Author: admin

ವಿಜಯಪುರ: ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೇ ಅವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದ್ದ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​  ಕಾರಿಗೆ ಮುತ್ತಿಗೆ ಹಾಕಿ ಕಪ್ಪು ಬಟ್ಟೆ ಪ್ರದರ್ಶಿಸಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸಿದ್ಧಸಿರಿ ಸಹಕಾರಿ ಬ್ಯಾಂಕ್ ಶಾಖೆ ಹಾಗೂ ಎಸ್​​ ಮಾರ್ಟ್ ಉದ್ಘಾಟನಾ ಕಾರ್ಯಕ್ರಮಕ್ಕೆ ಯತ್ನಾಳ್ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಕೂಡಲೇ ಪೊಲೀಸರು ಕಪ್ಪು ಬಟ್ಟೆ ಪ್ರದರ್ಶಿಸಿದ ಯುವಕರನ್ನು ತಡೆದು, ವಶಕ್ಕೆ ಪಡೆದರು. ಆಲಮೇಲದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ​ಗೆ ಕಪ್ಪು ಬಟ್ಟೆ ಪ್ರದರ್ಶಿಸಿದ್ದ ಮುಸ್ಲಿಂ ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಬಳಿಕ, ಯುವಕರ ಕುಟುಂಬದ ಮಹಿಳೆಯರು ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಭೇಟಿಗೆ ಅವಕಾಶ ನೀಡುವಂತೆ ಪೊಲೀಸರ ಎದುರು ಪಟ್ಟು ಹಿಡಿದರು. ಆದರೆ, ಪೊಲೀಸರು ಭೇಟಿ ಅವಕಾಶ ನೀಡಲಿಲ್ಲ. ದೂರು‌ ಕೊಡಿ ರಜಿಸ್ಟರ್ ಮಾಡಿಕೊಳ್ಳುತ್ತೇವೆ. ಗಲಾಟೆ…

Read More

ಬಳ್ಳಾರಿ: ಕೆಎಸ್ ​ಆರ್​ ಟಿಸಿ ಬಸ್​ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಶ್ವೇತಾ (38) ಮತ್ತು ಬಾಲನಾಯಕ್ (42) ಎಂದು ಗುರುತಿಸಲಾಗಿದೆ. ಇತರ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಈ ಘಟನೆಯ ಬಗ್ಗೆ ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ ವಿಜೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಸಂಚರಿಸುತ್ತಿದ್ದ ಕೆಎಸ್‌ ಆರ್‌ ಟಿಸಿ ಬಸ್, ಸಿರುಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ರಾತ್ರಿ 11:30ರ ಸುಮಾರಿಗೆ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿಹೊಡೆದಿದೆ. ಅಪಘಾತದ ಸ್ಥಳಕ್ಕೆ ಸಿರಿಗೇರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿ, ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡರು, ಸದ್ಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More

ನಟ ದರ್ಶನ್ ಅವರು ಜೈಲು ಪಾಲಾದ ಬೆನ್ನಲ್ಲೇ  ಅವರ ಸೋಷಿಯಲ್ ಮೀಡಿಯಾವನ್ನು ತಾನೇ ಹ್ಯಾಂಡಲ್ ಮಾಡುವುದಾಗಿ ಪತ್ನಿ ವಿಜಯಲಕ್ಷ್ಮೀ ಘೋಷಿಸಿದ್ದು, ದರ್ಶನ್ ಹಾಗೂ ಸಿನಿಮಾ ಬಗ್ಗೆ ತಾವೇ ಅಪ್ಡೇಟ್ ನೀಡುವುದಾಗಿ ಅವರು ಹೇಳಿದ್ದಾರೆ. ನಿಮ್ಮ ಚಾಲೆಂಜಿಂಗ್ ಸ್ಟಾರ್ ಹೃದಯದಲ್ಲಿ ನೀವೆಲ್ಲರೂ ಇದ್ದೀರಿ. ಅವರು ನೇರವಾಗಿ ನಿಮ್ಮನ್ನು ಸಂಪರ್ಕಿಸುವ ತನಕ ನಾನು ಅವರ ಸೋಶಿಯಲ್ ಮೀಡಿಯಾ ಖಾತೆಯನ್ನು ನಿರ್ವಹಿಸುತ್ತೇನೆ. ಅವರ ಪರವಾಗಿ ಅಪ್​ ಡೇಟ್​ ನೀಡುತ್ತೇನೆ ಮತ್ತು ಸಿನಿಮಾ ಪ್ರಮೋಷನ್ ಮಾಡುತ್ತೇನೆ’ ಎಂದು ವಿಜಯಲಕ್ಷ್ಮಿ ದರ್ಶನ್ ಅವರು ಪೋಸ್ಟ್ ಮಾಡಿದ್ದಾರೆ. ಪ್ರೀತಿ, ಪ್ರಾರ್ಥನೆ ಮತ್ತು ತಾಳ್ಮೆ ತೋರಿಸುವುದನ್ನು ನೀವು ಮುಂದುವರಿಸಿದರೆ ಅದು ದರ್ಶನ್ ಅವರಿಗೆ ಮತ್ತು ನಮ್ಮ ಕುಟುಂಬಕ್ಕೆ ಬಲ ನೀಡುತ್ತದೆ. ಪಾಸಿಟಿವ್ ಆಗಿರೋಣ, ಒಂದಾಗಿರೋಣ. ನಿಮಗೆ ತಿಳಿದಿರುವ ಅದೇ ಪ್ರೀತಿ ಮತ್ತು ಎನರ್ಜಿಯೊಂದಿಗೆ ಅವರು ಆದಷ್ಟು ಬೇಗ ವಾಪಸ್ ಬರುತ್ತಾರೆ’ ಎಂದು ಹೇಳುವ ಮೂಲಕ ವಿಜಯಲಕ್ಷ್ಮಿ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಚಾಮರಾಜನಗರ: ಯುವತಿಯ ಎದುರೇ ಯುವಕನೊಬ್ಬ ತನ್ನ ಎದೆಗೆ ಇರಿದುಕೊಂಡು ಹುಚ್ಚಾಟ ಮೆರೆದಿರುವ ಘಟನೆ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರದೀಪ್ ಎಂಬಾತ ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. ಯುವತಿ ಎದುರೇ ತನ್ನ ಎದೆಗೆ ಚಾಕುವನಿಂದ ಇರಿದುಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ಗಾಯಾಳು ಪ್ರದೀಪ್​​ನನ್ನು ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪ್ರದೀಪ್ ಚಾಮರಾಜನಗರ ತಾಲೂಕಿನ ಸಾಣೇಗಾಲ ಗ್ರಾಮದ ನಿವಾಸಿಯಾಗಿದ್ದು. ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ ಎಂದು ತಿಳಿದು ಬಂದಿದೆ. ಸದ್ಯ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ವಿದ್ಯಾರ್ಥಿನಿಯ ಪೋಷಕರ ದೂರಿನನ್ವಯ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ವಿಷ್ಣುವರ್ಧನ್ ಸ್ಮಾರಕ ನಿರ್ಮಿಸಲು ‘ನಿಮ್ಮ ಜೊತೆ ನಾವಿದ್ದೇವೆ’ ಎಂದು ನಟ ಅನಿರುದ್ಧ ವಿಷ್ಣು ಅಭಿಮಾನಿಗಳ ಪರವಾಗಿ ನಿಂತಿದ್ದಾರೆ.  ವಿಷ್ಣುವರ್ಧನ್ ಪುಣ್ಯ ಭೂಮಿ ಉಳಿವಿಗೆ ಹೋರಾಟ ಹಾಗೂ ಸಮಾಧಿ ನೆಲಸಮ ವಿಚಾರವಾಗಿ ಅನಿರುದ್ಧ ಅವರು ಇಂದು ಬೆಂಗಳೂರಿನ ಜಯನಗರದಲ್ಲಿರುವ ವಿಷ್ಣುವರ್ಧನ್ ನಿವಾಸದಲ್ಲಿ ಸಭೆ ನಡೆಸಿದರು. ಅಭಿಮಾನ್ ಸ್ಟುಡಿಯೋದಲ್ಲಿ ನಡೆದ ಘಟನೆ ಖಂಡನೀಯ. ನಮಗೆಲ್ಲರಿಗೂ ದುಃಖ ಆಗಿದೆ. ನಮ್ಮ ಕುಟುಂಬದ ಮೇಲೆ ಒಂದಷ್ಟು ಜನ ಆರೋಪ ಮಾಡ್ತಿದ್ದಾರೆ. ಹೀಗಾಗಿ ಈ ಬಗ್ಗೆ ಮೊದಲು ನಾನು ಮಾತನಾಡುತ್ತೇನೆ. ಇದೇ ಮೊದಲ ಬಾರಿ ಅಲ್ಲ, ಇದಕ್ಕೂ ಮುನ್ನ ಸಾಕಷ್ಟು ಬಾರಿ ಸಭೆ ಮಾಡಿದ್ದೀನಿ. ಎರಡು ವಿಡಿಯೋ ಇದೆ, ಒಂದು ಮೈಸೂರಲ್ಲಿ ಸ್ಮಾರಕ ಉದ್ಘಾಟನೆಗೂ ಮುಂಚೆ ಹಾಗೂ ಹಳೆ ಮನೆಯಲ್ಲಿ ಸಭೆ ಮಾಡಿದ್ದೇವೆ ಎಂದು ವಿಡಿಯೋ ತೋರಿಸಿದರು. ಸಮಾಧಿ ತೆರವು ವಿಚಾರ ನಮಗೆ ಗೊತ್ತಿತ್ತು, ಆ ವಿಚಾರದಲ್ಲಿ ದುಡ್ಡು ಬಂದಿದೆ ಅಂತೆಲ್ಲ ಕೆಲವರು ಹೇಳುತ್ತಿದ್ದಾರೆ. ಆದರೆ ದಾದಾ ಸಮಾಧಿ ತೆರವು ವಿಚಾರದಲ್ಲಿ ನಾವು ಸಂತೋಷಪಡೋಕೆ ಆಗುತ್ತಾ? ಇದೆಂಥಾ…

