Author: admin

ಬೆಂಗಳೂರು: ತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ರೋಬೋ ಶಂಕರ್‌ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ  ನಡೆದಿದ್ದು, ಶೂಟಿಂಗ್ ವೊಂದರ ವೇಳೆಯೇ ಈ ಘಟನೆ ನಡೆದಿದೆ. 46 ವರ್ಷ ವಯಸ್ಸಿನ ರೋಬೋ ಶಂಕರ್‌  ಅವರು ಕುಸಿದು ಬಿದ್ದು ನಿತ್ರಾಣಗೊಂಡಿದ್ದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ. ಈ ಹಿಂದೆ ರೋಬೋ ಶಂಕರ್‌ ಅವರು ಜಾಂಡೀಸ್‌‍ನಿಂದ ಬಳಲಿದ್ದರು. ಆನಂತರ ಅವರು ಹಲವು ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. ಆದರೆ ಈಗ ಮತ್ತೆ ಚೇತರಿಸಿಕೊಂಡಿದ್ದ ಅವರು ಎಂದಿನಂತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ರೋಬೋ ಶಂಕರ್‌ ಅವರ ನಿಧನಕ್ಕೆ ಕಾಲಿವುಡ್‌ ನ ಖ್ಯಾತ ಕಲಾವಿದರಾದ ಕಮಲಹಾಸನ್‌, ರಜನಿಕಾಂತ್‌, ವಿಜಯ್‌, ಅಜಿತ್‌, ಕಾರ್ತಿ, ಸಿಂಬು ಖುಷ್ಬೂ, ಸಿಮ್ರಾನ್‌ ಸೇರಿದಂತೆ ಹಲವು ಕಲಾವಿದರು ಹಾಗೂ ತಂತ್ರಜ್ಞರು ಕಂಬನಿ ಮಿಡಿದಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ನವದೆಹಲಿ: ಬುಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿತ್ತು. ಇದನ್ನು ಪ್ರಶ್ನಿಸಿ ಸಂಸದ ಪ್ರತಾಪ್‌ ಸಿಂಹ ಸೇರಿದಂತೆ ಅನೇಕರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಅನುಮೋದಿಸಿತ್ತು. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಅರ್ಜಿಗಳನ್ನು ವಜಾ ಮಾಡಿದೆ. ಅರ್ಜಿದಾರರ ಪರ ಹಿರಿಯ ವಕೀಲ ಪಿ.ಬಿ. ಸುರೇಶ್, ಹಿಂದೂಯೇತರ ವ್ಯಕ್ತಿಗೆ ಪೂಜೆಗಳನ್ನು ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದು ವಾದಿಸಿದರು. ದೇವಸ್ಥಾನದ ಒಳಗೆ ಪೂಜೆ ಮಾಡುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲಾಗುವುದಿಲ್ಲ. ಇದು ಸಂಪೂರ್ಣವಾಗಿ ರಾಜಕೀಯ. ಧಾರ್ಮಿಕ ಚಟುವಟಿಕೆಗಾಗಿ ಅವರನ್ನು ದೇವಸ್ಥಾನದ ಒಳಗೆ ಕರೆತರಲು ಯಾವುದೇ ಕಾರಣವಿಲ್ಲ ಎಂದು ವಾದ ಮಂಡಿಸಿದರು. ದಸರಾ ಉದ್ಘಾಟನೆಗೆ ಆಹ್ವಾನಿತರಾದವರು ಹಿಂದೆ ಕೆಲವು ಆಕ್ಷೇಪಾರ್ಹ…

Read More

ಕುಣಿಗಲ್‌: ದಲಿತರ ಸಮಸ್ಯೆಗಳಿಗೆ ತಹಶೀಲ್ದಾರ್ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ತಾಲ್ಲೂಕಿನ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ಬುಧವಾರ ಮಧ್ಯಾಹ್ನದಿಂದ ತಾಲ್ಲೂಕು ಕಚೇರಿ ಮುಂದೆ ನಡೆಸುತ್ತಿರುವ ಧರಣಿ ಗುರುವಾರವು ಮುಂದುವರೆಯಿತು. ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ದಲಿತ ಮುಖಂಡರು, ತಹಶೀಲ್ದಾರ್ ಕಳೆದ ಎರಡು ವರ್ಷದಿಂದ ಪರಿಶಿಷ್ಟ ಜಾತಿ ಮತ್ತೆ ಪಂಗಡಗಳ ಕುಂದುಕೊರತೆ ಸಭೆಯನ್ನು ಸಕಾಲಕ್ಕೆ ನಡೆಸದ ಕಾರಣ ದಲಿತರ ಸಮಸ್ಯೆಗಳು ಹೆಚ್ಚಾಗಿದೆ. ಹತ್ತು ಹಲವು ಬಾರಿ ಮನವಿ ಮಾಡಿದ ಪರಿಣಾಮ ಕಳೆದ 23 ರಂದು ಸಭೆ ಕರೆದಿದ್ದರೂ, ಸಮಸ್ಯೆಗಳು ಬಗೆಹರಿಸದೆ ಕೇವಲ ಚರ್ಚೆಗಳು ಮಾತ್ರ ನಡೆದು, ಸಭೆಯನ್ನು ಮತ್ತೆ ಇದೇ 12ರಂದು ಕರೆಯಲಾಗಿತ್ತು. ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದರೂ, ಗಮನಹರಿಸದೆ ಗುಂಪುಗಾರಿಕೆ ಮಾಡಿ ಮತ್ತೊಂದು ಗುಂಪಿನೊಂದಿಗೆ ಸೇರಿ ಸಭೆ ನಡೆಸಿದ್ದಾರೆ. ದಲಿತರ ಜಮೀನು ಮತ್ತು ರಸ್ತೆ ಸಮಸ್ಯೆಗಳನ್ನು ಬಗೆಹರಿಸಲು ತಹಶೀಲ್ದಾರ್ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ದೂರಿದರು. ತಾಲ್ಲೂಕಿನ ಬೆಣಚುಕಲ್ಲು, ತೆರದಕುಪ್ಪೆ, ಗುನ್ನಾಗರೆ, ಕೊಡವತ್ತಿ, ಮಲ್ಲಾಪುರ, ಗೋವಿಂದಯ್ಯನಪಾಳ್ಯ ವಾಣಿಗೆರೆ, ನಾಗಲಾಪುರ ಗ್ರಾಮಗಳಲ್ಲಿ ದಲಿತರ ಜಮೀನಿಗೆ ಹೋಗುವ…

Read More

ತಿಪಟೂರು: ನಗರದ ಕಲ್ಪತರು ಸಭಾಂಗಣದಲ್ಲಿ ಗುರುವಾರ ಜಾತಿ ಗಣತಿ ನಡೆಸುವ ಕುರಿತು ತಾಲ್ಲೂಕು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ ನಡೆಯಿತು. ತಾಲ್ಲೂಕಿನಲ್ಲಿ 64,398 ಕುಟುಂಬಗಳಿದ್ದು, 640 ಶಿಕ್ಷಕರಿಗೆ ಸಮೀಕ್ಷೆಯ ತರಬೇತಿ ನೀಡಲಾಯಿತು. ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ಷಡಕ್ಷರಿ, ಎಲ್ಲ ಸಮೀಕ್ಷಾದಾರರು ತಾಳ್ಮೆಯಿಂದ ಪ್ರತಿ ಮನೆಗೆ ತೆರಳಿ ಈಗಾಗಲೇ ಅಡಕವಾಗಿರುವ ಪ್ರಶ್ನಾವಳಿಗಳ ಮೂಲಕ ಮಾಹಿತಿ ಪಡೆಯಬೇಕು. ಸಮೀಕ್ಷೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ದಿನಗಳಲ್ಲಿ ಶಿಕ್ಷಣ, ಉದ್ಯೋಗ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಾಧ್ಯ ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಸಪ್ತಶ್ರೀ ಮಾತನಾಡಿ, ಶಿಕ್ಷಕರು ಯಾವುದೇ ಗೊಂದಲಕ್ಕೆ ಒಳಗಾಗದೆ ಕೇಳಿರುವ ಪ್ರಶ್ನಾವಳಿಯಲ್ಲಿ ಕುಟುಂಬದ ಮುಖ್ಯಸ್ಥನಿಂದ ಸಮಗ್ರ ಮಾಹಿತಿ ಪಡೆಯಬೇಕು. ಸಮೀಕ್ಷೆಯಿಂದ ಯಾವುದೇ ಕುಟುಂಬ ಹೊರಗುಳಿಯಬಾರದು ಎಂದರು. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಚ್‌.ಎಂ. ಸುದರ್ಶನ್‌, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಮಣಿ, ಪೌರಯುಕ್ತ ವಿಶ್ವೇಶ್ವರ ಬದರಗಡೆ, ಹಿಂದುಳಿದ ವರ್ಗಗಳ ಇಲಾಖೆ ಕಲ್ಯಾಣಾಧಿಕಾರಿ ಜಲಜಾಕ್ಷಮ್ಮ, ಗ್ರೇಡ್-2 ತಹಶೀಲ್ದಾರ್ ಜಗನ್ನಾಥ್‌, ಬಿಆರ್‌ಪಿ ಉಮೇಶ್‌ಗೌಡ, ಬಿಆರ್‌ ಸಿ ಕಚೇರಿ ಕ್ಷೇತ್ರ ಸಂಪನ್ಮೂಲ…

Read More

ತುಮಕೂರು: ಕೇಂದ್ರ ಸರ್ಕಾರ ಸರಕು ಹಾಗೂ ಸೇವಾ ತೆರಿಗೆ (ಜಿಎಸ್‌ ಟಿ) ದರ ಪರಿಷ್ಕರಣೆ ಮಾಡುವ ಮೂಲಕ ಜನಸಾಮಾನ್ಯರ ಮೇಲಿನ ತೆರಿಗೆ ಭಾರ ಇಳಿಸಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ನಗರದಲ್ಲಿ ಬುಧವಾರ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಏರ್ಪಡಿಸಿದ್ದ ‘ಜಿಎಸ್‌ ಟಿ–2.0 ಸುಧಾರಣೆಗಳು–2025’ ಕುರಿತು ಮಾಹಿತಿ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಹೊಸ ತೆರಿಗೆ ಪದ್ಧತಿ ಸೆ.22ರಿಂದ ದೇಶದಾದ್ಯಂತ ಜಾರಿಗೆ ಬರಲಿದೆ. ಇದರಿಂದ ಜನಸಾಮಾನ್ಯರ ಬದುಕಿನ ಹೊರೆ ತಗ್ಗಲಿದೆ. ಜನರು ಪ್ರತಿನಿತ್ಯ ಬಳಸುವ ಎಲ್ಲ ಉತ್ಪನ್ನಗಳ ಮೇಲೆ ಜಿಎಸ್‌ ಟಿ ಸುಧಾರಣೆಗಳ ಪರಿಣಾಮ ಕಾಣಬಹುದಾಗಿದೆ. ಅದೇ ರೀತಿ ವ್ಯಾಪಾರಸ್ಥರ ಕಾರ್ಯವಿಧಾನವನ್ನು ಸರಳಗೊಳಿಸಲಾಗಿದೆ ಎಂದು ಹೇಳಿದರು. ಜಿಎಸ್‌ ಟಿ ಮಂಡಳಿಯು 350ಕ್ಕೂ ಹೆಚ್ಚು ಉತ್ಪನ್ನಗಳ ತೆರಿಗೆ ದರಗಳನ್ನು ಪರಿಷ್ಕರಣೆ ಮಾಡಿದೆ. ಪ್ರಸ್ತುತ ಶೇ 5 ಹಾಗೂ ಶೇ 18ರ ಪ್ರಮಾಣದ ಎರಡು ಹಂತದ ಜಿಎಸ್‌ ಟಿ ವ್ಯವಸ್ಥೆ ಜಾರಿಗೊಳಿಸಿದೆ ಎಂದರು. ಶಾಸಕ…

Read More

ತುಮಕೂರು: ನಗರ ಹೊರವಲಯದ ಕುಣಿಗಲ್ ರಿಂಗ್ ರಸ್ತೆ ಬಳಿಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್ನಲ್ಲಿ ಗುರುವಾರ ರಾತ್ರಿ ಊಟ ಸೇವಿಸಿದ ನಂತರ 12 ಮಂದಿ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೇ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಹಾಸ್ಟೆಲ್ ನಲ್ಲಿ ಒಟ್ಟು 165 ಮಕ್ಕಳು ದಾಖಲಾಗಿದ್ದಾರೆ. ಮೂರು ದಿನಗಳ ಹಿಂದೆ ಹಾಸ್ಟೆಲ್ನ ಸಂಪ್ ಸ್ವಚ್ಛಗೊಳಿಸಿದ್ದರು. ಅದರಿಂದಲೇ ನೀರು ಪೂರೈಸಲಾಗಿತ್ತು. ಆ ನೀರು ಸೇವಿಸಿ ಅಸ್ವಸ್ಥರಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸಿದ್ದರಾಜು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ನಂತರ ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದರು. 12 ವಿದ್ಯಾರ್ಥಿನಿಯರಿಗೆ ಹೊಟ್ಟೆ ನೋವು, ವಾಂತಿಯಾಗಿದೆ. ನೀರಿನ ಸಂಪ್ ಸ್ವಚ್ಛಗೊಳಿಸಿದ ನಂತರವೇ ಸಮಸ್ಯೆಯಾಗಿದೆ. ಇನ್ನೂ ಎರಡು ದಿನ ನೀರಿನ ಕ್ಯಾನ್ ಬಳಸುವಂತೆ ಸೂಚಿಸಲಾಗಿದೆ. ಕೂಡಲೇ ನೀರು ಪರೀಕ್ಷಿಸುವಂತೆ ತಿಳಿಸಲಾಗಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದಾರೆ.…

Read More

ಮಂಗಳೂರು: ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ  ಎಸ್ ಐಟಿ ಶೋಧ ವೇಳೆ 5 ತಲೆ ಬುರುಡೆ ಸಹಿತ ನೂರಾರು ಮೂಳೆ ಸಿಕ್ಕಿದೆ ಎನ್ನಲಾಗಿರುವ ಘಟನೆಗೆ ಸಂಬಂಧಿಸಿದಂತೆ ಮೃತರ ಪೈಕಿ ಒಬ್ಬರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೊಡಗು ಮೂಲದ ಯು.ಬಿ ಅಯ್ಯಪ್ಪ ಎಂಬ ವ್ಯಕ್ತಿ ಮೃತಪಟ್ಟ ವ್ಯಕ್ತಿಗಳಲ್ಲಿ ಒಬ್ಬರು ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಪತ್ತೆಯಾದ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಯು.ಬಿ ಅಯ್ಯಪ್ಪ ಎಂಬುವವರಿಗೆ ಐಡಿ ಕಾರ್ಡ್‌ ಹಾಗೂ ತ್ರಿಲೆಗ್‌ ಬ್ಯಾಲೆನ್ಸ್‌ ಸ್ಟಿಕ್‌ (ವಾಕಿಂಗ್‌ ಸ್ಟಿಕ್‌) ಬಂಗ್ಲೆಗುಡ್ಡದಲ್ಲಿ ಪತ್ತೆಯಾಗಿದೆ. 7 ವರ್ಷಗಳ ಹಿಂದೆ ಮೈಸೂರಿಗೆ ಚಿಕಿತ್ಸೆಗೆಂದು ತೆರಳಿದ್ದ ಅಯ್ಯಪ್ಪ ಅವರು ಬಳಿಕ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಕುಟ್ಟ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇದೀಗ ಬಂಗ್ಲೆಗುಡ್ಡದಲ್ಲಿ ಎಸ್‌ ಐಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಯ್ಯಪ್ಪ ಅವರ ಐಡಿ ಕಾರ್ಡ್‌ ಹಾಗೂ ವಾಕಿಂಗ್‌ ಸ್ಟಿಕ್‌ ಗಳು ಸಿಕ್ಕಿದ್ದು, ಪ್ರಕರಣ ರೋಚಕ ತಿರುವು ಪಡೆದುಕೊಂಡಿದೆ. ಕುಟುಂಬಸ್ಥರು ದಾಖಲಿಸಿದ್ದ ಮಿಸ್ಸಿಂಗ್‌ ಕಂಪ್ಲೆಂಟ್‌ ನಲ್ಲಿ…

Read More

ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮನೆಗೆ ಸುಂದರವಾದ ಬಾಗಿಲು ನಿರ್ಮಿಸಿದ ಮಹಿಳೆಯೊಬ್ಬರು ಸಿಎಂ ಸಿದ್ದರಾಮಯ್ಯನವರ ಚಿತ್ರವನ್ನು ಕೆತ್ತಿಸಿ ಕೃತಜ್ಞತೆ ಸಲ್ಲಿಸಿದ್ದಾರೆ. ಕೂಡ್ಲಿಗಿ ತಾಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಪಾರ್ವತಿ ತಮ್ಮ 15 ತಿಂಗಳ ಗೃಹಲಕ್ಷ್ಮಿ ಹಣವನ್ನು ಕೂಡಿಟ್ಟು ಮನೆ ಬಾಗಿಲು ಅಳವಡಿಕೆ ಮಾಡಿಕೊಂಡಿದ್ದಾರೆ. ಬಾಗಿಲಿನಲ್ಲಿ ಸಿದ್ದರಾಮಯ್ಯ ಅವರು ನಿಂತಿರುವ ಭಾವಚಿತ್ರ ಕೆತ್ತಿಸಿರುವ ಪಾರ್ವತಿ ಅವರು, ಚಿತ್ರದ ಮೇಲೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಲಕ್ಷ್ಮಿ ಯೋಜನೆ ಎಂದು ಬರೆಯಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಬರುವ ಹಣದಿಂದ ಸಾಕಷ್ಟು ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಂಡಿರೋ ನಿದರ್ಶನಗಳಿವೆ. ಈಗ ಅದೇ ರೀತಿ ಗೃಹಲಕ್ಷ್ಮಿ ಹಣದಿಂದಲೇ ಸಿಎಂಗೆ ವಿನೂತನ ರೀತಿಯಲ್ಲಿ ಈ ಬಡ ಕುಟುಂಬ ಅಭಿನಂದನೆ ಸಲ್ಲಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ವಿಜಯಪುರ: ಒಂದೇ ದಿನದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವವಾದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ನಡೆದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ಸಿಂದಗಿ ಪಟ್ಟಣದ ಸುತ್ತಮುತ್ತು ಕಂಪನದ ಅನುಭವ ಆಗಿದ್ದು, ಮಧ್ಯಾಹ್ನ 3 ಗಂಟೆ, ರಾತ್ರಿ 10:11, ಮತ್ತೆ ರಾತ್ರಿ 10:25, ಮತ್ತೊಮ್ಮೆ ರಾತ್ರಿ 10:47 ಒಟ್ಟು 4 ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ ಅಂತ ಇಲ್ಲಿನ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಜೋರಾದ ಶಬ್ಧದೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದೆ. ಇದರಿಂದ ಸಿಂದಗಿ ಜನರಲ್ಲಿ ಆತಂಕ ಮೂಡಿದ್ದು, ಮನೆ ಬಿಟ್ಟು ಅನೇಕರು ಹೊರಬಂದಿದ್ದಾರೆ. ಕಳೆದ 2 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಈ ರೀತಿ ಸರಣಿ ರೂಪದಲ್ಲಿ ಭೂಕಂಪನದ ಅನುಭವ ಆಗಿತ್ತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ರಾಹುಲ್‌ ಗಾಂಧಿ ಅವರಿಗೆ ಕಾಮನ್‌ ಸೆನ್ಸ್‌ ಇಲ್ಲ. ತಮ್ಮ ಮಾತಿನಿಂದಲೇ ಅವರು ಇಡೀ ದೇಶದಲ್ಲಿ ಹೆಚ್ಚು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್  ವೈಯಕ್ತಿಕ ದಾಳಿ ನಡೆಸಿದರು. ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಅಕ್ರಮದ ಬಗ್ಗೆ ಕಾಂಗ್ರೆಸ್‌ ನಾಯಕರು ಮಾಧ್ಯಮಗಳ ಮುಂದೆ ಮಾತಾಡುತ್ತಾರೆಯೇ ಹೊರತು ದಾಖಲೆಗಳನ್ನು ನೀಡಲ್ಲ. ಮಾಲೂರು ಕ್ಷೇತ್ರದಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ ಮೊದಲು ಮಾತಾಡಲಿ ಎಂದರು. ಮಹದೇವಪುರ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ಆರೋಪ ಮಾಡಿ ಅದು ಸುಳ್ಳು ಎಂದು ಸಾಬೀತಾಗಿದೆ. ಈಗ ಅಳಂದ ಕ್ಷೇತ್ರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದಾರೆ. ಮಾಲೂರು ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿದೆ ಎಂದು ಸಾಬೀತಾಗಿದ್ದು, ಕಾಂಗ್ರೆಸ್‌ ಶಾಸಕರ ಸದಸ್ಯತ್ವವೇ ರದ್ದಾಗಿದೆ. ಇಲ್ಲಿ ನಮ್ಮ ಬಿಜೆಪಿ ಅಭ್ಯರ್ಥಿ ಅಫಿಡವಿಟ್‌ ನೀಡಿದ್ದರು. ಜಿಲ್ಲಾಧಿಕಾರಿ ತಪ್ಪು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಯಾಕೆ ಮಾತಾಡುತ್ತಿಲ್ಲ? ಎಂದು ಪ್ರಶ್ನಿಸಿದರು. ಬಿಹಾರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಕಾಂಗ್ರೆಸ್‌ ನಾಯಕರಿಗೆ…

Read More