ) ಮತ್ತು ಎರೆಹುಳುಗೊಬ್ಬರ ಕುರಿತ 10 ದಿನಗಳ ಉಚಿತ ತರಬೇತಿಗೆ ಗ್ರಾಮೀಣ ನಿರುದ್ಯೋಗಿ ಯುವಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡು/ಬಿಪಿಎಲ್ ಕಾರ್ಡನ್ನು ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು ಏಪ್ರಿಲ್ 4 ಕಡೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ ರುಡ್ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ ಸೆಟ್ ಸಂಸ್ಥೆ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ವಿಷಯಗಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 154 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ರೀಟೇಲ್ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 37 ವಿದ್ಯಾರ್ಥಿಗಳ ಪೈಕಿ 36 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಬ್ಬ ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ. ಅಂತೆಯೇ ಆಟೋಮೊಬೈಲ್ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 36 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 84 ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More