Author: admin

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿ ಜೆಜೆಎಂ ಯೋಜನೆಯ ಅಡಿಯಲ್ಲಿ ಹೊಸ ಬೋರ್ವೆಲ್ ಹಾಕದೆ ಹಳೆಯ ಬೋರ್ವೆಲ್ ಪೈಪ್ ಲೈನ್ ನ ನೀರು ಸರಬರಾಜು ಮಾಡುತ್ತಿದ್ದಾರೆಂದು ಆರೋಪಿಸಿ ಗ್ರಾಮದ ಮುಖಂಡರಾದ ಪ್ರಜಯ್ ಪಾಟೀಲ್ ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಜಂಬಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಾರಾಜವಾಡಿ ಗ್ರಾಮದಲ್ಲಿ  ಗುತ್ತಿಗೆದಾರ ಸರಿಯಾಗಿ ಕೆಲಸ ಮಾಡಿರುವುದಿಲ್ಲ.  ಹೊಸ ಬೋರ್ವೆಲ್ ತೋಡಲಾರದೆ ಗ್ರಾಮದ ಹಳೆಯ ಬೋರ್ವೆಲ್ ಗಳಿಗೆ ಪೈಪಲೈನ್ ಅಳವಡಿಸಿ ನೀರು ಸರಬರಾಜು ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಗ್ರಾಮದ ಜನರಿಗೆ ಗೊತ್ತಿಲ್ಲದೆ ಸಂಪೂರ್ಣ ಕಾಮಗಾರಿ ಮುಗಿದಿದೆ ಅಂತ ಪಂಚಾಯತ ಪಿ.ಡಿ.ಓ. ಅಧಿಕಾರಿಗೆ ಒಪ್ಪಿಸಿರುತ್ತಾರೆ. ಮೇಲಾಧಿಕಾರಿಗಳು  ಗ್ರಾಮದಲ್ಲಿ ಹೊಸ ಬೋರ್ವೆಲ್ ಅಳವಡಿಸಿ ಹಳೆ ಬೋರ್ವೆಲ್ ಕನೆಕ್ಷನ್ ಕೊಟ್ಟಿರುವುದನ್ನು ರದ್ದು ಮಾಡಿ ಹೊಸ ಬೋರ್ವೆಲ್ ಗಳಿಗೆ ಕನೆಕ್ಷನ್ ಮಾಡಿಕೊಡಬೇಕು ಮತ್ತು ಮಹಾದೇವ ಮಂದಿರದ ಕಾಂಪೌಂಡ್ ವಾಲ್ ಕಟ್ಟಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಬರೆದ ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್  ನಮ್ಮತುಮಕೂರಿನ ಕ್ಷಣ…

Read More

ತುಮಕೂರು: ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡಿರುವ ತುಮಕೂರು ದಸರಾಗೆ ಸೆ. 22ರಂದು ಚಾಲನೆ ನೀಡಲಾಗುತ್ತದೆ. ದಸರಾ ಉತ್ಸವಕ್ಕೆ ಆಗಮಿಸುವ ಜನರಿಗಾಗಿ ಜಿಲ್ಲೆಯಾದ್ಯಂತ ಪ್ರತಿ ದಿನ 250 ವಿಶೇಷ ಬಸ್‌ ಗಳು ಸಂಚರಿಸಲಿವೆ. ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ 11 ದಿನ ವಿವಿಧ ಧಾರ್ಮಿಕ ಕೈಂಕರ್ಯಗಳು ಜರುಗಲಿವೆ. ಅ. 2ರಂದು ನಡೆಯಲಿರುವ ಜಂಬೂ ಸವಾರಿಯಲ್ಲಿ 50 ಗ್ರಾಮ ದೇವತೆಗಳು ಸಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು. ದಸರಾ ಉತ್ಸವದ ಮೊದಲ ದಿನ ಸರ್ವೋದಯ ಪ್ರೌಢಶಾಲೆ ಮೈದಾನದಲ್ಲಿ ಬೆಳಿಗ್ಗೆ 8 ಗಂಟೆಗೆ ಹಾಟ್ ಏರ್ ಬಲೂನ್, ವಿಶ್ವವಿದ್ಯಾಲಯ ಹೆಲಿಪ್ಯಾಡ್‌ ನಲ್ಲಿ ಬೆಳಿಗ್ಗೆ 10.30 ಗಂಟೆಗೆ ಹೆಲಿ ರೈಡ್‌ ಗೆ ಚಾಲನೆ ಸಿಗಲಿದೆ. ಸಂಜೆ 4.30 ಗಂಟೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಸೆ. 27ರಂದು ಫಲಪುಷ್ಪ, ಕಲಾ ಮತ್ತು ವಿಜ್ಞಾನ ವಸ್ತು ಪ್ರದರ್ಶನ, ಆಹಾರ ಮೇಳ, ಮಹಿಳಾ ಕೌಶಲ ಮೇಳ ಮತ್ತು ಮಹಿಳೆಯರ ಬೈಕ್‌ ರೈಡ್ ಏರ್ಪಡಿಸಲಾಗಿದೆ.…

