Subscribe to Updates
Get the latest creative news from FooBar about art, design and business.
- ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಹಾಗೂ ನಮ್ಮ ಕರ್ತವ್ಯ: ಒಂದು ಪರಾಮರ್ಶೆ
- ಇಪಿಎಫ್ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
- ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
- ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
- ಸರಗೂರು: 9ನೇ ವಾರ್ಡ್ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
- ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
- ಕರ್ತವ್ಯನಿರತ ಮಹಿಳಾ ಪಿಎಸ್ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್ ಐಆರ್ ದಾಖಲು!
Author: admin
ತುಮಕೂರು: ವಂಚಿತ ಸಮುದಾಯ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು. ವಿಕಸಿತ ಭಾರತದ ಗುರಿ ಮುಟ್ಟಲು ಶಿಕ್ಷಣ ಮಹತ್ವದ ಪಾತ್ರ ವಹಿಸಲಿದೆ ಎಂದು ಹಂಪಿ ವಿ.ವಿ.ಕುಲಪತಿ ಪ್ರೊ.ಡಿ.ವಿ.ಪರಮಶಿವಮೂರ್ತಿ ಅಭಿಪ್ರಾಯಪಟ್ಟರು. ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ತುಮಕೂರು ವಿ.ವಿ ಅಧ್ಯಾಪಕರ ಸಂಘದಿಂದ ಆಯೋಜಿಸಿದ್ದ ‘ವಿಕಸಿತ ಭಾರತಕ್ಕಾಗಿ ಶಿಕ್ಷಣ’ ವಿಷಯ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು. 2047ರ ವಿಕಸಿತ ಭಾರತಕ್ಕೆ ಎಂತಹ ಶಿಕ್ಷಣ ಬೇಕು ಎಂಬ ನೀಲನಕ್ಷೆ ಅಗತ್ಯ. ಇದು ಬಹುತ್ವ ಭಾರತ. ಆಶ್ರಮದಿಂದ, ಗುರುಕುಲ ಈಗ ಸ್ವತಂತ್ರ ಸಂಸ್ಥೆ, ಶಿಕ್ಷಣ ವ್ಯವಸ್ಥೆ ಬದಲಾಗಿ, ಜ್ಞಾನಕ್ಕಿಂತ ಅಂಕಗಳಿಗೆ ಹೆಚ್ಚು ಮಹತ್ವ ನೀಡಲಾಗುತ್ತಿದೆ ಎಂದರು. ಸಿದ್ಧಗಂಗಾ ಮಠದ ಶಿವಸಿದ್ದೇಶ್ವರ ಸ್ವಾಮೀಜಿ, ‘ವಿಚಾರ ಸಂಕಿರಣದ ಚರ್ಚಿತ ವಿಷಯ ಅಚರಣೆಗೆ ಬರಬೇಕು. ಅನೇಕ ಸವಾಲು ಮಧ್ಯೆ ಕೃಷಿ, ವಿಜ್ಞಾನ–ತಂತ್ರಜ್ಞಾನ, ವಾಣಿಜ್ಯ, ಕೈಗಾರಿಕೆ ಕ್ಷೇತ್ರದಲ್ಲಿ ದೇಶ ಪ್ರಗತಿ ಸಾಧಿಸಿದೆ. ವಿಕಸಿತ ಭಾರತ ಬದಲಾಗುತ್ತಿದೆ. ದೇಶದ ಸುಸ್ಥಿರ ಅಭಿವೃದ್ಧಿಗೆ ಉನ್ನತ ಶಿಕ್ಷಣ ಪೂರಕವಾಗಲಿ’ ಎಂದು ಆಶಿಸಿದರು. ಕಾಲೇಜು ಶಿಕ್ಷಣ ಇಲಾಖೆ ಬೆಂಗಳೂರು…
ತುಮಕೂರು: ಜಿಲ್ಲೆಯಿಂದ ಸುಮಾರು 136 ದೇಶಗಳಿಗೆ 9 ಸಾವಿರ ಕೋಟಿ ಮೌಲ್ಯದ ತೋಟಗಾರಿಕೆ, ಕೃಷಿ ಉತ್ಪನ್ನಗಳನ್ನು ರಫ್ತು ಮಾಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹೇಳಿದರು. ನಗರದಲ್ಲಿ ಶುಕ್ರವಾರ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಹಾಗೂ ರಫ್ತು ನಿಗಮ (ಕೆಪೆಕ್), ಕೃಷಿ ವಾಣಿಜ್ಯ ಅಭಿವೃದ್ಧಿ ನಿಗಮ, ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ತೋಟಗಾರಿಕೆ ಬೆಳೆಗಳ ಸಂಸ್ಕರಣೆ ಹಾಗೂ ರಫ್ತು ಕುರಿತು ತಾಂತ್ರಿಕ ಕಾರ್ಯಾಗಾರದಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ರಪ್ತಿಗೆ ಯೋಗ್ಯವಾದ ಹಲವು ಬೆಳೆ ಬೆಳೆಯಲಾಗುತ್ತಿದೆ. ಯುವ ರೈತರು ಇದರ ಪ್ರಯೋಜನ ಪಡೆದು ತೆಂಗು, ದಾಳಿಂಬೆ, ಮಾವು, ಹುಣಸೆ ಮುಂತಾದ ಬೆಳೆಗಳ ಉತ್ಪನ್ನ ರಫ್ತು ಮಾಡಬಹುದು. ರೈತರು ಉತ್ಪನ್ನದಲ್ಲಿ ಗುಣಮಟ್ಟ ಕಾಪಾಡಿಕೊಂಡರೆ ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸುಸ್ಥಿರ ಆದಾಯ ಗಳಿಸಬಹುದು ಎಂದು ಸಲಹೆ ಮಾಡಿದರು. ಕೆಪೆಕ್ ವ್ಯವಸ್ಥಾಪಕ ನಿರ್ದೇಶಕ ಸಿ.ಎನ್.ಶಿವಪ್ರಕಾಶ್, ‘ಬೆಳೆಗಳ ಮೌಲ್ಯವರ್ಧನೆ, ಸಂಸ್ಕರಣೆಗೆ ಪಿಎಂಎಫ್‌ಎಂಇ ಯೋಜನೆಯಡಿ 15 ಲಕ್ಷ ಸಹಾಯಧನ ನೀಡಲಾಗುತ್ತದೆ. ಬ್ಯಾಂಕ್ ಮುಖಾಂತರ ನೆರವು ಪಡೆಯಬಹುದು’ ಎಂದರು.…
ತಿಪಟೂರು: ತುಮಕೂರು ದಸರಾವನ್ನು ಈ ಬಾರಿ ಅದ್ದೂರಿಯಾಗಿ ಆಚರಿಸಲು ಜಿಲ್ಲಾಡಳಿತ ತೀರ್ಮಾನಿಸಿದ್ದು, ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ 10 ದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳಲಿದೆ ಎಂದು ಹಾಲಪ್ಪ ಪ್ರತಿಷ್ಠಾನದ ಅಧ್ಯಕ್ಷ ಮುರಳೀಧರ ಹಾಲಪ್ಪ ತಿಳಿಸಿದರು. ನಗರದ ಸರ್ಕಾರಿ ಪದವಿ ಕಾಲೇಜು ಸಭಾಂಗಣದಲ್ಲಿ ದಸರಾ ಆಚರಣೆ ವಿಷಯವಾಗಿ ಏರ್ಪಡಿಸಿದ್ದ ಪ್ರಬಂಧ ಹಾಗೂ ಆಶುಭಾಶಣ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಈ ಬಾರಿಯ ದಸರಾದಲ್ಲಿ ವಿಶೇಷವಾಗಿ ಪ್ಯಾರಾ ಗ್ರೇಡಿಂಗ್ ಮತ್ತು ಹೆಲಿಕಾಪ್ಟರಿಂಗ್ ಆಯೋಜಿಸಲಾಗಿದೆ. ಅರ್ಜುನ್ ಜನ್ಯ ಮ್ಯೂಸಿಕಲ್ ನೈಟ್ಸ್ ಇರಲಿದೆ. ನಟಿ ರಮ್ಯಾ ಹಾಗೂ ನಟ ವಿನಯ್ ರಾಜಕುಮಾರ್ ಭಾಗವಹಿಸಲಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಸ್ವತಃ ಮುತುವರ್ಜಿವಹಿಸಿ ಈ ಬಾರಿಯ ತುಮಕೂರು ದಸರಾವನ್ನು ಅದ್ದೂರಿಯಾಗಿಸಲು ಪ್ರಯತ್ನಿಸುತ್ತಿದ್ದು ಮೂರು ಆನೆಗಳು ಉತ್ಸವದಲ್ಲಿ ಭಾಗವಹಿಸಲಿವೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದಲೂ ತುಮಕೂರಿಗೆ ಹೋಗಿ ಬರಲು ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದರು. ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎನ್.ಕಾಂತರಾಜು, ಪ್ರಾಂಶುಪಾಲ ಶಶಿಕುಮಾರ್,…
ತುಮಕೂರು: ಜಿಲ್ಲಾ ಆಡಳಿತದಿಂದ ದಸರಾ ಪ್ರಯುಕ್ತ ನಗರದ ವಿವಿಧೆಡೆ ಅಳವಡಿಸಿರುವ ಪ್ಲೆಕ್ಸ್‌ಗಳಲ್ಲಿ ಶಾಸಕ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಭಾವಚಿತ್ರ ಹಾಕದಿರುವುದಕ್ಕೆ ವಾಲ್ಮೀಕಿ ಸಮುದಾಯದ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ನಡೆಯಿತು. ಮುಖಂಡ ಕುಳ್ಳೂರು ಶ್ರೀಧರ್ ಮಾತನಾಡಿ, ಶಾಸಕರ ಭಾವಚಿತ್ರ ಕೈಬಿಟ್ಟಿರುವುದನ್ನು ಖಂಡಿಸಿದರು. ವಾಲ್ಮೀಕಿ ಅಧ್ಯಯನ ಪೀಠಕ್ಕೆ 10 ಎಕರೆ ಜಾಗ ಗುರುತಿಸಿ, ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಕೇಂದ್ರ ತೆರೆಯುವಂತೆ 2023ರಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ತಿಳಿಸಿದ್ದರು. ಈ ನಿಟ್ಟಿನಲ್ಲಿ ಏನು ಬೆಳವಣಿಗೆಯಾಗಿದೆ ಎಂಬ ಮಾಹಿತಿಯೇ ಇಲ್ಲ. ಜಯಂತಿಯ ಒಳಗೆ ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ‘ಪ್ರಸ್ತುತ ಜಯಂತಿ ಪ್ರಯುಕ್ತ ಕೇವಲ ಇಬ್ಬರಿಗೆ ಪ್ರೋತ್ಸಾಹ ಧನ ನೀಡುತ್ತಿದ್ದು, ಅದನ್ನು 10ಕ್ಕೆ ಹೆಚ್ಚಿಸಬೇಕು. ಕನಿಷ್ಠ ತಾಲ್ಲೂಕಿಗೆ ಒಬ್ಬರಂತೆ 10 ಸಾಧಕರನ್ನು ಗುರುತಿಸಿ ಸನ್ಮಾನಿಸಬೇಕು. ಜಯಂತಿ ದಿನ ಟೌನ್‌ಹಾಲ್ ವೃತ್ತದ ಅಂಬೇಡ್ಕರ್ ಪ್ರತಿಮೆಯಿಂದ ಬಾಲ ಭವನದವರೆಗೆ ಮೆರವಣಿಗೆ ನಡೆಸಬೇಕು’ ಎಂದು ಮುಖಂಡರು…
ಬೆಂಗಳೂರು: ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ತಮ್ಮ ಗೃಹ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲಿ ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಇಲ್ಲ. ಒಂದು ತಿಂಗಳ ಮುಂಚಿತವಾಗಿಯೇ ಸಮೀಕ್ಷೆಯ ದಿನಾಂಕವನ್ನು ಪ್ರಕಟ ಮಾಡಿದ್ದೇವೆ. ಈಗಾಗಲೇ ಇದಕ್ಕೆ ಬೇಕಾದ ಸಿದ್ಧತೆಗಳು ನಡೆದಿವೆ. ಅಕ್ಟೋಬರ್ನಲ್ಲಿ ಸಮೀಕ್ಷೆ ಪೂರ್ಣಗೊಂಡು ಡಿಸೆಂಬರ್ನಲ್ಲಿ ಆಯೋಗ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಸರ್ಕಾರವು ವರದಿ ಜಾರಿ ಮಾಡಲಿದೆ ಎಂದು ಹೇಳಿದರು. ದೊಡ್ಡ ಕಾರ್ಯಕ್ಕೆ ಸರ್ಕಾರ ಕೈ ಹಾಕಿದ್ದು, ಇದು ನಮಗೆ ಸವಾಲಿನ ಕೆಲಸ ಕೂಡ. ಇದರಲ್ಲಿ ಯಶಸ್ವಿಯೂ ಕೂಡ ಆಗುತ್ತೇವೆ. ಯಾವುದೇ ಸವಾಲಿನ ಕೆಲಸಕ್ಕೆ ಕೈ ಹಾಕಿದರೆ ಸಣ್ಣ- – ಪುಟ್ಟ ಲೋಪಗಳು ಸಹಜ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಮೈಸೂರು: 600 ಕೆ.ಜಿ ತೂಕದ ಮರದ ಅಂಬಾರಿಯನ್ನು ಸುಗ್ರೀವಾ ಆನೆ ಅರಮನೆಯಿಂದ ಬನ್ನಿಮಂಟಪದವರೆಗೆ ಸರಾಗವಾಗಿ ಹೊತ್ತು ಸಾಗಿದ್ದಾನೆ. ಶುಕ್ರವಾರ ನಡೆದ ದಸರಾಗೆ ಜಂಬೂಸವಾರಿ ತಾಲೀಮು ವೇಳೆ ಸುಗ್ರೀವಾ ಆನೆ 600 ಕೆ.ಜಿ. ತೂಕದ ಮರದ ಅಂಬಾರಿ ಹೊರುವ ಮೂಲಕ ಚಿನ್ನದ ಅಂಬಾರಿ ಹೊರಲು ತಾನೂ ಅರ್ಹ ಅಂತ ನಿರೂಪಿಸಿದ್ದಾನೆ. ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಮೂರನೇ ಬಾರಿ ಆಗಮಿಸಿರುವ 43 ವರ್ಷದ ಸುಗ್ರೀವನಿಗೆ 280 ಕೆ.ಜಿ ಮರದ ಅಂಬಾರಿ ಸೇರಿ ಒಟ್ಟು ಸುಮಾರು 600 ಕೆ.ಜಿ ಭಾರ ಹೊರಿಸಿ ಶುಕ್ರವಾರ ತಾಲೀಮು ನಡೆಸಲಾಯಿತು. ಮೊದಲ ಬಾರಿಗೆ ಇಷ್ಟು ಭಾರವನ್ನು ಬೆನ್ನಿಗೇರಿಸಿದರೂ ಕೊಂಚವೂ ವಿಚಲಿತಗೊಳ್ಳದೆ ಅನುಭವಿಯಂತೆ ಸುಗ್ರೀವಾ ತಾಲೀಮು ಪೂರ್ಣಗೊಳಿಸಿ, ಭರವಸೆ ಮೂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಜಿಲ್ಲೆಯ ಹಳ್ಳಿಖೇಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾತು ಬಾರದ ಹಾಗೂ ಮಾನಸಿಕ ಅಸ್ವಸ್ಥ ಮಹಿಳೆಯೋರ್ವಳ ಮೇಲೆ ಅನುಚಿತ ವರ್ತನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನಲ್ಲಿ, ತಮ್ಮ ಗಂಡ ಕೆಲಸಕ್ಕೆ ತೆರಳಿದ್ದಾಗ ಮಗಳು ಮನೆಯಲ್ಲಿ ಒಬ್ಬಳೇ ಇದ್ದಳು. ಇದೇ ವೇಳೆ ಅಬು ಎಂಬಾತ ಮನೆಗೆ ನುಗ್ಗಿ, ಆಕೆಯ ಬಾಯಿಗೆ ಬಟ್ಟೆ ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ನಾನು ಈ ವೇಳೆ ಮನೆಗೆ ಬಂದು ಮಗಳನ್ನು ಕೂಗಿದಾಗ, ಆರೋಪಿ ಓಡಿ ಹೋಗಿದ್ದಾನೆ. ಬಳಿಕ ಮಗಳು ಸನ್ನೆಗಳ ಮೂಲಕ ಘಟನೆ ವಿವರಿಸಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕುರಿತು ಹಳ್ಳಿಖೇಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ಮುಂದುವರಿದಿದೆ ವರದಿ: ಅರವಿಂದ್ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ನವದೆಹಲಿ: ದೆಹಲಿಯಲ್ಲಿ ವಿವಿಧ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದೆ. ನಗರದ ಡಿಪಿಎಸ್ ದ್ವಾರಕಾ, ಕೃಷ್ಣ ಮಾಡೆಲ್ ಪಬ್ಲಿಕ್ ಸ್ಕೂಲ್ ಮತ್ತು ಸರ್ವೋದಯ ವಿದ್ಯಾಲಯ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆದರಿಕೆ ಹಾಕಲಾಗಿದೆ. ಬೆದರಿಕೆ ಬಂದ ತಕ್ಷಣಕ್ಕೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಮುನ್ನೆಚ್ಚರಿಕೆಯಾಗಿ, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸುರಕ್ಷತಾ ದೃಷ್ಟಿಯಿಂದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಾಂಬ್ ಸಂದೇಶ ಪಡೆದ ಡಿಪಿಎಸ್ ದ್ವಾರಕಾ ಶಾಲೆಯನ್ನು ಬಂದ್ ಮಾಡಲಾಗಿದ್ದು, ಇಂದು ನಿಗದಿಯಾಗಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಬೆದರಿಕೆ ಸ್ವೀಕರಿಸಿದ ಶಾಲೆಗಳಿಗೆ ಪೊಲೀಸ್ ತಂಡಗಳು ಮತ್ತು ಬಾಂಬ್ ನಿಷ್ಕ್ರಿಯ ದಳಗಳು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಡ್ರಗ್ ಮಾಫಿಯಾ ಸೇರಿದಂತೆ ಇನ್ನಿತರ ಅಕ್ರಮ ದಂಧೆಯ ಜೊತೆ ಪೊಲೀಸರು ಶಾಮೀಲಾಗಿರುವುದು ಕಂಡು ಬಂದರೆ, ಇನ್ನು ಮುಂದೆ ಎಚ್ಚರಿಕೆ ಕೊಡುವುದಿಲ್ಲ, ಕ್ರಮ ತೆಗೆದುಕೊಳ್ಳುತ್ತೇವೆ. ಎಚ್ಚರಿಕೆ ಕೊಡುವುದೆಲ್ಲ ಒಂದು ಹಂತದಲ್ಲಿ ಮುಗಿದಿದೆ. ಈಗ ಏನಿದ್ದರು ಕ್ರಮ ಆಗಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಖಡಕ್ ಸೂಚನೆ ಕೊಟ್ಟರು. ವಿಧಾನಸೌಧಲ್ಲಿ ಕಾನೂನು ಸುವ್ಯವಸ್ಥೆ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ರೌಡಿಗಳು ಪುಂಡಾಟ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣ, ಬ್ಯಾಂಕ್ ದರೋಡೆ ಪ್ರಕರಣಗಳ ತನಿಖೆಯ ಬಗ್ಗೆ ಅಧಿಕಾರಿಗಳೊಂದಿಗೆ ಕೂಲಂಕಷವಾಗಿ ಚರ್ಚೆ ಮಾಡಲಾಗಿದೆ. ಪರಿಶಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಮೇಲಿನ ದೌರ್ಜನ್ಯ ಪ್ರಕರಣಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಗೆ ಹೋಲಿಸಿದರೆ ಶಿಕ್ಷೆ ಪ್ರಮಾಣ ಶೇ.10ರಷ್ಟಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನೆ ಮಾಡಲಾಗಿದೆ. ಪೊಲೀಸ್ ನೇಮಕಾತಿ, ಕಾರಾಗೃಹ ಸಿಬ್ಬಂದಿಗಳ ನೇಮಕಾತಿ ಬಗ್ಗೆ ಚರ್ಚಿಸಲಾಗಿದೆ. ನೇಮಕಾತಿ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದರು. ಈಗಾಗಲೇ…
ಬೀದರ್: ಜಿಲ್ಲೆಯ ಸಂತಪೂರ ನಾಡ ಕಚೇರಿಯಲ್ಲಿ ಕಳೆದ 6 ತಿಂಗಳುಗಳಿಂದ ಆಧಾರ್ ಆಪರೇಟರ್ ಇಲ್ಲದೇ ಇಲ್ಲಿನ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ. ತಕ್ಷಣವೇ ಆಧಾರ್ ಆಪರೇಟರ್ ನ್ನು ನೇಮಕ ಮಾಡುವಂತೆ ದಲಿತ ಸಂಘಟನೆ ಮುಖಂಡರು ಔರಾದ್ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ತುಕಾರಾಮ ಹಸನ್ಮುಖಿ ಈ ಸಂಬಂಧ ನೀಡಿರುವ ಮನವಿಯಲ್ಲಿ, ಸಂತಪೂರ ಹೋಬಳಿಯ ಸಂತಪೂರ ನಾಡ ಕಚೇರಿಗೆ ಸುಮಾರು 30 ಕ್ಕಿಂತಲು ಹೆಚ್ಚಿನ ಹಳ್ಳಿಯ ಜನರು ದಿನಾಲೂ ಆಧಾರ್ ಸಂಬಂಧಿಸಿದ ಕೆಲಸಗಳಿಗಾಗಿ ಅಲೆದಾಡುತ್ತಿದ್ದಾರೆ. ಆದರೆ 6 ತಿಂಗಳುಗಳಿಂದ ಸಂತಪೂರ ನಾಡ ಕಚೇರಿಯಲ್ಲಿ ಆಧಾರ್ ಕಾರ್ಡ್ ಆಪರೇಟರ್ ಇರುವುದಿಲ್ಲ. ಮತ್ತು ಸಂತಪೂರ ಹೋಬಳಿಯ ಜನರು ಬೇರೆ ಆಧಾರ್ ಕೇಂದ್ರಕ್ಕೆ ಭೇಟಿ ನೀಡಿದಾಗ, ಅಲ್ಲಿನ ಆಧಾರ್ ಕೇಂದ್ರದ ಆಪರೇಟರ್ ಸಂತಪೂರ ಹೋಬಳಿಯವರ ಕೆಲಸ ಮಾಡಿಕೊಡುತ್ತಿಲ್ಲ, ಹೀಗಾಗಿ ಕೂಡಲೇ ಸಂತಪೂರ ನಾಡ ಕಚೇರಿಗೆ ಶಾಶ್ವತ ಆಧಾರ್ ಕಾರ್ಡ್ ಆಪರೇಟರ್ ನೇಮಕ ಮಾಡುವಂತೆ ವಿನಂತಿಸಲಾಗಿದೆ. ಗಣಪತಿ, ಶೆಂಬೆಳ್ಳಿ ದಲಿತ ದಲಿತ ಹಿರಿಯ ಮುಖಂಡರು, ಮಲ್ಲಿಕಾರ್ಜುನ ಜೊನ್ನಿಕೆರಿ ಸಂಘಟನಾ…