Subscribe to Updates
Get the latest creative news from FooBar about art, design and business.
- ತುಮಕೂರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ
- ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
- ಇಪಿಎಫ್ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
- ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
- ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
- ಸರಗೂರು: 9ನೇ ವಾರ್ಡ್ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
- ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
Author: admin
ತುರುವೇಕೆರೆ: ಸಾಹಿತ್ಯ ಎಲ್ಲರನ್ನು ಆಕರ್ಷಣೆ ಮಾಡುವ ಸಂವೇದನಾಶೀಲ ಕ್ಷೇತ್ರ. ಸಮ್ಮೇಳನ ಕನ್ನಡದ ಪ್ರಜ್ಞೆ ವಿಸ್ತರಿಸುವ ಕೆಲಸ ಮಾಡಬೇಕು ಎಂದು ಚಿಂತಕ ಬರಗೂರು ರಾಮಚಂದ್ರಪ್ಪ ಹೇಳಿದರು. ವೈ.ಟಿ.ರಸ್ತೆಯಲ್ಲಿನ ಸತ್ಯಗಣಪತಿ ಆಸ್ಥಾನ ಮಂಟಪದಲ್ಲಿ ಸೋಮವಾರ ನಡೆದ ತುರುವೇಕೆರೆ ತಾಲ್ಲೂಕು ಮಟ್ಟದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡಿದರು. ಅಂತರಿಕ ಒಳ ನೋಟದಲ್ಲಿ ಕನ್ನಡವನ್ನು ಬಳಸುವ, ಉಳಿಸುವ, ಬೆಳೆಸುವ ಪ್ರಜ್ಞೆ ಮುಖ್ಯ. ನೀವು ಕನ್ನಡಿಗರನ್ನು ಉಳಿಸಿದರೆ ಆ ಜನಸಮುದಾಯ ತಾನಾಗಿಯೇ ಕನ್ನಡ ಭಾಷೆ ಉಳಿಸುತ್ತಾರೆ. ಕನ್ನಡ ಓದುವ ಕಾರಣಕ್ಕಾಗಿ ಅವರು ನಿರುದ್ಯೋಗಿಗಳಾಗಂದತೆ ವ್ಯವಸ್ಥೆ ನೋಡಿಕೊಳ್ಳಬೇಕು ಎಂದರು. ಕನ್ನಡ ಸಾಹಿತ್ಯದಲ್ಲಿ ಚಿಂತನಶೀಲ ವೇದಿಕೆಯಾಗಿದ್ದ ಸೂಫಿಗಳು ಮತ್ತು ಸಂತರು ತಮ್ಮ ವೈಚಾರಿಕ ಚಿಂತನೆಗಳ ಮೂಲಕ ಸಮಾಜದಲ್ಲಿ ಮನುಷ್ಯ ಸಂಬಂಧಗಳ ಬೆಸೆಯುವ ಕೆಲಸ ಮಾಡಿದರು. ಕನ್ನಡ ಭಾಷೆ, ಸಾಹಿತ್ಯ ಜನತಾರತಮ್ಯ ಕೆರಳಿಸದೆ ಎಲ್ಲರೊಡನೆ ಸೌಹಾರ್ದ, ಸಮಾನತೆ ಉಂಟು ಮಾಡಿ ಮಾನವೀಯ ಪ್ರಜ್ಞೆಯನ್ನು ಜನರಲ್ಲಿ ಮೂಡಿಸು ಕೆಲಸ ಮಾಡಿದೆ ಎಂದರು. ಸಮ್ಮೇಳನಾಧ್ಯಕ್ಷ ಪ್ರೊ.ಸಂಪಿಗೆ ತೋಂಟಾದಾರ್ಯ ಮಾತನಾಡಿ, ಸಹೃದಯ ಸಮಾಜ ನಿರ್ಮಾಣದಲ್ಲಿ ಸಾಹಿತ್ಯ,…