Read More

ಸರಗೂರು:  ರಾಜ್ಯ ಸರಕಾರ ಸೆ.22 ರಿಂದ ಅ.7 ರವರೆಗೆ ನಡೆಸಲಿರುವ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಅಭಿಮಾನಿ ಹಾಗೂ ಅನುಯಾಯಿಗಳು ಧರ್ಮದ ಕಲಂನಲ್ಲಿ ಬೌದ್ಧ ಹಾಗೂ ಜಾತಿ ಕಾಲಂನಲ್ಲಿ ಹೊಲಯ ಎಂದು ಬರೆಸುವಂತೆ ಉರಿಲಿಂಗಪೆದ್ದಿ ಮಠದ ಜ್ಞಾನ ಪ್ರಕಾಶ್ ಸ್ವಾಮೀಜಿ ವಿನಂತಿಸಿದರು. ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮುದಾಯದ ಭವನದಲ್ಲಿ ಭಾನುವಾರದಂದು ಬಲಗೈ ಸಮಾಜದ ಪರಿಶಿಷ್ಟ ಜಾತಿ ಪೂರ್ವಭಾವಿ ಸಭೆಯಲ್ಲಿ ಧರ್ಮದಲ್ಲಿ ಬೌದ್ಧ ಎಂದು ನಮೋದಿಸಿ ಹಾಗೂ ಅ.14 ರಂದು ಬೌದ್ಧ ಸಮ್ಮೇಳನ ಕುರಿತು ಮಾತನಾಡಿದರು. ಪರಿಶಿಷ್ಟ ಜಾತಿಯವರು ಬೌದ್ಧ ಎಂದು ಬರೆಸಿದಲ್ಲಿ ಕೇಂದ್ರ ಸರಕಾರದ ಆದೇಶದಂತೆ ಮೀಸಲಾತಿಗೆ ಯಾವುದೇ ತೊಂದರೆಯಾಗುವುದಿಲ್ಲ. ಈ ಬಗ್ಗೆ ದಲಿತಪರ ಸಂಘಟನೆಗಳು ಹಳ್ಳಿ ಹಳ್ಳಿಗಳಲ್ಲಿ ಪ್ರಚಾರ ಮಾಡಿ ಸಮೀಕ್ಷೆಯ ಕಲಂ 8 ರಲ್ಲಿನ 6ನೇ ಕ್ರಮ ಸಂಖ್ಯೆಯಲ್ಲಿ ಬೌದ್ಧ ಎಂದು ತಪ್ಪದೇ ಬರೆಸಲು ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು. ಇದೇ‌ ತಿಂಗಳ 22 ರಿಂದ ಸಮೀಕ್ಷೆ ನಡೆಸಲಾಗುತ್ತಿದ್ದು, ಅಂಬೇಡ್ಕರ್ ಅವರ ಅನುಯಾಯಿಗಳಾದ ನಾವು ಅಂಬೇಡ್ಕರ್…

Read More

ತುಮಕೂರು: ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್ ಹಾಗೂ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಹೆಚ್. ನಾಗಭೂಷಣ ಅವರು ಮತ್ತೊಮ್ಮೆ ಜಾಗತಿಕ ಮಾನ್ಯತೆಯನ್ನು ಗಳಿಸಿದ್ದಾರೆ. ಅಮೆರಿಕದ ಸ್ಟಾನ್‌ಫೋರ್ಡ್ ವಿಶ್ವವಿದ್ಯಾಲಯ ಮತ್ತು ಎಲ್ಸೆವಿಯರ್ ಸಂಸ್ಥೆಗಳು ಸಂಯುಕ್ತವಾಗಿ ಪ್ರಕಟಿಸಿರುವ ವಿಶ್ವದ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ ಅವರು ಸ್ಥಾನ ಪಡೆದಿದ್ದಾರೆ. ವಿಶೇಷವೆಂದರೆ, ಇದು ಡಾ. ನಾಗಭೂಷಣ ಅವರ ಸತತ ಆರನೇ ವರ್ಷವೂ ಈ ಪ್ರತಿಷ್ಠಿತ ಪಟ್ಟಿಯಲ್ಲಿ ಸ್ಥಾನ ಪಡೆಯುತ್ತಿರುವುದು. ಅವರ ಸಾಧನೆ ತುಮಕೂರು ವಿಶ್ವವಿದ್ಯಾಲಯಕ್ಕೂ, ದೇಶಕ್ಕೂ ಕೀರ್ತಿಯನ್ನು ತಂದಿದೆ. ಜಾಗತಿಕ ಮಟ್ಟದಲ್ಲಿ ಅತ್ಯಂತ ವಿಶ್ವಾಸಾರ್ಹವೆಂದು ಪರಿಗಣಿಸಲ್ಪಡುವ ಈ ಪಟ್ಟಿಯಲ್ಲಿ, ಒಟ್ಟು ಉಲ್ಲೇಖಗಳು (citations), H-ಇಂಡೆಕ್ಸ್, ಸಹಲೇಖಕರ ತಿದ್ದುಗೊಳಿಸಿದ ಅಳತೆಗಳು (co-authorship adjusted measures) ಮುಂತಾದ ಮಾನದಂಡಗಳ ಆಧಾರದ ಮೇಲೆ ವಿಜ್ಞಾನಿಗಳನ್ನು ಮೌಲ್ಯಮಾಪನ ಮಾಡಲಾಗುತ್ತದೆ. ಇತ್ತೀಚಿನ ಪಟ್ಟಿಯಲ್ಲಿ, ಡಾ.ನಾಗಭೂಷಣ ಅವರು ವಿಶ್ವದ ಶ್ರೇಷ್ಠ 2% ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದು ವಿಶ್ವದ ಅತ್ಯಂತ ಪ್ರಭಾವಶಾಲಿ ಸಂಶೋಧಕರ ಪೈಕಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ಭೌತಶಾಸ್ತ್ರ ಮತ್ತು ವಸ್ತು…

Read More

ಬೀದರ್: ನಗರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಂಪೌಂಡ್‌ ಗೆ ಕೆಕೆಆರ್‌ ಟಿಸಿ ಬಸ್‌ ವೊಂದು ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಇಂದು (ರವಿವಾರ) ಬೆಳಿಗ್ಗೆ ಬೀದರ್‌ ನಿಂದ ಮಹಾರಾಷ್ಟ್ರದ ಉದಗೀರ್‌ ಗೆ ಹೋಗುವ ಕೆಕೆಆರ್‌ ಟಿಸಿ ಬಸ್‌, ಬೀದರ್‌ ನಿಂದ ಪ್ರಯಾಣಿಕರನ್ನು ತುಂಬಿಕೊಂಡು ಉದಗೀರ್ ಕಡೆಗೆ ಹೊರಟಿತ್ತು. ಬಸ್ ನಿಲ್ದಾಣದ 6 ರಿಂದ 7 ಕಿ. ಮೀ. ದೂರದವರೆಗೆ ಬಂದ ಬಸ್‌ ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಕಂಪೌಂಡ್ ಗೆ ಢಿಕ್ಕಿ ಹೊಡೆದಿದೆ.  ಬಸ್‌ ನಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದರು. ಎಲ್ಲರೂ ಸುರಕ್ಷಿತರಾಗಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಕೊರಟಗೆರೆ: ತಾಲೂಕು ಬಂಜಾರ ಸಂಘದ ವತಿಯಿಂದ ಕಚೇರಿ ಉದ್ಘಾಟನಾ ಕಾರ್ಯಕ್ರಮವನ್ನು ದೀಪ ಹಚ್ಚುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಲಾಯಿತು. ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯ ಬಂಜಾರ ಜಾಗೃತಿ ದಳ ಸಂಸ್ಥಾಪಕ ರಾಜ್ಯಾಧ್ಯಕ್ಷರು ತಿಪ್ಪಸರ್ ನಾಯ್ಕ್ ಮಾತನಾಡಿ, ಬಂಜಾರ ಸಮುದಾಯವು ಬುಡಕಟ್ಟು ಜನಾಂಗವಾಗಿದ್ದು, ಬೆಟ್ಟ ಗುಡ್ಡಗಳ ಅಕ್ಕ ಪಕ್ಕ ತಾಂಡಗಳನ್ನು ನಾವು ಕಾಣಬಹುದು ನಮ್ಮ ಮಕ್ಕಳು ವಿದ್ಯಾಭ್ಯಾಸಕ್ಕೆ ಹೆಚ್ಚಿನ ಒತ್ತು ನೀಡಿ ವಿಚಾರಗಳನ್ನು ತಿಳಿದು ಸರ್ಕಾರದಿಂದ ಸಿಗುವಂತಹ ಸೌಲಭ್ಯಗಳನ್ನು ಪಡೆದು ಅಭಿವೃದ್ಧಿಯಾಗಬೇಕಿದೆ. ತಾಲೂಕು ಮಟ್ಟದಲ್ಲಿ ಒಂದು ಸಮುದಾಯ ಭವನ ಇಲ್ಲದೆ ಇರುವುದು ನಮಗೆ ಬೇಸರದ ಸಂಗತಿ, ಶಾಸಕರು ಹಾಗೂ ಸಚಿವರು ಆದಂತಹ ಡಾಕ್ಟರ್ ಜಿ.ಪರಮೇಶ್ವರ್ ರವರು ನಮ್ಮ ಸಮುದಾಯವನ್ನು ಗುರುತಿಸಿ ತಾಲೂಕು ಮಟ್ಟದಲ್ಲಿ ಒಂದು ಸಮುದಾಯ ಭವನವನ್ನು ಮಂಜೂರು ಮಾಡಿಸಿಕೊಡಬೇಕು, ಹಳ್ಳಿ ಹಳ್ಳಿಗಳಲ್ಲಿ ಇದೇ ರೀತಿ ಸಂಘಟನೆ ಮಾಡಿದರೆ ಸರ್ಕಾರಕ್ಕೆ ನಮ್ಮ ಬಲಪ್ರದರ್ಶನ ಮಾಡಬಹುದು ಎಂದರು. ನಂತರ ತಾಲೂಕು ಅಧ್ಯಕ್ಷ ಲಕ್ಷ್ಮಣ್ ನಾಯಕ್ ಮಾತನಾಡಿ, ತಾಲೂಕಿನಲ್ಲಿ…

Read More

ಕೊರಟಗೆರೆ : ನಾಗರಿಕತೆಗಳ ಕಾಲದಿಂದಲೂ ನಮ್ಮ ದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತಿದೆ. ಹಸಿ ಕಸ, ಒಣ ಕಸ ವಿಂಗಡಣೆ ಮಾಡಿ ಸ್ವಚ್ಛತಾ ವಾಹನಿಗೆ ನೀಡುವ ಮೂಲಕ ಸ್ವಚ್ಛತೆ ಕಾಪಾಡಿಕೊಳ್ಳುವ ಕುರಿತು ಜನರಲ್ಲಿ ಹೆಚ್ಚು ಜಾಗೃತಿ ಮೂಡಿಸಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಸ್ವಚ್ಛತೆಗೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹಂಚಿಹಳ್ಳಿ ಗ್ರಾ.ಪಂ. ಅಧ್ಯಕ್ಷ ಭೀಮರಾಜು ತಿಳಿಸಿದರು. ತಾಲ್ಲೂಕಿನ ಕಸಬಾ ಹೋಬಳಿ ಹಂಚಿಹಳ್ಳಿ ಗ್ರಾ.ಪಂ ವತಿಯಿಂದ ಹಂಚಿಹಳ್ಳಿ ಗ್ರಾಮದಲ್ಲಿ ಆಯೋಜಿಸಲಾದ ಸ್ವಚ್ಛತಾ ಹಿ ಸೇವಾ–೨೦೨೫ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಸ್ವಚ್ಛ ಪರಿಸರವನ್ನು ನಿರ್ಮಿಸುವ ನಿಟ್ಟಿನಲ್ಲಿ ಅನೈರ್ಮಲ್ಯ ನಿವಾರಣೆಗಾಗಿ ಸರ್ಕಾರದಿಂದ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಸ್ವಚ್ಛತಾ ಕಾರ್ಯವನ್ನು ನಿರ್ವಹಿಸುವ ಪೌರ ಕಾರ್ಮಿಕರ ಸೇವೆ ನಿಜವಾದ ದೇಶ ಸೇವೆ. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸುಂದರವಾಗಿ ಸ್ವಚ್ಛವಾಗಿಟ್ಟುಕೊಂಡರೆ ನಮ್ಮ ದೇಶವೂ ಸುಂದರವಾಗಿರುತ್ತದೆ ಎಂದು ಹೇಳಿದರು. ಗ್ರಾ.ಪಂ ಪಿಡಿಓ ರಾಘವೇಂದ್ರ ಮಾತನಾಡಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮ ಭಾರತ ಸರ್ಕಾರದ ‘‘ಸ್ವಚ್ಛತಾ ಹಿ ಸೇವಾ’’ (ಸ್ವಚ್ಛತೆಯೇ…

Read More

ಕೊರಟಗೆರೆ: ಕರ್ನಾಟಕ ರಾಜ್ಯ ಸರಕಾರದಿಂದ ಸೆ.22ರಿಂದ 15 ದಿನಗಳ ಕಾಲ ನಡೆಯುವ ಹಿಂದುಳಿದ ವರ್ಗಗಳ ಆಯೋಗದ ಶೈಕ್ಷಣಿಕ, ಸಾಮಾಜಿಕ, ಹಾಗೂ ಆರ್ಥಿಕ ಸಮೀಕ್ಷೆಯಲ್ಲಿ ಕಾಡುಗೊಲ್ಲ ಜನಾಂಗ ಎಂದೇ ನಮೂದಿಸುವಂತೆ ಕಾಡುಗೊಲ್ಲ ಯುವ ಸೈನ್ಯ ತಾಲೂಕು ಅಧ್ಯಕ್ಷರು ಮುತ್ತುರಾಜ್ ಹೊಸಕೋಟೆ ತಿಳಿಸಿದ್ದಾರೆ. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿ ಗಣತಿ ಸಂಬಂಧ ಮುಂಬರುವ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ಕಾಡುಗೊಲ್ಲ ಎಂದೇ ನಮೂದಿಸಬೇಕು. ಉಪ ಜಾತಿ ಕಾಲಂನಲ್ಲಿ ಉಪ ಪಂಗಡ ಬಗ್ಗೆ ಮಾಹಿತಿ ಇದೇ ನಮೂದಿಸಬೇಕು, ಇಲ್ಲದಿದ್ದರೆ ಕಾಡುಗೊಲ್ಲ ಎಂದು ನಮೂದಿಸಬೇಕು, ಯಾದವ ಎಂಬುದು ಇತ್ತೀಚಿಗೆ ಬಳಕೆಯಾಗುತ್ತಿದೆ ಅದು ನಮೂದಿಸುವುದು ಬೇಡ, ಕಾಡುಗೊಲ್ಲರಲ್ಲಿ ನಾನಾ ಪಂಗಡಗಳು ಬರುತ್ತದೆ ಎಲ್ಲರೂ ಕಾಡುಗೊಲ್ಲ ಎಂದು ನಮೂದಿಸಬೇಕು,ಜಾತಿ ಸಮೀಕ್ಷೆ ಜನಾಂಗದ ಸರ್ವತೋಮುಖ ಅಭಿವೃದ್ಧಿಗಾಗಿ ಜನಸಂಖ್ಯೆ ಆಧಾರದಲ್ಲಿ ಮೀಸಲಾತಿಯನ್ನು ಪಡೆಯಲು ಸಹಕಾರಿಯಾಗುತ್ತದೆ ಎಂದು ಹೇಳಿದರು. ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಿಖರವಾದ ಮಾಹಿತಿಯನ್ನು ನೀಡಬೇಕು. ಪ್ರತಿ ಗ್ರಾಮಕ್ಕೂ ಈ ಮಾಹಿತಿಯನ್ನು ನೀಡುವ ಜವಾಬ್ದಾರಿಯನ್ನು ನಮ್ಮ ಸಮುದಾಯದ ಮುಖಂಡರುಗಳು…