Read More

ಪಾವಗಡ: ಕೆ.ಟಿ.ಹಳ್ಳಿ ಗ್ರಾಮ ಪಂಚಾಯತ್ ದೇವಲಕೆರೆ ಗ್ರಾಮದ ST ಕಾಲೋನಿಯಲ್ಲಿ ಸುಮಾರು  ವರ್ಷದಿಂದ CC ರಸ್ತೆ ದುರಸ್ತಿಯಿಂದ ಬೀದಿಯಲ್ಲಿ ಚರಂಡಿ ನೀರು ಹರಿದು ರಸ್ತೆ ಕೆಸರು ಗದ್ದೆಯಂತಾಗಿದ್ದು,  ಯಾವುದೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳುತ್ತಿಲ್ಲ ಎಂದು ಬೀದಿಯ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರು ಸರಿಯಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಇರುವ ಕಾರಣ ರಸ್ತೆಯಲ್ಲಿಯೇ ನಿಂತು ದೊಡ್ಡ ಹೊಂಡಗಳಾಗಿ ನಿರ್ಮಾಣಗೊಂಡಿದ್ದು, ಸೊಳ್ಳೆಗಳ ಉತ್ಪತ್ತಿ ತಾಣವಾಗಿ ಪರಿಣಮಿಸಿವೆ. ಕೊಳಚೆಯಿಂದಾಗಿ ಸಾಂಕ್ರಾಮಿಕ ರೋಗ ಹರಡುವ ಭೀತಿಯನ್ನು ಇಲ್ಲಿಯ ನಿವಾಸಿಗರು ಎದುರಿಸುತ್ತಿದ್ದಾರೆ.  ಮನೆಯ ಮುಂದೆ ಸಾಕಷ್ಟು ನೀರು ಸಂಗ್ರಹಗೊಂಡಿದ್ದರಿಂದ ಸಾರ್ವಜನಿಕ ಸಂಚಾರಕ್ಕೆ ತೀವ್ರ ಅಡೆತಡೆಯಾಗಿದೆ. ಈ ಕೊಳಚೆ ನೀರಿನಲ್ಲಿಯೇ ಮಕ್ಕಳು, ವಯೋವೃದ್ಧರು ಹಾಗೂ ಇತರರು ತಿರುಗಾಡುತ್ತಿದ್ದಾರೆ. ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ಗ್ರಾಮಸ್ಥರ ಆರೋಗ್ಯದ ಮೇಲೆ ವ್ಯರಿತಿಕ್ತ ಪರಿಣಾಮ ಬೀರುತ್ತಿದ್ದು, ಸಂಬಂಧಪಟ್ಟವರು ಸೂಕ್ತ ಕ್ರಮಕ್ಕೆ ಮುಂದಾಗಬೇಕಾಗಿದೆ. ರಸ್ತೆಯ ಪಕ್ಕದಲ್ಲಿ ಚರಂಡಿ ಇಲ್ಲದ ಕಾರಣ ದಿನಬಳಕೆ ನೀರು ಮುಂದಕ್ಕೆ ಹರಿದುಹೋಗಲು ಸಾಧ್ಯವಾಗದೇ ಇರುವುದರಿಂದ…

