Subscribe to Updates
Get the latest creative news from FooBar about art, design and business.
- ಬಿಪಿಎಲ್ ಕಾರ್ಡ್ ಪಡೆಯಲು ವಾರ್ಷಿಕ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸಲು ಕ್ರಮ: ಸಚಿವ ಕೆ.ಹೆಚ್. ಮುನಿಯಪ್ಪ
- ವಿಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ನೀರಿಳಿಸಲು ಬಿಜೆಪಿ–ಜೆಡಿಎಸ್ ಸಜ್ಜು: ಬಿ.ವೈ.ವಿಜಯೇಂದ್ರ
- ತುಮಕೂರು: ನಡುರಸ್ತೆಯಲ್ಲೇ ರೌಡಿಶೀಟರ್ ಮಲ್ಲ ಬರ್ಬರ ಹತ್ಯೆ!
- ಧರ್ಮೇಂದ್ರ ಪ್ರಧಾನ್ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿರುವುದು ಸ್ವಾಗತಾರ್ಹ: ಡಾ.ಜಿ.ಪರಮೇಶ್ವರ್
- ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯ: 2028ರ ಚುನಾವಣೆಗೆ ಸ್ಪರ್ಧಿಸಲ್ಲವೆಂದು ಸ್ಪಷ್ಟನೆ
- ರಾಜ್ಯದಲ್ಲಿ ಬರ ಪರಿಸ್ಥಿತಿ: ದೆಹಲಿಯಲ್ಲಿ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಸಿಎಂ ಡಿ.ಕೆ. ಶಿವಕುಮಾರ್
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳ ಆಯ್ಕೆ
- ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಫಲಾನುಭವಿಗಳ ಆಯ್ಕೆ: ಪಾರದರ್ಶಕ ಆಯ್ಕೆ ಪ್ರಕ್ರಿಯೆ
Author: admin
ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ಸಂಭವಿಸಿದೆ. ಮೃತ ದುರ್ದೈವಿಯನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಅಂಕೋಲಕ್ಕೆ ಇಬ್ಬರೂ ಬಾಡಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ತುಮಕೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ನಾಗೇಂದ್ರ ಕಾರಿನಲ್ಲಿದ್ದ ಯುವತಿಯ ತಲೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ಆ ಬಳಿಕ ಮೊದಲೇ ಪ್ಲಾನ್ ಮಾಡಿ ತಂದಿದ್ದ ಸ್ಫೋಟಕವನ್ನು ಅನ್ನು ಕಾರಿನೊಳಗೆ ಸಿಡಿಸಿಕೊಂಡಿದ್ದಾನೆ. ಸ್ಫೋಟಕ ಸಿಡಿದ ತಕ್ಷಣ ಕಾರಿಗೆ ಭೀಕರವಾಗಿ ಬೆಂಕಿ ಹೊತ್ತಿಕೊಂಡಿದ್ದು, ನಾಗೇಂದ್ರ ಕಾರಿನೊಳಗೇ ಸಜೀವ ದಹನವಾಗಿದ್ದಾನೆ. ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ತಕ್ಷಣವೇ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ವಿಷಯ ತಿಳಿಯುತ್ತಿದ್ದಂತೆ ತುಮಕೂರು ಎಸ್ ಪಿ ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ…
ಸರಗೂರು: ತಾಲೂಕಿನ ನುಗು ಅರಣ್ಯ ವಲಯ ವ್ಯಾಪ್ತಿಯ ಮುಳ್ಳೂರು ಬೆಣ್ಣೆಗೆರೆ ಗ್ರಾಮದ ಜಮೀನೊಂದರಲ್ಲಿ ಶನಿವಾರ ಮಧ್ಯಾಹ್ನ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ಏಕಾಏಕಿ ದಾಳಿ ನಡೆಸಿ ಗಾಯಗೊಳಿಸಿರುವ ಭೀಕರ ಘಟನೆ ನಡೆದಿದೆ. ಬೆಣ್ಣೆಗೆರೆ ಗ್ರಾಮದ ಮಾದೇಗೌಡ ಎಂಬುವರ ಮಗ ಕಿರಣ್ (24) ಹುಲಿ ದಾಳಿಯಿಂದ ಗಾಯಗೊಂಡ ಯುವಕ. ಬೆಣ್ಣೆಗೆರೆ ಗ್ರಾಮದ ರವಿ ಎಂಬುವರ ಬಾಳೆ ತೋಟದಲ್ಲಿ ಕಿರಣ್ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಹೊಂಚು ಹಾಕಿ ಬಂದ ಹುಲಿ, ಕಿರಣ್ ಅವರ ಹಿಂಭಾಗದಿಂದ ಬೆನ್ನಿನ ಮೇಲೆ ತೀವ್ರವಾಗಿ ದಾಳಿ ನಡೆಸಿದೆ. ತಕ್ಷಣವೇ ಜೊತೆಯಲ್ಲಿದ್ದ ಸಹ ಕೂಲಿ ಕಾರ್ಮಿಕರು ಜೋರಾಗಿ ಕಿರುಚಾಡಿಕೊಂಡಿದ್ದರಿಂದ ಹುಲಿ ಕಿರಣ್‌ನನ್ನು ಬಿಟ್ಟು ಓಡಿ ಹೋಗಿದೆ. ಸಹ ಕಾರ್ಮಿಕರ ಸಮಯಪ್ರಜ್ಞೆಯಿಂದ ಕಿರಣ್ ಕ್ಷಣಾರ್ಧದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಗಾಯಾಳು ಕಿರಣ್‌ಗೆ ಪಟ್ಟಣದ ಸ್ವಾಮಿ ವಿವೇಕಾನಂದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದ್ದು, ಸರಗೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನುಗು ವನ್ಯಜೀವಿ ವಲಯದ ಅರಣ್ಯದಂಚಿನಲ್ಲಿರುವ ಈ ಭಾಗದಲ್ಲಿ ಹುಲಿ…
ತುಮಕೂರು: ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ತುಮಕೂರು ಹಾಗೂ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಪಾವಗಡ ಇವರ ಸಂಯುಕ್ತ ಆಶ್ರಯದಲ್ಲಿ ಜೂ.29 ಸೋಮವಾರ ಬೆಳಿಗ್ಗೆ 10:30ಕ್ಕೆ 3395 ಪೊಲೀಸ್ ಕಾನ್ ಸ್ಟೇಬಲ್ (ಸಿವಿಲ್) ಮತ್ತು 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಶ್ರೀ ಪತಂಜಲಿ ಯೋಗ ಮಂದಿರ ಶಾಂತಿನಗರ, ಪಾವಗಡ ಇಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಾಗಾರದಲ್ಲಿ ಸದರಿ ಮೇಲ್ಕಂಡ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸುವ ವಿಧಾನ, ವಿದ್ಯಾರ್ಹತೆ, ದೈಹಿಕ ಸಾಮರ್ಥ್ಯ, ಲಿಖಿತ ಪರೀಕ್ಷೆ, ನಿಗದಿಯಾಗಿರುವ ಪಠ್ಯಕ್ರಮ, ಅಂಕಗಳ ವಿಂಗಡಣೆ, ವಯೋಮಿತಿ, ಪರೀಕ್ಷಾ ದಿನಾಂಕ ಇತ್ಯಾದಿ ವಿವರಗಳನ್ನು ಮತ್ತು ಮಾರ್ಗದರ್ಶನವನ್ನು ನೀಡಲಾಗುವುದು. ಪಾವಗಡ ತಾಲ್ಲೂಕಿನ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರನ್ನು ಮೊ. 9448432930ನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಲು ಕೃಷಿಕ್ ಸರ್ವೋದಯ ಫೌಂಡೇಶನ್ (ರಿ) ತುಮಕೂರು ಶಾಖೆಯ ಕಾರ್ಯದರ್ಶಿಗಳು ಹಾಗೂ ಶೈಕ್ಷಣಿಕ ಸಮಿತಿಯ ಅಧ್ಯಕ್ಷರು ತಿಳಿಸಿರುತ್ತಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಮಸ್ತ ವೀರಶೈವ-ಲಿಂಗಾಯಿತ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜುಲೈ 2ರಂದು ನಡೆಯುವ ಡಾ.ಫ.ಗು.ಹಳಕಟ್ಟಿ ಜನ್ಮ ದಿನದ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಜೂನ್ 30ರಂದು ಮಧ್ಯಾಹ್ನ 3 ಗಂಟೆಗೆ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಚನ ಗಾಯನ ಸ್ಪರ್ಧೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಸ್ಪರ್ಧೆಯಲ್ಲಿ ವಿಜೇತರಾದ ಪ್ರಥಮ ಮೂರು ವಿಜೇತರಿಗೆ ಡಾ: ಫ.ಗು.ಹಳಕಟ್ಟಿ ಜನ್ಮ ದಿನದ ಪ್ರಯುಕ್ತ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಂದು ಸನ್ಮಾನಿಸಲಾಗುವುದು. ವಚನ ಗಾಯನ ಸ್ಪರ್ಧೆಯಲ್ಲಿ 12ನೇ ಶತಮಾನದಲ್ಲಿ ಶರಣ/ಶರಣೆಯರು ರಚಿಸಿದ ವಚನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಪ್ರಬಂಧ ಸ್ಪರ್ಧೆಯಲ್ಲಿ ವಚನ ಸಾಹಿತ್ಯಕ್ಕೆ ಡಾ: ಫ.ಗು.ಹಳಕಟ್ಟಿ ಅವರ ಕೊಡುಗೆ ಕುರಿತಂತೆ ಸ್ಪರ್ಧೆಯನ್ನು ಏರ್ಪಡಿಸಲಾಗುವುದು. ಸ್ಪರ್ಧಾರ್ಥಿಗಳು ಜೂನ್ 30ಕ್ಕೂ ಪೂರ್ವದಲ್ಲಿ ಸಂಘಟಕರ ಬಳಿಯಲ್ಲಿ ತಮ್ಮ…
ತುಮಕೂರು: ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ 2026–27ನೇ ಸಾಲಿಗೆ ಅಧಿಸೂಚನೆ ಹೊರಡಿಸಿರುವ ಬೆಳೆಗಳನ್ನು ವಿಮಾ ಸೌಲಭ್ಯಕ್ಕೊಳಪಡಿಸಬೇಕೆಂದು ತೋಟಗಾರಿಕೆ ಜಂಟಿ ನಿರ್ದೇಶಕ ಶಾರದಮ್ಮ ರೈತರಲ್ಲಿ ಮನವಿ ಮಾಡಿದ್ದಾರೆ. ವಿಮಾ ಸೌಲಭ್ಯವು ಸಾಲ ಪಡೆದಿರುವ ಪಡೆಯುವ ರೈತರಿಗೆ ಕಡ್ಡಾಯ ಹಾಗೂ ಬೆಳೆಸಾಲ ಪಡೆಯದ ರೈತರಿಗೆ ಐಚ್ಛಿಕವಾಗಿರುತ್ತದೆ. ತಮ್ಮ ಬೆಳೆಗಳಿಗೆ ವಿಮೆ ಮಾಡಿಸುವ ರೈತರು ಕೂಡಲೇ ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನಲ್ಲಿ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿಯೊಂದಿಗೆ ಆಯಾ ತಾಲ್ಲೂಕಿನ ಯಾವುದಾದರೂ ರಾಷ್ಟ್ರೀಯ ಅಧಿಕೃತ ಬ್ಯಾಂಕು/ಗ್ರಾಮ ಒನ್/ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬಹುದಾಗಿದೆ. ಬೆಳೆವಿಮೆ ಯೋಜನೆಯಡಿ 2026ರ ಮುಂಗಾರು ಮತ್ತು ಹಿಂಗಾರು ಹಂಗಾಮಿನಲ್ಲಿ ನಿರ್ಧಿಷ್ಟ ಪ್ರಕೃತಿ ವಿಕೋಪಗಳಾದ ಆಲಿಕಲ್ಲು ಮಳೆ ಮತ್ತು ಮೇಘ ಸ್ಫೋಟ ಸಂದರ್ಭದಲ್ಲಿ ಟರ್ಮ್ ಶೀಟ್‌ನಲ್ಲಿ ನಮೂದಿಸಿರುವ ರಿಸ್ಕ್ ಅವಧಿಯೊಳಗೆ ಬೆಳೆ ನಷ್ಟ ಸಂಭವಿಸಿದರೆ ವಿಮೆ ಮಾಡಿಸಿರುವ ರೈತರು ಸಂಬಂಧಪಟ್ಟ ಹಣಕಾಸು ಸಂಸ್ಥೆ ಅಥವಾ ಅನುಷ್ಠಾನಗೊಳಿಸುವ ವಿಮಾ ಸಂಸ್ಥೆಗಳ ಕಚೇರಿ (Agriculture Insurance Company…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಉಂಟಾಗಿದ್ದು, ಸಾರ್ವಜನಿಕರು, ವಿಶೇಷವಾಗಿ ಮಹಿಳೆಯರು ನೀರಿಗಾಗಿ ತೀವ್ರ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಗ್ರಾಮದ ದಲಿತರ ಓಣಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಓಣಿಯಲ್ಲಿ ಎರಡು ಹ್ಯಾಂಡ್ ಪಂಪ್, ಮೂರು ಬೋರ್‌ವೆಲ್ ಹಾಗೂ ಒಂದು ಬಾವಿ ಇದ್ದರೂ ಸಹ ಸದ್ಯಕ್ಕೆ ಯಾವುದೇ ಪ್ರಯೋಜನವಾಗುತ್ತಿಲ್ಲ. ನೀರಿಲ್ಲದೆ ದೈನಂದಿನ ಕಾರ್ಯಗಳಿಗೆ ಜನಸಾಮಾನ್ಯರು ಕಷ್ಟಪಡುತ್ತಿದ್ದಾರೆ. ಈ ಕುರಿತು ಗ್ರಾಮದ ಪ್ರಮುಖರಾದ ಪ್ರಭಾಕರ್ ಇಂಗಳೇ ಹಾಗೂ ಶಾಶ್ವತಿ ಮಾಳೆಗೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವ ಕನಿಷ್ಠ ಸೌಜನ್ಯವನ್ನೂ ತೋರುತ್ತಿಲ್ಲ ಎಂದು ಅವರು ದೂರಿದ್ದಾರೆ. ಸಮಸ್ಯೆ ಉಲ್ಬಣಗೊಂಡಿರುವುದರಿಂದ ಜಿಲ್ಲಾ ಪಂಚಾಯತ್ ಸಿಇಒ ಅವರು ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಕರ್ತವ್ಯ ಲೋಪ ಎಸಗಿರುವ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು…
ಚಿಕ್ಕನಾಯಕನಹಳ್ಳಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ಜಾರಿಯಲ್ಲಿರಲಿದ್ದು, ಯಾವುದೇ ಕಾರಣಕ್ಕೂ ಇವುಗಳನ್ನು ಸ್ಥಗಿತಗೊಳಿಸುವುದಿಲ್ಲ, ಸಾರ್ವಜನಿಕರು ಈ ಕುರಿತಾದ ಯಾವುದೇ ಅಪಪ್ರಚಾರ ಹಾಗೂ ಊಹಾಪೋಹಗಳಿಗೆ ಆಸ್ಪದ ನೀಡಬಾರದು ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ’ಯಲ್ಲಿ ಮಾತನಾಡಿದರು. ಸರ್ಕಾರವು ಕೇವಲ ಅರ್ಹ ಹಾಗೂ ನೈಜ ಫಲಾನುಭವಿಗಳಿಗೆ ಯೋಜನೆಗಳು ತಲುಪುತ್ತಿವೆಯೇ ಎಂಬ ತಾಂತ್ರಿಕ ಪರಿಶೀಲನೆ ನಡೆಸುತ್ತಿದೆಯೇ ಹೊರತು ಯೋಜನೆಗಳನ್ನು ನಿಲ್ಲಿಸುತ್ತಿಲ್ಲ. ‘ಗೃಹಲಕ್ಷ್ಮಿ’ ಯೋಜನೆ ಸ್ಥಗಿತಗೊಳ್ಳಲಿದೆ ಎಂಬ ಸುಳ್ಳು ವದಂತಿಗಳಿಂದಾಗಿ ಮಹಿಳೆಯರು ಗೊಂದಲಕ್ಕೀಡಾಗಿ ‘ಗ್ರಾಮ ಒನ್’ ಕೇಂದ್ರಗಳಲ್ಲಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ಒಮ್ಮೆ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ಪುನಃ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ अधिकारी ಹೊನ್ನಪ್ಪ ಮಾತನಾಡಿ, ಮರಣ ಹೊಂದಿದ ಮಹಿಳಾ ಫಲಾನುಭವಿಗಳ ವಿವರಗಳನ್ನು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಪಡೆದು,…
ಮಧುಗಿರಿ: ತುಮಕೂರಿನ ಸೈಬರ್ ಠಾಣೆಯ ಪೊಲೀಸರು ಭರ್ಜರಿಯಾಗಿ ಕಾರ್ಯಾಚರಣೆ ನಡೆಸಿ ನಸುಕಿನ ಜಾವದಲ್ಲಿ ಜೂಜಾಟ ಆಡುತ್ತಿದ್ದವರನ್ನು ಬಂಧಿಸಿ ಗಡಿ ಭಾಗದಲ್ಲಿ ಜೂಜಾಟಕ್ಕೆ ಬ್ರೇಕ್ ಹಾಕುವಲ್ಲಿ ಯಶಸ್ವಿಯಾಗುತ್ತಿದ್ದಾರೆ. ತಾಲೂಕಿನ ಕೊಡಿಗೇನಹಳ್ಳಿ ಹೊಬಳಿಯ ಹಾಗೂ ತಾಲೂಕಿನ ಗಡಿ ಭಾಗಕ್ಕೆ ಹೊಂದಿಕೊಂಡಂತೆ ಇರುವ ತೆರೆಯೂರು ಗ್ರಾಮದ ಚೆನ್ನಾವರ ಕೆರೆಯ ಅಂಗಳದಲ್ಲಿ ಶುಕ್ರವಾರ ನಸುಕಿನ ಜಾವದಲ್ಲಿ ಸೈಬರ್ ಕ್ರೈಂ ಅಪರಾಧ ವಿಭಾಗದ ಡಿವೈಎಸ್‌ಪಿ ಜಯಲಕ್ಷ್ಮಮ್ಮ ನೇತೃತ್ವದ ತಂಡವು ಜೂಜಾಟದಲ್ಲಿ ತೊಡಗಿದ್ದ 12 ಮಂದಿ ಜೂಜುಕೋರರು ಹಾಗೂ 11 ದ್ವಿಚಕ್ರವಾಹನ, 8 ಮೊಬೈಲ್, 3 ಚಾರ್ಜರ್ ಲೈಟ್ ಸೇರಿದಂತೆ ಪಣಕ್ಕಿಟ್ಟಿದ್ದ 2,02,250 ರೂಗಳನ್ನು ವಶಕ್ಕೆ ಪಡೆದುಕೊಂಡು ಜೂಜು ಕೋರರ ವಿರುದ್ಧ ಕಾನೂನು ಕೈಗೊಂಡಿದ್ದಾರೆ. ಇತ್ತೀಚೆಗೆ ನೆರೆಯ ಆಂಧ್ರದಿಂದ ಜೂಜು ಕೋರರ ತಂಡವೊಂದು ತಾಲೂಕಿನ ಗಡಿಭಾಗದ ಪ್ರದೇಶಗಳಲ್ಲಿ ಜುಜೂಟ ಆಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರು ಜೊತೆಗೂಡಿ ಜೂಜಾಟಕ್ಕೆ ಕಡಿವಾಣ ಹಾಕುತ್ತಿರುವುದು ಕಂಡುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ತಿಪಟೂರು: ಶಿಕ್ಷಣ ಕ್ಷೇತ್ರದಲ್ಲಿ ಕಳೆದ 64 ವರ್ಷಗಳಿಂದ ನಿರಂತರವಾಗಿ ಅಪಾರ ಸೇವೆ ಸಲ್ಲಿಸುತ್ತಿರುವ ಇಲ್ಲಿನ ಪ್ರಸಿದ್ಧ ‘ಕಲ್ಪತರು ಶಿಕ್ಷಣ ಸಂಸ್ಥೆ’ಯ ಇತಿಹಾಸದ ನೆನಪಿಗಾಗಿ ಸಿದ್ಧವಾಗಿರುವ ‘ಕಲ್ಪತರು ಕಥನ’ ಪುಸ್ತಕವು ಜೂನ್ 29ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಪಿ. ಕೆ. ತಿಪ್ಪೆರುದ್ರಪ್ಪ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಪುಸ್ತಕ ಲೋಕಾರ್ಪಣೆಯೊಂದಿಗೆ ಹಿರಿಯ ವಿದ್ಯಾರ್ಥಿಗಳ ಸಂಘದ ಪುನರ್ಚೇತನ ಕಾರ್ಯಕ್ರಮವೂ ನಡೆಯಲಿದೆ. ಶ್ರೀ ಕಲ್ಪತರು ಮಹಾವಿದ್ಯಾಲಯದ ಭವ್ಯ ಇತಿಹಾಸವನ್ನು ಜನತೆಗೆ ಪರಿಚಯಿಸುವ ಸಲುವಾಗಿ ಡಾ. ಸಿದ್ದಲಿಂಗಯ್ಯ ಒರತಾಳು ಅವರು ಈ ‘ಕಲ್ಪತರು ಕಥನ’ ಕೃತಿಯನ್ನು ರಚಿಸಿದ್ದಾರೆ. ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಈ ಪುಸ್ತಕ ಬಿಡುಗಡೆ ಸಮಾರಂಭ ಜರುಗಲಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ಪಿ. ಕೆ. ತಿಪ್ಪೆರುದ್ರಪ್ಪ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಕೆ. ಷಡಕ್ಷರಿ, ಮಾಜಿ ಶಾಸಕರಾದ ಬಿ. ಸಿ. ನಾಗೇಶ್, ಜೆ. ಸಿ. ಮಾಧುಸ್ವಾಮಿ ಹಾಗೂ ಬಿ. ನಂಜುಮರಿ…
ತುಮಕೂರು: ಆಧುನಿಕ ಸಮಾಜದಲ್ಲೂ ಮಲಹೊರುವ ಅನಿಷ್ಟ ಪದ್ಧತಿ ಇನ್ನೂ ಜೀವಂತವಾಗಿರುವುದು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಗರದ ಕೆಇಬಿ (KEB) ಇಂಜಿನಿಯರ್ಸ್ ಗಳ ಸಂಘದ ಆವರಣದಲ್ಲೇ ಮುಗ್ಧ ಕಾರ್ಮಿಕರಿಂದ ಬರಿಗೈ ಹಾಗೂ ಬರಿಮೈನಲ್ಲಿ ಮಲ ಬಾಚಿಸಿದ ಅಮಾನವೀಯ ಘಟನೆ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೆಇಬಿ ಇಂಜಿನಿಯರ್ಸ್ ಸಂಘದ ಆವರಣದಲ್ಲಿರುವ ಶೌಚ ಗುಂಡಿಯ ಮಲವನ್ನು ಹೊತ್ತು ಸಾಗಿಸಲು ನಾಲ್ವರು ದಲಿತ ಕಾರ್ಮಿಕರನ್ನು ನಿಯೋಜಿಸಲಾಗಿತ್ತು. ತುಮಕೂರು ಮೂಲದ ನಂದೀಶ್, ಅರುಣ ಹಾಗೂ ಮಧುಗಿರಿ ಮೂಲದ ಮೂರ್ತಿ ನಾಯ್ಕ ಮತ್ತು ನವೀನ ಎಂಬುವವರೇ ಈ ಕೃತ್ಯಕ್ಕೆ ಬಲಿಯಾದ ದುರ್ದೈವಿಗಳು. ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಬರಿಗೈ ಮತ್ತು ಬರಿಮೈನಲ್ಲಿ ಶೌಚ ಗುಂಡಿಯ ಮಲವನ್ನು ಬಾಚಿ, ಟ್ರಾಕ್ಟರ್ ಗೆ ತುಂಬುವಂತೆ ಕಾರ್ಮಿಕರನ್ನು ಬಳಸಿಕೊಳ್ಳಲಾಗಿದೆ. “ಮಣ್ಣು ತುಂಬಲು ಕರೆತಂದು ಈ ಕೆಲಸ ಮಾಡಿಸಿದರು” ಈ ಕುರಿತು ಅಳಲು ತೋಡಿಕೊಂಡಿರುವ ದಲಿತ ಕಾರ್ಮಿಕರು, “ಇಂಜಿನಿಯರೊಬ್ಬರು ನಮಗೆ ಈ ಕೆಲಸವನ್ನು ಹೇಳಿದ್ದಾರೆ. ಕಳೆದ ಮೂರು ದಿನಗಳಿಂದ ನಾವು ಇಲ್ಲಿ ಕೆಲಸ…