ಕುಣಿಗಲ್: ತಾಲ್ಲೂಕಿನಲ್ಲಿ ಹದವಾಗಿ ಮಳೆಯಾಗುತ್ತಿದ್ದು, ಬಿತ್ತನೆ ಕಾರ್ಯ ಚುರುಕಾಗಿದೆ. ರೈತರು ರಸಗೊಬ್ಬರಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ತಾಲ್ಲೂಕಿನಲ್ಲಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಭಾನುವಾರ ತಾಲ್ಲೂಕಿನ ಸಂತೆಮಾವತ್ತೂರು ಗ್ರಾಮದಲ್ಲಿ ಹಿರಿಯರಿಗೆ ಎಡೆ ಬಿಡುವುದನ್ನು ಬಿಟ್ಟು ರಸಗೊಬ್ಬರಕ್ಕಾಗಿ ಕಾದ ರೈತರು ಗೊಬ್ಬರ ಸಿಗದೆ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆ ನಡೆದಿದೆ. ತಾಲ್ಲೂಕಿನಲ್ಲಿ ಖಾಸಗಿ ಮಾರಾಟಗಾರರು ಸೇರಿದಂತೆ 11 ರೈತರ ಸೇವಾ ಸಹಕಾರ ಸಂಘಗಳಲ್ಲಿ ಗೊಬ್ಬರದ ಮಾರಾಟ ವ್ಯವಸ್ಥೆ ಇದ್ದರೂ, ಬೇಡಿಕೆ ತಕ್ಕಂತೆ ಮತ್ತು ಸಕಾಲದಲ್ಲಿ ರಸಗೊಬ್ಬರ ಸಿಗದ ಕಾರಣ ರೈತರು ಪರದಾಟ ಮುಂದುವರೆದಿದೆ. ಒಂದೆಡೆ ಖಾಸಗಿ ಮಾರಾಟಗಾರರು ಕೃತಕ ಅಭಾವ ಸೃಷ್ಟಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದ್ದರೂ, ಮಾರಾಟಗಾರರು ಕಂಪನಿಗಳ ಹಿಡಿತದಲ್ಲಿರುವುದರಿಂದ ಯೂರಿಯಾ ಜತೆ ಸಹ ಉತ್ಪಾದಕಗಳನ್ನು ಖರೀದಿಸುವಂತೆ ಕಡ್ಡಾಯಗೊಳಿಸಿರುವುದು ಸಮಸ್ಯೆಯಾಗುತ್ತಿದೆ ಎಂದು ಮಾರಾಟಗಾರರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಟಿಎಪಿಎಂಎಸ್ ಸೇರಿದಂತೆ ರೈತರ ಸೇವಾ ಸಹಕಾರ ಸಂಘಗಳು ರಸಗೊಬ್ಬರ ಮಾರಾಟ ಮಾಡುತ್ತಿವೆ. ಬೇಡಿಕೆ ಅನುಸಾರ ಸರಬರಾಜಾಗದ ಕಾರಣ ಲೋಡ್ ಬಂದ ಕೂಡಲೇ ರೈತರು ಖರೀದಿಗೆ…
ಪಂಡಿತ್ ವೆಂಕಟೇಶ್ ಕುಮಾರ್ ಗೆ ಸಂಗೀತ ವಿದ್ವಾನ್ ಪ್ರಶಸ್ತಿ: ಒಲಿಂಪಿಕ್ಸ್ ಪದಕ ವಿಜೇತರಿಗೆ 6 ಕೋಟಿ ರೂ. ಬಹುಮಾನ ಘೋಷಣೆ
ಮೈಸೂರು: ಮುಂದಿನ ಒಲಿಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಿ ಸಿಎಂ ಮಾತನಾಡಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, ಕ್ರೀಡಾಮನೋಭಾವ ಮುಖ್ಯ. ಇಂದು ಚಾಮುಂಡಿವಿಹಾರ ಕ್ರೀಡಾಂಗಣದ ಗ್ಯಾಲರಿ ಹಾಗೂ ಈಜುಕೊಳಗಳಿಗೆ ಅತ್ಯಾಧುನಿಕ ಟೆನ್ಸೈಲ್ ಮೆಂಬ್ರೇನ್ ಛಾವಣಿ ಅಳವಡಿಸುವ ಮತ್ತು ಫುಟ್ಬಾಲ್ ಅಂಕಣ ನಿರ್ಮಿಸುವ ಕಾಮಗಾರಿಯನ್ನು ರೂ. 20.78 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸಮಾರಂಭದಲ್ಲಿ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಪುರಸ್ಕೃತೆ ಅಂತಾರಾಷ್ಟ್ರೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಭಾಗವಹಿಸಿರುವುದು ವಿಶೇಷ. ಕುಸ್ತಿ ಕೇವಲ ಪುರುಷರ ಕ್ರೀಡೆ ಎಂದು ಪರಿಗಣಿಸಲಾಗಿದ್ದ ಕಾಲದಲ್ಲಿ ಸಾಮಾಜಿಕ ಅಡೆತಡೆಗಳು…
ಬೀದರ್: ಸೋಮವಾರ ಸುರಿದ ಧಾರಾಕಾರ ಮಳೆಗೆ ಔರಾದ್ ತಾಲ್ಲೂಕಿನ ಮಮದಾಪುರ ಗ್ರಾಮದ ಬಡಾವಣೆಯೊಂದರ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿತು. ಬೆಳಿಗ್ಗೆ ಬಿಸಿಲು ವಾತಾವರಣ ಇತ್ತು. ಸಂಜೆ ದಟ್ಟ ಮೋಡ ಕವಿದು ಆರಂಭವಾದ ಮಳೆ ಬಿಟ್ಟುಬಿಡದೆ ಸುರಿಯಿತು. ಮಳೆ ನೀರು ತಗ್ಗು ಪ್ರದೇಶದಲ್ಲಿ ಇರುವ ಮನೆಗಳಿಗೆ ಹೊಳೆಯಂತೆ ಹರಿಯಿತು. ಮಳೆಯ ಮುನ್ಸೂಚನೆ ಇಲ್ಲದೆ ಬಡಾವಣೆಯ ಜನರಿಗೆ ಮಳೆ ನೀರು ಮನೆಗೆ ನುಗ್ಗಿದಾಗ ಆತಂಕಕ್ಕೆ ಒಳಗಾದರು. ತಗ್ಗು ಪ್ರದೇಶದಲ್ಲಿರುವ ಭೀಮರಾವ್ ಕೊಟಗೀರೆ, ಜೈವಂತ ಕೊಟಗೀರೆ, ಕೇರೋಬಾ ಸೇರಿದಂತೆ ಇತರರ ಮನೆಗಳಿಗೆ ನೀರು ನುಗ್ಗಿದೆ. ವಿಷಯ ತಿಳಿದು ತಹಶೀಲ್ದಾರ್ ಮಹೇಶ ಪಾಟೀಲ್ ಭೇಟಿ ಅವರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ಅಗ್ನಿಶಾಮಕ ಸಿಬ್ಬಂದಿ ಹಾಗೂ ಗ್ರಾಮಸ್ಥರು ಮನೆಗಳಲ್ಲಿ ಸಿಲುಕಿದ ಮಹಿಳೆಯರು, ಮಕ್ಕಳಿಗೆ ಹಾಗೂ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಬೀದರ್ ಜಿಲ್ಲಾದ್ಯಂತ ಸೋಮವಾರ ಬಿರುಸಿನ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿತು. ಬೀದರ್ ನಗರದ ಮುಖ್ಯ ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಡಿದರು. ಮಳೆಯ ಮುನ್ಸೂಚನೆ ಇಲ್ಲದೆ ಬಡಾವಣೆಯ ಜನರಿಗೆ ಮಳೆ…
ತುಮಕೂರು: ಯುಜಿಸಿ ನಿರ್ದೇಶನದ ಮೇರೆಗೆ ಕರಾಮುವಿಯು 2025–26ನೇ ಜುಲೈ ಆವೃತ್ತಿ ಪ್ರವೇಶಾತಿ ಅಂತಿಮ ದಿನಾಂಕವನ್ನು 2025ರ ಅಕ್ಟೋಬರ್ 15ರ ವರೆಗೆ ವಿಸ್ತರಿಸಲಾಗಿದೆ. ತುಮಕೂರಿನಲ್ಲಿರುವ ಕರಾಮುವಿ ಪ್ರಾದೇಶಿಕ ಕೇಂದ್ರದಲ್ಲಿ 2025–26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಮನೆಯಲ್ಲೇ ಅಥವಾ ಯಾವುದೇ ಕೆಲಸ ನಿರ್ವಹಿಸಿಕೊಂಡು ಕಾಲೇಜುಗಳಿಗೆ ಹೋಗದೆ ಕರಾಮುವಿಯ ಮೂಲಕ ಪದವಿ ಪಡೆಯಬಹುದಾಗಿದೆ. ಈ ಹಿನ್ನೆಲೆಯಲ್ಲಿ ಕೆಲಸಕ್ಕೆ ಹೋಗುವ ಆಸಕ್ತರು ಕರಾಮುವಿಯಲ್ಲಿ ಪ್ರವೇಶಾತಿ ಪಡೆಯಲು ಅನುಕೂಲ ಮಾಡಿಕೊಡುವ ಸಲುವಾಗಿ 2025ರ ಅಕ್ಟೋಬರ್ 15ರ…
ಕುಮಟಾ: ಕರ್ನಾಟಕ ರಣಧೀರ ವೇದಿಕೆ ಕುಮಟಾ ಹಾಗೂ ಭಟ್ಕಳ ತಾಲೂಕು ಘಟಕ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕುಮಟಾದ ಮಿರ್ಜಾನ್ ನ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭವ್ಯವಾಗಿ ನೆರವೇರಿತು. ಕಾರ್ಯಕ್ರಮಕ್ಕೆ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ಜೊತೆಗೆ ರಾಜ್ಯ ಸಮಿತಿಯ ಹಲವು ಸದಸ್ಯರು ಬೆಂಗಳೂರಿನಿಂದ ಆಗಮಿಸಿದ್ದರು. ಮಹೇಶ್ ಗೌಡ ಅವರ ಪ್ರಾರ್ಥನಾ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಉತ್ತರ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷೆ ಕುಮಾರಿ ಸುಪ್ರಿಯಾ ವಿಷ್ಣು ನಾಯ್ಕ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಕನ್ನಡ ನಾಡು, ನುಡಿ, ನೆಲ, ಜಲದ ಬಗ್ಗೆ ನಮಗೆ ಸದಾ ಅಭಿಮಾನ ಇರಬೇಕು. ಅವಕ್ಕೆ ಧಕ್ಕೆ ಉಂಟಾದಾಗ ಧ್ವನಿ ಎತ್ತುವುದು ನಮ್ಮ ಕರ್ತವ್ಯ. ಜೊತೆಗೆ ಶೋಷಿತರ ಪರವಾಗಿ ನಿಲ್ಲುವ ಸಂಘಟನೆ ಆಗಬೇಕಿದೆ” ಎಂದು ಹೇಳಿದರು. ನಂತರ ಕರ್ನಾಟಕ ರಣಧೀರರ ವೇದಿಕೆಯ ಸಂಸ್ಥಾಪಕರು ಹಾಗೂ ರಾಜ್ಯಾಧ್ಯಕ್ಷರಾದ ಕೆ.ಆರ್.ಶಂಕರ್ ಗೌಡ್ರು ದೀಪ ಬೆಳಗಿಸಿ ಘಟಕವನ್ನು ಉದ್ಘಾಟಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು “ಕರ್ನಾಟಕ ರಣಧೀರರ ವೇದಿಕೆಯು ಕೇವಲ…
ಬೀದರ್: ಜಿಲ್ಲೆಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 8 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಕಮಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಔರಾದ್–ಕಮಲನಗರ್ ರಸ್ತೆ ಮೂಲಕ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿರುವ ಮಾಹಿತಿ ಮೇರೆಗೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಅವರ ನಿರ್ದೇಶನದಲ್ಲಿ, ಪಿಎಸ್ ಐ ಆಶಾ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ದಾಳಿಯ ವೇಳೆ 8 ಕ್ವಿಂಟಾಲ್ ಪಡಿತರ ಅಕ್ಕಿ ಹಾಗೂ ಸಾಗಾಣಿಕೆಗೆ ಬಳಸಿದ ವಾಹನವನ್ನು ವಶಕ್ಕೆ ಪಡೆಯಲಾಯಿತು. ಆದರೆ, ವಾಹನ ಚಾಲಕ ಪೊಲೀಸ್ ವಾಹನವನ್ನು ಕಂಡ ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ವರದಿ: ಅರವಿಂದ ಮಲ್ಲಿಗೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ವಿವೇಕಾನಂದ. ಎಚ್.ಕೆ. ನಗರ ಮತ್ತು ಗ್ರಾಮೀಣ ಪ್ರದೇಶ ಎಂಬ ಭೇದವಿಲ್ಲದೆ ಬಹುತೇಕರ ಮನೆಯಲ್ಲಿ ಆಚರಿಸುವ ಒಂದು ಹಬ್ಬ… ತೀರಿಹೋದ ಹಿರಿಯರ ನೆನಪಿನಲ್ಲಿ, ಅವರ ಇಷ್ಟದ ಊಟ, ಬಟ್ಟೆ, ವಸ್ತುಗಳು ಇತ್ಯಾದಿಗಳನ್ನು ಇಟ್ಟು ಅವರಿಗೆ ಅರ್ಪಿಸಿದಂತೆ ಮಾಡಿ ನಾವೇ ಉಪಯೋಗಿಸುವುದು…! ಜ್ಯೋತಿಷಿಗಳಂತು ಟಿವಿಗಳಲ್ಲಿ ಇದರ ಬಗ್ಗೆ ಇಲ್ಲಸಲ್ಲದ ಅನೇಕ ಮೌಢ್ಯಗಳನ್ನು ಹೇಳಿ ಜನರನ್ನು ಮತ್ತಷ್ಟು ದಿಕ್ಕು ತಪ್ಪಿಸುತ್ತಿದ್ದಾರೆ. ಪುನರ್ ಜನ್ಮ, ಆತ್ಮಗಳ ಅಲೆದಾಟ, ಶವಗಳ ಕನಸುಗಳು.. ಇನ್ನೂ ಮುಂತಾದ ಭಯಂಕರ ವಿಷಯಗಳನ್ನು ಪ್ರಸ್ತಾಪಿಸಿ ಜನರನ್ನು ಭಯಗೊಳಿಸಿ ಹಬ್ಬದ ತೀವ್ರತೆ ಹೆಚ್ಚಿಸುತ್ತಿದ್ದಾರೆ. ಒಂದೇ ಒಂದು ಟಿವಿ ವಾಹಿನಿ ವಿವೇಚನೆಯಿಂದ ಈ ಹಬ್ಬದ ವಿಮರ್ಶೆ ಮಾಡುತ್ತಿಲ್ಲ. ಊಹಾತ್ಮಕ ಮೂಡನಂಬಿಕೆಯನ್ನೇ ಮತ್ತಷ್ಟು ಆಳಕ್ಕೆ ಇಳಿಸುತ್ತಿದ್ದಾರೆ. ಬದಲಾದ ಕಾಲಮಾನದಲ್ಲಿ ಈ ಹಬ್ಬದ ಆಚರಣೆಯನ್ನು ಮತ್ತಷ್ಟು ವಿಶಾಲ, ಸರಳ, ಅರ್ಥಪೂರ್ಣ, ಪ್ರಾಯೋಗಿಕ ಮತ್ತು ಮಾನವೀಯಗೊಳಿಸಬಹುದಾದ ಒಂದು ಸಲಹೆ ಮತ್ತು ಮನವಿ… ವ್ಯಕ್ತಿಯ ಸಾವೇ ಆತನ ಕೊನೆ. ಬದುಕಿದ್ದಾಗ ಎಷ್ಟೇ ಪ್ರಮುಖನಾಗಿದ್ದರೂ ಉಸಿರು ನಿಂತ ನಂತರ ಆತನ ದೇಹ ಪ್ರಕೃತಿಯಲ್ಲಿ ಲೀನವಾಗುತ್ತದೆ.…