Read More

ತಿಪಟೂರು: ಗೌರಿ, ಯುಗಾದಿ, ರಂಜಾನ್, ಹಬ್ಬಗಳನ್ನು ಮನೆಗಳಲ್ಲಿ ಸಂಭ್ರಮಿಸಿದಂತೆ ಆಚರಿಸುವ ರೀತಿಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಜನಗಳನ್ನು ಸೇರಿಸಿ ಆಚರಿಸಬೇಕೆಂದು ಜನಸ್ಪಂದನ ಟ್ರಸ್ಟ್ ಅಧ್ಯಕ್ಷ ಟೂಡ ಶಶಿಧರ್ ಹೇಳಿದರು. ದೇಶ ಎಂದರೆ ಭೂಪಟ ಅಥವಾ ಗಡಿರೇಖೆ ಅಲ್ಲ, ದೇಶ ಎಂದರೆ ಜನರು. ಕಾಯಕದ ಮೂಲಕ ದೇಶವನ್ನು ಆರ್ಥಿಕವಾಗಿ ಮುನ್ನಡೆಸುತ್ತಿರುವ ಈ ಶ್ರಮಿಕರು ದೇಶದ ಸ್ವಾತಂತ್ರ್ಯೋತ್ಸವಕ್ಕೆ ಕಾರಣೀಭೂತರು ಎಂದು ತಿಳಿಸಿದರು. ನಗರದ ಕೋಡಿ ಸರ್ಕಲ್ ಇಂದ ಗಾಂಧಿನಗರದ ಟಿಪ್ಪು ಸರ್ಕಲ್ ವರೆಗೆ ಕಾಲ್ನಡಿ ನಡೆಸಿದ್ದೇವೆ. ಜನಸ್ಪಂದನ ಟ್ರಸ್ಟ್ ನ ನಮ್ಮ ನಡಿಗೆ ಬಹಳ ಅರ್ಥಪೂರ್ಣವಾಗಿದೆ, ನಾವು ದೇಶಪ್ರೇಮಿಗಳು ಎಂದರು. ಇದೇ ಸಂದರ್ಭದಲ್ಲಿ 12 ಜನ ಶ್ರಮಿಕರನ್ನು ಮತ್ತು ಸ್ವಾತಂತ್ರ್ಯ ಸೇನಾನಿಗಳನ್ನು ಬೆಳ್ಳಿ ಪದಕಗಳೊಂದಿಗೆ ಪ್ರಶಂಸನಾಪತ್ರ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಕಾಡ ಶೆಟ್ಟಿಹಳ್ಳಿ ಸತೀಶ ಅತಿಥಿಯಾಗಿ ಭಾಗವಹಿಸಿದ್ದರು. ಸಂವಿಧಾನ ಸಂರಕ್ಷಣೆ  ಪಡೆಯ ಅಧ್ಯಕ್ಷ ಲೋಕೇಶ್, ಅಲ್ಲಾಭಕಾಸ್, ದೇವರಾಜ್ ,ಅನೇಕ ಅಭಿಮಾನಿಗಳು ಭಾಗವಹಿಸಿದ್ದರು. ವರದಿ: ಆನಂದ್ ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಕೊರಟಗೆರೆ : ಮಾದಿಗ ಬಹುಸಂಖ್ಯಾತ ಕ್ಷೇತ್ರಗಳಲ್ಲಿ ಗುರುತಿಸಿ ಜನಾಂದೋಲನ ಸೃಷ್ಠಿಸಿ ಮತ ಜಾಗೃತಿ ಅಂದೋಲನ ಮಾಡಲಿದ್ದೇವೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ, ಅಭ್ಯರ್ಥಿಗಳು ಒಳಮೀಸಲಾತಿ ಪರವಾಗಿ ಧ್ವನಿ ಎತ್ತದಿದ್ದರೆ, ಆ ಶಾಸಕರನ್ನು ಚುನಾವಣೆಯಲ್ಲಿ ಸೋಲಿಸಲು ದೃಢ ನಿರ್ಧಾರ ಮಾಡಿದ್ದೇವೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯ ಗೌರವಾಧ್ಯಕ್ಷ ಕೇಶವಮೂರ್ತಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಕೊರಟಗೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾದಿಗ ಸಮುದಾಯದ ಸ್ವಾಭಿಮಾನದ ಒಕ್ಕೂಟದಿಂದ ಆಯೋಜಿಸಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಆ.19ರ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೆ ತುರ್ತಾಗಿ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು. ಕಾನೂನು ಸಚಿವ ಹೆಚ್.ಕೆ ಪಾಟೀಲ್ ನೇತೃತ್ವದಲ್ಲಿ ಸಣ್ಣ ಉಪ ಸಮಿತಿ ರಚಿಸಿ ಕೇವಲ 3—4 ದಿನಗಳಲ್ಲಿ ಎಲ್ಲಾ ಸಮುದಾಯಗಳ ಅಹವಾಲು ಸ್ವೀಕರಿಸಿ ನಾಗಮೋಹನ್ ದಾಸ್‌ ರವರ ಪ.ಜಾತಿ ವರದಿಯ ಆಧಾರದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೂಡಲೇ ಜಾರಿಗೊಳಿಸಬೇಕು. ತಮಿಳುನಾಡು ಮಾದರಿಯಲ್ಲಿ ಸದಾಶಿವ ಆಯೋಗ, ನಾಗಮೋಹನ್‌ದಾಸ್ ವರದಿಯ ಆಧಾರದ ಮೇಲೆ ಮಾದಿಗ…

Read More

ಕೊರಟಗೆರೆ : ಸಮಾಜದಲ್ಲಿ ಪ್ರತಿಯೊಬ್ಬರು ಸಮಾನತೆಯಿಂದ ಬಾಳಿದರೆ ದೇಶ ಹಾಗೂ ರಾಜ್ಯ ಪ್ರಗತಿ ಹೊಂದುವುದರ ಜೊತೆಗೆ ಮಾದರಿಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಸಾಗೋಣ ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ತಿಳಿಸಿದರು. ಕೊರಟಗೆರೆ ಪಟ್ಟಣದ ಕೆಎಸ್‌ ಆರ್‌ ಟಿಸಿ ಬಸ್ ನಿಲ್ದಾಣದ ಖಾಸಗಿ ವಾಹಿನಿಯ ಕಚೇರಿಯಲ್ಲಿ ಆಯೋಜಿಸಲಾದ ಸಮಾನತೆ ಹಾದಿಯ ಪಯಣ ಕುರಿತು ಪ್ರೋಜೆಕ್ಟರ್ ಮೂಲಕ ಸಮಾಜದ ಬದಲಾವಣೆ ಹಾಗೂ ಸಮಾನತೆ ಕುರಿತು ಹಲವು ಮಾಹಿತಿ ನೀಡಿದ ಅವರು, ವಿವಿಧ ಸಂಘಟನೆಯ ಪದಾಧಿಕಾರಿಗಳಿಗೆ ಮಾಹಿತಿ ನೀಡಿ ಭವಿಷ್ಯದ ಕರ್ನಾಟಕ ನಿರ್ಮಾಣ ಮಾಡಬೇಕು, ಉತ್ತಮ ಸಮಾಜ ನಿರ್ಮಾಣವಾಗಬೇಕು ಎಂದು ಹೇಳಿದರು. ಪೆರಿಯಾರ್ ಮತ್ತು ಅಂಬೇಡ್ಕರ್ ಅವರು ನಾವು ಅಧಿಕಾರದಲ್ಲಿ ಬರಬೇಕು ಎಂದು ಹೇಳುತ್ತಾರೆ. ನಾವು ಎಂದರೆ ಸಮಾನತಾವಾದಿಗಳು ಅಧಿಕಾರಕ್ಕೆ ಬರಬೇಕು. ಅಸಮಾನತೆ ವ್ಯವಸ್ಥೆಯೇ ನಮ್ಮ ಶತ್ರು. ಈ ವ್ಯವಸ್ಥೆಯಲ್ಲಿ ಆದಿವಾಸಿ, ದಲಿತ, ಮಹಿಳೆಯರನ್ನು ವಿರೋಧಿಸಲಾಗುತ್ತದೆ. ಇದನ್ನು ನಾವು ಗುರುತಿಸಿಕೊಂಡು ಒಂದು ಪರ್ಯಾಯವಾದ ಶಕ್ತಿ ಕಟ್ಟಬೇಕು ಎಂದು ಹೇಳಿದರು. ಬಾಬಾ ಸಾಹೇಬರಿಗೆ ಮೂರ್ತಿ,…

Read More

ಕೊರಟಗೆರೆ: ಸ್ವಾತಂತ್ರ್ಯ ಭಾರತದಲ್ಲಿ ಇಂದು ನಾವು ಬದುಕಿದ್ದೇವೆ ಎಂದರೆ ಸ್ವಾತಂತ್ರ್ಯ ಪೂರ್ವದ ಬ್ರಿಟಿಷ್ ವಸಾಹತುಶಾಹಿಯ ಕಪಿಮುಷ್ಠಿಯಿಂದ ನಲುಗಿ ನರಳಿದಂತಹ ಸಹಸ್ರಾರು ಹಿರಿಯ ಜೀವಗಳ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಬಲಿದಾನವೇ ಕಾರಣ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಕೆ.ಮಂಜುನಾಥ್ ತಿಳಿಸಿದರು. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲ್ಲೂಕು ಆಡಳಿತ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾದ 79ನೇ ಭಾರತ  ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜರೋಹಣ ನೆರವೇರಿಸಿ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸ್ವಾತಂತ್ರ್ಯದ ನೆರಳಿನಲ್ಲಿ ಬದುಕುತ್ತಿರುವ ನಾವು ನೀವೆಲ್ಲರೂ ಸ್ವಚ್ಛಂದದ ಸ್ವಾತಂತ್ರ್ಯ ಹಕ್ಕಿಗಳು. ಸ್ವತಂತ್ರ ಕೇವಲ ಬದುಕುವುದಕ್ಕೋಸ್ಕರ ಅಲ್ಲ. ಸಂವಿಧಾನದ ಆಶಯದಲ್ಲಿ ದೇಶದ ಘನತೆ, ಗೌರವ, ಸಂಸ್ಕಾರ, ಸಂಪ್ರದಾಯ, ಜಲ, ನೆಲವನ್ನು ರಕ್ಷಿಸುವುದಲ್ಲದೇ ನಾಡಿನ ಪ್ರಗತಿ–ಅಭಿವೃದ್ಧಿಗೆ ಶ್ರಮಿಸುವುದು ನಮ್ಮ ನಿಮ್ಮೆಲ್ಲರಾ ಆಧ್ಯ ಕರ್ತವ್ಯ. ಪ್ರಜಾಪ್ರಭುತ್ವದ ಸ್ಥಿರ ಪ್ರಗತಿಯು ಸಾಮಾಜಿಕ ಪ್ರಜಾಪ್ರಭುತ್ವದ ಬಲವರ್ತನೆಯ ಕಡೆಗೆ ಸಾಧಿಸಿದ ಪ್ರಗತಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಸ್ವಾತಂತ್ರ್ಯ ಬಂದು ೭೯ವರ್ಷ ಪೂರೈಸಿದರೂ ದೇಶದಲ್ಲಿ ಜಾತಿ…

Read More