Read More

ಮೈಸೂರು: ಸಂವಿಧಾನ ಸಿನಿ ಕಂಬೈನ್ಸ್ ನಿರ್ಮಾಣದ, ಟೈಗರ್ ನಾಗ್ ನಿರ್ದೇಶನದ “ಅಡವಿ” ಚಲನಚಿತ್ರವು ಮೈಸೂರು ದಸರಾ ಫಿಲಂ ಫೆಸ್ಟಿವಲ್‌ನಲ್ಲಿ ಭರ್ಜರಿ ಯಶಸ್ಸು ದಾಖಲಿಸಿದೆ. ಹೌಸ್‌ಫುಲ್ ಪ್ರದರ್ಶನ ಕಂಡ ಈ ಚಿತ್ರಕ್ಕೆ ಸರ್ಕಾರದಿಂದ ಪ್ರಮಾಣ ಪತ್ರ ಪ್ರಶಸ್ತಿ ಲಭಿಸಿದೆ. ಈಗಾಗಲೇ ಮೂರು ಅಂತರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿರುವ “ಅಡವಿ”, ಕರ್ನಾಟಕದ ಸಾಂಸ್ಕೃತಿಕ ನಾಡಹಬ್ಬ ದಸರಾ ಉತ್ಸವದಲ್ಲಿ ದೊರೆತ ಈ ಗೌರವದಿಂದ ಮತ್ತಷ್ಟು ಕೀರ್ತಿಗೆ ಪಾತ್ರವಾಗಿದೆ. ಪ್ರಶಸ್ತಿ ಸ್ವೀಕರಿಸಿದ ನಂತರ ಸಂತಸ ಹಂಚಿಕೊಂಡ ನಿರ್ದೇಶಕ–ನಿರ್ಮಾಪಕ ಟೈಗರ್ ನಾಗ್ ಅವರು,“ಈ ಯಶಸ್ಸಿಗೆ ಶ್ರಮಿಸಿದ ಕಲಾವಿದರು ಮತ್ತು ತಂತ್ರಜ್ಞರಿಗೂ ಹೃತ್ಪೂರ್ವಕ ಧನ್ಯವಾದಗಳು. ಈ ಪ್ರಶಸ್ತಿಯನ್ನು ನಾನು ನಮ್ಮ ಪೂರ್ವಿಕರಾದ ನಾಡದೊರೆ ಮಹಿಷಾಸುರ ಹಾಗೂ ಸಂವಿಧಾನ ಶಿಲ್ಪಿ ಪರಮಪೂಜ್ಯ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಅರ್ಪಿಸುತ್ತಿದ್ದೇನೆ” ಎಂದು ಹೇಳಿದರು. ಚಿತ್ರರಂಗದೊಂದಿಗೆ ಸಾಮಾಜಿಕ ಹೋರಾಟಗಾರರೂ ಆಗಿರುವ ಟೈಗರ್ ನಾಗ್ ಅವರು ಸುವರ್ಣ ಯುಗ ಕನ್ನಡ ದಿನಪತ್ರಿಕೆ ಹಾಗೂ ಡಿಜಿಟಲ್ ಮಾಧ್ಯಮದ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…

