Author: admin

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ವಿಷಯಗಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ 154 ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ರೀಟೇಲ್ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 37 ವಿದ್ಯಾರ್ಥಿಗಳ ಪೈಕಿ 36 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಒಬ್ಬ ವಿದ್ಯಾರ್ಥಿ ಗೈರು ಹಾಜರಾಗಿದ್ದಾರೆ. ಅಂತೆಯೇ ಆಟೋಮೊಬೈಲ್ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 36 ವಿದ್ಯಾರ್ಥಿಗಳ ಪೈಕಿ 34 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಮಾಹಿತಿ ತಂತ್ರಜ್ಞಾನ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 84 ವಿದ್ಯಾರ್ಥಿಗಳು ಪರೀಕ್ಷೆ ಬರದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಅಂಚೆ ಅಧೀಕ್ಷಕರ ಕಾರ್ಯಾಲಯದಿಂದ ಮಾರ್ಚ್ 26ರಂದು ಬೆಳಿಗ್ಗೆ 11 ಗಂಟೆಗೆ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅದಾಲತ್ ಕಾರ್ಯಕ್ರಮವು ಗಾಂಧಿನಗರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದ್ದು, ಸಾರ್ವಜನಿಕರು ಅಂಚೆ ಸೇವೆಗೆ ಸಂಬಂಧಿಸಿದ ದೂರು/ಸಲಹೆ/ಸೂಚನೆಗಳಿದ್ದಲ್ಲಿ ಮಾರ್ಚ್ 25ರೊಳಗಾಗಿ ತುಮಕೂರು ವಿಭಾಗೀಯ ಮಟ್ಟದ ಅಂಚೆ ಅಧೀಕ್ಷಕರ ಕಚೇರಿಗೆ ಸಲ್ಲಿಸಬೇಕೆಂದು ಅಂಚೆ ಅಧೀಕ್ಷಕ ಬಿ.ಎಂ. ಶಂಕರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಕೊರಟಗೆರೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಮೈಸೂರು ಜಿಲ್ಲೆ ಯಾದವಗಿರಿ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ 8ನೇ ತರಗತಿ ದಾಖಲಾತಿಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿ ಹಾಗೂ ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ ಗಂಡು ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 7ನೇ ತರಗತಿ ಉತ್ತೀರ್ಣರಾಗಿರಬೇಕು. 8ನೇ ತರಗತಿ ದಾಖಲಾತಿಗೆ ಪರಿಶಿಷ್ಟ ಜಾತಿ/ವರ್ಗಕ್ಕೆ ಸೇರಿದ 2 ಗಂಡು ಮಕ್ಕಳು ಮತ್ತು ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರ ಪ್ರತಿಭಾವಂತ 2 ಗಂಡು ಮಕ್ಕಳನ್ನು ಆಯ್ಕೆ ಮಾಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, 7ನೇ ತರಗತಿ ಅಂಕಪಟ್ಟಿ, ಅನೈರ್ಮಲ್ಯ ವೃತ್ತಿಯಲ್ಲಿ ತೊಡಗಿರುವ ಪೋಷಕರು ಸಂಬAಧಿಸಿದ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರ/ಗುರುತಿನ ಚೀಟಿಯೊಂದಿಗೆ ಮಾರ್ಚ್ 24ರೊಳಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರಿಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಶ್ರೀ ರಾಮಕೃಷ್ಣ ವಿದ್ಯಾಶಾಲೆ, ಯಾದವಗಿರಿ, ಮೈಸೂರು-57200020 ಇಲ್ಲಿ ಏಪ್ರಿಲ್ 12ರಂದು ಬೆಳಿಗ್ಗೆ…

