Subscribe to Updates
Get the latest creative news from FooBar about art, design and business.
- ಬೆಂಗಳೂರು: ‘ಒಳ ಮೀಸಲಾತಿಯ ಒಳಸುಳಿ’ ಹಾಗೂ ‘ಮೀಸಲಾತಿಯ ಮುನ್ನೋಟ’: ವಿಚಾರ ಸಂಕಿರಣ
- ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು
- ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ: ಶಾಸಕ ಅನಿಲ್ ಚಿಕ್ಕಮಾದು ಸೂಚನೆ
- ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ
- ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮ ಪಾಲಿಸಿ: ಪಿಎಸೈ ತೀರ್ಥೇಶ್
- ಡಾ.ಜಿ.ಪರಮೇಶ್ವರ್ ಸಿಎಂ ಆಗಲಿ: ಸರ್ವಧರ್ಮ ಗುರುಗಳಿಂದ ಸಾಮೂಹಿಕ ಪ್ರಾರ್ಥನೆ
- ‘ಕೊರಗಜ್ಜ’ ರೀಲ್ಸ್ : ಚಿತ್ರತಂಡದ ವಿರುದ್ದ ಕೊಡಗಿನ ದೈವ ಆರಾಧಕರ ಆಕ್ರೋಶ
- ದುನಿಯಾ ವಿಜಯ್ ನಟನೆಯ ಲ್ಯಾಂಡ್ ಲಾರ್ಡ್ ಸಿನಿಮಾದ ‘ರೋಮಾಂಚಕ’ ಹಾಡು ಬಿಡುಗಡೆ
Author: admin
ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರದ ಬಿಡದಿಯಲ್ಲಿ ಮಾಡಿಕೊಂಡಿರುವ ಒತ್ತುವರಿಯನ್ನು ಕೋರ್ಟ್ ಆದೇಶದಂತೆ ಕಂದಾಯ ಇಲಾಖೆ ಒತ್ತುವರಿ ತೆರವು ಮಾಡಲು ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ. ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ತುಮಕೂರು ವಿವಿಯಲ್ಲಿ ದೇಹಕ್ಕೆ ಹಾಗೂ ಮೆದುಳಿಗೆ ಎರಡಕ್ಕೂ ಪ್ರಸಾದದ ರೂಪದಲ್ಲಿ ಆಹಾರ ಹಾಗೂ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮೀ ಜಪಾನಂದ ಜೀ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಅನ್ನಪೂರ್ಣೇಶ್ವರಿ ಮಧ್ಯಾಹ್ನದ ಭೋಜನ ಯೋಜನೆ ಮೂರನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಮಾತನಾಡಿ, ಇನ್ನು ಮುಂದೆ ವಾರದಲ್ಲೊಂದು ದಿನ ಸಿಹಿತಿನಿಸು ಹಾಗೂ ಮಜ್ಜಿಗೆ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ವಿವಿಯ ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಈ ಯೋಜನೆಯಿಂದ ನಮ್ಮ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸುಧಾರಿಸಿದೆ. ಸುಸಂಸ್ಕೃತ ಪ್ರಜೆಯನ್ನು ರೂಪಿಸುವಲ್ಲಿ ನಮ್ಮ ಈ ಯೋಜನೆಯು ಮುಖ್ಯ ಪಾತ್ರ ವಹಿಸಿದೆ. ಇದರಿಂದಾಗಿ ಪ್ರವೇಶಾತಿ ಕೂಡ ಗಣನೀಯವಾಗಿ ಏರಿಕೆಯಾಗಿದೆ ಎಂದರು. ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ಅನ್ನಪೂರ್ಣೇಶ್ವರಿ ಯೋಜನೆಯು ಮೂರನೆಯ ವರ್ಷಕ್ಕೆ ಕಾಲಿಟ್ಟಿರುವುದು ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಯೋಜನೆಯನ್ನು ಜಾರಿಗೊಳಿಸುವ ಆಲೋಚನೆಯಿದೆ. ಈ ವರ್ಷ ಒಟ್ಟು 3,000 ವಿದ್ಯಾರ್ಥಿಗಳನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ…
