Author: admin

ಬೆಂಗಳೂರು: ಗಗನಯಾತ್ರಿ ಸುನೀತಾ ವಿಲಿಯಮ್ಸ್ ಸುರಕ್ಷಿತವಾಗಿ ಮರಳಿರುವುದು ಗಮನಾರ್ಹ ಸಾಧನೆಯಾಗಿದೆ ಮತ್ತು ನಾಸಾ ಸ್ಪೇಸ್ ಎಕ್ಸ್ ಮತ್ತು ಬಾಹ್ಯಾಕಾಶ ಅನ್ವೇಷಣೆಯಲ್ಲಿ ಅಮೆರಿಕದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಇಸ್ರೋ ಅಧ್ಯಕ್ಷ ವಿ.ನಾರಾಯಣನ್ ಶುಭಾಶಯಗಳನ್ನು ತಿಳಿಸಿದ್ದಾರೆ. ಸುನೀತಾ ವಿಲಿಯಮ್ಸ್ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಿಸೃತ ಕಾರ್ಯಾಚರಣೆಯ ನಂತರ ನೀವು ಸುರಕ್ಷಿತವಾಗಿ ಮರಳಿರುವುದು ಗಮನಾರ್ಹ ಸಾಧನೆಯಾಗಿದೆ. ನಾಸಾ, ಸ್ಪೇಸ್ ಎಕ್ಸ್ ಮತ್ತು ಬಾಹ್ಯಾಕಾಶ ಅನ್ವೇಷಣೆಗೆ ಅಮೆರಿಕದ ಬದ್ಧತೆಗೆ ಇದು ಸಾಕ್ಷಿಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. ವಿಲಿಯಮ್ಸ್ ಅವರ ಸ್ಥಿತಿಸ್ಥಾಪಕತ್ವ ಮತ್ತು ಸಮರ್ಪಣೆ ವಿಶ್ವದಾದ್ಯಂತದ ಬಾಹ್ಯಾಕಾಶ ಉತ್ಸಾಹಿಗಳಿಗೆ ಸ್ಫೂರ್ತಿ ನೀಡುತ್ತಲೇ ಇದೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನಾಸಾ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಮಂಗಳವಾರ ಭೂಮಿಗೆ ಮರಳಿದ್ದಾರೆ. ಕಳೆದ 9 ತಿಂಗಳ ನಂತರ ಭಾರತೀಯ ಕಾಲಮಾನ ಬುಧವಾರ ಬೆಳಗ್ಗೆ 3:27ಕ್ಕೆ ಬಾಹ್ಯಾಕಾಶದಿಂದ ಸುರಕ್ಷಿತವಾಗಿ ವಾಪಸ್ಸಾಗಿದ್ದಾರೆ. ಒಂದು ವಾರದ ಮಟ್ಟಿಗೆ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಬಾಹ್ಯಾಕಾಶಕ್ಕೆ ಪ್ರಯಾಣಿಸಿದ್ದರು. ಆದ್ರೆ, ಅವರಿದ್ದ ಬೋಯಿಂಗ್ ಸ್ಟಾರ್ ಲೈನರ್ ನೌಕೆಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ ಅವರು ವಾಪಸ್ ಬರುವುದು ಅಪಾಯಕಾರಿಯಾಗಿತ್ತು. ಹೀಗಾಗಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ವಿಳಂಬವಾಗಿತ್ತು. ಜೂನ್ 2024ರಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿದ್ದ ನಿಕ್ ಹೇಗ್ ಮತ್ತು ಅಲೆಕ್ಸಾಂಡರ್ ಗೋರ್ಬುನೋವ್ ಕೂಡಾ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮರಳಿದ್ದಾರೆ. ಐಎಸ್ ಎಸ್ ಕ್ರೂ–9 ಸದಸ್ಯರನ್ನು ಹೊತ್ತ ಸ್ಪೇಸ್ ಎಕ್ಸ್ ಡ್ರ್ಯಾಗನ್ ನೌಕೆ ಫ್ಲೋರಿಡಾದ ಸಮುದ್ರದಲ್ಲಿ ಸುರಕ್ಷಿತವಾಗಿ ಇಳಿಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More

ವೈ.ಎನ್.ಹೊಸಕೋಟೆ: ವಲಯದ ಆರ್.ಡಿ.ರೊಪ್ಪ ಗ್ರಾಮದ ಸರ್ಕಾರಿ ಕಿರಿಯ‌ ಪ್ರಾಥಮಿಕ ಶಾಲೆಯಲ್ಲಿ‌ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಸ್ಥಳೀಯ ಹಳೆಯ ವಿದ್ಯಾಥಿ೯ಗಳ ಸಹಯೋಗದಲ್ಲಿ ‌ಶುದ್ಧ ಕುಡಿಯುವ ಫಿಲ್ಟರ್ ಅಳವಡಿಕೆ ಮಾಡಲಾಯಿತು. ಕ್ಷೇತ್ರದಿಂದ ಪ್ರಸಾದ ರೂಪದಲ್ಲಿ ಬಂದಂತಹ ಸಹಾಯಧನ ಮುಂಜೂರಾತಿ ಪತ್ರವನ್ನು ಇದೇ ವೇಳೆ ವಿತರಿಸಲಾಯಿತು. ಶ್ರೀ ಕ್ಷೇತ್ರಧಮ೯ಸ್ಥಳ ಗ್ರಾಮಾಭಿವೃದ್ದಿಯೋಜನೆಯ‌ ತಾಲ್ಲೂಕಿನ ಯೋಜನಾಧಿಕಾರಿಗಳಾದ ಮಹೇಶ್‌ ಮಾತನಾಡಿ,  ಡಾ.ವೀರೇಂದ್ರ ಹೆಗ್ಗಡೆಯವರು ಹಾಗೂ ಹೇಮಾವತಿ ಅಮ್ಮನವರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯಾದಂತಹ ಸಾವಿರಾರು ಶಾಲೆಗಳಿಗೆ ಶುದ್ಧ ನೀರು ಫಿಲ್ಟರ್ ಗಳನ್ನ ನೀಡಿರುವುದು ಶ್ಲಾಘನೀಯ ಎಂದರು. ಕಾಯ೯ಕ್ರಮದಲ್ಲಿ   ಊರಿನ ಮುಖಂಡರಾದ ಪಾತಣ್ಣ  (ವಕೀಲರು )ರವರು 7000/- ಸಾವಿರ ಆರ್ಥಿಕ ಸಹಾಯಧನ ನೀಡಿದ್ದು, ಇನ್ನೂ ಮುಖ್ಯೋಪಾಧ್ಯಾಯರಾದ‌‌ ಮಲ್ಲಿಕಾರ್ಜುನ ಮತ್ತು ವಲಯ‌ ಮೇಲ್ವಿಚಾರಕರಾದ ಮಹಮದ್ ಸೇವಾಪ್ರತಿನಿಧಿ ಮಹೇಶ್‌ ಶಾಲೆ SDMC ಅಧ್ಯಕ್ಷರಾದ ನಾಗರಾಜ್  ಊರಿನ ಎಲ್ಲಾ  ಹಳೆ ವಿದ್ಯಾರ್ಥಿಗಳ ಆರ್ಥಿಕ ಸಹಾಯ ಮಾಡಿರುವ  ಮಲ್ಲಿ, ಮುತ್ಯಾಲಪ್ಪ, ಸುಬ್ರಹ್ಮಣ್ಯ ಸಕ್ರಪ್ಪ ಮಹೇಂದ್ರ, ಮಹೇಶ್,  ಅಕ್ಕಪ್ಪ,  ಮನೋಜ್ ಇನ್ನೂ ಅನೇಕ ವಿದ್ಯಾರ್ಥಿಗಳು ಸಹಾಯ…

Read More

ತುಮಕೂರು: ಜಿಲ್ಲೆಯಲ್ಲಿ ಇಂದು ನಡೆದ ವಿವಿಧ ವಿಷಯಗಳ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರಲ್ಲಿ 806 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ಸಮಾಜಶಾಸ್ತ್ರ ವಿಷಯದಲ್ಲಿ 594, ಜೀವಶಾಸ್ತ್ರ ವಿಷಯದಲ್ಲಿ 112 ಹಾಗೂ ಗಣಕ ವಿಜ್ಞಾನ ವಿಷಯದಲ್ಲಿ 100 ವಿದ್ಯಾರ್ಥಿಗಳು ಸೇರಿ ಒಟ್ಟು 806 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಇಂದು ನಡೆದ ವಿದ್ಯುನ್ಮಾನಶಾಸ್ತ್ರ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡ 11 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಸಮಾಜಶಾಸ್ತ್ರ ವಿಷಯಕ್ಕೆ ಒಟ್ಟು ನೋಂದಾಯಿಸಿಕೊಂಡಿದ್ದ 4,844 ವಿದ್ಯಾರ್ಥಿಗಳ ಪೈಕಿ 4250, ಜೀವಶಾಸ್ತ್ರ ನೋಂದಾಯಿಸಿಕೊಂಡಿದ್ದ 8,455 ವಿದ್ಯಾರ್ಥಿಗಳ ಪೈಕಿ 8,343 ಹಾಗೂ ಗಣಕ ವಿಜ್ಞಾನ ವಿಷಯ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 5,239 ವಿದ್ಯಾರ್ಥಿಗಳ ಪೈಕಿ 5,139 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಿಲ್ಲೆಯಲ್ಲಿ 2024–25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯು ಇದೇ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಒಟ್ಟಾರೆ 35,636 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ತುಮಕೂರು(ದ) ಶೈಕ್ಷಣಿಕ ಜಿಲ್ಲೆಯಿಂದ 12,227 ವಿದ್ಯಾರ್ಥಿಗಳು, 10,246 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 22,473 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 6,897 ವಿದ್ಯಾರ್ಥಿಗಳು, 6,266 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 13,163 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ತುಮಕೂರು(ದ) 80 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 49 ಸೇರಿ ಒಟ್ಟು 129 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಮಾರ್ಗಗಳನ್ನು ರಚಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಕ್ರಮವಹಿಸಲಾಗಿದೆ. ಜಿಲ್ಲಾ ಹಂತದಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ವೀಕ್ಷಣೆ(ವೆಬ್…

Read More

ತುಮಕೂರು: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಬಿಸಿಲು ಹೆಚ್ಚಾಗಿದ್ದು, ಬಿಸಿಲಿನ ಪ್ರಕೋಪದಿಂದ ತಪ್ಪಿಸಿಕೊಳ್ಳಲು ಕಾರ್ಮಿಕರು ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾರ್ಮಿಕ ಅಧಿಕಾರಿ ಕೆ.ತೇಜಾವತಿ ಮನವಿ ಮಾಡಿದ್ದಾರೆ. ಕಾರ್ಮಿಕರು ದೇಹವನ್ನು ತಂಪಾಗಿಟ್ಟುಕೊಳ್ಳಬೇಕು. ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದು, ತಾಜಾ ಹಣ್ಣು ಸೇವನೆ ಮಾಡುವುದು ಆರೋಗ್ಯಕ್ಕೆ ಉತ್ತಮ. ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಕಾಮಗಾರಿಯನ್ನು ಸ್ಥಗಿತಗೊಳಿಸಿ ಈ ಅವಧಿಯಲ್ಲಿ ಕಾರ್ಮಿಕರು ಅಗತ್ಯ ವಿಶ್ರಾಂತಿ ತೆಗೆದುಕೊಳ್ಳಲು ಗುತ್ತಿಗೆದಾರರು /ಮಾಲೀಕರು ಅವಕಾಶ ಕಲ್ಪಿಸಿಕೊಡಬೇಕೆಂದು ತಿಳಿಸಿದ್ದಾರೆ. ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಮತ್ತು ಕಾರ್ಮಿಕರು ಕಾಮಗಾರಿ ಪ್ರಕ್ರಿಯೆಯಲ್ಲಿ ತೊಡಗಿರುವ ಸಂದರ್ಭದಲ್ಲಿ ಟೋಪಿ ಧರಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಮಾರ್ಚ್ 21ರಂದು ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸುವ “ಜಿಲ್ಲಾ ಮಟ್ಟದ ಜನ ಜಾಗೃತಿ ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ. ಹಿಮಂತರಾಜು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…

Read More

ತುಮಕೂರು: ಪ್ರತಿಯೊಬ್ಬ ಗ್ರಾಹಕನು ತಾನು ಖರೀದಿಸಿದ ವಸ್ತು ಹಾಗೂ ಪಡೆದ ಸೇವೆಯಲ್ಲಿ ನ್ಯೂನ್ಯತೆ/ಕೊರತೆಗಳು ಕಂಡು ಬಂದರೆ ಪ್ರಶ್ನಿಸುವ ಹಕ್ಕನ್ನು ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಜಿ.ಟಿ.ವಿಜಯಲಕ್ಷ್ಮೀ ಕರೆ ನೀಡಿದರು. ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು ಯಾವುದೇ ಸಾಮಗ್ರಿ ಖರೀದಿಸಿದಲ್ಲಿ ಕಡ್ಡಾಯವಾಗಿ ವ್ಯಾಪಾರಸ್ಥರಿಂದ ರಸೀದಿ ಪಡೆಯಬೇಕು. ಸಾಮಗ್ರಿ ಕೊಳ್ಳುವ ಮುನ್ನ ನಿವ್ವಳ ತೂಕ, ಅಳತೆ, ತಯಾರಾದ ತಿಂಗಳು ಮತ್ತು ವರ್ಷ, ಗರಿಷ್ಠ ಮಾರಾಟ ಬೆಲೆ(ಎಂಆರ್ ಪಿ), ತಯಾರಕರ ಹೆಸರು, ಮತ್ತಿತರ ಮಾಹಿತಿಯನ್ನು ಗ್ರಾಹಕ ಹೊಂದಿರಬೇಕು. ಎಂಆರ್ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ವ್ಯಾಪಾರಸ್ಥರನ್ನು ಪ್ರಶ್ನಿಸುವ ಹಕ್ಕು ಗ್ರಾಹನಿಗಿರುತ್ತದೆ ಎಂದು ತಿಳಿಸಿದರು. ಗ್ರಾಹಕ ಕಾಯ್ದೆಯನ್ವಯ ಯಾವುದೇ ವ್ಯಾಪಾರ/ವ್ಯವಹಾರಗಳನ್ನು ಪ್ರಮಾಣಬದ್ದ…

Read More

ಬೀದರ್: ಬೈಕ್ ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ. ಔರಾದ್ ತಾಲ್ಲೂಕಿನ ಬೆಳಕೋಣಿ (ಚೌಧರಿ) ಗ್ರಾಮದ ಆಕಾಶ ದಿಲೀಪ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ. ಹುಮನಾಬಾದ್ ಕಡೆಯಿಂದ ಭಾಲ್ಕಿಗೆ ತೆರಳುತ್ತಿದ್ದ ಬಸ್, ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಮೇಲಿಂದ ಕೆಳಗೆ ಬಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಖಟಕಚಿಂಚೋಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಕರ್ನಾಟಕದ ತುಮಕೂರು ನಗರದ ಪ್ರಮುಖ ಸ್ಥಳದಲ್ಲಿ ಒಂದು ಎಕರೆ ಜಾಗದಲ್ಲಿ ಮಂದಿರವನ್ನು ಕೆಡವಿ, ಬಿಜೆಪಿ ಸರಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಗೆ 30 ವಷಗಳ ಕಾಲಕ್ಕೆ ಭೋಗ್ಯಕ್ಕೆ ನೀಡಿತ್ತು. ಇದರ ವಿರುದ್ದ ಆಂದೋಲನ ರೂಪಿಸಿದ್ದೇವೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ತುಮಕೂರು ಬಿಜೆಪಿ ಶಾಸಕರೊಬ್ಬರು ಇದಕ್ಕೆ ಸಹಕರಿಸಿದ್ದು ಇದರ ವಿರುದ್ದ ಹಿಂದೂ ಪರ ಸಂಘಟನೆಗಳು ಆಂದೋಲನ ಆರಂಭಿಸಿದ್ದೇವೆ. ನ್ಯಾಯಾಲಯದಲ್ಲಿಯೂ ದಾವೆ ಹೂಡಿದ್ದೇವೆ. ರಾಜ್ಯದಲ್ಲಿ ಸರಕಾರಿ ಜಾಗ ವಶಕ್ಕೆ ಪಡೆಯಲು ಯತ್ನಿಸಲಾಗುತ್ತಿದ್ದು ತುಮಕೂರಿನಿಂದ ಆಂದೋಲನ ಆರಂಭಿಸಿದ್ದೇವೆ ಎಂದರು. ತುಮಕೂರು ನಗರ ಬಿಜೆಪಿ ಶಾಸಕರು 1 ಎಕರೆ ಜಾಗವನ್ನು ಕಮಿಷನ್ ಪಡೆದು ಹಸ್ತಾಂತರಕ್ಕೆ ಸಹಕರಿಸಿರಬಹುದು. ಅದನ್ನು ಅವರು ಸ್ಪಷ್ಟಪಡಿಸಬೇಕು. ಸಮಾಜದ ಮುಂದೆ ಹೇಳಿಕೆ ನೀಡಬೇಕು, ಹಣ್ಣು ವ್ಯಾಪಾರಿಗಳನ್ನು ಇಲ್ಲಿಂದ ಓಡಿಸಿ ಮಂದಿರ ಕೆಡವಿದ್ದಾರೆ. ಒಂದು ಇಂಚು ಜಾಗವನ್ನು ಸಹ ಕೊಡುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More