Read More

ತುಮಕೂರು: ಆಧಾರ್ ಕಾರ್ಡ್ ನೊಂದಿಗೆ ಎಪಿಕ್(EPIC) ಸಂಖ್ಯೆಯನ್ನು ಕೂಡಲೇ ಜೋಡಣೆ(Link) ಮಾಡಲು ಕ್ರಮ ವಹಿಸಲಾಗುವುದು ಎಂದು ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ನವದೆಹಲಿಯ ನಿರ್ವಾಚನ ಸದನದಲ್ಲಿ ಚುನಾವಣಾ ಆಯುಕ್ತರಾದ ಡಾ.ಸುಖಬೀರ್ ಸಿಂಗ್ ಸಂಧು ಹಾಗೂ ಡಾ.ವಿವೇಕ್ ಜೋಶಿ, ಕೇಂದ್ರ ಗೃಹ ಕಾರ್ಯದರ್ಶಿ, ಶಾಸಕಾಂಗ ಇಲಾಖೆ ಕಾರ್ಯದರ್ಶಿ, ಯುಐಡಿಎಐ ಮುಖ್ಯ ಕಾರ್ಯ ನಿರ್ವಣಾಧಿಕಾರಿ, ಇಸಿಐನ ತಾಂತ್ರಿಕ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಿದ ಅವರು, ಚುನಾವಣಾ ಆಯೋಗವು ಆರ್ಟಿಕಲ್ 326, ಆರ್ಪಿ ಆಕ್ಟ್, 1950 ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಕ್ರಮ ಕೈಗೊಳ್ಳಲಿದ್ದು, UIDAI ಮತ್ತು ECI ತಜ್ಞರ ನಡುವಿನ ತಾಂತ್ರಿಕ ಸಮಾಲೋಚನೆಗಳನ್ನು ಶೀಘ್ರದಲ್ಲೇ ಪ್ರಾರಂಭವಾಗುವುದು ಎಂದು ತಿಳಿಸಿದ್ದಾರೆ. ಭಾರತದ ಸಂವಿಧಾನದ 326ನೇ ವಿಧಿಯ ಪ್ರಕಾರ ಮತದಾನದ ಹಕ್ಕನ್ನು ಭಾರತದ ನಾಗರಿಕರಿಗೆ ಮಾತ್ರ ನೀಡಲಾಗುವುದು, ಆಧಾರ್ ಕಾರ್ಡ್ ವ್ಯಕ್ತಿಯ ಗುರುತನ್ನು ಮಾತ್ರ ಸ್ಥಾಪಿಸುತ್ತದೆಯಾದ್ದರಿಂದ EPIC ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದನ್ನು ಸಂವಿಧಾನದ 326ನೇ ವಿಧಿ,…

Read More

ಒಮ್ಮೆ ಬಡಕಲು ನಾಯಿಯೊಂದು ತುಂಬಾ ಹಸಿದು ಆಹಾರ ಹುಡುಕಿಕೊಂಡು ಹೋಗುತ್ತಿತ್ತು. ಎಷ್ಟು ಅಲೆದರೂ ಎಲ್ಲಿಯೂ ಆಹಾರ ಸಿಗಲಿಲ್ಲ. ಕೊನೆಗೆ ದೂರದಲ್ಲಿ ಅಂಗಡಿಯೊಂದು ಕಾಣಿಸಿತು. ಅಲ್ಲಿಗೆ ಹೋಗಿ ನಿಂತ ನಾಯಿ ಏನಾದರೂ ಕೊಡುವರೋ ಎಂದು ನೋಡುತ್ತಿದ್ದಂತೆ ಅಂಗಡಿ ಮಾಲಿಕ ಏ ಛೂ ಎಂದು ಕೋಲು ಸದ್ದು ಮಾಡಿದನು, ನಂತರ ಮತ್ತೊಂದು ಅಂಗಡಿ ಮುಂದೆ ಚಾ ಹೀರುತ್ತಾ ಬನ್ ತಿನ್ನುತ್ತಾ ನಿಂತಿದ್ದ ಜನರ ಬಳಿ ಹೋಗಿ ಕುಳಿತಿತು. ಅವರೂ ಕೂಡ ಅಲ್ಲಿಂದ ಓಡಿಸಿದರು. ನಂತರ ಹಾಗೆಯೇ ನಡೆದು ಬರುತ್ತಾ ಒಂದು ತಿಪ್ಪೆಯ ಬಳಿ ಗುಂಡಿಯೊಂದರಲ್ಲಿ ನಿಂತಿದ್ದ ಕಲುಷಿತ ನೀರನ್ನು ಕುಡಿದು ಆಯಾಸ ಪರಿಹರಿಸಿಕೊಂಡು ಮತ್ತೆ ಮುಂದೆ ಬಂದಾಗ, ಅಲ್ಲಿ ಶ್ರೀಮಂತನ ಮನೆ ಅಂಗಳದಲ್ಲಿ ಮಕ್ಕಳೊಂದಿಗೆ ಆಟವಾಡುತ್ತಿದ್ದ ತಳಿ ನಾಯಿಯೊಂದು ಕಾಣಿಸಿತು ಅದನ್ನು ನೋಡುತ್ತಲೇ ಖುಷಿಪಟ್ಟು ಓ ಇವನೂ ಕೂಡ ನಮ್ಮ ಜಾತಿಯವನೇ ನನಗೆ ತಿನ್ನಲು ಏನಾದರೂ ಕೊಡಿಸುವನು ಎಂದು ಆಸೆಯಿಂದ ಮನೆಯ ಕಾಂಪೌಂಡ ಗೇಟ್ ಪಕ್ಕದಲ್ಲಿ ಬಂದು ನಿಂತು ಒಳಗೆ ನೋಡಿದಾಗ ಬಡಕಲು ನಾಯಿ…

Read More

ಬೀದರ್:  ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬೀದರ್ ನಿಂದ ಔರಾದ್ ಗೆ ಪ್ರಯಾಣಿಸುತ್ತಿದ್ದ ಬಸ್, ಔರಾದ್ ತಾಲ್ಲೂಕಿನ ಕಪ್ಪಿಕೆರೆ ಗ್ರಾಮದ ಬಳಿ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಮೊದಲಿಗೆ ಎಂಜಿನ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಬಳಿಕ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿದೆ ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದು ಪ್ರಯಾಣಿಕರನ್ನು ಬಸ್ ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ ಬಸ್ ನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಲ್ಲರೂ ಸುರಕ್ಷಿತವಾಗಿದ್ದಾರೆ . ಔರಾದ್ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಿದ್ದಾರೆ. ಬೀದರ್ ಜಿಲ್ಲೆಯಲ್ಲಿ 30 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ತಾಪಮಾನ ಉಷ್ಣತೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ವರದಿ: ಅರವಿಂದ ಮಲ್ಲಿಗೆ,…

Read More

ಬೆಂಗಳೂರು: ರಾಜ್ಯದ ಪ್ರಭಾವಿ ರಾಜಕಾರಣಿ, ತುಮಕೂರು ಭಾಗದ ಪ್ರಭಾವಿ ಸಚಿವರ ಹನಿಟ್ರ್ಯಾಪ್ ಗೆ ಯತ್ನಿಸಲಾಗಿರುವ ವಿಚಾರ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದು, ಸ್ವಪಕ್ಷದ ಮತ್ತೊಬ್ಬರ ಸಚಿವರೇ ಹನಿಟ್ರ್ಯಾಪ್ ನಲ್ಲಿ ಸಿಲುಕಿಸಲು ಪ್ರಯತ್ನಿಸಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಗೆ ಬಲೆ ಬೀಸಲು ಪ್ಲಾನ್ ನಡೆಸಲಾಗಿತ್ತು. ಆದ್ರೆ ಆ ನಾಯಕ ಹನಿಟ್ರ್ಯಾಪ್ ಗೆ ಬೀಳದ ಹಿನ್ನೆಲೆ ಚಾರಿತ್ರ್ಯ ಹರಣದಿಂದ ತಪ್ಪಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. 2 ಬಾರಿ ಸಚಿವರ ಮೇಲೆ ಹನಿಟ್ರ್ಯಾಪ್ ಪ್ರಯೋಗಕ್ಕೆ ತಂಡವೊಂದು ಪ್ರಯತ್ನಿಸಿತ್ತು. ಹೀಗಾಗಿ ಇದರ ಹಿಂದೆ ಯಾರಿದ್ದಾರೆ ಎನ್ನುವುದನ್ನು ತಿಳಿಯಲು ಅವರದ್ದೇ ತಂಡದಿಂದ ಸಚಿವರ ಮಾಹಿತಿ ಕಲೆ ಹಾಕಿದ್ದಾರೆ. ಹೀಗಾಗಿ ಇದೊಂದು ಪೊಲಿಟಿಕಲ್ ಹನಿಟ್ರ್ಯಾಪ್ ಪ್ರಯತ್ನ ಅನ್ನೋ ವಿಚಾರ ತಿಳಿದು ಬಂದಿತ್ತು. ಯಾರನ್ನೂ ಕ್ಯಾರೇ ಅನ್ನದೇ ಅಬ್ಬರಿಸಿ ಬೊಬ್ಬಿರಿಯುತ್ತಿದ್ದ ಸಚಿವರ ರಾಜಕೀಯ ಭವಿಷ್ಯಕ್ಕೆ ಕಲ್ಲು ಹಾಕಲು ಯತ್ನ ನಡೆದಿತ್ತು. ಇದನ್ನು ಅರಿತ ನಾಯಕ ಸಂಬಂಧಪಟ್ಟವರ ಗಮನಕ್ಕೆ ತಂದಿದ್ದಾರೆ. ಈ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವವರು ಕೂಡ ಸ್ವಪಕ್ಷದವರೇ ಆಗಿರುವುದರಿಂದ…

Read More

ಬೆಂಗಳೂರು: ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯದ ತಿದ್ದುಪಡಿಗೆ ಒಪ್ಪಿಗೆ ನೀಡದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ(ತಿದ್ದುಪಡಿ) ವಿಧೇಯಕ 2025 ಅನ್ನು ಮಂಗಳವಾರ ವಿಧಾನಸಭೆಯಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಮಂಡಿಸಿದ್ದರು. ಇದರ ಬೆನ್ನಲ್ಲೇ ಶಾಸಕ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಸಂವಿಧಾನ ಬಾಹಿರವಾಗಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಒದಗಿಸುವ ಕೆಟಿಪಿಪಿ(ತಿದ್ದುಪಡಿ) ಮಸೂದೆ 2025ರ ವಿವಾದಾತ್ಮಕ ತಿದ್ದುಪಡಿಗಳಿಗೆ ಒಪ್ಪಿಗೆ ನೀಡದಂತೆ ಯತ್ನಾಳ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಮುಸಲ್ಮಾನರಿಗೆ ಮೀಸಲಾತಿ ನೀಡುವ ಮಸೂದೆಯನ್ನು ನಿನ್ನೆ ಸದನದಲ್ಲಿ ಕದ್ದು ಮುಚ್ಚಿ ಮಂಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಮುಂಭಾಗದಲ್ಲಿ ಮಾತನಾಡಿದ ಅವರು, ವಿಪಕ್ಷದವರ ಕಣ್ತಪ್ಪಿಸಿ ಸದನದಲ್ಲಿ ಮಸೂದೆಯನ್ನು ಮಂಡಿಸಿದ್ದಾರೆ. ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಬಿಜೆಪಿ, ಸಿದ್ದರಾಮಯ್ಯರ ನೇತೃತ್ವದ ಸರಕಾರದ ತುಘಲಕ್ ದರ್ಬಾರನ್ನು ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ಸಿನವರು ಅಲ್ಪಸಂಖ್ಯಾತರ ಓಲೈಕೆ ರಾಜಕೀಯಕ್ಕೆ ಹೊರಟಿದ್ದಾರೆ. ಸಿದ್ದರಾಮಯ್ಯ, ಸರಕಾರಕ್ಕೆ ನಿಜವಾಗಿ ಅಲ್ಪಸಂಖ್ಯಾತರ ಬಗ್ಗೆ ಕಳಕಳಿ ಇದೆಯೇ ಎಂದು ಕೇಳಿದರು. ಅಲ್ಪಸಂಖ್ಯಾತರಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಮುಂದಕ್ಕೆ ತರುವ ಇಚ್ಛಾಶಕ್ತಿ ಕಾಂಗ್ರೆಸ್ಸಿನವರಿಗೆ ಇರಲಿಲ್ಲ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿ ಎಂದು ಸಿದ್ದರಾಮಯ್ಯನವರು ಬಿಂಬಿಸಲು ಹೊರಟಿದ್ದಾರೆ. ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಇಡೀ ದೇಶದಲ್ಲಿ ಅಲ್ಪಸಂಖ್ಯಾತ ಮಹಿಳೆಯರಿಗೆ ನ್ಯಾಯ ನೀಡಲು ತ್ರಿವಳಿ ತಲಾಖ್ ಅನ್ನು ಕಿತ್ತು ಹಾಕಿದ್ದು, ಬಿಜೆಪಿಯ ನರೇಂದ್ರ ಮೋದಿಜೀ ಅವರ ಸರಕಾರ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…

Read More

ಮೀರತ್: ಪ್ರಿಯಕರನ ಜೊತೆ ಸೇರಿ ಪತ್ನಿ ತನ್ನ ಪತಿಯನ್ನೇ ಇರಿದು ಕೊಂದು ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ನೌಕಾಪಡೆಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಇವನ ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ ( 25) ಹತ್ಯೆ ನಡೆಸಿದ ಆರೋಪಿಗಳಾಗಿದ್ದಾರೆ. ಕಳೆದ ಮಾರ್ಚ್ 4 ರಂದು ಸೌರಭ್ ರಜಪೂತ್ ನಿಗೂಢವಾಗಿ ನಾಪತ್ತೆಯಾಗಿದ್ದರು. ಮಾರ್ಚ್ 4 ರಂದು ಸೌರಬ್ ಗೆ ಇರಿದು ಕೊಂದಿದ್ದಾಗಿ ಇಬ್ಬರೂ ಒಪ್ಪಿಕೊಂಡಿದ್ದು, ಕೊಲೆಯ ನಂತರ ಇಬ್ಬರೂ ಆತನ ದೇಹವನ್ನು ಕತ್ತರಿಸಿ, ಶವಗಳನ್ನು ಡ್ರಮ್ ನಲ್ಲಿ ಇರಿಸಿ, ಸಿಮೆಂಟ್ ನಿಂದ ಮುಚ್ಚಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ. ಕೊಲೆ ನಂತರ, ಅವರು ಸಾಹಿಲ್ ಅವರೊಂದಿಗೆ ಗಿರಿಧಾಮಕ್ಕೆ ವಿಹಾರಕ್ಕೆ ಹೋಗಿ ಏಗೂ ಆಗಿಲ್ಲ ಎಂಬಂತೆ ಕಾಲ ಕಳೆದಿದ್ದರು.ಕೊನೆಗೆ ಸೌರಭ್ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ನಂತರ ತನಿಖೆ ಕೈಗೊಂಡಾಗ ಕೊಲೆ ನಡೆದಿರುವುದು ಬಹಿರಂಗಗೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More