ತುಮಕೂರು: ಸ್ಪರ್ಧಾತ್ಮಕ ಜಗತ್ತಿಗೆ ಕಂಪ್ಯೂಟರ್ ಜ್ಞಾನ ಮತ್ತು ಅದರ ಬಳಕೆ ಅನಿವಾರ್ಯ. ವಿದ್ಯಾಭ್ಯಾಸದ ಸಮಯದಿಂದಲೇ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಪಡೆದುಕೊಂಡರೆ ಭವಿಷ್ಯ ಉಜ್ವಲವಾಗುವುದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು. ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸೋಮವಾರ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಂದು ವಿಭಾಗಗಳಲ್ಲಿಯೂ ತಂತ್ರಜ್ಞಾನ ಬಳಕೆ ಅವಶ್ಯಕವಾಗಿದೆ. ಎಲ್ಲಾ ಕಚೇರಿಗಳಲ್ಲಿಯೂ ಕಂಪ್ಯೂಟರ್, ಲ್ಯಾಪ್ಟಾಪ್ ನೋಡುತ್ತಿರುತ್ತೇವೆ. ಇಂತಹ ಯುಗಕ್ಕೆ ತಂತ್ರಜ್ಞಾನದ ಅರಿವು ಮುಂಚೂಣಿಯಲ್ಲಿರಬೇಕು ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಡಾ.ಆನಂದಕುಮಾರ್ ಸುಬ್ರಮಣಿ ನಾಥನ್ ಮಾತನಾಡಿ, ತಂತ್ರಜ್ಞಾನ ಕ್ಷೇತ್ರ ಕಿರಿದಾದುದಲ್ಲ. ಅದರಲ್ಲಿ ನೀವು ಕಲಿಯಬೇಕಾದ ಕ್ಷೇತ್ರವನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಆಸಕ್ತಿ ಇಟ್ಟು ಕಲಿತರೆ ಯಾವುದೂ ಕಷ್ಟವಾಗುವುದಿಲ್ಲ. ಯಾವುದೇ ಕಲಿಕೆಯಾದರೂ ಜೀವನವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಸಾಧನವೆಂಬುದನ್ನು ನೆನಪಿಟ್ಟುಕೊಳ್ಳಿ ಇಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್.ಎಸ್.ಐ.ಟಿ ಕಾಲೇಜಿನ ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆ ಡಾ.ರೇಣುಕಲತಾ ಎಸ್.…
ತುಮಕೂರು: ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿರುವುದರಿಂದ ಪಡಿತರ ಧಾನ್ಯ ವಿತರಿಸಲು ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ಗಂಟೆಯಿಂದಲೇ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದರು. ಪಾವಗಡ ಪಟ್ಟಣದ ಶ್ರೀರಾಮಕೃಷ್ಣ ನ್ಯಾಯಬೆಲೆ ಅಂಗಡಿಗೆ ಭಾನುವಾರ ಬೆಳಿಗ್ಗೆ ಭೇಟಿ ನೀಡಿ ಕುಟುಂಬದ ಪ್ರತಿ ಸದಸ್ಯರಿಗೆ 15 ಕೆ.ಜಿ. ಅಕ್ಕಿ ಸಮರ್ಪಕ ವಿತರಣೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು, ಗಂಟೆಗಟ್ಟಲೆ ಬಿಸಿಲಿನಲ್ಲಿ ಕಾಯದೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ತೆರೆಯುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಪಡಿತರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿ ಮುಂದೆ ಸಾಲು ಗಟ್ಟಿ ನಿಂತಿದ್ದ ಪಡಿತರ ಧಾನ್ಯದ ಗುಣಮಟ್ಟ ಹಾಗೂ ಕ್ರಮವಾಗಿ ವಿತರಿಸುತ್ತಿರುವ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದರು. ನಂತರ ನಾಗಲಮಡಿಕೆ ಕ್ರಾಸ್ ಬಳಿ ಭೇಟಿ ನೀಡಿ ತುಂಗಭದ್ರಾ ಕುಡಿಯುವ ನೀರಿನ…
ತುಮಕೂರು: ಜಿಲ್ಲೆಯಲ್ಲಿ 163 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸ್ಕ್ಯಾನಿಂಗ್ ದರ ಹಾಗೂ ಸೇವಾ ವಿವರಗಳನ್ನು ಪ್ರದರ್ಶಿಸಿರಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿಂದು ಪಿಸಿ&ಪಿಎನ್ ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಕ್ಯಾನಿಂಗ್ ಕೇಂದ್ರಗಳ ಪರಿಶೀಲನಾ ವೇಳೆಯಲ್ಲಿ ಅಧಿಕಾರಿಗಳೊಂದಿಗೆ ರೇಡಿಯಾಲಾಜಿಸ್ಟ್ ಹಾಜರಿರಬೇಕು. ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಸ್ಕ್ಯಾನಿಂಗ್ ಕೇಂದ್ರಗಳ ಭೇಟಿಯಲ್ಲಿ ಕಂಡುಬಂದ ನ್ಯೂನ್ಯತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನೋಂದಣಿ ಪತ್ರ ನೀಡುವ ಹಾಗೂ ಸ್ಕಾö್ಯನಿಂಗ್ ಯಂತ್ರ ಖರೀದಿಸಲು ನಿರಾಕ್ಷೇಪಣಾ ಪತ್ರ ನೀಡುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಭ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ.ಲೋಕೇಶ್ ರೆಡ್ಡಿ, ಸಮಾಜ ಸೇವಕಿ ಲಲಿತಾ, ಕಾನೂನು ಸಲಹೆಗಾರರು, ವಾರ್ತಾ ಇಲಾಖೆ ಹಾಗೂ ವಿವಿಧ ಅಧಿಕಾರಿ ಸೇರಿದಂತೆ ಮತ್ತಿತರರು ಹಾಜರಿದ್ದರು.…
ತುಮಕೂರು: ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಅಗತ್ಯವಿರುವ 2kv–UPS with Batteries ಗಳನ್ನು ಖರೀದಿಸಲು ದರಪಟ್ಟಿ ಆಹ್ವಾನಿಸಲಾಗಿದೆ. ಆಸಕ್ತ ಸರಬರಾಜುದಾರರು ಮಾರ್ಚ್ 24ರ ಸಂಜೆ 5:30ರೊಳಗೆ ಮುದ್ದಾಂ ಅಥವಾ ಅಂಚೆ ಮೂಲಕ ದರಪಟ್ಟಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಪಾಲಿಕೆ ವತಿಯಿಂದ ನಗರದ ಶಿರಾಗೇಟ್(ಕನಕವೃತ್ತ) ವೃತ್ತದಿಂದ ದಿಬ್ಬೂರು ವೃತ್ತದವರೆಗೆ ಸಂಪರ್ಕ ಕೂಡುವ ಐಡಿಎಸ್ ಎಂಟಿ 80 ಅಡಿ ರಸ್ತೆಯ ಅಭಿವೃದ್ಧಿ ಕಾಮಗಾರಿಯನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದ್ದು, ಸಾರ್ವಜನಿಕರು ಸಹಕರಸಬೇಕೆಂದು ಪಾಲಿಕೆ ಆಯುಕ್ತ ಬಿ.ಅಶ್ವಿಜ ಮನವಿ ಮಾಡಿದ್ದಾರೆ. ಕಳೆದ ವರ್ಷ ನಗರದ ಎಸ್.ಮಾಲ್ ಬಳಿ ಸೇತುವೆ ನಿರ್ಮಾಣ ಸಂದರ್ಭದಲ್ಲಿ ಭಾರಿ ವಾಹನಗಳ ದಟ್ಟಣೆಯಿಂದ ಶಿರಾಗೇಟ್(ಕನಕವೃತ್ತ) ವೃತ್ತದಿಂದ ದಿಬ್ಬೂರು ವೃತ್ತದವರೆಗೆ ಸಂಪರ್ಕ ಕೂಡುವ ಐಡಿಎಸ್ಎಂಟಿ 80 ಅಡಿ ರಸ್ತೆಯು ತುಂಬಾ ಹಾಳಾಗಿರುವ ಹಿನ್ನೆಲೆಯಲ್ಲಿ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ–2ರ ಕ್ರಿಯಾ ಯೋಜನೆಯಡಿ ಅಭಿವೃದ್ಧಿಪಡಿಸಲು 14 ಕೋಟಿ ರೂ.ಗಳ ಅನುದಾನ ಮಂಜೂರಾಗಿದ್ದು, ಮಣ್ಣಿನ ಗುಣಮಟ್ಟವನ್ನು ಪರೀಕ್ಷಿಸಲು ಮಣ್ಣಿನ ಮಾದರಿಯನ್ನು ಸಂಗ್ರಹಿಸಿ ಮೂರನೇ ವ್ಯಕ್ತಿ ಪರೀಕ್ಷೆಗಾಗಿ ನೀಡಲಾಗಿದೆ. ಸಂಚಾರ ಸುವ್ಯವಸ್ಥೆಗಾಗಿ ಶಿರಾಗೇಟ್(ಕನಕವೃತ್ತ) ವೃತ್ತದಿಂದ ದಿಬ್ಬೂರು ವೃತ್ತದವರೆಗೆ ಸಂಪರ್ಕ ಕೂಡುವ ಈ ರಸ್ತೆಯಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚರಿಸಲು ಅವಕಾಶ ನೀಡುವ ಹಾಗೂ ಭಾರಿ ವಾಹನಗಳ ಸಂಚಾರವನ್ನು…
ತುಮಕೂರು: ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ಭೂಗೋಳಶಾಸ್ತ್ರ ವಿಷಯದಲ್ಲಿ 63 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ಭೂಗೋಳಶಾಸ್ತ್ರ ವಿಷಯಕ್ಕೆ ಒಟ್ಟು 799 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 736 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ, ಅಸೌಕರ್ಯಗಳ ವಿರುದ್ಧ ತಾಲ್ಲೂಕು ಬಿ.ಜೆ.ಪಿ. ಕಾರ್ಯಕರ್ತರು ಸೋಮವಾರ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ವೈದ್ಯರ ನೇಮಕಾತಿ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು. ವೈದ್ಯರು ರಾಜೀನಾಮೆ ನೀಡಿ ರಾಜಕೀಯ ಮಾಡಲಿ: ದೊಡ್ಡಹಳ್ಳಿ ಅಶೋಕ್ ಎಚ್ಚರಿಕೆ ಬಿಜೆಪಿ ತಾಲ್ಲೂಕು ಅಧ್ಯಕ್ಷ ದೊಡ್ಡಹಳ್ಳಿ ಅಶೋಕ್ ಮಾತನಾಡಿ, “ತಾಲ್ಲೂಕು ವೈದ್ಯರಾದ ಕಿರಣ್ ಕುಮಾರ್ ಅವರು ವೈದ್ಯ ವೃತ್ತಿಗೆ ರಾಜೀನಾಮೆ ನೀಡಿ ರಾಜಕೀಯ ಮಾಡಲಿ. ತಾಲ್ಲೂಕಿನಲ್ಲಿ ಕಾಂಗ್ರೆಸ್ ಪ್ರೇರಿತ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ, ಅವರ ಹೆಸರು ‘ರೆಡ್ ಬುಕ್’ ನಲ್ಲಿ ನಮೂದಿಸಲಾಗುವುದು. ಮುಂದಿನ ದಿನಗಳಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು. ಆಸ್ಪತ್ರೆಗೆ ವೈದ್ಯರ ನೇಮಕಾತಿ ಇಲ್ಲ, ಅಂಬುಲೆನ್ಸ್ ಗೆ ಡೀಸೆಲ್ ಇಲ್ಲ: ಆಕ್ರೋಶ ಈ ವೇಳೆ, ಮುಖಂಡ ಬಿ.ಜೆ.ಪಿ. ರವಿ ಮಾತನಾಡಿ, “ನಮ್ಮ ಆಡಳಿತದಲ್ಲಿ 13 ಕೋಟಿ…
ತುಮಕೂರು: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ವಿದ್ಯೋದಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಮಾರ್ಚ್ 18ರಂದು ಬೆಳಿಗ್ಗೆ 11 ಗಂಟೆಗೆ ನಗರದ ವಿದ್ಯೋದಯ ಕಾನೂನು ಕಾಲೇಜಿನಲ್ಲಿ “ವಿಶ್ವ ಗ್ರಾಹಕರ ದಿನಾಚರಣೆ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಜಿ.ಟಿ. ವಿಜಯಲಕ್ಷ್ಮೀ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ನಿವೇದಿತಾ ರವೀಶ್, ಹೆಚ್.ಎಸ್. ರಾಜು, ವಿದ್ಯೋದಯ ಕಾನೂನು ಕಾಲೇಜಿನ ಪ್ರಾಂಶುಪಾಲೆ ಶಮಾ ಸೈಯಿದಿ ಪಾಲ್ಗೊಳ್ಳಲಿದ್ದಾರೆ. ಗ್ರಾಹಕರ ಜಾಗೃತಿ ಹಕ್ಕು ಮತ್ತು ಶಿಕ್ಷಣ ಪರಿಷತ್ತಿನ ಕಾರ್ಯದರ್ಶಿ ಹಾಗೂ ವಕೀಲ ಟಿ.ಎಸ್. ನಿರಂಜನ್ ಗ್ರಾಹಕರ ದಿನಾಚರಣೆ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ…