Subscribe to Updates
Get the latest creative news from FooBar about art, design and business.
- ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿನ ಹಾಹಾಕಾರ: ಸ್ಥಳಕ್ಕೆ ತಾಲೂಕು ಅಧಿಕಾರಿಗಳ ಭೇಟಿ, ಭರವಸೆ
- ಸರಗೂರು: ಮೈಸೂರು ಜಿಲ್ಲಾ ಗ್ರಾಮಾಂತರ ಬಿಜೆಪಿ ಉಪಾಧ್ಯಕ್ಷರಾಗಿ ಮನುಗನಹಳ್ಳಿ ಎಂ.ಪಿ. ಮಂಜುನಾಥ್ ನೇಮಕ
- ತುಮಕೂರು: ವಿಮೆ ಹಣ, ಮದ್ಯದ ಅಮಲಿಗೆ ನಡೆದಿದ್ದ 3 ಭೀಕರ ಕೊಲೆ ಕೇಸ್ ಭೇದಿಸಿದ ಪೊಲೀಸರು; 7 ಮಂದಿ ಬಂಧನ
- ಉತ್ತಮ ಆರೋಗ್ಯಕ್ಕೆ ರಕ್ತ ಪರೀಕ್ಷೆ ಸಹಕಾರಿ: ಮುರಳೀಧರ್ ಹಾಲಪ್ಪ
- ತುಮಕೂರು: ಆನ್ಲೈನ್ ಕೌನ್ಸಿಲಿಂಗ್ ಮೂಲಕ 41 ಸರ್ಕಾರಿ ನೌಕರರ ವರ್ಗಾವಣೆ
- ವೃದ್ದೆಯನ್ನು ಕೊಲೆ ಮಾಡಿ ಕೇರಳ ರಾಜ್ಯದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳ ಬಂಧನ
- ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
- ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
Author: admin
ತಿಪಟೂರು: ಧರ್ಮಸ್ಥಳದಲ್ಲಿ ಅನಾಮಿಕನ ದೂರಿನ ಮೇರೆಗೆ ಎಸ್ ಐಟಿ ನೇತೃತ್ವದಲ್ಲಿ ನಡೆಯುತ್ತಿರುವ ಶೋಧ ಕಾರ್ಯ ಬೆಟ್ಟ ಅಗೆದು ಇಲಿ ಹಿಡಿದರು ಎಂಬಂತಾಗಿದ್ದು, ಸರ್ಕಾರದ ಲಕ್ಷಾಂತರ ಹಣ ಸುಮ್ಮನೆ ಖರ್ಚಾಗಿದೆ. ಇದರಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ನಿವೃತ್ತ ಎಸಿಪಿ ಹಾಗೂ ತಿಪಟೂರು ಹೋರಾಟಗಾರ ಸಮಿತಿಯ ಲೋಕೇಶ್ವರ್ ಅಸಮಾಧಾನ ವ್ಯಕ್ತಪಡಿಸಿದರು. ಎಸ್ ಐಟಿ ರಚಿಸಿ ಅದಕ್ಕೆ ಡಿಜಿ ನೇಮಕ ಮಾಡಿ ಅನವಶ್ಯಕವಾಗಿ ದೊಡ್ಡ ತಂಡವನ್ನೇ ರಚಿಸಲಾಗಿದೆ, ಇದರಿಂದ ಸ್ಥಳೀಯ ಭಾಗದ ಪೊಲೀಸರ ನಂಬಿಕೆ ಕಡಿಮೆ ಮಾಡಿದಂತಾಗುತ್ತದೆ. ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರಿಂದಲೇ ತನಿಖೆ ಮಾಡಿಸಬಹುದಿತ್ತು, ಅದು ಬಿಟ್ಟು ಇಷ್ಟೊಂದು ಹಣ ಖರ್ಚು ಮಾಡಿ ಬೇರೆ ಅಧಿಕಾರಿಗಳನ್ನು ನೇಮಿಸಿ ಸಮಯ ವ್ಯರ್ಥ ಮಾಡುವ ಅವಶ್ಯಕತೆ ಇರಲಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ವಿಚಾರದಲ್ಲಿ ಏಕ ಪಕ್ಷೀಯ ನಿರ್ಧಾರ ಕೈಗೊಂಡಿದ್ದು, ಸಂಪುಟದ ಸದಸ್ಯರಿಗೆ ಈ ವಿಚಾರವೇ ಗೊತ್ತಿಲ್ಲ ಎಂದು ತಿಳಿಸಿದರು. ಸರ್ಕಾರದ ವೈಫಲ್ಯವನ್ನು ಮುಚ್ಚಿ ಹಾಕಲು ಜನರ ಗಮನ ಬೇರೆಡೆ ಸೆಳೆಯಲು ಧರ್ಮಸ್ಥಳ…