ತುಮಕೂರು: ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಗೆ ಹೆರಿಗೆ ಮಾಡಿಸಲು 3 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಪ್ರಸೂತಿ ಹಾಗೂ ಸ್ತ್ರೀ ರೋಗ ತಜ್ಞೆಯಾದ ಡಾ.ಸಿ.ಎನ್.ಮಹಾಲಕ್ಷ್ಮಮ್ಮ ಎಂಬವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಅವರಿಗೆ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ. ಇಲ್ಲಿನ 7ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಯಾಸ್ಮೀನ ಪರವೀನ ಲಾಡಖಾನ ಅವರು ತೀರ್ಪು ಪ್ರಕಟಿಸಿದರು. ನಗರದ ಕೋತಿತೋಪು ನಿವಾಸಿ ಮುಕುಂದ ಎಂಬವರು ನಾದಿನಿ ಸವಿತಾ ಎಂಬವರನ್ನು 2021 ಫೆಬ್ರವರಿ 2ರಂದು ಹೆರಿಗೆ ನೋವಿನ ಕಾರಣ ತುಮಕೂರಿನ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಇವರಿಗೆ ಹೆರಿಗೆ ಮಾಡಿಸಲು ಡಾ.ಸಿ.ಎನ್.ಮಹಾಲಕ್ಷ್ಮಮ್ಮ 3 ಸಾವಿರ ರೂ. ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ನಾದಿನಿ ಮತ್ತು ಮಗುವಿನ ಆರೋಗ್ಯದ ದೃಷ್ಟಿಯಿಂದ ಅನಿವಾರ್ಯವಾಗಿ 2 ಸಾವಿರ ರೂ. ಲಂಚ ನೀಡಲು ಒಪ್ಪಿ ರಾತ್ರಿ 9.30 ಗಂಟೆಗೆ ‘ಡಿ’ ಗ್ರೂಪ್ ನೌಕರ…
ತುಮಕೂರು: ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟ ಮಹಿಳೆಯನ್ನು ಸರಿತಾ ಎಂದು ಗುರುತಿಸಲಾಗಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಕಡಪಲಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇನ್ನಿಬ್ಬರು ಮಕ್ಕಳ ಜೊತೆಗೆ ಸರಿತಾ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದರು. ಕಡಪಲಕೆರೆ ಗ್ರಾಮದ ಸರಿತಾ ಅವರು 6 ವರ್ಷಗಳ ಹಿಂದೆ ಅದೇ ಗ್ರಾಮದ ಸಂತೋಷ ಎಂಬಾತನನ್ನು ವಿವಾಹವಾಗಿದ್ದರು. ಸಂತೋಷ್ ಆಟೋ ಚಾಲಕನಾಗಿದ್ದ. ಮದುವೆಯಾದ ದಿನದಿಂದಲೂ ಸಂತೋಷ್ ಮತ್ತು ಆತನ ತಾಯಿ, ಅಜ್ಜಿ ಸರಿತಾಳಿಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿ ಬಂದಿದೆ. ಇಬ್ಬರು ಮಕ್ಕಳ ಜೊತೆಗೆ ಮಹಿಳೆ ಸರಿತಾ, ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸದ್ಯ ಪತಿ, ಪತಿಯ ತಾಯಿ ಹಾಗೂ ಅಜ್ಜಿಯ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ತನಿಖೆಯ ನಂತರ ಹೆಚ್ಚಿನ ಮಾಹಿತಿಗಳು…