Read More

ಕೊರಟಗೆರೆ : ವ್ಯವಸಾಯೋತ್ಪನ ಸಹಕಾರ ಸಂಘವು 1960ನೇ ಇಸವಿಯಲ್ಲಿ ಸ್ಥಾಪನೆಗೊಂಡಿದೆ. ತುಮಕೂರು ಜಿಲ್ಲೆಯ ಇತರೆ ತಾಲ್ಲೂಕಿನ ಸಹಕಾರ ಸಂಘಕ್ಕೆ ಹೋಲಿಕೆ ಮಾಡಿದ್ದಲ್ಲಿ ಇಲ್ಲಿನ ವ್ಯವಸಾಯೋತ್ಪನ ಸಂಘ ಲಾಭದಾಯಕವಾಗಿದೆ ಎಂದು ತಾಲ್ಲೂಕು ವ್ಯವಸಾಯೋತ್ಪನ ಮಾರಾಟ ಸಹಕಾರ ಸಂಘದ ಅಧ್ಯಕ್ಷ ಶಿವಾನಂದ ಜಿ.ಎಂ ತಿಳಿಸಿದರು. ಕೊರಟಗೆರೆ ತಾಲ್ಲೂಕು ವ್ಯವಯೋತ್ಪನ ಮಾರಾಟ ಸಹಕಾರ ಸಂಘದ ಪ್ರಧಾನ ಕಟ್ಟಡದ ಮೇಲ್ಭಾಗದ ಆವರಣದಲ್ಲಿ ಆಯೋಜಿಸಲಾದ 2024–25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಬೇರೆ ತಾಲ್ಲೂಕಿನಲ್ಲಿ ಕೆಲವು ಸಂಘಗಳು ಆದಾಯದ ಮೂಲ ಇಲ್ಲದೇ ನಷ್ಠದ ಪರಿಸ್ಥಿತಿಗೆ ಸಿಲುಕಿದೆ. ನಮ್ಮ ತಾಲ್ಲೂಕಿನಲ್ಲಿ ಆದಾಯದ ಮೂಲಗಳನ್ನು ಸೃಷ್ಠಿಸಿ ಸಂಘ ಅಭಿವೃದ್ಧಿ ಹೊಂದಿದೆ.ಈ ನಿರ್ದೇಶಕರು,ಸದಸ್ಯರ ಸಹಕಾರ, ಅತ್ಯಮೂಲ್ಯ ಸಲಹೆಯಿಂದ ಆರ್ಥಿಕವಾಗಿ ಸದೃಢವಾಗಿದೆ, ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಶೇ.೯೦ಕ್ಕಿಂತ ಹೆಚ್ಚು ಅಂಕ ಪಡೆದ ಷೇರುದಾರರ ಮಕ್ಕಳಾದ ರೇಣುಕಾ ಮತ್ತು ಕೀರ್ತನಾರಾದ್ಯಗೆ ಪ್ರತಿಭಾ ಪುರಸ್ಕಾರದಲ್ಲಿ ಗೌರವಿಸಲಾಗಿದೆ ಎಂದರು.  2024–25ನೇ ಸಾಲಿನ ವಾರ್ಷಿಕ ವರದಿ: ತಾಲ್ಲೂಕು ವ್ಯವಸಾಯೋತ್ಪನ ಮಾರಾಟ ಸಹಕಾರ ಸಂಘದ…

Read More