ಕೊರಟಗೆರೆ : ಜನ ಮೆಚ್ಚಿದ ನಾಯಕ, ಆಧುನಿಕ ಭಗೀರಥ ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್‌ರವರ 58ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸುಧಾಕರ್ ಲಾಲ್ ಅಭಿಮಾನಿ ಬಳಗ ಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ, ಆಸ್ಪತ್ರೆ ರೋಗಿಗಳಿಗೆ ಹಣ್ಣು, ಬ್ರೆಡ್ ವಿತರಿಸಿದ್ದು, ಮಾಜಿ ಶಾಸಕ ಸುಧಾಕರ್ ಲಾಲ್ ಸಾರ್ವಜನಿಕ ಸ್ಥಳದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿಕೊಂಡರು. ಮಾಜಿ ಶಾಸಕ ಪಿ.ಆರ್.ಸುಧಾಕರ್ ಲಾಲ್ ಶ್ರೀಕಟ್ಟೆ ಗಣಪತಿಗೆ ಪೂಜೆ ಸಲ್ಲಿಸಿ ಮಾತನಾಡಿ, ಮಾಜಿ ಪ್ರಧಾನಮಂತ್ರಿ ದೇವೇಗೌಡ ಅಪ್ಪಾಜಿ, ಕೇಂದ್ರ ಸಚಿವ ಹೆಚ್.ಡಿ. ಕುಮಾರಣ್ಣನವರ, ವಿ.ಸೋಮಣ್ಣ, ಹಾಗೂ ಜೆಡಿಎಸ್ ರಾಜ್ಯ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ರವರ ಮಾರ್ಗದರ್ಶನದಲ್ಲಿ ಬಡವರ ಕೆಲಸಗಳನ್ನು ಮುಂದುವರೆಸಿಕೊಂಡು ಬಂದಿದ್ದೇನೆ, ಇಂದು ಪಕ್ಷದ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳ ಬಳಗವು ನನ್ನ ಹುಟ್ಟು ಹಬ್ಬವನ್ನು ವಿಶೇಷವಾಗಿ ಆಚರಿಸಿ ಅಭಿಮಾನ ತೋರಿದ್ದು, ಪ್ರತಿಯೊಬ್ಬರ ಪ್ರೀತಿಗೂ ಅಭಾರಿಯಾಗಿರುತ್ತೇನೆ ಎಂದು ಹೇಳಿದರು. ಜೆಡಿಎಸ್ ಪಕ್ಷದ ತಾ.ಅಧ್ಯಕ್ಷ ಕಾಮರಾಜು ಮಾತನಾಡಿ, ಮಾಜಿ ಶಾಸಕ ಸುಧಾಕರ್ ಲಾಲ್…
ಕೊರಟಗೆರೆ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಧ್ಯೆ ಸಮನ್ವಯತೆ ಇಲ್ಲದೆ ಇದ್ದರೆ ಅಭಿವೃದ್ಧಿ ಅಸಾಧ್ಯ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ತಿಳಿಸಿದರು. ತಾಲ್ಲೂಕಿನ ತುಂಬಾಡಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ್ದ ಆಂಜನೇಯಸ್ವಾಮಿ ಸಮುದಾಯ ಭವನವನ್ನು ಉದ್ಘಾಟಿಸಿ ಮಾತನಾಡಿ, ದೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮದ್ಯೆ ಸಮನ್ವಯತೆ ಇರಬೇಕು ಆಗ ಮಾತ್ರ ದೇಶ ಮತ್ತು ರಾಜ್ಯಗಳು ಅಭಿವೃದ್ಧಿ ಹೊಂದುತ್ತವೆ ಎಂದು ಹೇಳಿದರು. ಈ ದೇಶಕ್ಕೆ ನರೇಂದ್ರ ಮೋದಿಯವರು ಪ್ರಧಾನಿಯಾಗದ್ದಿದ್ದರೆ ದೇಶ ಪರಿಸ್ಥಿತಿ ಈಗ ಏನು ಆಗುತ್ತಿತೋ ಗೊತ್ತಿಲ್ಲ, ಅಪರೇಷನ್ ಸಿಂಧೂರ ಈ ದೇಶದ ಸ್ವಾಭಿಮಾನ ಪ್ರತೀಕ. ಸ್ವಾತಂತ್ರ್ಯದ ದಿನದಂದು ದೇಶದಲ್ಲಿ ಗ್ರಾ.ಪಂ ಅಧ್ಯಕ್ಷರನ್ನು ಕರಸಿ ಗೌರವಿಸುವ ಕಾರ್ಯವನ್ನು 10 ವರ್ಷಗಳಿಂದ ಮಾಡಿಕೊಂಡು ಬರುತ್ತಿದ್ದಾರೆ. ದೇಶದ ಜನರ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗೆ ೫ ಲಕ್ಷ ಕೋಟಿ ನೀಡಿದ್ದಾರೆ. ಇತಂಹ ಪ್ರದಾನಿ ವಿಶ್ವದಲ್ಲೇ ವಿರಳ ಎಂದರು. ಡಾ.ಜಿ.ಪರಮೇಶ್ವರ ಬಗ್ಗೆ ಮೆಚ್ಚುಗೆ: ಕೇಂದ್ರ ಸಚಿವ ಸೋಮಣ್ಣ ಗೃಹ ಸಚಿವ ಡಾ.ಜಿ.ಪರಮೇಶ್ವರರನ್ನು ಬಿಜೆಪಿ ಮತ್ತು…
ಕೋಲಾರ: ತಲ್ವಾರ್ ನಿಂದ ತಲೆಗೆ ಹೊಡೆದು ತಮ್ಮನೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಚಲಪತಿ ಅಲಿಯಾಸ್ ವೆಂಕಟಾಚಲಪತಿ (50) ಕೊಲೆಯಾದ ಅಣ್ಣ. ಪಕ್ಕದ ಮನೆಯಲ್ಲೇ ವಾಸ ಮಾಡುವ ತಮ್ಮ ಮುನಿರಾಜು (40) ಕೊಲೆ ಮಾಡಿ ಬಳಿಕ ಪೊಲೀಸರಿಗೆ ಫೋನ್ ಮಾಡಿ ವಿಷಯ ತಿಳಿಸಿದ್ದಾನೆ. ಬೆಳಗ್ಗೆ 6:30ರ ಸುಮಾರಿಗೆ ಕುರಿಗಳಿಗೆ ಮೇವು ನೀಡಲು ಹೋದ ಅಣ್ಣನನ್ನು ತಲ್ವಾರ್‌ನಿಂದ ಕೊಚ್ಚಿ ತಮ್ಮ ಕೊಲೆ ಮಾಡಿದ್ದಾನೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ರಾಮಾಪುರದಲ್ಲಿ ಇಂದು ಮುಂಜಾನೆ ಈ ಘಟನೆ ನಡೆದಿದೆ. ಅಣ್ಣ ಚಲಪತಿ ಜಮೀನಿನಲ್ಲಿ ಸರಿಯಾಗಿ ಭಾಗ ಕೊಡದ ಹಿನ್ನೆಲೆ ಈ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಇನ್ನೂ ಸ್ಥಳಕ್ಕೆ ಎಫ್‌ಎಸ್‌ಎಲ್ ತಂಡ ಹಾಗೂ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೂದಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೀದರ್: ಭಾರೀ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು ಔರಾದ ತಾಲೂಕಿನ ಬೊಂತಿ ತಾಂಡಾ ಸಮೀಪದ ಸೇತುವೆ ಮಳೆ ಕೊಚ್ಚಿ ಹೋಗಿರುವ ಸ್ಥಳಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಔರಾದ್ ತಹಶೀಲ್ದಾರ್ ಮಹೇಶ್ ಪಾಟೀಲ್, ಬೀದರ್ ಎಸಿ ಶಕೀಲ್, ಔರಾದ್ ಸಿಪಿಐ ರಘುವೀರ್ ಸಿಂಗ್ ಠಾಕೂರ್ ಸೇರಿದಂತೆ ಗ್ರಾಮಸ್ಥರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ತುಂಗಭದ್ರಾ ಜಲಾಶಯದ 33 ಕ್ರಸ್ಟ್ ಗೇಟನ್ನೂ ಕೂಡಲೇ ಬದಲಾಯಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರವನ್ನು ಸೋಮವಾರ ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಕಳೆದ ಆಗಸ್ಟ್ ನಲ್ಲಿ ಜಲಾಶಯದ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದಿತ್ತು. ಹೀಗಾಗಿ ಸಾವಿರಾರು ಕ್ಯುಸೆಕ್ ನೀರು ಹರಿದು ವ್ಯರ್ಥವಾಗಿದೆ. ಅದಕ್ಕೆ ಶಾಶ್ವತ ಪರಿಹಾರ ನೀಡಿದೆ ವಿಳಂಬ ಮಾಡಿದ್ದರಿಂದ ನೀರಿನ ಒತ್ತಡ ಇತರ ಗೇಟ್ ಗಳ ಮೇಲೆ ಬಿದ್ದಿದೆ. ಇದರ ಪರಿಣಾಮವಾಗಿ ಎಲ್ಲ 33 ಕ್ರಸ್ಟ್ ಗೇಟನ್ನೂ ತಕ್ಷಣ ಬದಲಿಸಬೇಕಾದ ಪರಿಸ್ಥಿತಿ ಒದಗಿಬಂದಿದೆ ಎಂದರು. ಕೊಪ್ಪಳ, ರಾಯಚೂರು, ಬಳ್ಳಾರಿ ಮೊದಲಾದ ಜಿಲ್ಲೆಗಳ ರೈತರು ಪ್ರತಿವರ್ಷ 2 ಬೆಳೆ ಬೆಳೆಯುತ್ತಿದ್ದರು. ಆದರೆ, ರಾಜ್ಯ ಸರ್ಕಾರ ಅಥವಾ ಸಂಬಂಧಿತ ಸಚಿವರು, ತುಂಗಭದ್ರಾ ಜಲಾಶಯ ನೀರಾವರಿ ಮಂಡಳಿಯಲ್ಲಿ ಚರ್ಚೆ ಮಾಡಿ, ಒತ್ತಡ ಹಾಕದ ಪರಿಣಾಮವಾಗಿ ಈ ಬಾರಿ ರೈತರು ಒಂದೇ ಬೆಳೆಗೆ ತೃಪ್ತಿ ಪಡುವ ಸಂದರ್ಭ ಬಂದಿದೆ ಎಂದು ಟೀಕಿಸಿದರು. ಸ್ವಾತಂತ್ರ‍್ಯ ಹೋರಾಟಗಾರರ ಮಾಸಾಶನ ಕೊಡುವ ಯೋಗ್ಯತೆಯೂ ಈ ಸರ್ಕಾರಕ್ಕೆ…
ಪಾವಗಡ: ಕರ್ನಾಟಕ ರಾಜ್ಯ ದಕ್ಷಿಣ ಭಾರತದ ಐತಿಹಾಸಿಕ ಪವಿತ್ರ ಪುಣ್ಯಭೂಮಿ ನಿಡಗಲ್ಲು ದುರ್ಗದ ಶ್ರೀರಾಮತೀರ್ಥ ಬಳಿ ನಿಡಗಲ್ಲು ಉತ್ಸವ ಕಾರ್ಯಕ್ರಮ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ ನಿಡಗಲ್ಲು ಹಾಗೂ ದೇವರಾಯನರೋಪ್ಪ ಗ್ರಾಮಸ್ಥರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ನಿಡಗಲ್ ದುರ್ಗದ ಅಭಿಮಾನಿಗಳ ವತಿಯಿಂದ ಹಮ್ಮಿಕೊಳ್ಳಲಾಗಿತ್ತು ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ 2025ರ ನಿಡಗಲ್ಲು ಕಲಾವಿದರ ಉತ್ಸವವನ್ನು ಉದ್ಘಾಟಿಸಿ ಮಾತನಾಡಿ, ಐತಿಹಾಸಿಕ ಹಿನ್ನೆಲೆ ಉಳ್ಳ ಪವಿತ್ರ ಪುಣ್ಯ ಭೂಮಿ. ರಾಜ ಮಹಾರಾಜರು ಪಾಳೆಗಾರರು ಆಳ್ವಿಕೆ ನಡೆಸಿದ ಪವಿತ್ರ ನೆಲ. ಸಾಧು ಸಂತರು ತಪೋಗೈದ ಪುಣ್ಯಭೂಮಿ ಇಂತಹ ಐತಿಹಾಸಿಕ ನಿಡಗಲ್ ದುರ್ಗದ ಉತ್ಸವವನ್ನು ಸರ್ಕಾರದ ವತಿಯಿಂದ ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ವಾರದಲ್ಲಿ ಆಚರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು. ಉತ್ಸವ ಸಮಿತಿ ಸಂಚಾಲಕರಾದ ಪಾಳೇಗಾರ್ ಲೋಕೇಶ್ ಮಾತನಾಡಿ, ಪ್ರತಿ ವರ್ಷ ಶ್ರಾವಣ ಮಾಸದ ಕೊನೆಯ ಸೋಮವಾರ ವಿವಿಧ ಸಂಘ–ಸಂಸ್ಥೆಗಳೊಂದಿಗೆ ನಿಡಗಲ್ಲು ಉತ್ಸವವನ್ನ ಆಚರಿಸುತ್ತಿದ್ದು ಪ್ರತಿ ವರ್ಷವೂ ಎಲ್ಲ ಜನಪ್ರತಿನಿಧಿಗಳು…
ಬೆಂಗಳೂರು: ಚಿತ್ರದುರ್ಗ ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 257 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ ವಿವರ: ಒಟ್ಟು ಹುದ್ದೆ 257 ಅಂಗನವಾಡಿ ಕಾರ್ಯಕರ್ತರು – 29 ಅಂಗನವಾಡಿ ಸಹಾಯಕರು – 228 ಎಲ್ಲೆಲ್ಲಿ ಎಷ್ಟು ಉದ್ಯೋಗ: ಭರಮಸಾಗರ: 7 ಕಾರ್ಯಕರ್ತೆಯರು, 23 ಸಹಾಯಕಿಯರು ಚಿತ್ರದುರ್ಗ: 2 ಕಾರ್ಯಕರ್ತೆಯರು, 21 ಸಹಾಯಕಿಯರು ಚಳ್ಳಕೆರೆ: 2 ಕಾರ್ಯಕರ್ತೆಯರು, 21 ಸಹಾಯಕಿಯರು ಹಿರಿಯೂರು: 2 ಕಾರ್ಯಕರ್ತೆಯರು, 53 ಸಹಾಯಕಿಯರು ಹೊಳಲ್ಕೆರೆ: 4 ಕಾರ್ಯಕರ್ತೆಯರು, 45 ಸಹಾಯಕಿಯರು ಹೊಸದುರ್ಗ: 11 ಕಾರ್ಯಕರ್ತೆಯರು, 53 ಸಹಾಯಕಿಯರು ಮೊಳಕಾಲ್ಮೂರು: 1 ಕಾರ್ಯಕರ್ತೆಯರು, 21 ಸಹಾಯಕಿಯರು ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಪಿಯುಸಿ ಪೂರ್ಣಗೊಳಿಸಿರಬೇಕು. ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಎಸ್ ಎಸ್ ಎಲ್ ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿ ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/ 3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ…
ಬೆಂಗಳೂರು: ಸಿನಿಮಾ ಗೆಲ್ಲಿಸಲು ಸ್ಟಾರ್ ನಟರೇ ಬೇಕಿಲ್ಲ ಎಂದು ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಹೇಳಿದ್ದು, ನಟ ದರ್ಶನ್ ಕುರಿತಾದ ಹೇಳಿಕೆಗೆ ಅವರು ಹೀಗೆ ಉತ್ತರಿಸಿದರು. ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ? ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಎಂದಿದ್ದಾರೆ. ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ. ಇನ್ನೂ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಸೋಶಿಯಲ್ ಮೀಡಿಯಾ ಹ್ಯಾಂಡಲ್ ಜವಾಬ್ದಾರಿ ಹೊತ್ತ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ನಡೆಯನ್ನು ಸ್ವಾಗತಿಸುತ್ತೀನಿ ಅಂದರು. ಇದು ಒಳ್ಳೆ ಬೆಳವಣಿಗೆ ಎಂದು ಅವರು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಕೊಪ್ಪಳ: ಕೊಪ್ಪಳದ ಮಸೀದಿಯೊಂದರ ಮುಂಭಾಗ 27 ವರ್ಷದ ಗವಿಸಿದ್ದಪ್ಪ ನಾಯಕ್ ಎಂಬಾತನನ್ನು ಆಗಸ್ಟ್ 3ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಈ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೊಪ್ಪಳ ಠಾಣೆ ಪೊಲೀಸರು ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮೃತ ಗವಿಸಿದ್ದಪ್ಪ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯ ತಾಯಿ ಗವಿಸಿದ್ದಪ್ಪನ ಹತ್ಯೆಯಲ್ಲಿ ನನ್ನ ಮಗಳ ಪಾತ್ರವಿಲ್ಲ ಎಂದು ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದರು. ಈ ಬಳಿಕ ದೂರು ದಾಖಲಿಸಿದ್ದರು. ಮುಸ್ಲಿಂ ಬಾಲಕಿ ಜೊತೆಗಿನ ಪ್ರೀತಿ ಹಿನ್ನೆಲೆಯಲ್ಲಿ ಸಾದಿಕ್ ಎಂಬಾತ ಗವಿಸಿದ್ದಪ್ಪನನ್ನು ಮಸೀದಿ ಮುಂದೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದನು ಎನ್ನಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾದಿಕ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ…