Subscribe to Updates
Get the latest creative news from FooBar about art, design and business.
- ಇಪಿಎಫ್ ಒದಿಂದ ಉದ್ಯೋಗದಾತರಿಗೆ ಬಿಗ್ ರಿಲೀಫ್: ‘EEC 2026’ ಮತ್ತು ‘ವಿಶ್ವಾಸ್ 2026’ ಯೋಜನೆಗಳು ಜಾರಿ
- ಶಾಂತಿ—ಕ್ರಾಂತಿ ರೀ ರಿಲೀಸ್ ಗೆ ಕಾದು ಕುಳಿತ ಅಭಿಮಾನಿಗಳಿಗೆ ನಿರಾಸೆ: ಸದ್ಯಕ್ಕಿಲ್ಲ ರೀ ರಿಲೀಸ್! | ಕಾರಣ ಏನು?
- ಶಿವಮೊಗ್ಗ: ಕಡಜ ಹುಳ ಕಡಿದು 8 ವರ್ಷದ ಬಾಲಕ ಸಾವು
- ಸರಗೂರು: 9ನೇ ವಾರ್ಡ್ನಲ್ಲಿ ₹35 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ – ಪಪಂ ಸದಸ್ಯ ಶ್ರೀನಿವಾಸ್ ಪರಿಶೀಲನೆ
- ಪ್ರಜ್ವಲ್ ರೇವಣ್ಣ ಮೊಬೈಲ್ ಪ್ರಸಂಗ: ಶಿವ—ಪಾರ್ವತಿ ಹೆಸರಲ್ಲಿ ಅಪ್ಪ ಅಮ್ಮನ ನಂಬರ್ | 6 ಬಾರಿ ಬಚಾವಾಗಿದ್ದ ಪ್ರಜ್ವಲ್
- ಮಹಿಳಾ ಪಿಎಸ್ ಐ ಮೇಲೆ ಕಪಾಳಮೋಕ್ಷ ಪ್ರಕರಣ: ಮಗಳ ವರ್ತನೆಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ಬಿಜೆಪಿ ಶಾಸಕ ಸುರೇಶ್ ಗೌಡ
- ಕರ್ತವ್ಯನಿರತ ಮಹಿಳಾ ಪಿಎಸ್ ಐ ಮೇಲೆ ಶಾಸಕನ ಪುತ್ರಿಯಿಂದ ಹಲ್ಲೆ: ಕಪಾಳಮೋಕ್ಷ ಆರೋಪ, ಎಫ್ ಐಆರ್ ದಾಖಲು!
- ಕೊರಟಗೆರೆಯಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಿ ಹೆಚ್.ಡಿ.ಕೆ. ಅವರನ್ನು ಮುಖ್ಯಮಂತ್ರಿ ಮಾಡುವುದೇ ಗುರಿ | ಪಿ.ಎನ್. ಕೃಷ್ಣಮೂರ್ತಿ
Author: admin
ಬೆಂಗಳೂರು: ಯೋಗ ಸೆಂಟರ್ ಗೆ ಬರುತ್ತಿದ್ದ ಬಾಲಕಿ, ಯುವತಿಯರು ಸೇರಿದಂತೆ ಎಂಟು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸ ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ. ನಿಮಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯೋಗದಲ್ಲಿ ಹೆಸರು ಬರುವಂತೆ ಮಾಡುತ್ತೇನೆ. ನಿಮಗೆ ಆದರಿಂದ ಸರ್ಕಾರಿ ಕೆಲಸವು ಸಿಗಬಹುದು ಎಂದು ನಂಬಿಸಿ, ಯೋಗ ಸೆಂಟರ್ ಗೆ ಬರುತ್ತಿದ್ದ ಯುವತಿಯರು ಸೇರಿದಂತೆ ಸುಮಾರು ಏಳೆಂಟು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ. ಅಷ್ಟೇ ಅಲ್ಲದೆ ಹದಿನೇಳು ವರ್ಷದ ಬಾಲಕಿ ಮೇಲೆ ಕೂಡ ಆರೋಪಿ ಅತ್ಯಾಚಾರವೆಸಗಿದ್ದ. ಬಾಲಕಿ ದೂರಿನ ಅನ್ವಯ ರಾಜರಾಜೇಶ್ವರಿ ನಗರ ಪೊಲೀಸರು ಪೋಕ್ಸೋ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲು ಮಾಡಿಕೊಂಡಿದ್ದರು. ಅತ್ತ ಕೇಸ್ ದಾಖಲಾಗುತ್ತಿದ್ದಂತೆ ಇತ್ತ ಆರೋಪಿ ತಲೆಮರಿಸಿಕೊಂಡಿದ್ದ. ಸದ್ಯ ಪೊಲೀಸರು ಹುಡುಕಿ ಆತನನ್ನು ಬಂಧಿಸಿದ್ದಾರೆ. ಇನ್ನು ತನಿಖೆ ವೇಳೆ ಅತ್ಯಾಚಾರ ಎಸಗಿರುವುದು ಬಯಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಮೈಸೂರು: ದಸರಾ ಮಹೋತ್ಸವದಲ್ಲಿ ಉದ್ಘಾಟಕರ ವಿಚಾರದಲ್ಲಿ ರಾಜಕೀಯ ಹೈಡ್ರಾಮ ಹಿನ್ನೆಲೆ ದಸರಾ ಸಮಾರಂಭದಲ್ಲಿ ಯಾವುದೇ ಪ್ರತಿಭಟನೆ ಮತ್ತು ಗೊಂದಲ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ ಸೂಚನೆ ನೀಡಿದ್ದಾರೆ. ನಗರ ಪೊಲೀಸ್ ಆಯುಕ್ತರ ಕಚೇರಿ ಸಭಾಂಗಣ ದಲ್ಲಿ ದಸರಾ ಭದ್ರತೆ ಸಂಬಂಧ ನಡೆದ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಯುವ ಸಾಧ್ಯತೆ ಇರುವುದರಿಂದ ಹೆಚ್ಚಿನ ಪೊಲೀಸ್ ಪಡೆಯನ್ನು ನಿಯೋಜಿಸಬೇಕು. ಹಂತ ಹಂತವಾಗಿ ಭದ್ರತಾ ಕಾರ್ಯ ಕೈಗೊಳ್ಳಬೇಕು. ದಸರಾ ಉದ್ಘಾಟಕರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಗಣ್ಯರು ಬಂದು ಕಾರ್ಯಕ್ರಮ ಮುಗಿಸಿ ಸುರಕ್ಷಿತವಾಗಿ ತೆರಳುವವರೆಗೆ ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು. ಸೆ. 22ರಿಂದ ಅ. 2ರವರೆಗೆ ನಡೆಯಲಿರುವ ದಸರಾ ಉತ್ಸವಕ್ಕೆ ಸ್ಥಳೀಯರು ಸೇರಿದಂತೆ ಲಕ್ಷಾಂತರ ಪ್ರವಾಸಿಗರು ಆಗಮಿಸಲಿದ್ದು, ಹೆಚ್ಚಿನ ಪೊಲೀಸ್ ಪಡೆ ನಿಯೋಜಿಸಬೇಕು ಎಂದು ಸೂಚಿಸಿದರು. ಅರಮನೆ ಸೇರಿದಂತೆ ಪಂಜಿನ ಕವಾಯತು ಮೈದಾನ, ಆಹಾರ…
ಬೀದರ್: ಜಿಲ್ಲೆಯ ಕಮಲನಗರ ಹಾಗೂ ತೋರಣ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವಂತಹ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಅಧಿಕಾರಿಗಳು ದುರಸ್ತಿಗೆ ಮುಂದಾಗಬೇಕು ಎಂದು ಯುವ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಹರಿದೇವ ಸಂಗನಾಳ ಒತ್ತಾಯಿಸಿದ್ದಾರೆ ಕಳೆದ ಒಂದು ತಿಂಗಳಿಂದ ತಾಲೂಕಿನ ಸುರಿಯುತ್ತಿರುವ ಧಾರಾಕಾರವಾದ ಮಳೆ ಹಿನ್ನೆಲೆ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮತ್ತು ಶಾಸಕಕರು ಇತ್ತ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ. ಒಂದು ವಾರದಲ್ಲಿ ಸಮಸ್ಯೆ ಬಗೆಹರಿದಿದ್ದರೆ ಹೋರಾಟ ಮಾಡುವುದಾಗಿ ಇದೇ ವೇಳೆ ಅವರು ಎಚ್ಚರಿಕೆಯನ್ನು ನೀಡಿದ್ದಾರೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೀದರ್: ಹೈದರಾಬಾದ್ ಕರ್ನಾಟಕ (ಕಲ್ಯಾಣ ಕರ್ನಾಟಕ) ವಿಮೋಚನಾ ದಿನದ ಅಂಗವಾಗಿ ಹಾರಿಸಲಾಗುತ್ತಿದ್ದ ರಾಷ್ಟ್ರಧ್ವಜವು ತಲೆ ಕೆಳಗಾಗಿ ಹಾರಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದು ವರದಿಯಾಗಿದೆ. ನಗರದ ಅಂಬೇಡ್ಕರ್ ವೃತ್ತದ ಸಮೀಪದ ಸವಿತಾ ಸಮುದಾಯ ಭವನದಲ್ಲಿ, ಜಿಲ್ಲಾ ಸವಿತಾ ಸಮಾಜ ಸಂಘದ ವತಿಯಿಂದ ವಿಮೋಚನಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ರಾಷ್ಟ್ರ ಧ್ವಜವನ್ನು ತಲೆ ಕೆಳಗಾಗಿ ಹಾರಿಸಿರುವುದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋ ವೈರಲ್ ಆಗಿದೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಸರಗೂರು: ವಿಶ್ವಕರ್ಮ ಸಮಾಜವು ಸಂಘಟಿತರಾಗಿ ಒಗ್ಗೂಡಿದಾಗ ಮಾತ್ರ ಸರಕಾರದ ವಿವಿಧ ಯೋಜನೆಗಳ ಸದ್ಬಳಕೆಗೆ ಸಹಕಾರಿಯಾಗಲಿದೆ ಎಂದು ತಹಶೀಲ್ದಾರ್ ಮೋಹನಕುಮಾರಿ ಸಲಹೆ ನೀಡಿದರು. ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ವಿಶ್ವಕರ್ಮ ಸಮಾಜದಿಂದ ಬುಧವಾರ ನಡೆದ ವಿಶ್ವಕರ್ಮ ಜಯಂತೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಶ್ವಕರ್ಮ ಸಮುದಾಯ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು. ಎಂಜಿನಿಯರ್ ಗಳಂತೆ ಕೆಲಸ ಮಾಡುತ್ತಾ ಬಂದಿದ್ದಾರೆ. ಸಮುದಾಯದವರಿಗೆ ಕಲೆ ರಕ್ತಗತವಾಗಿ ಬಂದಿದೆ. ಇಂಥ ಸಮುದಾಯದ ಅಭಿವೃದ್ಧಿಗಾಗಿ ಸರಕಾರ ವಿವಿಧ ಯೋಜನೆ ಸೌಲಭ್ಯಗಳನ್ನು ರೂಪಿಸಿದೆ. ಅದರ ಬಗ್ಗೆ ಸಮುದಾಯದವರಲ್ಲಿ ಮಾಹಿತಿಯ ಕೊರತೆಯಿದೆ. ಹೀಗಾಗಿ ಎಲ್ಲರೂ ಸಂಘಟಿತರಾಗಬೇಕು. ಅಧಿಕಾರಿಗಳೂ ಮಾಹಿತಿ ನೀಡಬೇಕು ಎಂದು ಅವರು ಸಲಹೆ ನೀಡಿದರು. ಸರಗೂರು ವಿಶ್ವಕರ್ಮ ಸಮಾಜದ ಅಧ್ಯಕ್ಷ ನಟರಾಜು ಮಾತನಾಡಿ, ಸಮಾಜದ ಅಭಿವೃದ್ಧಿಗೆ ವಿಶ್ವಕರ್ಮ ಸಮುದಾಯದ ಕೊಡುಗೆ ಅಪಾರವಾಗಿದೆ. ಸಮುದಾಯ ಇಲ್ಲದೆ ಸಮಾಜ ಕಟ್ಟಲು ಸಾಧ್ಯವಿಲ್ಲ. ವಿಗ್ರಹಗಳ ಕೆತ್ತನೆ, ಮರಗೆಲಸ, ವ್ಯವಸಾಯಕ್ಕೆ ಅಗತ್ಯ ನೇಗಿಲು, ಮದುವೆ ಸಂದರ್ಭದಲ್ಲಿ ಅಗತ್ಯ ಮಾಂಗಲ್ಯ. ಹೀಗೆ…
ಸರಗೂರು: ಪಟ್ಟಣದ ನಾಮಧಾರಿಗೌಡ ಸಮುದಾಯಭವನದಲ್ಲಿ ಬುಧವಾರ ನಾಮಧಾರಿಗೌಡ ಸಮಾಜದ ಪ್ರಭಾರ ಅಧ್ಯಕ್ಷ ವಿನೋದ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಮಾಜದ ಅಧ್ಯಕ್ಷರಾಗಿ ನಿಧನರಾದ ಎಂ.ಎನ್.ಭೀಮರಾಜ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಪಂ ಮಾಜಿ ಅಧ್ಯಕ್ಷ ಪಿ.ರವಿ ಮಾತನಾಡಿ, “ಭೀಮರಾಜ್ ಅವರು ಸಮಾಜದ ಅಧ್ಯಕ್ಷರಾಗಿ ಮೂರು ವರ್ಷ ಉತ್ತಮ ಸೇವೆ ಸಲ್ಲಿಸಿದ್ದಾರೆ. ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾಗಿ ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯೆದಾನ ಮಾಡಿದ್ಧಾರೆ. ಇದಲ್ಲದೆ ಸಮಾಜದ ಅಭಿವೃದ್ಧಿಗೂ ಶ್ರಮಿಸಿದ್ದು, ರಾಜಕೀಯವಾಗಿಯೂ ಗುರುತಿಸಿಕೊಂಡಿದ್ದರು. ಸದಾ ಹಸನ್ಮುಖಿಯಾಗಿದ್ದುಕೊಂಡು ಸಮಾಜದ ಬಂಧುಗಳಿಗೆ ದಾರಿದೀಪವಾಗಿದ್ದರು. ಇಂಥವರ ನಿಧನದಿಂದ ಸಮಾಜಕ್ಕೆ ತುಂಬಾಲಾರದ ನಷ್ಟವಾಗಿದೆ” ಎಂದು ಗುಣಗಾನ ಮಾಡಿದರು. ಸಮಾಜದ ಪ್ರಭಾರ ಅಧ್ಯಕ್ಷ ವಿನೋದ್ ಕುಮಾರ್ ಮಾತನಾಡಿ, “ಸರಗೂರು ತಾಲೂಕು ಹೋರಾಟ ಸಮಿತಿಯಲ್ಲಿ ಮುಂಚೂಣಿಯಲ್ಲಿದ್ದ ಭೀಮರಾಜ್ ಅವರ ಹೋರಾಟದ ಫಲವಾಗಿ ಸರಗೂರು ನೂತನ ತಾಲೂಕಾಗಿ ಘೋಷಣೆಯಾಯಿತು. ಬಿ.ಮಟಕೆರೆ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾಗಿದ್ದು, ಶಾಲೆಯ ಅಭಿವೃದ್ಧಿ ಸಾಕಷ್ಟು ಪರಿಶ್ರಮವಹಿಸಿದ್ದರು. ಸಮಾಜದಲ್ಲಿ ಉತ್ತಮವಾದ ಸೇವೆ ಮಾಡಿದ್ದಾರೆ” ಎಂದು ತಿಳಿಸಿದರು. ಇದೇ…
ಕಾರವಾರ: ಭಟ್ಕಳದ ಮುಗ್ಗುಮ್ ಕಾಲೋನಿಯಲ್ಲಿ ದನಗಳನ್ನು ಕೊಂದು, ಅವಶೇಷಗಳನ್ನು ಸಮೀಪದ ಅರಣ್ಯ ಭೂಮಿಯಲ್ಲಿ ಎಸೆದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭಟ್ಕಳದ ಉಪ ವಲಯ ಅರಣ್ಯಾಧಿಕಾರಿ ಮಾರುತಿ ಅವರ ದೂರಿನ ಮೇಲೆ ಸೆಪ್ಟೆಂಬರ್ 11 ರಂದು ಪ್ರಕರಣ ದಾಖಲಿಸಲಾಗಿದೆ. ಬೇರೆಡೆ ದನಗಳನ್ನು ಕೊಂದಿರುವ ಅಪರಿಚಿತ ವ್ಯಕ್ತಿಗಳು, ಚರ್ಮ, ಮೂಳೆಗಳು ಮತ್ತು ಇತರ ಅವಶೇಷಗಳನ್ನು ಅರಣ್ಯ ಭೂಮಿಗೆ ಅತಿಕ್ರಮಣ ಮಾಡಿ ಆ ಪ್ರದೇಶದಲ್ಲಿ ಎಸೆದಿದ್ದಾರೆ ಎಂದು ಅವರು ಆರೋಪಿಸಿದರು. ಕರ್ನಾಟಕ ವಧೆ ತಡೆ ಮತ್ತು ದನಗಳ ಸಂರಕ್ಷಣಾ ಕಾಯ್ದೆ, 2020ರ ಸೆಕ್ಷನ್ 4 ಮತ್ತು 12 ಮತ್ತು ಭಾರತೀಯ ನ್ಯಾಯ ಸಂಹಿತೆಯ 329(3) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಶೇಷ ತಂಡಗಳನ್ನು ರಚಿಸಿ, ತನಿಖೆಯ ನಂತರ ಆರೋಪಿಗಳನ್ನು ಬುಧವಾರ ಬಂಧಿಸಲಾಯಿತು. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ವಾಹನವನ್ನು ವಶಪಡಿಸಿಕೊಂಡು, ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ಬೆಳಗಾವಿ: ಡಿಸೆಂಬರ್ 31 ರ ಮೊದಲು ಸರ್ಕಾರವು ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಭರವಸೆ ನೀಡಿದ್ದಾರೆ. ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಸದಸ್ಯರು ನಗರದಲ್ಲಿ ಹೆಬ್ಬಾಳ್ಕರ್ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸರ್ಕಾರದ ಯೋಜನೆಗಳ ಪ್ರಯೋಜನಗಳು ಜನರಿಗೆ ತಪ್ಪದೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಬೆಳಗಾವಿ ಜಿಲ್ಲೆಯನ್ನು ವಿಭಜಿಸುವುದು ಅತ್ಯಗತ್ಯ ಎಂದು ಹೇಳಿದರು. ಸರ್ಕಾರವು ಈಗಾಗಲೇ ಬೆಳಗಾವಿಯನ್ನು ವಿಭಜಿಸಲು ನಿರ್ಧರಿಸಿದ್ದು, ಈ ಕ್ರಮಕ್ಕೆ ತಮ್ಮ ಬೆಂಬಲವಿದೆ ಎಂದರು. ಸಮಿತಿ ಸದಸ್ಯರು MLC ಚನ್ನರಾಜ್ ಹಟ್ಟಿಹೋಳಿ ಮತ್ತು ಮಾಜಿ MLC ಮಹಾಂತೇಶ್ ಕವಟಗಿಮಠ ಅವರಿಗೂ ಪ್ರಾತಿನಿಧ್ಯಗಳನ್ನು ಸಲ್ಲಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ತುಮಕೂರು: ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆಯಲ್ಲಿ (ಜನ ಜಾತಿ ಗಣತಿ) ಭಾಗವಹಿಸದಿರಲು ಆಶಾ ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ನಗರದಲ್ಲಿ ಮಂಗಳವಾರ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಎಐಯುಟಿಯುಸಿ ವತಿಯಿಂದ ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಮೋಹನ್ ಅವರಿಗೆ ಮನವಿ ಸಲ್ಲಿಸಿ, ಸಮೀಕ್ಷೆಯಿಂದ ಕೈ ಬಿಡುವಂತೆ ಒತ್ತಾಯಿಸಲಾಯಿತು. ‘ಆಶಾ ಕಾರ್ಯಕರ್ತೆಯರು ಸಮೀಕ್ಷೆಗೆ ಪೂರ್ವಭಾವಿಯಾಗಿ ಪ್ರತಿ ಮನೆಗೆ ತೆರಳಿ ನಮೂನೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಹಿಂದೆ ಸಮೀಕ್ಷೆ ನಡೆಸಿದ್ದಕ್ಕೆ ನಿಗದಿಪಡಿಸಿದ ಗೌರವ ಧನದಲ್ಲಿ ಒಂದು ಪೈಸೆಯನ್ನೂ ನೀಡಿಲ್ಲ. ಈ ವರ್ಷ ಗೌರವ ಧನವೂ ಹೆಚ್ಚಿಸಿಲ್ಲ. ಸಮೀಕ್ಷೆಗೆ ಸ್ವಂತ ಹಣ ಖರ್ಚು ಮಾಡಿ, ಬರಿಗೈನಲ್ಲಿ ಮನೆಗೆ ಬರುವಂತಾಗಿದೆ’ ಎಂದು ಕಾರ್ಯಕರ್ತೆಯರು ಅಳಲು ತೋಡಿಕೊಂಡರು. ಸಮೀಕ್ಷೆಯಲ್ಲಿ ಭಾಗವಹಿಸುವ ಆಶಾ ಕಾರ್ಯಕರ್ತೆಯರಿಗೆ ಗ್ರಾಮೀಣ ಭಾಗದಲ್ಲಿ 5 ಸಾವಿರ, ನಗರದಲ್ಲಿ 10 ಸಾವಿರ ಗೌರವಧನ ನಿಗದಿ ಮಾಡಬೇಕು. ಇಲ್ಲವೇ ಸಮೀಕ್ಷೆ ಕಾರ್ಯದಿಂದ ಕೈಬಿಡಬೇಕು. ಈ ಹಿಂದೆ ನಡೆಸಿದ್ದ ಗ್ಯಾರಂಟಿ ಸಮೀಕ್ಷೆಯ ಬಾಕಿ…
ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿದ್ದರಾಮಯ್ಯನವರನ್ನು 1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಸೋಲಿಸಿತು? 2018ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು? ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆಯಾಗಿದೆ 7 ಎಂದು ವಾಗ್ದಾಳಿ ನಡೆಸಿದ್ದಾರೆ. ಇವಿಎಂಗಳಂತಹ ಆಧುನಿಕ ತಂತ್ರಜ್ಞಾನ ಬಂದಮೇಲೂ ಕಾಂಗ್ರೆಸ್ ಪಕ್ಷ ಇಂಥ ಚುನಾವಣಾ ಅಕ್ರಮ ಮಾಡುತ್ತದೆ ಎಂದರೆ, ಮತಪೆಟ್ಟಿಗೆ ಇದ್ದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎನ್ನುವುದನ್ನು ನೀವೇ ಊಹಿಸಿಕೊಳ್ಳಿ! ಕಾಂಗ್ರೆಸ್ ಪಕ್ಷ ಮತಗಳ್ಳತನದ ಮಾಫಿಯಾ ಎಂದು ಅವರು ಟೀಕಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC